Tag: former minister

  • ಮೋದಿ ಹತ್ಯೆ ಮಾಡಬೇಕು ಎಂದಿದ್ದ ಕಾಂಗ್ರೆಸ್‌ ಮಾಜಿ ಸಚಿವ ಅರೆಸ್ಟ್‌

    ಮೋದಿ ಹತ್ಯೆ ಮಾಡಬೇಕು ಎಂದಿದ್ದ ಕಾಂಗ್ರೆಸ್‌ ಮಾಜಿ ಸಚಿವ ಅರೆಸ್ಟ್‌

    ಭೋಪಾಲ್‌: ಸಂವಿಧಾನ ಉಳಿಸಲು ಪ್ರಧಾನಿ ಮೋದಿ (Narendra Modi) ಹತ್ಯೆ ಮಾಡಿ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ರಾಜಾ ಪಟೇರಿಯಾ (Raja Pateria) ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಸೋಮವಾರ ಪಟೇರಿಯಾ ಅವರು, “ಸಂವಿಧಾನವನ್ನು ಉಳಿಸಲು ಪಿಎಂ ಮೋದಿಯನ್ನು ಕೊಲ್ಲಬೇಕು” ಎಂದು ಸಭೆಯೊಂದರಲ್ಲಿ ಹೇಳಿಕೆ ನೀಡಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪಟೇರಿಯಾ ಅವರ ಹೇಳಿಕೆಗಳನ್ನು ಆಧರಿಸಿ, ಮಧ್ಯಪ್ರದೇಶ (Madhyapradesh) ಸರ್ಕಾರವು ಮಾಜಿ ಸಚಿವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಆದೇಶಿಸಿತ್ತು. ಇದನ್ನೂ ಓದಿ: ಸಂವಿಧಾನ ಉಳಿಸಲು ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ಮಾಜಿ ಸಚಿವ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ

    ಪನ್ನಾದ ಪಾವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್‌ ನಾಯಕನ ಹೇಳಿಕೆಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, “ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬಂದಿದೆ” ಎಂದು ರಾಹುಲ್‌ ಗಾಂಧಿ ಅವರನ್ನು ಗುರಿಯಾಗಿಸಿ ಟೀಕೆ ವ್ಯಕ್ತಪಡಿಸಿದ್ದಾರೆ.

    ಸಭೆಯೊಂದರಲ್ಲಿ ಪಟೇರಿಯಾ ಮಾತನಾಡಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. “ಪ್ರಧಾನಿ ಮೋದಿ (Narendra Modi) ಅವರು ಧರ್ಮದ ಆಧಾರದ ಮೇಲೆ ಜನರನ್ನ ವಿಭವಿಸುತ್ತಿದ್ದಾರೆ. ಮೋದಿ ಅವರ ಆಡಳಿತದಲ್ಲಿ ದಲಿತರು (Dalits) ದೊಡ್ಡ ಬೆದರಿಕೆ ಎದುರಿಸುತ್ತಿದ್ದಾರೆ. ನೀವು ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು. ಕೊಲ್ಲುವುದೆಂದರೆ ಹತ್ಯೆ ಮಾಡುವುದಲ್ಲ. ಅವರನ್ನು ಸೋಲಿಸಬೇಕು” ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಗಡಿಯಲ್ಲಿ ಮತ್ತೆ ಬಡಿದಾಟ – ಚೀನಿ ಯೋಧರಿಗೆ ತಿರುಗೇಟು ಕೊಟ್ಟ ಭಾರತ

    ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ, ಮಾಜಿ ಸಚಿವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ನಂತರ ಇದಕ್ಕೆ ಸ್ಪಷ್ಟನೆ ನೀಡಿದ್ದ ಪಟೇರಿಯಾ, “ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಗಾಂಧಿಯನ್ನು ನಂಬುವ ವ್ಯಕ್ತಿ, ಈ ರೀತಿ ಮಾತನಾಡಲಾರೆ. ಸಂವಿಧಾನ (Constitution Of India) ಉಳಿಸಲು ಮೋದಿ ಅವರನ್ನು ಸೋಲಿಸಬೇಕು ಅನ್ನೋ ಅರ್ಥದಲ್ಲಿ ಮಾತನಾಡಿದ್ದೇನೆ” ಎಂದು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಾಪತ್ತೆಯಾಗಿದ್ದ ದಲಿತ ಮಹಿಳೆ ಶವವಾಗಿ ಹೂತಿಟ್ಟ ಸ್ಥಿತಿಯಲ್ಲಿ ಮಾಜಿ ಸಚಿವನ ಆಶ್ರಮದ ಬಳಿ ಪತ್ತೆ!

    ನಾಪತ್ತೆಯಾಗಿದ್ದ ದಲಿತ ಮಹಿಳೆ ಶವವಾಗಿ ಹೂತಿಟ್ಟ ಸ್ಥಿತಿಯಲ್ಲಿ ಮಾಜಿ ಸಚಿವನ ಆಶ್ರಮದ ಬಳಿ ಪತ್ತೆ!

    ಲಕ್ನೋ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ 22 ವರ್ಷ ವಯಸ್ಸಿನ ದಲಿತ ಮಹಿಳೆ ಶವವು ಸಮಾಧಿಯಾಗಿದ್ದ ಸ್ಥಿತಿಯಲ್ಲಿ ಸಮಾಜವಾದಿ ಪಕ್ಷದ ಮಾಜಿ ಸಚಿವನ ಆಶ್ರಮದ ಬಳಿ ಪತ್ತೆಯಾಗಿದೆ.

    ಉತ್ತರ ಪ್ರದೇಶದ ಉನ್ನಾವೊದ ದಲಿತ ಮಹಿಳೆ ನಾಪತ್ತೆಯಾಗಿದ್ದರು. ಹೂತಿಟ್ಟಿದ್ದ ಕೊಳೆತ ಸ್ಥಿತಿಯಲ್ಲಿದ್ದ ಆಕೆಯ ಮೃತದೇಹವನ್ನು, ಮಾಜಿ ಸಚಿವ ಫತೇಹ್‌ ಬಹದ್ದೂರ್‌ ಸಿಂಗ್‌ ನಿರ್ಮಿಸಿರುವ ಆಶ್ರಮದ ಬಳಿಯ ಖಾಲಿ ಜಾಗದಿಂದ ಹೊರತೆಗೆದು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಮೆಗಾ ಹರಾಜಿಗೆ ಬೆಂಗಳೂರು ಸಜ್ಜು – ಸ್ಟಾರ್ ಆಟಗಾರರ ಮೇಲೆ ಫ್ರಾಂಚೈಸಿಗಳ ಕಣ್ಣು

    ಫತೇಹ್‌ ಬಹದ್ದೂರ್‌ ಪುತ್ರ ರಾಜೋಲ್‌ ಸಿಂಗ್‌ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ರಾಜೋಲ್‌ ಸಿಂಗ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ನಂತರ ಎಸ್‌ಒಜಿ ತಂಡ ಗುರುವಾರ ಮಹಿಳೆಯ ದೇಹವನ್ನು ಹೊರತೆಗೆದಿದೆ. ಮೃತದೇಹವನ್ನು ಆಶ್ರಮದ ಬಳಿಯ ಜಾಗದಲ್ಲಿ ಹೂಳಲಾಗಿತ್ತು. ಶವವನ್ನು ಹೂತಿಟ್ಟ ಸ್ಥಳವನ್ನು ಗುರುತಿಸಲು ನಾವು ಗುಪ್ತಚರ ಮತ್ತು ಮೊಬೈಲ್‌ ಕಣ್ಗಾವಲು ಬಳಸಿದ್ದೇವೆ ಎಂದು ಉನ್ನಾವೊ ಎಎಸ್‌ಪಿ ಶಶಿ ಶೇಖರ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ಐಫೋನ್, ಸ್ಮಾರ್ಟ್‍ವಾಚ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಶಾಸಕ

    ಅಕ್ರಮ ಸಂಬಂಧ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದ್ದು, ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.

    POLICE JEEP

    ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಪ್ರಕರಣ ಕುರಿತು ಪ್ರತಿಕ್ರಿಯಿಸಿದ್ದು, ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ತಪ್ಪಿತಸ್ಥರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾವು ಕಬ್ಬಿನ ಬಗ್ಗೆ ಮಾತಾಡಿದ್ರೆ, ಅವ್ರು ಜಿನ್ನಾ ಕುರಿತು ಮಾತನಾಡ್ತಾರೆ: ಕಾಂಗ್ರೆಸ್‌ ವಿರುದ್ಧ ಯೋಗಿ ವಾಗ್ದಾಳಿ

    ಡಿ.8 ರಂದು ಮಹಿಳೆ ಕಾಣೆಯಾಗಿದ್ದರು. ನನ್ನ ಮಗಳನ್ನು ಮಾಜಿ ಸಚಿವರ ಮಗ ರಾಜೋಲ್‌ ಸಿಂಗ್‌ ಅಪಹರಣ ಮಾಡಿದ್ದಾನೆ ಎಂದು ಮಹಿಳೆ ತಾಯಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

  • ಸಿಡಿ ಕೇಸ್ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ ಯುವತಿ

    ಸಿಡಿ ಕೇಸ್ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ ಯುವತಿ

    ಬೆಂಗಳೂರು: ಇನ್ನೇನೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ಸಿಗಲಿದೆ. ಎಸ್‍ಐಟಿ ಅತ್ಯಾಚಾರ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಗೆ ಮುಂದಾಗಿದೆ ಎಂಬ ಸುದ್ದಿ ಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿ ಮತ್ತೆ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

    ಎಸ್‍ಐಟಿ ಈಗ ನಡೆಸುತ್ತಿರುವ ತನಿಖೆಯ ಮೇಲೆ ನಂಬಿಕೆ ಇಲ್ಲ. ಈಗ ಇರುವ ಅಧಿಕಾರಿಗಳು ಪೂರ್ವಾಗ್ರಹ ಪೀಡಿತರಾಗಿ ತನಿಖೆ ನಡೆಸುತ್ತಿದ್ದಾರೆ ಎಂಬ ಅನುಮಾನ ಇದೆ. ಅಲ್ಲದೇ ಆರೋಪಿ ಪ್ರಭಾವಿ ಆಗಿರೋದರಿಂದ ಸರಿಯಾಗಿ ವಿಚಾರಣೆಯೂ ನಡೆಯುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರ ಮತ್ತು ಎಸ್‍ಐಟಿ ಮುಖ್ಯಸ್ಥರಿಗೆ ಉತ್ತರಿಸಲು ನೋಟಿಸ್ ನೀಡಿದೆ.

    ಪೋಷಕರ ಭೇಟಿಗೆ ಒಪ್ಪದ ಯುವತಿ:
    ಮೇ 27 ರಂದು ಸಿಡಿಯಲ್ಲಿದ್ದ ಯುವತಿ ತಂದೆ ಧಾರವಾಡ ಹೈಕೋರ್ಟ್ ನಲ್ಲಿ ನನ್ನ ಮಗಳನ್ನ ಹುಡುಕಿಕೊಡಿ ಎಂದು ಹೇಬಿಯಸ್ ಕಾರ್ಪಸ್ ಅರ್ಜಿಯನ್ನ ಸಲ್ಲಿಸಿದ್ದರು. ವೀಡಿಯೋ ವಿಚಾರಣೆ ವೇಳೆ, ನಾನು ಸುರಕ್ಷಿತವಾಗಿದ್ದೇನೆಂದು ಯುವತಿ ಹೇಳಿಕೆ ನೀಡಿದ್ದಾಳೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ವಿಳಾಸದಲ್ಲಿ ಪ್ರಸ್ತುತ ವಾಸವಾಗಿರುತ್ತೇನೆ. ನಾನು ಸ್ವಂತ ಇಚ್ಛೆ ಇಂದ ವಾಸವಾಗಿದ್ದು, ನನಗೆ ಇಲ್ಲಿ ಇರುವುದಕ್ಕೆ ಯಾರದೇ ಒತ್ತಡ ಇರುವುದಿಲ್ಲ ಮತ್ತು ನನ್ನ ರಕ್ಷಣೆಗಾಗಿ ಬೆಂಗಳೂರು ನಗರದ ಪೋಲೀಸರು ಭದ್ರತೆಯನ್ನು ಒದಗಿಸುತ್ತಾರೆ ಹಾಗೂ ನಾನು ಸುರಕ್ಷಿತವಾಗಿ ಇರುತ್ತೇನೆ. ನಾನು ಪ್ರಾಪ್ತ ವಯಸ್ಕಳಿದ್ದು ನಾನು ಸದ್ಯ ನಮ್ಮ ತಂದೆ ತಾಯಿ ಬಳಿ ಹೋಗಲು ಇಚ್ಛಿಸುವುದಿಲ್ಲ. ಈ ಪ್ರಕರಣಗಳು ಮುಗಿದ ನಂತರ ನಾನು ಅವರನ್ನು ಭೇಟಿ ಆಗುತ್ತೇನೆ ಎಂದು ಹೇಳಿದ್ದರು.

    ಒಪ್ಪಿತ ಲೈಂಗಿಕ ಕ್ರಿಯೆನಾ?: ಪ್ರಕರಣದ ಆರಂಭದಲ್ಲಿ ಯುವತಿ ನನಗೆ ಗೊತ್ತೆ ಇಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಆ ಯುವತಿ ನನಗೆ ಗೊತ್ತು ಅಂತ ಹೇಳಿದ್ದಾರೆ ಎನ್ನಲಾಗುತ್ತಿದೆ. ಆ ಯುವತಿ ಪ್ರಾಜೆಕ್ಟ್ ವಿಚಾರದಲ್ಲಿ ನನಗೆ ಪರಿಚಯ ಆಗಿದ್ದು ನಿಜ. ಅವಾಗಾವಾಗ ನಾನು ವಾಸವಾಗಿದ್ದ ಅಪಾರ್ಟ್ ಮೆಂಟ್ ಗೆ ಬರುತ್ತಿದ್ದಳು. ಅವಾಗ ಇಬ್ಬರು ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದೀವಿ. ಅದು ಕೂಡ ಆಕೆಯ ಸಮ್ಮತಿಯ ಮೇರೆಗೆ ಎಂದು ಎಸ್‍ಐಟಿ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಹಾನ್‌ ನಾಯಕ ಸೇರಿದಂತೆ 9 ಮಂದಿ ವಿರುದ್ಧ ಶೀಘ್ರವೇ ಕೇಸ್‌ – ಬಾಲಚಂದ್ರ ಜಾರಕಿಹೊಳಿ

    ನರೇಶ್ ಗೌಡ, ಶ್ರವಣ್‍ಗೆ ಜಾಮೀನು: ರಮೇಶ್ ಜಾರಕಿಹೊಳಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುವ ಮುನ್ನ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್‍ಮೇಲ್ ಕೇಸ್ ದಾಖಲು ಮಾಡಿದ್ರು. ಈ ಪ್ರಕರಣದ ಇಬ್ಬರು ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ಗೆ ಸಿಟಿ ಸಿವಿಲ್ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

    ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‍ಐಟಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡದಂತೆ ಆಕ್ಷೇಪಣೆ ಸಲ್ಲಿಸಿತ್ತು. ಆರೋಪಿಗಳು ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ ಎಂದು ವಾದ ಮಾಡಿದ್ದ ಎಸ್‍ಐಟಿಗೆ ಈ ಆದೇಶದಿಂದ ಹಿನ್ನಡೆಯಾಗಿದೆ. ಅಲ್ಲದೇ ಆದೇಶ ನೀಡಿದ ನ್ಯಾಯಾಲಯ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?

    ಏನಿದು ಪ್ರಕರಣ?
    ಮಾರ್ಚ್ 2ರಂದು ರಮೇಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು.  ಇದನ್ನೂ ಓದಿ: ಮಹಾನಾಯಕ ಗಾಂ…ನಾನು ಗಂಡಸು, ಡಿಕೆಶಿ ವಿರುದ್ಧ ದೂರು ಕೊಡ್ತೇನೆ- ರಮೇಶ್ ಜಾರಕಿಹೊಳಿ ಆಕ್ರೋಶ

    ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದರು. ಆ ಬಳಿಕದಿಂದ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಂತರ ಸ್ವತಃ ಸುದ್ದಿಗೋಷ್ಠಿ ಕರೆದು ಮಾಧ್ಯಮಗಳ ಮುಂದೆ ಭಾವುಕರಾಗಿದ್ದರು. ಇಷ್ಟೆಲ್ಲಾ ಆದ ನಂತರ ಮಾಜಿ ಸಚಿವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಗೋಕಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಪಿಪಿಇ ಕಿಟ್ ಧರಿಸಿ ಉಪಚುನಾವಣೆಗೆ ಮತದಾನ ಮಾಡಿದ್ದರು. ಇದನ್ನೂ ಓದಿ:  ಸಿಡಿ ಕೇಸ್ – ಮಗಳನ್ನು ಹುಡುಕಿ ಕೊಡಿ ಎಂದು ತಂದೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

  • ನಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡಬೇಡಿ – 6 ಸಚಿವರಿಂದ ಕೋರ್ಟ್‍ಗೆ ಅರ್ಜಿ

    ನಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡಬೇಡಿ – 6 ಸಚಿವರಿಂದ ಕೋರ್ಟ್‍ಗೆ ಅರ್ಜಿ

    ಬೆಂಗಳೂರು: ಮಾಜಿ ಸಚಿವರೊಬ್ಬರ ರಾಸಲೀಲೆ ಸಿಡಿ ಹೊರ ಬರುತ್ತಿದ್ದಂತೆ ಭೀತಿ ಶುರುವಾಗಿದ್ದು, ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ವಲಸೆ ಬಂದ 6 ಜನ ಸಚಿವರು ಕೋರ್ಟ್ ಮೆಟ್ಟಿಲೇರಿದ್ದಾರೆ.

    ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದು ಎಂದು 6 ಜನ ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

    ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ? ಇದ್ದಕ್ಕಿಂದ್ದಂತೆ ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

  • ‘ಬಾಂಬೆ ಡೇಸ್’ನಲ್ಲಿ ಹಲವು ಸತ್ಯ ಸ್ಫೋಟ- ಎಚ್.ವಿಶ್ವನಾಥ್

    ‘ಬಾಂಬೆ ಡೇಸ್’ನಲ್ಲಿ ಹಲವು ಸತ್ಯ ಸ್ಫೋಟ- ಎಚ್.ವಿಶ್ವನಾಥ್

    – ಯಾರೇ ವಿರೋಧಿಸಿದ್ರೂ ಪುಸ್ತಕ ಬಿಡುಗಡೆ ನಿಲ್ಲಲ್ಲ

    ಮೈಸೂರು: ಮಾಜಿ ಸಚಿವ ಎಚ್.ವಿಶ್ವನಾಥ್ ‘ಬಾಂಬೆ ಡೇಸ್’ ಎಂಬ ಪುಸ್ತಕ ಬರೆಯುತ್ತಿದ್ದಾರೆ. ಮೈತ್ರಿ ಸರ್ಕಾರ ಪತನದ ಕುರಿತು ಪುಸ್ತಕ ಇದ್ದಾಗಿದೆ. ಹೀಗಾಗಿ ಅನೇಕ ಸತ್ಯಗಳು ಸ್ಫೋಟಗೊಳ್ಳಲಿವೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಇದಕ್ಕೆ ಯಾರ ಪಾತ್ರವೇನು. ಏನೆಲ್ಲಾ ಘಟನೆಗಳು ನಡೆದವು ಎಂಬ ವಿಚಾರವನ್ನು ಬಾಂಬೆ ಡೇಸ್ ಪುಸ್ತಕದಲ್ಲಿ ಬರೆಯುತ್ತೇನೆ ಎಂದರು.

    2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರು ಸೇರಿ ಮಾಜಿ ಮುಖ್ಯಮಂತ್ರಿ ಧರಮ್ ಸಿಂಗ್ ಅವರ ಸರ್ಕಾರವನ್ನು ಪತನಗೊಳಿಸಿದ್ದರು. ಅಂದು ಮತ್ತೊಂದು ಸರ್ಕಾರ ರಚನೆ ಮಾಡಿದರು. ಅದರಂತೆ ಈಗ ನಡೆದ ರಾಜಕೀಯ ಕ್ರಾಂತಿಯನ್ನು ಸಾಹಿತಿಯಾಗಿ ಜನರಿಗೆ ತಿಳಿಸುವ ಕೆಲಸ ಮಾಡುತ್ತೇನೆ. 17 ಜನ ಶಾಸಕರು ಬಿಜೆಪಿಗೆ ಸೇರಿದರು ಎನ್ನುವುದನ್ನು ತೆರೆದಿಡುತ್ತೇನೆ ಎಂದು ತಿಳಿಸುತ್ತೇನೆ.

    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಶ್ರಮಿಸಿದ ಎಲ್ಲರ ಹೆಸರನ್ನು ಯಥಾವತ್ತಾಗಿ ಬರೆಯುತ್ತೇನೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಪಾರದರ್ಶಕವಾಗಿ ರಾಜಕಾರಣ ಮಾಡಿದ್ದೇನೆ. ಹೀಗಾಗಿ ಯಾವುದೇ ಹೆಸರು, ವಿಚಾರವನ್ನು ಮುಚ್ಚಿಡುವ ಮಾತೇ ಇಲ್ಲ ಎಂದು ತಿಳಿಸಿದರು.

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನದ ಮುಹೂರ್ತ ನಿಗದಿ ಮಾಡಿದ್ದು ಯಾರು? ಎಲ್ಲೆಲ್ಲಿ ಸಭೆ ನಡೆದವು, ಸಭೆಯಲ್ಲಿ ಇದ್ದವರು ಯಾರು ಎಂಬದನ್ನು ಹೆಸರು ಸಮೇತ ಬರೆಯುತ್ತೇನೆ. ಕೆಲವೇ ವಾರಗಳಲ್ಲಿ ಅದರ ಕೆಲವು ಅಧ್ಯಾಯಗಳನ್ನು ಮಾಧ್ಯಮದವರ ಜೊತೆ ಹಂಚಿಕೊಳ್ಳುತ್ತೇನಿ. ಈ ಪುಸ್ತಕ ವಿವಾದವಾದರೆ ಅದಕ್ಕೆ ನಾನು ಹೊಣೆಯಲ್ಲ. ಸತ್ಯ ಹೇಳುವುದಷ್ಟೆ ನನ್ನ ಕೆಲಸ. ಯಾರೇ ವಿರೋಧ ಮಾಡಿದರು ಈ ಪುಸ್ತಕ ಬಿಡುಗಡೆ ನಿಲ್ಲುವುದಿಲ್ಲ. ಈ ಪುಸ್ತಕದಿಂದ ಸರ್ಕಾರಕ್ಕೆ ಸಮಸ್ಯೆ ಆಗಲ್ಲ ಎಂದು ವಿಶ್ವನಾಥ್ ಹೇಳಿದರು.

  • ಅವರೆಲ್ಲಾ ಇಲ್ಲಿ, ಆದ್ರೆ ಇವರು ಎಲ್ಲಿ?

    ಅವರೆಲ್ಲಾ ಇಲ್ಲಿ, ಆದ್ರೆ ಇವರು ಎಲ್ಲಿ?

    ಬೆಂಗಳೂರು: ಅವತ್ತು ಅವರು ಬಂದಾಗ ಇವರೇ ಎಲ್ಲಾ ಆಗಿ ಮುಂದೆ ನಿಂತು ಎಲ್ಲರನ್ನೂ ಕಾಪಾಡಿದ್ದರು. ಆದರೆ ಈ ಕಷ್ಟ ಕಾಲದಲ್ಲಿ ಅವರೆಲ್ಲಿ ಹೋದರು? ಏನು ಮಾಡುತ್ತಿದ್ದಾರೆ? ಯಾಕಾಗಿ ಈ ಮೌನ? ಪಕ್ಷಕ್ಕೆ ಏನೇ ಸಂಕಷ್ಟ ಎದುರಾದರೂ ಪಕ್ಷದ ಪಾಲಿಗೆ ಅವರೆ ಟ್ರಬಲ್‍ಶೂಟರ್. ಆದರೆ ಇಂತಹ ಸಂಕಷ್ಟದ ಸಂದರ್ಭದಲ್ಲೂ ಆ ನಾಯಕನ ಮೌನವೇಕೆ? ಇದು ಕಾಂಗ್ರೆಸ್‍ನ ಟ್ರಬಲ್ ಶೂಟರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಕಾಂಗ್ರೆಸ್ ವಲಯದಲ್ಲೇ ಕೇಳಿಬರುತ್ತಿರುವ ಮಾತು.

    ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ನಾಯಕರು ಆಪರೇಷನ್ ಕಮಲಕ್ಕೆ ಮುದಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿಯ ನಾಯಕರು ಮಧ್ಯಪ್ರದೇಶದ ನಾಲ್ವರು ಶಾಸಕರನ್ನ ಬೆಂಗಳೂರಿಗೆ ತಂದಿಟ್ಟುಕೊಂಡಿದ್ದಾರೆ. ಸಹಜವಾಗಿಯೇ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದೆ. ಈ ಸಂದರ್ಭದಲ್ಲಿ ಕೈ ನಾಯಕರಿಗೆ ನೆನಪಾಗುವುದೇ ಡಿ.ಕೆ.ಶಿವಕುಮಾರ್. ಅಂದು ಗುಜರಾತ್ ಶಾಸಕರನ್ನು ರಾಜ್ಯಕ್ಕೆ ತಂದಿಟ್ಟುಕೊಂಡು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಸೆಡ್ಡು ಹೊಡೆದವರು ಡಿ.ಕೆ.ಶಿವಕುಮಾರ್. ಸಮ್ಮಿಶ್ರ ಸರ್ಕಾರ ಉಳಿಸಲು ಬಿಜೆಪಿ ಆಡಳಿತದ ಮಹರಾಷ್ಟ್ರದ ಮುಂಬೈಗೆ ಹೋಗಿ ಕಾಂಗ್ರೆಸ್ ಶಾಸಕರನ್ನು ಕರೆತರುವ ಯತ್ನಿಸಿದ್ದರು. ಇದನ್ನೂ ಓದಿ: ಆಪರೇಷನ್ ಮಧ್ಯಪ್ರದೇಶಕ್ಕೆ ಕರ್ನಾಟಕವೇ ಹೆಡ್ ಆಫೀಸ್

    ಆದರೆ ಈಗ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ತಂದಿಟ್ಟುಕೊಂಡಿದ್ದರೂ ಡಿ.ಕೆ.ಶಿವಕುಮಾರ್ ಸೈಲೆಂಟಾಗಿದ್ದಾರೆ. ಅದಕ್ಕೆ ಅವರು ಎದುರಿಸುತ್ತಿರುವ ಕಾನೂನಿನ ತೊಡಕಿನ ಕಾರಣವಿರಬಹುದು. ಆದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಅಂತ ಪದೇ ಪದೇ ಹೇಳುವ ಡಿಕೆಶಿ ಪಕ್ಷ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ ನೆರವಿಗೆ ಬಂದವರು. ಈಗ ವಿರೋಧಿ ಪಾಳಯ ಸ್ವಪಕ್ಷಿಯ ಶಾಸಕರನ್ನು ಬೆಂಗಳೂರಿಗೆ ಕರೆತಂದು ಬಚ್ಚಿಟ್ಟರು ಟ್ರಬಲ್ ಶೂಟರ್ ಮಾತ್ರ ಮೌನಕ್ಕೆ ಶರಣಾಗಿರುವುದು ಅಚ್ಚರಿಯೇ ಸರಿ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

  • ಬಜೆಟ್‍ನಲ್ಲಿ ಕಟೀಲ್‍ಗೆ ಸೆಡ್ಡು ಹೊಡೆದ ಸಿಎಂ: ಮಾಜಿ ಸಚಿವ ಸೊರಕೆ

    ಬಜೆಟ್‍ನಲ್ಲಿ ಕಟೀಲ್‍ಗೆ ಸೆಡ್ಡು ಹೊಡೆದ ಸಿಎಂ: ಮಾಜಿ ಸಚಿವ ಸೊರಕೆ

    ಉಡುಪಿ: ಬಜೆಟ್‍ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಿಎಂ ಸೆಡ್ಡು ಹೊಡೆದಿದ್ದಾರೆ. ಅಂದು ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟಿಸಿದ್ದ ನಳೀನ್ ಕುಮಾರ್ ಕಟೀಲ್ ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವಾಗ ಬಜೆಟ್‍ನಲ್ಲಿ ಯೋಜನೆಗೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ವ್ಯಂಗ್ಯವಾಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲೇ ಹಲವು ನೇತ್ರಾವತಿ ತಿರುವು ವಿರುದ್ಧ ಸಾಕಷ್ಟು ಹೋರಾಟಗಳು ನಡೆದಿತ್ತು. ಅದು ಯಡಿಯೂರಪ್ಪನವರಿಗೆ ಗೊತ್ತಿತ್ತು. ಈಗ ಸಮಯ ಬಳಸಿಕೊಂಡು ತನ್ನ ರಾಜ್ಯಾಧ್ಯಕ್ಷರಿಗೆ ಸಿಎಂ ಯಡಿಯೂರಪ್ಪ ನೇರ ಸೆಡ್ಡು ಹೊಡೆದಿದ್ದಾರೆ. ಎತ್ತಿನಹೊಳೆ ಯೋಜನೆಗೆ 1500 ಕೋಟಿ ಬಿಡುಗಡೆ ಮಾಡಿದ್ದಾರೆ ಎಂದು ಸೊರಕೆ ಛೇಡಿಸಿದರು.

    ಕೊರೊನಾ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮ ಬಜೆಟ್‍ನಲ್ಲಿ ಇರಲಿಲ್ಲ. ಆರ್ಥಿಕ ಚೇತರಿಕೆ ಕೊಡದ ಬಜೆಟ್ ಮಂಡನೆಯಾಗಿದೆ. ದೇಶ, ವಿಶ್ವ ಚಿಂತಿಸುವಾಗ ಸಿಎಂ ಯಡಿಯೂರಪ್ಪನಿಗೆ ಕೊರೊನಾ ಚಿಂತೆಯೇ ಇಲ್ಲ ಎಂದರು.

    ಕರಾವಳಿ ಸಮಸ್ಯೆಯನ್ನು ಸಿಎಂ ಉಲ್ಲೇಖ ಮಾಡಿಲ್ಲ. ಉದ್ಯೋಗ ಸೃಷ್ಟಿಯ ಯಾವುದೇ ಕಾರ್ಯಕ್ರಮ ಇಲ್ಲ. ಯಡಿಯೂರಪ್ಪ ಬಜೆಟ್ ಪುನರುಜ್ಜೀವನ ಕೊಡುವಲ್ಲಿ ವಿಫಲವಾಗಿದೆ. ಯಡಿಯೂರಪ್ಪರದ್ದು ನಿರಾಶಾದಾಯಕ ಬಜೆಟ್. ಕೇಂದ್ರದ ಅನುದಾನ ಬಂದಿಲ್ಲವೆಂದು ಸಿಎಂ ಬಜೆಟ್ ಭಾಷಣದಲ್ಲೇ ಒಪ್ಪಿಕೊಂಡಿರುವುದು ಅವರ ಅಸಹಾಯಕತೆಯ ಪ್ರದರ್ಶನ ಎಂದರು.

  • ಮೊದಲು ಗ್ರಾಮದ ರಸ್ತೆ ಅಭಿವೃದ್ಧಿ ಮಾಡಿ, ಆಮೇಲೆ ನಿಮ್ಮ ಕಾಲುವೆ ದುರಸ್ತಿ ಮಾಡಿಕೊಳ್ಳಿ: ಕಿಮ್ಮನೆ ಆಗ್ರಹ

    ಮೊದಲು ಗ್ರಾಮದ ರಸ್ತೆ ಅಭಿವೃದ್ಧಿ ಮಾಡಿ, ಆಮೇಲೆ ನಿಮ್ಮ ಕಾಲುವೆ ದುರಸ್ತಿ ಮಾಡಿಕೊಳ್ಳಿ: ಕಿಮ್ಮನೆ ಆಗ್ರಹ

    ಶಿವಮೊಗ್ಗ: ಮೊದಲು ನಮ್ಮ ಗ್ರಾಮದ ಸೇತುವೆ, ರಸ್ತೆ ದುರಸ್ತಿ ಮಾಡಿ ಆಮೇಲೆ ನಿಮ್ಮ ಕಾಲುವೆ ದುರಸ್ತಿ ಮಾಡಿ ಎಂದು ಆಗ್ರಹಿಸಿ ಕಾಲುವೆ ಕಾಮಗಾರಿಯನ್ನು ಗ್ರಾಮಸ್ಥರು ನಿಲ್ಲಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕರಿಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ.

    ಇಲ್ಲಿನ ಸಾವೇಹಕ್ಲು ಜಲಾಶಯದಿಂದ ಲಿಂಗನಮಕ್ಕಿ ಜಲಾಶಯಕ್ಕೆ ನೀರು ಹರಿಸುವ ಕಾಲುವೆಯ ದುರಸ್ತಿ ಕಾಮಗಾರಿಯನ್ನು ಕೆಪಿಸಿ ನಿರ್ವಹಿಸುತ್ತಿದೆ. ಬುಧವಾರ ಕಾಮಗಾರಿ ಆರಂಭವಾಗುತ್ತಿದ್ದಂತೆ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಜಮಾವಣೆಯಾದ ಸ್ಥಳೀಯರು ಕಾಮಗಾರಿ ನಡೆಸದಂತೆ ತಾಕೀತು ಮಾಡಿದರು. ಅಲ್ಲದೇ ಕಾಮಗಾರಿ ನಡೆಸುವುದಕ್ಕೆ ಗ್ರಾಮಸ್ಥರು ಅವಕಾಶ ಕೊಡದೆ ನಿಲ್ಲಿಸಿದರು.

    ಈ ಸುದ್ದಿ ತಿಳಿಯುತ್ತಿದ್ದಂತೆ ಕರಿಮನೆ ಗ್ರಾಮಪಂಚಾಯ್ತಿಗೆ ಭೇಟಿ ನೀಡಿದ ಕೆಪಿಸಿ ಅಧಿಕಾರಿಗಳು, ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕಾಲುವೆಯಿಂದ ನೀರು ಹರಿಸುತ್ತಿರುವ ಕಾರಣ ಮಳಲಿ ಸೇತುವೆ ಸಂಪೂರ್ಣ ಶಿಥಿಲಗೊಂಡಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ಓಡಾಡದ ಸ್ಥಿತಿ ನಿರ್ಮಾಣವಾಗಿದೆ. ಆದರೆ ಕಾಲುವೆ ದುರಸ್ತಿ ಕಾಮಗಾರಿಯನ್ನು ವರ್ಷಂಪ್ರತಿ ಮಾಡುತ್ತಿದ್ದೀರಿ. ಸೇತುವೆ ಮತ್ತು ರಸ್ತೆ ಅಭಿವೃದ್ಧಿ ಮಾಡುವವರೆಗೆ ಕಾಲುವೆ ಕಾಮಗಾರಿಗೆ ಅವಕಾಶ ನೀಡುವುದಿಲ್ಲ ಎಂದು ಆಗ್ರಹಿಸಿದರು.

    ಈ ವೇಳೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಗ್ರಾಮಸ್ಥರು, ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

  • ಚುನಾವಣೆ ವೇಳೆ ಸೀಜ್ ಆಗಿದ್ದ ರಿವಾಲ್ವರ್ ಆನಂದ್ ಅಸ್ನೋಟಿಕರ್‌ಗೆ ವಾಪಸ್

    ಚುನಾವಣೆ ವೇಳೆ ಸೀಜ್ ಆಗಿದ್ದ ರಿವಾಲ್ವರ್ ಆನಂದ್ ಅಸ್ನೋಟಿಕರ್‌ಗೆ ವಾಪಸ್

    ಹಾವೇರಿ: ಕಳೆದ ಲೋಕಸಭಾ ಚುನಾವಣೆ ವೇಳೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಇಂದು ಜಿಲ್ಲೆ ರಾಣೇಬೆನ್ನೂರಿನ ಜೆಎಂಎಫ್‍ಸಿ ಕೋರ್ಟಿಗೆ ಹಾಜರಾಗಿದ್ದರು.

    2019ರ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಜಾರಿ ಮಾಡಿದ್ದ ಸಂದರ್ಭದಲ್ಲಿ ಪರವಾನಗಿ ನವೀಕರಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಅಲ್ಲದೇ ಮಾಜಿ ಸಚಿವರ ಕಾರು ಮತ್ತು ರಿವಾಲ್ವರ್ ಅನ್ನು ಸೀಜ್ ಮಾಡಲಾಗಿತ್ತು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ಅಧಿಕಾರಿಗಳು ಮಾಕನೂರು ಚೆಕ್‍ಪೋಸ್ಟ್ ನಲ್ಲಿ ಬಳಿ ರಿವಾಲ್ವರ್ ಮತ್ತು ಕಾರನ್ನು ವಶಕ್ಕೆ ಪಡೆದಿದ್ದರು.

    ಪ್ರಕರಣ ಸಂಬಂಧ ಇಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರು ಸಂಬಂಧಿಸಿದ ದಾಖಲೆಗಳನ್ನು ಖುದ್ದು ಕೋರ್ಟಿಗೆ ಹಾಜರು ಪಡಿಸಿದ್ದರು. ಅಲ್ಲದೇ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದರಿಂದ ನ್ಯಾಯ ಸಿಕ್ಕಿದೆ. ಅಂದಿನ ದಿನ ಕಾರು ಚಾಲಕ ರಿವಾಲ್ವರ್ ಗೆ  ಸಂಬಂಧಿಸಿದ ದಾಖಲೆ ಬಿಟ್ಟು ಬಂದಿದ್ದು ತೊಂದರೆಯಾಗಿತ್ತು. ಈಗ ನ್ಯಾಯ ಸಿಕ್ಕಿದೆ ಎಂದು ಅಸ್ನೋಟಿಕರ್ ಪ್ರತಿಕ್ರಿಯೆ ನೀಡಿದರು.

  • ಕಾರು ಬಿಟ್ಟು ಬಸ್ಸಿನಲ್ಲಿ ಪ್ರಯಾಣಿಸಿದ ಮಾಜಿ ಸಚಿವ ರಮಾನಾಥ ರೈ

    ಕಾರು ಬಿಟ್ಟು ಬಸ್ಸಿನಲ್ಲಿ ಪ್ರಯಾಣಿಸಿದ ಮಾಜಿ ಸಚಿವ ರಮಾನಾಥ ರೈ

    ಮಂಗಳೂರು: ಕಾರಿನಲ್ಲೇ ದಿನವಿಡೀ ಓಡಾಟ ಮಾಡುತ್ತಿದ್ದ ಮಾಜಿ ಸಚಿವ ರಮಾನಾಥ ರೈ ಇಂದು ಮಾತ್ರ ಖಾಸಗಿ ಬಸ್ಸಿನಲ್ಲಿ ಇತರ ಪ್ರಯಾಣಿಕರೊಂದಿಗೆ ಪ್ರಯಾಣ ಬೆಳೆಸಿದರು.

    ಮಾಜಿ ಸಚಿವ ರಮಾನಾಥ ರೈ ತಮ್ಮ ಊರು ಬಂಟ್ವಾಳದಿಂದ ಖಾಸಗಿ ಸಾರಿಗೆ ಬಸ್ಸಿನಲ್ಲಿ ಮಂಗಳೂರಿಗೆ ಆಗಮಿಸಿ, ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಮಂಗಳೂರಿನ ಗೋಲಿಬಾರ್ ಘಟನೆ ಖಂಡಿಸಿ, ಮಂಗಳೂರಿನ ಪುರಭವನದ ಮುಂಭಾಗದಲ್ಲಿ ಒಂದು ದಿನದ ಧರಣಿ ನಡೆಸಲಾಗುತ್ತಿದೆ. ಈ ವೇಳೆ, ಧರಣಿಯಲ್ಲಿ ಪಾಲ್ಗೊಳ್ಳಲು ರಮಾನಾಥ ರೈ ಮಂಗಳೂರಿಗೆ ಬಸ್ಸಿನಲ್ಲಿ ಆಗಮಿಸಿ ಗಮನ ಸೆಳೆದರು.

    ಬಂಟ್ವಾಳದ ಬಿ.ಸಿ.ರೋಡ್‍ನಲ್ಲಿ ಬಸ್ ಹತ್ತಿ ಕುಳಿತ ರಮಾನಾಥ ರೈ ಅವರು ಯಾವುದೇ ಭದ್ರತೆ ಇಲ್ಲದೆ ಜನಸಾಮಾನ್ಯರ ಜೊತೆ ಪ್ರಯಾಣ ಮಾಡಿದರು. ಸಚಿವರಾಗಿದ್ದ ವೇಳೆ ಸದಾ ಬ್ಯುಸಿಯಾಗಿರುತ್ತಿದ್ದ ರಮಾನಾಥ ರೈ, ಈಗಲೂ ಬ್ಯುಸಿ. ಆದರೆ ಸೋತರೂ ಜನಸಾಮಾನ್ಯರ ಜೊತೆಗಿದ್ದೇನೆ ಎನ್ನುವುದನ್ನು ಬಸ್ಸಿನಲ್ಲಿ ಓಡಾಡುವ ಮೂಲಕ ಪರೋಕ್ಷವಾಗಿ ತೋರಿಸಿದ್ದಾರೆ.