Tag: food poison

  • Chitradurga | ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥ

    Chitradurga | ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥ

    ಚಿತ್ರದುರ್ಗ: ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ (Food Poison) ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಸದುರ್ಗ (Hosadurga) ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸೋಮವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಹಳ್ಳಿ ಗ್ರಾಮದ ಪ್ರಭುಲಿಂಗಪ್ಪ ಪುತ್ರನ ವಿವಾಹ ಸಂಭ್ರಮದಲ್ಲಿ ಘಟನೆ ನಡೆದಿದೆ. ಗವಿರಂಗಾಪುರ ಬೆಟ್ಟದಲ್ಲಿ ಭಾನುವಾರ ಮದುವೆ ನಡೆದಿತ್ತು. ಸೋಮವಾರ ಬೆಳಗ್ಗೆಯಿಂದ ಮದುವೆ ಹಾಜರಾದವರಿಗೆ ರಾತ್ರಿಯಿಂದಲೇ ಹೊಟ್ಟೆನೋವು ಶುರುವಾಗಿದೆ. ಬೆಳಗ್ಗೆ ವಾಂತಿಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಪಾಕ್‌ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ವ್ಯವಹಾರವೇ ಸ್ಥಗಿತ

    ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳು ದಾಖಲಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಡ್‌ಗಳು ಭರ್ತಿ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿಕಿತ್ಸಾ ಶಿಬಿರ ಆಯೋಜನೆ ಮಾಡಲಾಗಿದೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸೈನಿಕರಿಗೆ ಮೋದಿ ಆತ್ಮಸ್ಥೈರ್ಯ, ಉಗ್ರರಿಗೆ ಇದು ಎಚ್ಚರಿಕೆ: ಬಿ.ವೈ ವಿಜಯೇಂದ್ರ

  • ಮಳವಳ್ಳಿ ಫುಡ್ ಪಾಯಿಸನ್ ಕೇಸ್ – ಆರು ಮಂದಿ ಮೇಲೆ ಎಫ್‌ಐಆರ್

    ಮಳವಳ್ಳಿ ಫುಡ್ ಪಾಯಿಸನ್ ಕೇಸ್ – ಆರು ಮಂದಿ ಮೇಲೆ ಎಫ್‌ಐಆರ್

    ಮಂಡ್ಯ: ಜಿಲ್ಲೆಯ ಮಳವಳ್ಳಿ (Malavalli) ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ (Food Poison) ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಳಿ ಹಬ್ಬದ ಆಯೋಜಕರು, ಆಹಾರ ತಯಾರಕರು ಹಾಗೂ ಶಾಲೆಯ ಮುಖ್ಯಸ್ಥರು ಸೇರಿದಂತೆ 6 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

    ಶುಕ್ರವಾರ ಮಳವಳ್ಳಿ ಪಟ್ಟಣ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದು, ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ವೆಜಿಟೇಬಲ್ ಪಲಾವ್ ಮಾಡಿಸಲಾಗಿತ್ತು. ಇನ್ನೂ ಕಾಗೇಪುರದ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಳಿಕೆ ವೆಜಿಟೇಬಲ್ ಪಲಾವ್‌ನ್ನು ನೀಡಲಾಗಿತ್ತು. ಇದನ್ನೂ ಓದಿ: ಕನ್ನಡ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ನೋಟಿಫಿಕೇಶನ್‌ನಲ್ಲಿ ಅಕ್ಷರದೋಷ ಸರಿಪಡಿಸ್ತೇವೆ ಎಂದ BMRCL

    ಈ ವೆಜಿಟೇಬಲ್ ಪಲಾವ್ ತಿಂದ 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಇನ್ನೂ ಹೋಳಿಯಲ್ಲಿ ಭಾಗಿಯಾದ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಇದನ್ನೂ ಓದಿ: ರಾಜ್ಯಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಈರಣ್ಣ ಕಡಾಡಿ

    ಈ ಪ್ರಕರಣ ಸಂಬಂಧ ಹೋಳಿ ಆಯೋಜಕ ಪುಷ್ಪೇಂದ್ರ, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪ ಸಿಬ್ಬಂದಿ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆ ಮುಖ್ಯಸ್ಥ ಲಂಕೇಶ್, ಕಾರ್ಯದರ್ಶಿ ಜಗದೀಶ್, ಕೆಲಸಗಾರ ಅಭಿಷೇಕ್ ಮೇಲೆ ಬಿಇಓ ಉಮಾ ನೀಡಿದ ಮೇರೆಗೆ ಎಫ್‌ಐಆರ್ ಹಾಕಲಾಗಿದೆ. ಇದನ್ನೂ ಓದಿ: ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

  • ಬೀದರ್‌ನಲ್ಲಿ ಚಿತ್ರಾನ್ನ ತಿಂದು ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ

    ಬೀದರ್‌ನಲ್ಲಿ ಚಿತ್ರಾನ್ನ ತಿಂದು ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ

    ಬೀದರ್: ಚಿತ್ರಾನ್ನ ತಿಂದು 50 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ವಸತಿ ಶಾಲೆಯಲ್ಲಿ ನಡೆದಿದೆ.ಇದನ್ನೂ ಓದಿ: ‘ನಾಯಿ ಇದೆ ಎಚ್ಚರಿಕೆ’ ಸಿನಿಮಾಗೆ ಡಾಕ್ಟರ್ ಲೀಲಾ ಮೋಹನ್ ಹೀರೋ

    ಪಟ್ಟಣದ ಬಸವ ತೀರ್ಥ ಗುರುಕುಲದ ವಸತಿ ಶಾಲೆಯ ಮಕ್ಕಳಿಗೆ ಬೆಳಿಗ್ಗೆ ತಿಂಡಿಗಾಗಿ ರಾತ್ರಿ ಉಳಿದ ಅನ್ನಕ್ಕೆ ಒಗ್ಗರಣೆ ಹಾಕಿ ನೀಡಲಾಗಿತ್ತು. ಈ ಅನ್ನ ತಿಂದ ಕೆಲವೇ ಹೊತ್ತಿನಲ್ಲಿ ವಾಂತಿ, ಭೇದಿ, ತಲೆ ಸುತ್ತಿನಿಂದ 50 ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥರಾದ ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಈ ಮಕ್ಕಳಿಗೆ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಸ್ವಸ್ಥರಾದ 50 ಮಕ್ಕಳು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಪ್ರಮುಖ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.ಇದನ್ನೂ ಓದಿ: ಕೊಡಗಿನಲ್ಲಿ ಹೆಚ್ಚಾದ ಕಾಡು ಪ್ರಾಣಿಗಳ ಹಾವಳಿ – ಜೀವ ಭಯದಲ್ಲಿ ದಿನ ಕಳೆಯುತ್ತಿರುವ ಜನ

  • Hyderabad | ಮೊಮೊಸ್ ತಿಂದು ಓರ್ವ ಮಹಿಳೆ ಸಾವು ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್

    Hyderabad | ಮೊಮೊಸ್ ತಿಂದು ಓರ್ವ ಮಹಿಳೆ ಸಾವು ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್

    ಹೈದರಾಬಾದ್: ಬೀದಿಬದಿಯ ಮೊಮೊಸ್ (Momos) ತಿಂದು ಓರ್ವ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್ (Food Poison) ಆಗಿರುವ ಘಟನೆ ಹೈದರಾಬಾದ್‌ನ (Hyderabad) ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು 33 ವರ್ಷದ ರೇಷ್ಮಾ ಬೇಗಂ ಎಂದು ಗುರುತಿಸಲಾಗಿದೆ. ಅವರ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 20 ಜನರು ಫುಡ್ ಪಾಯ್ಸನ್‌ನಿಂದ ಬಳಲುತ್ತಿದ್ದಾರೆ.ಇದನ್ನೂ ಓದಿ: ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ

    ಶುಕ್ರವಾರ ಖೈರತಾಬಾದ್‌ನ ಬೀದಿಬದಿ ವ್ಯಾಪಾರಿಯಿಂದ ಮೂವರು ಮೊಮೊಸ್ ತಿಂದಿದ್ದಾರೆ. ತಿಂದು ಮನೆಗೆ ಮರಳಿದ ಸ್ವಲ್ಪ ಸಮಯದ ಬಳಿಕ ಹೊಟ್ಟೆ ನೋವು, ವಾಂತಿಯಿಂದ ಬಳಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ ಅವರ ತಾಯಿ ಸಾವನ್ನಪ್ಪಿದ್ದು, ಪುತ್ರಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪ್ರಕರಣದ ಕುರಿತು ಬಂಜಾರ ಹಿಲ್ಸ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಮ್ ಬಾಬು ಮಾತನಾಡಿ, ಮಂಗಳವಾರ (ಅ.29) ವಿವಿಧ ಸ್ಥಳಗಳಲ್ಲಿ ಮಾರಾಟ ಮಾಡುವ ಒಬ್ಬ ಬೀದಿಬದಿ ವ್ಯಾಪಾರಿಯಿಂದ ಮೊಮೊಸ್ ತಿಂದಿದ್ದ 15 ರಿಂದ ದೂರು ಬಂದಿದ್ದು, ದೂರು ದಾಖಲಿಸಿಕೊಂಡು ಸದ್ಯ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    ತನಿಖೆಯ ವೇಳೆ ಯಾವುದೇ ಆಹಾರ ಸುರಕ್ಷತಾ ಪರವಾನಗಿ ಇಲ್ಲದೇ ಮಾರಾಟಗಾರ ವ್ಯಾಪಾರ ನಡೆಸುತ್ತಿದ್ದು, ಯಾವುದೇ ರೀತಿಯ ಸ್ವಚ್ಛತೆಯಿಲ್ಲದೇ ಆಹಾರ ತಯಾರಿಸುತ್ತಿರುವುದು ಪತ್ತೆಯಾಗಿದೆ. ಜೊತೆಗೆ ಮೊಮೊಸ್ ತಯಾರಿಸಲು ಬಳಸುವ ಹಿಟ್ಟನ್ನು ಯಾವುದೇ ಪ್ಯಾಕಿಂಗ್ ಇಲ್ಲದೆ ರೆಫ್ರಿಜರೇಟರ್‌ನಲ್ಲಿ ಇರಿಸಲಾಗಿತ್ತು, ಅದರಲ್ಲೂ ರೆಫ್ರಿಜರೇಟರ್ ಬಾಗಿಲು ಮುರಿದಿರುವುದು ಕೂಡ ಕಂಡುಬಂದಿದೆ. ಹೆಚ್ಚಿನ ತನಿಖೆಗಾಗಿ ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಈ ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಆಹಾರ ಸುರಕ್ಷತಾ ವಿಭಾಗ ಮತ್ತು ಪೊಲೀಸರು ಬೀದಿಬದಿ ವ್ಯಾಪಾರಿಯನ್ನು ಪತ್ತೆ ಹಚ್ಚಿದ್ದಾರೆ ಹಾಗೂ ಸ್ಟಾಲ್ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.ಇದನ್ನೂ ಓದಿ: Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?

  • ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

    ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

    ಬೆಂಗಳೂರು: ಹನುಮ ಜಯಂತಿ (Hanuma Jayanthi) ಹಿನ್ನೆಲೆ ದೇವಾಲಯಗಳಲ್ಲಿ (Temples) ಪ್ರಸಾದ (Prasadam) ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ (Hoskote) ನಗರದಲ್ಲಿ ನಡೆದಿದೆ.

    ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ ಅಂಗವಾಗಿ ಭಾನುವಾರ ಭಕ್ತರು ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿದ್ದರು. ಅಲ್ಲಿ ಪುಳಿಯೊಗರೆ, ಪಾಯಸ ಹಾಗೂ ಲಡ್ಡನ್ನು ಪ್ರಸಾದದ ರೂಪದಲ್ಲಿ ನೆರೆದಿದ್ದ ಭಕ್ತರು ಸೇವಿಸಿದ್ದಾರೆ. ಪ್ರಸಾದ ಸೇವನೆ ಬಳಿಕ ಭಕ್ತರಿಗೆ ವಾಂತಿ ಹಾಗೂ ಭೇದಿ ಪ್ರಾರಂಭವಾಗಿದ್ದು, ನೂರಾರು ಜನ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಭಕ್ತರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆ, ಕೋಲಾರ ಹಾಗೂ ಬೆಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದ 8 ಮಂದಿಯಲ್ಲಿ JN.1 ವೈರಸ್‌ ಪತ್ತೆ

    ಇನ್ನು ಈ ಪ್ರಕರಣದಲ್ಲಿ ಹೊಸಕೋಟೆ ನಗರದ ಕಾವೇರಿ ನಗರ ನಿವಾಸಿ ಸಿದ್ದಗಂಗಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇಂದು ಬೆಳಗ್ಗೆ ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದು, ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ 15ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗೆಳತಿ ಮೇಲೆ ಪ್ರೀತಿ; ಲಿಂಗ ಬದಲಿಸಿಕೊಂಡ್ರೂ ಮದುವೆಗೆ ಒಪ್ಪದ ಮಹಿಳಾ ಟೆಕ್ಕಿಯನ್ನ ಜೀವಂತ ಸುಟ್ಟು ಹತ್ಯೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆಯ ಖಾಸಗಿ ಆಸ್ಪತ್ರೆಗಳಲ್ಲಿ ಮೂರು ಠಾಣಾ ವ್ಯಾಪ್ತಿಯ ಜನರು ದಾಖಲಾಗಿದ್ದಾರೆ. ಅವಲಹಳ್ಳಿ, ನಂದಗುಡಿ ಹಾಗೂ ಹೊಸಕೋಟೆ ಠಾಣಾ ವ್ಯಾಪ್ತಿಯ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಸ್ವಸ್ಥತೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಠಾಣೆ ಪೊಲೀಸರು ಸದ್ಯ ಅಸ್ವಸ್ಥಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ತಾಲೂಕು ಆರೋಗ್ಯಾಧಿಕಾರಿಗಳಿಂದ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಂದ ಅಸ್ವಸ್ಥತೆಗೆ ಕಾರಣ ಏನು ಎಂಬ ಮಾಹಿತಿಯನ್ನು ತಾಲೂಕು ವೈದ್ಯಾಧಿಕಾರಿಗಳು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ತೆಗೆದುಕೊಳ್ತಿದ್ದಿದ್ದಕ್ಕೆ ರಿಲೇಷನ್‍ಶಿಪ್ ಬೇಡ ಎಂದಿದ್ದೇನೆ: ಕಾರಿಯಪ್ಪ

    ಈ ಕುರಿತು ಹೊಸಕೋಟೆ ಪ್ರಭಾರ ಟಿಹೆಚ್‌ಒ ಡಾ. ಸುಮಾ ಮಾಹಿತಿ ನೀಡಿದ್ದು, ಸುಮಾರು ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ 80ಕ್ಕೂ ಹೆಚ್ಚು ಜನ ದಾಖಲಾಗಿದ್ದಾರೆ. ಎಲ್ಲಾ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಇದರ ಬಗ್ಗೆ ಕಾರಣ ಏನು ಎಂಬುದು ಲ್ಯಾಬ್ ವರದಿ ಬಳಿಕ ಗೊತ್ತಾಗಲಿದೆ. ನೀರಿನಿಂದ ಅಥವಾ ಕೆಲವು ದೇವಸ್ಥಾನಗಳಲ್ಲಿ ಪ್ರಸಾದ ಸೇವನೆ ಮಾಡಿರುವ ಬಗ್ಗೆ ಮಾಹಿತಿ ಬಂದಿದೆ. ಇದರ ಬಗ್ಗೆ ಪರಿಶೀಲನೆ ಆಗುತ್ತಿದೆ ಎಂದರು. ಇದನ್ನೂ ಓದಿ: ಆಕ್ಸಿಡೆಂಟ್ ಆಗಿ ಕಟ್ ಆದ ತಲೆ ಮೂರೂವರೆ ಗಂಟೆ ಶೋಧದ ಬಳಿಕ ಸಿಕ್ತು..!

    ಇನ್ನು ಸಿಲಿಕಾನ್ ಸಿಟಿ ಆಸ್ವತ್ರೆಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು (Health Department officials) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ನಾಗೇಶ್, ಶನಿವಾರ ಹಾಗೂ ಭಾನುವಾರ ಪ್ರಸಾದ ತಿಂದ ಹಿನ್ನೆಲೆ ಅಸ್ವಸ್ಥರಾಗಿರುವುದು ಪ್ರಾಥಮಿಕ ಮಾಹಿತಿಯಲ್ಲಿ ಕಂಡು ಬಂದಿದೆ. ಎಲ್ಲೆಲ್ಲಿ ಪ್ರಸಾದ ಸೇವಿಸಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ನೀರಿನಿಂದಲೂ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಎಲ್ಲಾ ಬಗ್ಗೆ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದೇವೆ. ಈಗಾಗಲೆ 80 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿರುವವರ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಅಗತ್ಯ ಬಿದ್ದಲ್ಲಿ ಹೆಚ್ಚಿನ ಬೆಡ್ ಹಾಗೂ ಅಂಬುಲೆನ್ಸ್‌ಗಳ ನಿಯೋಜನೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು- ಮೃತದೇಹಕ್ಕಾಗಿ ಶೋಧ

  • ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ – ಆಸ್ಪತ್ರೆಗೆ ದಾಖಲು

    ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ – ಆಸ್ಪತ್ರೆಗೆ ದಾಖಲು

    ಹಾಸನ: ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು (Soldiers) ಅಸ್ವಸ್ಥಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.

    ಕುಡುಗರಹಳ್ಳಿ ಬಳಿಯ ಕ್ಯಾಂಪ್‌ನಲ್ಲಿ ಘಟನೆ ನಡೆದಿದ್ದು, ಚಾಲನಾ ತರಬೇತಿಗೆಂದು ಬಂದಿದ್ದ ಸೈನಿಕರು ಕುಡುಗರಹಳ್ಳಿ ಬಳಿ ಕ್ಯಾಂಪ್ ಹಾಕಿದ್ದರು. ಬುಧವಾರ ಮಧ್ಯಾಹ್ನ ಕ್ಯಾಂಪ್‌ನಲ್ಲಿ ತಯಾರಾಗಿದ್ದ ಆಹಾರವನ್ನು ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಿಲಿಟರಿ ವಾಹನಗಳಲ್ಲಿ ಕರೆತಂದು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಅಣ್ಣನ ಜೊತೆಗೆ ಐಸ್‌ಕ್ರೀಮ್‌ ತೆಗೆದುಕೊಂಡು ಬರುವಾಗ ಅಪಘಾತ – ಬಾಲಕ ಸಾವು

    ಸುದ್ದಿ ತಿಳಿದ ಕೂಡಲೇ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ. ಅಸ್ವಸ್ಥಗೊಂಡಿರುವ ಸೈನಿಕರು ಚೇತರಿಸಿಕೊಳ್ಳುತ್ತಿದ್ದು, ಫುಡ್ ಪಾಯ್ಸನ್‌ನಿಂದ ಅಸ್ವಸ್ಥಗೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

  • ಹಾಸ್ಟೆಲ್‌ನಲ್ಲಿ ಫುಡ್ ಪಾಯಿಸನ್- 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    ಹಾಸ್ಟೆಲ್‌ನಲ್ಲಿ ಫುಡ್ ಪಾಯಿಸನ್- 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    ಶಿವಮೊಗ್ಗ: ಫುಡ್ ಪಾಯಿಸನ್‌ನಿಂದ 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

    ನಿನ್ನೆ ಮಧ್ಯಾಹ್ನ ಹಾಸ್ಟೆಲ್‌ನಲ್ಲಿ ಊಟ ಮಾಡಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ವೇಳೆಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ – ಐವರ ದುರ್ಮರಣ

    ಫುಡ್ ಪಾಯಿಸನ್‌ನಿಂದಾಗಿ ಈ ರೀತಿಯಾಗಿದೆ. ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರನ್ನು ಶುಕ್ರವಾರ ಸಂಜೆ ಅಥವಾ ಶನಿವಾರ ಮುಂಜಾನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯ ಸುತ್ತ ಕಂದಕ ತೋಡಿ ಕಾರ್ಮಿಕನಿಗೆ ಹಿಂಸೆ – ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ

     

  • ಫುಡ್ ಪಾಯ್ಸನ್ ಶಂಕೆ- ಒಂದೇ ಗ್ರಾಮದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಫುಡ್ ಪಾಯ್ಸನ್ ಶಂಕೆ- ಒಂದೇ ಗ್ರಾಮದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಚಿಕ್ಕಬಳ್ಳಾಪುರ: ಒಂದೇ ಗ್ರಾಮದ ಐವತ್ತಕ್ಕೂ ಹೆಚ್ಚು ಮಂದಿ ವಾಂತಿ ಹಾಗೂ ಬೇಧಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿಯ ಐವತ್ತಕ್ಕೂ ಹೆಚ್ಚು ಮಂದಿ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಭಾನುವಾರ ರೆಡ್ಡಿಗೊಲ್ಲವಾರಹಳ್ಳಿಗೆ ಹೊಂದಿಕೊಂಡಿರುವ ಬಯಪ್ಪನಹಳ್ಳಿ ಗ್ರಾಮದ ಗುರುಪ್ರಸಾದ್ ಎಂಬವರ ಮನೆಯಲ್ಲಿ ನಾಮಕರಣ ಮಹೋತ್ಸವ ನಡೆದಿತ್ತು. ಕಾರ್ಯಕ್ರಮ ಮುಗಿದ ನಂತರ ಸಂಜೆ ಉಳಿದಿದ್ದ ಊಟವನ್ನು ರೆಡ್ಡಿಗೊಲ್ಲವಾರಹಳ್ಳಿಯ ಜನ ತೆಗೆದುಕೊಂಡು ಬಂದು ಊಟ ಮಾಡಿದ್ದರು. ಇಂದು ಬೆಳಗ್ಗೆಯಿಂದ ತಡರಾತ್ರಿ ಊಟ ಮಾಡಿದ ಹಲವರಿಗೆ ವಾಂತಿ-ಬೇಧಿ ಆಗಿದ್ದು, ಆಯಾಸದಿಂದ ಎಲ್ಲಂದರಲ್ಲಿ ಕುಸಿದು ಬಿದ್ದಿದ್ದಾರೆ. ಮಾಹಿತಿ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಆಶಾ ಕಾರ್ಯಕರ್ತೆ ಮಂಜುಳ 108 ಅಂಬುಲೆನ್ಸ್ ಗಳಿಗೆ ಕರೆ ಮಾಡಿ ಕೂಡಲೇ ಅಸ್ವಸ್ಥರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಮಕ್ಕಳು, ವಯಸ್ಕರು, ವೃದ್ಧರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಮಕರಣ ಮಹೋತ್ಸವದಲ್ಲಿ ಬೆಳಗ್ಗೆ ಊಟ ಮಾಡಿದವರಿಗೆ ಯಾವುದೇ ತೊಂದರೆ ಆಗಿಲ್ಲವಂತೆ. ಕೆಲವರಿಗೆ ಸಣ್ಣ ಪ್ರಮಾಣದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು ಸರಿ ಹೋಗಿದೆ ಅಂತ ನಾಮಕರಣ ಮಹೋತ್ಸವ ನಡೆಸಿರುವ ಕುಟುಂಬಸ್ಥರು ಆಶಾಕಾರ್ಯಕರ್ತೆಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ಊಟ ಮಾಡಿದವರಿಗೆ ಮಾತ್ರ ಈ ರೀತಿ ಆಗಿದ್ದು, ಪುಡ್ ಪಾಯಿಸನ್ ಶಂಕೆ ವ್ಯಕ್ತವಾಗಿದೆ.

  • 50ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ!

    50ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ!

    ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.

    ವಿದ್ಯಾರ್ಥಿನಿಯರು ಅಸ್ಮಿತಾ ಹಾಸ್ಟೆಲ್ ನಲ್ಲಿ ಸೋಮವಾರ ಮಧ್ಯಾಹ್ನದ ಊಟ ಸೇವಿಸಿದ್ದಾರೆ. ಆ ಬಳಿಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಆಗಿದೆ. ಅಲ್ಲದೆ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಇದರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.

    ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಹತ್ತಿರದ ಕಮಲಾಪುರ ಮತ್ತು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫುಡ್ ಪಾಯ್ಸನ್ ನಿಂದ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವುದೆಂದು ಹೇಳಲಾಗುತ್ತಿದ್ದು, ಫುಡ್ ಪಾಯ್ಸನ್ ಆಗಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

  • ನಾಪತ್ತೆಯಾಗಿರುವ ಜೆಡಿಎಸ್ ಶಾಸಕ ಮುಂಬೈ ಆಸ್ಪತ್ರೆಗೆ ದಾಖಲು

    ನಾಪತ್ತೆಯಾಗಿರುವ ಜೆಡಿಎಸ್ ಶಾಸಕ ಮುಂಬೈ ಆಸ್ಪತ್ರೆಗೆ ದಾಖಲು

    ಮಂಡ್ಯ: ಕೆಲ ದಿನಗಳಿಂದ ಯಾರ ಕೈಗೂ ಸಿಗದೇ ನಾಪತ್ತೆಯಾಗಿರುವ ಕೆ.ಆರ್.ಪೇಟೆಯ ಜೆಡಿಎಸ್ ಶಾಸಕ ನಾರಾಯಣಗೌಡ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ನಾರಾಯಣ ಗೌಡ ಆಸ್ಪತ್ರೆಯ ಬೆಡ್ ನಲ್ಲಿ ಮಲಗಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಮಂಡ್ಯದ ವಾಟ್ಸಪ್ ಗ್ರೂಪ್‍ಗಳಲ್ಲಿ ಹರಿದಾಡುತ್ತಿದೆ. ನನಗೆ ಆಕಸ್ಮಿಕವಾಗಿ ಫುಡ್ ಪಾಯ್ಸನ್ ಆಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಹೀಗಾಗಿ ಇಂದು ನಡೆಯಲಿರುವ ಬಜೆಟ್ ಅಧಿವೇಶನಕ್ಕೆ ನಾನು ಹಾಜರಾಗುತ್ತಿಲ್ಲ ಎಂದು ನಾರಾಯಣ ಗೌಡ ಆಪ್ತರ ಜೊತೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಸರ್ಕಾರ ಬೀಳಿಸಲು ಪೊಲೀಸ್ ಅಸ್ತ್ರ ಪ್ರಯೋಗಿಸಿದ ಬಿಜೆಪಿ!

    ಇಂದು ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ವೈದ್ಯರು ಡಿಸ್ಚಾರ್ಜ್ ಮಾಡುತ್ತಿಲ್ಲ. ಹಾಗಾಗಿ ಇಂದು ನಾನು ಸದನಕ್ಕೆ ಹಾಜರಾಗುತ್ತಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಗಳು ಹಾಗೂ ಸ್ಪೀಕರ್ ಗಮನಕ್ಕೂ ತಂದಿದ್ದೇನೆ. ಡಿಸ್ಚಾರ್ಜ್ ಆದ ಕೂಡಲೇ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇನೆ. ಕೆ ಆರ್ ಪೇಟೆಗೂ ಶೀಘ್ರದಲ್ಲೇ ಬರುತ್ತೇನೆ ಎಂದು ಆಪ್ತರ ಬಳಿ ನಾರಾಯಣ ಗೌಡ ಹೇಳಿಕೊಂಡಿದ್ದಾರೆ.

    ನಾಪತ್ತೆಯಾಗಿರುವ ನಾರಾಯಣ ಗೌಡ ಇಲ್ಲಿಯವರೆಗೂ ಯಾರ ದೂರವಾಣಿ ಸಂಪರ್ಕಕ್ಕೆ ಸಿಕ್ಕಿಲ್ಲ. ಇಂದು ಸಿಎಂ ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡಲಿರುವ ಹಿನ್ನೆಲೆಯಲ್ಲಿ ತನ್ನ ಎಲ್ಲ ಸದಸ್ಯರು ಸದನದಲ್ಲಿ ಹಾಜರು ಇರಬೇಕೆಂದು ಜೆಡಿಎಸ್ ಮತ್ತು ಕಾಂಗ್ರೆಸ್ ವಿಪ್ ಜಾರಿ ಮಾಡಿದೆ. ವಿಪ್ ಜಾರಿಯಾದ ಬಳಿಕ ಸದನಕ್ಕೆ ಗೈರು ಹಾಜರಿ ಆದರೆ ಪಕ್ಷಾಂತರ ನಿಷೇಧ ಕಾಯ್ದೆಯ ಅಡಿ ಸದಸ್ಯರನ್ನು ಅನರ್ಹತೆ ಮಾಡಲು ಪಕ್ಷಗಳಿಗೆ ಅಧಿಕಾರವಿದೆ. ಅನರ್ಹತೆ ಭೀತಿಯಿಂದ ಪಾರಾಗಲು ನಾರಾಯಣ ಗೌಡ ಆಸ್ಪತ್ರೆಗೆ ದಾಖಲಾಗಿದ್ದಾರಾ ಎನ್ನುವ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv