Tag: food poision

  • ಮಳವಳ್ಳಿ ವಸತಿ ಶಾಲೆಯ ದುರ್ಘಟನೆ – ಅಧಿಕಾರಿಗಳಿಂದ ಮಾಹಿತಿ ಪಡೆದ ಹೆಚ್‌ಡಿಕೆ; ಮೃತ ವಿದ್ಯಾರ್ಥಿಗೆ ಸಂತಾಪ

    ಮಳವಳ್ಳಿ ವಸತಿ ಶಾಲೆಯ ದುರ್ಘಟನೆ – ಅಧಿಕಾರಿಗಳಿಂದ ಮಾಹಿತಿ ಪಡೆದ ಹೆಚ್‌ಡಿಕೆ; ಮೃತ ವಿದ್ಯಾರ್ಥಿಗೆ ಸಂತಾಪ

    ಮಂಡ್ಯ/ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ (Malavalli) ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ (HD Kumaraswamy ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಜೊತೆ ವಿವಾಹ – ಮದುವೆಯಾದ 3 ದಿನಕ್ಕೆ ಹೃದಯಾಘಾತದಿಂದ ನವವಿವಾಹಿತ ಸಾವು

    ಅಲ್ಲದೇ ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸೂಚನೆ ನೀಡಿರುವ ಸಚಿವರು, ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ಸಂತಾಪ ಸೂಚಿಸಿದ್ದಾರೆ.

    ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಕಠಿಣ ನಿಗಾ ಇಡಬೇಕು ಎಂದು ತಹಶೀಲ್ದಾರ್ ಅವರಿಗೆ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ಖಾಸಗಿ ವಿದ್ಯಾಸಂಸ್ಥೆಯಲ್ಲಿ ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಬಲಿ – 29 ಮಕ್ಕಳು ಅಸ್ವಸ್ಥ

    ಘಟನೆ ಬಗ್ಗೆ ನನಗೆ ಮಾಹಿತಿ ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಈ ವಸತಿ ಶಾಲೆಯಲ್ಲಿ ಬಹುತೇಕ ಹೊರರಾಜ್ಯಗಳ ಮಕ್ಕಳೇ ಇದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಸೂಸೈಡ್ – ಪುತ್ರಿ ಸಾವಿನ ಬಳಿಕ ತಾಯಿ ನೇಣಿಗೆ ಶರಣು

  • ಖಾಸಗಿ ವಿದ್ಯಾಸಂಸ್ಥೆಯಲ್ಲಿ ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಬಲಿ – 29 ಮಕ್ಕಳು ಅಸ್ವಸ್ಥ

    ಖಾಸಗಿ ವಿದ್ಯಾಸಂಸ್ಥೆಯಲ್ಲಿ ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಬಲಿ – 29 ಮಕ್ಕಳು ಅಸ್ವಸ್ಥ

    – ಅರುಣಾಚಲ ಪ್ರದೇಶ ಮೂಲದ ಬಾಲಕ ಸಾವು

    ಮಂಡ್ಯ: ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯಲ್ಲಿ ನಡೆದಿದೆ.

    ಅರುಣಾಚಲ ಪ್ರದೇಶ (Arunachal Pradesh) ಮೂಲದ ಕೆರ್ಲಾಂಗ್ (13) ಮೃತ ವಿದ್ಯಾರ್ಥಿ. ಟಿ.ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದರು. ಉಳಿದ ಊಟವನ್ನ ತಂದು ಮಕ್ಕಳಿಗೆ ನೀಡಲಾಗಿತ್ತು. ಇದನ್ನೂ ಓದಿ: ದಾವಣಗೆರೆ| ಬ್ಯಾಂಕ್ ದರೋಡೆಗೆ ಬಂದಿದ್ದ ಯುಪಿ ಗ್ಯಾಂಗ್ ಮೇಲೆ ಪೊಲೀಸರಿಂದ ಫೈರಿಂಗ್ – ನಾಲ್ವರು ಅರೆಸ್ಟ್

    ಊಟ ಸೇವಿಸಿದ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಶನಿವಾರ ಏರುಪೇರಾಗಿತ್ತು. ಆದರೂ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸದೇ ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿತ್ತು. ಶನಿವಾರ ರಾತ್ರಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು (ಭಾನುವಾರ) ಬೆಳಗ್ಗೆ ಬಾಲಕ ಮೃತಪಟ್ಟಿದ್ದು, ಅಸ್ವಸ್ಥಗೊಂಡ ಮಕ್ಕಳನ್ನ ಆಡಳಿತ ಮಂಡಳಿ ಆಸ್ಪತ್ರೆಗೆ ದಾಖಲಿಸಿತ್ತು.

    ಅಸ್ವಸ್ಥ 27 ವಿದ್ಯಾರ್ಥಿಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು, ಐವರನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಅಭಿಮಾನಿಗಳೊಂದಿಗೆ ‘ಅಪ್ಪು’ ಸಿನಿಮಾ ವೀಕ್ಷಿಸಲಿದ್ದಾರೆ ರಮ್ಯಾ

    ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಓ ಮೋಹನ್ ಭೇಟಿ ನೀಡಿ, ಮಕ್ಕಳ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರ್ವಾಡಿಗಳು ಹೋಳಿ ಹಬ್ಬ ಪ್ರಯುಕ್ತ ಶುಕ್ರವಾರ ರಾತ್ರಿ ಊಟ ಮಾಡಿಸಿದ್ದರು. ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೂ ಅದೇ ಊಟ ವಿತರಿಸಲಾಗಿದೆ. ಶನಿವಾರ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಶುರುವಾಗಿದೆ. ವೈದ್ಯರು ಚಿಕಿತ್ಸೆ ನೀಡಿ ಬಂದಿದ್ದರು. ಚೆನ್ನಾಗಿ ಓಡಾಡಿಕೊಂಡಿದ್ದ ವಿದ್ಯಾರ್ಥಿಯೊಬ್ಬ ಸಡನ್ ಆಗಿ ಡೆತ್ ಆಗಿದ್ದಾನೆ. ಪೋಸ್ಟ್ ಮಾರ್ಟಮ್‌ನಲ್ಲಿ ಸಾವಿಗೆ ಕಾರಣ ನಿಖರವಾಗಿ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಬಸ್‌ ಉರುಳಿಸಿ 9 ಮಂದಿ ತೀರ್ಥಯಾತ್ರಿಗಳನ್ನು ಹತೈಗೈದ ಉಗ್ರ ಪಾಕ್‌ನಲ್ಲಿ ಮಟಾಷ್‌

    ಅಸ್ವಸ್ಥಗೊಂಡ ವಿದ್ಯಾರ್ಥಿಗಳಲ್ಲಿ 27 ಮಂದಿ ಹೊರರಾಜ್ಯದವರಾಗಿದ್ದಾರೆ. ಇಬ್ಬರು ಸ್ಥಳೀಯ ವಿದ್ಯಾರ್ಥಿಗಳಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಹಬ್ಬದ ಊಟ ಮಾಡಿಸಿ, ಸೇವಿಸಿದ್ದ ಮಾರ್ವಾಡಿಗಳಿಗೂ ವಾಂತಿ, ಭೇದಿ ಆಗಿದೆ. ಅವರು ಚಿಕಿತ್ಸೆ ಪಡೆದಿದ್ದಾರೆ. ಪ್ರಕರಣ ಸಂಬAಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಧ್ಯ ಅಮೆರಿಕದಲ್ಲಿ ಭೀಕರ ಚಂಡಮಾರುತಕ್ಕೆ 33 ಮಂದಿ ಬಲಿ

    ಅನುಮತಿ ಪಡೆಯದೇ ಆಕ್ರಮವಾಗಿ ವಿದ್ಯಾರ್ಥಿಗಳನ್ನ ವಿದ್ಯಾಸಂಸ್ಥೆಯು ಇಟ್ಟುಕೊಂಡಿದೆ ಎಂಬ ಆರೋಪವು ಕೇಳಿಬಂದಿದೆ. ಮೇಘಾಲಯ ರಾಜ್ಯದ ಬುಡಕಟ್ಟು ಮಕ್ಕಳನ್ನು ಇಟ್ಟುಕೊಳ್ಳಲು ಜಿಲ್ಲಾಡಳಿತದಿಂದ ಯಾವುದೇ ಅನುಮತಿ ಪಡೆದಿಲ್ಲ. ಆದರೂ ವಿದ್ಯಾರ್ಥಿಗಳ ಪೋಷಕರಿಂದ ಸಹಿ ಪಡೆದು ವಿದ್ಯಾರ್ಥಿಗಳನ್ನ ವಿದ್ಯಾಸಂಸ್ಥೆ ಇಟ್ಟುಕೊಂಡಿದೆ. ಈ ಬಗ್ಗೆ ಮಾಹಿತಿ ಇದ್ದರೂ ಕಣ್ಣುಮುಚ್ಚಿ ಕುಳಿತಿರುವ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆಡಳಿತ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಸಮಂತಾ ನಿರ್ಮಾಣದ ಚೊಚ್ಚಲ ಸಿನಿಮಾ ರಿಲೀಸ್‌ಗೆ ರೆಡಿ

    ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಮಾಂಸಾಹಾರ ಸೇವನೆ ಬಳಿಕ ಕುಟುಂಬದ ನಾಲ್ವರು ಸಾವು ಪ್ರಕರಣ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ

    ಮಾಂಸಾಹಾರ ಸೇವನೆ ಬಳಿಕ ಕುಟುಂಬದ ನಾಲ್ವರು ಸಾವು ಪ್ರಕರಣ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ

    ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಆಹಾರ ಸೇವನೆ (Food Poison) ಬಳಿಕ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣದಲ್ಲಿ ಸಾವಿನ ಸಂಖ್ಯೆ ಈಗ ಐದಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ:ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ – ಎಫ್‌ಎಸ್‌ಎಲ್ ವರದಿಯಲ್ಲಿ ಸ್ಫೋಟಕ ಸತ್ಯ

    ಕಳೆದ ಒಂದು ವಾರದಿಂದ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 23 ವರ್ಷದ ಮಲ್ಲಮ್ಮ (Mallamma) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಆಗಸ್ಟ್ 1ರಂದು ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ ಐದು ಜನರಲ್ಲಿ ಮೂವರು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದರು. 60 ವರ್ಷದ ಭೀಮಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಬಳಿಕ 57 ವರ್ಷದ ಈರಮ್ಮ, 21 ವರ್ಷದ ಮಲ್ಲೇಶ, 19 ವರ್ಷದ ಪಾರ್ವತಿ ಮನೆಯಲ್ಲಿ ಸೇವಿಸಿದ್ದ ಮಾಂಸಾಹಾರದಿಂದ ಅನಾರೋಗ್ಯ ಉಂಟಾಗಿ ಒಂದೇ ದಿನ ಸಾವನ್ನಪ್ಪಿದ್ದರು.

    ಮರಣೋತ್ತರ ಪರೀಕ್ಷಾ ವರದಿ ಮತ್ತು ಎಫ್‌ಎಸ್‌ಎಲ್ ವರದಿ ಬರುವುದು ಇನ್ನೂ ಬಾಕಿಯಿದೆ. ಒಂದೇ ಕುಟುಂಬದ ಎಲ್ಲಾ ಸದಸ್ಯರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆಹಾರದಲ್ಲಿ ಕೀಟನಾಶಕ ಬೆರೆತಿರುವ ಶಂಕೆಯಿದೆ. ಘಟನೆ ಹಿನ್ನೆಲೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ತನಿಖೆ ಮುಂದುವರೆದಿದೆ.

  • ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಮಂಗಳೂರು: ನರ್ಸಿಂಗ್‌ ಕಾಲೇಜಿನ (Nursing College) ಹಾಸ್ಟೆಲ್‌ನ 137ಕ್ಕೂ ಹೆಚ್ಚು ವಿದ್ಯಾರ್ಥಿಗಳು ಫುಡ್‌ ಪಾಯಿಸನ್‌ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

    ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ (City Hospital) ನರ್ಸಿಂಗ್ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ನಗರದ ಸಿಟಿ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆಎಂಸಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಮಗು ಅಪಹರಣಕ್ಕೆ ಮುಸುಕುದಾರಿಗಳು ಯತ್ನ

    ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್‌ ಆಯುಕ್ತ ಶಶಿಕುಮಾರ್‌ ಭೇಟಿ ನೀಡಿದ್ದಾರೆ.

    ಫುಡ್ ಪಾಯಿಸನ್ ಆದ ಕಾರಣ ಅವರನ್ನು ದಾಖಲು ಮಾಡಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಹಾಸ್ಟೆಲ್‌ಗೆ ಭೇಟಿ ನೀಡಿ ವಾರ್ಡನ್ ಜತೆ ಸಂವಾದ ನಡೆಸಿ ಎಲ್ಲವನ್ನೂ ತಿಳಿದುಕೊಳ್ಳುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್‌ ತಿಳಿಸಿದ್ದಾರೆ. ಇದನ್ನೂ ಓದಿ: ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ

    ಮಧ್ಯರಾತ್ರಿ 2 ಗಂಟೆಯಿಂದ ವಿದ್ಯಾರ್ಥಿಗಳು ಹೊಟ್ಟೆ ನೋವು, ಭೇದಿ, ವಾಂತಿಯಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಾವು ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತುಮಕೂರು ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್ ಪ್ರಕರಣ- ನಾಲ್ವರು ಆರೋಪಿಗಳಿಗೆ ಜಾಮೀನು

    ತುಮಕೂರು ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್ ಪ್ರಕರಣ- ನಾಲ್ವರು ಆರೋಪಿಗಳಿಗೆ ಜಾಮೀನು

    ತುಮಕೂರು: ವಿಷ ಆಹಾರ ಸೇವಿಸಿ ಮಕ್ಕಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಪೈಕಿ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

    ಪ್ರಕರಣದ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಅವರಲ್ಲಿ ನಾಲ್ವರು ಆರೋಪಿಗಳನ್ನು ಶುಕ್ರವಾರ ರಾತ್ರಿ ಚಿಕ್ಕನಾಯಕನಹಳ್ಳಿಯ ಒಂದನೇ ಜೆಎಂಎಪ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪೈಕಿ ಶಾಲಾ ಮಾಲಿಕ, ಮಾಜಿ ಶಾಸಕ ಕಿರಣ್ ಕುಮಾರ್ (01) ಮತ್ತು ಪತ್ನಿ ಕವಿತಾ ಕಿರಣ್ (02) ಇನ್ನೂ ನಾಪತ್ತೆಯಾಗಿದ್ದಾರೆ.

    ಉಳಿದಂತೆ ವಾರ್ಡ್‍ನ್ ಸುಹಾಸ್ (03), ಅಡುಗೆ ಸಹಾಯಕ ಜಗದೀಶ್(04), ಅಡುಗೆ ಭಟ್ಟ ಶಿವಣ್ಣ (05), ಅಡುಗೆ ಸಹಾಯಕಿ ರಂಗಲಕ್ಷ್ಮಿಮ್ಮ(06) ಇವರಿಗೆ ಜಾಮೀನು ಮುಂಜೂರಾಗಿದೆ. ಈ ನಡುವೆ ನಿನ್ನೆ ಜಿಲ್ಲಾಸ್ಪತ್ರೆಗೆ ಆಗಮಿಸಿದ್ದ ಕಿರಣ್ ಕುಮಾರ್ ಅವರನ್ನು ಪೊಲೀಸರೇ ರಕ್ಷಣೆ ನೀಡಿ ಬಚಾವ್ ಮಾಡಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಆಗಮಿಸಿದ್ದ ಸಚಿವ ಜಯಚಂದ್ರ ಕಣ್ಣೀರಿಟ್ಟು ಭಾವೋದ್ವೇಗಕ್ಕೊಳಗಾಗಿದ್ದರು. ಆಕಾಂಕ್ಷ್ ಮತ್ತು ಶ್ರೇಯಸ್ಸ ಜಯಚಂದ್ರ ಸಂಬಂಧಿಗಳು.

    ನಡೆದಿದ್ದೇನು?: ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ 15 ವರ್ಷದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಎಂಬ ಮೂವರು ಅಮಯಾಕ ಮಕ್ಕಳು ಸಾವನಪ್ಪಿದ್ದರು. ಈ ಶಾಲೆ ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದ ಅಂತಾ ತಿಳಿದುಬಂದಿತ್ತು. ಘಟನೆ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಇದರಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಕೋರ್ಟ್ ಇವರಿಗೆ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.