Tag: Forest Tree

  • ಯಶ್ ‘ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ – ಸಚಿವರ ಆರೋಪಕ್ಕೆ ಚಿತ್ರತಂಡದ ಸ್ಪಷ್ಟನೆ ಏನು?

    ಯಶ್ ‘ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ – ಸಚಿವರ ಆರೋಪಕ್ಕೆ ಚಿತ್ರತಂಡದ ಸ್ಪಷ್ಟನೆ ಏನು?

    ಬೆಂಗಳೂರು: ಯಶ್ (Yash) ನಟನೆಯ ‘ಟಾಕ್ಸಿಕ್’ (Toxic) ಸಿನಿಮಾ ಸೆಟ್‌ಗಾಗಿ ನೂರಾರು ಮರಗಳನ್ನು ನಾಶ ಮಾಡಿರುವ ಆರೋಪ ಕೇಳಿ ಬಂದಿದೆ. ಆರೋಪದ ಬೆನ್ನಲ್ಲೇ ಸ್ಥಳ ಪರಿಶೀಲನೆ ನಡೆಸಿರುವ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸುವ ಕುರಿತು ಚಿಂತನೆಯೂ ನಡೆದಿದೆ.

    ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಲಾಗಿದೆ ಎಂಬ ಆರೋಪವನ್ನು ಖುದ್ದು ಅರಣ್ಯ ಸಚಿವರೇ ಮಾಡಿದ್ದಾರೆ. ಈ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರ್ ಖಂಡ್ರೆ (Eshwar Khandre) ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಯಶ್ ‘ಟಾಕ್ಸಿಕ್’ ಸಿನಿಮಾಗಾಗಿ ಸಾವಿರಾರು ಮರಗಳ ಬಲಿ ಆರೋಪ; ತಪ್ಪಿತಸ್ಥರ ವಿರುದ್ಧ ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ

    ಸ್ಯಾಟಲೈಟ್‌ ಫೋಟೋಗಳನ್ನ ಪಡೆದು ಪರಿಶೀಲಿಸುತ್ತಿರುವ ಸಚಿವರು, ಚಿತ್ರೀಕರಣ ಸೆಟ್‌ ಹಾಕಿದ್ದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಚಿವರ ಆರೋಪಕ್ಕೆ ಚಿತ್ರತಂಡವೂ ಸ್ಪಷ್ಟನೆ ಕೊಟ್ಟಿದೆ. ಸೆಟ್ ಹಾಕಲು ಅನುಮತಿ ಕರಾರು ಪತ್ರಕ್ಕೆ ಸಹಿ ಹಾಕೋಕೂ ಮುನ್ನ ತೆಗೆದ ಸ್ಯಾಟಲೈಟ್‌ ಪಿಕ್ಚರ್ ನಮ್ಮ ಬಳಿಯೂ ಇದೆ. 2022ರಲ್ಲೇ ದಾಖಲಾದ ಸ್ಯಾಟಲೈಟ್ ಫೋಟೋ ಸಾಕ್ಷ್ಯ ಇದೆ ಎಂದು ಹೇಳಿದೆ ಎಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ದೀಪಾವಳಿ ಹಿನ್ನೆಲೆ ಇಂದು 250ಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ- ರೈಲ್ವೆ ಇಲಾಖೆ

    ಟಾಕ್ಸಿಕ್ ತಂಡದ ಮೇಲೆ ಸಚಿವರ ಆರೋಪವೇನು?
    * ಟಾಕ್ಸಿಕ್ ಚಿತ್ರೀಕರಣದ ಸೆಟ್ ಹಾಕಲು ಅರಣ್ಯಭೂಮಿ ನಾಶ ಮಾಡಲಾಗಿದೆ
    * ಸೆಟ್ ಪೂರ್ವದ ಹಾಗೂ ಸೆಟ್ ಬಳಿಕ ಹಾಕಿರುವ ಸ್ಯಾಟಲೈಟ್ ಫೋಟೋ ಇದೆ
    * ಚಿತ್ರೀಕರಣಕ್ಕಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ಪ್ರದೇಶ ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ
    * 2023ರಲ್ಲಿ ಅಲ್ಲಿ ಪ್ರದೇಶ ಅರಣ್ಯ ಒಳಗೊಂಡಿತ್ತು
    * 2024 ರಿಂದ ಟಾಕ್ಸಿಕ್ ಚಿತ್ರೀಕರಣಕ್ಕಾಗಿ ಸೆಟ್ ಕಾರ್ಯ ಪ್ರಾರಂಭವಾದ ಬಳಿಕ ಅರಣ್ಯ ಪ್ರದೇಶ ನಾಶವಾಗಿದೆ
    * ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸುವ ಕುರಿತು ಚಿಂತನೆ

    ಅರಣ್ಯ ಭೂಮಿ ನಾಶ ಆರೋಪಕ್ಕೆ ಟಾಕ್ಸಿಕ್ ಟೀಮ್ ಹೇಳೋದೇನು?
    * ಸೆಟ್ ಹಾಕಲು ಅನುಮತಿ ಕರಾರು ಪತ್ರಕ್ಕೆ ಸಹಿ ಹಾಕೋಕೂ ಮುನ್ನ ತೆಗೆದ ಸ್ಯಾಟಲೈಟ್‌ ಪಿಕ್ಚರ್ ನಮ್ಮ ಬಳಿಯೂ ಇದೆ
    * 2022 ರಲ್ಲೇ ದಾಖಲಾದ ಸ್ಯಾಟಲೈಟ್ ಫೋಟೋ ಸಾಕ್ಷ್ಯ ಇದೆ
    * ಯಾವುದೇ ಪರಿಸರ ನಾಶ ಮಾಡಿಲ್ಲ
    * ಖಾಲಿ ಇದ್ದ ಜಾಗವನ್ನೇ ಬಳಸಿಕೊಂಡು ಸೆಟ್ ನಿರ್ಮಾಣ ಮಾಡಿದ್ದೇವೆ
    * ಸೆಟ್ ಹಾಕೋದಕ್ಕೂ ಮುನ್ನ ಅಲ್ಲಿನ ಚಿತ್ರಣದ ದಾಖಲೆ ಇದೆ ಎಂದು ಹೇಳಿದೆ.

  • ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ.. ಅವರೇ ಶ್ರೀಮನ್ ಸಿದ್ದರಾಮಣ್ಣ: ಹೆಚ್‌ಡಿಕೆ ಟಾಂಗ್‌

    ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ.. ಅವರೇ ಶ್ರೀಮನ್ ಸಿದ್ದರಾಮಣ್ಣ: ಹೆಚ್‌ಡಿಕೆ ಟಾಂಗ್‌

    ಬೆಂಗಳೂರು: ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಇಡೀ ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ, ಅವರೇ ಶ್ರೀಮನ್ ಸಿದ್ದರಾಮಣ್ಣ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಟಾಂಗ್‌ಕೊಟ್ಟಿದ್ದಾರೆ.

    ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ (Vikram Simha) ಅವರ ಪ್ರಕರಣಕ್ಕೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯ ಬಗ್ಗೆ, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದ ಸಚಿವರಿಬ್ಬರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

    ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹಾಗೂ ಸಹಕಾರ ಸಚಿವ ಕೆ.ಎನ್ ರಾಜಣ್ಣ (KN Rajanna) ಅವರ ಹೇಳಿಕೆಗಳಿಗೆ ಪ್ರತ್ಯುತ್ತರ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ‘ನೀರೋ’ ಎಂದು ಜರೆದಿದ್ದಾರೆ. ಅಲ್ಲದೇ, ದಾಖಲೆ ಇಟ್ಟುಕೊಂಡೇ ವಿಕ್ರಂ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಆಮೇಲೆ ಕ್ರಮ ಜರುಗಿಸುವ ದಮ್ಮು, ತಾಕತ್ತು ಹಾಗೂ ಸತ್ಯದ ಪರ ನಿಲ್ಲುವ ಗಂಡಸ್ತನ ಇದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.

    ಕರ್ನಾಟಕದ ‘ನೀರೋ’ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಪರಮೇಶ್ವರ್ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ ‘ಪರಿಪೂರ್ಣ ಸಹಕಾರ’ ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆ.ಎನ್ ರಾಜಣ್ಣ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ. ಇದನ್ನೂ ಓದಿ: 9 ದಿನಗಳ ಬಳಿಕ ಶ್ರೀಕಾಂತ್‌ ಪೂಜಾರಿ ಜೈಲಿನಿಂದ ಬಿಡುಗಡೆ – ‘ಭಾರತ್‌ ಮಾತಾ ಕೀ ಜೈ’ ಎಂದ ಕಾರ್ಯಕರ್ತರು

    ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ ಈ ಸಚಿವರಿಬ್ಬರು. ‘ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ’ ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು. ತಪ್ಪಿದರೆ, ಸತ್ಯದ ಪರ ನಿಲ್ಲುವ ಗಂಡಸ್ತನ ನಮಗಿಲ್ಲ ಎಂಬುದನ್ನು ಒಪ್ಪಿಕೊಳ್ಳುವ ನೈತಿಕತೆಯನ್ನಾದರೂ ತೋರಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸರ್ಕಾರಿ ಬಸ್‍ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ನಾನು ಹೇಳಿದ್ದೆಲ್ಲವೂ ಸತ್ಯ, ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ಆ ದಾಖಲೆಗಳನ್ನು ತೆಗೆದುಕೊಂಡು ಎಲ್ಲಿಗೆ ಬರಲಿ, ಆಗ ಕ್ರಮ ಜರುಗಿಸುವ ದಮ್ಮು, ತಾಕತ್ತನ್ನು ತೋರುವಿರಾ? ಅಥವಾ ಪಲಾಯನ ಮಾಡುವಿರಾ ಹೇಳಿ? ಬಹಿರಂಗ ಚರ್ಚೆಗೂ ನಾನು ತಯಾರು. ನೀವು ಸಿದ್ಧವೇ? ಎಲ್ಲಿ? ಯಾವಾಗ? ಎಷ್ಟೊತ್ತಿಗೆ? ನೀವು ಫಿಕ್ಸ್ ಮಾಡ್ತೀರಾ? ನಾನು ಫಿಕ್ಸ್ ಮಾಡ್ಲಾ? ಅಲ್ಲಿ ನಾನು ಹೇಳಿದ್ದೇನು ಎಂಬ ಬಗ್ಗೆ ಚರ್ಚಿಸೋಣ ಎಂದು ಸಚಿವರಿಬ್ಬರಿಗೆ ಸವಾಲು ಹಾಕಿದ್ದಾರೆ.

    ಸರಿ, ವಿಕ್ರಂಸಿಂಹ ಮರ ಕಡಿದಿದ್ದರೇ FIR ನಲ್ಲಿ ಅವರ ಹೆಸರಿಲ್ಲ, ಯಾಕೆ? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ, ಎಂದು ಎಕ್ಸ್ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ಜೊತೆ FIR ಪ್ರತಿಯನ್ನು ಅವರು ಟ್ಯಾಗ್ ಮಾಡಿದ್ದಾರೆ.

    ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಘೋಷವಾಕ್ಯ, ಲೋಗೋ ಅನಾವರಣ

    ಅಹಿಂದ ಅಹಿಂದ ಎಂದು ಬೆಳಗೆದ್ದರೆ ಭಜನೆ ಮಾಡುವ ನೀವು, ಆ ಅಧಿಕಾರಿಯಿಂದ 50 ಲಕ್ಷ ರೂ. ಕಿತ್ತ ನಿಮ್ಮ ನೀತಿಗೆಟ್ಟ ಹೊಲಸು ಶಾಸಕನ ಬಗ್ಗೆ ನಿಮ್ಮ ಮೌನ ಅಸಹ್ಯ. ನಿಮ್ಮದೇ ಲಜ್ಜೆಗೆಟ್ಟ ಸರ್ಕಾರ ಎಸಗಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆಯೇ? ಇದೆಲ್ಲದರ ಚಿದಂಬರ ರಹಸ್ಯ ಯಶವಂತಪುರ ಫ್ಲಾಟ್ ನಲ್ಲಿ ಅಡಗಿದೆ. ಯಾವ ತನಿಖೆ ಮಾಡುತ್ತೀರಿ? ಎಂದು ಅವರು ಸಚಿವರನ್ನು ಕೇಳಿದ್ದಾರೆ.

    ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ, ಅವರೇ ಶ್ರೀಮನ್ ಸಿದ್ದರಾಮಣ್ಣ ಎಂದು ಸಿಎಂ ಅವರಿಗೆ ಟಾಂಗ್ ನೀಡಿದ್ದಾರೆ.