ಬೆಂಗಳೂರು: ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಏಳು ಮಾರ್ಗಸೂಚಿಗಳನ್ನು ನಗರ ಪೊಲೀಸರು ಹೊರಡಿಸಿದ್ದಾರೆ.
ಮಾರ್ಗಸೂಚಿಯಲ್ಲೇನಿದೆ?
* ಮನೆ ಮಾಲೀಕರು ಸಿ ಫಾರ್ಮ್ ಅನ್ನ ಎಫ್ಆರ್‌ಆರ್‌ಓ/ಎಫ್ಆರ್‌ಓಗೆ ಸಲ್ಲಿಸಬೇಕು.
* ಬಾಡಿಗೆದಾರರ ಪಾಸ್‌ಪೋರ್ಟ್ ಮತ್ತು ವೀಸಾ ಪ್ರತಿಗಳು ಕಡ್ಡಾಯವಾಗಿ ಸಂಗ್ರಹಿಸಬೇಕು.
* ಬಾಡಿಗೆ ನೀಡುವ ಮೊದಲು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
* ಮಾನ್ಯ ವೀಸಾ/ಅನುಮತಿ ಇಲ್ಲದೆ ವಾಸಿಸಲು ಅವಕಾಶ ನೀಡಬಾರದು.
* ನೋಂದಾಯಿತ ಬಾಡಿಗೆ ಒಪ್ಪಂದ ಮಾಡಬೇಕು.
* ವಿದೇಶಿ ಬಾಡಿಗೆದಾರರ ಬಗ್ಗೆ ಮಾಹಿತಿ ನೀಡದೆ ಇದ್ದರೆ ಕಾನೂನು ಕ್ರಮ.
* ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ಕೂಡಲೇ ಪೊಲೀಸರಿಗೆ ತಿಳಿಸಬೇಕು.
ನವದೆಹಲಿ: ವಿದೇಶಿಯರು (Foreigners) ಎಂದು ಘೋಷಿತರಾದ ವ್ಯಕ್ತಿಗಳನ್ನು ಗಡಿಪಾರು ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿರುವ ಅಸ್ಸಾಂ (Assam) ಸರ್ಕಾರವನ್ನು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತರಾಟೆಗೆ ತೆಗೆದುಕೊಂಡಿತು.
ವಿಚಾರಣೆಗೆ ವರ್ಚುವಲ್ ವಿಧಾನದ ಮೂಲಕ ಹಾಜರಿದ್ದ ಅಸ್ಸಾಂನ ಮುಖ್ಯ ಕಾರ್ಯದರ್ಶಿ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾ. ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ, ವಿಳಾಸವಿಲ್ಲದಿದ್ದರೂ ಅವರನ್ನು ಗಡೀಪಾರು ಮಾಡಬಹುದು, ಅನಿರ್ದಿಷ್ಟವಾಗಿ ಅವರನ್ನು ಬಂಧಿಸಿಟ್ಟುಕೊಂಡಿರುವಂತಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪಗೆ ಪಕ್ಷದ ಸಿದ್ದಾಂತ ಗೊತ್ತಿಲ್ಲ – ವೆಂಕಟೇಶ್ ಮೌರ್ಯ
ವಿಳಾಸವಿಲ್ಲದೇ ಹೋದಲ್ಲಿ ಆ ಜನರನ್ನು ಎಲ್ಲಿಗೆ ಗಡೀಪಾರು ಮಾಡಬೇಕೆಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಾಲಯವನ್ನು ಕೇಳಿದರು. ಆಗ ನ್ಯಾಯಮೂರ್ತಿ ಓಕಾ, ನೀವು ಅವರನ್ನು ಸಂಬಂಧಪಟ್ಟ ದೇಶದ ರಾಜಧಾನಿಗೆ ಗಡಿಪಾರು ಮಾಡಿ. ಆ ವ್ಯಕ್ತಿ ಪಾಕಿಸ್ತಾನದವನಾಗಿದ್ದರೆ ನಿಮಗೆ ಪಾಕಿಸ್ತಾನದ ರಾಜಧಾನಿ ತಿಳಿದಿದೆಯೇ? ಅವರ ವಿದೇಶಿ ವಿಳಾಸ ತಿಳಿಯದೇ ಇದ್ದರೆ ಅವರನ್ನು ಇಲ್ಲಿ ಬಂಧಿಸಿದ್ದಾದರೂ ಹೇಗೆ? ಪರಿಶೀಲನಾ ವರದಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಕಳುಹಿಸಿದ ದಿನಾಂಕವನ್ನು ಏಕೆ ಉಲ್ಲೇಖಿಸಿಲ್ಲ? ಎಂದು ಕಿಡಿಕಾರಿದರು. ಇದನ್ನೂ ಓದಿ: ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ
ಈ ಕುರಿತು ಸೂಕ್ತ ಅಫಿಡವಿಟ್ ಸಲ್ಲಿಸಲು ಸಮಯಾವಕಾಶ ಅಗತ್ಯವಿದೆ ಎಂದು ವಕೀಲರು ಮನವಿ ಮಾಡಿದರು. ಆದರೆ ನ್ಯಾಯಾಲಯ ನಾವು ಅಸ್ಸಾಂ ಸರ್ಕಾರ ಸುಳ್ಳು ಸಾಕ್ಷ್ಯದ ನೋಟಿಸ್ ಜಾರಿ ಮಾಡುತ್ತೇವೆ. ಒಂದು ರಾಜ್ಯ ಸರ್ಕಾರವಾಗಿ, ನೀವು ಆರೋಪ ಮುಕ್ತರಾಗಬೇಕು ಎಂದು ಎಚ್ಚರಿಕೆ ನೀಡಿತು. ವಿಚಾರಣೆಯ ಒಂದು ಹಂತದಲ್ಲಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರಕರಣ ರಾಜ್ಯಪಟ್ಟಿಗೆ ಬಾರದ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು. ಇದನ್ನೂ ಓದಿ: ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ – ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
ವಿದೇಶಿ ವಿಳಾಸಗಳಿಲ್ಲದಿದ್ದರೂ ಸಹ, ಗಡಿಪಾರು ಪ್ರಕ್ರಿಯೆಯನ್ನು ತಕ್ಷಣವೇ ಪ್ರಾರಂಭಿಸುವಂತೆ ನ್ಯಾಯಾಲಯ ಅಸ್ಸಾಂ ಸರ್ಕಾರಕ್ಕೆ ನಿರ್ದೇಶನ ನೀಡಿತು. ರಾಷ್ಟ್ರೀಯತೆ ಪರಿಶೀಲನಾ ಪ್ರಕ್ರಿಯೆಯ ಕುರಿತು ಎರಡು ವಾರಗಳಲ್ಲಿ ದಿನಾಂಕವನ್ನೂ ಒಳಗೊಂಡಂತೆ ತೆಗೆದುಕೊಂಡ ಕ್ರಮಗಳ ವಿವರವಾದ ಅಫಿಡವಿಟ್ ಸಲ್ಲಿಸುವಂತೆಯೂ ಸರ್ಕಾರಕ್ಕೆ ಸೂಚಿಸಿತು. ದೇಶಗಳೇ ಇಲ್ಲದ ವ್ಯಕ್ತಿಗಳನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಸ್ಪಷ್ಟಪಡಿಸುವುದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಲಾಯಿತು. ಇದನ್ನೂ ಓದಿ: ಮೈಸೂರು ಮಹಾರಾಜರು ಕಟ್ಟಿಸಿದ್ದ ಶಿವನ ದೇವಾಲಯವಾಯ್ತು ಬಾರ್ & ರೆಸ್ಟೋರೆಂಟ್!
ಬೆಂಗಳೂರು: ರಾಜ್ಯದಲ್ಲಿ 754 ವಿದೇಶಿಗರು (Foreigners) ವೀಸಾ (Visa) ಮುಗಿದರೂ ಅಕ್ರಮವಾಗಿ ವಾಸವಾಗಿದ್ದಾರೆ. ವೀಸಾ ಅವಧಿ ಮುಗಿದವರನ್ನು ಶೀಘ್ರವಾಗಿ ವಾಪಸ್ ಕಳುಹಿಸುವ ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಹೇಳಿದ್ದಾರೆ.
ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಕಲಾಪದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಗ್ಗೆ ಬಿಜೆಪಿಯ ಗೋಪಿನಾಥ್ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಪರಮೇಶ್ವರ್, ವಿದೇಶಿ ಪ್ರಜೆಗಳು ವಿದ್ಯಾಭ್ಯಾಸ, ಪ್ರವಾಸಕ್ಕೆ ಸೇರಿ ಹಲವು ವಿಚಾರಕ್ಕೆ ರಾಜ್ಯಕ್ಕೆ ಬರುತ್ತಾರೆ. ರಾಜ್ಯದಲ್ಲಿ ಸುಮಾರು 4,890 ವಿದೇಶಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಲು ಬಂದಿದ್ದಾರೆ. ಇದಲ್ಲದೆ ಒಟ್ಟಾರೆ ಬೆಂಗಳೂರು (Bengaluru) ನಗರ ಮತ್ತು ಉಳಿದ ಜಿಲ್ಲೆಯಲ್ಲಿ ಒಟ್ಟು 8,862 ವಿದೇಶಿಯರು ವಿದೇಶಿ ವೀಸಾದ ಮೇಲೆ ನೆಲೆಸಿದ್ದಾರೆ. ಇದರಲ್ಲಿ 754 ವಿದೇಶಿಯರು ವೀಸಾ ಮುಕ್ತಾಯವಾದರೂ ಇಲ್ಲೇ ಇದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನನ್ನ ಮೇಲೆ ಲಾರಿ ಹತ್ತಿಸ್ತೀನಿ ಅಂತಾರೆ: ವಿಧಾನಸಭೆಯಲ್ಲಿ ಶಾಸಕಿ ಅಳಲು
ವೀಸಾ ಅವಧಿ ಮುಗಿದವರನ್ನು ಶೀಘ್ರವಾಗಿ ವಾಪಸ್ ಕಳುಹಿಸುವ ಕೆಲಸ ಮಾಡುತ್ತೇವೆ. ವಿದೇಶಿ ಪ್ರಜೆಗಳ ಮೇಲೆ ಅಕ್ರಮ ಚಟುವಟಿಕೆಗಳ ವಿಚಾರವಾಗಿ ರಾಜ್ಯದಲ್ಲಿ 502 ದೂರು ದಾಖಲಾಗಿದೆ. ಆಫ್ರಿಕಾ (Africa) ಮತ್ತು ನೈಜೀರಿಯಾದಿಂದ (Nigeria) ಬಂದವರೇ ಇಂತಹ ಪ್ರಕರಣದಲ್ಲಿ ಜಾಸ್ತಿ ಭಾಗಿಯಾಗಿದ್ದಾರೆ. ಇವರು ವೀಸಾ ಮುಗಿದ ಮೇಲೂ ಅವರೇ ಕೇಸ್ ಹಾಕಿಸಿಕೊಂಡು ಇಲ್ಲೇ ಇರೋ ರೀತಿ ಪ್ಲ್ಯಾನ್ ಮಾಡುತ್ತಾರೆ. ಹೀಗಿದ್ದರೂ ನಮ್ಮ ಇಲಾಖೆ ಅವರ ಮೇಲೆ ನಿಗಾ ಇಡುವ ಕೆಲಸ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಪೆನ್‌ಡ್ರೈವ್ ಬಿಡುಗಡೆಗೆ ಕಾಂಗ್ರೆಸ್ಸಿನವರಿಂದಲೇ ತಡೆ – ಕೈ ಒಳಜಗಳಕ್ಕೆ ಬೆಂಕಿ ಹಚ್ಚಿದ ಹೆಚ್‌ಡಿಕೆ
ಪ್ರತಿ ಠಾಣೆಗಳಿಗೂ ಇವರ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ. ಕೆಲ ಭಾಗದಲ್ಲಿ ವಿದೇಶಿ ಪ್ರಜೆಗಳಿಂದ ಗಲಾಟೆಗಳು ಆಗಿವೆ. ಹೀಗಾಗಿ ವೀಸಾ ಮುಗಿದವರನ್ನು ವಾಪಸ್ ಕಳುಹಿಸುವ ಕೆಲಸ ಕಟ್ಟುನಿಟ್ಟಾಗಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: 15 ದಿನದಲ್ಲಿ 30 ಜನರು ಸಸ್ಪೆಂಡ್: ಮುನಿರತ್ನ
ಬೆಳಗಾವಿ: ವಿದೇಶದಿಂದ ಬಂದು ದೇಶ ಸುತ್ತಿದ ವಿದೇಶಿಗರು (Foreigners) ಬೇರೆಲ್ಲೂ ಜಾಗ ಸಿಗದೆ ಸ್ಮಶಾನದಲ್ಲಿ (Cemetery) ರೆಸ್ಟ್ ಮಾಡಿರುವ ಘಟನೆ ಜಿಲ್ಲೆಯ ಖಾನಾಪುರ (Khanapur) ತಾಲೂಕಿನ ರುಮೇವಾಡಿ ಗ್ರಾಮದಲ್ಲಿ ನಡೆದಿದೆ.
ಎರಡು ಬುಲೆಟ್ ಬೈಕ್ ಮೇಲೆ ರೈಡ್‌ಗೆ ಬಂದಿದ್ದ ವಿದೇಶಿಗರು ರಾತ್ರಿ ತಂಗಲು ಎಲ್ಲೂ ಜಾಗ ಸಿಗದ ಹಿನ್ನೆಲೆ ಸ್ಮಶಾನದಲ್ಲಿ ವಾಸ್ತವ್ಯ ಹೂಡಿದ್ದಾರೆ. ಜನ ಸೇರುತ್ತಿದ್ದಂತೆ ಎಚ್ಚರಗೊಂಡ ಅವರು ಯಾರೊಂದಿಗೂ ಮಾತನಾಡದೆ ಬೈಕ್ ಹತ್ತಿ ಹೊರಟು ಹೋಗಿದ್ದಾರೆ. ಇದನ್ನೂ ಓದಿ: ಫ್ರೀ ಬಸ್ ಘೋಷಣೆ ಬಳಿಕ ಮೊದಲ ವೀಕೆಂಡ್ – ಸರ್ಕಾರಿ ಬಸ್‌ಗಳು ಫುಲ್ ರಶ್
ಕಾರವಾರ: ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ವಿದೇಶಿ ಪ್ರಜೆಗಳ ದಂಡೇ ಹರಿದುಬರುತಿತ್ತು. ಬೀಚ್‌ನಲ್ಲಿ ಅರೆಬರೆ ಬಟ್ಟೆ ತೊಟ್ಟು ಮೋಜು-ಮಸ್ತಿಯಲ್ಲಿ ನಿರತರಾಗುತಿದ್ದ ವಿದೇಶಿಗರು, ಕೊರೊನಾ ನಂತರ ಭಿಕ್ಷೆ ಬೇಡುವುದು ಹಾಗೂ ವ್ಯಾಪಾರ ಮಾಡಲು ಇದೀಗ ಗೋಕರ್ಣದತ್ತ ಬರುತ್ತಿದ್ದಾರೆ.
ಹೌದು, ಇದು ಆಶ್ಚರ್ಯ ಎನಿಸಿದರೂ ಸತ್ಯ. ಈ ಹಿಂದೆ ಸಾವಿರಾರು ಸಂಖ್ಯೆಯಲ್ಲಿ ವಿದೇಶಿಗರು ಗೋಕರ್ಣಕ್ಕೆ ಬಂದು ವರ್ಷಗಟ್ಟಲೇ ನೆಲೆಸಿ ಎಂಜಾಯ್ ಮಾಡುತಿದ್ದರು. ಇದರಿಂದಾಗಿ ಗೋಕರ್ಣದ ಹೋಮ್ ಸ್ಟೇ, ರೆಸಾರ್ಟ್‌ಗಳಿಗೆ ಉತ್ತಮ ಆದಾಯ ಬರುತ್ತಿತ್ತು. ಇದನ್ನೂ ಓದಿ: ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿಗೆ ನ್ಯಾಯಾಂಗ ಬಂಧನ
ಯಾವಾಗ ಕೊರೊನಾ ಸಂಕಷ್ಟ ಎದುರಾಯಿತೊ, ಹಲವು ವಿದೇಶಿಗರು ತಮ್ಮ ದೇಶಕ್ಕೆ ತೆರಳಲು ಹಣವಿಲ್ಲದೇ ಕೇಂದ್ರ ಸರ್ಕಾರದ ಮೊರೆ ಹೋಗಿದ್ದರು. ಕೆಲವರ ವೀಸಾ ಅವಧಿ ಮುಗಿದಿದ್ದರಿಂದ ವೀಸಾ ವಿಸ್ತರಣೆಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಇನ್ನೂ ಹಲವರು ಇಲ್ಲಿಯೇ ನೆಲಸಿದ್ದು, ತಮ್ಮ ದೇಶಕ್ಕೆ ಮರಳಲು ಭಿಕ್ಷಾಟನೆಯ ಮೊರೆ ಹೋಗಿದ್ದಾರೆ. ಕೆಲವರು ಸ್ಥಳೀಯರ ಸಹಾಯದಲ್ಲಿ ಭೂಮಿಯನ್ನು ಲೀಸ್‌ನಲ್ಲಿ ಪಡೆದು ಕೃಷಿ ಮಾಡಿ ಅದರಿಂದ ಬಂದ ಹಣದಲ್ಲಿ ಜೀವನ ಸಾಗಿಸುತಿದ್ದಾರೆ.
ಪ್ರವಾಸಕ್ಕೆಂದು ಬರುವ ವಿದೇಶಿಗರು ಗೋಕರ್ಣದಲ್ಲಿ ಭಿಕ್ಷೆ ಬೇಡುವುದರ ಜೊತೆಗೆ ವ್ಯಾಪಾರಕ್ಕೆ ಇಳಿದಿರುವುದು ಸರಿಯಲ್ಲ. ಅವರನ್ನು ಮರಳಿ ದೇಶಕ್ಕೆ ಸರ್ಕಾರ ಕಳುಹಿಸುವ ವ್ಯವಸ್ಥೆ ಮಾಡಬೇಕು. ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ಡೇರಾ ಹಾಕಿ ವಾಸಿಸುತಿದ್ದಾರೆ. ಇದರಿಂದ ಧಾರ್ಮಿಕ ಕ್ಷೇತ್ರದಲ್ಲಿ ಸ್ಥಳೀಯರು ಮುಜುಗರ ಪಡುವಂತಾಗಿದೆ ಎಂದು ಸ್ಥಳೀಯರು ಅಕ್ರೋಶ ಹೊರಹಾಕಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರನ್ನು ಗುರುತಿಸಿ, ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕೆಂದು ರಾಜ್ಯ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಅಕ್ರಮವಾಗಿ ವೀಸಾ ಅವಧಿ ಮುಗಿದಿದ್ದರೂ ಕೂಡ ನೆಲೆಸಿರುವ ವಿದೇಶಿ ನಾಗರಿಕರು ಯಾವುದೇ ಅಕ್ರಮ ಚಟುವಟಿಕೆ, ದೇಶದ್ರೋಹಿ ಅಥವಾ ಸಮಾಜವಿರೋಧಿ ಕೃತ್ಯ ನಡೆಸದಂತೆ ನಿಗಾ ವಹಿಸಬೇಕು. ಅವರ ಬಗ್ಗೆ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವಂತೆ ಪ್ರತ್ಯೇಕ ದಾಖಲಾತಿಗಳನ್ನೂ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಅಪರಾಧ ನಿಯಂತ್ರಣ ಹಾಗೂ ಅಪರಾಧಿಗಳ ವಿರುದ್ಧ ಹೂಡಲಾದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಸಮರ್ಥವಾಗಿ ಮಂಡಿಸಿ, ಶಿಕ್ಷೆ ಕೊಡಿಸುವ ಪ್ರಮಾಣ ಹೆಚ್ಚಿಸುವುದರ ಮೂಲಕ, ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ವಿಶ್ವಾಸ ಮೂಡಿಸಬೇಕಾದ ಅಗತ್ಯವಿದೆ. ರಾಜ್ಯದಲ್ಲಿ ಕರಾವಳಿ ರಕ್ಷಣಾ ಪಡೆಯನ್ನು ಬಲಪಡಿಸಬೇಕು, ಹಾಗೂ ಅಕ್ರಮವಾಗಿ ನುಸುಳುವುದನ್ನು ತಡೆಯಲು ನೌಕಾದಳ ಸಿಬ್ಬಂದಿಯೊಡನೆ ಸದಾ ಸಂಪರ್ಕ ಸಾದಿಸಿ ದೇಶದ ಭದ್ರತೆ ಹಾಗೂ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಸೂಚನೆ ನೀಡಲಾಗಿದೆ. ಯಾವುದೇ ಅಜಾಗರೂಕತೆಗೆ ಆಸ್ಪದ ಇರಬಾರದು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಜಾತ್ಯಾತೀತ ನಾಯಕನಲ್ಲ, ಅವನೊಬ್ಬ ಜಾತಿ ರಾಜಕಾರಣಿ: ಶ್ರೀರಾಮುಲು
ರಾಜ್ಯದಲ್ಲಿ ಅಕ್ರಮ ಜಾನುವಾರು ಸಾಗಣೆ ಹಾಗೂ ಹತ್ಯೆ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡದೆ, ಕಾನೂನು ಉಲ್ಲಂಘಿಸುವ ಸಮಾಜ ವಿರೋಧಿ ಶಕ್ತಿಗಳನ್ನು ನಿಗ್ರಹಿಸಬೇಕು ಎಂದು ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಗಸ್ತು ಹೆಚ್ಚಳ:
ಗ್ರಾಮೀಣ ಪ್ರದೇಶದಲ್ಲಿ ಪೊಲೀಸರ ಗಸ್ತು ಪದ್ದತಿಯನ್ನು ಪರಿಷ್ಕರಿಸಿ ಅಪರಾಧ ಪ್ರಕರಣಗಳನ್ನು, ಗಣನೀಯವಾಗಿ ತಗ್ಗಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಲಾಗಿದೆ. ಪಟ್ಟಣ ಪ್ರದೇಶದಲ್ಲಿ ಈ-ಗಸ್ತು (E-Beat system) ವ್ಯವಸ್ಥೆಯನ್ನು ಬಲಪಡಿಸಲು ತೀರ್ಮಾನಿಸಲಾಗಿದೆ, ಎಂದು ಸಚಿವರು ತಿಳಿಸಿದರು.
ಪ್ರತಿ ಪೊಲೀಸ್ ಠಾಣೆಯಲ್ಲಿ ಇರುವ ರೌಡಿ ಶೀಟರ್ ಪಟ್ಟಿಯನ್ನು ಕಾನೂನಿನ ಮಾನದಂಡ ಪ್ರಕಾರ ಪುನಃ ಪರಿಶೀಲಿಸಿ, ಕನ್ನಡ-ಪರ, ರೈತ-ಪರ ಹಾಗೂ ಇನ್ನಿತರ ಜನಪರ ಚಳುವಳಿ ಭಾಗವಿಸಿದವರ ವಿರುದ್ಧ ದಾಖಲಾದ ರೌಡಿ ಶೀಟರ್ ಹಣೆಪಟ್ಟಿಯನ್ನು ವೈಜ್ಞಾನಿಕವಾಗಿ ಪರಿಷ್ಕರಿಸಬೇಕು. ಅಮಾಯಕರ ಹೆಸರು ಒಂದುವೇಳೆ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರಿಷ್ಕರಿಸಲು, ನಿರ್ಧಾರ ತೆಗೆದು ಕೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ರಾಜ್ಯದಲ್ಲಿ ಒಟ್ಟು 973 ಪಾಸಿಟಿವ್ – ದಕ್ಷಿಣ ಕನ್ನಡದಲ್ಲಿ ಕೇಸ್ ಏರಿಕೆ
ರಾಷ್ಟ್ರ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲು, ಹಾಗೂ ಕೇಂದ್ರದ ರಾಷ್ಟೀಯ ತನಿಖಾ ದಳ (NIA)ದ ಜೊತೆಗೆ ಸಮನ್ವಯ ಸಾಧಿಸಲು ಬೆಂಗಳೂರು ಅಥವಾ ಮಂಗಳೂರಿನಲ್ಲಿ NIA ಘಟಕವನ್ನು ರಾಜ್ಯದಲ್ಲಿ ಸ್ಥಾಪಿಸುವ ಅಗತ್ಯವಿದೆ. ಈ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲೂ ನಿರ್ಧರಿಸಲಾಗಿದೆ ಎಂದು ನುಡಿದರು.
ಸೆಪ್ಟೆಂಬರ್ 30ರವರೆಗೂ ವೀಸಾ ವಿಸ್ತರಣೆಗಾಗಿ ಸಂಬಂಧಿಸಿದ ಎಫ್‌ಆರ್‌ಆರ್‌ಒ / ಎಫ್‌ಆರ್‌ಒ ಅರ್ಜಿಯನ್ನು ವಿದೇಶಿಗರು ಸಲ್ಲಿಸುವ ಅಗತ್ಯವಿಲ್ಲ. ಆದರೆ ನಿರ್ಗಮಿಸುವ ಮೊದಲು ಇ-ಎಫ್‌ಆರ್‌ಆರ್‌ಒ ಪೋರ್ಟಲ್‍ನಲ್ಲಿ ನಿರ್ಗಮನ ಅನುಮತಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬೇಕಾಗುತ್ತದೆ. ಇದಕ್ಕೆ ಹೆಚ್ಚು ಶುಲ್ಕವನ್ನು ವಿಧಿಸದೇ ಉಚಿತವಾಗಿ ಆಧಾರದ ಮೇಲೆ ಸಂಬಂಧಿಸಿದ ಎಫ್‌ಆರ್‌ಆರ್‌ಒ / ಎಫ್‌ಆರ್‌ಒ ಅರ್ಜಿಯನ್ನು ನೀಡಲಾಗುವುದು ಮತ್ತು ಸೆಪ್ಟೆಂಬರ್ 30ರ ನಂತರ ವೀಸಾ ವಿಸ್ತರಣೆಯ ಅಗತ್ಯವಿದ್ದಲ್ಲಿ, ವಿದೇಶಿಗರು ಆನ್‍ಲೈನ್ ಇ-ಎಫ್‌ಆರ್‌ಆರ್‌ಒ ಪೋರ್ಟಲ್‍ನಲ್ಲಿ ವೀಸಾ ವಿಸ್ತರಣೆಗೆ ಪಾವತಿ ಆಧಾರದ ಮೇಲೆ ಅರ್ಜಿ ಸಲ್ಲಿಸಬಹುದು. ಇದನ್ನು ಎಫ್‌ಆರ್‌ಆರ್‌ಒ / ಎಫ್‌ಆರ್‌ಒ ಪರಿಗಣಿಸುತ್ತದೆ. ಇದನ್ನೂ ಓದಿ:ಅಘ್ಘಾನ್ ಪ್ರಜೆಗಳಲ್ಲಿ ಇ-ವೀಸಾವಿದ್ದರೆ ಮಾತ್ರ ಭಾರತ ಪ್ರವೇಶ
ಗದಗ: ಬಂಗಾರದ ಮೂಗುತಿ ಖರೀದಿಗಾಗಿ ವಿದೇಶಿಗರ ಸೋಗಿನಲ್ಲಿ ಬಂದು ಬರೋಬ್ಬರಿ 18 ಸಾವಿರ ರೂಪಾಯಿ ಎಗರಿಸಿ ಪರಾರಿಯಾದ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಶ್ರೀ ಲಕ್ಷ್ಮೀ ವೇಂಕಟೇಶ್ವರ ಜುವೆಲರ್ಸ್ ಶಾಪ್‍ಗೆ ಬಂದ ಯುವಕ-ಯುವತಿಯರಿಬ್ಬರು ವಿದೇಶಿಗರ ಸ್ಟೈಲ್‍ನಲ್ಲಿ ಇಂಗ್ಲಿಷ್ ಮಾತನಾಡಿದ್ದಾರೆ. ಚಿನ್ನದ ಮೂಗುತಿ ಬೇಕೆಂದು ಹೇಳಿ ಮೂಗುತಿ ಖರೀದಿಸಿ ವಿದೇಶಿ ಕರೆನ್ಸಿ ನೀಡಿದ್ದಾರೆ. ಈ ನೋಟು ನಮ್ಮಲ್ಲಿ ನಡೆಯುವುದಿಲ್ಲ, ಭಾರತೀಯ ನೋಟು ಕೊಡಿ ಎಂದು ಅಂಗಡಿ ಮಾಲೀಕ ಕೇಳಿದ್ದಾರೆ. ನಮ್ಮಲ್ಲಿ ಭಾರತೀಯ ನೋಟು ಇಲ್ಲ, ಅದು ಹೇಗಿರುತ್ತೆ ತೋರಿಸಿ ಎಂದು ಪುಸಲಾಯಿಸಿದ್ದಾರೆ.
ಆಗ ಅಂಗಡಿ ಮಾಲೀಕ, ಮೊದಲು ತನ್ನ ಬಳಿಯಿರುವ 2 ಸಾವಿರದ ನೋಟು ತೋರಿಸಿದ್ದಾರೆ. ನಂತರ ಬೇರೆ ಯಾವ ಯಾವ ನೋಟು ಇದೆ ತೋರಿಸಿ ಎಂದಿದ್ದಾರೆ. ಆಗ 10 ರೂಪಾಯಿನಿಂದ ಹಿಡಿದು 2 ಸಾವಿರ ರೂಪಾಯಿವರೆಗೆ ಇರುವ ಕಂತೆ ಕಂತೆ ನೋಟುಗಳನ್ನು ತೋರಿಸಿದ್ದಾರೆ. ಆಗ ಈ ಕಳ್ಳರು ಆ ನೋಟಿನ ಕಂತೆಯನ್ನು ಹಿಡಿದು, ನಂಬರ್, ಭಾಷೆ, ಚಿತ್ರ ಎಲ್ಲವನ್ನು ನೋಡುವ ರೀತಿ ನಟಿಸಿದ್ದಾರೆ. ಆಗ ಅಲ್ಲಿದ್ದ ಯುವತಿ ಮಾಲೀಕನ ಗಮನ ಬೇರೆ ಕಡೆ ಸೇಳೆದಾಗ ಯುವಕ 18 ಸಾವಿರ ರೂಪಾಯಿ ಹಣವನ್ನು ಜೇಬಿಗೆ ಇಳಿಸಿಕೊಂಡಿದ್ದಾನೆ. ಈ ಎಲ್ಲ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಂತರ ಬ್ಯಾಂಕ್‍ಗೆ ಹೋಗಿ ಕರೆನ್ಸಿ ಬದಲಿಸಿಕೊಂಡು ಬರುವುದಾಗಿ ಹೇಳಿ, ಅಲ್ಲಿಂದ ಕಾಲ್ಕಿತ್ತಿದ್ದಾರೆ. ಅರ್ಧಗಂಟೆ ನಂತರ ಬೇರೆಯವರಿಗೆ ಹಣ ನೀಡಬೇಕಾದ ವೇಳೆ ಹಣವನ್ನು ಎಣಿಸಿಕೊಂಡಾಗ ಬರೋಬ್ಬರಿ 18 ಸಾವಿರ ರೂಪಾಯಿ ಇಲ್ಲವಾಗಿದೆ. ಸಿಸಿ ಕ್ಯಾಮೆರಾ ಚೆಕ್ ಮಾಡಿದಾಗ ವಿದೇಶಿಗರ ಅಸಲಿಯತ್ತು ಗೊತ್ತಾಗಿದೆ. ಈ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದೇಶಿ ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು: ವಿದೇಶಕ್ಕೆ ಹೋಗಿ ಬಂದವರೆಂದರೆ ಪ್ರತಿಷ್ಟೆಯ ಪ್ರಶ್ನೆಯಾಗಿತ್ತು. ಆದರೆ ಇದೀಗ ವಿದೇಶಕ್ಕೆ ಹೋಗಿ ಬಂದವರೆಂದರೆ ದೂರ ಉಳಿಯುವ ಪರಿಸ್ಥಿತಿ ಎದುರಾಗಿದೆ. ಎಲ್ಲಾ ಕೊರೊನಾ ಮಾಯೆ. ವಿದೇಶದಲ್ಲಿ ಸಿಲುಕಿದವರ ಸ್ಥಿತಿ ಹೇಗಿತ್ತು, ಯಾವ ರೀತಿಯ ತೊಂದರೆ ಅನುಭವಿಸಿದರು ಎಂದು ಅವರ ಬಾಯಿಂದಾನೇ ಕೇಳಿದರೆ ಗೊತ್ತಾಗುತ್ತದೆ. ವಿದೇಶದಲ್ಲಿ ಪಟ್ಟ ಕಷ್ಟ, ಪಡಿಪಾಟಲು ಹೇಳತೀರದು. ಆ ಸಂದರ್ಭವನ್ನು ಇದೀಗ ಹಿರಿಯ ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಜಯಮಾಲಾ ಪುತ್ರಿ ಸೌಂದರ್ಯ ಜಯಮಾಲಾ ಅವರು ವಿವರಿಸಿದ್ದಾರೆ.
ಕೊರೊನಾ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ನೂರಾರು ಜನ ಭಾರತೀಯರು ವಿವಿಧ ದೇಶಗಳಲ್ಲಿ ಸಿಲುಕಿದ್ದಾರೆ. ಇವರನ್ನು ತವರಿಗೆ ಕರೆತರಲು ಸರ್ಕಾರ ಸಹ ಸಾಹಸಪಡುತ್ತಿದ್ದು, ಒಂದೇ ಭಾರತ್ ಮಿಷನ್ ಮೂಲಕ ಏರ್‍ಲಿಫ್ಟ್ ಮಾಡಲಾಗುತ್ತಿದೆ. ಆದರೂ ವಿದೇಶಗಳಲ್ಲಿ ಸಿಲುಕಿದವರ ಸ್ಥಿತಿ ಹೇಳತೀರದಾಗಿದೆ. ಇಂಗ್ಲೆಂಡ್‍ನಲ್ಲಿ ಸಿಲುಕಿದ್ದ ಜಯಮಾಲಾ ಪುತ್ರಿ ಸೌಂದರ್ಯ ಜಯಮಾಲಾ ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.
ಕಳೆದೆರಡು ತಿಂಗಳು ಅನುಭವಿಸಿದ ಯಾತನೆ ನೆನಸಿಕೊಂಡರೆ ಮತ್ತೆ ಯಾವತ್ತೂ ಬೇರೆ ದೇಶಕ್ಕೆ ಹೋಗಬಾರದು. ವಿದೇಶಗಳಿಗಿಂತ ನಮ್ಮೂರೇ ಸಾಕು ಎಂದೆನಿಸಿದೆ ಎಂದು ಸೌಂದರ್ಯ ಜಯಮಾಲಾ ನಿಟ್ಟುಸಿರು ಬಿಟ್ಟಿದ್ದಾರೆ.
ಇಂಗ್ಲೆಂಡ್‍ನ ವೇಲ್ಸ್ ನ ‘ಸ್ವಾನ್‍ಸೀ ವಿವಿ’ ಯಲ್ಲಿ ಅಂತಿಮ ವರ್ಷದ ಬಿಎಸ್‍ಸಿ(ಬಾಟನಿ) ಆನರ್ಸ್ ವ್ಯಾಸಂಗ ಮಾಡುತ್ತಿದ್ದೆ. ಫ್ರೆಂಡ್ ಜೊತೆ ಅಲ್ಲಿಯೇ ಅಪಾರ್ಟ್‍ಮೆಂಟ್‍ವೊಂದರಲ್ಲಿ ಬಾಡಿಗೆಗೆ ನೆಲೆಸಿದ್ದೆವು.
ನಿರಾಶ್ರಿತಳಾಗಿ ಉಳಿದುಕೊಂಡಿದ್ದೆ
ಇತ್ತೀಚೆಗೆ ಕೊರೊನಾದಿಂದಾಗಿ ಇಂಗ್ಲೆಂಡ್‍ನಲ್ಲಿ ಏಕಾಏಕಿ ಲಾಕ್‍ಡೌನ್ ಹೇರಲಾಗಿತ್ತು. ಇದರಿಂದಾಗಿ ಎರಡು ತಿಂಗಳುಗಳ ಕಾಲ ಎಲ್ಲೂ ಹೊರಹೋಗದಂತೆ ಬಂಧಿಯಾದ್ದೆವು, ತುಂಬಾ ಭಯವಾಗಿತ್ತು. ಅಲ್ಲದೆ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದಂತೆ, ವಿದೇಶಿ ವಿದ್ಯಾರ್ಥಿಗಳು ಹೊರ ಹೋಗದಂತೆ ನಿರ್ಬಂಧ ಹೇರಲಾಯಿತು. ಇದರ ಬೆನ್ನಲ್ಲೇ ನಮ್ಮ ವಿವಿಯ ಇಬ್ಬರು ಪ್ರೊಫೆಸರ್‍ಗಳು ಹಾಗೂ ಒಬ್ಬ ವಿದ್ಯಾರ್ಥಿ ಕೂಡ ಮೃತಪಟ್ಟರು. ಇನ್ನೂ ಭಯದ ವಾತಾವರಣ ನಿರ್ಮಾಣವಾಯಿತು. ಅಲ್ಲದೆ ಇಡೀ ವಿವಿಯನ್ನು ಸೀಲ್‍ಡೌನ್ ಮಾಡಲಾಯಿತು. ಹೀಗಾಗಿ ಮಾರ್ಚ್ 22ರಂದು ದುಬೈ ಮೂಲಕ ಬೆಂಗಳೂರಿಗೆ ಬರುವ ಪ್ಲ್ಯಾನ್ ಮಾಡಿಕೊಂಡಿದ್ದೆ. ಆದರೆ ಅಲ್ಲಿಯೂ ಪ್ರಯಾಣ ನಿರ್ಬಂಧಿಸಲಾಯಿತು. ಇದರಿಂದ ಮತ್ತೆ ಲಂಡನ್‍ಗೆ ಬರಬೇಕಾದ ಪರಿಸ್ಥಿತಿ ಎದುರಾಯಿತು. ಭಾರತಕ್ಕೆ ಹಿಂದಿರುಗುವ ಹಿನ್ನೆಲೆ ಬಾಡಿಗೆ ಮನೆ ಸಹ ಖಾಲಿ ಮಾಡಿದ್ದೆವು. ಹೀಗಾಗಿ ಲಂಡನ್ ವಿಮಾನ ನಿಲ್ದಾಣದಲ್ಲೇ ನಿರಾಶ್ರಿತಳಾಗಿ ಉಳಿಯುವಂತಾಯಿತು ಎಂದು ವಿದೇಶದಲ್ಲಿ ಪಟ್ಟ ಕಷ್ಟವನ್ನು ನೆನಪು ಮಾಡಿಕೊಂಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಹೆಚ್ಚು ದಿನ ಇರಲು ಸಾಧ್ಯವಾಗದ ಕಾರಣ, ಕುವೈತ್‍ನ ಸ್ನೇಹಿತೆಯ ಸಹಾಯದಿಂದ ಮತ್ತೆ ಬಾಡಿಗೆ ಮನೆ ಮಾಲೀಕರಿಗೆ ವಿಷಯ ಮುಟ್ಟಿಸಿದೆ. ನಂತರ ಮನೆಗೆ ತೆರಳಿದೆ. ಆದರೆ ಅದಾಗಲೇ ವಿದ್ಯುತ್, ನೀರು, ಇಂಟರ್‍ನೆಟ್, ಫೋನ್ ಸೇರಿದಂತೆ ಎಲ್ಲ ರೀತಿಯ ಸಂಪರ್ಕ ಕಡಿತಗೊಳಿಸಲಾಗಿತ್ತು. ಇರುವುದರಲ್ಲೇ ನೆಮ್ಮದಿ ಕಂಡುಕೊಂಡ ನನಗೆ, ಸ್ನೇಹಿತೆ ಸಹಾಯ ಮಾಡಿದಳು. ಹೀಗೆ ಭಯದಲ್ಲೇ ದಿನದೂಡುತ್ತಿರುವಾಗ ಕೇಂದ್ರ ಸರ್ಕಾರದಿಂದ ಏರ್‍ಲಿಫ್ಟ್ ಸುದ್ದಿ ಬಂತು. ಈ ಹಿಂದೆ ಕೂಡ ಇದೇ ರೀತಿಯ ಸುದ್ದಿಗಳು ಹರಿದಾಡಿದ್ದರಿಂದ ನಾನು ಮತ್ತೆ ಸುಳ್ಳು ಸುದ್ದಿ ಎಂದುಕೊಂಡಿದ್ದೆ. ಆದರೆ ಏರ್ ಇಂಡಿಯಾ ವಿಮಾನ ಸಂಸ್ಥೆಯಿಂದ ಕರೆ ಬಂದಾಗ ಹೋದ ಜೀವ ಬಂದಂತಾಯಿತು. ಅಲ್ಲದೆ ಲಂಡನ್‍ನಿಂದ ಬೆಂಗಳೂರಿಗೆ ಹೊರಟ ಮೊದಲ ವಿಮಾನದಲ್ಲೇ ನನಗೆ ಟಿಕೆಟ್ ಸಹ ಲಭಿಸಿತ್ತು. ಹೀಗಾಗಿ ಖುಷಿ ಇಮ್ಮಡಿಯಾಯಿತು. ನಂತರ ವಿಮಾನ ಏರಿ ಹೇಗೋ ಬೆಂಗಳೂರಿಗೆ ಬಂದಿಳಿದೆ. ಸದ್ಯ ಬೆಂಗಳೂರಿನ ಹೋಟೆಲ್‍ವೊಂದರಲ್ಲಿ ಕ್ವಾರಂಟೈನ್‍ನಲ್ಲಿದ್ದೇನೆ ಎಂದು ಹೇಳಿದ್ದಾರೆ.