Tag: forest minister

  • ಆನಂದ್ ಸಿಂಗ್ ನಿವಾಸದ ಬಳಿ ಬಂದ ಮೊಸಳೆ ಸೆರೆ!

    ಆನಂದ್ ಸಿಂಗ್ ನಿವಾಸದ ಬಳಿ ಬಂದ ಮೊಸಳೆ ಸೆರೆ!

    ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಕೆಲಕಾಲ ಆತಂಕ ಸೃಷ್ಟಿಸಿತ್ತು.

    ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಬೈಪಾಸ್ ಬಳಿ ಎಲ್‍ಎಲ್‍ಸಿ ಕಾಲುವೆ ಇದೆ. ನಿನ್ನೆ ರಾತ್ರಿ ಕಾಲುವೆಯಿಂದ ಮೊಸಳೆಯು ಸಚಿವರ ನಿವಾಸದ ಮುಂಭಾಗದ ರಸ್ತೆಗೆ ಬಂದಿತ್ತು.

    ಮೊಸಳೆ ಇರುವ ಮಾಹಿತಿ ಅರಿತ ಕಮಲಾಪುರದ ಅಟಲ್ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ನಂತರ ಮೊಸಳೆ ಝೂಲಾಜಿಕಲ್ ಪಾರ್ಕ್‍ಗೆ ಕೊಂಡೊಯ್ದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

  • ಸ್ವಯಂಕೃತ ತಪ್ಪುಗಳೇ ರಮೇಶ್ ನಡೆಗೆ ಕಾರಣ: ಸತೀಶ್ ಜಾರಕಿಹೊಳಿ

    ಸ್ವಯಂಕೃತ ತಪ್ಪುಗಳೇ ರಮೇಶ್ ನಡೆಗೆ ಕಾರಣ: ಸತೀಶ್ ಜಾರಕಿಹೊಳಿ

    – 3 ಶಾಸಕರು ರಾಜೀನಾಮೆ ಕೊಟ್ರೆ ಸರ್ಕಾರ ಬೀಳಲ್ಲ

    ಬೆಂಗಳೂರು: ಮಾಜಿ ಸಚಿವ, ಸಹೋದರ ರಮೇಶ್ ಜಾರಕಿಹೊಳಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದರೆ ಸರ್ಕಾರಕ್ಕೆ ಯಾವುದೇ ಸಮಸ್ಯೆ ಅಗುವುದಿಲ್ಲ. ಇದನ್ನು ಅವರು ಆರ್ಥೈಸಿಕೊಳ್ಳಬೇಕಿದೆ ಎಂದು ಅರಣ್ಯ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನಮ್ಮನ್ನು ಸುಖಾ ಸುಮ್ಮನೆ ಸದ್ದು ಮಾಡುತ್ತಿದ್ದಾರೆ ಅಷ್ಟೇ. ಆದರೆ ನಾವು ಪಕ್ಷದ, ಸರ್ಕಾರ ಜವಾಬ್ದಾರಿಯನ್ನ ಮಾತ್ರ ನಿರ್ವಹಿಸುತ್ತಿದ್ದೇವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

    ಕಳೆದ 1 ವರ್ಷದ ಅವಧಿಯಿಂದ ರಾಜೀನಾಮೆ ನೀಡುತ್ತೇನೆ ಎಂದು ರಮೇಶ್ ಅವರು ಹೇಳುತ್ತಿದ್ದಾರೆ. ಆದರೆ ಅವರು ಬಿಜೆಪಿಯೊಂದಿಗೆ ಸೇರಿ ಮಾಡುತ್ತಿರುವ ಈ ಕಾರ್ಯ ಯಶಸ್ವಿ ಆಗುವುದಿಲ್ಲ. ನಾವು ಎಂದು ಕೂಡ ಅವರಿಗೆ ಪಕ್ಷದ ಸಭೆಗಳಿಗೆ ಗೈರಾಗುವಂತೆ ಹೇಳಲಿಲ್ಲ. ಗಣ್ಯರು ಜಿಲ್ಲೆಗೆ ಆಗಮಿಸಿದರೆ ಸ್ವಾಗತ ಮಾಡಬೇಡಿ ಎಂದು ಹೇಳಿಲ್ಲ. ಆದ್ದರಿಂದ ಸ್ವಯಂಕೃತ ತಪ್ಪುಗಳೇ ಅವರ ಈ ನಡೆಗೆ ಕಾರಣವಾಗಿದೆ. ಐದು ಬಾರಿ ಶಾಸಕರಾಗಿರುವ ಅವರಿಗೆ ಇವುಗಳನ್ನು ವಿಚಾರ ಮಾಡುವ ಶಕ್ತಿ ಇದೆ. ಆದರೆ ರಮೇಶ್ ಜಾರಕಿಹೊಳಿ ಅವರು ಏಕಾಂಗಿಯಾಗಿದ್ದು, ಅವರ ಬಳಿ ಸಾಕಷ್ಟು ಸಂಖ್ಯಾಬಲ ಇಲ್ಲ. ಆದ್ದರಿಂದ ಅವರು ತಟಸ್ಥರಿದ್ದಾರೆ ಎಂದು ಹೇಳಿದರು.

    ಡಿಕೆಶಿ ಪರ ಬ್ಯಾಟಿಂಗ್: ಇದೇ ವೇಳೆ ಸಚಿವ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಿರಿತನದ ಆಧಾರದಲ್ಲಿ ಅವರಿಗೆ ಉಸ್ತುವಾರಿಯನ್ನು ನೀಡಲಾಗಿದೆ. ಉಸ್ತುವಾರಿ ಕೊಟ್ಟಿರುವುದರ ಬಗ್ಗೆ ನಮಗೆ ಯಾವುದೇ ಅಸಮಾಧಾನ ಇಲ್ಲ. ಹಿರಿಯರಾದ ಕಾರಣ ಅವರಿಗೆ ಈ ಹಿಂದೆಯೂ ಹಲವು ಜವಾಬ್ದಾರಿಯನ್ನ ನೀಡಲಾಗಿತ್ತು. ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದಾರೆ. ಚಿಂಚೋಳಿ, ಕುಂದಗೋಳ ಉಪಚುನಾವಣೆಯಲ್ಲೂ ನಾವೇ ಗೆಲುವು ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಮೋದಿ ವಿರೋಧಿಗಳು ದೇಶದ್ರೋಹಿಗಳಾಗಲು ಹೇಗೆ ಸಾಧ್ಯ?: ಬಿಜೆಪಿ ಕುಟುಕಿದ ಸತೀಶ್ ಜಾರಕಿಹೊಳಿ

    ಮೋದಿ ವಿರೋಧಿಗಳು ದೇಶದ್ರೋಹಿಗಳಾಗಲು ಹೇಗೆ ಸಾಧ್ಯ?: ಬಿಜೆಪಿ ಕುಟುಕಿದ ಸತೀಶ್ ಜಾರಕಿಹೊಳಿ

    ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರೋಧಿಗಳು ದೇಶದ್ರೋಹಿಗಳಾಗಲು ಹೇಗೆ ಸಾಧ್ಯ? ನಾವು ಕೂಡ ದೇಶದ ಮೂಲ ನಿವಾಸಿಗಳು. ನಮಗೂ ದೇಶದ ಮೇಲೆ ಹಾಗೂ ಯೋಧರ ಮೇಲೆ ಅಪಾರ ಗೌರವ ಇದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ಸಭೆ ನಡೆಯಲಿದೆ. ಈಗಾಗಲೇ ಚಿಕ್ಕೋಡಿ ಕ್ಷೇತ್ರಕ್ಕೆ ಸಂಸದ ಪ್ರಕಾಶ ಹುಕ್ಕೇರಿ ಅಭ್ಯರ್ಥಿಯಾಗಿದ್ದಾರೆ. ಆದರೆ ಬೆಳಗಾವಿ ಕ್ಷೇತ್ರಕ್ಕೆ ಯೋಗ್ಯ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಟ್ಯಾಂಕರ್ ಮೂಲಕ ನೀರು ಸರಬಾರಜಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಮದುರ್ಗ ಮಾಜಿ ಶಾಸಕ ಅಶೋಕ ಪಟ್ಟಣ ಆಪ್ತ ಶಫಿ ಬೆನ್ನಿ ದೇಶ ವಿರೋಧಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದೆ. ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ.

    ಇದಕ್ಕೂ ಮುನ್ನ ಸಚಿವರು ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಕುಡಿಯುವ ನೀರು, ಅಕ್ರಮ ಮರಳುಗಾರಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳಿಂದ ಹಾಗೂ ಶಾಸಕರಿಂದ ಮಾಹಿತಿ ಪಡೆದರು. ಸಭೆಗೆ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಗೈರಾಗಿದ್ದರೆ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹಾಜರರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್‍ನಲ್ಲೇ ಇರೋದಾಗಿ ರಮೇಶ್ ಜಾರಕಿಹೊಳಿ ಬರೆದುಕೊಟ್ಟಿದ್ದಾರೆ: ಸತೀಶ್ ಜಾರಕಿಹೊಳಿ

    ಕಾಂಗ್ರೆಸ್‍ನಲ್ಲೇ ಇರೋದಾಗಿ ರಮೇಶ್ ಜಾರಕಿಹೊಳಿ ಬರೆದುಕೊಟ್ಟಿದ್ದಾರೆ: ಸತೀಶ್ ಜಾರಕಿಹೊಳಿ

    ದಾವಣಗೆರೆ: ಮೋಡ ಇದ್ದಾಗ ಗುಡುಗು ಸಾಮಾನ್ಯ. ಅದನ್ನು ಸರಿಪಡಿಸಿಕೊಂಡು ಹೋಗುತ್ತೇವೆ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲೇ ಇರುತ್ತೇನೆ ಎಂದು ಬರೆದುಕೊಟ್ಟಿದ್ದಾರೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ 20 ಶಾಸಕರು ದೂರ ಇಲ್ಲಾ, ಎಲ್ಲರೂ ಒಟ್ಟಿಗೆ ಇದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಅವರು ಫೋನ್ ಸಂಪರ್ಕಕ್ಕೆ ಸಿಕ್ಕಿಲ್ಲಾ. ಅವರು ಬಂದ ಮೇಲೆ ಅಸಮಾಧಾನದ ಕುರಿತು ಚರ್ಚೆ ಮಾಡುತ್ತೇನೆ. ಅಲ್ಲದೇ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲೇ ಇರುತ್ತೇವೆ ಎಂದು ಬರೆದುಕೊಟ್ಟಿದ್ದಾರೆ ಎಂದರು ತಿಳಿಸಿದರು.

    ಸಿಎಂ ಆಗೋ ಆಸೆ: ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ #MyCMSatish Jarkiholi ಅಭಿಯಾನದ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಮುಖ್ಯಮಂತ್ರಿ ಆಗುವುದಕ್ಕೆ ಯಾರಿಗೆ ಆಸೆ ಇರುವುದಿಲ್ಲ. ಗ್ರಾಮ ಪಂಚಾಯತಿ ಸದಸ್ಯನಿಂದ ಹಿಡಿದು ಎಲ್ಲರಿಗೂ ಆಸೆ ಇರುತ್ತೆ. ಅದೇ ರೀತಿ ನಮಗೂ ಇದೆ, ಅದಕ್ಕೆ ಇನ್ನು ಸಮಯವಿದೆ ಎಂದು ಸಿಎಂ ಆಗುವ ಕನಸನ್ನು ಬಿಚ್ಚಿಟ್ಟರು.

    ನಮ್ಮ ಸಮುದಾಯದವರು ಸಿಎಂ ಆಗಬೇಕೆನ್ನುವುದು ನಮ್ಮ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಸದ್ಯ ಸಮ್ಮಿಶ್ರ ಸರ್ಕಾರ ರಚನೆ ಆಗಿರುವುದರಿಂದ ಕೆಲ ಸಮಸ್ಯೆ ಇದ್ದೇ ಇದೆ. ನಿರಂತರವಾಗಿ ಇಂತಹ ಸಮಸ್ಯೆಗಳು ಬರುತ್ತದೆ. ಅದನ್ನು ಸಿಎಂ ಎಚ್‍ಡಿಕೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿಭಾಯಿಸುತ್ತಾರೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ತಿಂಗಳ 8 ಮತ್ತು 9 ಕ್ಕೆ ರಾಜನಹಳ್ಳಿ ವಾಲ್ಮೀಕಿ ಮಠದ ಜಾತ್ರೆ ನಡೆಯಲಿದ್ದು, ಈ ಕಾರಣ ಜಾತ್ರೆಯ ಸ್ಥಳ ಪರಿಶೀಲನೆ ನಡೆಸಲು ಸಚಿವರು ಆಗಮಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮಹಾರಾಷ್ಟ್ರ ಅರಣ್ಯ ಸಚಿವರನ್ನು ಮಂತ್ರಿಗಿರಿಯಿಂದ ಕೈಬಿಡಿ – ಮನೇಕಾ ಗಾಂಧಿ ಒತ್ತಾಯ

    ಮಹಾರಾಷ್ಟ್ರ ಅರಣ್ಯ ಸಚಿವರನ್ನು ಮಂತ್ರಿಗಿರಿಯಿಂದ ಕೈಬಿಡಿ – ಮನೇಕಾ ಗಾಂಧಿ ಒತ್ತಾಯ

    ನವದೆಹಲಿ: ಅವನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಅರಣ್ಯ ಸಚಿವ ಸುಧೀರ್ ಮುಂಗತಿವಾರ್ ಅವರನ್ನು ಮಂತ್ರಿಗಿರಿಯಿಂದ ವಜಾ ಮಾಡುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಒತ್ತಾಯಿಸಿದ್ದಾರೆ.

    ಈ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇ0ದ್ರ ಫಡ್ನವೀಸ್ ಅವರಿಗೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ. ವನ್ಯ ಜೀವಿಗಳನ್ನು ರಕ್ಷಿಸುವ ಸ್ಥಾನದಲ್ಲಿದ್ದು, ಅವನಿ ಹತ್ಯೆಗೆ ಅವಕಾಶ ನೀಡಿರುವುದು ದುರಂತ. ಹೀಗಾಗಿ ಸಚಿವ ಸುಧೀರ್ ಮುಂಗತಿವಾರ್ ಅವರನ್ನು ಅರಣ್ಯ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

    ಅರಣ್ಯ ಅಧಿಕಾರಿಗಳು ಪ್ರಾಣಿಗಳನ್ನು ರಕ್ಷಿಸಲು ಇರುವುದೇ ಹೊರತು, ಹತ್ಯೆ ಮಾಡಲು ಸೂಚಿಸಲು ಅಲ್ಲ. ಮಕ್ಕಳ ಅಭಿವೃದ್ಧಿ, ಏಳಿಗೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಶ್ರಮಿಸುತ್ತದೆ. ಅದರಂತೆ ಅರಣ್ಯ ಇಲಾಖೆ ವನ್ಯ ಜೀವಿಗಳ ಸಂರಕ್ಷಣೆಗೆ ಶ್ರಮಿಸಬೇಕು ಎಂದು ಕಿಡಿಕಾರಿದ್ದಾರೆ.

    ಏನಿದು ಪ್ರಕರಣ?:
    ಕಳೆದ ಎರಡು ವರ್ಷಗಳಿಂದ 14 ಮಂದಿಯನ್ನು ತಿಂದು ಹಾಕಿದ್ದ ಹೆಣ್ಣು ಹುಲಿ ಅವನಿಯನ್ನು ನವೆಂಬರ್ 2ರಂದು ಮಹಾರಾಷ್ಟ್ರದ ಯಾವತ್ಮಲ್ ನಲ್ಲಿ ಹತ್ಯೆ ಮಾಡಲಾಗಿತ್ತು. ಆದರೆ ಸೆಪ್ಟಂಬರ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಅವನಿ ಹೆಣ್ಣು ಹುಲಿಯನ್ನು ಕಂಡಲ್ಲಿ ಗುಂಡು ಹಾರಿಸುವಂತೆ ಅನುಮತಿ ನೀಡಿತ್ತು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಅವನಿ ಹತ್ಯೆ ಬಳಿಕ ಅದರ ಜೊತೆಗಿದ್ದ ಎರಡು ಹುಲಿ ಮರಿಗಳನ್ನು ರಕ್ಷಿಸಲಾಗಿದೆ.

    2012 ರಲ್ಲಿ ಯವತ್ಮಾಲ್ ಕಾಡಿನಲ್ಲಿ ಅವನಿ ಹೆಣ್ಣು ಹುಲಿ ಮೊದಲಿಗೆ ಕಾಣಿಸಿಕೊಂಡಿತ್ತು. 14 ಮಂದಿಯನ್ನು ಕೊಂದಿದ್ದ ದೇಹಗಳು ಕೂಡ ಕಾಡಿನಲ್ಲಿ ಪತ್ತೆಯಾಗಿತ್ತು. ಅದರಲ್ಲಿ 5 ಮಂದಿಯ ಸಾವಿಗೆ ಈ ಹುಲಿಯೇ ಕಾರಣ ಎಂಬುದು ಸಾಕ್ಷ್ಯಾಧಾರಗಳಿಂದ ತಿಳಿದು ಬಂದಿದೆ. ಸಮೀಕ್ಷೆಗಳ ಪ್ರಕಾರ ಕೆಲ ವರ್ಷಗಳಿಂದ ಆ ಅರಣ್ಯ ಪ್ರದೇಶದಲ್ಲಿ ಅವನಿ ಬಿಟ್ಟರೆ ಗಂಡು ಹುಲಿಯೊಂದು ವಾಸವಾಗಿರುವುದು ತಿಳಿದುಬಂದಿದೆ. ಮೃತಪಟ್ಟವರಲ್ಲಿ ಒಬ್ಬರ ದೇಹದಲ್ಲಿ ಮಾತ್ರ ಆ ಹುಲಿಯ ಡಿಎನ್‍ಎ ಪತ್ತೆಯಾಗಿದೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಳ್ಳೆ ಮುಹೂರ್ತ ನೋಡ್ಕೊಂಡು ಕಾಂಗ್ರೆಸ್ ಸೇರ್ತೀನಿ: ಸಚಿವ ಶಂಕರ್

    ಒಳ್ಳೆ ಮುಹೂರ್ತ ನೋಡ್ಕೊಂಡು ಕಾಂಗ್ರೆಸ್ ಸೇರ್ತೀನಿ: ಸಚಿವ ಶಂಕರ್

    ಕೊಪ್ಪಳ: ಒಳ್ಳೆಯ ಮುಹೂರ್ತವನ್ನು ನೋಡಿಕೊಂಡು ನಾನು ಸಹ ಕಾಂಗ್ರೆಸ್ ಪಕ್ಷವನ್ನು ಸೇರುತ್ತೇನೆ ಎಂದು ಅರಣ್ಯ ಇಲಾಖೆ ಸಚಿವ ಆರ್.ಶಂಕರ್ ಹೇಳಿದ್ದಾರೆ.

    ಹೌದು, ಕೆ.ಪಿ.ಜೆ.ಪಿ ಪಕ್ಷದಿಂದ ಆಯ್ಕೆಯಾಗಿದ್ದ ಶಂಕರ್ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಸದ್ಯ ಈಗ ಅವರು ನಾನು ಅಧಿಕೃತವಾಗಿ ಕಾಂಗ್ರೆಸ್ಸನ್ನು ಸೇರುತ್ತೇನೆ ಎಂದು ಹೇಳಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ರೀತಿಯ ಒತ್ತಡಗಳು ಕಾಂಗ್ರೆಸ್ಸಿನಿಂದ ಇಲ್ಲ. ನಾನು ಒಳ್ಳೆಯ ಮುಹೂರ್ತ ನೋಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿನಿ. ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು 5 ವರ್ಷ ಪೂರ್ಣಗೊಳಿಸುತ್ತದೆ. ನನ್ನ ಸಂಪೂರ್ಣ ಬೆಂಬಲ ಸಮ್ಮಿಶ್ರ ಸರ್ಕಾರಕ್ಕೆ ಇದೆ. ನನ್ನಿಂದ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಸದ್ಯ ಎಲ್ಲಾ ರೀತಿಯಿಂದಲು ಯೋಚನೆ ಮಾಡಿದ್ದು, ಶೀಘ್ರವೇ ಕಾಂಗ್ರೆಸ್ ಸೇರುತ್ತೇನೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ವಕ್ಷೇತ್ರದಲ್ಲೇ ಸಚಿವ ರೈಗೆ ವಿರೋಧ- ಕಾರ್ಯಕ್ರಮಕ್ಕೆ ತೆರಳಿದ್ದಾಗ ಮೋದಿ ಮೋದಿ ಅಂತ ಘೋಷಣೆ ಕೂಗಿದ ಜನ

    ಸ್ವಕ್ಷೇತ್ರದಲ್ಲೇ ಸಚಿವ ರೈಗೆ ವಿರೋಧ- ಕಾರ್ಯಕ್ರಮಕ್ಕೆ ತೆರಳಿದ್ದಾಗ ಮೋದಿ ಮೋದಿ ಅಂತ ಘೋಷಣೆ ಕೂಗಿದ ಜನ

    ಮಂಗಳೂರು: ಅರಣ್ಯ ಸಚಿವ ರಮಾನಾಥ ರೈಗೆ ಸ್ವಕ್ಷೇತ್ರದಲ್ಲಿಯೇ ವಿರೋಧ ಎದುರಾಗಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರೋಪಾಡಿಯಲ್ಲಿ ಕಾರ್ಯಕ್ರಮವೊಂದಕ್ಕೆ ರಮಾನಾಥ ರೈ ತೆರಳಿದ್ದಾಗ ಮೋದಿ, ಮೋದಿ ಘೋಷಣೆ ಮೊಳಗಿದೆ.

    ರೈ ಅವರನ್ನು ಅಡ್ಡಗಟ್ಟಿ ನೂರಾರು ಮಂದಿ ಘೋಷಣೆ ಕೂಗಿದ್ದಾರೆ. ಇದರಿಂದ ತೀವ್ರ ಮುಜುಗರಕ್ಕೆ ಒಳಗಾದ ಸಚಿವರು ಸ್ಥಳದಲ್ಲಿಯೇ ಮೌನವಾಗಿ ನಿಂತುಬಿಟ್ಟ ಪ್ರಸಂಗ ನಡೆಯಿತು. ಈ ವಿಡಿಯೋ ಈಗ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ.

    ಎರಡು ವರ್ಷಗಳ ಹಿಂದೆ ಕರೋಪಾಡಿ ಪಂಚಾಯತ್ ಉಪಾಧ್ಯಕ್ಷ ಕಾಂಗ್ರೆಸ್ ಮುಖಂಡ ಜಲೀಲ್ ಕರೋಪಾಡಿ ಕೊಲೆ ನಡೆದಿತ್ತು. ರಮಾನಾಥ ರೈ ಆಪ್ತನಾಗಿದ್ದ ಜಲೀಲ್ ಕೊಲೆ ಪ್ರಕರಣ ಸ್ಥಳೀಯವಾಗಿ ಕಾಂಗ್ರೆಸ್ ವಿರೋಧಿ ಧೋರಣೆಗೆ ಕಾರಣವಾಗಿದೆ ಎನ್ನಲಾಗಿದೆ.

    ಸಚಿವ ರಮಾನಾಥ ರೈ ನೈಜ ಆರೋಪಿಗಳನ್ನು ಪತ್ತೆಹಚ್ಚಲು ಸಹಕರಿಸಿಲ್ಲವೆಂಬ ಆರೋಪವೂ ಕೇಳಿಬಂದಿತ್ತು. ಸ್ಥಳೀಯ ಮುಸ್ಲಿಮರು ಕೂಡ ಅಂದು ರಮಾನಾಥ ರೈಗೆ ಘೆರಾವ್ ಹಾಕಿದ್ದರು. ಇದೀಗ ಖಾಸಗಿ ಕಾರ್ಯಕ್ರಮಕ್ಕೆಂದು ಆಗಮಿಸಿದ್ದ ರಮಾನಾಥ ರೈ ವಿರುದ್ಧ ಮೋದಿ ಘೋಷಣೆ ಕೇಳಿಬಂದಿದೆ.

    https://twitter.com/mac_thimmaiah/status/993395057355993088

  • ಬಯೋ ಪಾರ್ಕ್ ಉದ್ಘಾಟನೆಯಲ್ಲಿ ಸಚಿವ ರಮಾನಾಥ ರೈ ಮೇಲೆ ಹೆಜ್ಜೇನು ದಾಳಿ

    ಬಯೋ ಪಾರ್ಕ್ ಉದ್ಘಾಟನೆಯಲ್ಲಿ ಸಚಿವ ರಮಾನಾಥ ರೈ ಮೇಲೆ ಹೆಜ್ಜೇನು ದಾಳಿ

    ಬೆಳಗಾವಿ: ಅರಣ್ಯ ಸಚಿವ ರಮಾನಾಥ ರೈ ಮೇಲೆ ಹೆಜ್ಜೆನು ದಾಳಿ ಮಾಡಿದ್ದು, ಎದ್ನೋ ಬಿದ್ನೋ ಅಂತ ಓಡಿ ಹೋದ ಘಟನೆ ನಡೆದಿದೆ.

    ಬೆಳಗಾವಿಯ ಬಯೋ ಪಾರ್ಕ್ ಉದ್ಘಾಟನೆಗೆ ಸಚಿವ ರಮಾನಾಥ ರೈ, ಸಂಸದ ಸುರೇಶ್ ಅಂಗಡಿ ಸೇರಿದಂತೆ ಅರಣ್ಯ ಇಲಾಖೆಯ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದರು.

    ಸಮಾರಂಭದಲ್ಲಿ ಸುರೇಶ್ ಅಂಗಡಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ಹೆಜ್ಜೆನು ದಾಳಿ ನಡೆಸಿದೆ. ಡ್ರೋನ್ ಕ್ಯಾಮರಾ ಸದ್ದಿನಿಂದ ಮರದಲ್ಲಿ ಕುಳಿತಿದ್ದ ಹೆಜ್ಜೆನ್ನು ಸಮಾರಂಭದಲ್ಲಿ ಪಾಲ್ಗೊಂಡವರ ಮೇಲೆ ದಾಳಿ ನಡೆಸಿದೆ. ಹೀಗಾಗಿ ಏಕಾಏಕಿ ಸಚಿವ ರಮಾನಾಥ ರೈ ಸೇರಿ ಎಲ್ಲರೂ ಸಮಾರಂಭ ಬಿಟ್ಟು ಅರ್ಧದಲ್ಲಿ ಓಡಿ ಹೋಗಿದ್ದಾರೆ.

    ಘಟನೆಯಲ್ಲಿ 6ಕ್ಕೂ ಹೆಚ್ಚು ಜನರಿಗೆ ಹೆಜ್ಜೇನು ಕಡಿದು ಗಾಯವಾಗಿದೆ. ಗಾಯಾಳುಗಳಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಿಸಲಾಗಿದೆ.