Tag: Flower Pot

  • ಐಷಾರಾಮಿ ಕಾರಲ್ಲಿ ಬಂದು ಜಿ20 ಕಾರ್ಯಕ್ರಮಕ್ಕಾಗಿ ಇಟ್ಟಿದ್ದ ಹೂಕುಂಡ ಕದ್ದೊಯ್ದ ಕಳ್ಳ ಅರೆಸ್ಟ್‌

    ಐಷಾರಾಮಿ ಕಾರಲ್ಲಿ ಬಂದು ಜಿ20 ಕಾರ್ಯಕ್ರಮಕ್ಕಾಗಿ ಇಟ್ಟಿದ್ದ ಹೂಕುಂಡ ಕದ್ದೊಯ್ದ ಕಳ್ಳ ಅರೆಸ್ಟ್‌

    ಲಕ್ನೋ: ಐಷಾರಾಮಿ ಕಾರಿನಲ್ಲಿ (Car) ಬಂದ ವ್ಯಕ್ತಿಗಳಿಬ್ಬರು ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಕಾರ್ಯಕ್ರಮಕ್ಕಾಗಿ (G20 Event) ಹಾಕಲಾಗಿದ್ದ ಹೂವಿನ ಕುಂಡಗಳನ್ನು (Flower Pot) ಕದ್ದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.

    ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್ ವೇನಲ್ಲಿರುವ ಆಂಬಿಯೆನ್ಸ್ ಮಾಲ್ ಎದುರು ಈ ಘಟನೆ ನಡೆದಿದೆ. ಹೂವಿನ ಕುಂಡವನ್ನು ಕದಿಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಪುರುಷರು ಹೂವಿನ ಕುಂಡವನ್ನು ಕದ್ದು ಕಾರಿನಲ್ಲಿ ಹಾಕುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದು.

    ಟ್ವಿಟ್ಟರ್‌ನಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ನಿಶಾಂತ್ ಕುಮಾರ್ ಯಾದವ್ ಅವರು ಘಟನೆ ಕುರಿತು ತನಿಖೆ ನಡೆಸುವಂತೆ ಗುರುಗ್ರಾಮ್ ಪೊಲೀಸರಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ನಾನು ರಾಜಕೀಯಕ್ಕೆ ಬಂದಿರುವುದೇ ಆಕಸ್ಮಿಕ: ಸುಮಲತಾ ಅಂಬರೀಶ್

    ಈ ವೇಳೆ ಗಾಂಧಿನಗರ ನಿವಾಸಿ ಮನಮೋಹನ್ ಎಂಬಾತನನ್ನು ಬಂಧಿಸಿದ್ದು, (Arrest) ಪ್ರಕರಣದ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಜೊತೆಗೆ ಹೂವಿನ ಕುಂಡಗಳನ್ನು ಇಡಲಾಗಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾದಿಂದ ತೈಲಕ್ಕೆ ಭಾರೀ ಬೇಡಿಕೆ – ಆದ್ರೂ ರಷ್ಯಾಗೆ ಭಾರತದ ಕಡೆ ಒಲವೇಕೆ?

  • ಚಿನ್ನ, ಬೆಳ್ಳಿ, ಹಣ ಬಿಟ್ಟು ಫ್ಲವರ್ ಪಾಟ್ ಕದ್ದೊಯ್ದ ಕಳ್ಳ

    ಚಿನ್ನ, ಬೆಳ್ಳಿ, ಹಣ ಬಿಟ್ಟು ಫ್ಲವರ್ ಪಾಟ್ ಕದ್ದೊಯ್ದ ಕಳ್ಳ

    ಹಾಸನ: ಹಾಸನದಲ್ಲೊಬ್ಬ ಕಳ್ಳ ಚಿನ್ನ, ಬೆಳ್ಳಿ, ಹಣ ಬಿಟ್ಟು ಫ್ಲವರ್ ಪಾಟ್ ಕದಿಯುತ್ತಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ:  ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ

    Thief Flower Pot

    ರಾತ್ರಿ ವೇಳೆ ನಿಧಾನವಾಗಿ ಮನೆಯ ಕಾಂಪೌಂಡ್ ಆವರಣಕ್ಕೆ ಬರುವ ಕಳ್ಳ, ಒಳಗೆ ಮಲಗಿರುವ ಮನೆಯವರಿಗೆ ತಿಳಿಯದಂತೆ ಫ್ಲವರ್ ಪಾಟ್ ಕದ್ದು ಪರಾರಿಯಾಗಿದ್ದಾನೆ. ಹಾಸನ ನಗರದ ಸಂಗಮೇಶ್ವರ ಬಡಾವಣೆಯ ಒಂದನೇ ಹಂತದಲ್ಲಿರುವ ಸುಮಾರು ಮೂರು ಮನೆಯಲ್ಲಿ ಕಳ್ಳತನ ನಡೆದಿದೆ. ಕಳ್ಳರು ಒಂದೇ ದಿನ ಸುಮಾರು ಮೂವತ್ತಕ್ಕೂ ಹೆಚ್ಚು ಫ್ಲವರ್ ಪಾಟ್ ಕದ್ದೊಯ್ದಿದ್ದಾರೆ.

    Thief Flower Pot

    ಬೆಳಗಿನ ಜಾವ 3.41ರ ಸಮಯದಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ಮಾಡುತ್ತಿರುವ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದಷ್ಟು ಬೇಗ ಪಾಟ್ ಕಳ್ಳರನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಪೆನ್‍ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಇದನ್ನೂ ಓದಿ:  ತಪ್ಪು ಕಲ್ಪನೆಗಳಿಂದ ಭಾರತ್ ಬಂದ್ ಕರೆ ನೀಡಲಾಗಿದೆ: ಲಕ್ಷ್ಮಣ್ ಸವದಿ