ವಾಷಿಂಗ್ಟನ್: ಅಮೆರಿಕದ (America) ಫ್ಲೋರಿಡಾದಲ್ಲಿ (Florida) 2 ದೋಣಿಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕ್ಲಿಯರ್‌ವಾಟರ್ ನಗರದ ಮೆಮೋರಿಯಲ್ ಕಾಸ್‌ವೇ ಸೇತುವೆಯ ಬಳಿ ನಡೆದಿದೆ.
ಇಬ್ಬರು ಸಿಬ್ಬಂದಿ ಸೇರಿದಂತೆ 45 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ಇನ್ನೊಂದು ದೋಣಿಯು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಇನ್ನೊಂದು ದೋಣಿಯು ಘಟನಾ ಸ್ಥಳದಿಂದ ಕಾಣೆಯಾಗಿದೆ ಎಂದು ಕ್ಲಿಯರ್‌ವಾಟರ್ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ‘ಥಾಮಾ’ ಚಿತ್ರಕ್ಕಾಗಿ ಊಟಿಯಲ್ಲಿ ಬೀಡುಬಿಟ್ಟ ರಶ್ಮಿಕಾ ಮಂದಣ್ಣ
ಈ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೇಕೇರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಡಿಕ್ಕಿ ಹೊಡೆದು ಪರಾರಿಯಾದ ಮತ್ತೊಂದು ದೋಣಿಯ ಬಗ್ಗೆ ಮಾಹಿತಿ ದೊರೆತಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನ್ಯೂಯಾರ್ಕ್: ಕೇವಲ 170 ಟಿಪ್ಸ್ ಕೊಟ್ಟರು ಎಂದು ಗರ್ಭಿಣಿಗೆ ಪಿಜ್ಜಾ ಡೆಲಿವರಿ ಕೆಲಸಗಾರ್ತಿ ಚಾಕುವಿನಿಂದ 14 ಬಾರಿ ಇರಿದಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ.
ಬ್ರಿಯಾನ್ನಾ ಅಲ್ವೆಲೊ (22) ಚಾಕುವಿನಿಂದ ಇರಿದ ಆರೋಪಿ. ಸಂತ್ರಸ್ತ ಮಹಿಳೆ ಕುಟುಂಬದವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದರು. ಅದಕ್ಕಾಗಿ ಪಿಜ್ಜಾ ಆರ್ಡರ್ ಮಾಡಿದ್ದರು. ಆರ್ಡರ್ ತಂದುಕೊಟ್ಟ ಆರೋಪಿಯು ಕೇವಲ 2 ಡಾಲರ್ ಕೊಟ್ಟಿದ್ದಕ್ಕೆ ಚಾಕುವಿನಿಂದ ಗರ್ಭಿಣಿ ಮೇಲೆ ಹಲ್ಲೆ ನಡೆಸಿದ್ದಾಳೆ.
ದಾಳಿಯ ಸಮಯದಲ್ಲಿ ಸಂತ್ರಸ್ತ ಮಹಿಳೆ, ಆಕೆಯ ಗೆಳೆಯ ಮತ್ತು ಆಕೆಯ 5 ವರ್ಷದ ಮಗಳು ಮೋಟೆಲ್ ಕೋಣೆಯಲ್ಲಿದ್ದರು. ಆರೋಪಿ ಅಲ್ವೆಲೊ ಪಿಜ್ಜಾ ಡೆಲಿವರಿ ಮಾಡಿದ್ದಳು. ಒಟ್ಟು ಮೊತ್ತ $33 (ಸುಮಾರು ರೂ. 2,800) ಆಗಿತ್ತು. ಡೆಲಿವರಿ ವರ್ಕರ್‌ಗೆ ಕೇವಲ $2 ಅನ್ನು ನೀಡಿದ್ದರು. ಅದನ್ನು ಪಡೆದು ಹೋಗಿದ್ದ ಆರೋಪಿ ಮತ್ತೆ 90 ನಿಮಿಷಗಳ ನಂತರ ತನ್ನ ಕೆಂಪು ಟೊಯೋಟಾದಲ್ಲಿ ಮುಸುಕುಧಾರಿ ಸಹಚರನೊಂದಿಗೆ ಹಿಂದಿರುಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾಳೆ.
ಗರ್ಭಿಣಿಗೆ 14 ಬಾರಿ ಇರಿದು ಹಲ್ಲೆ ನಡೆಸಿದ್ದಾಳೆ. ವಿಷಯ ತಿಳಿದು ಪೊಲೀಸರು ಆಗಮಿಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಳು ಗರ್ಭಿಣಿಯನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಮರುದಿನ ಅಧಿಕಾರಿಗಳು ಆರೋಪಿತಳನ್ನು ಬಂಧಿಸಿದ್ದಾರೆ. ಕೊಲೆಯ ಯತ್ನ, ಬಂದೂಕಿನಿಂದ ಮನೆ ಮೇಲೆ ಆಕ್ರಮಣ ಕೇಸ್ ದಾಖಲಿಸಲಾಗಿದೆ. ಆಕೆಯನ್ನು ಬಾಂಡ್ ಇಲ್ಲದೆ ಓಸ್ಸಿಯೋಲಾ ಕೌಂಟಿ ಜೈಲಿನಲ್ಲಿ ಇರಿಸಲಾಗಿದೆ.
ವಾಷಿಂಗ್ಟನ್: ಅಭಿಮಾನಿಗಳು ನಮಗೆ ದೇವರ ರೀತಿ. ಅದೇ ರೀತಿ ಇದೀಗ ಡಾಕ್ಟರ್ ಕೂಡ ನಮ್ಮ ಪಾಲಿಗೆ ದೇವರಾಗಿದ್ದಾರೆ ಎಂದು ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shiva Rajkumar) ಹೇಳಿದ್ದಾರೆ.
ಶಿವರಾಜ್‌ಕುಮಾರ್ ಸರ್ಜರಿ ಯಶಸ್ವಿಯಾದ ಬಳಿಕ ವೀಡಿಯೋ ಮೂಲಕ ಮಾತನಾಡಿದ ಅವರು, ಶಿವಣ್ಣ ಆಪರೇಷನ್ ಯಶಸ್ವಿಯಾಗಿದೆ. ಈಗ ಶಿವಣ್ಣ ಅವರನ್ನು ಐಸಿಯುಗೆ ಶಿಫ್ಟ್ ಮಾಡಿದ್ದಾರೆ. ಶಿವರಾಜ್‌ಕುಮಾರ್‌ಗಾಗಿ ನೀವೆಲ್ಲರೂ ಪೂಜೆಗಳನ್ನು ಮಾಡಿ ಅವರಿಗೆ ಒಳ್ಳೆಯದಾಗಲಿ ಎಂದು ಬಯಸಿದ್ದೀರಿ, ಆಶೀರ್ವಾದ ಕೂಡ ಮಾಡಿದ್ದೀರಿ. ಇವತ್ತು ಶಿವಣ್ಣ ಅವರ ಆಪರೇಷನ್ ಯಶಸ್ವಿಯಾಗಲು ಡಾ. ಮನೋಹರನ್ ಅವರೇ ಕಾರಣ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಿವಣ್ಣ ಸರ್ಜರಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ, ಆರೋಗ್ಯ ಸ್ಥಿರ: ಡಾ.ಮುರುಗೇಶ್ ಮನೋಹರನ್
ಸದ್ಯದಲ್ಲೇ ಶಿವರಾಜ್‌ಕುಮಾರ್ ಅವರು ನಿಮ್ಮ ಜೊತೆ ಮಾಡನಾಡಲಿದ್ದಾರೆ. ಆಪರೇಷನ್‌ನಿಂದಾಗಿ ಸುಸ್ತಾಗಿರುವುದರಿಂದ ಇನ್ನು 3-4 ದಿನಗಳಲ್ಲಿ ನಿಮ್ಮ ಜೊತೆ ಮಾತನಾಡಲಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಯಾವಾಗಲು ಚಿರಋಣಿ. ಇದನ್ನು ನಾನು ಜನ್ಮದಲ್ಲಿ ಮರೆಯಲ್ಲ ಎಂದು ಗೀತಕ್ಕ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ನ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ವಾಷಿಂಗ್ಟನ್: ಡಾ. ಶಿವರಾಜ್‌ಕುಮಾರ್ (Shiva Rajkumar) ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸದ್ಯ ಶಿವಣ್ಣ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ವೈದ್ಯ ಡಾ.ಮುರುಗೇಶ್ ಮನೋಹರನ್ (Murugesh Manoharan) ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆ ಬಳಿಕ ವೀಡಿಯೋ ಮೂಲಕ ಮಾತನಾಡಿದ ಅವರು, ದೇವರ ದಯೆಯಿಂದ ಹಾಗೂ ಹಲವರ ಆಶೀರ್ವಾದ ಹಾಗೂ ಪ್ರಾರ್ಥನೆಯಿಂದ ಸರ್ಜರಿ ಯಶಸ್ವಿಯಾಗಿದೆ. ಪ್ರಮುಖ ಹಂತ ಪೂರ್ಣಗೊಂಡಿದೆ. ಶಿವಣ್ಣ ಚೆನ್ನಾಗಿ ಸ್ಪಂದಿಸಿದ್ದಾರೆ. ಸರ್ಜರಿ ನಂತರವೂ ಆರಾಮಾಗಿದ್ದಾರೆ. ಅವರು ಶೀಘ್ರವೇ ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ. ನಿಮ್ಮ ಬೆಂಬಲಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ಇದನ್ನೂ ಓದಿ: Hand Luggage On Flights | ಇನ್ಮುಂದೆ 7 ಕೆಜಿ ಮೀರದ ಕೇವಲ 1 ಬ್ಯಾಗ್‌ಗೆ ಮಾತ್ರ ಅನುಮತಿ
ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ನ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ವಾಷಿಂಗ್ಟನ್: ಅಮೆರಿಕದಲ್ಲಿ (America) ಹೆಲೆನ್ ಚಂಡಮಾರುತದಿಂದ (Hurricane) ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಚಂಡಮಾರುತದಿಂದ ಫ್ಲೋರಿಡಾ (Florida) ರಾಜ್ಯದ ರಾಜಧಾನಿ ತಲ್ಲಾಹಸ್ಸೀ ಬಳಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ರಸ್ತೆಗಳು, ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ನೆಲಸಮವಾಗಿವೆ. ಅಲ್ಲದೇ ಧಾರಾಕಾರ ಮಳೆಯಿಂದ ಹಲವಾರು ಪ್ರದೇಶಗಳು ಪ್ರವಾಹದಿಂದ (Flood) ತತ್ತರಿಸಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಮಟ್ಟದಲ್ಲಿ ಮುಜುಗರ – ಮುಳುಗಿತು Made In China ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆ
ದಕ್ಷಿಣ ಕೆರೊಲಿನಾದಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾರ್ಜಿಯಾ ಗವರ್ನರ್ ಬ್ರಿಯಾನ್ ಕೆಂಪ್ ತನ್ನ ರಾಜ್ಯದಲ್ಲಿ ರಕ್ಷಣಾ ಸಿಬ್ಬಂದಿಯೂ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ವಾಲ್ಡೋಸ್ಟಾ ನಗರವು 115ಕ್ಕೂ ಹೆಚ್ಚು ಕಟ್ಟಡಗಳು ಹಾನಿಗೊಳಗಾಗಿದ್ದು, ಅನೇಕ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿತಾಗಿರುವ ಡೊನಾಲ್ಡ್ ಟ್ರಂಪ್ (Donald Trump) ಅವರ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಫ್ಲೋರಿಡಾದ (Florida) ಗಾಲ್ಫ್ ಕ್ಲಬ್ ನಲ್ಲಿದ್ದ ಟ್ರಂಪ್ ಮೇಲೆ ಅಜ್ಞಾತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಆದರೆ, ಟ್ರಂಪ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Again folks!
SHOTS FIRED at Trump Golf Course in West Palm Beach, Florida.
An AK-47 was discovered in the bushes, per local law enforcement. The Trump campaign has released a statement confirming former President Trump is safe.
ಇದೇ ವರ್ಷ ಜುಲೈ 13ರಂದು ಅವರ ಮೇಲೆ ಅಮೆರಿಕದ (USA) ಪೆನ್ಸಿಲ್ವೇನಿಯಾದಲ್ಲಿರುವ ಬಟ್ಲರ್ ಎಂಬಲ್ಲಿ ಗುಂಡಿನ ದಾಳಿಯಾಗಿತ್ತು. ಅಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಅವರ ಮೇಲೆ ಸುಮಾರು 442 ಅಡಿಗಷ್ಟು ದೂರದಿಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಅಂದು ಹಾರಿದ ಗುಂಡು ಅವರ ಬಲಕಿವಿಯ ತುದಿಗೆ ತಾಕಿ ರಕ್ತ ಸೋರಿಕೆಯಾಗಿತ್ತು, ಕೂದಲೆಳೆ ಅಂತರದಲ್ಲಿ ಟ್ರಂಪ್ ಪಾರಾಗಿದ್ದರು. ಇದಾದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿರುವುದು ಟ್ರಂಪ್ ಬೆಂಬಲಿಗರ ಆತಂಕಕ್ಕೆ ಕಾರಣವಾಗಿದೆ.
ದಾಳಿ ನಡೆದಿದ್ದು ಎಲ್ಲಿ? ಹೇಗೆ?
ಫ್ಲೋರಿಡಾದ ಸ್ಥಳೀಯ ಕಾಲಮಾನ ಸೆ. 15ರಂದು ಸಂಜೆಯಲ್ಲಿ ಫ್ಲೋರಿಡಾದಲ್ಲಿರುವ ವೆಸ್ಟ್ ಪಾಮ್ ಬೀಚ್ ನಲ್ಲಿರುವ ತಮ್ಮದೇ ಗಾಲ್ಫ್ ಕ್ಲಬ್ ಆದ ಟ್ರಂಪ್ ಇಂಟರ್ ನ್ಯಾಷನಲ್ ಗಾಲ್ಫ್ ಕ್ಲಬ್‌ಗೆ (Golf Club) ಟ್ರಂಪ್ ಆಗಮಿಸಿದ್ದರು. ವಾರಾಂತ್ಯದಲ್ಲಿ ಗಾಲ್ಫ್ ಆಡುವುದು ಅವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದರಿಂದ ಅವರು ಎಲ್ಲಿರುತ್ತಾರೋ ಅವರಿರುವ ಹತ್ತಿರದ ಯಾವುದೇ ಗಾಲ್ಫ್ ಕ್ಲಬ್ ಗೆ ಅವರು ಹೋಗುತ್ತಾರೆ. ಸೆ.15ರಂದು ಅವರು ಫ್ಲೋರಿಡಾದಲ್ಲೇ ಇದ್ದಿದ್ದರಿಂದ ತಮ್ಮ ಸ್ವಂತ ಗಾಲ್ಫ್ ಕ್ಲಬ್‌ಗೆ ಹೋಗಿದ್ದರು. ಗಾಲ್ಫ್ ಆಟ ಮುಗಿಸಿ ಇನ್ನೇನು ಮನೆಗೆ ಹೊರಡಬೇಕು ಎನ್ನುವಷ್ಟರಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.
AK-47 ರೈಫಲ್ ಪತ್ತೆ:
ಫ್ಲೋರಿಡಾದ ಗಾಲ್ಫ್ ಕ್ಲಬ್‌ನ ಅಕ್ಕಪಕ್ಕದಲ್ಲಿ ಒಂದು ಎಕೆ-47 ರೈಫಲ್, ಟ್ರೆಕ್ಕಿಂಗ್ ಮಾಡುವವರು ಅಥವಾ ವ್ಲಾಗರ್‌ಗಳು ಬಳಸುವ ಗೋ ಪ್ರೋ ಕ್ಯಾಮೆರಾ, ಎರಡು ಬ್ಯಾಕ್ ಪ್ಯಾಕ್ (ಬ್ಯಾಗ್) ಸಿಕ್ಕಿವೆ. ಇದಲ್ಲದೇ, ಗಾಲ್ಫ್ ಕ್ಲಬ್ ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬ ಟ್ರಂಪ್ ಕಾರಿನ ಫೋಟೋ ತೆಗೆದುಕೊಳ್ಳುತ್ತಿದ್ದುದನ್ನು ತಾವು ನೋಡಿದ್ದಾಗಿ ತಿಳಿಸಿದ್ದಾರೆ. ಇಷ್ಟು ಮಾಹಿತಿ ಸಂಗ್ರಹಿಸಿದ ಎಫ್‌ಬಿಐ ಏಜೆಂಟ್‌ಗಳು ಶಂಕಿತ ದಾಳಿಕೋರನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶಂಕಿತ ದಾಳಿಕೋರನ ಸೆರೆ:
ಗುಂಡಿನ ದಾಳಿ ನಡೆಸಿ ಓಡಿಹೋಗಿದ್ದ ವ್ಯಕ್ತಿಯನ್ನು ಇಂಟರ್ ಸ್ಟೇಟ್ ಹೈವೇ 75ರಲ್ಲಿ ಹಿಡಿಯಲಾಗಿದೆ ಎಂದು ಫ್ಲೋರಿಡಾದ ನಗರಾಡಳಿತದ ಮುಖ್ಯಸ್ಥರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಘಟನೆ ನಡೆದ ಕೂಡಲೇ ಗಾಲ್ಫ್ ಕ್ಲಬ್ ಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿದ್ದ ಎಪ್‌ಬಿಐ ಸಿಬ್ಬಂದಿ, ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾರಂಭಿಸಿದ್ದರು. ಇದೇ ವೇಳೆ, ರಾಜ್ಯ ಹೆದ್ದಾರಿ 714ರ ಬಳಿಯೇ ಸಾಗುವ ಇಂಟರ್ ಸ್ಟೇಟ್ ಹೆದ್ದಾರಿ 75ರಲ್ಲಿ ವೇಗವಾಗಿ ಬರುತ್ತಿದ್ದ ಕಾರನ್ನು ತಡೆದು ಪರಿಶೀಲಿಸಿದಾಗ ಶಂಕಿತ ದಾಳಿಕೋರ ಅದರಲ್ಲಿದ್ದುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಮ್ಮ ದೇಶದಲ್ಲಿ ರಾಜಕೀಯ ಹಿಂಸಾಚಾರ ಅಥವಾ ಯಾವುದೇ ಹಿಂಸಾಚಾರಕ್ಕೆ ಯಾವುದೇ ಸ್ಥಳವಿಲ್ಲ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.
ವಾಷಿಂಗ್ಟನ್: ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣ (Telangana) ಮೂಲದ ಯುವತಿ ಅಮೆರಿಕದ (America) ಫ್ಲೋರಿಡಾದಲ್ಲಿ ಸಾವನ್ನಪ್ಪಿದ್ದಾರೆ.
ಭಾನುವಾರ ರಾತ್ರಿ ಘಟನೆ ನಡೆದಿದ್ದು, ಯಾದಾದ್ರಿ ಭೋಂಗಿರ್ ಜಿಲ್ಲೆಯ ಯಾದಗರಿಪಲ್ಲಿ ಮೂಲದ ಸೌಮ್ಯಾ (25) ಅಪಘಾತದಲ್ಲಿ (Accident) ಮೃತಪಟ್ಟಿದ್ದಾರೆ. ಸೌಮ್ಯಾ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಫ್ಲೋರಿಡಾ (Florida) ಅಟ್ಲಾಂಟಿಕ್ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿದ್ದ ಸೌಮ್ಯ ಅಲ್ಲೇ ಉದ್ಯೋಗ ಹುಡುಕುತ್ತಿದ್ದರು. ಇದನ್ನೂ ಓದಿ: ಶಾಂತವಾಗುತ್ತಿದೆ ರೆಮಾಲ್ ಚಂಡಮಾರುತ – ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ
ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದು ಸೌಮ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೌಮ್ಯಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಆಕೆಯ ಮೃತದೇಹವನ್ನು ಭಾರತಕ್ಕೆ ತರುವಂತೆ ಆಕೆಯ ಪೋಷಕರಾದ ಕೋಟೇಶ್ವರ ರಾವ್ ಮತ್ತು ಬಾಲಾಮಣಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು
ವಾಷಿಂಗ್ಟನ್: ಬಾಲಿವುಡ್‌ನ ಪಿಕೆ ಸಿನಿಮಾ ನೋಡಿದವರಿಗೆ ಈ ಒಂದು ಘಟನೆ ಥೇಟ್ ಅದರಂತೆಯೇ ಎನಿಸುತ್ತದೆ. ಅಮೆರಿಕದಲ್ಲಿ (America) ವ್ಯಕ್ತಿಯೊಬ್ಬ ಬೀದಿಯಲ್ಲಿ ಬೆತ್ತಲಾಗಿ (Naked) ಸಂಚರಿಸಿದ್ದಕ್ಕೆ ಆತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಆತ ಅನ್ಯಗ್ರಹದಿಂದ (Alien) ಬಂದಿರುವುದಾಗಿ ತಿಳಿಸಿದ್ದಾನೆ.
ಫ್ಲೋರಿಡಾದ (Florida) ಪಾಮ್ ಬೀಚ್‌ನಲ್ಲಿ (Palm Beach) 44 ವರ್ಷದ ವ್ಯಕ್ತಿಯೊಬ್ಬ ಬೆತ್ತಲಾಗಿ ನಡೆದುಕೊಂಡು ಹೋಗುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಳಿಕ ಆತ ತಾನು ಬೇರೊಂದು ಗ್ರಹದಿಂದ ಬಂದಿದ್ದೇನೆ ಎಂದಿದ್ದಾನೆ. ಇದನ್ನೂ ಓದಿ: ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ
ಪೊಲೀಸರು ಬಂಧಿಸಿದಾಗ ಆತ ನಾನು ಬಟ್ಟೆಗಳನ್ನು ಎಲ್ಲಿ ಇಟ್ಟಿದ್ದೇನೋ ಗೊತ್ತಿಲ್ಲ ಎಂದಿದ್ದಾನೆ. ಆತ ತನ್ನ ಹೆಸರು ಅಥವಾ ಯಾವುದೇ ಗುರುತುಗಳನ್ನು ನೀಡಲು ನಿರಾಕರಿಸಿದ್ದಾನೆ. ಇದಾದ ಬಳಿಕ ಪೊಲೀಸರು ಆತನ ಬಗ್ಗೆ ಪತ್ತೆ ಹಚ್ಚಿ, ಹೆಸರನ್ನು ಜೇಸನ್ ಸ್ಮಿತ್ ಎಂದು ಗುರುತಿಸಿದ್ದಾರೆ.
ವ್ಯಕ್ತಿ ನಾನು ಭೂಮಿಯವನೇ ಅಲ್ಲ, ಅನ್ಯಗ್ರಹದಿಂದ ಬಂದಿದ್ದೇನೆ. ಕೆಲ ದಿನಗಳಿಂದ ಪಾಮ್ ಬೀಚ್‌ನಲ್ಲಿ ವಾಸಿಸುತ್ತಿದ್ದೇನೆ ಎಂದು ಹೇಳಿದ್ದಾನೆ. ಇದೀಗ ಪೊಲೀಸರು ಅಸಭ್ಯವಾಗಿ ವರ್ತಿಸಿರುವುದಕ್ಕೆ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಶಾಸಕ ಎನ್ ಮಹೇಶ್‌ಗೆ ಎದೆನೋವು – ಆಸ್ಪತ್ರೆಗೆ ದಾಖಲು
ಫ್ಲೋರಿಡಾ: ಶಾಲೆಗೆ ತಂದಿದ್ದ ವೀಡಿಯೋಗೇಮ್‍ನ್ನು ಕಸಿದುಕೊಂಡಿದ್ದಕ್ಕಾಗಿ 17 ವರ್ಷದ ಹುಡುಗನೊಬ್ಬ ಶಾಲೆಯ ಶಿಕ್ಷಕರೊಬ್ಬರ ಸಹಾಯಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಫ್ಲೋರಿಡಾದ ಮತಾನ್ಜಾಸ್‍ನಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿ ಹಲ್ಲೆ ನಡೆಸುತ್ತಿರುವ ವೀಡಿಯೋವನ್ನು ಫ್ಲಾಗರ್ ಕೌಂಟಿ ಶೆರಿಫ್ ಕಛೇರಿಯು ಬಿಡುಗಡೆ ಮಾಡಿದೆ. ಅದರಲ್ಲಿ ವಿದ್ಯಾರ್ಥಿಯು ಸಹಾಯಕಿಯನ್ನು ನೆಲಕ್ಕೆ ತಳ್ಳಿ ಒದೆಯುವುದು ಮತ್ತು ಗುದ್ದುತ್ತಿರುವುದು ಸೆರೆಯಾಗಿದೆ. ಇದನ್ನೂ ಓದಿ: ನಿಲ್ಲಿಸಿದ್ದ ಬಸ್‍ಗಳಿಗೆ ಟ್ರಕ್ ಡಿಕ್ಕಿ- 8 ಮಂದಿ ಸಾವು, 50 ಮಂದಿಗೆ ಗಾಯ
ಶಿಕ್ಷಕ ಹಾಗೂ ಜನರು ಆತನನ್ನು ತಡೆಯುವ ತನಕ ನಿರಂತರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾಗಿದ್ದ ಸಹಾಯಕಿ ಸುಧಾರಿಸಿಕೊಳ್ಳಲು ಹಲವು ನಿಮಿಷಗಳನ್ನು ತೆಗೆದುಕೊಂಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.
ವಾಷಿಂಗ್ಟನ್: ಫ್ಲೋರಿಡಾದ (Florida) ನೈಋತ್ಯ ಭಾಗಕ್ಕೆ ಬುಧವಾರ ಭೀಕರ ಇಯಾನ್ ಚಂಡಮಾರುತ (Ian Hurricane) ಅಪ್ಪಳಿಸಿದ್ದು, ದೊಡ್ಡ ಅನಾಹುತವೇ ಸೃಷ್ಟಿಯಾಗಿದೆ. ಚಂಡಮಾರುತದ (Hurricane) ಪರಿಣಾಮ ಫ್ಲೋರಿಡಾದ ಬಹುತೇಕ ಭಾಗ ಕತ್ತಲೆಯಲ್ಲಿ ಮುಳುಗಿದೆ.
ನೂರಾರು ಮನೆಗಳು ಸೇರಿದಂತೆ ಹಲವರು ಈ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಸಮುದ್ರಕ್ಕೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 20 ಜನರು ನಾಪತ್ತೆಯಾಗಿದ್ದಾರೆ. ಫ್ಲೋರಿಡಾದ ಕೀಸ್ ದ್ವೀಪದಲ್ಲಿ ನಾಲ್ವರು ಕ್ಯೂಬನ್ನರು ಈಜಿಕೊಂಡು ಬರುತ್ತಿದ್ದುದನ್ನು ಕಂಡು ಅವರಲ್ಲಿ ಮೂವರನ್ನು ಕರಾವಳಿಯ ಪಡೆ ರಕ್ಷಿಸಿದೆ ಎಂದು ವರದಿಯಾಗಿದೆ.
80,000 ಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಫೋರ್ಟ್ ಮೈಯರ್ಸ್ ಪ್ರದೇಶದಲ್ಲಿ ಮಳೆ, ಗಾಳಿಗೆ ಪ್ರವಾಹದ ಸ್ಥಿತಿ ಉಂಟಾಗಿ ಪ್ರದೇಶ ಸರೋವರದಂತೆ ಗೋಚರವಾಗುತ್ತಿದೆ. ರಾಜ್ಯದ ನೈಋತ್ಯ ಭಾಗದಲ್ಲಿ ಹೆಚ್ಚಿನ ಹಾನಿಗಳು ಸಂಭವಿಸಿದ್ದು, ಅಲ್ಲಿನ 1 ಕೋಟಿ ಜನಸಂಖ್ಯೆಯಲ್ಲಿ ಸುಮಾರು 20 ಲಕ್ಷ ಜನರು ನಿನ್ನೆ ಸಂಜೆಯಿಂದ ವಿದ್ಯುತ್ ಇಲ್ಲದೇ ದಿನ ದೂಡುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮನೆ ಬಾಗಿಲಿಗೆ ಪಡಿತರ – ಮಮತಾ ಬ್ಯಾನರ್ಜಿಯ ನೂತನ ಯೋಜನೆ ಕಾನೂನುಬಾಹಿರ ಎಂದ ಹೈಕೋರ್ಟ್
ಇಯಾನ್ ಚಂಡಮಾರುತ ಪ್ರಾರಂಭವಾದಾಗಲೇ ಗಂಟೆಗೆ 240 ಕಿ.ಮೀ ವೇಗದಲ್ಲಿ ಗಾಳಿ ಬೀಸಲಾರಂಭಿಸಿದೆ. ಫ್ಲೋರಿಡಾ ಈ ಹಿಂದೆ ಹಲವು ವರ್ಷಗಳಿಂದ ಕಾಣದೇ ಇದ್ದ ಚಂಡಮಾರುತವನ್ನು ಈಗ ಅನುಭವಿಸುತ್ತಿದೆ. ಇದು ಇನ್ನೂ 2 ದಿನಗಳವರೆಗೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ: 8 ಗಂಟೆ ಅಂತರದಲ್ಲಿ 2 ಬಸ್‌ಗಳಲ್ಲಿ ಸ್ಫೋಟ
Live Tv
[brid partner=56869869 player=32851 video=960834 autoplay=true]