Tag: folk sports

  • ಕರಾವಳಿಯಲ್ಲಿ ಕಂಬಳ ಅಬ್ಬರ – ಜಾನಪದ ಕ್ರೀಡೆ ಕಣ್ತುಂಬಿಕೊಂಡ ಮಂಗ್ಳೂರಿಗರು

    ಕರಾವಳಿಯಲ್ಲಿ ಕಂಬಳ ಅಬ್ಬರ – ಜಾನಪದ ಕ್ರೀಡೆ ಕಣ್ತುಂಬಿಕೊಂಡ ಮಂಗ್ಳೂರಿಗರು

    ಮಂಗಳೂರು: ಕಂಬಳ ಕರಾವಳಿಯ ಜಾನಪದ ಕ್ರೀಡೆಯಾಗಿದ್ದು, ಕರಾವಳಿಯಲ್ಲಿರುವಷ್ಟು ಕಂಬಳದ ಕ್ರೇಜ್ ಬೇರೆಲ್ಲೂ ಕಾಣಸಿಗದು. ಆದರೆ ನಗರ ಬೆಳೆಯುತ್ತಿದ್ದಂತೆ ಕಂಬಳದಂತಹ ಹಳ್ಳಿ ಸೊಗಡಿನ ಆಚರಣೆಗಳು ನಗರ ಪ್ರದೇಶದ ಜನತೆಯಿಂದ ದೂರವಾಗಿತ್ತು. ಆದರೆ ಈಗ ಅಂತಹ ಭಾವನೆಯನ್ನು ದೂರ ಮಾಡುವ ಯತ್ನ ಮಂಗಳೂರಿನಲ್ಲಿ ನಡೆಯುತ್ತಿದೆ.

    ನಗರದ ಜನರಿಗೂ ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳದ ಬಗ್ಗೆ ಅರಿವು ಮೂಡಿಸಲು, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಮಂಗಳೂರು ನಗರದ ಕುಳೂರು ಬಳಿಯ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಕಂಬಳ ಏರ್ಪಡಿಸಲಾಗಿತ್ತು. ಕೃತಕವಾಗಿ ರೂಪಿಸಿದ ಕಂಬಳದ ಕರೆಯಲ್ಲಿ ಓಟದ ಕೋಣಗಳು ಜನರಲ್ಲಿ ಆಟದ ರಂಗನ್ನು ಮೂಡಿಸಿದ್ದವು.

    ಸಾಮಾನ್ಯವಾಗಿ ಕಂಬಳ ಹಳ್ಳಿಗಳಲ್ಲಿ ಮಾತ್ರ ನಡೆಯುತ್ತೆ ಎನ್ನುವಂತಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ನಗರದಲ್ಲಿ ರಾಮ-ಲಕ್ಷ್ಮಣ ಮಂಗಳೂರು ಕಂಬಳೋತ್ಸವ ನಡೆಸಲಾಗುತ್ತಿದೆ. ಕ್ಯಾಪ್ಟನ್ ಬೃಜೇಶ್ ಚೌಟ ನೇತ್ರತ್ವದಲ್ಲಿ ಕಂಬಳ ನಡೆದಿದ್ದು, ಮಣ್ಣಿನ ಆಟವನ್ನು ನೋಡಿ ನಗರದ ಜನ ಸಂಭ್ರಮ ಪಡುವಂತೆ ಕಂಬಳವನ್ನು ಆಯೋಜಿಸಲಾಗಿತ್ತು.

    ಈ ಕಂಬಳ ಯಾವುದೇ ಕ್ರಿಕೆಟ್ ಆಟಕ್ಕೆ ಕಡಿಮೆ ಇಲ್ಲ. ಕ್ರಿಕೆಟ್‍ನಲ್ಲಿ ಕ್ರೀಡಾಪಟುಗಳೇ ಪ್ರಮುಖ ಆಕರ್ಷಣೆಯಾದರೆ, ಇಲ್ಲಿ ಮೂಕ ಪ್ರಾಣಿ ಕೋಣಗಳೇ ಪ್ರಮುಖ ಆಕರ್ಷಣೆ. ಪ್ರತೀ ಕೋಣದ ಮೇಲೂ ಸಾವಿರಾರು ರೂಪಾಯಿ ಬಾಜಿ ಕಟ್ಟುವ ಕಂಬಳ ಪ್ರೇಮಿಗಳು, ಕ್ರಿಕೆಟ್‍ನಂತೆ ಇಲ್ಲಿಯೂ ಕೂಡಾ ಮೂರನೇ ಅಂಪೈರ್, ವೀಕ್ಷಕ ವಿವರಣೆ, ನುರಿತ ತೀರ್ಪುಗಾರರು ಇರುತ್ತಾರೆ. ಮೂಕ ಪ್ರಾಣಿಗಳನ್ನು ಪಳಗಿಸಿ ಶಿಸ್ತಿಗೆ ಒಡ್ಡಿಕೊಳ್ಳುವ ರೀತಿಯೇ ಆಧುನಿಕತೆಯ ನಡುವೆಯೂ ಕೃಷಿಕರ ಪಾಲಿನ ಕಂಬಳ ಮನೋರಂಜನೆಯಾಗಿದೆ. ಅದಕ್ಕೂ ಮಿಗಿಲಾಗಿ ಪ್ರತಿಷ್ಟೆಯ ಕ್ರೀಡೆಯಾಗಿ ಕಂಬಳ ದಿನದಿಂದ ದಿನಕ್ಕೆ ಜನಪ್ರಿಯಗೊಳ್ಳುತ್ತಿದೆ. ಒಟ್ಟಿನಲ್ಲಿ ನಗರ ಭಾಗದಲ್ಲೂ ಈ ಕರಾವಳಿಯ ಜಾನಪದ ಕ್ರೀಡೆಯನ್ನು ಆಯೋಜಿಸುತ್ತಾ ಬಂದಿರುವುದು ನಿಜಕ್ಕೂ ಶ್ಲಾಘನೀಯ.

  • ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ, ಎಲ್ಲ ಅಡೆ ತಡೆ ನಿವಾರಣೆ

    ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ, ಎಲ್ಲ ಅಡೆ ತಡೆ ನಿವಾರಣೆ

    ನವದೆಹಲಿ: ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಕೊನೆಗೂ ರಾಷ್ಟ್ರಪತಿ ಅಂಕಿತ ಸಿಕ್ಕಿದೆ. ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಕಳಿಸಿದ್ದ ಮಸೂದೆಗೆ ಏಳು ತಿಂಗಳ ಬಳಿಕ ರಾಷ್ಟ್ರಪತಿಗಳಿಂದ ಅಂಕಿತ ಹಾಕಿದ್ದಾರೆ.

    ರಾಜ್ಯಪಾಲ ವಜುಭಾಯಿ ವಾಲಾ ಕಳಿಸಿದ್ದ ತಿದ್ದುಪಡಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಮಾಡಿದ್ದು, ಕಂಬಳಕ್ಕೆ ಇದ್ದ ಅಡ್ಡಿ ದೂರವಾಗಿದೆ.

    ಏನಿದು ಪ್ರಕರಣ?
    ಪ್ರಾಣಿದಯಾ ಸಂಘ ಸಂಸ್ಥೆ ಸಲ್ಲಿಸಿದ್ದ ಅರ್ಜಿ ಹಿನ್ನೆಲೆ ಕಂಬಳಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. ಇದರ ವಿರುದ್ಧವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ರಾಜ್ಯ ಸರ್ಕಾರ ಮಂಡಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದರು.

    ಸುಗ್ರಿವಾಜ್ಞೆ ಅವಧಿ ಮುಗಿದ ಕಾರಣ ಈ ವರ್ಷ ಕಂಬಳಕ್ಕೆ ಅನುಮತಿ ನೀಡಬಾರದು ಎಂದು ಪೇಟಾ ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿತ್ತು. ವಿಚಾರಣೆ ವೇಳೆ ರಾಜ್ಯದ ಪರ ವಕೀಲರು ಮಸೂದೆ ಅಂಗೀಕಾರವಾಗಿದ್ದು, ರಾಷ್ಟ್ರೀಪತಿಗಳ ಅಂಕಿತ ಬೀಳಲು ಬಾಕಿಯೆ ಎಂದು ವಾದಿಸಿದ್ದರು. ಸರ್ಕಾರದ ವಾದವನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಕಂಬಳ ಕ್ರೀಡೆಗೆ ತಡೆ ನೀಡಲು ನಿರಾಕರಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ್ದ ನ್ಯಾಯಮೂರ್ತಿಗಳಾದ ಎ.ಎಂ.ಕನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ದ್ವಿಸದಸ್ಯ ಪೀಠ ಸುಪ್ರೀಂ ಕೋರ್ಟ್ ಮಾರ್ಚ್ 14ಕ್ಕೆ ಮುಂದೂಡಿತ್ತು.

    ಗೌರವಾನ್ವಿತ ರಾಷ್ಟ್ರಪತಿಗಳು ತಮ್ಮ ಬಳಿ ಇದ್ದ ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳ ಮಸೂದೆಗೆ ಅಂಕಿತ ಹಾಕಿದಕ್ಕಾಗಿ ಪ್ರೀತಿಯ ಸೊಲ್ಮೆಲು. ಇದರಿಂದ ಈವರೆಗೆ ಕಂಬಳಕ್ಕೆಇದ್ದ ಎಲ್ಲ ಅಡ್ಡಿ ಆತಂಕಗಳು ನಿವಾರಣೆಯಾಗಿದೆ ಇದಕ್ಕೆ ಸಂಭಂದಿಸಿದ ಸುತ್ತೋಲೆ ಈಗಾಗಲೇ ರಾಜ್ಯ ಸರಕಾರಕ್ಕೆ ರವಾನೆಯಾಗಿದೆ. ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿವಿ ಸದಾನಂದ ಗೌಡ ಟ್ವೀಟ್ ಮಾಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ.

    https://www.youtube.com/watch?v=FZd1cgX4Fys

    https://www.youtube.com/watch?v=Klbxs_37mBI

  • ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ – ಹೋರಿ ತಿವಿದು ಓರ್ವ ಸಾವು

    ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ – ಹೋರಿ ತಿವಿದು ಓರ್ವ ಸಾವು

    ಹಾವೇರಿ: ಜಾನಪದ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮದಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನ ಸುರೇಶ ಹೊಂಬಳಿ (37) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ನಡೆದಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಈ ದುರ್ಘಟನೆ ಸಂಭವಿಸಿದೆ.

    ಉತ್ತರ ಕರ್ನಾಟಕದಲ್ಲಿ ಹೊರಿಹಬ್ಬವನ್ನ ಅದ್ದೂರಿ ಆಚರಣೆ ಮಾಡುತ್ತಾರೆ. ಹೋರಿ ಹಿಡಿಯಲು ಹೋಗಿದ್ದ ವೇಳೆ ತಲೆಗೆ ತಿವಿದ ಕಾರಣ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಘಟನೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.