Tag: Foxconn

  • ಮುಖ್ಯಮಂತ್ರಿ ಭೇಟಿಯಾದ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ

    ಮುಖ್ಯಮಂತ್ರಿ ಭೇಟಿಯಾದ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ

    ಬೆಂಗಳೂರು: ಐಫೋನ್ (iPhone) ಮತ್ತು ಅದರ ಬಿಡಿಭಾಗಗಳ ತಯಾರಿಕೆಗೆ ಹೆಸರಾಗಿರುವ ಫಾಕ್ಸ್‌ಕಾನ್‌ (Foxconn) ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭಾನುವಾರ ಭೇಟಿಯಾಗಿ, ಮತ್ತಷ್ಟು ಬಂಡವಾಳ ಹೂಡಿಕೆ ಮತ್ತಿತರ ಸಂಗತಿಗಳ ಬಗ್ಗೆ ಚರ್ಚಿಸಿದರು.

    ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್‌.ಮುನಿಯಪ್ಪ ಕೂಡ ಇದ್ದರು. ಇದನ್ನೂ ಓದಿ: ಸರ್ವೇಗೆ ಹೋದಾಗ ಬೆಂಗಳೂರಲ್ಲಿ ಕುರಿ, ಕೋಳಿ, ಚಿನ್ನ, ಫ್ರಿಡ್ಜ್ ಬಗ್ಗೆ ಪ್ರಶ್ನೆ ಕೇಳಬೇಡಿ: ಅಧಿಕಾರಿಗಳಿಗೆ ಡಿಸಿಎಂ ಮೌಖಿಕ ಸೂಚನೆ

    ವೂ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ‘ಫಾಕ್ಸ್‌ಕಾನ್‌ ಕಂಪನಿಯು ದೇವನಹಳ್ಳಿಯ ತನ್ನ ಘಟಕದಲ್ಲಿ ಕೈಗಾರಿಕಾ ಚಟುವಟಿಕೆ ಆರಂಭಿಸಿರುವುದು ಒಳ್ಳೆಯದು. ಇನ್ನೂ ಘಟಕದ ವಿಸ್ತರಣೆಗೆ ಅಗತ್ಯ ಇರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.

    ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ದೇವನಹಳ್ಳಿಯಲ್ಲಿರುವ ಘಟಕವು ಫಾಕ್ಸ್‌ಕಾನ್‌ ಕಂಪನಿಯ ಎರಡನೇ ಅತಿದೊಡ್ಡ ಘಟಕವಾಗಿದೆ. ಆಪಲ್‌ ಕಂಪನಿಗೆ ಇದು ಜಾಗತಿಕ ಮಟ್ಟದಲ್ಲಿ ಮುಂಚೂಣಿ ಪೂರೈಕೆದಾರ ಸಂಸ್ಥೆಯಾಗಿದೆ. ದೇವನಹಳ್ಳಿಯಲ್ಲಿ ತಯಾರಾಗುವ ಐಫೋನ್‌ಗಳನ್ನು ಜಾಗತಿಕ ಸ್ತರದಲ್ಲಿ ರಫ್ತು ಮಾಡಲಾಗುತ್ತಿದೆ. ಒಟ್ಟಾರೆಯಾಗಿ ಕಂಪನಿಯು ಇಲ್ಲಿ 22 ಸಾವಿರ ಕೋಟಿ ರೂ. ಹೂಡಿಕೆ ಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಸೋಮಣ್ಣ ಮನೆಯಲ್ಲಿ ಜಾತಿಗಣತಿಗೆ 9 ಸಿಬ್ಬಂದಿ – ಸರ್ವೇಗೆ ಇಷ್ಟು ಜನ ಯಾಕೆ ಬಂದ್ರಿ ಅಂತ ಕ್ಲಾಸ್

    ಈ ಭೇಟಿಯ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಆಯುಕ್ತೆ ಗುಂಜನ್‌ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಕೂಡ ಉಪಸ್ಥಿತರಿದ್ದರು.

  • iPhone Pro, Pro Max | ದುಬಾರಿ ಫೋನ್‌ಗಳು ಫಸ್ಟ್‌ ಟೈಂ ಭಾರತದಲ್ಲೇ ತಯಾರು – ಬೆಲೆ ಎಷ್ಟು ಕಡಿಮೆಯಾಗಬಹುದು?

    iPhone Pro, Pro Max | ದುಬಾರಿ ಫೋನ್‌ಗಳು ಫಸ್ಟ್‌ ಟೈಂ ಭಾರತದಲ್ಲೇ ತಯಾರು – ಬೆಲೆ ಎಷ್ಟು ಕಡಿಮೆಯಾಗಬಹುದು?

    ನವದೆಹಲಿ: ಆಪಲ್‌ (Apple) ಕಂಪನಿ ಇದೇ ಮೊದಲ ಬಾರಿಗೆ ಬಿಡುಗಡೆಯಾಗಲಿರುವ ಐಫೋನ್‌ ಪ್ರೊ (iPhone Pro) ಮತ್ತು ಪ್ರೊ ಮ್ಯಾಕ್ಸ್‌ (Pro Max) ಫೋನ್‌ಗಳನ್ನು ಭಾರತದಲ್ಲಿ ತಯಾರಿಸುತ್ತಿದೆ.

    ಹೌದು. ಮುಂದಿನ ಸೆಪ್ಟೆಂಬರ್‌ನಲ್ಲಿ ಐಫೋನ್‌ 16 ಫೋನ್‌ಗಳನ್ನು ಆಪಲ್‌ ಬಿಡುಗಡೆ ಮಾಡಲಿದೆ. ಸಾಧಾರಣವಾಗಿ ಬಿಡುಗಡೆಯಾಗಲಿರುವ ತನ್ನ ಫೋನ್‌ಗಳನ್ನು ಹೆಚ್ಚಾಗಿ ಚೀನಾದ ಫ್ಯಾಕ್ಟರಿಗಳಲ್ಲಿ ತಯಾರಿಸುತ್ತಿತ್ತು. ಆದರೆ ಈ ಬಾರಿ ಭಾರತದ ಫಾಕ್ಸ್‌ಕಾನ್‌ ಘಟಕದಲ್ಲಿ ಐಫೋನ್‌ಗಳ ಪೈಕಿ ದುಬಾರಿ ಬೆಲೆ ಇರುವ ಪ್ರೊ ಮಾಡೆಲ್‌ ತಯಾರಿಸುತ್ತಿರುವುದು ವಿಶೇಷ.

    ತಮಿಳುನಾಡಿನಲ್ಲಿರುವ ಫಾಕ್ಸ್‌ಕಾನ್‌ ಘಟಕದಲ್ಲಿ ಐಫೋನ್‌ ಭಾಗಗಳ ಜೋಡಣೆ ಈ ವಾರದಿಂದ ಆರಂಭವಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಐಫೋನ್ 16 ಪ್ರೊ, ಐಫೋನ್ 16 ಪ್ರೊ ಮ್ಯಾಕ್ಸ್ ಉತ್ಪಾದನೆಗಾಗಿ ಕಾರ್ಮಿಕರಿಗೆ ತರಬೇತಿ ನೀಡಲು ಪ್ರಾರಂಭಿಸಿದೆ. ಭಾರತದಲ್ಲಿ ಫೋನ್‌ ತಯಾರಾಗುವ ಕಾರಣ ಐಫೋನ್‌ಗಳಿಗೆ ಆಮದು ಸುಂಕ ಇರುವುದಿಲ್ಲ. ವಿದೇಶಗಳಿಂದ ಕಚ್ಚಾ ವಸ್ತುಗಳನ್ನು ಆಮದು ಮಾಡಿದ್ದರೂ 10% ಬೆಲೆ ಕಡಿಮೆ ಇರಬಹುದು ಎಂದು ಅಂದಾಜಿಸಲಾಗಿದೆ.  ಇದನ್ನೂ ಓದಿ: ಟೋಕಿಯೋ – ಬೆಂಗಳೂರು ಮಾರ್ಗದ ವಿಮಾನ ಹಾರಾಟ ಹೆಚ್ಚಿಸಿದ BLR

    ಆಪಲ್‌ 2021ರಲ್ಲಿ ಐಫೋನ್‌ ಎಸ್‌ಇ ಮೂಲಕ ಭಾರತದಲ್ಲಿ ಐಫೋನ್‌ ಉತ್ಪಾದನೆ ಆರಂಭಿಸಿತ್ತು. ಕಳೆದ ವರ್ಷ ಐಫೋನ್ 15, ಐಫೋನ್ 15 ಪ್ಲಸ್ ತಯಾರಿಸಿತ್ತು. ಈಗ ಪ್ರೊ ಮಾಡೆಲ್‌ಗಳ ಉತ್ಪಾದನೆಯೊಂದಿಗೆ, ಆಪಲ್ ತನ್ನ ಜಾಗತಿಕ ಉತ್ಪಾದನೆಯಲ್ಲಿ ಭಾರತೀಯ ಉತ್ಪನ್ನಗಳ ಪಾಲನ್ನು ಮತ್ತಷ್ಟು ಹೆಚ್ಚಿಸುವ ಗುರಿಯನ್ನು ಹೊಂದಿದೆ.

    ಜಾಗತಿಕವಾಗಿ ಮಾರಾಟವಾಗುವ ಐಫೋನ್‌ಗಳ ಪೈಕಿ 70% ಐಫೋನ್‌ಗಳನ್ನು ತೈವಾನ್‌ನಲ್ಲಿರುವ ಫಾಕ್ಸ್‌ಕಾನ್‌ ಕಂಪನಿ ಉತ್ಪಾದಿಸುತ್ತದೆ. ಈ ಕಂಪನಿ ಭಾರತ ಅಲ್ಲದೇ ಚೀನಾ,ಇಂಡೋನೇಷ್ಯಾ ಸೇರಿದಂತೆ ಹಲವು ಕಡೆ ತನ್ನ ಘಟಕವನ್ನು ತೆರಿದಿದೆ. ಮುಂದಿನ 3-4 ವರ್ಷಗಳಲ್ಲಿ ವಿಶ್ವದಲ್ಲಿ ಮಾರಾಟವಾಗುವ ಐಫೋನ್‌ಗಳ ಪೈಕಿ 25% ಐಫೋನ್‌ಗಳನ್ನು ಭಾರತದಲ್ಲಿ ತಯಾರಿಸುವ ಗುರಿಯನ್ನು ಐಫೋನ್‌ ಹಾಕಿಕೊಂಡಿದೆ.

    ಮುಂದಿನ ದಿನಗಳಲ್ಲಿ ಟಾಟಾ ಗ್ರೂಪ್ ಐಫೋನ್‌ಗಳನ್ನು ತಯಾರಿಸಲಿದೆ. ಬಹುಪಾಲು ಭಾರತ-ನಿರ್ಮಿತ ಪ್ರೊ ಮತ್ತು ಪ್ರೊ ಮ್ಯಾಕ್ಸ್ ಸಾಧನಗಳನ್ನು ಆಪ್‌ಲ್‌ ಯುರೋಪ್, ಮಧ್ಯಪ್ರಾಚ್ಯ ಮತ್ತು ಅಮೆರಿಕಗೆ ರಫ್ತು ಮಾಡುವ ಸಾಧ್ಯತೆಯಿದೆ.

    ಭಾರತದಲ್ಲಿ ಯಾಕೆ?
    10 ವರ್ಷಗಳ ಹಿಂದೆ ಐಫೋನ್‌ ಬಿಡುಗಡೆಯಾದ 5-6 ತಿಂಗಳ ನಂತರ ಭಾರತದ ಮಾರುಕಟ್ಟೆಗೆ ಐಫೋನ್‌ಗಳನ್ನು ಆಪಲ್‌ ಬಿಡುಗಡೆ ಮಾಡುತ್ತಿತ್ತು. ಆದರೆ ಈಗ ಭಾರತದಲ್ಲಿ ಐಫೋನ್‌ ಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಆಪಲ್‌ ಉತ್ಪನ್ನಗಳ ಬೇಡಿಕೆಯೂ ಜಾಸ್ತಿಯಾಗುತ್ತಿದೆ. ಭಾರತದಲ್ಲಿ ಉತ್ಪಾದನೆ ಮಾಡುತ್ತಿರುವ ಕಾರಣ ಬೆಲೆ ಸಹ ಕಡಿಮೆಯಿದೆ. ಹೀಗಾಗಿ ಕೆಲ ವರ್ಷಗಳಿಂದ ಜಾಗತಿಕವಾಗಿ ಬಿಡುಗಡೆಯಾಗುವ ಸಮಯದಲ್ಲೇ ಭಾರತದಲ್ಲೂ ಐಫೋನ್‌ ಬಿಡುಗಡೆಯಾಗುತ್ತಿದೆ.

  • ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥನ ಜೊತೆ ಸಿಎಂ, ಡಿಸಿಎಂ ಡಿನ್ನರ್

    ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥನ ಜೊತೆ ಸಿಎಂ, ಡಿಸಿಎಂ ಡಿನ್ನರ್

    ಬೆಂಗಳೂರು: ತೈವಾನ್ ಮೂಲದ ಆಪಲ್ ಫೋನ್ (Apple Phone) ತಯಾರಿಸುವ ಫಾಕ್ಸ್‌ಕಾನ್ (Foxconn) ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು (Young Liu) ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚರ್ಚೆ ನಡೆಸಿದರು.

    ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದರು. ಇದನ್ನೂ ಓದಿ: ರಾಜ್ಯದ 2 ಮೆಟ್ರೋ ಕಾರಿಡಾರ್‌ಗಳಿಗೆ ಕೇಂದ್ರ ಅನುಮೋದನೆ: ಪ್ರಹ್ಲಾದ್ ಜೋಶಿ

    ಡಿಸಿಎಂ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: TB Dam| ಮೊದಲ ಎಲಿಮೆಂಟ್ ಅಳವಡಿಸುವ ಕಾರ್ಯ ಯಶಸ್ವಿ

    ಫಾಕ್ಸ್ಕಾನ್ ಕಂಪನಿಗೆ ದೇವನಹಳ್ಳಿ ತಾಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ 300 ಎಕರೆ ಜಾಗ ಮಂಜೂರಾಗಿದ್ದು, ರಾಜ್ಯದಲ್ಲಿ ದೊಡ್ಡ ಮಟ್ಟದ ಹೂಡಿಕೆಗೆ ಮುಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಜವಾಹರಲಾಲ್ ನೆಹರು ತಾರಾಲಯ ಆಧುನಿಕರಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಬೋಸರಾಜು ಸೂಚನೆ

  • ಫಾಕ್ಸ್‌ಕಾನ್‌ನಿಂದ ರಾಜ್ಯದಲ್ಲಿ 5,000 ಕೋಟಿ ರೂ. ಹೂಡಿಕೆ- 13,000 ಉದ್ಯೋಗ ಸೃಷ್ಟಿ

    ಫಾಕ್ಸ್‌ಕಾನ್‌ನಿಂದ ರಾಜ್ಯದಲ್ಲಿ 5,000 ಕೋಟಿ ರೂ. ಹೂಡಿಕೆ- 13,000 ಉದ್ಯೋಗ ಸೃಷ್ಟಿ

    – 2 ಪ್ರಮುಖ ಯೋಜನೆಗಳ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್ ಸಹಿ

    ಚೆನ್ನೈ: ಕರ್ನಾಟಕದಲ್ಲಿ (Karnataka) 5,000 ಕೋಟಿ ರೂ. ಮೊತ್ತದ ಬಂಡವಾಳ ಹೂಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್ (Foxconn) ಸಹಿ ಮಾಡಿದೆ. ಈ ಯೋಜನೆಗಳಿಂದ 13,000 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

    ಚೆನ್ನೈನ (Chennai) ಹೋಟೆಲ್ ಲೀಲಾ ಪ್ಯಾಲೇಸ್‌ನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಫೋನ್ ಎನ್‌ಕ್ಲೋಸರ್ ಉತ್ಪಾದನಾ ಘಟಕ ಸ್ಥಾಪನೆ ಹಾಗೂ ಸೆಮಿಕಾನ್ ಉಪಕರಣಗಳ ಯೋಜನೆ ಜಾರಿ ಸಂಬಂಧ ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸಿದ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು (Young Liu) ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಇದನ್ನೂ ಓದಿ: ಸೌಜನ್ಯಾ ಕೇಸ್ ಮರು ತನಿಖೆಯಾಗ್ಲಿ- ಧರ್ಮಸ್ಥಳದ ಗೌರವ, ಪ್ರತಿಷ್ಠೆಯನ್ನ ಹೇಗಾದ್ರೂ ಕಾಪಾಡ್ತೇವೆ: VHP

    ಈ ವಿಷಯವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ (M.B.Patil) ಬುಧವಾರ ಅಧಿಕೃತವಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಚೆನ್ನೈನಲ್ಲಿ ತಮ್ಮ ಜೊತೆಗೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಮತ್ತು ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು. ಇದನ್ನೂ ಓದಿ: ಹೆಚ್ಚು ಸೂಟ್‍ಕೇಸ್ ತುಂಬಿಸಿ ಅಂತ ಟಾರ್ಗೆಟ್ ನೀಡುವ ದೆಹಲಿಯ ಕಾಂಗ್ರೆಸ್ ಸಭೆ: ಎನ್.ರವಿಕುಮಾರ್ ಟೀಕೆ

    ಸಚಿವ ಎಂಬಿ ಪಾಟೀಲ್, ಈ ಎರಡೂ ಒಪ್ಪಂದಗಳು, ಈ ಮೊದಲು ಮಾಡಿಕೊಂಡಿದ್ದ 14 ಸಾವಿರ ಕೋಟಿ ರೂ. ಮೊತ್ತದ ಆ್ಯಪಲ್ ಫೋನ್ ತಯಾರಿಕಾ ಘಟಕ ಹೊರತಾದವು. ಇದಕ್ಕೂ ದೊಡ್ಡಬಳ್ಳಾಪುರ (Doddaballapura) ಸಮೀಪ ಭೂಮಿ ನೀಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಪ್ರದೀಪ್ ಈಶ್ವರ್ ಕನಸಲ್ಲೂ ನಾನು ಬರ್ತೀನಿ: ಸುಧಾಕರ್

    ಫಾಕ್ಸ್‌ಕಾನ್ ಮತ್ತು ಕರ್ನಾಟಕ ಸರ್ಕಾರದ ನಡುವಿನ ಈ ಒಪ್ಪಂದವು ತಂತ್ರಜ್ಞಾನದ ಪ್ರಗತಿ ಮತ್ತು ರಾಜ್ಯದ ಒಟ್ಟಾರೆ ಸಾಮಾಜಿಕ, ಆರ್ಥಿಕ ಬೆಳವಣಿಗೆಯಲ್ಲಿ ಗಮನಾರ್ಹ ಬದಲಾವಣೆ ತರಲಿದೆ. ಮುಖ್ಯವಾಗಿ ಸಾವಿರಾರು ನುರಿತ ಕೆಲಸಗಾರರಿಗೆ ಉದ್ಯೋಗ ದೊರೆಯುತ್ತದೆ. ರಾಜ್ಯದಲ್ಲಿ ಬಂಡವಾಳ ಹೂಡಲಿರುವ ಫಾಕ್ಸ್‌ಕಾನ್ ಎಲ್ಲ ರೀತಿಯ ಬೆಂಬಲ ಒದಗಿಸಲು ನಮ್ಮ ಸರ್ಕಾರ ಬದ್ಧ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸ್ವಗ್ರಾಮ ಪೆರೇಸಂದ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ಗೆ ಮುಖಭಂಗ?

    ತಂತ್ರಜ್ಞಾನ ಮತ್ತು ಆವಿಷ್ಕಾರ ವಲಯದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಫಾಕ್ಸ್‌ಕಾನ್ ಮುಂದೆ ಬಂದಿರುವುದು ಸಂತೋಷದ ವಿಷಯ. ಬಂಡವಾಳ ಆಕರ್ಷಣೆ ಮತ್ತು ಕಂಪನಿಗಳಿಗೆ ಉತ್ತಮ ಪರಿಸರ ವ್ಯವಸ್ಥೆ ಕಲ್ಪಿಸಲು ನಮ್ಮ ನೀತಿಗಳು ಪೂರಕವಾಗಿವೆ ಎಂದು ಹೇಳಿದರು. ಇದನ್ನೂ ಓದಿ: ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಅನ್ನೋ ಪ್ರಧಾನಿ ಹೇಳಿಕೆಗೆ ಸಿಎಂ ತಿರುಗೇಟು

    ಕರ್ನಾಟಕ ಸರ್ಕಾರದ ಜತೆ ಯೋಜಿತ ಹೂಡಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ನಮ್ಮ ಹೈಟೆಕ್ ಉದ್ಯಮಗಳಿಗೆ ರಾಜ್ಯ ಆಕರ್ಷಕ ತಾಣವಾಗಿದೆ. ಉದ್ಯಮಕ್ಕೆ ಪೂರಕವಾದ ವಾತಾವರಣವಿದ್ದು, ನುರಿತ ಕೆಲಸಗಾರರ ಲಭ್ಯತೆ ಇಲ್ಲಿನ ವಿಶೇಷ. ಈ 2 ಪ್ರಮುಖ ಯೋಜನೆಗಳ ಮೂಲಕ ರಾಜ್ಯದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲಿದ್ದೇವೆ ಎಂದು ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಹೇಳಿದ್ದಾರೆ. ಇದನ್ನೂ ಓದಿ: ಅನಧಿಕೃತ ಫ್ಲೆಕ್ಸ್‌ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ

    ಪ್ರಮುಖ ಯೋಜನೆಗಳ ವಿವರ:
    1. ಫೋನ್ ಎನ್‌ಕ್ಲೋಸರ್‌ FII: ಐಫೋನ್‌ಗಳ ಮೆಕ್ಯಾನಿಕಲ್ ಎನ್‌ಕ್ಲೋಸರ್‌ನಂತಹ ಸ್ಮಾರ್ಟ್ಫೋನ್‌ನ ಉಪ ಘಟಕಗಳನ್ನು ತಯಾರಿಸುವ ಸಂಸ್ಥೆಯಾದ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ ನೆಟ್‌ನ (FII) ಹೂಡಿಕೆ ಮೊತ್ತ 350 ದಶಲಕ್ಷ ಡಾಲರ್ (3,000 ಕೋಟಿ ರೂ.) ಯೋಜನೆಯಡಿ 12,000 ಜನರಿಗೆ ಉದ್ಯೋಗ ದೊರೆಯಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಘಟಕ ಸ್ಥಾಪಿಸಲು ಎಫ್‌ಐಐ ಉದ್ದೇಶಿಸಿದೆ.

    2. ಸೆಮಿಕಾನ್ ಉಪಕರಣಗಳು: ಅಪ್ಲೈಡ್ ಮೆಟೀರಿಯಲ್ಸ್ ಸಹಯೋಗದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಉಪಕರಣಗಳ ತಯಾರಿಸುವ ಸಂಸ್ಥೆಯ ಯೋಜಿತ ಯೋಜನೆಯ ಹೂಡಿಕೆ ಮೊತ್ತ 250 ದಶಲಕ್ಷ ಡಾಲರ್ (2,000 ಕೋಟಿ ರೂ.). ಇದರಿಂದ 1,000 ಜನರಿಗೆ ಉದ್ಯೋಗ ದೊರೆಯಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಹೈಟೆಕ್ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ – 2ನೇ ಹಂತದಲ್ಲಿ ಈ ಯೋಜನೆಗಾಗಿ 35 ಎಕರೆ ಭೂಮಿಯನ್ನು ಅಂತಿಮಗೊಳಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಪರಿಸ್ಥಿತಿ ಕಠಿಣವಾಗಿದೆ, ತುರ್ತಾಗಿ ಮಧ್ಯಸ್ಥಿಕೆ ವಹಿಸಿ: ರಾಷ್ಟ್ರಪತಿಗೆ INDIA ಒಕ್ಕೂಟ ನಾಯಕರ ಮನವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫಾಕ್ಸ್‌ಕಾನ್ ಕಂಪನಿಗೆ 300 ಎಕರೆ ಸದ್ಯದಲ್ಲೇ ಹಸ್ತಾಂತರ: ಎಂಬಿ ಪಾಟೀಲ್

    ಫಾಕ್ಸ್‌ಕಾನ್ ಕಂಪನಿಗೆ 300 ಎಕರೆ ಸದ್ಯದಲ್ಲೇ ಹಸ್ತಾಂತರ: ಎಂಬಿ ಪಾಟೀಲ್

    ಬೆಂಗಳೂರು: ಐಫೋನ್ (iPhone) ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್‌ಕಾನ್‌ (Foxconn) ಕಂಪನಿಗೆ 300 ಎಕರೆ ಭೂಮಿ ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಬಿಟ್ಟುಕೊಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ಶುಕ್ರವಾರ ವಿಧಾನಸಭೆಗೆ ತಿಳಿಸಿದರು.

    ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು (Dheeraj Muniraj) ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯದಲ್ಲಿ (ITIR) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿಕೆ ಮಾಡಿ ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ ಎಂದು ವಿವರಿಸಿದರು.  ಇದನ್ನೂ ಓದಿ: Made by Tata iPhones – ಕೋಲಾರದಲ್ಲಿ ಐಫೋನ್‌ ತಯಾರಿಸಲಿದೆ ಟಾಟಾ!

    ದೊಡ್ಡಬಳ್ಳಾಪುರ (Doddaballapura) ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಹೇಳಿದರು. ಇದನ್ನೂ ಓದಿ: ವೇದಾಂತ ಜೊತೆಗಿನ 1.61 ಲಕ್ಷ ಕೋಟಿ ಒಪ್ಪಂದವನ್ನ ರದ್ದುಗೊಳಿಸಿದ ಫಾಕ್ಸ್‌ಕಾನ್‌

    ಕೈಗಾರಿಕಾ ನೀತಿ (2020-25), ಕರ್ನಾಟಕ ಏರೋಸ್ಪೇಸ್ ಆಂಡ್‌ ಡಿಫೆನ್ಸ್ ನೀತಿ (2022-27) ಮತ್ತು ವಿದ್ಯುತ್‌ ಚಾಲಿತ ವಾಹನ ಆಂಡ್‌ ಇಂಧನ ಸಂಗ್ರಹಣೆ ನೀತಿ (2017) ಅಡಿಯಲ್ಲಿ ನಿಗದಿಗೊಳಿಸಿರುವ ಉತ್ತೇಜಕ ಕ್ರಮಗಳು ಈ ವಲಯದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಲು ಪೂರಕವಾಗಿವೆ ಎಂದು ಪಾಟೀಲ್ ಅಭಿಪ್ರಾಯಪಟ್ಟರು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿಪ್ ಘಟಕ ತೆರೆಯಲ್ಲ- ವೇದಾಂತ ಜೊತೆಗಿನ 1.61 ಲಕ್ಷ ಕೋಟಿ ಒಪ್ಪಂದವನ್ನ ರದ್ದುಗೊಳಿಸಿದ ಫಾಕ್ಸ್‌ಕಾನ್‌

    ಚಿಪ್ ಘಟಕ ತೆರೆಯಲ್ಲ- ವೇದಾಂತ ಜೊತೆಗಿನ 1.61 ಲಕ್ಷ ಕೋಟಿ ಒಪ್ಪಂದವನ್ನ ರದ್ದುಗೊಳಿಸಿದ ಫಾಕ್ಸ್‌ಕಾನ್‌

    ನವದೆಹಲಿ: ಭಾರತದ ವೇದಾಂತ (Vedanta) ಕಂಪನಿ ಜೊತೆಗೂಡಿ ಗುಜರಾತ್‌ನಲ್ಲಿ 1.61 ಲಕ್ಷ ಕೋಟಿ ರೂ.(19 ಶತಕೋಟಿ ಡಾಲರ್‌) ಹೂಡಿಕೆಯೊಂದಿಗೆ ಆರಂಭವಾಗಬೇಕಿದ್ದ ಸೆಮಿಕಂಡಕ್ಟರ್‌ (Semiconductor) ಘಟಕದ ಒಪ್ಪಂದವನ್ನ ತೈವಾನ್‌ನ ಫಾಕ್ಸ್‌ಕಾನ್‌ (Foxconn) ಕಂಪನಿ ರದ್ದು ಮಾಡಿದೆ.

    ಭಾರತದಲ್ಲಿ ವೇದಾಂತ ಜೊತೆ ಜಂಟಿ ಉದ್ಯಮವಾಗಿ ಸೆಮಿ ಕಂಡಕ್ಟರ್‌ ತಯಾರಿಸುವುದಿಲ್ಲ ಎಂದು ಫಾಕ್ಸ್‌ಕಾನ್‌ ಹೇಳಿದ ನಂತರ ಪರಸ್ಪರ ಉದ್ಯಮವನ್ನು ಕೊನೆಗೊಳಿಸುವ ನಿರ್ಧಾರವನ್ನ ಎರಡೂ ಸಂಸ್ಥೆಗಳಿಂದ ಪ್ರಕಟಿಸಲಾಗಿದೆ. ಇದನ್ನೂ ಓದಿ: Rafale Deal: 90,000 ಕೋಟಿ ವೆಚ್ಚ, 26 ರಫೇಲ್‌ ಖರೀದಿಸಲು ಭಾರತ ಸರ್ಕಾರ ಮೆಗಾ ಪ್ಲ್ಯಾನ್‌!

    ಫಾಕ್ಸ್‌ಕಾನ್‌ ಮತ್ತು ವೇದಾಂತ ಕಂಪನಿ ಗುಜರಾತ್‌ನಲ್ಲಿ 1.61 ಲಕ್ಷ ಕೋಟಿ ರೂ. ಹೂಡಿಕೆಯ ಸೆಮಿಕಂಡಕ್ಟರ್‌ ಘಟಕ (Semiconductor Unit) ಸ್ಥಾಪನೆ ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದವು. ಎರಡೂ ಕಂಪನಿಗಳು ಜಂಟಿಯಾಗಿ ಸೆಮಿಕಂಡಕ್ಟರ್ ಮತ್ತು ಡಿಸ್ಪ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸಬೇಕಿತ್ತು. ಇದೀಗ ಒಪ್ಪಂದ ರದ್ದಾಗಿದ್ದು, ಭಾರತದ ಸೆಮಿ ಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಪೆಟ್ಟು ಬಿದ್ದಿದೆ.

    ಈ ಬಗ್ಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಪ್ರತಿಕ್ರಿಯಿಸಿ, ಜಂಟಿ ಉದ್ಯಮದ ಸ್ಥಗಿತವು ಭಾರತವನ್ನು ಸೆಮಿಕಂಡಕ್ಟರ್ ಚಿಪ್ ಹಬ್ ಮಾಡುವ ನಮ್ಮ ಗುರಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    ಈ ನಡುವೆ ಸೆಮಿಕಂಡಕ್ಟರ್‌ಗಳ ಪೂರೈಕೆಗೆ ಸ್ಥಳೀಯ ಪಾಲುದಾರರ ಮೂಲಕ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ. ಒಪ್ಪಂದವನ್ನು ಮುರಿಯಲು ಫಾಕ್ಸ್‌ಕಾನ್ ಕಾರಣವನ್ನು ನೀಡಿಲ್ಲ. ಜಂಟಿ ಉದ್ಯಮದಿಂದ ಬೇರೆ ಬೇರೆಯಾದ ನಂತರ ವೇದಾಂತ ಕಂಪನಿ ಸೆಮಿಕಂಡಕ್ಟರ್‌ ಪ್ಲ್ಯಾಂಟ್‌ ಸ್ಥಾಪಿಸಲು ಇತರ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

    ಕಳೆದ ವರ್ಷ ವೇದಾಂತ ಲಿಮಿಟೆಡ್‌ (Vedanta Ltd.) ಮತ್ತು ತೈವಾನ್‌ನ ಫಾಕ್ಸ್‌ಕಾನ್‌ (Foxconn) ಕಂಪನಿಯು ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಜಾಗ ನೀಡಲು ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್‌ ಮುಂದಾಗಿದ್ದವು. ರಾಜ್ಯಗಳು ಪೈಪೋಟಿಗೆ ಇಳಿದ ಹಿನ್ನೆಲೆಯಲ್ಲಿ ಕಂಪನಿ ಭಾರೀ ರಿಯಾಯಿಯಿತಿಯನ್ನು ಬಯಸಿತ್ತು. ಮುಖ್ಯವಾಗಿ 1000 ಎಕ್ರೆ ಭೂಮಿಯನ್ನು ಯಾವುದೇ ಶುಲ್ಕವಿಲ್ಲದೇ 99 ವರ್ಷಗಳ ಅವಧಿಗೆ ಗುತ್ತಿಗೆ (Lease) ನೀಡಬೇಕು. ಇದರ ಜೊತೆ 20 ವರ್ಷಗಳ ಅವಧಿಗೆ ನೀರು ಮತ್ತು ವಿದ್ಯುತ್‌ ಅನ್ನು ರಿಯಾಯಿತಿ ದರದಲ್ಲಿ ಒದಗಿಸಬೇಕು ಎಂದು ಬೇಡಿಕೆ ಇಟ್ಟಿತ್ತು. ಈ ಬೇಡಿಕೆಗೆ ಗುಜರಾತ್‌ ಸರ್ಕಾರ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಅಹಮದಾಬಾದ್‌ನಲ್ಲಿ ಹೊಸ ಸೆಮಿಕಂಡಕ್ಟರ್‌ ಮತ್ತು ಡಿಸ್‌ಪ್ಲೇ ಉತ್ಪಾದನಾ ಘಟಕ ಆರಂಭಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು.

    ಪ್ರಸ್ತುತ ವಿಶ್ವದ ಚಿಪ್‌ ಮಾರುಕಟ್ಟೆಯಲ್ಲಿ ಚೀನಾ ಮತ್ತು ತೈವಾನ್‌ ಕಂಪನಿಗಳೇ ಹೆಚ್ಚು ಪ್ರಾಬಲ್ಯ ಹೊಂದಿದೆ. ಭಾರತವನ್ನ ಚಿಪ್‌, ಮೊಬೈಲ್‌ ಉತ್ಪಾದನಾ ಹಬ್‌ ದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್ಐ) ಯೋಜನೆಯನ್ನು ಆರಂಭಿಸಿತ್ತು. ಉದ್ಯೋಗ ಸೃಷ್ಟಿಗಾಗಿ ಆರಂಭಿಸಲಾದ ಈ ಯೋಜನೆ ಅಡಿ ಮುಂದಿನ 5 ವರ್ಷದಲ್ಲಿ ನಿಗದಿತ ವೆಚ್ಚದಲ್ಲಿ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನ ಉತ್ಪಾದಿಸುವ ಗುರಿಯನ್ನು ಹಾಕಿಕೊಂಡಿತ್ತು.

    2020ರ ವೇಳೆಗೆ ಕೇವಲ 1.12 ಲಕ್ಷ ಕೋಟಿ ರೂ. ನಷ್ಟಿದ್ದ ಭಾರತದ ಸೆಮಿಕಂಡಕ್ಟರ್‌ ವಲಯ 2026ರ ವೇಳೆಗೆ 5 ಲಕ್ಷ ಕೋಟಿ ರೂ.ಗೆ ತಲುಪುವ ನಿರೀಕ್ಷೆಯನ್ನು ಹೊಂದಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರು ಬಳಿ ಭಾರೀ ಮೊತ್ತಕ್ಕೆ ಜಾಗ ಖರೀದಿಸಿದ ಆಪಲ್‌ ಐಫೋನ್‌ ತಯಾರಕ ಫಾಕ್ಸ್‌ಕಾನ್‌

    ಬೆಂಗಳೂರು ಬಳಿ ಭಾರೀ ಮೊತ್ತಕ್ಕೆ ಜಾಗ ಖರೀದಿಸಿದ ಆಪಲ್‌ ಐಫೋನ್‌ ತಯಾರಕ ಫಾಕ್ಸ್‌ಕಾನ್‌

    ಬೆಂಗಳೂರು: ಆಪಲ್‌ ಐಫೋನ್‌ (Apple iPhone) ತಯಾರಿಸುವ ತೈವಾನಿನ ಫಾಕ್ಸ್‌ಕಾನ್‌ (Foxconn) ಕಂಪನಿ ಬೆಂಗಳೂರಿನಲ್ಲಿ (Bengaluru) ಜಾಗ ಖರೀದಿಸಿದೆ.

    ದೇವನಹಳ್ಳಿ (Devanahalli) ಬಳಿ 13 ದಶಲಕ್ಷ ಚದರ ಅಡಿಯ ಜಾಗವನ್ನು ಖರೀದಿಸಿರುವುದಾಗಿ ಫಾಕ್ಸ್‌ಕಾನ್‌ ಕಂಪನಿ ಲಂಡನ್‌ ಸ್ಟಾಕ್‌ ಎಕ್ಸ್‌ಚೇಂಜ್‌ಗೆ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಫಾಕ್ಸ್‌ಕಾನ್‌ ಕಂಪನಿಯ ಅಂಗಸಂಸ್ಥೆಯಾದ Hon Hai Technology India Mega Development 37 ದಶಲಕ್ಷ ಡಾಲರ್‌ (ಅಂದಾಜು 300 ಕೋಟಿ ರೂ.) ನೀಡಿ ಈ ಜಾಗವನ್ನು ಖರೀದಿಸಿದೆ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಫಾಕ್ಸ್‌ಕಾನ್‌ 5.7 ಸಾವಿರ ಕೋಟಿ ರೂ. ಹೂಡಿಕೆ – 1 ಲಕ್ಷ ಉದ್ಯೋಗ ಸೃಷ್ಟಿ

    ಈ ಹಿಂದೆ ಮಾರ್ಚ್‌ ತಿಂಗಳಿನಲ್ಲಿ ಮಾಧ್ಯಮವೊಂದು ಫಾಕ್ಸ್‌ಕಾನ್‌ ಟೆಕ್ನಾಲಜಿ ಗ್ರೂಪ್ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುಮಾರು 300 ಎಕರೆ ಪ್ರದೇಶದಲ್ಲಿ ಉತ್ಪಾದನಾ ಘಟಕ ತೆರೆಯಲಿದೆ. ಇದಕ್ಕಾಗಿ ಕಂಪನಿ ಸುಮಾರು 700 ಮಿಲಿಯನ್ ಡಾಲರ್ (ಸುಮಾರು 5.7 ಸಾವಿರ ಕೋಟಿ ರೂ.) ಹೂಡಿಕೆ ಮಾಡಲು ಮುಂದಾಗಿದೆ ಎಂದು ವರದಿ ಮಾಡಿತ್ತು.

    ಬೆಂಗಳೂರಿನ ಸಮೀಪ ನಿರ್ಮಾಣವಾಗುತ್ತಿರುವ ಆಪಲ್ ಉತ್ಪಾದನಾ ತಾಣ ಸುಮಾರು 1 ಲಕ್ಷದಷ್ಟು ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯಿದೆ.

    ತೆಲಂಗಾಣದಲ್ಲಿ ಐಫೋನ್‌ ಫ್ಯಾಕ್ಟರಿ (iPhone Factory), ಕರ್ನಾಟಕದಲ್ಲಿ ಪ್ರಾಜೆಕ್ಟ್‌ ಎಲಿಫೆಂಟ್‌ (Project Elephant) ಆರಂಭಿಸಲಾಗುವುದು ಎಂದು ತೈವಾನಿನ ಎಲೆಕ್ಟ್ರಾನಿಕ್ಸ್‌ ದೈತ್ಯ ಕಂಪನಿ ಫಾಕ್ಸ್‌ಕಾನ್‌ ಈ ಹಿಂದೆ ಅಧಿಕೃತವಾಗಿ ತಿಳಿಸಿತ್ತು.

    ಫಾಕ್ಸ್‌ಕಾನ್‌ 2019ರಿಂದ ಆಪಲ್‌ ಐಫೋನ್‌ಗಳನ್ನು ಭಾರತದಲ್ಲಿ ತಯಾರಿಸುತ್ತಿದ್ದು, ತಮಿಳುನಾಡಿನಲ್ಲಿ ತನ್ನ ಘಟಕ ತೆರದಿದೆ. ಕರ್ನಾಟಕದ ಕೋಲಾರದ ನರಸಾಪುರ ಮತ್ತು ಬೆಂಗಳೂರಿನ ಪೀಣ್ಯದಲ್ಲಿ ವಿಸ್ಟ್ರಾನ್‌ ಕಂಪನಿ ಐಫೋನ್‌ ತಯಾರಿಸುತ್ತಿದೆ.  ಇದನ್ನೂ ಓದಿ: ತೈವಾನ್‌ ಕಂಪನಿ ಖರೀದಿ – ಶೀಘ್ರವೇ ಟಾಟಾದಿಂದ ಐಫೋನ್‌ ಉತ್ಪಾದನೆ

    ಭಾರತದಲ್ಲಿ ತನ್ನ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಪಲ್‌ ಕಂಪನಿ ದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದೆ. ಏಪ್ರಿಲ್‌ನಲ್ಲಿ ಮುಂಬೈ ಮತ್ತು ದೆಹಲಿಯಲ್ಲಿ ಆಪಲ್‌ ತನ್ನ ಅಧಿಕೃತ ರಿಟೇಲ್‌ ಸ್ಟೋರ್‌ ತೆರೆದಿತ್ತು.

  • ಐಫೋನ್‌ ತಯಾರಿಸುವ ಫಾಕ್ಸ್‌ಕಾನ್ ಸೇರಿ 18 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ

    ಐಫೋನ್‌ ತಯಾರಿಸುವ ಫಾಕ್ಸ್‌ಕಾನ್ ಸೇರಿ 18 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ

    – ಒಟ್ಟು 75,393 ಕೋಟಿ ರೂ. ಹೂಡಿಕೆಗೆ ಸಮ್ಮತಿ
    – 77,606 ಜನರಿಗೆ ಉದ್ಯೋಗಾವಕಾಶ ನಿರೀಕ್ಷೆ

    ಬೆಂಗಳೂರು: ಕೈಗಾರಿಕೆಗಳಿಗೆ ಸಂಬಂಧಿಸಿದಂತೆ 61ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯು ಫಾಕ್ಸ್‌ಕಾನ್ (Foxconn) ಸೇರಿದಂತೆ 75,393.57 ಕೋಟಿ ರೂ. ಮೊತ್ತದ 18 ಯೋಜನೆಗಳಿಗೆ ಅನುಮೋದನೆ ನೀಡಿದೆ.

    ಫಾಕ್ಸ್‌ಕಾನ್ ಹಾನ್ ಹೈ ಟೆಕ್ನಾಲಜಿ ಇಂಡಿಯಾ ಮೆಗಾ ಡೆವಲಪ್‌ಮೆಂಟ್ ಪ್ರೈ.ಲಿ. (ಎಫ್‌ಹೆಚ್‌ಎಚ್) 50 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸುವ 8,000 ಕೋಟಿ ರೂ. ವೆಚ್ಚದ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ನೀಡಲಾಗಿದೆ. 15 ದಿನಗಳ ಹಿಂದೆ ಫಾಕ್ಸ್‌ಕಾನ್ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ನೇತೃತ್ವದ ನಿಯೋಗ ರಾಜ್ಯಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೊಂದಿಗೆ ಸಮಾಲೋಚನೆ ನಡೆಸಿತ್ತು. ಇದನ್ನೂ ಓದಿ: ಬಿಜೆಪಿಗೆ ಚಿಂಚನಸೂರ್‌ ರಾಜೀನಾಮೆ ನೀಡಿದ್ಯಾಕೆ?

    ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಫಾಕ್ಸ್‌ಕಾನ್ ಸೇರಿದಂತೆ 10 ಹೊಸ ಯೋಜನೆಗಳು, 5 ವಿಸ್ತರಣೆ ಯೋಜನೆಗಳು ಮತ್ತು 3 ಹೆಚ್ಚುವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ 18 ಯೋಜನೆಗಳಿಂದ 77,606 ಜನರಿಗೆ ಉದ್ಯೋಗಾವಕಾಶ ನಿರೀಕ್ಷಿಸಲಾಗಿದೆ.

    ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಗ್ರೀನ್ ಹೈಡ್ರೋಜನ್, ಎಥೆನಾಲ್ ಉತ್ಪಾದನೆ, ಪವನ ವಿದ್ಯುತ್ ಸ್ಥಾವರ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಜೋಡಣೆ, ಲೀಥಿಯಂ ಬ್ಯಾಟರಿ ಮತ್ತು ಎಲೆಕ್ಟ್ರಿಕ್ ವಾಹನಗಳು, ಸಿಮೆಂಟ್ ಮತ್ತು ಸ್ಟೀಲ್ ಕಂಪನಿಗಳ ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ” ಎಂದರು. ಇದನ್ನೂ ಓದಿ: 2 ವರ್ಷ ಬ್ಯಾನ್ ಬಳಿಕ ಫೇಸ್‌ಬುಕ್, ಯೂಟ್ಯೂಬ್‌ಗೆ ಮರಳಿದ ಟ್ರಂಪ್

    ರಾಜ್ಯಕ್ಕೆ ಇಷ್ಟು ದೊಡ್ಡ ಮೊತ್ತದ ಬಂಡವಾಳ ಹರಿದು ಬಂದಿರುವುದು ಸಂತಸ ತಂದಿದೆ. ಈ ಯೋಜನೆಗಳು ರಾಜ್ಯದ ಕೈಗಾರಿಕಾ ಪ್ರಗತಿಗೆ ಮತ್ತಷ್ಟು ವೇಗ ನೀಡಲಿದೆ. ರಾಷ್ಟ್ರದ ಉತ್ಪಾದನಾ ಕ್ಷೇತ್ರಕ್ಕೆ ಕರ್ನಾಟಕದ ಕೊಡುಗೆ ಗಮನಾರ್ಹವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, “ಹೂಡಿಕೆ ಪ್ರಸ್ತಾವನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಉದ್ಯಮ ಸ್ನೇಹಿ ನೀತಿಗಳು ಮತ್ತು ಉದ್ಯಮಗಳಿಗೆ ಪೂರಕ ಪರಿಸರ ವ್ಯವಸ್ಥೆಗೆ ಈ ಹೂಡಿಕೆಗಳು ಸಾಕ್ಷಿಯಾಗಿವೆ. ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ” ಎಂದು ತಿಳಿಸಿದರು. ಇದನ್ನೂ ಓದಿ: ಯುರೋಪ್‌ನಲ್ಲಿ ಗೂಗಲ್ ಉದ್ಯೋಗಿಗಳ ಸಾಮೂಹಿಕ ವಜಾ- ಕಚೇರಿಯಲ್ಲಿ ಪ್ರತಿಭಟನೆ

    ನವೀಕರಿಸಬಹುದಾದ ಇಂಧನ, ಎಥೆನಾಲ್, ಗ್ರೀನ್ ಹೈಡ್ರೋಜನ್ ಉತ್ಪಾದನೆ, ಏರೋಸ್ಪೇಸ್ ಮತ್ತು ಎಲೆಕ್ಟ್ರಾನಿಕ್ ಸಿಸ್ಟಮ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ) ಕ್ಷೇತ್ರವನ್ನು ಉತ್ತೇಜಿಸಲು ಆಂಪ್ಲಸ್ ಆ್ಯಕ್ಟಿವ್ ಪ್ರೈ.ಲಿ., ಆಯನ ರಿನೀವೆಬಲ್ ಪವರ್ ಸಿಕ್ಸ್ ಪ್ರೈ.ಲಿ., ವಿಶ್ವರಾಜ್ ಶುಗರ್ ಇಂಡಸ್ಟ್ರೀಸ್‌ ಲಿ., ಟಾಟಾ ಅಡ್ವಾನ್ಸ್‌ಡ್‌ ಸಿಸ್ಟಮ್ ಲಿ. ಮುಂತಾದ ಕಂಪನಿಗಳ ಪ್ರಸ್ತಾವನೆಗಳನ್ನು ಅನಿಮೋದಿಸಲಾಗಿದೆ ಎಂದು ಹೇಳಿದರು.

    ಕಬ್ಬು ಬೆಳೆಯುವುದರಲ್ಲಿ ದೇಶದಲ್ಲಿ 3ನೇ ಅತಿ ದೊಡ್ಡ ರಾಜ್ಯವಾಗಿರುವ ಕರ್ನಾಟಕದಲ್ಲಿ ಎಥೆನಾಲ್ ಅತಿ ಹೆಚ್ಚು ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿದೆ ಎಂದು ಹೇಳಿದ ಅವರು, ಸಭೆಯಲ್ಲಿ ಹಸಿರು ಇಂಧನಕ್ಕೆ ಸಂಬಂಧಿಸಿದ ಹೂಡಿಕೆಗಳನ್ನು ಅನುಮೋದಿಸಿರುವುದು ಖುಷಿ ತಂದಿದೆ ಎಂದರು. ಇದನ್ನೂ ಓದಿ: ಉದ್ಯೋಗಿಗಳಿಗೆ ಈಗ ಬೋನಸ್ ಇಲ್ಲ, ಹೊಸ ನೇಮಕಾತಿ ಸ್ಥಗಿತಗೊಳಿಸಿದ ಆ್ಯಪಲ್

    ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ, ಉನ್ನತ ಶಿಕ್ಷಣ, ಐಟಿ ಬಿಟಿ ಸಚಿವ ಡಾ. ಅಶ್ವಥ್‌ ನಾರಾಯಣ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಆರ್.ಗಿರೀಶ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರಯ್ಯ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

  • ರಾಜ್ಯದಲ್ಲಿ ಫಾಕ್ಸ್‌ಕಾನ್‌ 5.7 ಸಾವಿರ ಕೋಟಿ ರೂ. ಹೂಡಿಕೆ – 1 ಲಕ್ಷ ಉದ್ಯೋಗ ಸೃಷ್ಟಿ

    ರಾಜ್ಯದಲ್ಲಿ ಫಾಕ್ಸ್‌ಕಾನ್‌ 5.7 ಸಾವಿರ ಕೋಟಿ ರೂ. ಹೂಡಿಕೆ – 1 ಲಕ್ಷ ಉದ್ಯೋಗ ಸೃಷ್ಟಿ

    ಬೆಂಗಳೂರು: ವಿಶ್ವದ ಮುಂಚೂಣಿಯ ಎಲೆಕ್ಟ್ರಾನಿಕ್ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್‌ಕಾನ್‌) ಕಂಪನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

    ಇದರಿಂದ ರಾಜ್ಯದಲ್ಲಿ 1 ಲಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದ್ದು, ಉದ್ಯಮ ಸ್ಥಾಪನೆಗಾಗಿ ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕುಗಳಲ್ಲಿ 300 ಎಕರೆ ಭೂಮಿ ಗುರುತಿಸಲಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವು ಫಾಕ್ಸ್ಕಾನ್‌ಗೆ (Foxconn) ಎಲ್ಲಾ ರೀತಿಯ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಪರಿಣತಿಗೆ ಹೆಸರಾದ ಕಂಪೆನಿ ಫಾಕ್ಸ್‌ಕಾನ್‌ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವುದು ಸಂತಸ ತಂದಿದೆ. ಕರ್ನಾಟಕದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿವೆ. ಐಟಿಐಗಳನ್ನು ಇತ್ತೀಚೆಗಷ್ಟೇ ಉನ್ನತೀಕರಿಸಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಅಂತೆಯೇ ಜಿ.ಟಿ.ಟಿ.ಸಿ, ಪಾಲಿಟೆಕ್ನಿಕ್‌ ಗಳು ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಅತ್ಯುತ್ತಮ ತಾಂತ್ರಿಕ ಶಿಕ್ಷಣವನ್ನು ನೀಡುವ ಮೂಲಕ ಕೌಶಲ್ಯಯುತ ಮಾನವ ಸಂಪನ್ಮೂಲ ಸೃಜಿಸಲಾಗುತ್ತಿದೆ ಎಂದು ವಿವರಿಸಿದರು.

    ಬೆಂಗಳೂರಿನಲ್ಲಿ ಸುಮಾರು 400 ಸರ್ಕಾರಿ ಹಾಗೂ ಖಾಸಗಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಿದ್ದು, ಜಗತ್ತಿನಲ್ಲಿಯೇ ಅತಿ ಹೆಚ್ಚು. ಅಂತೆಯೇ ರಾಜ್ಯವು ಅತ್ಯುತ್ತಮ ಸೆಮಿ-ಕಂಡಕ್ಟರ್‌ ನೀತಿಯನ್ನು ಹೊಂದಿದ್ದು, ಈ ವಲಯದಲ್ಲಿಯೂ ಹೂಡಿಕೆ ಮಾಡುವ ಕುರಿತು ಪರಿಶೀಲಿಸುವಂತೆ ಸಲಹೆ ನೀಡಿದರು.ಇದಲ್ಲದೆ ತಾಂತ್ರಿಕ ತರಬೇತಿ ನೀಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸುವಂತೆ ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಫಾಕ್ಸ್‌ಕಾನ್‌ ಅಧ್ಯಕ್ಷ ಯಂಗ್‌ ಲಿಯು ರಾಜ್ಯದಲ್ಲಿ ಹೂಡಿಕೆ ಮಾಡುವ ಕುರಿತಾಗಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದರು. ಸೆಮಿಕಂಡಕ್ಟರ್‌ ವಲಯದಲ್ಲಿ ಹೂಡಿಕೆಯ ಕುರಿತು ಪರಿಶೀಲಿಸುವುದಾಗಿ ಅವರು ತಿಳಿಸಿದರು. ಇದನ್ನೂ ಓದಿ: ಚೀನಾದಿಂದ ಬೆಂಗಳೂರಿಗೆ ಶಿಫ್ಟ್ – ಸ್ಥಾಪನೆಯಾಗಲಿದೆ ಐಫೋನ್ ತಯಾರಿಕಾ ಘಟಕ

    ಫಾಕ್ಸ್‌ಕಾನ್‌ ಕಂಪನಿಯು ವಿಶ್ವದ ಅತಿ ದೊಡ್ಡ ಎಲೆಕ್ಟ್ರಾನಿಕ್‌ ತಯಾರಿಕಾ ಕಂಪನಿಯಾಗಿದ್ದು, 2022 ರಲ್ಲಿ 6 ಟ್ರಿಲಿಯನ್‌ ಡಾಲರ್‌ಗೂ ಹೆಚ್ಚು ವಹಿವಾಟು ನಡೆಸಿದೆ. ಜಗತ್ತಿನ ಫಾರ್ಚೂನ್‌ 500 ಕಂಪೆನಿಗಳಲ್ಲಿ 20ನೇ ಸ್ಥಾನದಲ್ಲಿದೆ. ವಿಶ್ವದ 24 ದೇಶಗಳಲ್ಲಿ 173 ಕ್ಯಾಂಪಸ್‌ ಗಳನ್ನು ಹೊಂದಿರುವ ಕಂಪೆನಿಯು ಮುಖ್ಯವಾಗಿ ಸ್ಮಾರ್ಟ್‌ ಫೋನ್‌, ಟಿವಿ ಗಳು, ಗೇಮ್‌ ಕನ್ಸೋಲ್ಸ್‌, ಕ್ಲೌಡ್‌ ಮತ್ತು ನೆಟ್‌ ವರ್ಕಿಂಗ್‌ ಉತ್ಪನ್ನಗಳು, ಕಂಪ್ಯೂಟಿಂಗ್‌ ಉತ್ಪನ್ನಗಳು ಮತ್ತು ಇತರ ಬಿಡಿ ಭಾಗಗಳ ಉತ್ಪಾದನೆಯಲ್ಲಿ ತೊಡಗಿದೆ.

    ಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಇ.ವಿ. ರಮಣರೆಡ್ಡಿ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್ನ್.ಎನ್. ಪ್ರಸಾದ್‌, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

  • ಚೀನಾದಿಂದ ಬೆಂಗಳೂರಿಗೆ ಶಿಫ್ಟ್ – ಸ್ಥಾಪನೆಯಾಗಲಿದೆ ಐಫೋನ್ ತಯಾರಿಕಾ ಘಟಕ, 1 ಲಕ್ಷ ಮಂದಿಗೆ ಉದ್ಯೋಗ

    ಚೀನಾದಿಂದ ಬೆಂಗಳೂರಿಗೆ ಶಿಫ್ಟ್ – ಸ್ಥಾಪನೆಯಾಗಲಿದೆ ಐಫೋನ್ ತಯಾರಿಕಾ ಘಟಕ, 1 ಲಕ್ಷ ಮಂದಿಗೆ ಉದ್ಯೋಗ

    ಬೆಂಗಳೂರು: ಕೋವಿಡ್ ಬಳಿಕ ಚೀನಾ (China) ಹಾಗೂ ಅಮೆರಿಕ (America) ನಡುವೆ ಸಂಘರ್ಷ ಹೆಚ್ಚಾಗಿ, ಇದೀಗ ಆಪಲ್ (Apple) ಕಂಪನಿ ತನ್ನ ತಯಾರಿಕಾ ಘಟಕವನ್ನು ಚೀನಾದಿಂದ ಭಾರತಕ್ಕೆ (India) ಸ್ಥಳಾಂತರಿಸಲು ಮುಂದಾಗುತ್ತಿದೆ. ಆಪಲ್‌ನ ಉತ್ಪನ್ನಗಳನ್ನು ತಯಾರಿಸುವ ಕಂಪನಿಯಾಗಿರುವ ಫಾಕ್ಸ್‌ಕಾನ್‌ನ (Foxconn) ಘಟಕ ಶೀಘ್ರವೇ ಬೆಂಗಳೂರಿನ (Bengaluru) ಸಮೀಪ ಸ್ಥಾಪನೆಯಾಗಲಿದೆ.

    ವರದಿಗಳ ಪ್ರಕಾರ ಆಪಲ್ ಫೋನ್‌ಗಳನ್ನು ಸ್ಥಳೀಯವಾಗಿ ಉತ್ಪಾದಿಸುವ ಪಾಲುದಾರ ಕಂಪನಿ ಫಾಕ್ಸ್‌ಕಾನ್‌ ಟೆಕ್ನಾಲಜಿ ಗ್ರೂಪ್ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುಮಾರು 300 ಎಕರೆ ಪ್ರದೇಶದಲ್ಲಿ ಉತ್ಪಾದನಾ ಘಟಕ ನಿರ್ಮಾಣವಾಗಲಿದೆ. ಇದಕ್ಕಾಗಿ ಕಂಪನಿ ಸುಮಾರು 700 ಮಿಲಿಯನ್ ಡಾಲರ್ (ಸುಮಾರು 5.7 ಸಾವಿರ ಕೋಟಿ ರೂ.) ಹೂಡಿಕೆ ಮಾಡಲು ಯೋಜಿಸಿದೆ.

    ಬೆಂಗಳೂರಿನ ಸಮೀಪ ನಿರ್ಮಾಣವಾಗುತ್ತಿರುವ ಆಪಲ್ ಉತ್ಪಾದನಾ ತಾಣ ಸುಮಾರು 1 ಲಕ್ಷದಷ್ಟು ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಚೀನಾದ ಝೆಂಗ್‌ಝೌದಲ್ಲಿರುವ ಕಂಪನಿಯ ವಿಶಾಲವಾದ ಉತ್ಪಾದನಾ ಘಟಕದಲ್ಲಿ ಸುಮಾರು 2 ಲಕ್ಷ ಉದ್ಯೋಗಿಗಳಿದ್ದಾರೆ. ಬೆಂಗಳೂರಿನಲ್ಲೂ ಉತ್ಪಾದನೆ ಹೆಚ್ಚಳವಾಗುತ್ತಿದ್ದಂತೆ ಉದ್ಯೋಗಿಗಳ ಸಂಖ್ಯೆಯೂ ಹೆಚ್ಚಲಿದೆ ಎನ್ನಲಾಗಿದೆ. ಇದನ್ನೂ ಓದಿ: ಚೀನಾದ ಟಿಕ್‌ಟಾಕ್ ಅನ್ನು 30 ದಿನದೊಳಗೆ ಡಿವೈಸ್‌ಗಳಿಂದ ಡಿಲೀಟ್ ಮಾಡಿ – ಸರ್ಕಾರಿ ನೌಕರರಿಗೆ ಯುಎಸ್ ಸೂಚನೆ

    ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಕರ್ನಾಟಕದಲ್ಲಿ 300 ಎಕರೆ ಪ್ರದೇಶದಲ್ಲಿ ಆಪಲ್ ಫೋನ್ ಉತ್ಪಾದನೆಯ ಕಾರ್ಖಾನೆ ನಿರ್ಮಾಣವಾಗಲಿದೆ. ಡಬಲ್ ಎಂಜಿನ್ ಸರ್ಕಾರದಿಂದ ಮಾತ್ರವೇ ಇದು ಸಾಧ್ಯವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಧನ್ಯವಾದ. ಈ ಘಟಕದಿಂದ ರಾಜ್ಯದಲ್ಲಿ ಹೂಡಿಕೆ ಹಾಗೂ ಸ್ಥಳೀಯರಿಗೆ ಅವಕಾಶ ಒದಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ಗೆ ಸೆಡ್ಡು – ಪರ್ಯಾಯ ಆ್ಯಪ್ ರಚಿಸಿದ ಟ್ವಿಟ್ಟರ್ ಸಂಸ್ಥಾಪಕ ಜಾಕ್ ಡಾರ್ಸೆ

    ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಪಲ್ ತಯಾರಿಕಾ ಘಟಕದ ಬಗ್ಗೆ ಹರ್ಷ ವ್ಯಕ್ತಪಡಿಸಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಶೀಘ್ರದಲ್ಲೇ ಆಪಲ್ ಫೋನ್‌ಗಳು ನಿರ್ಮಾಣವಾಗಲಿದೆ. ಇದರಿಂದ ಸುಮಾರು 1 ಲಕ್ಷ ಉದ್ಯೋಗ ಸೃಷ್ಟಿಯಾಗುವುದಲ್ಲದೇ ಕರ್ನಾಟಕಕ್ಕೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ 2025ರ ಹೊತ್ತಿಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡಲು ನಮ್ಮ ಕೊಡುಗೆಯನ್ನು ನೀಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.