Tag: Forest Officers

  • ಮೃತ ಬೇಟೆಗಾರನ ಬಳಿ ಜಿಂಕೆ, ಗನ್ ಸಿಕ್ಕಿದೆ, ಪರಮಾತ್ಮನಿಂದಲೇ ಶಿಕ್ಷೆಯಾಗಿದೆ: ಸೋಮಣ್ಣ

    ಮೃತ ಬೇಟೆಗಾರನ ಬಳಿ ಜಿಂಕೆ, ಗನ್ ಸಿಕ್ಕಿದೆ, ಪರಮಾತ್ಮನಿಂದಲೇ ಶಿಕ್ಷೆಯಾಗಿದೆ: ಸೋಮಣ್ಣ

    ಚಾಮರಾಜನಗರ: ಕಾವೇರಿ ನದಿಯಲ್ಲಿ (Kaveri River) ಶವವಾಗಿ ಸಿಕ್ಕ ತಮಿಳುನಾಡು (Tamil Nadu) ಬೇಟೆಗಾರ ಕರ್ನಾಟಕ (Karnataka) ಅರಣ್ಯ ಸಿಬ್ಬಂದಿಯ ಗುಂಡಿಗೆ ಬಲಿಯಾಗಿದ್ದಾನೆ ಎಂಬ ಆರೋಪವನ್ನು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ (V Somanna) ನಿರಾಕರಿಸಿದರು.

    ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಆತನ ಶವವನ್ನು ತಮಿಳುನಾಡಿನವರೇ ಮರಣೋತ್ತರ ಪರೀಕ್ಷೆ ಕೊಂಡೊಯ್ದಿದ್ದು, ವರದಿ ಬಂದ ನಂತರ ಸತ್ಯಾಂಶ ಏನೆಂದು ಗೊತ್ತಾಗಲಿದೆ. ಆತನ ಬಳಿ ಜಿಂಕೆ ಶವ ಹಾಗೂ ಗನ್ ಸಿಕ್ಕಿದೆ. ಏಳೆಂಟು ವರ್ಷಗಳ ಹಿಂದೆಯೂ ಇಲ್ಲೇ ಬೇಟೆಯಾಡಲು ಬಂದು ಸಿಕ್ಕಿಬಿದ್ದಿದ್ದ. ಆತ ಮಾಡಿದ ತಪ್ಪಿಗೆ ಪರಮಾತ್ಮನಿಂದ ಶಿಕ್ಷೆಯಾಗಿದೆ ಎಂದರು.

    ಮೀನು ಹಿಡಿಯಲು ಸಾವಿರಾರು ಜನ ಬರುತ್ತಾರೆ. ಯಾವ ಮೀನುಗಾರನಿಗೂ ಅನಾನುಕೂಲವಾಗಿಲ್ಲ. ಆತ ಮೀನುಗಾರನಾಗಿದ್ದರೆ ಮರಣೋತ್ತರ ವರದಿ ಬಂದ ನಂತರ ಸತ್ಯಾಂಶ ಗೊತ್ತಾಗಲಿದೆ. ಆತ ಅಮಾಯಕನಾಗಿದ್ದರೆ ಎರಡು ರಾಜ್ಯಗಳ ಅಧಿಕಾರಿಗಳ ಜೊತೆ ಚರ್ಚಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಸಿಎಂ ಮಾಡ್ಬೇಕು: ಭೈರತಿ ಸುರೇಶ್

    ಘಟನೆಯೇನು?: ಚಾಮರಾಜನಗರ (Chamarajanagar) ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿಭಾಗವಾದ ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯದಲ್ಲಿ ತಮಿಳುನಾಡಿನ ಬೇಟೆಗಾರರು ಹಾಗೂ ಕರ್ನಾಟಕ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿ, ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಕಂಡು ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಅರಣ್ಯ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಬೇಟೆಗಾರ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ, ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಒಬ್ಬ ಬೇಟೆಗಾರ ಸಾವು?

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅರಣ್ಯ ಇಲಾಖೆ ಸಿಬ್ಬಂದಿ, ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಒಬ್ಬ ಬೇಟೆಗಾರ ಸಾವು?

    ಅರಣ್ಯ ಇಲಾಖೆ ಸಿಬ್ಬಂದಿ, ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಒಬ್ಬ ಬೇಟೆಗಾರ ಸಾವು?

    ಚಾಮರಾಜನಗರ: ತಮಿಳುನಾಡು (Tamil Nadu) ಬೇಟೆಗಾರರು (Hunters) ಹಾಗೂ ಕರ್ನಾಟಕ (Karnataka) ಅರಣ್ಯ ಸಿಬ್ಬಂದಿ (Forest Officers) ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಬೇಟೆಗಾರನೊಬ್ಬ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

    ಚಾಮರಾಜನಗರ (Chamarajanagar) ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿಭಾಗವಾದ ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯದಲ್ಲಿ ತಮಿಳುನಾಡಿನ ಬೇಟೆಗಾರರು ಹಾಗೂ ಕರ್ನಾಟಕ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿ, ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಕಂಡು ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಅರಣ್ಯ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಎಣ್ಣೆ ಬೇಗ ಕೊಡದಿದ್ದಕ್ಕೆ ಬಾರ್ ಹುಡುಗನ ಮೇಲೆ ಹಲ್ಲೆ- 23 ದಿನಗಳ ಬಳಿಕ ಸಾವು

    ಘಟನೆಯಲ್ಲಿ ಓರ್ವ ಬೇಟೆಗಾರ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಾವೇರಿ ನದಿಯಲ್ಲಿ ತಮಿಳುನಾಡು ಮೂಲದ ರಾಜು ಎಂಬವರ ಶವ ಪತ್ತೆಯಾಗಿದೆ. ಆ ವ್ಯಕ್ತಿಯ ವೈಯಕ್ತಿಕ ಮಾಹಿತಿ ಲಭ್ಯವಾಗಿಲ್ಲ. ಘಟನೆ ಬಗ್ಗೆ ಅರಣ್ಯಾಧಿಕಾರಿಗಳಿಂದ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

    ಅದೃಷ್ಟವಶಾತ್ ಗುಂಡಿನ ದಾಳಿ ವೇಳೆ ಅರಣ್ಯ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಈ ಬಗ್ಗೆ ಮಹದೇಶ್ವರ ಬೆಟ್ಟದ ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆ – ಗೋ ರಕ್ಷಕರ ವಿರುದ್ಧ ಪ್ರಕರಣ ದಾಖಲು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಿಂಕೆ ಮಾಂಸ ಮಾರಲು ಯತ್ನಿಸಿದ ಆರೋಪಿಗಳು ಅರೆಸ್ಟ್

    ಜಿಂಕೆ ಮಾಂಸ ಮಾರಲು ಯತ್ನಿಸಿದ ಆರೋಪಿಗಳು ಅರೆಸ್ಟ್

    ತುಮಕೂರು: ಜಿಂಕೆ ಮಾಂಸ ಮಾರಲು ಯತ್ನಿಸಿದ ಆರೋಪಿಗಳು ಅರಣ್ಯಾಧಿಕಾರಿಗಳನ್ನು ಕಂಡು ಪರಾರಿಯಾಗುವಾಗ ಬಂಧನಕ್ಕೊಳಗಾದ ಘಟನೆ ಮಧುಗಿರಿ ತಾಲೂಕಿನ ತಿಪ್ಪಾಪುರದಲ್ಲಿ ನಡೆದಿದೆ.

    ಬ್ರಹ್ಮದೇವರಹಳ್ಳಿಯ ಶಿವಕುಮಾರ್, ಚಿನ್ನೇನಹಳ್ಳಿಯ ಆದರ್ಶ ಬಂಧಿತ ಆರೋಪಿಗಳು. ಇಬ್ಬರು ವ್ಯಕ್ತಿಗಳು ಬೈಕ್‍ನಲ್ಲಿ ಜಿಂಕೆ ಮಾಂಸ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಖದೀಮರು ತಿಪ್ಪಾಪುರ ಗ್ರಾಮದ ಬಳಿ ಗಂಡು ಜಿಂಕೆಯೊಂದನ್ನು ಬೇಟೆಯಾಡಿದ್ದರು. ಈ ವೇಳೆ 5 ಕೆ.ಜಿ. ಜಿಂಕೆ ಮಾಂಸವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ. ಇದನ್ನೂ ಓದಿ: ಪತ್ನಿ ಬಿಟ್ಟು ಪ್ರೇಯಸಿಯನ್ನು ಮದುವೆಯಾಗಲು ಹೊರಟಿದ್ದ ಭೂಪ – ಕುಟುಂಬಸ್ಥರಿಂದಲೇ ಬಿತ್ತು ಗೂಸಾ

    ಆರೋಪಿಗಳು ಬೇಟೆಯಾಡಲು ಬಳಸುತ್ತಿದ್ದ ವಸ್ತುಗಳು ಸೇರಿ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

  • ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಶೇ. 30 ಅರಣ್ಯ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚನೆ

    ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಶೇ. 30 ಅರಣ್ಯ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚನೆ

    ಬೆಳಗಾವಿ: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಶೇ. 3೦ರಷ್ಟು ಅರಣ್ಯ ನಿರ್ಮಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಅರಣ್ಯ ಸಚಿವ ಉಮೇಶ್ ಕತ್ತಿ ಸೂಚನೆ ನೀಡಿದ್ದಾರೆ‌.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಒಂದು ವೇಳೆ ಅರಣ್ಯ ನಿರ್ಮಿಸಲು ಭೂಮಿ ಇಲ್ಲದ ಜಿಲ್ಲೆಗಳು ಸಂಬಂಧಪಟ್ಟ ಕಂದಾಯ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಸೇರಿದಂತೆ ಬೇರೆ ಇಲಾಖೆಗೆ ಒಳಪಡುವ ಭೂಮಿಯನ್ನು ಅರಣ್ಯ ಇಲಾಖೆಗೆ ವಿಲೀನ ಮಾಡದೆಯೇ ಆ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಗಿಡಗಳನ್ನು ಬೆಳೆಸಿ ಎಂದು ಅರಣ್ಯಾಧಿಕಾರಿಗಳಿಗೆ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ನಾಗರಹಾವಿನೊಂದಿಗೆ ಹುಡುಗಾಟವಾಡಿ ಮಸಣ ಸೇರಿದ ವೃದ್ಧ

    ರಾಜ್ಯದ ಅರಣ್ಯ ಭೂಮಿಯನ್ನು ರಕ್ಷಿಸುವುದರ ಜೊತೆಗೆ ವರ್ಷದಿಂದ ವರ್ಷಕ್ಕೆ ಉತ್ತಮ ಪರಿಸರ ನಿರ್ಮಾಣ ಮಾಡುವುದು ಅರಣ್ಯ ಇಲಾಖೆಯ ಕರ್ತವ್ಯವಾಗಿದೆ. ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೇ. 70 ರಷ್ಟು ಅರಣ್ಯ ಇದೆ‌. ಆದರೆ ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಶೇ. 10 ಕ್ಕಿಂತಲೂ ಕಡಿಮೆ ಅರಣ್ಯ ಭೂಮಿ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ- ತಾಯಿ, ಮರಿಯಾನೆಗಳು ಸಾವು

    ಕಡಿಮೆ ಅರಣ್ಯ ಇರುವ ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯವಾಗುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಹಾಗಾಗಿ ಅರಣ್ಯ ಇಲಾಖೆಯವರು ಹೆಚ್ಚಿನ ಮುತುವರ್ಜಿ ವಹಿಸುವುದು ಅವಶ್ಯಕವಾಗಿದೆ. ನಮಗೆ ಗೊತ್ತಿಲ್ಲದಂತೆ ಮರಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಲೇ ಇದೆ. ಇದರಿಂದ ಆಮ್ಲಜನಕ ಪ್ರಮಾಣ ಕುಸಿಯುತ್ತಿದೆ. ಈಗ ನಮ್ಮ ಯುವಕರು ನೋಡುತ್ತಿರುವ ಸುಂದರವಾದ ಅರಣ್ಯ ಪ್ರದೇಶವನ್ನು ನಮ್ಮ ಮುಂದಿನ ಪೀಳಿಗೆ ನೋಡುವಂತಾಗಬೇಕು. ಇರುವ ಅರಣ್ಯ ಭೂಮಿ ರಕ್ಷಣೆ ಮಾಡಿದರೆ ಸಾಲದು. ಅರಣ್ಯ ಭೂಮಿ ವೃದ್ಧಿಸುವ ಕಡೆಗೂ ಗಮನ ಹರಿಸಬೇಕಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

  • ಕಳ್ಳಬೇಟೆ ಬಯಲು – ದಂತ, ಹುಲಿ ಹಲ್ಲು, ಜಿಂಕೆ ಕೊಂಬು, ಸ್ಫೋಟಕ ವಶ!

    ಕಳ್ಳಬೇಟೆ ಬಯಲು – ದಂತ, ಹುಲಿ ಹಲ್ಲು, ಜಿಂಕೆ ಕೊಂಬು, ಸ್ಫೋಟಕ ವಶ!

    ಚಾಮರಾಜನಗರ: ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಗ್ರಾ.ಪಂ. ಸದಸ್ಯರೊಬ್ಬರ ಕಳ್ಳಬೇಟೆ ಬಯಲು ಮಾಡಿ ಅಪಾರ ಪ್ರಮಾಣದ ಸ್ಫೋಟಕ, ದಂತ, ಹುಲಿ ಹಲ್ಲು ವಶಪಡಿಸಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರಂಗಸ್ವಾಮಿ(45) ಎಂಬವರ ಮನೆ ಮೇಲೆ ತಮಿಳುನಾಡು ಅರಣ್ಯ ಇಲಾಖೆ ನೀಡಿದ ಮಾಹಿತಿ ಮೇರೆಗೆ ಪುಣಜನೂರು ವಲಯ ಅರಣ್ಯಾಧಿಕಾರಿ ಕಾಂತರಾಜು ಮತ್ತು ಕೆ.ಗುಡಿ ಆರ್.ಎಫ್.ಒ ಶಾಂತಪ್ಪ ಪೂಜಾರ್ ಜಂಟಿ ಕಾರ್ಯಾಚರಣೆ ನಡೆಸಿ ದಂತದ ಚೂರುಗಳು, ತಲಾ ಒಂದು ಚಿರತೆ ಮತ್ತು ಹುಲಿ ಹಲ್ಲು, 5-6 ಜಿಂಕೆ ಕೊಂಬುಗಳು, ಅಪಾರ ಪ್ರಮಾಣದ ಉರುಳು, 4-5 ನಾಡ ಬಂದೂಕಿಗೆ ಬಳಸುವ ಟ್ರಿಗರ್ ಗಳು, ಸ್ಫೋಟಕವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಬ್ಲೂ ಫಿಲಂಗಳ ಬಗ್ಗೆ ಹೆಚ್‍ಡಿಕೆಗೆ ಚೆನ್ನಾಗಿಯೇ ಗೊತ್ತಿರುತ್ತೆ: ಅಶ್ವಥ್ ನಾರಾಯಣ

    ರಂಗಸ್ವಾಮಿ ಪುಣಜನೂರು ಗ್ರಾ.ಪಂಚಾಯಿತ್ ನ ಹಾಲಿ ಸದಸ್ಯನಾಗಿದ್ದು, ಕಳ್ಳಬೇಟೆ ಬಯಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದಾರೆ. ಅರಣ್ಯಾಧಿಕಾರಿಗಳು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

  • ರೈತರ ಮೇಲೆ ಥಳಿತ – ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

    ರೈತರ ಮೇಲೆ ಥಳಿತ – ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

    ಶಿವಮೊಗ್ಗ: ದರಾಕಾಸ್ತಿನ ಅಡಿಯಲ್ಲಿ ದಲಿತರಿಗೆ ಮಂಜೂರಾಗಿದ್ದ ಜಮೀನನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆಯಲು ಯತ್ನಿಸಿದ್ದು, ಜಮೀನು ಬಿಡಲು ಒಪ್ಪದ ರೈತರ ಮೇಲೆ ದೌರ್ಜನ್ಯ ನಡೆಸಿ, ಹಲ್ಲೆ ನಡೆಸಿದ್ದಾರೆ. ಅದು ಅಲ್ಲದೇ ರೈತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ತಾಲೂಕಿನ ದೇವಕಾತಿಕೊಪ್ಪ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

    ಶಿವಮೊಗ್ಗದ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇವಕಾತಿಕೊಪ್ಪ ಹೊರವಲಯದ ಸರ್ವೇ ನಂ 115 ರಿಂದ 126ರ ವರೆಗಿನ ಭೂಮಿಯಲ್ಲಿ 12 ಮಂದಿ ದಲಿತ ಕುಟುಂಬಗಳಿಗೆ 1979 ರಲ್ಲಿ ಅಂದಿನ ಸರ್ಕಾರ ತಲಾ 2 ಎಕರೆಯಂತೆ 24 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಂದಾಯ ಇಲಾಖೆ ಈ ಭೂಮಿಗೆ ಪಣಿ ಹಾಗೂ ಖಾತೆ ಮಾಡಿ ಕೊಟ್ಟಿತ್ತು. ಇದನ್ನೂ ಓದಿ: ಪೋಕ್ಸೋ ಆರೋಪಿ ಠಾಣೆಯಿಂದ್ಲೇ ಎಸ್ಕೇಪ್ – ನಾಲ್ವರು ಪೊಲೀಸರು ಸಸ್ಪೆಂಡ್

    ಕಳೆದ ಎರಡು ದಿನದ ಹಿಂದೆ ಈ ಭೂಮಿಯಲ್ಲಿದ್ದ ಗಿಡ ಗಂಟೆಗಳನ್ನು ಕಡಿದು ಸ್ವಚ್ಛಗೊಳಿಸಿ ಸಾಗುವಳಿಗೆ ಮುಂದಾಗಿದ್ದ ರೈತರ ಮೇಲೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೇ ನಾಲ್ವರು ರೈತರ ವಿರುದ್ಧ ಶ್ರೀಗಂಧ ಕಳವು ಮಾಡಿರುವುದಾಗಿ ಪ್ರಕರಣ ದಾಖಲಿಸಿರುವ ಅರಣ್ಯ ಸಿಬ್ಬಂದಿ ನಾಲ್ವರು ರೈತರನ್ನು ಜೈಲಿಗೆ ಕಳುಹಿಸಿದ್ದಾರೆ. ನಿಜವಾಗಿಯೂ ಶ್ರೀಗಂಧ ಕಳವು ಮಾಡಿದ್ದರೆ ತನಿಖೆ ನಡೆಸಿ ಶಿಕ್ಷೆ ಕೊಡಲಿ ಅದು ಬಿಟ್ಟು ಸುಳ್ಳು ದೂರು ದಾಖಲಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸುಳ್ಳು ದೂರು ದಾಖಲಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ಶಿರಸಿಯಲ್ಲಿ ಚಿರತೆ ಕಾಟ -ಮನೆಯಿಂದ ಹೊರ ಬರಲು ಹೆದರಿದ ಜನ

    ಶಿರಸಿಯಲ್ಲಿ ಚಿರತೆ ಕಾಟ -ಮನೆಯಿಂದ ಹೊರ ಬರಲು ಹೆದರಿದ ಜನ

    -ಚಿರತೆ ಸೆರೆಗೆ ಅರಣ್ಯಾಧಿಕಾರಿಗಳ ತಂಡ ದಿನವಿಡೀ ಗಸ್ತು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಅರಣ್ಯ ವಲಯ ವ್ಯಾಪ್ತಿಯ ಶಿವಳ್ಳಿ, ದಾನಂದಿ ಭಾಗದಲ್ಲಿ ಚಿರತೆ ಜಾನುವಾರುಗಳ ಮೇಲೆ ಕೆಲ ದಿನಗಳಿಂದ ಸತತ ದಾಳಿ ನಡೆಸುತ್ತಿದೆ. ಇದರಿಂದಾಗಿ ಗ್ರಾಮದ ಜನ ಮನೆಯಿಂದ ಹೊರ ಬರಲು ಹೆದರುತಿದ್ದು, ಅಪಾಯಕಾರಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

    ಬಿಸಲಕೊಪ್ಪ, ಎಕ್ಕಂಬಿ, ಶಿವಳ್ಳಿ ಭಾಗದಲ್ಲಿ ಸಮೃದ್ದ ಅರಣ್ಯ ಪ್ರದೇಶ, ಸಾಗುವಾನಿ ನೆಡುತೋಪು ಹೆಚ್ಚಿದ್ದು ಪ್ರಾಣಿಗಳ ಓಡಾಟಕ್ಕೆ ಅನುಕೂಲವಾಗಿದೆ. ಹೀಗಾಗಿ ಚಿರತೆ, ಆನೆಗಳು ಈ ಪ್ರದೇಶಕ್ಕೆ ಲಗ್ಗೆ ಇಡುವುದು ಸಾಮಾನ್ಯವಾದಂತಾಗಿದೆ. ಹದಿನೈದು ದಿನಗಳಿಂದ ಈಚೆಗೆ ಬೊಪ್ಪನಳ್ಳಿ, ದಾನಂದಿ ಭಾಗದಲ್ಲಿ ಸುಮಾರು ನಾಲ್ಕು ಹಸುಗಳನ್ನು ಚಿರತೆ ಬಲಿ ಪಡೆದಿದೆ. ಈ ಪೈಕಿ ಎರಡು ಕರು ಮತ್ತು ಎರಡು ದೊಡ್ಡ ಆಕಳು ಸೇರಿದೆ. ಇದನ್ನೂ ಓದಿ: ಅರಣ್ಯ ಪ್ರದೇಶಕ್ಕೆ ಎಳೆದೊಯ್ದು 55ರ ಮಹಿಳೆ ಮೇಲೆ ಗ್ಯಾಂಗ್ ರೇಪ್

    cheetah

    ಕೊರ್ಸೆ, ದಾನಂದಿ, ಶಿವಳ್ಳಿ, ಬೊಪ್ಪನಳ್ಳಿ, ಸಂಬಯ್ಯನಜಡ್ಡಿ, ಗೇರಮನೆ ಸುತ್ತಮುತ್ತ ಚಿರತೆಗಳು ಹದಿನೈದು ದಿನಗಳಿಂದ ನಿರಂತರವಾಗಿ ಓಡಾಡುತ್ತಿದೆ. ಈಚೆಗೆ ಮೂರು ಚಿರತೆಗಳು ಒಟ್ಟೊಟ್ಟಿಗೆ ಇದ್ದಿದ್ದನ್ನು ಸ್ಥಳೀಯರು ನೋಡಿದ್ದಾರೆ. ಇನ್ನು ಸಂಜೆಯಾಗುತ್ತಿದ್ದಂತೆ ಚಿರತೆಗಳು ಗ್ರಾಮದ ಭಾಗದಲ್ಲಿ ಓಡಾಡುತಿದ್ದು, ಚಿರತೆ ಭಯದಿಂದ ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಜನರು ಸೊಪ್ಪಿನ ಬೆಟ್ಟ, ತೋಟಕ್ಕೆ ತೆರಳಲು ಆತಂಕ ಪಡುತ್ತಿದ್ದು, ಸಂಜೆಯಾಗುತ್ತಿದ್ದಂತೆ ಭಯದಲ್ಲಿ ಗ್ರಾಮಗಳು ಖಾಲಿ ಹೊಡೆಯುತ್ತಿದೆ.

    ಪ್ರತಿ ದಿನ ಚಿರತೆಗಳು ಗ್ರಾಮದಲ್ಲಿ ಕಾಣಿಸುತ್ತಿರುವುದರಿಂದ ಗ್ರಾಮದಲ್ಲಿ ಭಯ ಆವರಿಸಿದೆ. ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಆಯ್ದ ಜಾಗಗಳನ್ನು ಗುರುತಿಸಿ ಅಲ್ಲಿ ಬೋನುಗಳನ್ನು ಇರಿಸಿದೆ. ಅರಣ್ಯ ರಕ್ಷಕರು ಗಸ್ತು ತಿರುಗಲು ಆರಂಭಿಸಿದ್ದಾರೆ. ಇದನ್ನೂ ಓದಿ: ಮದುವೆಗಾಗಿ ಮತಾಂತರ ತಪ್ಪು: ಮೋಹನ್ ಭಾಗವತ್

    ಜನರ ಆತಂಕ ದೂರ ಮಾಡಲು ಜಾನುವಾರುಗಳನ್ನು ಬಲಿ ಪಡೆಯುತ್ತಿರುವ ಪ್ರಾಣಿ ಸೆರೆ ಹಿಡಿಯುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಯಕ್ಕುಂಬಿ ವಿಭಾಗದ ಡೆಪ್ಯುಟಿ ಆರ್.ಎಫ್.ಓ ರವೀಂದ್ರ ಎಸ್.ಕರ್ನಲ್ ಮಾಹಿತಿ ನೀಡಿದ್ದಾರೆ. ಚಿರತೆ ದಾಳಿಗೆ ಮೃತಪಟ್ಟ ಆಕಳುಗಳ ವಾರಸುದಾರರಿಗೆ ಇಲಾಖೆಯಿಂದ ಪರಿಹಾರ ಒದಗಿಸಲಾಗುವುದು. ಗ್ರಾಮಗಳತ್ತ ಚಿರತೆ ನುಗ್ಗದಂತೆ ಎಚ್ಚರವಹಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಗ್ಗತ್ತಲಲ್ಲಿ ಕರ್ನಾಟಕ ಮುಳುಗುವ ಆತಂಕ – ಇಂಧನ ಸಚಿವರು ಹೇಳಿದ್ದೇನು?

    ಶಿರಸಿ ವಿಭಾಗದ ಡಿಸಿಎಫ್ ಎಸ್.ಜಿ ಹೆಗಡೆ ಮಾರ್ಗದರ್ಶನದಲ್ಲಿ ಎ.ಸಿ.ಎಫ್. ಅಶೋಕ್ ಅಲಗೇರ್, ಬನವಾಸಿ ಆರ್.ಎಫ್.ಒ. ಉಷಾ ಕಬ್ಬೇರರವರ ತಂಡ ರಚನೆ ಮಾಡಿ ಚಿರತೆ ಹಿಡಿಯುವ ಕಾರ್ಯಾಚರಣೆ ನಡೆದಿದೆ.

  • ಓಮ್ನಿ ಮೇಲೆ ಒಂಟಿ ಸಲಗ ದಾಳಿ – ನಾಲ್ವರು ಪ್ರಾಣಾಪಾಯದಿಂದ ಪಾರು

    ಓಮ್ನಿ ಮೇಲೆ ಒಂಟಿ ಸಲಗ ದಾಳಿ – ನಾಲ್ವರು ಪ್ರಾಣಾಪಾಯದಿಂದ ಪಾರು

    ಚಿಕ್ಕಮಗಳೂರು: ಓಮ್ನಿ ಕಾರಿನಲ್ಲಿ ಹೊರನಾಡಿಗೆ ಹೋಗುತ್ತಿದ್ದ ನಾಲ್ವರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಂದೂರು ಸಾರಗೋಡು-ಸಮೀಪದ ಭೈರೇಗುಡ್ಡ ಕ್ರಾಸ್ ಬಳಿ ನಡೆದಿದೆ.

    ಚಿಕ್ಕಮಗಳೂರು ತಾಲೂಕಿನ ಜೋಳದಾಳು ಗ್ರಾಮದ ನಾಲ್ವರು ಓಮ್ನಿಯಲ್ಲಿ ಹೊರನಾಡಿಗೆ ಹೋಗುವಾಗ ಭೈರೇಗುಡ್ಡ ಕ್ರಾಸ್ ಬಳಿ ಏಕಾಏಕಿ ಅಡ್ಡ ಬಂದ ಒಂಟಿ ಸಲಗ ದಾಳಿ ಮಾಡಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದರೆ, ಮೂವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆ ಕಾರಿನಲ್ಲಿದ್ದವರು ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ.

    ಬಳಿಕ ಒಂಟಿ ಸಲಗ ಓಮಿನಿ ಕಾರಿನ ಮೇಲೆ ಮನಸ್ಸೋ ಇಚ್ಛೆ ದಾಳಿ ಮಾಡಿದ್ದು, ಓಮ್ನಿ ಬಹುತೇಕ ಜಖಂಗೊಂಡಿದೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಲೆನಾಡಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಈಗಾಗಲೇ ಕಳೆದ ಎರಡ್ಮೂರು ವರ್ಷದಿಂದ ಮಲೆನಾಡು ಭಾಗದಲ್ಲಿ ಆನೆ ಹಾವಳಿಯಿಂದ ಮೂರ್ನಾಲ್ಕು ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದೊಂದು ವರ್ಷದಿಂದ ಮಲೆನಾಡ ಹೊಲ-ಗದ್ದೆ, ತೋಟಗಳಲ್ಲಿ ದಾಳಿ ಮಾಡುತ್ತಿದ್ದ ಕಾಡಾನೆಗಳು ಈಗ ವಾಹನ ಹಾಗೂ ಜನಸಾಮಾನ್ಯರ ಮೇಲೂ ದಾಳಿ ಮಾಡಲು ಮುಂದಾಗಿವೆ. ಇದರಿಂದ ಮಲೆನಾಡಿಗರಲ್ಲಿ ಆತಂಕ ಮನೆಮಾಡಿದೆ.

    ಮಲೆನಾಡಿಗರು ಕಳೆದ ಒಂದೆರಡು ದಶಕಗಳಿಂದ ಕಾಡಾನೆ ದಾಳಿಗೆ ತುತ್ತಾಗಿರುವ ಮೂಡಿಗೆರೆ ತಾಲೂಕಿನ ಗೌಡಹಳ್ಳಿ, ಸಾರಾಗೋಡು, ಕುಂದೂರು, ಕೋಗಿಲೆ ಗ್ರಾಮ ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ಆನೆ ಹಾವಳಿ ಮೀತಿ ಮೀರಿದೆ. ಆನೆ ಹಾವಳಿಯಿಂದ ರೈತರು ತಮ್ಮ ಬೆಳೆಗಳನ್ನು ಕಳೆದುಕೊಂಡಿದ್ದಕ್ಕೆ ಲೆಕ್ಕವೇ ಇಲ್ಲದಂತಾಗಿದೆ. ಅಷ್ಟರ ಮಟ್ಟಿಗೆ ಕಾಡಾನೆಗಳ ಹಿಂಡು ಆಗಾಗ್ಗೆ ಹೊಲಗದ್ದೆ, ತೋಟಗಳ ಮೇಲೆ ದಾಳಿ ಮಾಡುತ್ತಿವೆ. ಈಗ ರಸ್ತೆಯಲ್ಲಿ ಸಂಚರಿಸುವವರ ಮೇಲೂ ದಾಳಿಗೆ ಮುಂದಾಗಿರುವುದರಿಂದ ಮಲೆನಾಡಿಗರು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿ ಕೂಡಲೇ ಆನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ:ಸಿಲಿಂಡರ್ ಸ್ಫೋಟಕ್ಕೆ ವ್ಯಕ್ತಿ ಬಲಿ – ಸಾವು ಬದುಕಿನ ಮಧ್ಯೆ ಮಗುವಿನ ಹೋರಾಟ

  • 15 ಅಡಿ ಉದ್ದದ ಬೃಹತ್ ಕಾಳಿಂಗ ಸೆರೆ

    15 ಅಡಿ ಉದ್ದದ ಬೃಹತ್ ಕಾಳಿಂಗ ಸೆರೆ

    ಚಿಕ್ಕಮಗಳೂರು: ಸುಮಾರು 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನ ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ.

    ಅತ್ತಿಗೆರೆ ಗ್ರಾಮದ ಮಂಜುನಾಥ್ ಗೌಡ ಎಂಬವರ ತೋಟದಲ್ಲಿ 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಕಾಫಿ ತೋಟದಲ್ಲಿ ಕಾಳಿಂಗ ಸರ್ಪಗಳಿರುವುದು ಮಾಮೂಲಿ. ಅವು ಇದ್ದಲ್ಲೇ ಇರುವುದಿಲ್ಲ. ಬರುತ್ತದೆ, ಹೋಗುತ್ತೆ ಎಂದು ಜನ ಕೂಡ ಸುಮ್ಮನಾಗುತ್ತಿದ್ದರು. ಇದನ್ನು ಓದಿ: ಮನವಿ ಸ್ವೀಕರಿಸಲು ಬಾರದ ಸಚಿವರು – ಮನವಿ ಪತ್ರ, ಹೂವುಗಳನ್ನು ಸಮುದ್ರಕ್ಕೆ ಅರ್ಪಿಸಿ ಮೀನುಗಾರರಿಂದ ವಿನೂತನ ಪ್ರತಿಭಟನೆ

    ಆದರೆ ಲಾಕ್‍ಡೌನ್ ಇರುವುದರಿಂದ ತೋಟದಲ್ಲಿ ಹೆಚ್ಚಿನ ಕೆಲಸಗಾರರು ಇರಲಿಲ್ಲ. ಅಲ್ಲೊಬ್ಬರು, ಇಲ್ಲೊಬ್ಬರು ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಹೀಗೆ ಕಳೆದ ಎರಡು ದಿನಗಳಿಂದ ಕಾಳಿಂಗ ಸರ್ಪ ದಿನ ಕಾಣಿಸಿಕೊಳ್ಳುತ್ತಿರುವುದರಿಂದ ಕೆಲಸಗಾರರು ಭಯಗೊಂಡಿದ್ದಾರೆ. ಕೊನೆಗೆ ಆ ಬೃಹತ್ ಕಾಳಿಂಗ ಸರ್ಪವನ್ನ ಕಂಡ ಕೆಲಸಗಾರನೊಬ್ಬ ತೋಟದ ಮಾಲೀಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ತೋಟದ ಮಾಲೀಕ ಮಂಜುನಾಥ್ ಗೌಡ ವಿಷಯವನ್ನ ಸ್ನೇಕ್ ಆರೀಫ್ ತಿಳಿಸಿದ್ದಾರೆ.

    ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನ ಸೆರೆ ಹಿಡಿದಿದ್ದಾರೆ. ಕಾಫಿ ತೋಟ ಆಗಿರುವುದರಿಂದ ಕಾಳಿಂಗ ಸರ್ಪ ತೋಟದೊಳಗೆ ವೇಗವಾಗಿ ಸಂಚರಿಸುತ್ತೆ. ಗಿಡಗಳ ಮಧ್ಯೆ ಹಾವುಗಳು ಹೋದಷ್ಟು ವೇಗವಾಗಿ ಜನಸಾಮಾನ್ಯರು ಹೋಗಿ ಹಾವನ್ನ ಹಿಡಿಯುವುದು ಕಷ್ಟ. ಆದರೂ ಸ್ನೇಕ್ ಆರೀಫ್ ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕಾಳಿಂಗನನ್ನ ಸೆರೆ ಹಿಡಿದಿದ್ದಾರೆ.

    ಬಳಿಕ ಸೆರೆ ಹಿಡಿದ ಕಾಳಿಂಗ ಸರ್ಪವನ್ನ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಚಾರ್ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಪರಿಸರವಾದಿಗಳು ಜಿಲ್ಲೆಯ ಮಲೆನಾಡು ಭಾಗದಲ್ಲಿ ಹಾವಾಡಿಗರು ಹಾವನ್ನ ಸೆರೆ ಹಿಡಿಯುವ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದನ್ನು ಓದಿ:ಮದ್ಯಕ್ಕಾಗಿ ಕ್ಯೂ- ಮದ್ಯದಂಗಡಿ ಮುಂದೆ ನೂಕುನುಗ್ಗಲು

  • ಕುಶ ಆನೆಯನ್ನು ಮರಳಿ ಕಾಡಿಗೆ ಬಿಡಿ – ಅರಣ್ಯಧಿಕಾರಿಗಳಿಗೆ ಲಿಂಬಾವಳಿ ಸೂಚನೆ

    ಕುಶ ಆನೆಯನ್ನು ಮರಳಿ ಕಾಡಿಗೆ ಬಿಡಿ – ಅರಣ್ಯಧಿಕಾರಿಗಳಿಗೆ ಲಿಂಬಾವಳಿ ಸೂಚನೆ

    ಮಡಿಕೇರಿ: ದುಬಾರೆಯಲ್ಲಿರುವ ಕುಶ ಆನೆಯನ್ನು ಮರಳಿ ಕಾಡಿಗೆ ಬಿಡುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಲಿಂಬಾವಳಿ ಸೂಚನೆ ನೀಡಿದ್ದಾರೆ.

    ಕಳೆದ ವರ್ಷ ಸಾಕಾನೆ ಶಿಬಿರದಿಂದ ತಪ್ಪಿಸಿಕೊಂಡು ಹೋಗಿದ್ದ ಸಾಕಾನೆ ಕುಶಾ ಆನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಮಾವತರು ಸೆರೆಹಿಡಿದಿದ್ದು ದುಬಾರೆ ಅರಣ್ಯ ಪ್ರದೇಶಕ್ಕೆ ಕರೆ ತಂದಿದ್ದರು. ಆದರೆ ಇದೀಗಾ ಸಾಕಾನೆ ಕುಶನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅರಣ್ಯಧಿಕಾರಿಗಳಿಗೆ ಆದೇಶಿಸಿದ್ದಾರೆ.

    ಇಂದು ಈ ಸಂಬಂಧ ಸಚಿವ ಅರವಿಂದ ಲಿಂಬಾವಳಿ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ ಕುಶನನ್ನು ಸೆರೆ ಹಿಡಿದು ತರಲಾಗಿತ್ತು. ಆದರೆ ಕುಶ ಆನೆಯನ್ನು ಸೆರೆ ಹಿಡಿದು ಇಲಾಖೆಯಿಂದ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು.

    ಈ ಹಿನ್ನೆಲೆಯಲ್ಲಿ ಸಚಿವ ಅರವಿಂದ ಲಿಂಬಾವಳಿ ಇಂದು ಸಭೆ ನಡೆಸಿ ಮಾಹಿತಿ ಪಡೆದರು. ಅಧಿಕಾರಿಗಳು ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ. ಕುಶ ಆನೆ ಆರೋಗ್ಯವಾಗಿದೆ ಎಂದು ಮಾಹಿತಿ ನೀಡಿದರು. ಅಂತಿಮವಾಗಿ ಸಚಿವರು ಕುಶ ಆನೆಗೆ ರೇಡಿಯೋ ಕಾಲರ್ ಅಳವಡಿಸಿ, ಬಿಡುಗಡೆ ಮಾಡಲು ಬಿಡುಗಡೆಗೆ ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಆದೇಶಿಸಿದರು.

    ಇದೇ ಸಂದರ್ಭದಲ್ಲಿ ದುಬಾರೆ ಸಮೀಪ ಪ್ರಜ್ಞಾ ಚೌಟ ಎಂಬವರು ಆನೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡು ಪೋಷಿಸುತ್ತಿರುವ ಬಗ್ಗೆ ಸ್ಥಳೀಯರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅವರ ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆ ವಶಕ್ಕೆ ಪಡೆಯುವ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸಭೆಯಲ್ಲಿ ಸಂಜಯ್ ಮೋಹನ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಪಡೆ ಮುಖ್ಯಸ್ಥರು ಮತ್ತು ವಿಜಯಕುಮಾರ್ ಗೋಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ,) ಹಾಗೂ ವನ್ಯಜೀವಿ ಪರಿಪಾಲಕರು ಭಾಗವಹಿಸಿದ್ದರು.