Tag: Florida State University

  • ಫ್ಲೋರಿಡಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಗುಂಡಿನ ದಾಳಿಗೆ ಇಬ್ಬರು ಬಲಿ – ಐವರಿಗೆ ಗಾಯ

    ಫ್ಲೋರಿಡಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಗುಂಡಿನ ದಾಳಿಗೆ ಇಬ್ಬರು ಬಲಿ – ಐವರಿಗೆ ಗಾಯ

    ತಲ್ಲಹಸ್ಸಿ: ಅಮೆರಿಕದ ಫ್ಲೋರಿಡಾ ಸ್ಟೇಟ್ ಯುನಿವರ್ಸಿಟಿಯಲ್ಲಿ (Florida State University) ವಿದ್ಯಾರ್ಥಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಈ ಕುರಿತು ಆಗ್ನೇಯ ಅಮೆರಿಕ (America) ಪೊಲೀಸರು ಮಾತನಾಡಿ, ಸ್ಥಳೀಯ ಡೆಪ್ಯೂಟಿ ಶೆರಿಫ್ ಮಗ ಫೀನಿಕ್ಸ್ ಇಕ್ನರ್ ಎಂಬಾತ ತನ್ನ ತಾಯಿಯ ಹಳೆಯ ಬಂದೂಕಿನಿಂದ ಗುಂಡಿನ ದಾಳಿ ನಡೆಸಿದ್ದಾನೆ. ಫ್ಲೋರಿಡಾ ವಿಶ್ವವಿದ್ಯಾನಿಲಯದೊಳಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕಾಫಿ ತೋಟದ ಸೊಬಗಿಗೆ ಮಾರುಹೋದ ಬ್ಯಾಡ್ಮಿಂಟರ್ ತಾರೆ – ಪಿವಿ ಸಿಂಧುಗೆ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವಾಸೆ!

    ಪ್ರತ್ಯಕ್ಷದರ್ಶಿಗಳು ಹೇಳುವಂತೆ, ಗುಂಡು ಹಾರಿಸಲು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ, ಅಲ್ಲಿದ್ದ ವಿದ್ಯಾರ್ಥಿಗಳು ಆತನ ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿದ್ದಾರೆ. ಕೇವಲ ಒಂದು ನಿಮಿಷದಲ್ಲಿ ಸುಮಾರು ಎಂಟರಿಂದ ಹತ್ತು ಗುಂಡುಗಳನ್ನು ಸಿಡಿಸಿದ್ದಾನೆ. ಇದೇ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಇಕ್ನರ್ ಕಾಲಿಗೆ ಗುಂಡು ಹಾರಿಸಿದ್ದು, ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕ್ಯಾಂಪಸ್‌ನ್ನು ಬಂದ್ ಮಾಡಲಾಗಿದೆ ಎಂದರು.

    ಲಿಯಾನ್ ಕೌಂಟಿ ಶೆರಿಫ್ ವಾಲ್ಟ್ ಮೆಕ್‌ನೀಲ್ ಸುದ್ದಿಗಾರರೊಂದಿಗೆ ಮಾತನಾಡಿ, ಫೀನಿಕ್ಸ್ ಇಕ್ನರ್ 20 ವರ್ಷದವನಾಗಿದ್ದು, ಇದೇ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾನೆ. ಇನ್ನೂ ಅವರ ತಾಯಿಯೂ ಕೂಡ ನಮ್ಮ ಸಹುದ್ಯೋಗಿಯಾಗಿದ್ದು, ಕಳೆದ 18 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇಕ್ನರ್ ಶೆರಿಫ್ ಕಚೇರಿಯ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ, ಹೀಗಾಗಿ ಆತನಿಗೆ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ಮಾಹಿತಿಯಿತ್ತು.

    ಇನ್ನೂ ಸಾವನ್ನಪ್ಪಿದ ಇಬ್ಬರು ಕೂಡ ವಿದ್ಯಾರ್ಥಿಗಳಲ್ಲ ಎಂದು ಪೊಲೀಸರು ತಿಳಿಸಿದ್ದು, ತನಿಖೆ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಲಿದೆ ಎಂದಿದ್ದಾರೆ. ಈ ಘಟನೆಯ ಬಳಿಕ 40,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ವಿಶ್ವವಿದಾಲಯದ ಎಲ್ಲಾ ತರಗತಿಗಳನ್ನು ರದ್ದುಗೊಳಿಸಲಾಗಿದ್ದು, ಕ್ಯಾಂಪಸ್‌ನಲ್ಲಿನ ಎಲ್ಲ ವಿದ್ಯಾರ್ಥಿಗಳನ್ನು ಹೊರಕಳುಹಿಸಲಾಗಿದೆ ಎಂದು ತಿಳಿಸಿದರು.

    ಈ ಕುರಿತು ಯೂನಿವರ್ಸಿಟಿಯ ಅಧ್ಯಕ್ಷ ರಿಚರ್ಡ್ ಮೆಕಲ್ಲೌ ಮಾತನಾಡಿ, ದಾಳಿಯಿಂದ ಹಾನಿಗೊಳಗಾದ ವಿದ್ಯಾರ್ಥಿಗಳಿಗೆ ನಮ್ಮ ಬೆಂಬಲವಿರುತ್ತದೆ. ಇಂದು ಈ ಯೂನಿವರ್ಸಿಟಿಗೆ ಇದು ದುರಂತದ ದಿನ. ನಡೆದ ಘಟನೆಯಿಂದಾಗಿ ನಾವೆಲ್ಲರು ದುಃಖಿತರಾಗಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದನ್ನೂ ಓದಿ: ಲೇಸರ್‌ ಲೈಟ್‌ ಎಫೆಕ್ಟ್‌, ಪಾಟ್ನಾ ಏರ್‌ಪೋರ್ಟ್‌ನಲ್ಲಿ ತಪ್ಪಿತು ದುರಂತ – ಪೈಲಟ್‌ ಸಾಹಸದಿಂದ ಉಳಿಯಿತು ನೂರಾರು