Tag: Foreign Funding

  • ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶಿ ಫಂಡಿಂಗ್‌ – ತನಿಖೆಗೆ ಇಡಿ ಎಂಟ್ರಿ

    ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶಿ ಫಂಡಿಂಗ್‌ – ತನಿಖೆಗೆ ಇಡಿ ಎಂಟ್ರಿ

    ನವದೆಹಲಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ (Dharmasthala Case) ವಿದೇಶಿ ಫಂಡಿಂಗ್‌ (Foreign Funding) ಆರೋಪ ಕೇಳಿಬಂದ ಹಿನ್ನೆಲೆ ಜಾರಿ ನಿರ್ದೇಶನಾಲಯ (Enforcement Directorate) ತನಿಖೆಗೆ ಎಂಟ್ರಿಯಾಗಿದೆ. ಎರಡು ಎನ್‌ಜಿಓಗಳು (NGO) ಕಾನೂನನ್ನು ಉಲ್ಲಂಘಿಸಿ ವಿದೇಶಿ ಹಣವನ್ನು ಪಡೆದಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಇದನ್ನು ಧರ್ಮಸ್ಥಳದ ವಿರುದ್ಧದ ಪಿತೂರಿಗೆ ಬಳಸಿರುವ ಸಾಧ್ಯತೆ ಇದೆ. ಇಡಿ ಅವರ ಹಣಕಾಸಿನ ವ್ಯವಹಾರದ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.

    ಇಡಿ ಅಧಿಕಾರಿಗಳು ಪೊಲೀಸರಿಂದ ದಾಖಲೆಗಳನ್ನು ಪಡೆದಿದ್ದಾರೆ. ಅಲ್ಲದೇ ವಿದೇಶಿ ಫಂಡ್ ಉಲ್ಲಂಘನೆ ಆರೋಪದ ಮೇಲೆ ಎರಡು ಎನ್‌ಜಿಓಗಳ ಖಾತೆ ವಿವರಗಳು ಮತ್ತು ವಹಿವಾಟಿನ ದಾಖಲೆಗಳ ಬಗ್ಗೆ ಬ್ಯಾಂಕ್‌ಗಳಿಂದ ಮಾಹಿತಿ ಕೇಳಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಎರಡು ದೂರುಗಳ ಆಧಾರದ ಮೇಲೆ ಇಡಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಲೆಬುರುಡೆ ರಹಸ್ಯ | ಶೀಘ್ರದಲ್ಲೇ ಎಲ್ಲದಕ್ಕೂ ಕ್ಲ್ಯಾರಿಟಿ ಕೊಡ್ತೀನಿ: ಯೂಟ್ಯೂಬರ್ ಸಮೀರ್ ಫಸ್ಟ್ ರಿಯಾಕ್ಷನ್

    ವಿಚಾರಣೆಯ ಭಾಗವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಇತರ ಬ್ಯಾಂಕ್‌ಗಳಿಗೆ ಪತ್ರ ಬರೆಯಲಾಗಿದೆ. ಅವರ ಪ್ಯಾನ್ ವಿವರಗಳು, ಖಾತೆ ಮಾಹಿತಿ ಮತ್ತು NGO ಗಳಿಗೆ ಸಂಬಂಧಿಸಿದ ಐದು ವರ್ಷಗಳ ವಹಿವಾಟು ದಾಖಲೆಗಳನ್ನು ನೀಡುವಂತೆ ಮನವಿ ಮಾಡಿದೆ.

    ಸೆ.1 ರಂದು ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಕ್ಷೇತ್ರದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ ಆಗುತ್ತಿದೆ. ಇದೆಲ್ಲ ಹೊರಗೆ ಬರಬೇಕಾದ್ರೆ ಪ್ರಕರಣವನ್ನ ರಾಜ್ಯ ಸರ್ಕಾರ ಎನ್‍ಐಎ (NIA) ಅಥವಾ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದರು.

    ಧರ್ಮಸ್ಥಳದ ವಿಚಾರದಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಬೇರೆ ಬೇರೆ ಕಡೆಯಿಂದ ವಿದೇಶದಿಂದ ಫಂಡ್ ಬಂದಿದೆ. ಯೂಟ್ಯೂಬರ್‌ಗಳಿಗೆ ವಿವಿಧ ಕಡೆಯಿಂದ ಫಂಡ್ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಆಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇತ್ತೀಚೆಗೆ ಪತ್ರ ಬರೆದಿದ್ದರು.

    ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಹೇಳಿಕೊಂಡಿರುವಂತೆ ಯಾವುದೇ ವಿದೇಶಿ ಫಂಡ್‌ ಬಗ್ಗೆ ತನಗೆ ತಿಳಿದಿಲ್ಲ. ತನಿಖೆಯಿಂದ ಅದು ಹೊರಬರಲಿ. ರ‍್ಯಾಲಿ ಮಾಡಲು ಬಿಜೆಪಿಗೆ ಹಣವಿದೆ. ಹಣ ಎಲ್ಲಿಂದ ಬರುತ್ತಿದೆ? ಅವರಿಗೆ ಯಾರು ಹಣ ನೀಡುತ್ತಿದ್ದಾರೆ? ಪ್ರತಿಯೊಂದು ವಿಷಯವನ್ನು ರಾಜಕೀಯವಾಗಿ ಬಳಸಬಾರದು ಎಂದಿದ್ದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್-‌ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಎಸ್‌ಐಟಿ ಕಸ್ಟಡಿ ನಾಳೆಗೆ ಅಂತ್ಯ

  • ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್‌ಗಳಿಗೆ ಫಾರಿನ್ ಫಂಡ್ – ಪರಿಶೀಲನೆಗೆ ಮುಂದಾದ ಇ.ಡಿ

    ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್‌ಗಳಿಗೆ ಫಾರಿನ್ ಫಂಡ್ – ಪರಿಶೀಲನೆಗೆ ಮುಂದಾದ ಇ.ಡಿ

    ಬೆಂಗಳೂರು/ಮಂಗಳೂರು: ಧರ್ಮಸ್ಥಳ ವಿಷಯದಲ್ಲಿ (Dharmasthala Case) ಅಪಪ್ರಚಾರ ಮಾಡಲು ಯೂಟ್ಯೂಬರ್‌ಗಳಿಗೆ (YouTubers) ವಿದೇಶದಿಂದ ಹಣ (Foreign Fund) ಹರಿದುಬಂದಿದೆ ಅನ್ನೋ ಆರೋಪಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಂಗಳವಾರ ಕೇಂದ್ರ ಗೃಹ ಸಚಿವಾಲಯಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿರೋ ಬೆನ್ನಲ್ಲೇ ದಾಖಲೆಗಳ ಪರಿಶೀಲನೆ ಮಾಡುವಂತೆ ಜಾರಿ ನಿರ್ದೇಶನಾಲಯಕ್ಕೆ ಅಮಿತ್ ಶಾ (Amit Shah) ಸೂಚನೆ ಕೊಟ್ಟಿದ್ದಾರೆ. ಹೀಗಾಗಿ, ಬೆಂಗಳೂರಿನ ಇ.ಡಿ (ED) ಅಧಿಕಾರಿಗಳು ಈಗ ಯೂಟ್ಯೂಬರ್‌ಗಳ ಆದಾಯದ ಮೂಲ ಕೆದಕುತ್ತಿದ್ದಾರೆ.

    ಈ ಬಗ್ಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯಿಸಿ, ದೇವಸ್ಥಾನದ ಪಾವಿತ್ರ್ಯತೆ ಉಳಿಸುವ ಸಲುವಾಗಿ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾವುದೇ ವ್ಯಕ್ತಿಗತವಾಗಿ ನಾನು ಪತ್ರ ಬರೆದಿಲ್ಲ ಅಂದಿದ್ದಾರೆ. ಇನ್ನು, ಶಾಸಕ ಭರತ್ ಶೆಟ್ಟಿ ಮಾತಾಡಿ, ಎನ್‌ಐಎ ಅಥವಾ ಇಡಿ ತನಿಖೆಯಾದ್ರೆ ಯಾರೆಲ್ಲರ ಬ್ಯಾಂಕ್ ಖಾತೆಗಳಿಗೆ ಎಷ್ಟೆಲ್ಲ ಹಣ ಎಲ್ಲೆಲ್ಲಿಂದ ಬಂದಿದೆ ಅನ್ನೋದು ಗೊತ್ತಾಗುತ್ತೆ ಎಂದಿದ್ದಾರೆ. ಇದನ್ನೂ ಓದಿ: ನನ್ನ ಮಗಳು ಅನನ್ಯಾ ಭಟ್ ಇದ್ದಿದ್ದು ಸತ್ಯ: ಸುಜಾತಾ ಭಟ್

    ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಎಸ್‌ಪಿಗೆ ದೂರು ಕೊಟ್ಟಿದ್ದಾರೆ. ಇನ್ನೊಂದೆಡೆ ಭಜರಂಗದಳ ಕಾರ್ಯಕರ್ತ ತೇಜಸ್ ಗೌಡ ಕೂಡ ಡಿಜಿ ಕಚೇರಿಯಲ್ಲಿ ಸಮೀರ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮತದಾರರಿಗೆ ಹಣ ಹಂಚಿಕೆ ಆರೋಪ – ಕಾಂಗ್ರೆಸ್ ನಾಯಕರ ವಿರುದ್ಧ ಆಯೋಗಕ್ಕೆ ದೇವರಾಜೇಗೌಡ ದೂರು

  • ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

    ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

    – ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ ಎಂದ ಬಿಜೆಪಿ ಶಾಸಕ

    ಬೆಂಗಳೂರು: ಧರ್ಮಸ್ಥಳ (Dharmasthala) ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಅನ್ನೋದು ನಮ್ಮ ಗುಮಾನಿ ಎಂದು ಶಾಸಕ ಡಾ.ಭರತ್ ಶೆಟ್ಟಿ (Bharath Shetty) ಹೇಳಿದ್ದಾರೆ.

    ವಿಧಾನಸೌಧ ಆವರಣದಲ್ಲಿ ʻಪಬ್ಲಿಕ್‌ ಟಿವಿʼ (Public TV- ಜೊತೆಗೆ ಮಾತನಾಡಿದ ಅವರು, ಇಡಿ ಅಥವಾ ಎನ್‌ಐಎ ತನಿಖೆಗೆ ಸಾಕಷ್ಟು ಒತ್ತಾಯ ಕೇಳಿಬರ್ತಿದೆ. ನಮ್ಮ ಕೋಟಾ ಶ್ರೀನಿವಾಸ ಪೂಜಾರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ (Foreign Fund) ಬಳಕೆ ಆಗಿದೆ ಅನ್ನೋದು ನಮ್ಮ ಗುಮಾನಿ. ಕೆಲವು ನಂಬಲರ್ಹ ಮೂಲಗಳಿಂದ ಫಾರಿನ್ ಫಂಡ್ ಬಂದಿದೆ ಅಂತ ನಮಗೆ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಎನ್ಐಎ (NIA) ಅಥವಾ ಇಡಿ ತನಿಖೆಯಾದ್ರೆ ಯಾರೆಲ್ಲರ ಬ್ಯಾಂಕ್ ಖಾತೆಗಳಿಗೆ ಎಷ್ಟೆಲ್ಲ ಹಣ ಎಲ್ಲೆಲ್ಲಿಂದ ಬಂದಿದೆ ಅನ್ನೋದು ಗೊತ್ತಾಗುತ್ತೆ. ಈಗಾಗಲೇ ಷಡ್ಯಂತ್ರ ಇದೆ ಅಂತ ನಾವೂ ಹೇಳ್ತಿದೀವಿ, ಕಾಂಗ್ರೆಸ್‌ನವ್ರೂ ಹೇಳ್ತಿದ್ದಾರೆ. ಆದ್ದರಿಂದ ಇಡಿ ಅಥವಾ ಎನ್‌ಐಎ ತನಿಖೆಗೆ ಕೊಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಬಸ್ಸು ಹತ್ತುವ ವೇಳೆ ಬಾಗಿಲು ಬಂದ್‌- ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು

    ಇನ್ನೂ ಸೌಜನ್ಯ ಪ್ರಕರಣದಲ್ಲೂ ನ್ಯಾಯ ಸಿಗಬೇಕು. ಕೆಲವರು ಸೌಜನ್ಯ ಹತ್ಯೆ ಬಗ್ಗೆ ದಾಖಲೆ ಇದೆ, ಅಂತಾರಲ್ಲ ಅವರು ಎಸ್ಐಟಿಗೆ ಅದನ್ನು ಕೊಡಲಿ. ಎಸ್ಐಟಿ ಅವರಿಗೆ ಸೌಜನ್ಯ ಕೇಸ್ ತನಿಖೆ ಮಾಡಲು ಅವಕಾಶ ಇದ್ರೆ ತನಿಖೆ ಮಾಡಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅನಾಮಿಕ ವ್ಯಕ್ತಿಯ ಮಂಪರು ಪರೀಕ್ಷೆ ಆಗದೇ ತಿಮರೋಡಿ ಬಂಧನವಾಗದೇ ತನಿಖೆ ನಡೆಯಬಾರದು: ಮಾಜಿ ಸಚಿವ ಅಭಯಚಂದ್ರ ಜೈನ್

    ನ್ನೂ ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಹೆಸರೂ ಇದರಲ್ಲಿ ಕೇಳಿಬರ್ತಿದೆ. ಸೆಂಥಿಲ್, ಸ್ಟಾಲಿನ್ ಅವರಿಗೆ ಮೆಸೇಂಜರ್ ಆಗಿದ್ದಾರೆ. ಅವರು ಹಿಂದೂ ಧರ್ಮದ ವಿರುದ್ಧ ಹಲವು ಕಡೆ ಭಾಷಣ ಮಾಡಿದ್ದಾರೆ. ಧರ್ಮಸ್ಥಳ ವಿಚಾರದಲ್ಲೂ ಅವರ ಪಾತ್ರ ಇರುವ ಅನುಮಾನ ಇದೆ. ಎನ್ಐಎ ತನಿಖೆ ನಡೆದರೆ ಈ ವಿಚಾರವನ್ನೂ ತನಿಖೆ ಮಾಡಲಿ ಎಂದು ಆಗ್ರಹಿಸಿದ್ದಾರೆ.   

  • ಮಂಗಳೂರು | ಸುಹಾಸ್ ಶೆಟ್ಟಿ ಕೇಸ್‌ಗೆ ಟ್ವಿಸ್ಟ್ – ಹಂತಕರಿಗೆ ವಿದೇಶದಿಂದ ಲಕ್ಷ ಲಕ್ಷ ಫಂಡಿಂಗ್

    ಮಂಗಳೂರು | ಸುಹಾಸ್ ಶೆಟ್ಟಿ ಕೇಸ್‌ಗೆ ಟ್ವಿಸ್ಟ್ – ಹಂತಕರಿಗೆ ವಿದೇಶದಿಂದ ಲಕ್ಷ ಲಕ್ಷ ಫಂಡಿಂಗ್

    – ಹತ್ಯೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ನಂಟು

    ಮಂಗಳೂರು: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ (Suhas Shetty Murder Case) ಹೊಸ ತಿರುವು ಪಡೆದುಕೊಂಡಿದೆ. ಎನ್‌ಐಎ ತನಿಖೆ ಆರಂಭಿಸುತ್ತಿದ್ದಂತೆ ಹತ್ಯೆಯಲ್ಲಿ ಪಿಎಫ್‌ಐ ನಂಟು ಇರೋದು ಬೆಳಕಿಗೆ ಬಂದಿದೆ. ಜೊತೆಗೆ ಹತ್ಯೆಗೆ ವಿದೇಶದಿಂದ ಫಂಡಿಂಗ್ (Foreign Funding) ಆಗಿದೆ ಅನ್ನೋ ಸ್ಪೋಟಕ ಮಾಹಿತಿ ಹೊರಬಿದ್ದಿದೆ.

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಹತ್ಯೆ ನಡೆಸಿದ ಹಾಗೂ ಸಹಕರಿಸಿದ 12 ಮಂದಿಯನ್ನ ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ ಎನ್‌ಐಎಗೆ (NIA) ವಹಿಸಿದ್ದು ಎಲ್ಲಾ ಆರೋಪಿಗಳನ್ನ ವಶಕ್ಕೆ ಪಡೆದಿದೆ. ಈ ಹತ್ಯೆ ಆದ ದಿನದಿಂದ ಹಿಂದೂ ಮುಖಂಡರು, ಬಿಜೆಪಿ ಮುಖಂಡರು ಈ ಪ್ರಕರಣವನ್ನು ಎನ್‌ಐಎಗೆ ನೀಡಲು ಒತ್ತಾಯಿಸುತ್ತಲೇ ಇದ್ದರು. ಈ ಹತ್ಯೆಯಲ್ಲಿ ನಿಷೇಧಿತ ಪಿಎಫ್‌ಐ (PFI) ಸಂಘಟನೆ ನೇರವಾಗಿ ಭಾಗಿಯಾಗಿದೆ, ಜೊತೆಗೆ ಹತ್ಯೆಗೆ ವಿದೇಶದಿಂದಲೂ ಹಣದ ಹೊಳೆ ಹರಿದುಬಂದಿದೆ ಎಂದು ಆರೋಪಿಸಿದ್ದರು. ಇದೀಗ ಎನ್‌ಐಎ ತನಿಖೆಯ ವೇಳೆಯೂ ಈ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೆಲವರಿಗೆ ಸಿಎಂ ಆಗ್ಬೇಕು ಅಂತಿರುತ್ತೆ, ಅಂಥವರೇ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸ್ತಿದ್ದಾರೆ: ಯತೀಂದ್ರ

    ಈ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಪೊಲೀಸರ ಮೂಲಕವೇ ತನಿಖೆ ನಡೆಸಲು ಆರಂಭಿಸಿದ್ದು ಎನ್‌ಐಎಗೆ ಕೊಡೋ ಅಗತ್ಯವಿಲ್ಲ ಎಂದಿತ್ತು. ಸುಹಾಸ್ ಶೆಟ್ಟಿ ಹೆತ್ತವರೂ ಎನ್‌ಐಎ ತನಿಖೆ ಮೂಲಕ ಮಾತ್ರ ತಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತೇ ಎಂದು ಒತ್ರಾಯಿಸಿದ್ರು. ಈ ನಡುವೆ ಸುಹಾಸ್ ಶೆಟ್ಟಿ ಹೆತ್ತವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್‌ಐಎಗೆ ನೀಡಲು ಒತ್ತಾಯಿಸಿದ್ದು, ಜಿಲ್ಲೆಯ ಸಂಸದ, ಶಾಸಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ತಂದಿದ್ದರು. ಇದನ್ನೂ ಓದಿ: 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ

    ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಹತ್ಯೆ ಪ್ರಕರಣವನ್ನು ಎನ್ ಐಎಗೆ ವಹಿಸಿತ್ತು. ಇದೀಗ ಆರೋಪಿಗಳನ್ನ ವಶಕ್ಕೆ ಪಡೆದ ಎನ್‌ಐಎ ಎಲ್ಲಾ 12 ಆರೋಪಿಗಳ ವಿಚಾರಣೆ ನಡೆಸಿದ್ದು, ಹೆಚ್ಚಿನ ಆರೋಪಿಗಳಿಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಜೊತೆ ನಂಟು ಇರೋದು ಬೆಳಕಿಗೆ ಬಂದಿದೆ. ಮಾತ್ರವಲ್ಲ ಎಲ್ಲ ಆರೋಪಿಗಳ ಬ್ಯಾಂಕ್ ಖಾತೆಯ ವಿವರ ಸಂಗ್ರಹಿಸಿದ ಎನ್‌ಐಎ ಅಧಿಕಾರಿಗಳಿಗೆ ವಿದೇಶದಿಂದ ಫಂಡಿಗ್ ಆಗಿರೋ ಆಘಾತಕಾರಿ ವಿಚಾರ ಗೊತ್ತಾಗಿದೆ. ದುಬೈ,ಸೌದಿ ಅರೇಬಿಯಾ ಸೇರಿದಂತೆ ರಾಜ್ಯದ ಕರಾವಳಿಯ ಕೆಲ ಸ್ಥಳೀಯರ ಬ್ಯಾಂಕ್ ಖಾತೆಗಳಿಂದಲೂ ಆರೋಪಿಗಳ ಖಾತೆಗೆ ಹಣ ವರ್ಗಾವಣೆ ಆಗಿರೋ ವಿವರ ಬಹಿರಂಗಗೊಂಡಿದೆ. ಇದನ್ನೂ ಓದಿ: ಪಾಕಿಸ್ತಾನ | ಪ್ರವಾಹದಲ್ಲಿ ಕೊಚ್ಚಿ ಹೋದ 9 ಜನ – 18 ಸದ್ಯಸರ ಕುಟುಂಬದ ದುರಂತ ಪ್ರವಾಸ 

    ಎನ್‌ಐಎ ಡಿಜಿಪಿ ರಾಹುಲ್ ಹಾಗೂ ಎಸ್ಪಿ ಶಿವಕುಮಾರ್ ಈ ಹತ್ಯೆ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದಿದ್ದು ಸದ್ಯ ಎನ್‌ಐಎ ಡಿಎಸ್‌ಪಿ ಪವನ್ ಕುಮಾರ್ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ. ಈ ಹತ್ಯೆ ಪ್ರಕರಣದಲ್ಲಿ ಇನ್ನೆಷ್ಟು ಮಂದಿ ಭಾಗಿಯಾಗಿದ್ದಾರೆ. ಯಾರೆಲ್ಲ ಫಂಡಿಂಗ್ ಮಾಡಿದ್ದಾರೆ ಅನ್ನೋ ವಿಚಾರ ಮುಂದಿನ ತನಿಖೆಯಲ್ಲಿ ಬಹಿರಂಗಗೊಳ್ಳಲಿದ್ದು ಇನ್ನೊಂದಷ್ಟು ಮಂದಿ ಬಂಧನವಾಗೋ ಸಾಧ್ಯತೆ ಇದೆ. ಇದನ್ನೂ ಓದಿ:  ಅಕ್ರಮ ಸಂಬಂಧ ಆರೋಪ – ಮಹಿಳೆಯ ವಿವಸ್ತ್ರಗೊಳಿಸಿ, ತಲೆ ಬೋಳಿಸಿ ಚಿತ್ರಹಿಂಸೆ