Tag: former minister

  • ತಿರುವಳ್ಳೂರಿನ ವಿಷ್ಣುದೇವರ ಮೊರೆಹೋದ ಮಾಜಿ ಸಚಿವ ಡಿಕೆಶಿ!

    ತಿರುವಳ್ಳೂರಿನ ವಿಷ್ಣುದೇವರ ಮೊರೆಹೋದ ಮಾಜಿ ಸಚಿವ ಡಿಕೆಶಿ!

    ಬೆಂಗಳೂರು: ಮಾಜಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರು ತಮಿಳುನಾಡಿನ ತಿರವಳ್ಳೂರಿನ ವಿಷ್ಣುದೇವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ರಾಜ್ಯದ ಮೈತ್ರಿ ಸರ್ಕಾರ ಸಂಪುಟ ರಚನೆ ಹಗ್ಗಜಗ್ಗಾಟದ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಸಿಎಂ ಕುಮಾರಸ್ವಾಮಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಸಂಪುಟ ವಿಸ್ತರಣೆ ಹಾಗೂ ಲೋಕಸಭಾ ಚುನಾವಣೆಯ ಮೈತ್ರಿ ಕುರಿತು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ಶುಕ್ರವಾರವೇ ದೇವಾಲಯಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್ ಅವರು ವಿಶೇಷ ಪೂಜೆ ಹಾಗೂ ಹೋಮ ಹವನ ನಡೆಸಿದ್ದಾರೆ.

    ದೇವಾಲಯಕ್ಕೆ ಕುಟುಂಬದ ಸದಸ್ಯರು ಹಾಗೂ ಆಪ್ತರು ಮಾತ್ರ ಭೇಟಿ ನೀಡಿದ್ದಾರೆ. ಹಿರಿಯ ಜ್ಯೋತಿಷಿಗಳ ಮುಂದಾಳತ್ವದಲ್ಲಿ ಪೂಜೆ ಹಾಗೂ ಹೋಮ ಕಾರ್ಯ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭಿಸಿದ್ದು, ಈ ವೇಳೆ ಯಾರೊಂದಿಗೂ ಮಾತನಾಡದೆ ಪೂಜೆ ಕಾರ್ಯದಲ್ಲಿ ಡಿಕೆಶಿ ಮಗ್ನರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಸಮ್ಮಿಶ್ರ ಸರ್ಕಾರದ ರಚನೆ ಹಾಗೂ ಸಂಪುಟ ವಿಸ್ತರಣೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮುಖ ಕಾರ್ಯನಿರ್ವಹಿಸಿದ್ದರು. ಇದೇ ವೇಳೆ ಸಿಬಿಐ ಅಧಿಕಾರಿಗಳು ಡಿಕೆಶಿ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

    ಸಂಪುಟ ವಿಸ್ತರಣೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಇಂಧನ ಖಾತೆಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಅಂಶ ಕಾಂಗ್ರೆಸ್ ವಲಯದಿಂದ ಕೇಳಿ ಬಂದಿತ್ತು. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿ ತಾನು ಯಾವುದೇ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಪಕ್ಷದ ನಾಯಕರು, ಹೈಕಮಾಂಡ್ ನೀಡುವ ಜವಾಬ್ದಾರಿ ನಿರ್ವಹಿಸುವುದಾಗಿ ತಿಳಿಸಿದ್ದರು. ಅಲ್ಲದೇ ಈ ವೇಳೆ ಮಾತನಾಡಿದ್ದ ಸಿಎಂ ಕುಮಾರಸ್ವಾಮಿ ಅವರು ಬುಧವಾರ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಮಾಹಿತಿಯನ್ನು ನೀಡಿದ್ದರು.

  • ಡಿಕೆಶಿಗಿಲ್ಲ ಉಪ ಮುಖ್ಯಮಂತ್ರಿ ಪಟ್ಟ – ಎರಡನೇ ಡಿಸಿಎಂ ಹುದ್ದೆ ಸೃಷ್ಟಿಯೂ ಡೌಟು

    ಡಿಕೆಶಿಗಿಲ್ಲ ಉಪ ಮುಖ್ಯಮಂತ್ರಿ ಪಟ್ಟ – ಎರಡನೇ ಡಿಸಿಎಂ ಹುದ್ದೆ ಸೃಷ್ಟಿಯೂ ಡೌಟು

    ಬೆಂಗಳೂರು: ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಪಟ್ಟ ನೀಡಲು ಹಿಂದೇಟು ಹಾಕಲಾಗಿದೆ ಎಂಬುದಾಗಿ ತಿಳಿದುಬಂದಿದೆ.

    ಶನಿವಾರ ರಾತ್ರಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮತ್ತೊಂದು ಡಿಸಿಎಂ ಹುದ್ದೆ ನೀಡುವ ಕುರಿತು ಚರ್ಚೆ ನಡೆಸಲಾಗಿತ್ತು. ಈ ವೇಳೆ ಡಿಕೆಶಿಗೆ ಡಿಸಿಎಂ ಪಟ್ಟ ಕೊಡಲು ಹಿಂದೇಟು ಹಾಕಲಾಗಿದೆ ಎನ್ನುವ ಮಾಹಿತಿಯೊಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಡಿಕೆಶಿ ಜೊತೆ ರಾಹುಲ್, ಸೋನಿಯಾ ಗಾಂಧಿ ಪ್ರತ್ಯೇಕ ಚರ್ಚೆ

    ಜಾತಿ ಲೆಕ್ಕಾಚಾರದ ಹಿನ್ನಲೆ ಡಿಸಿಎಂ ಹುದ್ದೆ ನೀಡಲು ನಿರಾಕರಿಸಲಾಗಿದೆ. ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರು ಒಕ್ಕಲಿಗರಾದ ಹಿನ್ನೆಲೆಯಲ್ಲಿ ಎರಡು ಪ್ರಮುಖ ಹುದ್ದೆ ಒಂದೇ ಸಮುದಾಯಕ್ಕೆ ನೀಡಲು ವಿರೋಧ ವ್ಯಕ್ತವಾಗಿದೆ. ಇತರೆ ಸಮುದಾಯಕ್ಕೆ ಮತ್ತೊಂದು ಡಿಸಿಎಂ ಹುದ್ದೆ ನೀಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ನಾನು ಫುಟ್ಬಾಲ್ ಆಡೋನಲ್ಲ, ಚೆಸ್ ಆಡಿ ಚೆಕ್ ಕೊಡುವವನು: ಹೈಕಮಾಂಡ್‍ಗೆ ಡಿಕೆಶಿ ಟಾಂಗ್

    ಈ ವೇಳೆ ರಾಹುಲ್ ಗಾಂಧಿ ಮತ್ತೊಂದು ಡಿಸಿಎಂ ಹುದ್ದೆ ಅವಶ್ಯಕತೆಯ ಕುರಿತು ಪ್ರಶ್ನಿಸಿದ್ದಾರೆ. ಮತ್ತೊಂದು ಡಿಸಿಎಂ ಹುದ್ದೆಯಿಂದ ಆಗುವ ಲಾಭ ನಷ್ಟ ಕುರಿತು ಲೆಕ್ಕಾಚಾರ ಹಾಕಿದ ಅವರು, ಮತ್ತೊಂದು ಡಿಸಿಎಂ ಹುದ್ದೆ ವಿಚಾರ ಅಂತಿಮಕ್ಕೆ ಬರಲಿಲ್ಲ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಕಪ್ ಎಚ್‍ಡಿಕೆ ಗೆದ್ರೂ ಮ್ಯಾನ್ ಆಫ್ ದಿ ಮ್ಯಾಚ್ ಡಿಕೆಶಿ!

  • ಎಂ.ಬಿ ಪಾಟೀಲ್ ವಿರುದ್ಧ ಅಶ್ಲೀಲ ಪದ ಬಳಕೆ- ಕಾಯಕರ್ತೆಯರಿಂದ ಮಹಿಳೆಯ ಮುಖಕ್ಕೆ ಮಸಿ

    ಎಂ.ಬಿ ಪಾಟೀಲ್ ವಿರುದ್ಧ ಅಶ್ಲೀಲ ಪದ ಬಳಕೆ- ಕಾಯಕರ್ತೆಯರಿಂದ ಮಹಿಳೆಯ ಮುಖಕ್ಕೆ ಮಸಿ

    ವಿಜಯಪುರ: ಮಾಜಿ ಸಚಿವ ಎಂ. ಬಿ ಪಾಟೀಲ್ ವಿರುದ್ಧ ಮಹಿಳೆಯೊಬ್ಬರು ಅಶ್ಲೀಲ ಪದ ಬಳಕೆ ಮಾಡಿದ್ದರೆಂದು ಕಾಂಗ್ರೆಸ್ ಕಾರ್ಯಕರ್ತೆಯರು ಮಸಿ ಬಳಿದ ಘಟನೆ ವಿಜಯಪುರದಲ್ಲಿ ನಡೆದಿದೆ.

    ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಹತ್ತಿರವಿರುವ ಗಗನ ಮಹಲ್ ಹತ್ತಿರ ಮಹಿಳೆಯ ಮುಖಕ್ಕೆ ಮಸಿ ಬಳಿದು ಕಾರ್ಯಕರ್ತೆಯರು ಪಾಠ ಕಲಿಸಿದ್ದಾರೆ.

    ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ರಬಕವಿ ಗ್ರಾಮದ ಚಂದ್ರೆವ್ವ ಎಂಬ ಮಹಿಳೆಯ ವಿರುದ್ಧ ಕಾರ್ಯಕರ್ತೆಯರು ಮಂಗಳವಾರ ಜಾಥಾದ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

    ಇತ್ತೀಚೆಗೆ ನಡೆದ ವಿಜುಗೌಡ ಪಾಟೀಲ್ ನೇತೃತ್ವದಲ್ಲಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಚಂದ್ರೆವ್ವ, ಎಂ.ಬಿ.ಪಾಟೀಲ್ ವಿರುದ್ಧ ಅಶ್ಲೀಲ ಪದ ಬಳಸಿದ್ದರು ಎಂದು ಮನವಿಯಲ್ಲಿ ತಿಳಿಸಿದ್ದರು. ಸದ್ಯ ಕಾರ್ಯಕರ್ತೆಯರು ಮಸಿ ಬಳಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

  • ನಮ್ಮ ಕಾರ್ಯಕರ್ತರನ್ನ ಮುಟ್ಟಿದ್ರೆ ಪರಿಸ್ಥಿತಿ ನೆಟ್ಟಗಿರಲ್ಲ – ಹಾಲಿ ಶಾಸಕರ ವಿರುದ್ಧ ತೊಡೆ ತಟ್ಟಿದ ಮಾಜಿ ಸಚಿವ

    ನಮ್ಮ ಕಾರ್ಯಕರ್ತರನ್ನ ಮುಟ್ಟಿದ್ರೆ ಪರಿಸ್ಥಿತಿ ನೆಟ್ಟಗಿರಲ್ಲ – ಹಾಲಿ ಶಾಸಕರ ವಿರುದ್ಧ ತೊಡೆ ತಟ್ಟಿದ ಮಾಜಿ ಸಚಿವ

    ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತಿರೋ ಬಿಜೆಪಿ ಅಭ್ಯರ್ಥಿ ಕಾರ್ಯಕರ್ತರ ಮಧ್ಯೆ ಭರ್ಜರಿ ಭಾಷಣ ಮಾಡಿ ತೊಡೆ ತಟ್ಟಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರನ್ನು ವಿನಃ ಕಾರಣ ಮುಟ್ಟಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಹಾಲಿ ಶಾಸಕರ ವಿರುದ್ಧ ತೊಡೆತಟ್ಟಿದ ಪ್ರಸಂಗ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

    ಆನೇಕಲ್ ನಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ ಮಾಜಿ ಸಚಿವ ನಾರಾಯಣ ಸ್ವಾಮಿ ಹಾಲಿ ಕಾಂಗ್ರೆಸ್ ಶಾಸಕ ಬಿ ಶಿವಣ್ಣ ವಿರುದ್ಧ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ.

    ಬಿಜೆಪಿ ಕ್ಷೇತ್ರದಲ್ಲಿ ಸೋತಿರಬಹುದು, ಆದರೆ ಕಾರ್ಯಕರ್ತರೊಂದಿಗೆ ತಾವು ಮುಂದೆಯೂ ಇರುತ್ತೇವೆ. ಈಗಾಗಲೇ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಇದೆ. ಒಂದು ವೇಳೆ ಹಾಗೇನಾದರೂ ನಮ್ಮ ಕಾರ್ಯಕರ್ತರನ್ನು ಮುಟ್ಟಿದರೆ ಪರಿಸ್ಥಿತಿ ನೆಟ್ಟಗಿರುವುದಲ್ಲ ಎಂದು ಸಮಾರಂಭದಲ್ಲಿ ಬಹಿರಂಗವಾಗಿ ತೊಡೆತಟ್ಟಿ ಸವಾಲೆಸದರು.

    ಇದೇ ವೇಳೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡು ಪಕ್ಷದ ಬೆನ್ನಿಗೆ ಹಿಂದಿನಿಂದ ಚೂರಿ ಹಾಕುವವರು ಒಬ್ಬ ಅಪ್ಪನಿಗೆ ಹುಟ್ಟಿದ್ದರೆ, ಮುಂದೆ ಬಂದು ಮಾತನಾಡಿ ಎಂದು ಪಕ್ಷ ವಿರೋದಿಗಳಿಗೆ ಸಮಾರಂಭದಲ್ಲಿ ಬಹಿರಂಗವಾಗಿ ಸವಾಲು ಹಾಕಿದ್ರು.

  • ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವ ಕೆ.ಹೆಚ್ ಹನುಮೇಗೌಡ ನಿಧನ

    ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವ ಕೆ.ಹೆಚ್ ಹನುಮೇಗೌಡ ನಿಧನ

    ಹಾಸನ: ಹಿರಿಯ ರಾಜಕಾರಣಿ ಹಾಗು ಮಾಜಿ ಸಚಿವ ಕೆ.ಎಚ್ ಹನುಮೇಗೌಡ್ರು ಇಂದು ವಿಧಿವಶರಾಗಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹನುಮೇಗೌಡರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಹಾಸನದ ಸಂಜೀವಿನಿ ಸಹಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಕುವೆಂಪು ನಗರದ ಅರವಿಂದ ಶಾಲೆ ಸಮೀಪದ ನಿವಾಸದಲ್ಲಿ ಹನುಮೇಗೌಡರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

    ಹನುಮೇಗೌಡ ಅವರು ಬಿಜೆಪಿ ಮತ್ತು ಕಾಂಗ್ರೆಸ್‍ನಲ್ಲಿ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದರು. ಅಲ್ಲದೇ ಹಾಸನ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇವರು 1994ರಲ್ಲಿ ವೀರಪ್ಪ ಮೊಯ್ಲಿ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕೂಡ ಸಚಿವರಾಗಿದ್ದರು.

  • ಮಾಜಿ ಸಚಿವ ಅಂಬರೀಶ್‍ಗೆ ಕೆ.ಸಿ ವೇಣುಗೋಪಾಲ್ ಖಡಕ್ ಸೂಚನೆ!

    ಮಾಜಿ ಸಚಿವ ಅಂಬರೀಶ್‍ಗೆ ಕೆ.ಸಿ ವೇಣುಗೋಪಾಲ್ ಖಡಕ್ ಸೂಚನೆ!

    ಬೆಂಗಳೂರು: ಮಾಜಿ ಸಚಿವ ಅಂಬರೀಶ್ ಅವರ ವರ್ತನೆಗೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾತಿಗೂ ಸಿಗದೆ, ತಮ್ಮ ಅಭಿಪ್ರಾಯವನ್ನು ತಿಳಿಸದೆ ಸತಾಯಿಸುತ್ತಿರುವ ಅಂಬರೀಶ್ ವರ್ತನೆಯಿಂದ ಬೇಸತ್ತ ಕೆಪಿಸಿಸಿ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಮೊರೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬರೀಶ್ ಅವರನ್ನ ಸಂಪರ್ಕ ಮಾಡಿದ ಕೆ.ಸಿ.ವೇಣುಗೋಪಾಲ್ ಭಾನುವಾರ ಸಂಜೆ ಒಳಗೆ ತಮ್ಮ ನಿರ್ಧಾರ ತಿಳಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಗೆ ಕಗ್ಗಂಟಾದ ಅಂಬರೀಶ್ ಮೌನ- `ಕೈ’ ಬಿಡ್ತಾರಾ ಮಂಡ್ಯದ ಗಂಡು!

    ಮಂಡ್ಯದಿಂದ ಸ್ಪರ್ಧೆ ಮಾಡುವುದಾದರೆ ಪಕ್ಷ ನಿಮಗೆ ಟಿಕೆಟ್ ನೀಡಲಿದೆ. ತಮಗೆ ಇಷ್ಟ ಇಲ್ಲದಿದ್ದರೆ ಬೇರೆ ಅಭ್ಯರ್ಥಿ ಆಯ್ಕೆಯನ್ನು ಪಕ್ಷ ಮಾಡಲಿದೆ. ಏಪ್ರಿಲ್ 9 ರಂದು ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿಯ ಕೊನೆಯ ಸಭೆ ನಡೆಯಲಿದೆ. ಅಷ್ಟರೊಳಗೆ ನಿಮ್ಮ ನಿರ್ಧಾರ ನಮಗೆ ತಿಳಿಸಿ. ನಿಮ್ಮ ಬದಲಿಗೆ ನೀವು ಸೂಚಿಸುವ ನಿಮ್ಮ ಆಪ್ತರಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ. ನಿಮ್ಮನ್ನು ಬಿಟ್ಟು ಬೇರೆ ಯಾರಿಗೆ ಟಿಕೆಟ್ ನೀಡುವುದಾದರು ಜಿಲ್ಲೆಯ ಪಕ್ಷದ ಮುಖಂಡರುಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಾಗುತ್ತೆ. ಆದ್ದರಿಂದ ತಮ್ಮ ಅಭಿಪ್ರಾಯವನ್ನ ನೇರವಾಗಿ ನನ್ನ ಬಳಿಯೆ ಹಂಚಿಕೊಳ್ಳಿ ಅಂತ ವೇಣುಗೋಪಾಲ್ ತಿಳಿಸಿದ್ದಾರೆಂದು ಹೇಳಲಾಗಿದೆ.

    ಭಾನುವಾರ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಅವರ ಬೃಹತ್ ಸಮಾವೇಶವಿದೆ. ಎರಡು ದಿನಗಳ ಕಾಲ ನಾನು ಬೆಂಗಳೂರಿನಲ್ಲಿ ಇರುತ್ತೇನೆ. ತಮ್ಮದು ಏನೇ ಅಭಿಪ್ರಾಯ ಇದ್ದರೂ, ಬಂದು ನನ್ನೊಂದಿಗೆ ಚರ್ಚಿಸಿ, ತೀರ್ಮಾನ ತಿಳಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದು, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರಿಗೂ ಮಂಡ್ಯ ಜಿಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಿ ವರದಿ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

  • ಕಾಂಗ್ರೆಸ್ ಗೆ ಕಗ್ಗಂಟಾದ ಅಂಬರೀಶ್ ಮೌನ- `ಕೈ’ ಬಿಡ್ತಾರಾ ಮಂಡ್ಯದ ಗಂಡು!

    ಕಾಂಗ್ರೆಸ್ ಗೆ ಕಗ್ಗಂಟಾದ ಅಂಬರೀಶ್ ಮೌನ- `ಕೈ’ ಬಿಡ್ತಾರಾ ಮಂಡ್ಯದ ಗಂಡು!

    ಮಂಡ್ಯ: ರೆಬೆಲ್ ಸ್ಟಾರ್, ಶಾಸಕ ಅಂಬರೀಶ್ ಮೌನ ವಹಿಸಿರುವುದು ಇದೀಗ ಕಾಂಗ್ರೆಸ್ ನಾಯಕರಿಗೆ ಕಗ್ಗಂಟಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರುಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಾರಾ ಎಂಬ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಎದ್ದಿದೆ.

    ಚುನಾವಣಾ ದಿನಾಂಕ ಘೋಷಣೆಯಾದ್ರೂ ಮಾಜಿ ಸಚಿವ ಅಂಬರೀಶ್ ಮಾತ್ರ ಮಂಡ್ಯದ ಅಖಾಡಕ್ಕೆ ಇಳಿದಿಲ್ಲ. ಆದ್ರೆ ಇಂದಲ್ಲ ನಾಳೆ ಅಂಬಿ ಅಖಾಡಕ್ಕೆ ಇಳಿಯಬಹುದೆಂದು ಕಾಂಗ್ರೆಸ್ ನಾಯಕರು ನಿರೀಕ್ಷೆಯಲ್ಲಿದ್ದರೆ, ಇತ್ತ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮದೇ ಆದ ಲೆಕ್ಕಾಚಾರದಲ್ಲಿದ್ದಾರೆ ಎಂಬುದಾಗಿ ರಾಜಕೀಯ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಚುನಾವಣಾ ಪ್ರಚಾರದಿಂದ ದೂರ ಉಳಿದ ಮಂಡ್ಯದ ಗಂಡು-ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದ ಅಂಬಿ ನಡೆ

    ಎರಡು ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಅಂಬರೀಶ್‍ರನ್ನು ಪಕ್ಷದತ್ತ ಸೆಳೆಯಲು ಮುಂದಾಗಿವೆ. ಬಿಜೆಪಿ ಕೇಂದ್ರ ನಾಯಕರುಗಳೇ ಅಂಬರೀಶ್ ರನ್ನ ಸೆಳೆಯಲು ಮುಂದಾಗಿದ್ದು, ಕೇಂದ್ರದ ಮಾಜಿ ಸಚಿವ ಕೃಷ್ಣಂ ರಾಜು ಶುಕ್ರವಾರ ಬೆಂಗಳೂರಿಗೆ ಆಗಮಿಸಿ ಅಂಬರೀಶ್ ಜೊತೆ ಮಾತುಕತೆ ನಡೆಸಲಿದ್ದಾರೆ. ಒಟ್ಟಿನಲ್ಲಿ ಅಂಬರೀಶ್‍ರನ್ನು ಬಿಜೆಪಿ ತೆಕ್ಕೆಗೆ ತರುವಂತೆ ಸ್ವತಃ ಬಿಜೆಪಿ ಹೈಕಮಾಂಡ್ ಕೃಷ್ಣಂ ರಾಜುರನ್ನು ಕಳುಹಿಸಿ ಕೊಡುತ್ತಿದೆ ಎಂಬುದಾಗಿ ಬಿಜೆಪಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಪಟ್ಟಿ ಔಟ್: ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ?

    ಇನ್ನೊಂದೆಡೆ ಬಿಜೆಪಿ ವರಿಷ್ಠ ದೇವೇಗೌಡ ಅವರು ಅಂಬರೀಶ್‍ರೊಂದಿಗೆ ಸತತ ಸಂಪರ್ಕದಲ್ಲಿದ್ದಾರೆ. ಶುಕ್ರವಾರದವರೆಗೆ ಕಾದು ನೋಡುವ ತಂತ್ರಕ್ಕೆ ದೇವೇಗೌಡರು ಮೊರೆ ಹೋಗಿದ್ದಾರೆ. ಅಂಬರೀಶ್ ಹಾಗೂ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆದು ಎಲ್ಲವೂ ಸರಿಯಾದ್ರೆ ಸುಮ್ಮನಾಗುವುದು. ಇಲ್ಲಾ ಶುಕ್ರವಾರದ ನಂತರ ಅಂಬರೀಶ್‍ರನ್ನ ಭೇಟಿ ಮಾಡಿ ಮಾತುಕತೆ ನಡೆಸಲು ತೀರ್ಮಾನಿಸಿದ್ದಾರೆ. ಆದರೆ ಇದೂವರೆಗೆ ಅಂಬರೀಶ್ ಎಲ್ಲೂ ಪಕ್ಷ ಬಿಡುವ ಮಾತನಾಡಿಲ್ಲ. ಚುನಾವಣೆಗೆ ಸ್ಪರ್ಧಿಸುವ ಇಲ್ಲವೆ ಸ್ಪರ್ಧಿಸದೇ ಇರುವ ಬಗ್ಗೆಯು ಹೇಳಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ನಾಯಕರ ವಿರುದ್ಧವೇ ಮುನಿಸಿಕೊಂಡ ರೆಬೆಲ್ ಸ್ಟಾರ್!

    ಈ ನಡುವೆ ಅಂಬರೀಶ್ ಮತ್ತು ಸಿಎಂ ಭೇಟಿ ಮುಂದಕ್ಕೆ ಹೋಗಿದ್ದು, ಇಂದು ಅಂಬರೀಶ್ ಸಿಎಂ ಸಿದ್ದರಾಮಯ್ಯ ಭೇಟಿ ಆಗುವ ಸಾಧ್ಯತೆ ಇದೆ. ಇಂದೂ ಕೂಡ ಸಿಎಂ ಅಂಬರೀಶ್ ಭೇಟಿ ಸಾಧ್ಯವಾಗದಿದ್ದರೆ ಅಂಬರೀಶ್ ಬೇರೆ ನಿರ್ಧಾರ ಮಾಡ್ತಾರಾ ಎಂಬ ಪ್ರಶ್ನೆ ಎದ್ದಿದೆ. ಒಟ್ಟಿನಲ್ಲಿ ಅಂಬರೀಶ್ ಅವರ ನಡೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

  • ಬಿಎಸ್‍ವೈ, ಬಿಜೆಪಿ, ಆರ್ ಎಸ್‍ಎಸ್ ಬೈದವ್ರಿಗೆ ಟಿಕೆಟ್ – ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ

    ಬಿಎಸ್‍ವೈ, ಬಿಜೆಪಿ, ಆರ್ ಎಸ್‍ಎಸ್ ಬೈದವ್ರಿಗೆ ಟಿಕೆಟ್ – ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ

    ಬೆಂಗಳೂರು: ಯಾರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಹೋದರಿ ಶೋಭಕ್ಕ ಅವರಿಗೆ ಸಂಬಂಧ ಕಲ್ಪಿಸಿ ಹೀನಾಮಾನವಾಗಿ ಬೈದಿದ್ದಾರೋ ಅವರಿಗೆ ಸೀಟು ನೀಡುತ್ತಿದ್ದಾರೆ ಅಂತ ಮಾಜಿ ಸಚಿವ ಹರತಾಳು ಹಾಲಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

    ಬಸವೇಶ್ವರನಗರದ ತಮ್ಮ ನಿವಾಸದಲ್ಲಿ ಇಂದು ಕುಟುಂಬ ಸಮೇತರಾಗಿ ಸಂಕಷ್ಟಹರ ಪೂಜೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭಾ ನನ್ನ ಸಹೋದರಿ ಸಮಾನರಾದ್ರೆ, ಭಾರತಿ ಶೆಟ್ಟಿ ನನ್ನ ತಾಯಿ ಸಮಾನರಾಗಿದ್ದಾರೆ. ಇವರಿಬ್ಬರಿಗೂ ನಮ್ಮ ನಾಯಕರಿಗೂ ಸಂಬಂಧ ಕಲ್ಪಿಸಿದ್ದಾರೆ. ಆದ್ರೆ ಇದೀಗ ಸಂಬಂಧ ಕಲ್ಪಿಸಿದವರಿಗೂ ಟಿಕೆಟ್ ಕೊಡ್ತಾರೆ ಅನ್ನೋ ಮಾಹಿತಿ ಸಿಕ್ಕಿದೆ. ಇನ್ನು ಈಶ್ವರಪ್ಪ ಅವರ ಮುಖ ನೋಡಿದ್ರೆ ಮೂರು ಓಟು ಬರೋದಿಲ್ಲ. ಆರ್‍ಎಸ್‍ಎಸ್ ನವರು 200 ಕೋಟಿ ತಂದ್ರು ಎಂದ ಗೋಪಾಲಕೃಷ್ಣ ಅವರಿಗೆ ಸೀಟು ಕೊಡ್ತಾರಂತಾದ್ರೆ ಇದಕ್ಕೆ ನಾನು ಏನ್ ಹೇಳ್ಬೇಕು. ಇದರಿಂದ ಸಹಜವಾಗಿಯೇ ನನಗೆ ಬೇಸರ ಆಗಿದೆ ಅಂತ ಹೇಳಿದ್ರು.

    ನನಗೆ ಸೀಟು ಸಿಗಬಹುದೆಂಬ ನಂಬಿಕೆ ಇದೆ. ಅದು ನಿಜವಾಗುತ್ತೋ ಇಲ್ಲವೋ ಗೊತ್ತಿಲ್ಲ. ವೆಂಕಯ್ಯ ನಾಯ್ಡು ಅವರಿಗೆ ಬೈದೋರಿಗೂ ಟಿಕೆಟ್ ನೀಡ್ತಿದ್ದಾರೆ. ಆಯನೂರ್ ಮಂಜಣ್ಣ ಬೂಟ್ ನೆಕ್ಕೋನು, ಬಸ್ ಸ್ಟ್ಯಾಂಡ್ ರಾಘು ಅಂತ ಬೈದಿದ್ರು. ವಿಕಾಸ್ ಸೌಧ ವಿಜಯೇಂದ್ರರಿಗೆ, ವಿಧಾನಸೌಧ ರಾಘವೇಂದ್ರ ಅವರಿಗೆ ಬರೆದು ಕೊಡ್ತಾರೆ ಅಂತ ಒಬ್ರು ಹೇಳಿದ್ರು. ಅವರಿಗೂ ಟಿಕೆಟ್ ನೀಡ್ತಿದ್ದಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದರು.

    ಇರ್ಲಿ ಬಿಡಿ ಇನ್ನೇನು ಜೀವನ. ನನ್ನಂತೋರು ಸತ್ತ ದಿನ ಮಾಜಿ ಸಚಿವ ಹಾಲಪ್ಪ ನಿಧನ ಅಂತ ಬರೀತೀರಿ. ಅದನ್ನಂತೂ ತಪ್ಪಿಸಲು ಸಾಧ್ಯವಿಲ್ಲ ಅಲ್ವ. ಏನೇ ಆಗಲಿ ನಾವಿನ್ನು ಸುಮ್ಮನಿರುವ ಪ್ರಶ್ನೆಯಿಲ್ಲ. ನಾವು ಸುಮ್ನಿರುತ್ತೇವೆ ಅಂದಿದ್ದೀಕೆ ಹಿಂಗೆ ಮಾಡಿದ್ರು ಅಂತ ಅವರು ಟಾಂಗ್ ನೀಡಿದ್ರು.

  • ಆನಂದ್ ಸಿಂಗ್ ಬೆಂಗಲಿಗರ ಗೂಂಡಾಗಿರಿ- ಜಗಳ ಬಿಡಿಸಲು ಹೋದ ಪೇದೆ ಮೇಲೆಯೇ ಹಲ್ಲೆ

    ಆನಂದ್ ಸಿಂಗ್ ಬೆಂಗಲಿಗರ ಗೂಂಡಾಗಿರಿ- ಜಗಳ ಬಿಡಿಸಲು ಹೋದ ಪೇದೆ ಮೇಲೆಯೇ ಹಲ್ಲೆ

    ಬಳ್ಳಾರಿ: ಮಾಜಿ ಸಚಿವ, ಮಾಜಿ ಶಾಸಕ ಆನಂದಸಿಂಗ್ ಬೆಂಬಲಿಗರು ರಕ್ಷಣೆ ಕೊಡುವ ಆರಕ್ಷಕರನ್ನೇ ಎಳೆದಾಡಿ ಹಲ್ಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

    ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ ಎಂಬವರ ಮೇಲೆ ಆನಂದಸಿಂಗ್ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಹೊಸಪೇಟೆಯ ಪಾಡುರಂಗ ಕಾಲೋನಿಯಲ್ಲಿ ಕಳೆದ ರಾತ್ರಿ ಕುಲ್ಲಕ ವಿಚಾರಕ್ಕೆ ಕೆಲವರು ಜಗಳ ಮಾಡುತ್ತಿದ್ದರು. ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು.

    ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಗ್ರಾಮೀಣ ಪೊಲೀಸರು ಜಗಳ ಬಿಡಿಸಲು ಹೋದಾಗ ಅವರು ಪೊಲೀಸರನ್ನೇ ಎಳೆದಾಡಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಗಳ ತಡೆಯಲು ಮುಂದಾದ ಪೊಲೀಸ್ ಪೇದೆಯ ವಾಕಿ ಟಾಕಿ ಕಿತ್ತೆಸೆದು ಬಟ್ಟೆಯನ್ನು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಹೆಸರು ಸಿದ್ದರಾಮಯ್ಯ, ಕೆಲಸ ಮಾಡೋದು ಭೂಮಿ ಮೇಲೆ- ಕುಡಿದ ಮತ್ತಲ್ಲಿ ಪೊಲೀಸರಿಗೆ ಅವಾಜ್

    ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೇದೆ ದೂರು ದಾಖಲು ಮಾಡುತ್ತಿದ್ದಂತೆಯೇ ವೀರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ದೇವೇಂದ್ರ ಪೂಜಾರ, ಸೋಮೇಶ ಹಾಗೂ ಹನುಮಂತ ಪರಾರಿಯಾಗಿದ್ದು, ಮೂವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ಈ ಕುರಿತು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ರಾಜ್ಯ ರಾಜಕಾರಣಕ್ಕೆ ಜನಾರ್ದನರೆಡ್ಡಿ ಬ್ಯಾಕ್ ಡೋರ್ ಎಂಟ್ರಿ!

    ರಾಜ್ಯ ರಾಜಕಾರಣಕ್ಕೆ ಜನಾರ್ದನರೆಡ್ಡಿ ಬ್ಯಾಕ್ ಡೋರ್ ಎಂಟ್ರಿ!

    ಬೆಂಗಳೂರು: ರಾಜ್ಯ ರಾಜಕಾರಣಕ್ಕೆ ಗಣಿಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿಯವರು ಹಿಂಬದಿ ಬಾಗಿಲಿನಿಂದ ನಿಧಾನವಾಗಿ ಎಂಟ್ರಿಯಾಗುತ್ತಿದ್ದಾರೆ.

    ಹೌದು. ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರು ಇತ್ತೀಚೆಗೆ ನಗರದಲ್ಲಿ ಗೌಪ್ಯ ಸಭೆ ನಡೆಸಿದ್ದಾರೆ. ರೆಡ್ಡಿ ಜನಾಂಗದ ಸುಮಾರು 300ಕ್ಕೂ ಹೆಚ್ಚು ಮಂದಿ ಜೊತೆ ಈ ಗೌಪ್ಯ ಸಭೆಯನ್ನು ನಡೆಸಿದ್ದಾರೆ. ಬೆಂಗಳೂರಿನ ಫಾರ್ಮ್‍ಹೌಸ್‍ನಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಸೇರಿ ಹಲವರನ್ನು ಸೋಲಿಸಲು ರೆಡ್ಡಿ ರಣತಂತ್ರ ಹೂಡಿದ್ದಾರೆ ಎನ್ನಲಾಗಿದೆ.

    ಜನಾರ್ದನ ರೆಡ್ಡಿಯವರ ರಾಜಕೀಯ ಎಂಟ್ರಿ ಬಗ್ಗೆ ರಾಜ್ಯದ ಯಾರೊಬ್ಬ ನಾಯಕರು ಮಾತನಾಡುತ್ತಿಲ್ಲ. ಕೇಂದ್ರದ ನಾಯಕರು ಕೂಡ ಈ ಬಗ್ಗೆ ಯಾವುದೇ ಚಕಾರ ಎತ್ತುತ್ತಿಲ್ಲ. ರಾಜ್ಯ ಬಿಜೆಪಿ ನಾಯಕರು ಅವರ ಹೆಸರನ್ನು ಪ್ರಸ್ತಾಪ ಮಾಡದಿದ್ದರೂ ಕೂಡ ರೆಡ್ಡಿಯವರು ರಾಜ್ಯ ರಾಜ್ಯಕಾರಣಕ್ಕೆ ಎಂಟ್ರಿ ಕೊಡುತ್ತಿರುವುದು ಅಚ್ಚರಿ ಮೂಡಿಸಿದೆ.

    https://www.youtube.com/watch?v=Ur1RTMrWwaY