Tag: Forensic

  • ಬಸ್‌ನಲ್ಲಿ ಬೆಂಕಿ ದುರಂತ – ವೈಷ್ಣೋದೇವಿ ಯಾತ್ರೆಗೆ ತೆರಳಿದ್ದ ನಾಲ್ವರು ಸಾವು

    ಬಸ್‌ನಲ್ಲಿ ಬೆಂಕಿ ದುರಂತ – ವೈಷ್ಣೋದೇವಿ ಯಾತ್ರೆಗೆ ತೆರಳಿದ್ದ ನಾಲ್ವರು ಸಾವು

    ಶ್ರೀನಗರ: ಇಲ್ಲಿನ ವೈಷ್ಣೋದೇವಿ ಯಾತ್ರೆಗೆ ತೆರಳುತ್ತಿದ್ದ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ನಾಲ್ವರು ಮೃತಪಟ್ಟಿರುವ ಘಟನೆ ಜಮ್ಮುವಿನ ಕತ್ರಾಬಳಿ ನಡೆದಿದೆ. ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

    ಕತ್ರಾದಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 4 ಮಂದಿ ಮೃತಪಟ್ಟಿದ್ದಾರೆ. ಕತ್ರಾದಿಂದ ಸುಮಾರು 3 ಕಿಲೋಮೀಟರ್ ದೂರದಲ್ಲಿರುವ ಪ್ರದೇಶದ ಬಳಿ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ; ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?

    BUS FIRING

    ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಕತ್ರಾ ಮೂಲ ಶಿಬಿರವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ ಠಾಕ್ರೆ ಬೊಗಳುವ ನಾಯಿ – ಪರೋಕ್ಷವಾಗಿ ಅಕ್ಬರುದ್ದೀನ್ ಟಾಂಗ್

    ಸಾವುಗಳನ್ನು ಖಚಿತಪಡಿಸಿದ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಮುಖೇಶ್ ಸಿಂಗ್, ಯಾವುದೇ ಸ್ಫೋಟಕ ಬಳಸಿರುವುದು ಆರಂಭಿಕ ತನಿಖೆಯಲ್ಲಿ ಕಂಡುಬಂದಿಲ್ಲ. ಅದಕ್ಕಾಗಿ ವಿಧಿವಿಜ್ಞಾನ ತಂಡ ಬೆಂಕಿ ಹೊತ್ತಿಕೊಂಡಿರುವ ನಿಖರ ಕಾರಣ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಂಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದೂ ಸೂಚಿಸಿದ್ದಾರೆ.

    ವೈಷ್ಣೋದೇವಿ ಯಾತ್ರೆಗೆ ತೆರಳಿದ್ದ ಬಸ್‌ಗಳಲ್ಲಿ ಈಗಾಗಲೇ ಇದು 2ನೇ ದುರಂತವಾಗಿದೆ. ಜನವರಿ 1ರಂದು ಕಾಲ್ತುಳಿತಕ್ಕೆ ಸಿಕ್ಕಿ 12 ಯಾತ್ರಿಕರು ಸಾವನ್ನಪ್ಪಿದರು. 20 ಮಂದಿ ಗಾಯಗೊಂಡಿದ್ದರು.