Tag: forest guard

  • 540 ಗಸ್ತು ಅರಣ್ಯ ರಕ್ಷಕರ ನೇಮಕಾತಿಗೆ ಪ್ರಕ್ರಿಯೆ: ಈಶ್ವರ್ ಖಂಡ್ರೆ

    540 ಗಸ್ತು ಅರಣ್ಯ ರಕ್ಷಕರ ನೇಮಕಾತಿಗೆ ಪ್ರಕ್ರಿಯೆ: ಈಶ್ವರ್ ಖಂಡ್ರೆ

    ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದೆ. ಈಗ 540 ಅರಣ್ಯ ರಕ್ಷಕರ (ಗಾರ್ಡ್) ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಕೇಶವ್ ಪ್ರಸ್ತಾಪ ಪ್ರಶ್ನೆ ಕೇಳಿದರು. ಆನೆ ತುಳಿತದಿಂದ ಸತ್ತವರಿಗೆ 20 ಲಕ್ಷ ಪರಿಹಾರ ಕೊಡ್ತೀರಾ. ಅದೇ ರೀತಿ ಬೇರೆ ಪ್ರಾಣಿಯಿಂದ ಸತ್ತವರಿಗೆ 20 ಲಕ್ಷ ಪರಿಹಾರ ಕೊಡಿ. ಹುಲಿಗಳ ಸಾವು ಆಯ್ತು. ಅದರ ಬಗ್ಗೆ ಕ್ರಮ ಮಾಡಬೇಕು. ಹಾವು ಕಡಿತದಿಂದ ಸತ್ತವರಿಗೂ ಸರ್ಕಾರ ಪರಿಹಾರ ಕೊಡಬೇಕು. ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಕೇಸ್ ಹಾಕಿ: ಅಶ್ವಥ್ ನಾರಾಯಣ್ ಆಗ್ರಹ

    ಇದಕ್ಕೆ ಸಚಿವ ಈಶ್ವರ್ ಖಂಡ್ರೆ ಉತ್ತರ ನೀಡಿ, ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ ಪ್ರಸ್ತುತ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಹಾವು ಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆಯ ವತಿಯಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸರ್ಕಾರ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಆನೆ ಕಾರ್ಯಪಡೆಯನ್ನು ಮಂಜೂರು ಮಾಡಲು ಸೂಚಿಸಲಾಗಿದ್ದು, 2-3 ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು. ಈ ಪಡೆಯಲ್ಲಿ 32 ಸಿಬ್ಬಂದಿ ಇರುತ್ತಾರೆ. ಅವರು ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯದ ಜೊತೆಗೆ ಪುಂಡಾನೆ ಸೆರೆ ಕಾರ್ಯಾಚರಣೆಯಲ್ಲೂ ಸಹಕರಿಸಲಿದ್ದಾರೆ ಎಂದರು.

    ಆನೆಪಥ (ಕಾರಿಡಾರ್) ಮತ್ತು ಆವಾಸಸ್ಥಾನ ಸಂರಕ್ಷಣೆಗಾಗಿ ಅಧ್ಯಯನ ನಡೆಸಲು ಭಾರತೀಯ ವಿಜ್ಞಾನ ಮಂದಿರ (ಐಐಎಸ್‌ಸಿ) ದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಪ್ರೊ. ಆರ್.ಸುಕುಮಾರ್ ಅವರ ತಂಡ ಅಧ್ಯಯನ ಆರಂಭಿಸಿದೆ ಎಂದು ತಿಳಿಸಿದರು. ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿದ್ದು, ಅತ್ಯಂತ ನೋವಿನ ಸಂಗತಿ. ಈಗಾಗಲೇ ತಪ್ಪಿತಸ್ಥರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿದೆ.

    ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿಸುವಲ್ಲಿ ವಿಫಲರಾದ ಉಪ ವಲಯ ಅರಣ್ಯಾಧಿಕಾರಿ ಸೇರಿ ಅಧಿಕಾರಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ತನಿಖೆ ಮುಂದಿನ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.

  • ಆನೇಕಲ್‌ನಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಬಲಿ

    ಆನೇಕಲ್‌ನಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಬಲಿ

    ಬೆಂಗಳೂರು: ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್‌ವೊಬ್ಬರು (Forest Guard) ಮೃತಪಟ್ಟಿರುವ ಘಟನೆ ಆನೇಕಲ್‌ನಲ್ಲಿ (Anekal) ನಡೆದಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.

    ಮಾದಪ್ಪ (45) ಆನೆ ದಾಳಿಗೆ ಮೃತಪಟ್ಟ ಪಾರೆಸ್ಟ್ ಗಾರ್ಡ್. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ – ರಾಯಚೂರಿನಲ್ಲಿ ಇಡಿ ವಿಚಾರಣೆ ಅಂತ್ಯ

    ರಾತ್ರಿ 11 ಗಂಟೆ ಸುಮಾರಿಗೆ ಕಾಡಾನೆ ಬಂದಿತ್ತು. ಆನೆ ಬಂದಿರುವುದನ್ನು ನೋಡಿ ಫಾರೆಸ್ಟ್ ಗಾರ್ಡ್ ಓಡಿಸಲು ಹೋಗಿದ್ದರು. ಆಗ ಮಾದಪ್ಪನ ಮೇಲೆ ಆನೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಮಾದಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಕಳೆದ ಆರು ತಿಂಗಳಲ್ಲಿ ಒಂದೇ ಗ್ರಾಮದ ಮೂವರು ಆನೆ ದಾಳಿಗೆ ಬಲಿಯಾಗಿದ್ದಾರೆ. ಇದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ರಾತ್ರಿ 11 ಗಂಟೆಯಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಪರಿಣಾಮವಾಗಿ ಪೊಲೀಸರು ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ. ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ದುರ್ಮರಣ

    ಪದೇ ಪದೆ ಆನೆ ದಾಳಿಗೆ ಜನ ಬಲಿಯಾಗುತ್ತಿದ್ದಾರೆ. ಆದರೆ ಅರಣ್ಯ ಇಲಾಖೆ ದುಡಿಸಿಕೊಂಡು ಯಾವುದೇ ಪರಿಹಾರ ನೀಡುತ್ತಿಲ್ಲ. ಜೀವಕ್ಕೆ ಬೆಲೆ ಇಲ್ಲದಾಗಿದೆ ಎಂದು ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.

  • ‘ಕಾಂತಾರ’ದ ಫಾರೆಸ್ಟ್ ಗಾರ್ಡ್ ರವಿ ಈಗ ಡೈರೆಕ್ಟರ್

    ‘ಕಾಂತಾರ’ದ ಫಾರೆಸ್ಟ್ ಗಾರ್ಡ್ ರವಿ ಈಗ ಡೈರೆಕ್ಟರ್

    ವಿ ಬಸ್ರೂರ್ ಬಹುಬೇಡಿಕೆ ಸಂಗೀತ ನಿರ್ದೇಶಕರಲ್ಲಿ ಒಬ್ಬರು.. ಕೆಜಿಎಫ್  ಸರಣಿ ಸಿನಿಮಾ ಬಹುದೊಡ್ಡ ಯಶಸ್ಸಿನ ಬಳಿಕ ಬಾಲಿವುಡ್, ಟಾಲಿವುಡ್ ಗಳಿಗೂ ಪಯಣಿಸಿರುವ ಅವರು ಸ್ಟಾರ್ ಹೀರೋ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಇವರ ಗರಡಿಯಿಂದ ಬಂದ ಸಾಕಷ್ಟು ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ಒಳ್ಳೆ ಹೆಸರು ಮಾಡುತ್ತಿದ್ದಾರೆ. ಇದೀಗ ರವಿ ಬಸ್ರೂರ್ ಅಖಾಡದಿಂದ ಯುವ ಸಿನಿಮೋತ್ಸಾಹಿಗಳು ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಿರ್ದೇಶಕರಾಗಿ (Director) ಸೂಚನ್ ಶೆಟ್ಟಿ (Suchan Shetty) ಹೊಸ ಪಯಣ ಪ್ರಾರಂಭಿಸಿದ್ದಾರೆ.

    ಸೂಚನ್ ಶೆಟ್ಟಿ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಸೂಚನ್ ಅವರ ಚೊಚ್ಚಲ ಪ್ರಯತ್ನದ ಸಿನಿಮಾಗೆ ಗಾಡ್ ಪ್ರಾಮಿಸ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ರವಿ ಬಸ್ರೂರ್ ಸಾರಥ್ಯದ ಕಟಕ, ಗಿರ್ಮಿಟ್, ಕಡಲ್ ಸಿನಿಮಾಗಳಿಗೆ ಬಹರಗಾರನಾಗಿ, ಸಹ ನಿರ್ದೇಶಕನಾಗಿ, ನಟನಾಗಿ ಕೆಲಸ ಮಾಡಿರುವ ಸೂಚನ್ ಈ ಅನುಭವದೊಂದಿಗೆ ನಿರ್ದೇಶನದ ಸಾಹಸಕ್ಕೆ ಕೈ ಹಾಕಿದ್ದಾರೆ. ಪ್ಯಾನ್ ಇಂಡಿಯಾ ಕಾಂತಾರ (Kantara) ಸಿನಿಮಾದಲ್ಲಿ ಫಾರೆಸ್ಟ್ ಗಾರ್ಡ್ (Forest Guard) ರವಿ ಪಾತ್ರದಲ್ಲಿ, ರವಿ ಬಸ್ರೂರ್ ಅವರ ಕಡಲ್ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿರುವ ಸೂಚನ್ ಶೆಟ್ಟಿ ಗಾಡ್ ಪ್ರಾಮಿಸ್ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.

    ನಮ್ಮ ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವಂತಹ ಸಿನಿಮಾ ಮಾಡುವ ಕನಸಿನೊಂದಿಗೆ 2016ರಲ್ಲಿ ಶುರುವಾದ ಮೈತ್ರಿ ಪ್ರೊಡಕ್ಷನ್ ಸೂಚನ್ ಶೆಟ್ಟಿ ಚೊಚ್ಚಲ ಕನಸಿಗೆ ಜೊತೆಯಾಗಿದೆ. ಗಾಡ್ ಪ್ರಾಮಿಸ್ ಸಿನಿಮಾವನ್ನು ಮೈತ್ರಿ ಪ್ರೊಡಕ್ಷನ್ ನಡಿ ಮೈತ್ರಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ಹಫ್ತಾ ಸಿನಿಮಾವನ್ನು ನಿರ್ಮಿಸಿದ್ದ ಈ ಪ್ರೊಡಕ್ಷನ್ ಎರಡನೇ ಕಾಣಿಕೆ ಗಾಡ್ ಪ್ರಾಮಿಸ್..ಹಳ್ಳಿ ಸೊಗಡನ್ನು ಬಿಂಬಿಸುವ ಟೈಟಲ್ ಪೋಸ್ಟರ್ ಕುತೂಹಲವನ್ನು ಹೆಚ್ಚು ಮಾಡಿದೆ.

     

    ಗಾಡ್ ಪ್ರಾಮಿಸ್ ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಹೊಂದಿದೆ. ಕಬ್ಜ-ಸಲಾರ್ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಹಾಗೂ ಭುವನ್ ಗೌಡ ಜೊತೆ ಕೆಲಸ ಮಾಡಿರುವ ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ರವಿ ಬಸ್ರೂರ್ ಜೊತೆ ಸಲಾರ್, ಕೆಜಿಎಫ್ ಸರಣಿ ಚಿತ್ರಗಳಿಗೆ ಕೆಲಸ ಮಾಡಿರುವ 400ಕ್ಕೂ ಮ್ಯೂಸಿಕ್ ಪ್ರೊಡ್ಯೂಸರ್ ಆಗಿ ಭರತ್ ಮಧುಸೂದನನ್  ಸಂಗೀತ ನಿರ್ದೇಶನ, ಲವ್ ಮಾಕ್ಟೇಲ್-2, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ವಿಕ್ರಾಂತ್ ರೋಣ ಸೇರಿದಂತೆ  ಐವತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಆನ್ ಲೈನ್ ಎಡಿಟರ್ ಆಗಿ ಕೆಲಸ ಮಾಡಿರುವ, ಖ್ಯಾತ ಸಂಕಲನಕಾರರಾದ ಕೆಎಂ ಪ್ರಕಾಶ್, ರುತ್ವಿಕ್. ಪ್ರತಿಕ್ ಶೆಟ್ಟಿ ಬಳಗದಲ್ಲಿ ದುಡಿದಿರುವ ನವೀನ್ ಶೆಟ್ಟಿ ಈ ಚಿತ್ರದ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಯಶಸ್ವಿ ತಂತ್ರಜ್ಞನರ ಸಿನಿಮಾವಾಗಿರುವ ಗಾಡ್ ಪ್ರಾಮಿಸ್ ತಂಡದಲ್ಲಿ ಯಾವೆಲ್ಲಾ ಕಲಾಬಳಗದ ಇರಲಿದೆ ಅನ್ನೋದು ಚಿತ್ರತಂಡ ಶೀಘ್ರದಲ್ಲೇ ರಿವೀಲ್ ಮಾಡಲಿದೆ. ಮಾರ್ಚ್ ನಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

  • ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಸಾವು

    ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಸಾವು

    ಹಾಸನ: ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಸುಂದರೇಶ್ ಎಂಬವರು ಮೃತಪಟ್ಟಿದ್ದಾರೆ. ಕಾಡ್ಗಿಚ್ಚು ನಂದಿಸಲು ಹೋಗಿದ್ದ ತಂಡದಲ್ಲಿ ಸುಂದರೇಶ್‌ ಅವರೂ ಇದ್ದರು. ಇವರಿಗೆ ಬೆಂಕಿ ಆವರಿಸಿ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಅಂತ್ಯಕ್ರಿಯೆಗೆ ಹೋಗಿದ್ದವರ ಮನೆಗೆ ಹಾಕಿದ್ದ ಬೀಗ ಮುರಿದು ಕಳ್ಳತನ

    ಫೆಬ್ರುವರಿ 16 ರ ಗುರುವಾರ ಮಧ್ಯಾಹ್ನ ಕಾಡುಮನೆ ಎಸ್ಟೇಟ್ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಕಾಡ್ಗಿಚ್ಚು ಆರಿಸಲು ಡಿಆರ್‌ಎಫ್‌ಓ ಮಂಜುನಾಥ ನೇತೃತ್ವದಲ್ಲಿ ಆರು ಜನ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದರು. ವೇಗವಾಗಿ ವ್ಯಾಪಿಸಿದ್ದ ಬೆಂಕಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಸುತ್ತುವರಿದಿತ್ತು.

    ಬೆಂಕಿಗೆ ಸಿಲಿಕಿ ಡಿಆರ್‌ಎಫ್‌ಓ ಮಂಜುನಾಥ, ಫಾರೆಸ್ಟ್ ಗಾರ್ಡ್ ಸುಂದರೇಶ್, ವಾಚರ್‌ಗಳಾದ ತುಂಗೇಶ್ ಮತ್ತು ಮಹೇಶ್‌ ಅವರಿಗೆ ಗಾಯಗಳಾಗಿದ್ದವು. ಸುಂದರೇಶ್‌ ಹಾಗೂ ಮಂಜುನಾಥ ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿದ್ದರು. ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅವರನ್ನು ಅಡ್ಡೆಯಲ್ಲಿ ಹೊತ್ತು ತಂದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಝೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಇದನ್ನೂ ಓದಿ: ಕರ್ತವ್ಯಕ್ಕೆ ರಜೆ ಹಾಕಿ ಊರಿಗೆ ಬಂದಿದ್ದ ಯೋಧ ಆತ್ಮಹತ್ಯೆ!

    ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಇಬ್ಬರಲ್ಲಿ ರಾತ್ರಿ ಸುಂದರೇಶ್ ಸಾವಿಗೀಡಾಗಿದ್ದಾರೆ. ಕಾಡು ರಕ್ಷಣೆಗಾಗಿ ತಮ್ಮ ಪ್ರಾಣ ಪಣಕ್ಕಿಟ್ಟು ಸಿಬ್ಬಂದಿ ಹೋರಾಟ ನಡೆಸಿದ್ದರು. ಶೇ.80 ರಷ್ಟು ಸುಟ್ಟ ಗಾಯಳಾಗಿದ್ದ ಸುಂದರೇಶ್ ಮೃತಪಟ್ಟಿದ್ದಾರೆ. ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್ ಅಂತ್ಯಕ್ರಿಯೆ ನೆರವೇರಲಿದೆ. ಹಾಸನದಲ್ಲಿ ಅರಣ್ಯ ಇಲಾಖೆ ವತಿಯಿಂದ ಗೌರವಾರ್ಪಣೆ ಬಳಿಕ ಹುಟ್ಟೂರಿಗೆ ಮೃತದೇಹ ಸ್ಥಳಾಂತರ ಸಾಧ್ಯತೆ ಇದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಶವವಾಗಿ ಪತ್ತೆ

    ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಶವವಾಗಿ ಪತ್ತೆ

    ಮಡಿಕೇರಿ: ಕಳೆದ ನಾಲ್ಕು ದಿನಗಳ ಹಿಂದೆ ವಿರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದಾಗ ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ (Forest Guard) ಇಂದು ಶವವಾಗಿ ಪತ್ತೆಯಾಗಿದ್ದಾರೆ.

    ಅರಣ್ಯ ರಕ್ಷಕ ತರುಣ್(23) ಮೃತ ದುರ್ದೈವಿ. ಅರಣ್ಯದಲ್ಲಿ ಬೀಟ್ ಹೋಗಿದ್ದ ಸಂದರ್ಭ ನಾಪತ್ತೆಯಾಗಿದ್ದ ತರುಣ್ ವಿ. ಬಾಡಗ ಗ್ರಾಮದ ಕೊಕ್ಕದಲ್ಲಿರುವ ನದಿಯಲ್ಲಿ (River) ಶವವಾಗಿ ಪತ್ತೆಯಾಗಿದ್ದಾರೆ.

    ಕೊಡಗು (Kodagu) ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಅರಣ್ಯದಲ್ಲಿ ಸಹೋದ್ಯೋಗಿಗಳ ಬೀಟ್‌ಗೆ ಹೋಗಿರುವ ಸಂದರ್ಭದಲ್ಲಿ ಬರೋಪೋಳೆ ನದಿಯ ಸಮೀಪದಲ್ಲಿ ಕಾಲು ಜಾರಿ ಬಿದ್ದಿರುವ ಬಗ್ಗೆ ತರುಣ್ ಸಹೋದ್ಯೋಗಿಗಳು ಮಾಹಿತಿ ನೀಡಿದರು. ಇದನ್ನೂ ಓದಿ: ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆ

    ಈ ಹಿನ್ನೆಲೆಯಲ್ಲಿ ಎನ್.ಡಿಆರ್.ಎಫ್ ನುರಿತ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿ ಇಂದು ಮುಂಜಾನೆ ಮೃತದೇಹ ಹೊರ ತೆಗೆಯಲಾಯಿತು. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸೇತುವೆ ನೆಲಸಮ ಮಾಡುವಾಗ ನದಿಗೆ ಬಿದ್ದ ಜೆಸಿಬಿ- ಪ್ರಾಣಾಪಾಯದಿಂದ ಚಾಲಕ ಪಾರು

    Live Tv
    [brid partner=56869869 player=32851 video=960834 autoplay=true]

  • ಗುಂಡ್ಯದಲ್ಲಿ ಮರಗಳ್ಳರಿಂದ ಅರಣ್ಯ ರಕ್ಷಕನ ಮೇಲೆ ಗಂಭೀರ ಹಲ್ಲೆ

    ಗುಂಡ್ಯದಲ್ಲಿ ಮರಗಳ್ಳರಿಂದ ಅರಣ್ಯ ರಕ್ಷಕನ ಮೇಲೆ ಗಂಭೀರ ಹಲ್ಲೆ

    ಮಂಗಳೂರು: ಅಕ್ರಮ ಮರ ಸಾಗಾಟ ನಡೆಸುತ್ತಿದ್ದ ಲಾರಿಯೊಂದನ್ನು ನಿಲ್ಲಿಸಿದ ಅರಣ್ಯ ರಕ್ಷಕ ಸಿಬ್ಬಂದಿಗೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಗುಂಡ್ಯದಲ್ಲಿ ನಡೆದಿದೆ.

    ರಾಜೇಶ್ ಗಾಯಗೊಂಡ ಅರಣ್ಯ ರಕ್ಷಕ ಸಿಬ್ಬಂದಿಯಾಗಿದ್ದಾರೆ. ಇವರು ಎಂದಿನಂತೆ ಬುಧವಾರ ಶಿರಾಡಿ ಘಾಟ್ ಬಳಿಯ ಗುಂಡ್ಯದ ಅರಣ್ಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ತಡರಾತ್ರಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಶಂಕೆ ಮೇರೆಗೆ ಲಾರಿಯೊಂದನ್ನು ತಡೆದು ತಪಾಸಣೆ ನಡೆಸಿದ್ದಾರೆ. ಲಾರಿಯಲ್ಲಿ ಮರದ ದಿಮ್ಮಿಗಳು ಕಂಡುಬಂದ ಹಿನ್ನೆಲೆಯಲ್ಲಿ ಲಾರಿಯಲ್ಲಿದ್ದವರಿಗೆ ಮರದ ದಾಖಲೆಗಳನ್ನು ತೋರಿಸುವಂತೆ ಹೇಳಿದ್ದಾರೆ.

    ಈ ವೇಳೆ ಲಾರಿಯಲ್ಲಿದ್ದ ಮೂವರು ರಾಜೇಶ್ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ, ಸಮವಸ್ತ್ರವನ್ನು ಸಹ ಹರಿದು ಹಾಕಿದ್ದಾರೆ. ಹಲ್ಲೆ ಬಳಿಕ ಮರಗಳ್ಳರು ಲಾರಿಯೊಂದಿಗೆ ಹಾಸನ ಕಡೆಗೆ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ರಾಜೇಶ್‍ನನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮರಗಳ್ಳರಿಂದ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರಣ್ಯ ರಕ್ಷಕ ಸಿಬ್ಬಂದಿಯನ್ನು ಇದುವರೆಗೂ ಯಾವುದೇ ಅರಣ್ಯಾಧಿಕಾರಿಗಳು ಭೇಟಿಯಾಗಿಲ್ಲ. ಇದರಿಂದಾಗಿ ಅರಣ್ಯ ಇಲಾಖೆಯ ಕೆಳ ಹಂತದ ಸಿಬ್ಬಂದಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

  • ಅರಣ್ಯಕ್ಕೆ ಬಿದ್ದ ಬೆಂಕಿ ಆರಿಸುತ್ತಿರುವವರಿಗೆ ಬೇಕಿದೆ ಆಹಾರ, ಕುಡಿಯುವ ನೀರು

    ಅರಣ್ಯಕ್ಕೆ ಬಿದ್ದ ಬೆಂಕಿ ಆರಿಸುತ್ತಿರುವವರಿಗೆ ಬೇಕಿದೆ ಆಹಾರ, ಕುಡಿಯುವ ನೀರು

    ಚಾಮರಾಜನಗರ: ಜಿಲ್ಲೆಯ ಬಿಳಿಗಿರಿ ರಂಗನಬೆಟ್ಟದ ಅರಣ್ಯಕ್ಕೆ ಬಿದ್ದ ಬೆಂಕಿ ಆರಿಸುತ್ತಿರುವ ಅಗ್ನಿ ಶಾಮಕ ಮತ್ತು ಅರಣ್ಯ ಸಿಬ್ಬಂದಿಗೆ ಆಹಾರ ಮತ್ತು ಕುಡಿಯುವ ನೀರು ಸಿಗದೇ ಪರದಾಡುತ್ತಿದ್ದಾರೆ.

     

     

    ಗುರುವಾರ ಸಂಜೆ ಬಿಳಿಗಿರಿ ರಂಗನಬೆಟ್ಟದ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಿಯಂತ್ರಣಕ್ಕೆ ಬಾರದೇ ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ನೂರಾರು ಅರಣ್ಯ ಹಾಗೂ ಅಗ್ನಿ ಶಾಮಕ ಸಿಬ್ಬಂದಿಯಿಂದ ಹಗಲು-ರಾತ್ರಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

    ಬೆಂಕಿ ನಂದಿಸುವ ಕಾರ್ಯಾಚರಣೆಗೆ ಗಾಳಿ ಅಡ್ಡಿಯಾಗಿದೆ. ಪುಣಜೂರು, ಬೆಡಗುಳಿ ಅರಣ್ಯ ಪ್ರದೇಶ, ತಮಿಳುನಾಡು ಗಡಿಯ ಹಾಸನೂರು ಭಾಗದಲ್ಲಿಯೂ ಬೆಂಕಿ ಹರಡಿಕೊಂಡಿದೆ. ಕಡಿದಾದ ಬೆಟ್ಟ, ಗುಡ್ಡಗಳಿಂದ ಕಾರ್ಯಚರಣೆಗೆ ತೊಡಕು ಉಂಟಾಗಿದೆ.