Tag: FoodKit

  • ನನ್ನ ಮೇಲಿನ ಆರೋಪಗಳೆಲ್ಲವೂ ಸತ್ಯಕ್ಕೆ ದೂರ: ಜಮೀರ್ ಸ್ಪಷ್ಟನೆ

    ನನ್ನ ಮೇಲಿನ ಆರೋಪಗಳೆಲ್ಲವೂ ಸತ್ಯಕ್ಕೆ ದೂರ: ಜಮೀರ್ ಸ್ಪಷ್ಟನೆ

    ಬೆಂಗಳೂರು: ಹುಬ್ಬಳ್ಳಿ ಗಲಭೆಯಲ್ಲಿ ಕಲ್ಲು ತೂರಾಟ ನಡೆಸಿ ಅರೆಸ್ಟ್ ಆದವರ ಪರ ಶಾಸಕ ಜಮೀರ್ ಅಹ್ಮದ್‌ಖಾನ್ ನಿಂತಿದ್ದು, ಗಲಭೆಕೋರರಿಗೆ 5 ಸಾವಿರ ನಗದು ಹಾಗೂ ರಂಜಾನ್ ಫುಡ್‌ಕಿಟ್ ನೀಡಿ ಸಹಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದ್ದಂತೆ, ಶಾಸಕ ಜಮೀರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

    ZAMEER

    ತಮ್ಮ ಮೇಲಿನ ಆರೋಪಗಳಿಗೆ ತೆರೆ ಎಳೆಯಲು ಮುಂದಾದ ಅವರು, ಕಳೆದ ಏಪ್ರಿಲ್ 17ನೇ ತಾರೀಖಿನಂದು ಬೆಂಗಳೂರು ತೊರೆದು ಧಾರ್ಮಿಕ ಯಾತ್ರೆಗಾಗಿ ಮೆಕ್ಕಾಗೆ ಬಂದಿದ್ದೇನೆ. ಈಗ ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೂ ನನಗೂ ಯಾವ ರೀತಿಯ ಸಂಬಂಧವೂ ಇಲ್ಲ. ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಗಲಭೆಕೋರರ ಕುಟುಂಬಕ್ಕೆ ಜಮೀರ್ ಫುಡ್‌ಕಿಟ್ ಹಂಚಿಕೆಗೆ ಬ್ರೇಕ್

    ಇಷ್ಟಕ್ಕೂ ನಡೆದಿದ್ದೇನು?
    ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಸಹಾಯ ಮಾಡುತ್ತಿದ್ದಾರೆ. ದೇಗುಲ, ಪೊಲೀಸ್ ಠಾಣೆಗೆ ಕಲ್ಲು ಹೊಡೆದವರಿಗೆ ಜಮೀರ್ ನೆರವು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿತ್ತು.

    ಇಂದು ಮಧ್ಯಾಹ್ನ 3:30ಕ್ಕೆ ಹುಬ್ಬಳ್ಳಿಯಲ್ಲಿ ಹಣ ಹಾಗೂ ಫುಡ್‌ಕಿಟ್ ಹಂಚಿಕೆ ಮಾಡಲಾಗುತ್ತಿದ್ದು, ಕಸಬಾ ಪೇಟೆ ಪೊಲೀಸ್ ಠಾಣೆ ಬಳಿಯ ಮಸ್ತಾನ್ ಷಾ ಶಾದಿ ಮಹಲ್‌ನಲ್ಲಿ ಬೆಂಬಲಿಗರ ಮೂಲಕ ಜಮೀರ್ ಅಹ್ಮದ್ ಸಹಾಯ ಮಾಡಲಿದ್ದರು. ರಂಜಾನ್ ಹಿನ್ನೆಲೆಯಲ್ಲಿ ಮೆಕ್ಕಾದಲ್ಲಿರುವ ಜಮೀರ್ ಅಹ್ಮದ್, ಅಲ್ಲಿಂದಲೇ ಗಲಭೆಕೋರರಿಗೆ ಸಹಾಯಹಸ್ತ ಚಾಚಿದ್ದರು. ಹುಬ್ಬಳ್ಳಿಯ ತಮ್ಮ ಬೆಂಬಲಿಗರ ಮೂಲಕ ರೇಶನ್ ಕಿಟ್ ಹಂಚಿಕೆ ಮಾಡಲಿದ್ದರು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನೂ ಓದಿ: ಮತ್ತೆ ಗಲಭೆಕೋರರ ಪರ ನಿಂತ ಜಮೀರ್- ಕಲ್ಲು ಹೊಡೆದವರ ಕುಟುಂಬಕ್ಕೆ 5 ಸಾವಿರ, ಫುಡ್‍ಕಿಟ್

    ಮಾಧ್ಯಮಗಳಲ್ಲಿ ಈ ಕುರಿತು ವರದಿಗಳು ಬಿತ್ತರವಾಗುತ್ತಿದ್ದಂತೆ ಜಮೀರ್ ರೇಷನ್ ಕಿಟ್ ಹಂಚಿಕೆ ಮಾಡದಂತೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಬೆಂಬಲಿಗರು ರೇಷನ್ ಕಿಟ್ ಹಂಚಿಕೆ ಕಾರ್ಯಕ್ರಮ ರದ್ದು ಪಡಿಸಿದ್ದಾರೆ ಎಂದು ತಿಳಿದು ಬಂದಿತ್ತು.

    ZAMEER

    ಈ ಕುರಿತು ಪ್ರಕಟಣೆ ನೀಡಿದ್ದ ಜಮೀರ್, ರಂಜಾನ್ ಹಬ್ಬದ ಸಮಯದಲ್ಲಿ ಪವಿತ್ರ ನಮಾಜ್ ವೇಳೆ ತಪ್ಪು ಮಾಡಿರುವವರಿಗೆ ಶಿಕ್ಷೆಯಾಗಲಿ. ಜೊತೆಗೆ ಮತ್ತೊಮ್ಮೆ ತಪ್ಪು ಮಾಡದಂತೆ ಬುದ್ಧಿ ನೀಡಲೆಂದು ಅಲ್ಲಾಹ್ ಹಾಗೂ ದೇವರಲ್ಲಿ ಪ್ರಾರ್ಥಿಸುತ್ತೇನೆ. ನಾನು ಮೆಕ್ಕಾದಲ್ಲಿ ಪವಿತ್ರ ರಂಜಾನ್ ಆಚರಣೆ ಸೇವೆಯಲ್ಲಿ ತೊಡಗಿದ್ದೇನೆ. ಮನೆಯಲ್ಲಿ ದುಡಿಯುವ ಗಂಡಸರು ಇಲ್ಲದ ಹಿನ್ನೆಲೆಯಲ್ಲಿ ತಾಯಂದಿರಿಗೆ ಪುಟ್ಟ ಮಕ್ಕಳಿಗೆ ಸಹಾಯಹಸ್ತ ನೀಡಲಾಗುತ್ತಿದೆ. ಈ ಸಹಾಯ ಹಸ್ತ ಯಾವುದೇ ರೀತಿಯ ಬೇರೆ ಅರ್ಥ ಕಲ್ಪಿಸುವುದು ಬೇಡ. ತಪ್ಪು ಮಾಡಿದವರು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ನೀಡುವ ಶಿಕ್ಷೆಗೆ ಒಳಪಡಲಿ. ನನ್ನ ಸಹಾಯಹಸ್ತ ಯಾವುದೇ ರೀತಿಯ ತಪ್ಪಿತಸ್ಥರಿಗೆ ಸಹಾಯ ಅಲ್ಲ ಹಾಗೂ ಉತ್ತೇಜನವೂ ಅಲ್ಲ ಎಂದು ಹೇಳಿದ್ದರು.

  • ಜೋರಾಗಿ ಮಾತನಾಡುತ್ತೀರಿ, ಮಾಸ್ಕ್ ಹಾಕಿಕೊಳ್ಳಿ- ಸದನದಲ್ಲಿ ಡಿಕೆಶಿಗೆ ಮಾಸ್ಕ್ ಹಾಕಿಸಿದ ಸ್ಪೀಕರ್

    ಜೋರಾಗಿ ಮಾತನಾಡುತ್ತೀರಿ, ಮಾಸ್ಕ್ ಹಾಕಿಕೊಳ್ಳಿ- ಸದನದಲ್ಲಿ ಡಿಕೆಶಿಗೆ ಮಾಸ್ಕ್ ಹಾಕಿಸಿದ ಸ್ಪೀಕರ್

    ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ನಡುವೆಯೇ ವಿಧಾನಸಭಾ ಅಧಿವೇಶನ ನಡೆಯುತ್ತಿದೆ. ಈ ವೇಳೆ ಸದನದಲ್ಲಿ ಮಾಸ್ಕ್ ಹಾಕಿಕೊಳ್ಳದೇ ಭಾಷಣ ಮಾಡುತ್ತಿದ್ದ ಡಿ.ಕೆ.ಶಿವಕುಮಾರ್ ಅವರನ್ನು ತಡೆದ ಸ್ಪೀಕರ್ ಮಾಸ್ಕ್ ಹಾಕಿಕೊಳ್ಳುವಂತೆ ಸೂಚಿಸಿದರು.

    ಲಾಕ್‍ಡೌನ್ ವೇಳೆ ಫುಡ್ ಕಿಟ್ ವಿತರಣೆಯಲ್ಲಿ ಅವ್ಯವಹಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಸ್ತಾಪ ಮಾಡಿದರು. ಈ ಕುರಿತು ಭಾಷಣ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಆದರೆ ಈ ವೇಳೆ ಮಾಸ್ಕ್ ಧರಿಸದಿರುವುದನ್ನು ಗಮನಿಸಿದ ಸ್ಪೀಕರ್ ಅವರು, ಮಾರ್ಷಲ್‍ಗಳಿಂದ ಮಾಸ್ಕ್ ತರಿಸಿ ಡಿಕೆ ಶಿವಕುಮಾರ್ ಅವರಿಗೆ ನೀಡಿದರು. ಆ ಬಳಿಕ ನಂತರ ಮಾಸ್ಕ್ ಧರಿಸಿ ಡಿಕೆಶಿ ಮಾತು ಮುಂದುವರೆಸಿದರು.

    ಶಿವಕುಮಾರ್ ಅವರೇ ನೀವು ಜೋರಾಗಿ ಮಾತಾಡುತ್ತಿದ್ದೀರಿ. ಅದರಿಂದ ಬೇರೆಯವರಿಗೆ ಸಮಸ್ಯೆ ಆಗಬಾರದು ಎಂದು ಮಾಸ್ಕ್ ಧರಿಸಲು ಸೂಚಿಸಿದೆ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.

    ಫುಡ್‍ಕಿಟ್ ವಿತರಣೆಯಲ್ಲಿ ಕಿಟ್ ಮೇಲೆ ಬಿಜೆಪಿ ನಾಯಕರ ಫೋಟೋ ಹಾಕಿದ್ದಾರೆ. ಶಾಸಕ ಅರವಿಂದ ಲಿಂಬಾವಳಿ ಅವರು ಪ್ರಧಾನಿಗಳು, ಸಿಎಂ ಹಾಗೂ ತನ್ನ ಫೋಟೋ ಹಾಕಿ ಹಂಚಿದ್ದಾರೆ. ಬಡವರು, ಬಾಣಂತಿಯರಿಗೆ ಕೊಡುವ ಆಹಾರದ ಕಿಟ್ ಅದು. ಅಲ್ಲದೇ ಫುಡ್ ಕಿಟ್ ಅವ್ಯವಹಾರದ ಬಗ್ಗೆಯೂ ಸರ್ಕಾರಕ್ಕೆ ಗಮನಕ್ಕೆ ತಂದ್ದಿದ್ದೇವೆ. ಆದರೆ ತಪ್ಪಿತಸ್ಥರ ವಿರುದ್ಧ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ. ಅದರ ಬಗ್ಗೆ ಒಂದು ತನಿಖೆ ಮಾಡಿಸಿಲ್ಲ ಎಂದು ಡಿಕೆಶಿ ಆರೋಪಿಸಿದರು.

    ರಾಜಕಾರಣ ಮಾಡೋಣ, ಚುನಾವಣೆ ಬರುತ್ತೆ ಹೋಗುತ್ತೆ. ಆದರೆ ಬಡವರ ವಿಷಯದಲ್ಲಿ ಫೋಟೋ ಹಾಕಿಕೊಂಡು ರಾಜಕಾರಣ ಮಾಡಿದರೆ, ಇದಕ್ಕಿಂದ ಅವಮಾನ ಸಂಗತಿ ಮತ್ತೊಂದು ಇಲ್ಲ. ಲಾಕ್‍ಡೌನ್ ನಿಂದ 6 ರಿಂದ 8 ತಿಂಗಳಿನಿಂದ ಜನರು ಜೀವನ ನಡೆಸಲು ಕಷ್ಟಪಡುತ್ತಿದ್ದಾರೆ. ಕೇವಲ 4 ಗಂಟೆಯಲ್ಲಿ ಪ್ರಧಾನಿಗಳು ಲಾಕ್‍ಡೌನ್ ಮಾಡಿ, ಗಂಟೆ ಬಾರಿಸಲು, ದೀಪ ಹಚ್ಚಲು 4 ದಿನಗಳ ಸಮಯಕೊಟ್ಟರು. ಅದನ್ನು ಸಂತೋಷದಿಂದ ಸ್ವೀಕರ ಮಾಡಿದ್ದೇವು. ಆದರೆ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ನೆರವು ಸರ್ಕಾರ ಕೊಟ್ಟಿಲ್ಲ. ರೈತರಿಗೆ ಪರಿಹಾರ ಘೋಷಣೆ ಮಾಡಿದ್ರಿ, ಎಷ್ಟು ಜನರಿಗೆ ಎಷ್ಟು ರೂಪಾಯಿ ಪರಿಹಾರ ಕೊಟ್ಟಿದ್ದೀರಿ ಎಂಬ ಲೆಕ್ಕ ಕೊಡಿ ಎಂದು ಆಗ್ರಹಿಸಿದರು.