Tag: Food Price

  • ತೈಲ ಬೆಲೆ ಇಳಿಕೆ ಬೆನ್ನಲ್ಲೇ ದುಬಾರಿಯಾಗಲಿದೆ ಹೋಟೆಲ್ ಫುಡ್

    ತೈಲ ಬೆಲೆ ಇಳಿಕೆ ಬೆನ್ನಲ್ಲೇ ದುಬಾರಿಯಾಗಲಿದೆ ಹೋಟೆಲ್ ಫುಡ್

    ಬೆಂಗಳೂರು: ಒಂದು ಕಡೆ ಪೆಟ್ರೋಲ್, ಡೀಸೆಲ್ ಬೆಲೆಗಳು ದೀಪಾವಳಿ ಗಿಫ್ಟ್ ರೂಪದಲ್ಲಿ ಇಳಿಕೆಯಾಗಿದ್ದು, ಜನ ನಿಟ್ಟುಸಿರು ಬಿಡುವಷ್ಟರಲ್ಲಿ ಹೋಟೆಲ್‍ಗಳು ಶಾಕ್ ನೀಡಲು ಮುಂದಾಗಿವೆ.

    ನಿರಂತರವಾಗಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರದೊಳಗೆ ಹೊಟೆಲ್ ಕಾಫಿ, ತಿಂಡಿ, ಊಟಗಳ ದರ ಹೆಚ್ಚಿಸಲು ಹೋಟೆಲ್ ಮಾಲೀಕರ ಸಂಘ ಮುಂದಾಗಿದೆ. ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ 5 ರೂ. ಹೆಚ್ಚಳವಾಗುವ ಸಂಭವ ಇದೆ. ಈ ಸಂಬಂಧ ಮೊನ್ನೆ ಸಭೆ ನಡೆಸಿದೆ. ದರ ಹೆಚ್ಚಿಸಿದ್ರೆ ಗ್ರಾಹಕರನ್ನು ಕಳೆದುಕೊಳ್ಳುವ ಭಯ ಕೂಡ ಇದೆ. ಹೀಗಾಗಿ ದರ ಏರಿಕೆ ನಿರ್ಧಾರವನ್ನು ಆಯಾ ಹೋಟೆಲ್‍ಗಳಿಗೆ ಬಿಡುವ ಬಗ್ಗೆಯೂ ಚಿಂತನೆ ನಡೆದಿದೆ. ಇದನ್ನೂ ಓದಿ: ಇಂಧನ ಮಾರಾಟ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ

    ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿತಗೊಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 35% ರಿಂದ 25.9%ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 24% ರಿಂದ 14.34%ಕ್ಕೆ ಇಳಿಸಿ ಗ್ರಾಹಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಆದರೆ ಗ್ಯಾಸ್ ದರ ಮತ್ತು ಅಡುಗೆ ಎಣ್ಣೆ ದರಗಳನ್ನು ಕಡಿಮೆ ಮಾಡದ ಹಿನ್ನೆಲೆ ಹೋಟೆಲ್‍ಗಳಿಗೆ ದೊಡ್ಡ ಹೊಡೆತ ಬಿದ್ದಿದೆ ಹಾಗಾಗಿ ಹೋಟೆಲ್ ಆಹಾರಗಳ ದರ ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ನ.8 ರಿಂದ ಅಂಗನವಾಡಿ ಕೇಂದ್ರಗಳು ರೀ ಓಪನ್