Tag: Forest Officers

  • ಹುಲಿ ದಾಳಿಯ ಭೀತಿ; ಜಮೀನುಗಳಲ್ಲಿ ರೈತರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸೆಕ್ಯುರಿಟಿ

    ಹುಲಿ ದಾಳಿಯ ಭೀತಿ; ಜಮೀನುಗಳಲ್ಲಿ ರೈತರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸೆಕ್ಯುರಿಟಿ

    ಚಾಮರಾಜನಗರ: ಜಿಲ್ಲೆಯಲ್ಲಿ ಹುಲಿ ದಾಳಿಯ ಭೀತಿ ಎದುರಾಗಿದೆ. ಈ ಹಿನ್ನೆಲೆ ರೈತರ ಜಮೀನುಗಳಲ್ಲಿ ಅರಣ್ಯ ಇಲಾಖೆ ಸೆಕ್ಯುರಿಟಿ ವ್ಯವಸ್ಥೆ ಮಾಡುತ್ತಿದೆ.

    ಉಳುಮೆ ಮಾಡಲು, ಫಸಲು ಕೊಯ್ಲು ಮಾಡಲು, ಜಮೀನುಗಳಲ್ಲಿ ಕೆಲಸ ಮಾಡಲು ರೈತರಿಗೆ ಅರಣ್ಯ ಇಲಾಖೆಯಿಂದ ಸೆಕ್ಯುರಿಟಿ ಕೊಡಲಾಗಿದೆ. ಚಾಮರಾಜನಗರ ತಾಲೂಕು ಕಲ್ಪುರ ಸುತ್ತಮುತ್ತ ಭಾರಿ ಗಾತ್ರದ ಹುಲಿ ಕಾಣಿಸಿಕೊಂಡಿತ್ತು. ಈಗಾಗಲೇ ಎರಡು ಹಸುಗಳನ್ನು ಬಲಿ ಪಡೆದಿತ್ತು.

    ಜಮೀನುಗಳಿಗೆ ಹೋಗಲು ರೈತರು, ಕೃಷಿ ಕಾರ್ಮಿಕರ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಉಳುಮೆ ಮಾಡಲು, ಬೆಳೆ ಕೊಯ್ಲು ಮಾಡಲು ರೈತರಿಗೆ ಅರಣ್ಯ ಸಿಬ್ಬಂದಿ ಕಾವಲು ಮಾಡ್ತಿದ್ದಾರೆ. ಅರಣ್ಯ ಸಿಬ್ಬಂದಿಯ ಕಾವಲಿನಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿದೆ.

  • ಮರದ ಕೊಂಬೆ ಬಿದ್ದು ಯುವಕ ಸಾವು – ಮೂವರು ಬಿಬಿಎಂಪಿ ಅರಣ್ಯಾಧಿಕಾರಿಗಳ ವಿರುದ್ಧ FIR

    ಮರದ ಕೊಂಬೆ ಬಿದ್ದು ಯುವಕ ಸಾವು – ಮೂವರು ಬಿಬಿಎಂಪಿ ಅರಣ್ಯಾಧಿಕಾರಿಗಳ ವಿರುದ್ಧ FIR

    ಬೆಂಗಳೂರು: ಮರದ ಕೊಂಬೆ ಬಿದ್ದು ಯುವಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿಯ
    (BBMP) ಅರಣ್ಯಾಧಿಕಾರಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಬೆನಕ್ ರಾಜ್ ಎಂಬುವವರು ಹನುಮಂತ ನಗರ (Hanumant Nagar) ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಿಬಿಎಂಪಿಯ ಮೂವರು ಅರಣ್ಯಾಧಿಕಾರಿಗಳಾದ ಆರ್‌ಎಫ್‌ಓ, ಎಸಿಎಫ್, ಡಿಎಫ್‌ಓ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.ಇದನ್ನೂ ಓದಿ:KRS ಭರ್ತಿಗೆ 7 ಅಡಿಗಳಷ್ಟೇ ಬಾಕಿ

    ಅಧಿಕಾರಿಗಳ ನಿರ್ಲಕ್ಷ್ಯವೇ ಅಕ್ಷಯ್ ಸಾವಿಗೆ ಕಾರಣವಾಗಿದೆ. ಎ1 ಆರೋಪಿ ಆರ್‌ಎಫ್‌ಓ, ಎ2 ಆರೋಪಿ ಎಸಿಎಫ್, ಎ3 ಆರೋಪಿ ಡಿಎಫ್‌ಓ ಆಗಿದ್ದು, ಯುವಕನ ಸಾವಿಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಆರೋಪಿಗಳಾಗಿರುವ ಬಿಬಿಎಂಪಿ ಅರಣ್ಯಾಧಿಕಾರಿಗಳಿಗೆ ಕರೆದು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

    ಘಟನೆ ಏನು?
    ಇದೇ ಜೂ.15ರಂದು ಯುವಕ ಅಕ್ಷಯ್ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ (Basavanagudi) ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು.

    ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದರುವ ಖಾಸಗಿ ಕಂಪನಿಯೊಂದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ಮರದ ಕೊಂಬೆ ಬಿದ್ದು ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿತ್ತು. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿತ್ತು. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು. ಎರಡು ದಿನದ ಹಿಂದೆಯಷ್ಟೇ ಅಕ್ಷಯ್ ಬ್ರೈನ್ ಡೆಡ್ ಆಗಿದೆ ಎಂದಿದ್ದರು. ಆದರೆ ಜೂ.19ರ ಮಧ್ಯಾಹ್ನ 1 ಗಂಟೆಗೆ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದರು.ಇದನ್ನೂ ಓದಿ: Air India Crash | 215 ಡಿಎನ್‌ಎ ಮ್ಯಾಚ್‌ – 198 ಮೃತದೇಹ ಹಸ್ತಾಂತರ

  • ಚಿಕ್ಕಮಗಳೂರು | ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ

    ಚಿಕ್ಕಮಗಳೂರು | ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ

    ಚಿಕ್ಕಮಗಳೂರು: ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ (Kalasa) ತಾಲೂಕಿನ ಹೊರನಾಡು (Horanadu) ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ನಡೆದಿದೆ.

    ಮಂಗಳವಾರ ಸಂಜೆ ಕಾಡಿಗೆ ಬೆಂಕಿ ಹಬ್ಬಿದ್ದು ನೋಡನೋಡ್ತಿದ್ದಂತೆ ಅರಣ್ಯ ಹೊತ್ತಿ ಉರಿದಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರೂ ಗಾಳಿಗೆ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚುತ್ತಲೇ ಇತ್ತು. ಇದನ್ನೂ ಓದಿ: ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

    ಕಳಸ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಮುಗಿಲೆತ್ತರದ ಬೆಟ್ಟಗುಡ್ಡಗಳಲ್ಲಿ ಬೆಂಕಿ ಬಿದ್ದ ಪರಿಣಾಮ ಗಾಳಿಯ ವೇಗಕ್ಕೆ ಬೆಂಕಿ ಒಂದು ಗುಡ್ಡದಿಂದ ಮತ್ತೊಂದು ಗುಡ್ಡಕ್ಕೆ ಹಬ್ಬಿದ್ದು ಅರಣ್ಯ ಇಲಾಖೆಗೆ ಬೆಂಕಿ ನಂದಿಸುವುದು ಸವಾಲಾಗಿತ್ತು. ಇದನ್ನೂ ಓದಿ: ಮೊನಾಲಿಸಾ ಸಿನಿಮಾ ವಿವಾದ – ಐವರ ವಿರುದ್ಧ ಬಿತ್ತು ಕೇಸ್‌

    ಕೊನೆಗೂ ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಜೊತೆ ಸಸ್ಯಸಂಪತ್ತು ನಾಶವಾಗಿರುವ ಜೊತೆಗೆ ಪ್ರಾಣಿ-ಪಕ್ಷಿಗಳು ಕೂಡ ಸುಟ್ಟುಕರಕಲಾಗಿವೆ. ಇದನ್ನೂ ಓದಿ: 300 ಮಕ್ಕಳ ಮೇಲೆ ವೈದ್ಯನಿಂದ ರೇಪ್ – ನಾನು `ಶಿಶುಕಾಮಿ’ ಎಂದು ತಪ್ಪೊಪ್ಪಿಕೊಂಡ ಆರೋಪಿ

  • ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ಜಪ್ತಿ – ಓರ್ವ ಬಂಧನ

    ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ಜಪ್ತಿ – ಓರ್ವ ಬಂಧನ

    ಬೀದರ್: ಜಿಲ್ಲೆಯ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ನಡೆದಿದೆ.

    ಆರೋಪಿಯನ್ನು ತೆಲಂಗಾಣ ಮೂಲದ ಪಿ.ಕೆ ಭದ್ರುಧಿನ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕಾಲಿಗೆ ಕೋಳ, ಪ್ರತಿನಿತ್ಯ ಚಿತ್ರಹಿಂಸೆ – ಜೀತ ಪದ್ಧತಿಯ ಪ್ರತ್ಯಕ್ಷ ವರದಿ; ʻಪಬ್ಲಿಕ್‌ʼ ವರದಿ ಬೆನ್ನಲ್ಲೇ ಕಾರ್ಮಿಕರ ರಕ್ಷಣೆ!

    ಗೂಡ್ಸ್ ವಾಹನದಲ್ಲಿ ಶ್ರೀಗಂಧವನ್ನು ಅಕ್ರಮವಾಗಿ ನೆರೆಯ ತೆಲಂಗಾಣದಿಂದ ಮಹಾರಾಷ್ಟ್ರದ ಮುಂಬೈ ನಗರಕ್ಕೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದು, ಬರೋಬ್ಬರಿ 16 ಲಕ್ಷ ಮೌಲ್ಯದ ಒಂದು ಕ್ವಿಂಟಾಲ್ ಶ್ರೀಗಂಧದ ತುಂಡುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

    ಬಸವಕಲ್ಯಾಣ ನಗರ ಠಾಣೆಯ ಪಿಎಸ್‌ಐ ಅಂಬರೀಶ್ ಹಾಗೂ ಅರಣ್ಯಾಧಿಕಾರಿ ಮಹೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ರಕ್ತ ಚಂದನದ ಜೊತೆಗೆ ಅಕ್ರಮವಾಗಿ ಶ್ರೀಗಂಧ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿರಿಸಿದ್ದು, ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಇರ್ತಾರೋ ಇರಲ್ವೋ ಗೊತ್ತಿಲ್ಲ: ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್ ಹೊಸ ಬಾಂಬ್

  • ದೇವಾಲಯ ಸುತ್ತ ಬೇಲಿ ಹಾಕಲು ಬಂದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

    ದೇವಾಲಯ ಸುತ್ತ ಬೇಲಿ ಹಾಕಲು ಬಂದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

    ಚಾಮರಾಜನಗರ: ದೇವಾಲಯದ ಸುತ್ತ ಬೇಲಿ ಹಾಕಲು ಬಂದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಚಳಿ ಬಿಡಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

    ಕೊಳ್ಳೇಗಾಲ ತಾಲೂಕಿನ ಅರೆ ಪಾಳ್ಯದಲ್ಲಿ ಘಟನೆ ನಡೆದಿದೆ. ಇಲ್ಲಿ 100 ವರ್ಷಕ್ಕೂ ಅಧಿಕ ಇತಿಹಾಸವುಳ್ಳ ಮಹದೇಶ್ವರ ದೇವಾಲಯವಿದೆ.

    ಅರಣ್ಯ ಇಲಾಖೆ ಭೂಮಿಯಲ್ಲಿ ದೇವಾಲಯವಿದೆ ಎಂದು ಅರಣ್ಯಾಧಿಕಾರಿಗಳು ಬೇಲಿ ಹಾಕಲು ಬಂದಿದ್ದರು. ಹೊನ್ನಹುಂಡಿ ಮಹದೇಶ್ವರ ದೇವಾಲಯ ಸುತ್ತ ಗುಂಡಿ ತೆಗೆದಿದ್ದರು. ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ತಡರಾತ್ರಿ ಬೇಲಿ ಹಾಕಲು ಬಂದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಸ್ಥರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳದಿಂದ ವಾಪಸ್ ತೆರಳಿದ್ದಾರೆ.

  • ಪುರುಷತ್ವ ಹೆಚ್ಚಿಸುವ ಔಷಧಕ್ಕಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

    ಪುರುಷತ್ವ ಹೆಚ್ಚಿಸುವ ಔಷಧಕ್ಕಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

    ಬೆಳಗಾವಿ: ಅಕ್ರಮವಾಗಿ ಚೀನಾಗೆ (China) ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖೆಡ್ಡಾಗೆ ಬೀಳಿಸಿರುವ ಭರ್ಜರಿ ಕಾರ್ಯಾಚರಣೆ ಜಿಲ್ಲೆಯ ಖಾನಾಪುರ (Khanapur) ಅರಣ್ಯದಲ್ಲಿ ನಡೆದಿದೆ.

    ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಅರೆಸ್ಟ್ ಮಾಡಿದ್ದಾರೆ.ಇದನ್ನೂ ಓದಿ: ಈ ಮೈಸೂರು ದಸರಾದ ಗಜಪಡೆ – ಅಭಿಮನ್ಯು & ಟೀಂ ಬಗ್ಗೆ ಇಲ್ಲಿದೆ ಫುಲ್‌ ಡಿಟೇಲ್ಸ್‌

    ನಾಲ್ಕು ಜನ ಆರೋಪಿಗಳು ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವಾಗ ಕಂಡು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರು ವರ್ಷದ ನಾಲ್ಕೂವರೆ ಕೆಜಿ ತೂಕದ ಜೀವಂತ ಚಿಪ್ಪು ಹಂದಿಯನ್ನು ಅಧಿಕಾರಗಳು ವಶಕ್ಕೆ ಪಡೆದಿದ್ದಾರೆ.

    ಖಾನಾಪುರ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಮಾತನಾಡಿ, ಚಿಪ್ಪು ಹಂದಿಯನ್ನು ಪುರುಷತ್ವ ಹೆಚ್ಚಿಸುವ ಔಷಧ ತಯಾರಿಕೆಗಾಗಿ ಬಳಸಲಾಗುತ್ತದೆ. ಇದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬಲು ಬೇಡಿಕೆ ಇದೆ. ಖಾನಾಪುರದಿಂದ ಚೀನಾವರೆಗೂ ಚಿಪ್ಪು ಹಂದಿಯನ್ನು ಸಾಗಾಟ ಮಾಡುತ್ತಿದ್ದು, ಸಾಗಾಟ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದರು.

    ಖಾನಾಪುರದಿಂದ ಕಾರವಾರಕ್ಕೆ (Karwar) ಕಳಿಸಿ ಅಲ್ಲಿಂದ ಬೋಟ್ ಮೂಲಕ ಕೋಲ್ಕತ್ತಾಗೆ (Kolkatta) ಸಾಗಿಸುತ್ತಾರೆ. ಬಳಿಕ ಹಡಗಿನಲ್ಲಿ ಚೀನಾಕ್ಕೆ ಸಾಗಾಟ ಮಾಡುತ್ತಿದ್ದರು. ಸದ್ಯ ಚಿಪ್ಪು ಹಂದಿ ಸಾಗಾಟ ತಂಡದ ಶೋಧಕ್ಕಾಗಿ ಅಧಿಕಾರಿಗಳು ಬೆನ್ನು ಬಿದ್ದಿದ್ದಾರೆ. ಒಂದು ಪ್ರತ್ಯೇಕ ತಂಡ ರಚಸಿ ಕಳ್ಳಸಾಕಾಣೆ ತಂಡದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನವರಾತ್ರಿ ವಿಶೇಷ – 1 | ಕೋಲ್ಕತ್ತಾದ ಕುರ್ಮಾತುಲಿ ಪಾರ್ಕ್‌ ದುರ್ಗಾ ಪೆಂಡಾಲ್‌ ಮಹತ್ವದ ನಿಮಗೆ ಗೊತ್ತೆ?

  • ಮಹಿಳೆ ಬಲಿ ಪಡೆದಿದ್ದ ಹುಲಿ ಸೆರೆ

    ಮಹಿಳೆ ಬಲಿ ಪಡೆದಿದ್ದ ಹುಲಿ ಸೆರೆ

    ಚಾಮರಾಜನಗರ: ಹುಲಿ (Tiger) ದಾಳಿಗೆ ಮಹಿಳೆ (Woman) ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರದ (Bandipur) ಅರಣ್ಯಾಧಿಕಾರಿಗಳು ಮಿಡ್‌ನೈಟ್ ಆಪರೇಷನ್ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.

    ಸೆರೆಸಿಕ್ಕ ಹುಲಿ ಮಹಿಳೆಯ ಮೇಲೆ ದಾಳಿ ನಡೆಸಿ ಆಕೆಯನ್ನು ಬಲಿ ಪಡೆದಿತ್ತು. ಮಹಿಳೆ ಮಾತ್ರವಲ್ಲದೇ ಈ ಹುಲಿ ಎರಡು ಜಾನುವಾರುಗಳನ್ನೂ ಕೊಂದಿತ್ತು. ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳ ಸಭೆ ನಡೆಸಿ ಶೀಘ್ರವೇ ಹುಲಿ ಸೆರೆಗೆ ಸೂಚಿಸಿದ್ದರು. ಇದೀಗ ಬಂಡೀಪುರದ ಅರಣ್ಯಾಧಿಕಾರಿಗಳ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಹುಲಿಯನ್ನು ರಾತ್ರಿ ಕಾರ್ಯಾಚರಣೆ ಮೂಲಕ ಸೆರೆಹಿಡಿದಿದ್ದಾರೆ. ಇದನ್ನೂ ಓದಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ಈ ಹುಲಿ ಮೈಸೂರು (Mysuru) ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಬಳ್ಳೂರ್ ಹುಂಡಿ ಬಳಿ ಮಹಿಳೆಯೊಬ್ಬರನ್ನು ಬಲಿ ಪಡೆದಿತ್ತು. ರಾತ್ರಿ 2 ಗಂಟೆ ಸಮಯದಲ್ಲಿ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದಿದ್ದಾರೆ. ಸುಮಾರು 10 ವರ್ಷ ವಯಸ್ಸಿನ ಹುಲಿ ಸೆರೆಯಾಗಿದೆ. ಜಾನುವಾರು ಮಾಂಸ ತಿನ್ನಲು ಕಳೆದ ಎರಡು ದಿನದಿಂದ ಜಾನುವಾರು ಸತ್ತ ಸ್ಥಳದ ಬಳಿ ಹುಲಿಯ ಚಲನವಲನ ಪತ್ತೆಯಾಗಿತ್ತು. ಕ್ಯಾಮೆರಾ ಟ್ರ್ಯಾಪ್‌ನಲ್ಲೂ ಹುಲಿಯ ಚಲನವಲನ ಪತ್ತೆಯಾಗಿತ್ತು. ರಾತ್ರಿ ಬೋನಿನೊಳಗೆ ಸಿಬ್ಬಂದಿ ಇರಿಸಿ, ಮರೆಮಾಚಿ ನೈಟ್ ಆಪರೇಷನ್ ಮಾಡಲಾಗಿದೆ. ಪಶುವೈದ್ಯ ವಾಸೀಂ ಮಿರ್ಜಾ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಬೋನಿನೊಳಗೆ ಇರಿಸಿದ್ದರು. ರಾತ್ರಿ ಜಾನುವಾರು ಕೊಂದ ಸ್ಥಳಕ್ಕೆ ಮಾಂಸ ತಿನ್ನಲು ಹುಲಿ ಬಂದ ವೇಳೆ ವೈದ್ಯರು ಬೋನಿನಲ್ಲೇ ಕುಳಿತು ಅರವಳಿಕೆ ಚುಚ್ಚುಮದ್ದು ಕೊಟ್ಟಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್

    ಜನರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಹುಲಿ ಸೆರೆಗೆ 200 ಸಿಬ್ಬಂದಿ, 3 ಆನೆ, ಕ್ಯಾಮೆರಾ ಟ್ರ‍್ಯಾಪ್, ಡ್ರೋನ್ ಬಳಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಡೀಪುರ ಅರಣ್ಯದ ಹೆಡಿಯಾಲ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಹುಲಿ ಸೆರೆಯಿಂದ ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಹಿಡಿದ ಹುಲಿಯನ್ನು ಅಧಿಕಾರಿಗಳು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಬಿಟ್ಟಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ರೇಪ್ ಮಾಡಲು ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ 40 ವರ್ಷ ಜೈಲು ಶಿಕ್ಷೆ

  • ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

    ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

    ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ (Tiger Claw Pendent) ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ, ರಾಷ್ಟ್ರಪಕ್ಷಿ ನವಿಲು (Peacock) ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಿದ ಘಟನೆ ತುಮಕೂರಿನ (Tumakuru) ಮಾರನಾಯಕನಪಾಳ್ಯದಲ್ಲಿ (Maranayakanapalya) ನಡೆದಿದೆ.

    ಒಡಿಶಾ (Odisha) ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಹಲವು ದಿನಗಳಿಂದ ಆರೋಪಿಗಳು ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ- ಕೊಲೆ ಶಂಕೆ

    ದಾಳಿಯ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು ಮತ್ತು ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನು ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ (FSL) ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಹರೀಶ್ ಪೂಂಜಾ

    ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಹರೀಶ್ ಪೂಂಜಾ

    ಮಂಗಳೂರು: ಅರಣ್ಯಾಧಿಕಾರಿ ನೀಡಿದ ದೂರಿನ ಮೇರೆಗೆ ಹರೀಶ್ ಪೂಂಜಾ (Harish Poonja) ಮೇಲೆ ಎಫ್‍ಐಆರ್ ದಾಖಲಾಗಿದ್ದು, ಇದೀಗ ಶಾಸಕರು ಬಂಧನದ ಭೀತಿಯಲ್ಲಿದ್ದಾರೆ. ಈ ಬೆನ್ನಲ್ಲೇ ಶಾಸಕರು ಫೇಸ್‍ಬುಕ್‍ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ ಎಂದು ತಿಳಿಸಿದ್ದಾರೆ.

    ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ಧ. ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದು ಶಾಸಕರು ಹೇಳಿದ್ದಾರೆ. ಇದನ್ನೂ ಓದಿ: ಅರಣ್ಯಾಧಿಕಾರಿಗಳ ಎದುರೇ ಮನೆ ನಿರ್ಮಾಣಕ್ಕೆ ಸೂಚನೆ ಕೊಟ್ಟ ಶಾಸಕ

    ಪೋಸ್ಟ್ ನಲ್ಲಿ ಏನಿದೆ..?: ನೋಡೇ ಬಿಡೋಣ. ನಾನು ಶಾಸಕನಾಗಿರುವುದು ನನ್ನ ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧ. ಬಾಲ್ಯದಿಂದಲೂ ಸುಭಾಷ್ ಚಂದ್ರ ಬೋಸ್, ಸರ್ದಾರ್ ಪಟೇಲ್, ವೀರ ಸಾವರ್ಕರ್, ಭಗತ್ ಸಿಂಗ್ ಮುಂತಾದವರನ್ನು ಆದರ್ಶವಾಗಿ ಇಟ್ಟುಕೊಂಡು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಂಃಗಿP) ದಿನಗಳಿಂದ ಜನ ಸೇವೆ, ಜನರಿಗಾಗಿ ಸಂಘರ್ಷ ಮಾಡಿಕೊಂಡು ನಾಯಕನಾದವನು. ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ಧ.

    ನನ್ನ ವಿಧಾನಸಭಾ ಕ್ಷೇತ್ರದಲ್ಲಿ, ಅರಣ್ಯದ ಅಂಚಿನಲ್ಲಿ, ನೂರು ವರ್ಷಕ್ಕಿಂತಲೂ ಹಿಂದಿನಿಂದ ಕೃಷಿ ಚಟುವಟಿಕೆ ಮಾಡುತ್ತಾ ಬಂದಿದ್ದ ಕಳೆಂಜದ ಶ್ರೀ ದೇವಣ್ಣ ಗೌಡ ಅವರ ಕುಟುಂಬವನ್ನು ಒಕ್ಕಲೆಬ್ಬಿಸಲು ಯತ್ನಿಸಿದ ಅರಣ್ಯ ಇಲಾಖೆಯ ವಿರುದ್ಧ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಶಾಸಕ ಮಿತ್ರರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸೇರಿ ಪ್ರತಿಭಟಿಸಿ ಬಡ ಕುಟುಂಬವನ್ನು ಒಕ್ಕಲೆಬ್ಬಿಸುವುದರಿಂದ ತಡೆದಿದ್ದೆವು.

    ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮನೆಯವರ ಪರವಾಗಿ ನಾನೊಬ್ಬ ಜನಪ್ರತಿನಿಧಿಯಾಗಿ ಧ್ವನಿ ಎತ್ತಿದ್ದು ತಪ್ಪಾಯಿತೇ? ನನ್ನ ಕ್ಷೇತ್ರದ ಜನರ ಪರವಾಗಿ ಹೋರಾಡುವ ಹಕ್ಕು ನನಗಿಲ್ಲವೇ? ನನ್ನ ಜನ ನನ್ನಲ್ಲಿ ಸಮಸ್ಯೆ ಹೇಳಿಕೊಂಡಾಗ ಸುಮ್ಮನಿರಬೇಕೆ? ಹೀಗಾದರೆ ಸಾಮಾನ್ಯ ಜನರ ಗತಿಯೇನು? ಜನರ ಸಮಸ್ಯೆಗೆ ಧ್ವನಿಯಾದ ಒಬ್ಬ ಜನಪ್ರತಿನಿಧಿಯನ್ನು ಹೀಗೆಲ್ಲ ಕಾಡುವುದಾದರೆ ಜನಸಾಮಾನ್ಯರು ಕಾಂಗ್ರೆಸ್ ಸರ್ಕಾರದಡಿಯಲ್ಲಿ ಹೇಗೆ ಬದುಕಬೇಕು? ಮಾನ್ಯ ಮುಖ್ಯಮಂತ್ರಿಗಳೇ, ಅರಣ್ಯ ಸಚಿವರೇ ನಿಮ್ಮ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ.

    ಏನಿದು ಘಟನೆ..?: ಕೆಲ ದಿನಗಳ ಹಿಂದೆ ಅಂದರೆ ಅ. 8ರಂದು ಚಾರ್ಮಾಡಿ ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ‘ಲೋಫರ್ ನನ್ ಮಗ’ ಅಂತಾ ಶಾಸಕರು ಬೈದಿದ್ದಾರೆ. ಇದರಿಂದ ಬೇಸರಗೊಂಡ ಅರಣ್ಯಾಧಿಕಾರಿ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಐಪಿಸಿ 1860(ಯು/ಎಸ್-143, 353, 504, 149) ಅಡಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಕ್ಕಿ, ಬೆಲ್ಲ, ತರಕಾರಿ ಕದ್ದು ಮೇಯೋ ಸಲಗ – ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ

    ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಅಕ್ಕಿ, ಬೆಲ್ಲ, ತರಕಾರಿ ಕದ್ದು ಮೇಯೋ ಸಲಗ – ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ

    ಚಾಮರಾಜನಗರ: ಬಂಡೀಪುರ ಅರಣ್ಯದಂಚಿನಲ್ಲಿ ಕಾಡಾನೆ (Elephant) ಪುಂಡಾಟ ಜೋರಾಗಿದೆ. ಪುಂಡಾನೆ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.

    ಗುಂಡ್ಲುಪೇಟೆ ತಾಲೂಕು ಹುಂಡೀಪುರ, ಮಂಗಲ, ಜಕ್ಕಳ್ಳಿ, ಎಲಚೆಟ್ಟಿ ಸೇರಿದಂತೆ ಹಲವೆಡೆ ಕಾಡಾನೆ ಉಪಟಳ ಹೆಚ್ಚಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ ಮೂರು ರಾಜ್ಯಗಳಲ್ಲಿಯೂ ಆನೆಗಳು ಸಂಚರಿಸಿ ಬೆಳೆ ನಾಶ, ಸೋಲಾರ್ ಬೇಲಿ ತಂತಿ ತುಳಿದು ಹಾನಿ ಮಾಡಿವೆ. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಒಂಟಿ ಸಲಗ ಅಕ್ಕಿ, ಬೆಲ್ಲ ತರಕಾರಿ ಕದ್ದು ಮೇಯುತ್ತಿದೆ.

    ಕಳೆದ 5 ತಿಂಗಳಿಂದ ನಿರಂತರವಾಗಿ ಉಪಟಳ ನೀಡುತ್ತಿರುವ ಒಂಟಿ ಆನೆಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. 5 ಸಾಕಾನೆಗಳಿಂದ ಪುಂಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ದುಬಾರೆ, ರಾಮಾಪುರ ಬಿಳಿಗಿರಿರಂಗನ ಬೆಟ್ಟದಿಂದ ಸಾಕಾನೆಗಳನ್ನು ಕರೆತರಲಾಗಿದೆ. ಇದನ್ನೂ ಓದಿ: ರಿಮ್ಸ್ ಆಸ್ಪತ್ರೆಯಲ್ಲಿ ಮಂಗಗಳ ಕಾಟ – ಹೈರಾಣಾದ ಒಳರೋಗಿಗಳು

    ಈಗಾಗಲೇ ಡ್ರೋನ್ ಕಾರ್ಯಾಚರಣೆ ಮೂಲಕ ಪುಂಡಾನೆ ಪತ್ತೆಹಚ್ಚಲಾಗಿದೆ. ಎಲಚೆಟ್ಟಿ ಬಳಿ ಒಂಟಿ ಸಲಗದ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಅರಣ್ಯ ಸಿಬ್ಬಂದಿ ಪುಂಡಾನೆ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: 50 ಅಡಿ ಬ್ರಿಡ್ಜ್ ಮೇಲಿಂದ ಉರುಳಿ ಬಿದ್ದ ಕ್ಯಾಂಟರ್ – ಪವಾಡಸದೃಶವಾಗಿ ಬದುಕುಳಿದ ಚಾಲಕ