Tag: forensic report

  • ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೈಎಸ್ ಜಗನ್ ಚಿಕ್ಕಪ್ಪ ಬರ್ಬರ ಹತ್ಯೆ

    ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೈಎಸ್ ಜಗನ್ ಚಿಕ್ಕಪ್ಪ ಬರ್ಬರ ಹತ್ಯೆ

    ಹೈದರಾಬಾದ್: ಆಂಧ್ರ ಪ್ರದೇಶದ ಮಾಜಿ ಸಿಎಂ ವೈ.ಎಸ್.ರಾಜಶೇಖರ್ ರೆಡ್ಡಿ ಅವರ ಕಿರಿಯ ಸಹೋದರ ವೈ.ಎಸ್.ವಿವೇಕಾನಂದ ರೆಡ್ಡಿ (68) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ.

    ವೈಎಸ್‍ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಚಿಕ್ಕಪ್ಪ ವೈ.ಎಸ್.ವಿವೇಕಾನಂದ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಪುಲಿವೆಂಡುಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈಗ ಲಭ್ಯವಾಗಿರುವ ವಿಧಿವಿಜ್ಞಾನ ಪರೀಕ್ಷೆಯ ಫಲಿತಾಂಶದಲ್ಲಿ ವೈ.ಎಸ್.ವಿವೇಕಾನಂದ ಅವರನ್ನು ಕೊಲೆ ಮಾಡಿರುವುದು ಸ್ಪಷ್ಟವಾಗಿದೆ.

    ವೈ.ಎಸ್.ವಿವೇಕಾನಂದ ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಕೊಲೆಯಾದ ಮನೆಯ ಬೆಡ್‍ರೂಮ್ ಹಾಗೂ ಸ್ನಾನದ ಕೋಣೆಯಲ್ಲಿ ರಕ್ತ ಬಿದ್ದಿದ್ದು, ಕೊಲೆ ಶಂಕೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಮೃತ ದೇಹದ ತಲೆಯ ಮೇಲೆ 2 ಹಾಗೂ ದೇಹದ ಮೇಲೆ 7 ಗಾಯಗಳಾಗಿದ್ದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ.

    ಆಗಿದ್ದೇನು?:
    ವೈ.ಎಸ್.ವಿವೇಕಾನಂದ ರೆಡ್ಡಿ ಅವರ ಪತ್ನಿ ಅಮೆರಿಕದಲ್ಲಿರುವ ಮಗಳು ಹಾಗೂ ಅಳಿಯನ ಜೊತೆಗೆ ಇದ್ದಾರೆ. ಹೀಗಾಗಿ ವಿವೇಕಾನಂದ ಅವರು ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ವೈ.ಎಸ್.ವಿವೇಕಾನಂದ ಅವರು ವೈಎಸ್‍ಆರ್ ಅಭ್ಯರ್ಥಿ ಎಸ್.ರಘುರಾಮಿ ರೆಡ್ಡಿ ಪರವಾಗಿ ಪ್ರಚಾರ ಮಾಡಲು ಮೈದುಕೂರು ವಿಧಾನಸಭಾ ಕ್ಷೇತ್ರಕ್ಕೆ ಗುರುವಾರ ತೆರಳಿದ್ದರು. ಪ್ರಚಾರ ಮುಗಿಸಿಕೊಂಡು ಬಂದು ರಾತ್ರಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ದೃಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

    ವಿವೇಕಾನಂದ ರೆಡ್ಡಿ ಅವರ ಸೋದರಳಿಯ ಹಾಗೂ ಮಾಜಿ ಶಾಸಕ ಐ.ಎಸ್.ಅವಿನಾಶ್ ರೆಡ್ಡಿ ಮಾತನಾಡಿ, ಇದು ಅನುಮಾನಾಸ್ಪದ ಸಾವಾಗಿದೆ. ದೇಹದಲ್ಲಿ ಹರಿತವಾದ ಚಾಕುವಿನಿಂದ ಇರಿದಿರುವ ಗಾಯಗಳು ಕಂಡು ಬಂದಿವೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು.

    ವಿವೇಕಾನಂದ ರೆಡ್ಡಿ ಅವರ ಮೃತ ದೇಹದಲ್ಲಿ 7 ಇರಿದ ಗಾಯಗಳು ಹಾಗೂ ತಲೆಯಲ್ಲಿ 2 ಗಾಯಗಳು ಪತ್ತೆಯಾಗಿವೆ. ಇದು ಸಹಜ ಸಾವಲ್ಲ ಹತ್ಯೆ ಎಂಬುದನ್ನು ಕಡಪ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ದೇಶ್ ಶರ್ಮಾ ಖಚಿತಪಡಿಸಿದ್ದರು. ಕೊಲೆ ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರವು ಹಿರಿಯ ಪೊಲೀಸ್ ಅಧಿಕಾರಿ ಅನಿತ್ ಗಾರ್ಗ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್

    ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಗಣಪತಿ ಪ್ರಕರಣಕ್ಕೆ ಒಂದು ವರ್ಷ ಕಳೆಯುತ್ತಿದ್ದಂತೆ ರಾಷ್ಟ್ರೀಯ ಸುದ್ದಿ ವಾಹಿನಿ ಟೈಮ್ಸ್ ನೌ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯ ನಾಶ ಮಾಡಿರುವ ಬಗ್ಗೆ ಉಲ್ಲೇಖ ಇರುವುದನ್ನು ಬಹಿರಂಗಪಡಿಸಿದೆ.

    ಆತ್ಮಹತ್ಯೆ ಮಾಡಿಕೊಂಡ ದಿನಾಂಕದ ಬಳಿಕ ಹಾಲಿ ಮಂತ್ರಿ, ಮಾಜಿ ಮಂತ್ರಿ, ಹಾಲಿ ಶಾಸಕರು, ಕೇಂದ್ರ ಸಚಿವರ ಸಂಬಂಧಿ, ಮುಖಂಡರು, ಇಬ್ಬರು ಪೊಲೀಸ್ ಅಧಿಕಾರಿಗಳ ಕರೆ ದಾಖಲೆ, ಮೊಬೈಲ್ ದಾಖಲೆ ನಾಶ ಮಾಡಿರುವುದು ಹಾಗೂ ಕಂಪ್ಯೂಟರ್ ದಾಖಲೆ ನಾಶ ಮಾಡಿರೋದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಸಿಐಡಿ ಫೊರೆನ್ಸಿಕ್ ವರದಿಯನ್ನು ತನಿಖೆ ವೇಳೆ ಪರಿಗಣಿಸಿದೇ ಸಚಿವ ಜಾರ್ಜ್ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್ ಚೀಟ್ ನೀಡಿದೆ. ಈ ವೇಳೆ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳನ್ನು ವಾಹಿನಿ ಮಾತನಾಡಿಸಿದೆ. ಜಗನ್ ಬೆಳ್ಳಿಯಪ್ಪ ಮಾತನಾಡಿ, ಪೊಲೀಸ್ ಅಧಿಕಾರಿಗಳು ನಮ್ಮ ಜೊತೆ ಜಾಸ್ತಿ ಪ್ರಶ್ನೆ ಕೇಳಿಲ್ಲ. ಕೆಲ ಪ್ರಶ್ನೆ ಕೇಳಿದರು. ಏನು ಪ್ರಶ್ನೆ ಕೇಳಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಕೊನೆಗೆ ಖಾಲಿ ಬಿಳಿ ಹಾಳೆಯಲ್ಲಿ ಸಹಿ ಹಾಕಲು ಹೇಳಿದರು. ನಾವು ಸಹಿ ಹಾಕಿದ್ವಿ ಎಂದು ತಿಳಿಸಿದ್ದಾರೆ.

    ಏನೇನು ಡಿಲೀಟ್ ಆಗಿದೆ?
    100 ಇಮೇಲ್, 2699 ವರ್ಡ್ ಫೈಲ್, 910 ಎಂಎಸ್ ಎಕ್ಸೆಲ್ ಫೈಲ್, 145 ಪಿಡಿಎಫ್ ಫೈಲ್, 2500 ಇಮೇಜ್ ಫೈಲ್, 331 ಪಿಪಿಟಿ ಫೈಲ್, 791 ಟೆಕ್ಸ್ಟ್ ಫೈಲ್, 352 ಕಾಂಟಾಕ್ಟ್ , 52 ಮೆಸೇಜ್‍ಗಳು ಡಿಲೀಟ್ ಆಗಿದೆ ಎಂದು ವಾಹಿನಿ ವರದಿ ಪ್ರಸಾರಿಸಿದೆ.

    ಏನಿದು ಪ್ರಕರಣ?:
    2016 ಜುಲೈ 7 ರಂದು ಡಿವೈಎಸ್ಪಿ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚಿಟ್ ನೀಡಿತ್ತು.

    ಸುಪ್ರೀಂನಲ್ಲಿದೆ ಮತ್ತೊಂದು ಅರ್ಜಿ: ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ತನಿಖೆಗೆ ಆಗ್ರಹಿಸುವಂತೆ ಗಣಪತಿ ತಂದೆ ಕುಶಾಲಪ್ಪ ಈ ಹಿಂದೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಶಾಲಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದು, ನ್ಯಾ. ಆನಂದಕುನಾರ್ ಗೊಯೇಲ್ ಮತ್ತು ಉದಯ್ ಲಲಿತ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

    ತಕರಾರು ಅರ್ಜಿ ಸಲ್ಲಿಸಿರಲಿಲ್ಲ: ಸಚಿವ ಜಾರ್ಜ್ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್ ಅನ್ನು ಗಣಪತಿ ಅವರ ಪುತ್ರ ನೇಹಾಲ್ ಒಪ್ಪಿಕೊಂಡಿದ್ದರು. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಯಾವುದೇ ತಕರಾರು ಅರ್ಜಿ ಸಲ್ಲಿಸಿರಲಿಲ್ಲ.

    https://youtu.be/AGmp1M_0q2s

    https://youtu.be/p2V1xEclj3g