Tag: followers

  • ಲಂಡನ್‍ನಲ್ಲಿ ನಟ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ – ಅಭಿಮಾನಿಗಳಿಂದ ಹೋಮ, ಹವನ

    ಲಂಡನ್‍ನಲ್ಲಿ ನಟ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ – ಅಭಿಮಾನಿಗಳಿಂದ ಹೋಮ, ಹವನ

    ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರಿಗೆ ಇಂದು ಲಂಡನ್‍ನಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಲಿ ಎಂದು ಅಭಿಮಾನಿಗಳು ಹೋಮ, ಹವನ ಮಾಡಿಸುತ್ತಿದ್ದಾರೆ.

    ಇಂದು ಲಂಡನ್‍ನಲ್ಲಿ ಶಿವರಾಜ್ ಕುಮಾರ್ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ `ಶಿವರಾಜ್ ಕುಮಾರ್ ಸೇನಾ ಸಮಿತಿ’ ಶಸ್ತ್ರಚಿಕಿತ್ಸೆ ಯಶಸ್ವಿ ಆಗಲಿ ಎಂದು ಗವಿಪುರಂ ಶಿವನ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ ಮಾಡಿಸುತ್ತಿದೆ.

    ಈ ಹಿಂದೆ ಶಿವರಾಜ್‍ಕುಮಾರ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಈ ಬಾರಿ ಹುಟ್ಟುಹಬ್ಬಕ್ಕೆ ನಾನು ಇರುವುದಿಲ್ಲ. ಹುಟ್ಟುಹಬ್ಬ ಮಾಡುತ್ತಿಲ್ಲ ಎಂದು ಅಲ್ಲ. ಆ ದಿನ ನನ್ನ ಶಸ್ತ್ರಚಿಕಿತ್ಸೆ ಇದೆ. ನನಗೆ ಭುಜದ ನೋವು ಆಗಾಗ ಕಾಣಿಸುತ್ತಿದೆ. ಹಾಗಾಗಿ ನಾನು ಶಸ್ತ್ರಚಿಕಿತ್ಸೆಗೆ ಹೋಗಬೇಕಾಗುತ್ತದೆ. ಹುಟ್ಟುಹಬ್ಬದ ನಂತರ ಹೋಗೋಣ ಎಂದುಕೊಂಡೆ. ಆದರೆ ನನಗೆ ಬೇರೆ ದಿನ ಅಪಾಯಿಂಟ್‍ಮೆಂಟ್ ಸಿಗಲಿಲ್ಲ. ಇದನ್ನು ಮಿಸ್ ಮಾಡಿದ್ರೆ ಆಗಸ್ಟ್ ವರೆಗೂ ಕಾಯಬೇಕು. ಹಾಗಾಗಿ ನಾನು ಲಂಡನ್‍ಗೆ ಹೋಗಲೇಬೇಕು ಎಂದಿದ್ದರು.

    ಬಳಿಕ ಮಾತನಾಡಿ, ಅಗಸ್ಟ್ ವರೆಗೂ ಕಾಯಬೇಕೆಂದರೆ ನೋವು ಜಾಸ್ತಿ ಆಗುತ್ತದೆ. ಆಗ ನನ್ನ ಸಮಸ್ಯೆ ಜಾಸ್ತಿ ಆಗುತ್ತದೆ. ನನಗೆ ಭುಜದ ನೋವಿದೆ. ಶಾರೂಕ್ ಖಾನ್ ಹಾಗೂ ಎಸ್. ಎಂ ಕೃಷ್ಣ ಅವರಿಗೆ ಚಿಕಿತ್ಸೆ ನೀಡಿದ್ದ ವೈದ್ಯರೇ ನನಗೆ ಚಿಕಿತ್ಸೆ ನೀಡುತ್ತಾರೆ ಎಂದು ಹೇಳಿದ್ದರು.

  • ತುಂಬು ಗರ್ಭಿಣಿ ಸಮೀರಾರಿಂದ ಅಂಡರ್‌ವಾಟರ್ ಫೋಟೋಶೂಟ್

    ತುಂಬು ಗರ್ಭಿಣಿ ಸಮೀರಾರಿಂದ ಅಂಡರ್‌ವಾಟರ್ ಫೋಟೋಶೂಟ್

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.

    ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ ವೃತ್ತಿಯಲ್ಲಿ ಮಾಡಿಸಿದ ರೋಮಾಂಚಕ ಫೋಟೋಶೂಟ್‍ಗಳಲ್ಲಿ ಇದು ಒಂದಾಗಿದೆ. ನಾನು ಕೆಲವೇ ಸಮಯದಲ್ಲಿ ಈ ಫೋಟೋಶೂಟ್ ಮಾಡಿಸಿದ್ದೇನೆ. ಇದು ಒಳ್ಳೆಯ ಅನುಭವ” ಎಂದು ಹೇಳಿದ್ದಾರೆ.

    ಸಮೀರಾ ಫೋಟೋ ನೋಡಿ ಕೆಲವರು, ನೀವು ಈ ಫೋಟೋದಲ್ಲಿ ಸೂಪರ್ ಕೂಲ್ ಆಗಿ ಕಾಣಿಸುತ್ತಿದ್ದೀರಾ ಎಂದು ನಿಮಗೆ ಅನಿಸಿರಬಹುದು. ಆದರೆ ಪ್ರೆಗ್ನೆನ್ಸಿ ಸಮಯದಲ್ಲಿ ಈ ರೀತಿ ಫೋಟೋಶೂಟ್ ಮಾಡಿಸುವ ಅವಶ್ಯಕತೆ ಆದರೂ ಏನಿತ್ತು. ದಯವಿಟ್ಟು ಹುಷಾರಾಗಿರಿ. ಮಕ್ಕಳು ದೇವರು ಕೊಟ್ಟ ಉಡುಗೊರೆ ಎಂದು ಕಾಮೆಂಟ್ ಮಾಡಿದ್ದಾರೆ.

    ಮತ್ತೆ ಕೆಲವು ಅಭಿಮಾನಿಗಳು, ಗರ್ಭಿಣಿಯಾಗಿರುವ ಸಮಯದಲ್ಲಿ ಈ ರೀತಿ ಫೋಟೋಶೂಟ್ ಮಾಡಿಸುವುದು ಸರಿಯಲ್ಲ ಎಂದು ಕಾಮೆಂಟ್ ಮಾಡಿದ್ದರೆ, ಮತ್ತೆ ಕೆಲವರು ನಿಮಗೆ ತಲೆ ಕೆಟ್ಟಿದ್ದೀಯಾ ಎಂದು ಕಮೆಂಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

     

    View this post on Instagram

     

    I wanted to celebrate the beauty of the the bump in my 9 th month . At a time when we feel the most vulnerable, tired , scared, excited and at our biggest and most beautiful!???? I look forward to sharing it with you guys and I know the positivity will resonate because we all are at different phases of our lives with unique sizes and we need to love and accept ourselves at every level #imperfectlyperfect . @luminousdeep you have been outstanding and you are super talented ! Thnk you ❤️???? #bts ???? @thelensofsk @jwmarriottjuhu . . #positivebodyimage #socialforgood #loveyourself #nofilter #nophotoshop #natural #water #keepingitreal #acceptance #body #woman #underwater #picoftheday #underwaterphotography #maternityshoot #pool #maternityphotography #bump #bumpstyle #pregnantbump #positivevibes #pregnancy #pregnant #pregnancyphotography #preggo #bikini

    A post shared by Sameera Reddy (@reddysameera) on

    ಸಮೀರಾ ಅವರ ಈ ಫೋಟೋಗಳಿಗೆ ಯಾವುದೇ ಫಿಲ್ಟರ್ ಅಥವಾ ಫೋಟೋಶಾಪ್ ಮಾಡಲಿಲ್ಲ. ಈ ಫೋಟೋಗಳು ಸುಂದರವಾಗಿ ಬಂದಿದ್ದು, ಇದರಿಂದ ಸಮೀರಾ ಖುಷಿಯಾಗಿದ್ದಾರೆ. ಆದರೆ ಅವರ ಅಭಿಮಾನಿಗಳು ಈ ಫೋಟೋ ನೋಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಮೀರಾ ರೆಡ್ಡಿ 2014ರಲ್ಲಿ ಉದ್ಯಮಿ ಅಕ್ಷಯ್ ವಾರ್ದೆ ಅವರನ್ನು ಮದುವೆಯಾಗಿದ್ದರು. ಸಮೀರಾ ರೆಡ್ಡಿಗೆ ಈಗಾಗಲೇ ಒಂದು ಗಂಡು ಮಗು ಇದ್ದು, ಈಗ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಮೀರಾ ರೆಡ್ಡಿ ಬಹುಭಾಷಾ ನಟಿಯಾಗಿದ್ದು, ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಅವರ ಜೊತೆ ನಟಿಸಿದ್ದಾರೆ. ಅಲ್ಲದೇ ಕನ್ನಡದಲ್ಲೂ ಕಿಚ್ಚ ಸುದೀಪ್ ಅವರ ಜೊತೆ `ವರದನಾಯಕ’ ಚಿತ್ರದಲ್ಲಿ ನಟಿಸಿದ್ದಾರೆ. ಸಮೀರಾ 2014ರಲ್ಲಿ ಮದುವೆ ಆದ ಬಳಿಕ ಚಿತ್ರರಂಗದಿಂದ ದೂರ ಇದ್ದಾರೆ.

  • ವಿಡಿಯೋ ಮೂಲಕ ಅಭಿಮಾನಿಗಳಿಗೆ ಸಲ್ಮಾನ್ ಸಂದೇಶ – ಫ್ಯಾನ್ಸ್ ಫುಲ್ ಫಿದಾ

    ವಿಡಿಯೋ ಮೂಲಕ ಅಭಿಮಾನಿಗಳಿಗೆ ಸಲ್ಮಾನ್ ಸಂದೇಶ – ಫ್ಯಾನ್ಸ್ ಫುಲ್ ಫಿದಾ

    ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಕೋತಿಗೆ ನೀರು ಕುಡಿಸುತ್ತಿರುವ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಸಲ್ಮಾನ್ ಖಾನ್ ನಡೆಗೆ ಫುಲ್ ಫಿದಾ ಆಗಿದ್ದಾರೆ.

    ಸಲ್ಮಾನ್ ಖಾನ್ ಕೋತಿಯೊಂದಕ್ಕೆ ನೀರು ಕುಡಿಸುತ್ತಿರುವ ವಿಡಿಯೋವೊಂದನ್ನು ಹಾಕಿ ಅದಕ್ಕೆ, “ನಮ್ಮ ಭಜರಂಗಿ ಭಾಯ್‍ಜಾನ್ ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯಲ್ಲ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಮೂಲಕ ಸಲ್ಮಾನ್ ಖಾನ್ ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯಬಾರದು ಎಂದು ಜನರಿಗೆ ಸಂದೇಶ ನೀಡಿದ್ದಾರೆ.

    ಈ ವಿಡಿಯೋ ನೋಡಿದ ಅಭಿಮಾನಿಗಳು ಸಲ್ಮಾನ್ ಖಾನ್ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಲ್ಮಾನ್ ಖಾನ್ ಅವರ ಈ ಪೋಸ್ಟ್ ಗೆ 39 ಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಅಲ್ಲದೆ ಅಭಿಮಾನಿಗಳು ಕಮೆಂಟ್ಸ್ ಗಳ ಮಹಾಪೂರವೇ ಹರಿಸಿದ್ದಾರೆ.

    ಈ ವಿಡಿಯೋ ನೋಡಿ ಕೆಲವರು, “ಸಲ್ಮಾನ್ ನೀವು ತುಂಬಾನೇ ಒಳ್ಳೆಯವರು” ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು “ಇದು ತುಂಬಾ ಕ್ಯೂಟ್ ಆಗಿದೆ” ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು “ಒಂದೇ ಹೃದಯಾನಾ ಎಷ್ಟು ಬಾರಿ ಗೆಲ್ಲುತ್ತೀರಾ” ಎಂದು ಕಮೆಂಟ್ ಮಾಡಿದ್ದಾರೆ.

    ಸಲ್ಮಾನ್ ಖಾನ್ ನಟನೆಯ ‘ಭಾರತ್’ ಸಿನಿಮಾ ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಬಾಕ್ಸ್ ಆಫೀಸ್‍ನಲ್ಲಿ ಸಾಕಷ್ಟು ಸದ್ದು ಮಾಡಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್‍ಗೆ ನಾಯಕಿಯಾಗಿ ಕತ್ರಿನಾ ಕೈಫ್ ನಟಿಸಿದ್ದಾರೆ. ಕತ್ರಿನಾ ಕೈಫ್ ಅಲ್ಲದೆ ದಿಶಾ ಪಟಾನಿ, ಜಾಕಿ ಶ್ರಾಫ್, ತಬು ಮುಖ್ಯಭೂಮಿಕೆಯಲ್ಲಿ ಅಭಿನಯಸಿದ್ದಾರೆ.

     

    View this post on Instagram

     

    Hamara bajrangi bhaijaan plastic ki bottle se paani nahi peeta . .

    A post shared by Salman Khan (@beingsalmankhan) on

  • ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ: ದರ್ಶನ್ ಮನವಿ

    ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ: ದರ್ಶನ್ ಮನವಿ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ‘ಮುನಿರತ್ನ ಕುರುಕ್ಷೇತ್ರ’ ಚಿತ್ರ ಆಗಸ್ಟ್ 9 ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಸಂಬಂಧಿಸಿದಂತೆ ದರ್ಶನ್ ಟ್ವೀಟ್ ಮಾಡಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

    ದರ್ಶನ್ ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಎನ್ನುವುದು ಬಹುತಾರಾಗಣದ ಚಿತ್ರ. ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೋಗಳನ್ನು ಪಾಸ್‍ಗಳ ಮೇಲೆ ಪ್ರಿಂಟ್ ಮಾಡಿಲ್ಲ. ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ. ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲಾಗಿದೆ. ಆರಾಮಾಗಿ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಳ್ಳಿ” ಎಂದು ಟ್ವೀಟ್ ಮಾಡಿದ್ದಾರೆ.

    ಕುರುಕ್ಷೇತ್ರ ಚಿತ್ರದಲ್ಲಿ ರೆಬಲ್ ಸ್ಟಾರ್ ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್, ಅರ್ಜುನ್ ಸರ್ಜಾ, ಡೈಲಾಗ್ ಕಿಂಗ್ ಸಾಯಿಕುಮಾರ್, ಶಶಿಕುಮಾರ್, ಆರ್ಮುಗಂ ಖ್ಯಾತಿಯ ರವಿಶಂಕರ್, ಶ್ರೀನಿವಾಸ ಮೂರ್ತಿ ಹಾಗೂ ಪ್ರಣಯ ರಾಜ ಶ್ರೀನಾಥ್ ಅಭಿನಯಿಸಿದ್ದಾರೆ. ಭಾರತಿ ವಿಷ್ಣುವರ್ಧನ್, ಹರಿಪ್ರಿಯಾ, ಮೇಘನಾ ರಾಜ್, ಪವಿತ್ರಾ ಲೋಕೇಶ್ ಕುರುಕ್ಷೇತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರತಂಡ ಈ ಸಿನಿಮಾದ ಟೀಸರ್ ರಿಲೀಸ್ ಮಾಡಿದೆ.

    ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿಬಂದಿದೆ.

    https://www.youtube.com/watch?v=EqmBzjcBu6s

  • ದುಷ್ಕರ್ಮಿಯಿಂದ ಗುಂಡೇಟು ತಿಂದು ಸ್ಥಳದಲ್ಲೇ ಬಿದ್ದ ಸನ್ನಿ ಲಿಯೋನ್

    ದುಷ್ಕರ್ಮಿಯಿಂದ ಗುಂಡೇಟು ತಿಂದು ಸ್ಥಳದಲ್ಲೇ ಬಿದ್ದ ಸನ್ನಿ ಲಿಯೋನ್

    ಮುಂಬೈ: ಬಾಲಿವುಡ್ ಮಾದಕ ಬೆಡಗಿ ಸನ್ನಿ ಲಿಯೋನ್ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನೋಡಿ ಅಭಿಮಾನಿಗಳು ಮೊದಲು ಗಾಬರಿಗೊಂಡರು ನಂತರ ನಕ್ಕು ಸುಮ್ಮನಾಗಿದ್ದಾರೆ.

    ವಿಡಿಯೋದಲ್ಲಿ ಸನ್ನಿ ಲಿಯೋನ್ ರಾತ್ರಿ ವೇಳೆ ಶೂಟಿಂಗ್ ಮಾಡುತ್ತಿರುತ್ತಾರೆ. ಈ ವೇಳೆ ದುಷ್ಕರ್ಮಿಯೊಬ್ಬ ಸನ್ನಿ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡು ಬಿದ್ದ ಕಾರಣ ಸನ್ನಿ ಸ್ಥಳದಲ್ಲಿಯೇ ಬೀಳುತ್ತಾರೆ. ವಿಡಿಯೋ ಮುಗಿಯುವವರೆಗೂ ಅವರು ಎದ್ದೇಳಲಿಲ್ಲ.

    ಈ ವಿಡಿಯೋ ಪೋಸ್ಟ್ ಮಾಡಿದ ನಂತರ ಸನ್ನಿ ಲಿಯೋನ್ ಮತ್ತೊಂದು ವಿಡಿಯೋವನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಮೊದಲನೇ ವಿಡಿಯೋದ ಭಾಗವಾಗಿದ್ದು, ಇದರಲ್ಲಿ ಸನ್ನಿ ಲಿಯೋನ್ ನಗುತ್ತಾ ಪ್ರಾಂಕ್ ಮಾಡಿದ್ದೇನೆ ಎಂದು ಹೇಳಿದ್ದಾರೆ.

    ಸನ್ನಿ ಲಿಯೋನ್ ತಮ್ಮ ಮೊದಲನೇ ವಿಡಿಯೋದಲ್ಲಿ ಗ್ರಾಫಿಕ್ ವಾರ್ನಿಂಗ್ ಪಾರ್ಟ್-1: ಸನ್ನಿ ಲಿಯೋನ್ ಅವರ ಪರವಾಗಿ ನಾವು ಈ ವಿಡಿಯೋ ಪೋಸ್ಟ್ ಮಾಡಬೇಕಿತ್ತು. ಕಳೆದ ರಾತ್ರಿ ಸಿನಿಮಾ ಸೆಟ್‍ನಲ್ಲಿ ಏನಾಗಿತ್ತು ಎಂಬುದು ಜಗತ್ತಿಗೆ ಗೊತ್ತಾಗಬೇಕಿತ್ತು ಎಂದು ಕ್ಯಾಪ್ಷನ್ ಕೊಟ್ಟಿದ್ದರು.

    ಮತ್ತೊಂದು ವಿಡಿಯೋದಲ್ಲಿ ಗ್ರಾಫಿಕ್ ವಾರ್ನಿಂಗ್ ಪಾರ್ಟ್ -2: ಸದ್ಯ ಆಕೆ ಕ್ಷೇಮವಾಗಿದ್ದಾಳೆ ಎಂದು ಬರೆದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು. ಸನ್ನಿ ಲಿಯೋನ್ ಅವರು ಪೋಸ್ಟ್ ಮಾಡಿದ ಮೊದಲನೇ ವಿಡಿಯೋ ನೋಡಿ ಅಭಿಮಾನಿಗಳು ಗಾಬರಿಗೊಂಡರು, ಬಳಿಕ ಎರಡನೇ ಭಾಗದ ವಿಡಿಯೋ ನೋಡಿ ಜನರು ನಕ್ಕು ಸುಮ್ಮನಾಗಿದ್ದಾರೆ.

  • ಜುಲೈ 12ರಂದು ಹುಟ್ಟುಹಬ್ಬ ಆಚರಿಸ್ತಿಲ್ಲ ಶಿವಣ್ಣ

    ಜುಲೈ 12ರಂದು ಹುಟ್ಟುಹಬ್ಬ ಆಚರಿಸ್ತಿಲ್ಲ ಶಿವಣ್ಣ

    ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಈ ವರ್ಷ ಅಂದರೆ ಜುಲೈ 12ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಿವರಾಜ್‍ಕುಮಾರ್ ಅವರು, ಹುಟ್ಟುಹಬ್ಬ ಮಾಡುತ್ತಿಲ್ಲ ಎಂದು ಅಲ್ಲ. ಆ ದಿನ ನನ್ನ ಶಸ್ತ್ರಚಿಕಿತ್ಸೆ ಇದೆ. ನನಗೆ ಭುಜದ ನೋವು ಆಗಾಗ ಕಾಣಿಸುತ್ತಿದೆ. ಹಾಗಾಗಿ ನಾನು ಶಸ್ತ್ರಚಿಕಿತ್ಸೆಗೆ ಹೋಗಬೇಕಾಗುತ್ತೆ. ಹುಟ್ಟುಹಬ್ಬ ನಂತರ ಹೋಗೋಣ ಎಂದುಕೊಂಡೆ. ಆದರೆ ನನಗೆ ಬೇರೆ ದಿನ ಅಪಾಯಿಂಟ್‍ಮೆಂಟ್ ಸಿಗಲಿಲ್ಲ. ಇದನ್ನು ಮಿಸ್ ಮಾಡಿದ್ರೆ ಅಗಸ್ಟ್ ವರೆಗೂ ಕಾಯಬೇಕು. ಹಾಗಾಗಿ ನಾನು ಲಂಡನ್‍ಗೆ ಹೋಗಲೇಬೇಕು ಎಂದರು.

    ಅಗಸ್ಟ್ ವರೆಗೂ ಕಾಯಬೇಕೆಂದರೆ ನೋವು ಜಾಸ್ತಿ ಆಗುತ್ತೆ. ಆಗ ನನ್ನ ಸಮಸ್ಯೆ ಜಾಸ್ತಿ ಆಗುತ್ತದೆ. ಅಭಿಮಾನಿಗಳಿಗೆ ಈ ಬಗ್ಗೆ ಗೊತ್ತು. ಅವರು ಕೂಡ ಆರೋಗ್ಯ ಮುಖ್ಯ ಹೋಗಿ ಬನ್ನಿ ಎಂದು ಹೇಳಿದ್ದಾರೆ. ನಾನು ಕೂಡ ನನ್ನ ಹುಟ್ಟುಹಬ್ಬವನ್ನು ಮಿಸ್ ಮಾಡಿಕೊಳ್ಳುತ್ತೇನೆ. ಏಕೆಂದರೆ ಅವರು ನನ್ನ ಹುಟ್ಟುಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸುತ್ತಾರೋ, ನನಗೂ ಹಾಗೇ ಅವರ ಹುಟ್ಟುಹಬ್ಬ ಆಚರಿಸುವುದು ಸಂಭ್ರಮನೇ. ಅವರು ಮಿಸ್ ಮಾಡಿಕೊಂಡರೆ ನಾನು ಡಬಲ್ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

    ನನ್ನ ಹುಟ್ಟುಹಬ್ಬಕ್ಕೆ ಸ್ವಲ್ಪ ರೇಗಾಟ, ಪ್ರೀತಿ, ಊಟ ಇರುತ್ತೆ. ಎಲ್ಲರೂ ಹಾಗೂ ಚಿತ್ರರಂಗದ ಸದಸ್ಯರು ಬಂದು ಶುಭಾಶಯ ತಿಳಿಸುತ್ತಾರೆ. ನಾನು ಇಲ್ಲಿ ಇಲ್ಲ ಎಂದರು ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಿಸುತ್ತಾರೆ. ಹಾಗಾಗಿ ನಾನು ಲಂಡನ್‍ನಿಂದ ಹಿಂತಿರುಗಿ ಬಂದ ನಂತರ ಒಂದು ಗೆಟ್- ಟು-ಗೆದರ್ ಮಾಡುತ್ತೇನೆ ಎಂದು ನಟ ಶಿವರಾಜ್‍ಕುಮಾರ್ ತಿಳಿಸಿದರು.

    ನನಗೆ ಭುಜದ ನೋವಿದೆ. ನನಗೆ ಚಿಕಿತ್ಸೆ ನೀಡಿದ್ದ ವೈದ್ಯರೇ ಶಾರೂಕ್ ಖಾನ್ ಹಾಗೂ ಎಸ್. ಎಂ ಕೃಷ್ಣ ಅವರಿಗೂ ಚಿಕಿತ್ಸೆ ನೀಡುತ್ತಿದ್ದಾರೆ. ಸರ್ಜರಿ ಮಾಡಿದ ಬಳಿಕ ನಾಲ್ಕು ತಿಂಗಳು ಆ್ಯಕ್ಷನ್ ಸೀನ್ ಮಾಡಬಾರದು. ನಾಲ್ಕು ತಿಂಗಳ ಮೇಲೆಯೇ ಆ್ಯಕ್ಷನ್ ಸೀನ್ ಮಾಡಲಿದ್ದೇನೆ. ಚಿಕ್ಕ ಪುಟ್ಟ ಆ್ಯಕ್ಷನ್ ಸೀನ್ ಮಾಡಬಹುದು. ಬಳಿಕ ‘ಭಜರಂಗಿ- 2’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಸೀನ್ ಇದೆ. ಆ ಚಿತ್ರೀಕರಣದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಶಿವರಾಜ್‍ಕುಮಾರ್ ಹೇಳಿದರು.

  • ರಾಜ್ಯ ರಾಜಕಾರಣದಲ್ಲಿ ಮತ್ತೆ ಎಂಟ್ರಿಗೆ ಸಿದ್ಧರಾಗ್ತಿದ್ದಾರೆ ನಿಖಿಲ್

    ರಾಜ್ಯ ರಾಜಕಾರಣದಲ್ಲಿ ಮತ್ತೆ ಎಂಟ್ರಿಗೆ ಸಿದ್ಧರಾಗ್ತಿದ್ದಾರೆ ನಿಖಿಲ್

    ಬೆಂಗಳೂರು: ಲೋಕಸಭೆ ಆಯ್ತು, ಈಗ ವಿಧಾನಸಭೆ ಮೇಲೆ ನಿಖಿಲ್ ಕಣ್ಣು ಇಟ್ಟರಾ ಎಂಬ ಪ್ರಶ್ನೆಯೊಂದು ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಯಾಕಂದರೆ ನಿಖಿಲ್ ಅಭಿಮಾನಿಗಳು ವಿಧಾನಸಭಾ ಕ್ಷೇತ್ರ ಹುಡುಕುತ್ತಿದ್ದಾರೆ. ನಿಖಿಲ್ ಎಲ್ಲಿ ನಿಂತರೆ ಗೆಲ್ಲುತ್ತಾರೆ ಅನ್ನೋ ಸೋಶಿಯಲ್ ಮೀಡಿಯಾ ಸರ್ವೇ ಆರಂಭವಾಗಿದೆ.

    ಮಂಡ್ಯ, ರಾಮನಗರ, ಕೆ.ಆರ್.ಪೇಟೆ ಕ್ಷೇತ್ರಗಳೇ ಟಾರ್ಗೆಟ್ ಆಗಿದ್ದು, ಸರ್ವೇಯಲ್ಲಿ ಮೊದಲು ರಾಮನಗರ, ಎರಡನೇಯದ್ದು ಮಂಡ್ಯ, ಮೂರನೇಯದ್ದು ಕೆ.ಆರ್.ಪೇಟೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

    ಹಾಗಾದ್ರೆ ಮುಂದೆ ಯಾವ ಕ್ಷೇತ್ರದಲ್ಲಿ ನಿಖಿಲ್ ಭವಿಷ್ಯ ಕಂಡುಕೊಳ್ತಾರೆ, ಸೋತ ನೆಲ ಮಂಡ್ಯದಲ್ಲೇ ಇರ್ತಾರೋ ಅಥವಾ ತಾಯಿ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿರುವ ರಾಮನಗರಕ್ಕೆ ಜಂಪ್ ಆಗ್ತಾರೋ ಅನ್ನೋ ಚರ್ಚೆ ನಡೆಯುತ್ತಿದೆ.

    ಒಟ್ಟಿನಲ್ಲಿ ಲೋಕಸಭಾ ಚುನಾವಣೆ ಮುಗಿದು, ಫಲಿತಾಂಶ ಬಂದಿದ್ದರೂ ನಿಖಿಲ್ ಭವಿಷ್ಯದ ಬಗ್ಗೆ ಚರ್ಚೆ ಮಾತ್ರ ನಿಂತಿಲ್ಲ.

  • ಲಂಡನ್ ಬೀದಿಗಳಲ್ಲಿ ಅನುಷ್ಕಾ ಜೊತೆ ವಿರಾಟ್ ಸುತ್ತಾಟ

    ಲಂಡನ್ ಬೀದಿಗಳಲ್ಲಿ ಅನುಷ್ಕಾ ಜೊತೆ ವಿರಾಟ್ ಸುತ್ತಾಟ

    ಲಂಡನ್: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಲಂಡನ್‍ನ ಬೀದಿಯಲ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾ ಜೊತೆ ಸುತ್ತಾಡುತ್ತಿದ್ದಾರೆ. ಈ ಫೋಟೋವನ್ನು ಅವರ ಅಭಿಮಾನಿಗಳು ತಮ್ಮ ಫ್ಯಾನ್ ಪೇಜ್‍ನಲ್ಲಿ ಹಂಚಿಕೊಂಡಿದ್ದಾರೆ.

    ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಲಂಡನ್‍ನ ಬೀದಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅನುಷ್ಕಾ ಮೆರೂನ್ ಹಾಗೂ ಬಿಳಿ ಬಣ್ಣದ ಉಡುಪು ಧರಿಸಿದ್ದು, ವಿರಾಟ್ ಜ್ಯಾಕೇಟ್ ಧರಿಸಿದ್ದರು. ಈ ವೇಳೆ ಅನುಷ್ಕಾ ಹೊಸ ಹೈರ್ ಸ್ಟೈಲ್‍ನಲ್ಲಿ ಮಿಂಚಿದ್ದರು. ವಿರುಷ್ಕಾ ಅಭಿಮಾನಿಗಳು ಈ ಫೋಟೋ ಹಾಕಿ ಅದಕ್ಕೆ, ‘ಲಂಡನ್‍ನ ಓಲ್ಡ್ ಬಾಂಡ್ ಸ್ಟ್ರೀಟ್, ಅನುಷ್ಕಾ, ವಿರಾಟ್’ ಎಂದು ಬರೆದು ಪೋಸ್ಟ್ ಹಾಕಿದ್ದಾರೆ.

     

    View this post on Instagram

     

    @virat.kohli and @anushkasharma on the old bond street in London today ! ????❤️ I love Anushka’s new haircut ????

    A post shared by BleedKohlism2.0???? (@bleedingkohlism) on

    ಅನುಷ್ಕಾ ಶರ್ಮಾ ಕೊನೆಯದಾಗಿ ಬಾಲಿವುಡ್ ಬಾದ್‍ಶಾ ಶಾರೂಖ್ ಖಾನ್ ನಟಿಸಿದ `ಝೀರೋ’ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರದ ನಂತರ ಅವರು ಬೇರೆ ಯಾವ ಚಿತ್ರ ಕೂಡ ಒಪ್ಪಿಕೊಂಡಿಲ್ಲ. ಸದ್ಯ ಅನುಷ್ಕಾ ಡಿಜಿಟಲ್ ವೇದಿಕೆಯಲ್ಲಿ ಯಾವುದಾದರೂ ಶೋ ಮಾಡಬೇಕು ಎಂದುಕೊಂಡಿದ್ದಾರೆ.

    ಭಾರತ ತಂಡ ಭಾನುವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಡಕ್ವರ್ಥ್ ಲೂಯಿಸ್ ನಿಯಮದನ್ವಯ 89 ರನ್‍ಗಳ ಭರ್ಜರಿ ಗೆಲುವು ಸಾಧಿಸಿತು. ಇದುವರೆಗೂ ನಡೆದ 4 ಪಂದ್ಯದಲ್ಲಿ ಭಾರತ ಮೂರರಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಮಳೆಯಿಂದಾಗಿ ರದ್ದು ಆಗಿತ್ತು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಅಭಿಮಾನಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಡಿ-ಬಾಸ್

    ಅಭಿಮಾನಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಡಿ-ಬಾಸ್

    ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಅಭಿಮಾನಿಯೊಬ್ಬನಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾನವೀಯತೆ ಮೆರೆದಿದ್ದಾರೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಉರಮಾರಕಸಲಗೆರೆ ಗ್ರಾಮದ ಅಭಿಮಾನಿ ಕಿರಣ್‍ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಸುಮಲತಾ ನ್ಯಾಮಿನೇಷನ್ ರ‍್ಯಾಲಿಗೆ ಬಂದು ವಾಪಸ್ಸಾಗುವಾಗ ಗಂಭೀರ ಗಾಯಗೊಂಡಿದ್ದರು. ಬಡ ಕುಟುಂಬವಾದ ಕಿರಣ್‍ಗೆ ಚಿಕಿತ್ಸೆ ಪಡೆಯಲು ಹಣದ ಅವಶ್ಯಕತೆ ಇತ್ತು. ಇದನ್ನು ಮನಗಂಡ ನಟ ದರ್ಶನ್ ತಮ್ಮ ಆಪ್ತ ಇಂಡುವಾಳು ಸಚ್ಚಿದಾನಂದ ಅವರ ಮೂಲಕ ಒಂದು ಲಕ್ಷ ರೂ. ಹಣವನ್ನು ಕಿರಣ್ ಕುಟುಂಬಕ್ಕೆ ತಲುಪಿಸಿದ್ದಾರೆ. ದರ್ಶನ್ ಅವರ ಈ ಸಹಾಯ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

    ಈ ಬಗ್ಗೆ ಮಾತನಾಡಿದ ದರ್ಶನ್ ಆಪ್ತ ಸಚ್ಚಿದಾನಂದ ಅವರು, ಕಿರಣ್ ಸ್ಥಿತಿ ಬಹಳ ಚಿಂತಾಜನಕವಾಗಿದೆ. ಅವರು ಬಹಳ ಸಾಧಾರಣ ಕುಟುಂಬದವರಾಗಿದ್ದು ಅವರ ಅಣ್ಣ ಗ್ಯಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಈಗಾಗಲೇ ನಾಲ್ಕೈದು ಲಕ್ಷ ಖರ್ಚು ಮಾಡಿದ್ದಾರೆ. ಮುಂದೆ ಅವರ ಜೀವನಾಂಶದ ಬಗ್ಗೆ ಈ ಗ್ರಾಮದ ನಾಯಕರ ಜೊತೆ ಚರ್ಚೆ ಮಾಡಿದ್ದೇವೆ. ಮುಂದೆ ನಾವು ಕೂಡ ವೈಯಕ್ತಿಕವಾಗಿ ಸಹಾಯ ಮಾಡುವುದರ ಜೊತೆಗೆ ಅವರ ಜೀವನಕ್ಕೆ ಏನು ಬೇಕು ಎಂಬುದು ಮಾತನಾಡಿ ಕೆಲವು ದಾನಿಗಳನ್ನು ಸಂಪರ್ಕಿಸಿ ಮಾಡಿ ಕಿರಣ್‍ಗಾಗಿ ಹಣ ಸಂಗ್ರಹ ಮಾಡಬೇಕೆಂದುಕೊಂಡಿದ್ದೇವೆ ಎಂದರು.

    ಅಲ್ಲದೆ ದರ್ಶನ್ ಅಣ್ಣ 1 ಲಕ್ಷ ಹಣ ಕೊಟ್ಟಿದ್ದಕ್ಕೆ ಅವರಿಗೆ ಒಳ್ಳೆಯದಾಗಲಿ. ಇತರ ಬಹಳಷ್ಟು ಕಣ್ಣಿಗೆ ಕಾಣದಂತೆ ಅವರು ಕೆಲಸ ಮಾಡುತ್ತಿದ್ದಾರೆ. ದರ್ಶನ್ ಅವರು ಬಡವರ ಪಾಲಿಗೆ ನಂದಾದೀಪ ಆಗಲಿ ಎಂದು ದೇವರಿಗೆ ಕೇಳಿಕೊಳ್ಳುತ್ತೇನೆ. ಅಭಿಮಾನಿ ಕಿರಣ್‍ಗೂ ದೇವರಿಗೆ ಕೇಳಿಕೊಳ್ಳುತ್ತೇನೆ. ಕಿರಣ್ ಜೊತೆ ನಾವು ಇರುತ್ತೇವೆ, ಮುಂದೆಯೂ ಇರುತ್ತೇವೆ ಎಂದು ಅವರ ಕುಟುಂಬಕ್ಕೆ ಹೇಳಿದ್ದೇನೆ ಎಂದು ಸಚ್ಚಿದಾನಂದ ಅವರು ತಿಳಿಸಿದ್ದಾರೆ.

  • ದಾವಣಗೆರೆಯ ಚಿತ್ರಮಂದಿರದಲ್ಲಿ ಡಿ-ಬಾಸ್ ಅಭಿಮಾನಿಗಳಿಂದ ಸಂಭ್ರಮಾಚರಣೆ

    ದಾವಣಗೆರೆಯ ಚಿತ್ರಮಂದಿರದಲ್ಲಿ ಡಿ-ಬಾಸ್ ಅಭಿಮಾನಿಗಳಿಂದ ಸಂಭ್ರಮಾಚರಣೆ

    ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ‘ಯಜಮಾನ’ ಚಿತ್ರ 100 ದಿನಗಳ ಪೂರೈಸಿದ್ದು, ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ.

    ಜಿಲ್ಲಾ ದರ್ಶನ್ ಅಭಿಮಾನಿ ಸಂಘ ಈ ಆಚರಣೆ ಮಾಡಿ ಡಿ-ಬಾಸ್ ಗೆ ಜೈಕಾರ ಹಾಕಿದರು. ದರ್ಶನ್ ಅಭಿನಯದ ಯಜಮಾನ ಚಿತ್ರ ರಾಜ್ಯದಲ್ಲಿ ಯಶಸ್ವಿ ಪ್ರದರ್ಶನವಾಗಿದ್ದು, ಹತ್ತಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನೂರು ದಿನ ಪೂರೈಸಿದೆ. ಕನ್ನಡ ಚಿತ್ರ ನೂರು ದಿನ ಪೂರೈಸುವುದೇ ಕಷ್ಟವಾಗಿದ್ದು, ಅಂತಹದರಲ್ಲಿ ಯಜಮಾನ 100 ದಿನ ಪೂರೈಸಿದೆ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದರು.

    ಯಜಮಾನ ಚಿತ್ರ ಮಾರ್ಚ್ 1ರಂದು ವಿಶ್ವಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರ ಬಿಡುಗಡೆಯಾಗುವಾಗ ದರ್ಶನ್ ಅವರ 80 ಅಡಿ ಎತ್ತರದ ಕಟೌಟ್‍ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದರು. ಕಟೌಟ್ ಜೊತೆಗೆ ಮೊದಲ ಬಾರಿಗೆ ದರ್ಶನ್ ಪುತ್ರ ವಿನೀಶ್‍ನ 30 ಅಡಿ ಕಟೌಟನ್ನು ಕೂಡ ಹಾಕಲಾಗಿತ್ತು. ದರ್ಶನ್ ಅವರ ಯಜಮಾನ ಚಿತ್ರದಲ್ಲಿ ಅವರ ಮಗ ವಿನೀಶ್ ಅವರು ಒಂದು ವಿಶೇಷ ಹಾಡಿನಲ್ಲಿ ನಟಿಸಿದ್ದಾನೆ.

    ಈ ಚಿತ್ರದ ಟ್ರೈಲರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಅಲ್ಲದೇ ಯೂಟ್ಯೂಬ್ ಸಂಸ್ಥೆ ತನ್ನ ಟ್ವಿಟ್ಟರ್ ಖಾತೆಯಲ್ಲಿ, “ಈ ಅತಿಥಿ ಯಾವಾಗಲೂ ಗ್ರ್ಯಾಂಡ್ ಎಂಟ್ರಿ ಪಡೆಯುತ್ತಾರೆ. ಈ ಟ್ರೈಲರ್ ನೋಡಿದ್ದಾಗ ನಿಮಗೆ ಗೊತ್ತಾಗುತ್ತೆ” ಎಂದು ಚಿತ್ರದ ಫೋಟೋಗಳನ್ನು ಹಾಗೂ ಟ್ರೈಲರ್ ಲಿಂಕ್ ಹಾಕಿ ಟ್ವೀಟ್ ಮಾಡಿತ್ತು.

    ಯಜಮಾನ ಚಿತ್ರದಲ್ಲಿ ದರ್ಶನ್‍ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಮಿಂಚಿದ್ದರು. ಡೈನಾಮಿಕ್ ಸ್ಟಾರ್ ದೇವರಾಜ್, ರವಿಶಂಕರ್, ಡಾಲಿ ಧನಂಜಯ್, ದತ್ತಣ್ಣ, ಶಿವರಾಜ್. ಕೆ.ಆರ್ ಪೇಟೆ, ಸಾಧುಕೋಕಿಲ ಸೇರಿದಂತೆ ಅತಿ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿ ಇತ್ತು.

    ಈ ಚಿತ್ರವನ್ನು ಪೋನ್‍ಕುಮಾರ್ ಹಾಗೂ ವಿ. ಹರಿಕೃಷ್ಣ ಜಂಟಿಯಾಗಿ ನಿರ್ದೇಶಿಸಿದ್ದರು. ಸಂಗೀತ ನಿರ್ದೇಶಕರಾಗಿ ಬಜಾರ್ ನಲ್ಲಿ ಮಿನುಗುತ್ತಿರುವ ಹರಿಕೃಷ್ಣ, ಯಜಮಾನನಿಗಾಗಿ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿದ್ದರು. ಈ ಚಿತ್ರವನ್ನು ಶೈಲಜಾ ನಾಗ್ ಹಾಗೂ ಬಿ. ಸುರೇಶ್ ನಿರ್ಮಿಸಿದ್ದಾರೆ.