Tag: Folk

  • ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಹು ಇನ್ನಿಲ್ಲ

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಹು ಇನ್ನಿಲ್ಲ

    ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಸೀಮಸಾಬ ಹುಸೇನಸಾಬ ಬಿಜಾಪುರ(88) ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

    ಮೆದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಾಹು ಬಿಜಾಪುರ ಕೊನೆ ಉಸಿರೆಳೆದಿದ್ದಾರೆ. ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರುವಾಸಿಯಾಗಿದ್ದರು. 1935 ಫೆಬ್ರವರಿ 4 ರಂದು ಜನಿಸಿದ್ದ ಕಾಹು 2003 ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಂದ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಅಪಘಾತ – ಇನ್ಸ್‌ಪೆಕ್ಟರ್ ದಂಪತಿಯಿಂದ ಕಿರಿಕ್

    ಮೃತರು ಇಬ್ಬರು ಪುತ್ರರು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು ಜನಪ್ರತಿನಿಧಿಗಳಿಂದ ತೀವ್ರ ಸಂತಾಪ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಜನಪದ ಶೈಲಿ ದೇಶದ ಸಂಸ್ಕೃತಿಯನ್ನು ಬಿಂಬಿಸುತ್ತದೆ – ಸಾಹಿತಿ ಶಂಭು ಬಳೆಗಾರ

    ಜನಪದ ಶೈಲಿ ದೇಶದ ಸಂಸ್ಕೃತಿಯನ್ನು ಬಿಂಬಿಸುತ್ತದೆ – ಸಾಹಿತಿ ಶಂಭು ಬಳೆಗಾರ

    ಕೊಪ್ಪಳ: ನಮ್ಮ ಗ್ರಾಮೀಣ ಸೊಗಡಿನ ಜನಪದ ಶೈಲಿಯು ದೇಶದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಸಾಹಿತಿ ಡಾ. ಶಂಭು ಬಳೆಗಾರ ಅಭಿಪ್ರಾಯಪಟ್ಟರು.

    ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಪಬ್ಲಿಕ್ ಶಾಲೆಯ 26ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಚಿಣ್ಣರ ಜನಪದ ಜಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಸಂಸ್ಕೃತಿಯು ವಿಶ್ವದ ಎಲ್ಲ ರಾಷ್ಟ್ರಗಳಿಗೂ ಮಾದರಿಯಾಗಿದೆ. ನಮ್ಮ ಆಚಾರ ವಿಚಾರ, ಉಡುಗೆ ತೊಡುಗೆ, ಊಟ ಉಪಚಾರ ಸೇರಿದಂತೆ ಸಂಸ್ಕೃತಿಯನ್ನು ಬಿಂಬಿಸುವ ನಾನಾ ಬಗೆಯ ಕಾಯಕಗಳ ಶೈಲಿಗಳು ವಿಭಿನ್ನವಾಗಿ ಕಾಣುತ್ತದೆ. ಆದರೆ ಇಂದು ಆ ಜನಪದ ಶೈಲಿಯು ಮರೆಯಾಗುವ ಹಂತಕ್ಕೆ ತಲುಪುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಕೇವಲ ಬೆರಳೆಣಿಕೆಯಷ್ಟು ಗ್ರಾಮೀಣ ಭಾಗಗಳಲ್ಲಿ ಮಾತ್ರ ನಾವು ಜನಪದ ಶೈಲಿಯನ್ನು ಕಾಣವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧುನಿಕತೆಗೆ ಮಾರು ಹೋಗಿ ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ. ಜನಪದ ಶೈಲಿ, ಜನಪದ ಕಲೆ ಮರೆಯಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಜನಪದದ ಬಗ್ಗೆ ತಿಳಿಸುವ ಉದ್ದೇಶದಿಂದ ಚಿಣ್ಣರ ಜನಪದ ಜಾತ್ರೆ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

    ಮಾಜಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಗ್ರಾಮೀಣ ಭಾಗಗಳಿಂದ ದೇಶ ಬದಲಾವಣೆ ಕಂಡುಕೊಳ್ಳಲು ಸಾಧ್ಯ. ಹಾಗಾಗಿ ನಾವು ಗ್ರಾಮೀಣ ಭಾಗದ ಶೈಲಿಯನ್ನು ಕಡೆಗಣಿಸುವಂತಿಲ್ಲ. ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಕಾಪಾಡಬೇಕು ಎಂದು ಹೇಳಿದರು.

    ಕಾರ್ಯಕ್ರಮದ ಅಂಗವಾಗಿ ಶಾಲೆಯ ಆವರಣದಲ್ಲಿ ಜನಪದ ಶೈಲಿಯಲ್ಲಿ ತಾತ್ಕಾಲಿನ ಗ್ರಾಮಗಳನ್ನು ನಿರ್ಮಾಣ ಮಾಡಲಾಗಿತ್ತು. ಒಂದೊಂದು ಮನೆಯಲ್ಲಿ ಕೂಡ ಕಮ್ಮಾರರು, ನೇಕಾರರು, ಕುಂಬಾರರು ಸೇರಿದಂತೆ ನಾನಾ ರೀತಿಯ ಕಸುಬುಗಳ ಆಧಾರ ಮೇಲೆ ಮನೆಗಳನ್ನು ವಿಂಗಡಣೆ ಮಾಡಿ, ಯಾರು ಯಾವ ಕೆಲಸವನ್ನು ಮಾಡುತ್ತಿದ್ದರು ಎನ್ನುವ ಮಾಹಿತಿಯನ್ನು ಮಕ್ಕಳಿಗೆ ಪ್ರಯೋಗಿಕವಾಗಿ ನೀಡಲಾಯಿತು.

  • ಗೊರವನ ಕುಣಿತವನ್ನ ಮೈಗೂಡಿಸಿಕೊಂಡಿರೋ ಬಡ ಜಾನಪದ ಕಲಾವಿದನಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ

    ಗೊರವನ ಕುಣಿತವನ್ನ ಮೈಗೂಡಿಸಿಕೊಂಡಿರೋ ಬಡ ಜಾನಪದ ಕಲಾವಿದನಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ

    ಚಿತ್ರದುರ್ಗ: ಪೂರ್ವಜರ ಕಾಲದಿಂದಲೂ ಸಾಂಪ್ರದಾಯಿಕವಾಗಿ ಗೊರವಪ್ಪನ ಕುಣಿತವನ್ನು ಮಾಡಿಕೊಂಡು ಜಾನಪದ ಕಲೆಯನ್ನು ಉಳಿಸುತ್ತಾ, ತನ್ನ ಕುಣಿತದ ಮೂಲಕವೇ ಸಹಸ್ರಾರು ಭಕ್ತರನ್ನು ಒಂದೆಡೆ ಸೇರಿಸುವ ಶಕ್ತಿ ಹೊಂದಿರೋ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಪವಾಡದ ಮೈಲಾರಪ್ಪನವರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಚಿತ್ರದುರ್ಗ ಜಿಲ್ಲೆ ಅಲ್ಲದೆ ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ತುಮಕೂರು, ಮೈಸೂರು, ಬೆಂಗಳೂರು, ಹಾವೇರಿ ಹೀಗೆ ಎಲ್ಲಾ ಕಡೆ ಪವಾಡವನ್ನು ಮಾಡುತ್ತಾ ತನ್ನ ಆರಾಧ್ಯ ದೈವ ಮೈಲಾರಲಿಂಗೇಶ್ವರ ಸ್ವಾಮಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಇವರು ನಾಲಗೆಯಲ್ಲಿ ತ್ರಿಶೂಲ, ಕೈಯಲ್ಲಿ ಪಂಚ ತ್ರಿಶೂಲವನ್ನು ಚುಚ್ಚಿಕೊಂಡು ಬೆಂಕಿ ಹಚ್ಚಿಕೊಂಡು ದೇವರಿಗೆ ಅರ್ಪಿಸುವ ಪವಾಡಕ್ಕೆ ಸರಿಸಾಟಿ ಇಲ್ಲ. ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದರೂ ತಮ್ಮ ಕಾಯಕ ಮಾತ್ರ ಬಿಟ್ಟಿಲ್ಲ.

    ದೇಹದ ನರಗಳಲ್ಲಿ ನಿಶಕ್ತಿ ಕಾಣಿಸಿಕೊಂಡು ಹಾಸಿಗೆ ಹಿಡಿದಿದ್ದರೂ ಸಹ ಎಲ್ಲೇ ಪೂಜೆ ಅಥವಾ ಗೊರವನ ಕುಣಿತ ಎಂದರೆ ಉತ್ಸಾಹವನ್ನು ಉಕ್ಕಿಸಿಕೊಂಡು ಹೋಗುತಿದ್ದ ಮೈಲಾರಪ್ಪ, ಮೈಸೂರು ದಸರಾದಲ್ಲಿಯೂ ತನ್ನ ಜಾನಪದ ಕುಣಿತವನ್ನು ಮೇಳೈಸಿದ್ದಾರೆ.

    ಪತ್ನಿ ಅಂಬಾದೇವಿ ಮತ್ತು ಮಗಳು ನೀತಾ ಜೊತೆ ಹಿರಿಯೂರಿನಲ್ಲಿ ವಾಸವಾಗಿರೋ ಇವರಿಗೆ ಇರಲು ಒಂದು ಸುಸಜ್ಜಿತ ಸೂರಿಲ್ಲ. ಬೀಳುವ ಸ್ಥಿತಿಯಲ್ಲಿರೋ ಗುಡಿಸಲೇ ಇವರ ಬದುಕಿಗೆ ಆಸರೆ. ಒಂದೊತ್ತಿನ ಊಟಕ್ಕಾಗಿ ಈ ಕಲೆಯನ್ನು ಮೈ ಗೂಡಿಸಿಕೊಂಡಿದ್ದೇನೆಂದು ಹೇಳುವ ಬಡ ಜಾನಪದ ಕಲಾವಿದನಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಬಂದಿರೋದು ಸಂತಸವೆನಿಸಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.