Tag: former home minister

  • ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅರೆಸ್ಟ್‌

    ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅರೆಸ್ಟ್‌

    ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಹಾರಾಷ್ಟ್ರದ ಮಾಜಿ ಗೃಹ ಸಚಿವ 71 ವರ್ಷದ ಅನಿಲ್‌ ದೇಶ್‌ಮುಖ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ತಡರಾತ್ರಿ ಬಂಧಿಸಿದೆ.

    ಸೋಮವಾರ ಅನಿಲ್‌ ದೇಶ್‌ಮುಖ್‌ ದಕ್ಷಿಣ ಮುಂಬೈನ ಬಲ್ಲಾರ್ಡ್‌ ಎಸ್ಟೇಟ್‌ ಪ್ರದೇಶದಲ್ಲಿರುವ ಇಡಿ ಕಚೇರಿಗೆ ಬೆಳಿಗ್ಗೆ 11:40ರ ವೇಳೆಗೆ ವಿಚಾರಣೆಗೆ ಹಾಜರಾಗಿದ್ದರು. 12 ಗಂಟೆಗಳ ಸತತ ವಿಚಾರಣೆಯ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿ ಬಂಧನ ಮಾಡಲಾಗಿದೆ. ಇದನ್ನೂ ಓದಿ: ಅಶ್ಲೀಲ ಸಿನಿಮಾಗಳ ವಿವಾದದ ಬಳಿಕ ಟ್ವಿಟ್ಟರ್, ಇನ್‍ಸ್ಟಾ ಡಿಲೀಟ್ ಮಾಡಿದ ರಾಜ್ ಕುಂದ್ರಾ

    ವಿಚಾರಣೆಯ ವೇಳೆ ಅನಿಲ್‌ ದೇಶ್‌ಮುಖ್‌ ಪ್ರಶ್ನೆಗಳಿಗೆ ನೇರವಾಗಿ ಉತ್ತರಿಸಿಲ್ಲ. ಈ ಹಿಂದೆ ಐದು ಬಾರಿ ಸಮನ್ಸ್‌ ಜಾರಿಯಾಗಿದ್ದರೂ ಅವರು ವಿಚಾರಣೆಗೆ ಗೈರು ಹಾಜರಾಗಿದ್ದರು. ಸಮನ್ಸ್‌ ರದ್ದುಪಡಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಕಳೆದ ವಾರ ತಿರಸ್ಕರಿಸಿತ್ತು.

    MONEY

    ಆರೋಪ ಏನು?
    ಮುಂಬೈ ಮಾಜಿ ಪೊಲೀಸ್‌ ಕಮಿಷನರ್‌ ಪರಮ್‌ಬೀರ್‌ ಸಿಂಗ್‌ ಅವರು ದೇಶ್‌ಮುಖ್ ಅವರ ಮೇಲೆ ಆರೋಪ ಮಾಡಿದ್ದರು. ಪೊಲೀಸ್‌ ಇಲಾಖೆಯಲ್ಲಿ 100 ಕೋಟಿ ರೂ. ಲಂಚ ವಸೂಲಿ, ಸುಲಿಗೆ ಮಾಡುವಂತೆ ಒತ್ತಡ ಹೇರುತ್ತಿದ್ದರು ಎಂದು ಗಂಭೀರ ಆರೋಪ ಹೊರಿಸಿದ್ದರು. ಈ ಸಂಬಂಧ ಸಾಕ್ಷ್ಯಗಳನ್ನು ಬಿಡುಗಡೆ ಮಾಡಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಇಡಿ ದೇಶ್‌ಮುಖ್ ಮೇಲೆ ಪ್ರಕರಣ ದಾಖಲಿಸಿತ್ತು. ಇದನ್ನೂ ಓದಿ: ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟ

    ಸಹಕಾರ ನೀಡಿದ್ದೇನೆ:
    ವಿಚಾರಣೆಗೆ ತೆರಳುವ ಮುನ್ನ ದೇಶ್‌ಮುಖ್‌ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದರು. ನಾನು ತನಿಖೆಗೆ ಸಹಕರಿಸುತ್ತಿದ್ದೇನೆ. ಈ ಹಿಂದೆಯೂ ಸಿಬಿಐ ಮುಂದೆ ಎರಡು ಬಾರಿ ವಿಚಾರಣೆಗೆ ಹಾಜರಾಗಿದ್ದೇನೆ. ತನಿಖೆಗೆ ಸಹಕರಿಸುತ್ತಿಲ್ಲ ಎಂಬ ವರದಿಗಳಿಗೆ ಆಧಾರವಿಲ್ಲ. ನನ್ನ ಅರ್ಜಿ ಸುಪ್ರೀಂನಲ್ಲಿ ವಿಚಾರಣೆಯಲ್ಲಿದೆ. ಈ ಅರ್ಜಿ ವಿಚಾರಣೆಗೆ ಕೆಲ ಸಮಯ ಇರುವ ಕಾರಣ ಇಂದು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ತಿಳಿಸಿದ್ದರು.