Tag: Franchise

  • IPL Mega Auction | ಹಿಟ್‌ಮ್ಯಾನ್ ರೋಹಿತ್‌ ಇನ್‌ – ಡುಪ್ಲೆಸಿ ಔಟ್‌ – ಆರ್‌ಸಿಬಿಗೆ ಆನೆ ಬಲ

    IPL Mega Auction | ಹಿಟ್‌ಮ್ಯಾನ್ ರೋಹಿತ್‌ ಇನ್‌ – ಡುಪ್ಲೆಸಿ ಔಟ್‌ – ಆರ್‌ಸಿಬಿಗೆ ಆನೆ ಬಲ

    ಮುಂಬೈ: 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ (IPL 2025) ನಡೆಯಲಿರುವ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡದ ರಿಟೇನ್‌ ಆಟಗಾರರ ಪಟ್ಟಿಯನ್ನು ಅ.31ರ ಒಳಗೆ ಪ್ರಕಟಿಸುವಂತೆ ಬಿಸಿಸಿಐ (BCCI) ಡೆಡ್‌ಲೈನ್‌ ಫಿಕ್ಸ್‌ ಮಾಡಿದೆ. ಈ ಹಿನ್ನೆಲೆಯಲ್ಲಿ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಸಂಭಾವ್ಯ ಪಟ್ಟಿಯನ್ನು ಸಿದ್ಧ ಮಾಡಿಕೊಂಡಿವೆ ಎಂದು ಹೇಳಲಾಗುತ್ತಿವೆ.

    2025ರ ಐಪಿಎಲ್‌ ಆವೃತ್ತಿಯು ಅನೇಕ ದಿಗ್ಗಜ ಆಟಗಾರರ ಪಾಲಿಗೆ ಸವಾಲಿದ್ದಾಗಿದೆ. 6 ಆಟಗಾರರನ್ನು ರಿಟೇನ್‌ ಮಾಡಿಕೊಳ್ಳಲು ಅವಕಾಶ ಇರುವ ಕಾರಣ ಲೆಜೆಂಡ್‌ ಎಂ.ಎಸ್‌ ಧೋನಿ, ಸಿಎಸ್‌ಕೆ ತಂಡದಲ್ಲೇ ಉಳಿಯಲಿದ್ದಾರೆ ಎಂಬುದು ಕನ್ಫರ್ಮ್‌ ಎನ್ನಲಾಗಿದೆ. ಆದ್ರೆ ಆರ್‌ಸಿಬಿ ತಂಡದಲ್ಲಿ ಇನ್ನೂ ಮಹತ್ವದ ಬದಲಾವಣೆ ಕಂಡುಬಂದಿದೆ. ಮುಂಬೈ ಇಂಡಿಯನ್ಸ್‌ ತಂಡಕ್ಕೆ 5 ಬಾರಿ ಚಾಂಪಿಯನ್‌ ಪಟ್ಟ ಗೆದ್ದುಕೊಟ್ಟಿರುವ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ ಆರ್‌ಸಿಬಿ ತಂಡಕ್ಕೆ ಎಂಟ್ರಿ ಕೊಡಲಿದ್ದು, ಹಾಲಿ ಕ್ಯಾಪ್ಟನ್‌ ಫಾಫ್‌ ಡು ಪ್ಲೆಸಿಸ್‌ ತಂಡದಿಂದ ಔಟ್‌ ಆಗಲಿದ್ದಾರೆ ಎಂದು ತಿಳಿದುಬಂದಿದೆ.

    10 ಫ್ರಾಂಚೈಸಿಗಳ ಸಂಭಾವ್ಯ ಪಟ್ಟಿ ಹೀಗಿದೆ…
    * ಚೆನ್ನೈ ಸೂಪರ್ ಕಿಂಗ್ಸ್:
    ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶಿವಂ ದುಬೆ, ಡೇರಿಲ್‌ ಮಿಚೆಲ್, ಮತೀಶ ಪತಿರಣ, ಎಂ.ಎಸ್ ಧೋನಿ

    * ಮುಂಬೈ ಇಂಡಿಯನ್ಸ್:
    ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಅನ್ಶುಲ್ ಕಾಂಬೋಜ್

    * ರಾಯಲ್ ಚಾಲೆಂಜರ್ಸ್ ಬೆಂಗಳೂರು:
    ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಯಶ್ ದಯಾಳ್

    * ರಾಜಸ್ಥಾನ್ ರಾಯಲ್ಸ್:
    ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್, ಸಂದೀಪ್ ಶರ್ಮಾ

    * ಕೋಲ್ಕತ್ತಾ ನೈಟ್ ರೈಡರ್ಸ್:
    ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಫಿಲ್ ಸಾಲ್ಟ್, ಸುನಿಲ್ ನರೈನ್, ಆಂಡ್ರೆ ರಸೆಲ್, ಹರ್ಷಿತ್ ರಾಣಾ

    * ಗುಜರಾತ್ ಟೈಟಾನ್ಸ್:
    ಶುಭಮನ್ ಗಿಲ್, ರಶೀದ್ ಖಾನ್, ಡೇವಿಡ್ ಮಿಲ್ಲರ್, ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ರಾಹುಲ್ ತೆವಾಟಿಯಾ

    * ಲಕ್ನೋ ಸೂಪರ್ ಜೈಂಟ್ಸ್:
    ಕೆ.ಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಾರ್ಕಸ್ ಸ್ಟೊಯಿನಿಸ್, ಮಯಾಂಕ್ ಯಾದವ್

    * ಡೆಲ್ಲಿ ಕ್ಯಾಪಿಟಲ್ಸ್‌:
    ರಿಷಬ್ ಪಂತ್, ಟ್ರಿಸ್ಟಾನ್ ಸ್ಟಬ್ಸ್, ಮಿಚೆಲ್ ಮಾರ್ಷ್, ಜೇಕ್ ಫ್ರೇಸರ್-ಮೆಕ್‌ ಗಾರ್ಕ್‌, ಅಕ್ಷರ್‌ ಪಟೇಲ್, ಅಭಿಷೇಕ್ ಪೊರೆಲ್

    * ಪಂಜಾಬ್ ಕಿಂಗ್ಸ್:
    ಸ್ಯಾಮ್ ಕುರ್ರಾನ್, ಅರ್ಷ್‌ದೀಪ್‌ ಸಿಂಗ್, ಕಗಿಸೊ ರಬಾಡ, ಲಿಯಾಮ್ ಲಿವಿಂಗ್‌ಸ್ಟೋನ್‌, ಶಶಾಂಕ್ ಸಿಂಗ್, ಅಶುತೋಷ್ ಶರ್ಮಾ

    * ಸನ್‌ರೈಸರ್ಸ್ ಹೈದರಾಬಾದ್:
    ಪ್ಯಾಟ್ ಕಮಿನ್ಸ್, ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಹೆನ್ರಿಚ್ ಕ್ಲಾಸೆನ್, ಟಿ. ನಟರಾಜನ್, ನಿತೀಶ್ ಕುಮಾರ್ ರೆಡ್ಡಿ.

    ಟ್ರೇಡ್‌ ಇನ್‌ ವಿಂಡೋನಲ್ಲಿ ಬದಲಾವಣೆ ಸಾಧ್ಯತೆ:
    ಸದ್ಯ ಮುಂಬೈ ಇಂಡಿಯನ್ಸ್‌ನ ರೋಹಿತ್‌ ಶರ್ಮಾ ಅವರು ರಿಟೇನ್‌ ಆಟಗಾರರ ಪಟ್ಟಿಯಲ್ಲಿದ್ದರೂ, ಅವರು ಟ್ರೇಡ್‌ ಇನ್‌ ವಿಂಡೋ ನಿಯಮದಲ್ಲಿ ಆರ್‌ಸಿಬಿ ಪಾಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹಾಲಿ ಕ್ಯಾಪ್ಟನ್‌ ಫಾಫ್‌ ಡು ಪ್ಲೆಸಿಸ್‌ ರಿಟೇನ್‌ ಸಂಭಾವ್ಯ ಪಟ್ಟಿಯಲ್ಲಿ ಇಲ್ಲದಿರುವುದೂ ಇದಕ್ಕೆ ಕಾರಣವಾಗಿದೆ. 2024ರ ಆವೃತ್ತಿಯಲ್ಲಿ ಆಸೀಸ್‌ ಆಟಗಾರ ಕ್ಯಾಮರೂನ್‌ ಗ್ರೀನ್‌ ಮುಂಬೈ ಇಂಡಿಯನ್ಸ್‌ ಮತ್ತು ಹಾರ್ದಿಕ್‌ ಪಾಂಡ್ಯ ಗುಜರಾತ್‌ ಟೈಟಾನ್ಸ್‌ ತಂಡದಲ್ಲಿದ್ದರೂ ಅವರನ್ನು ಟ್ರೆಡ್‌ ಇನ್‌ ವಿಂಡೋ ನಿಯಮದ ಪ್ರಕಾರ ಬದಲಾವಣೆ ಮಾಡಿಕೊಳ್ಳಲಾಗಿತ್ತು. ಹಾರ್ದಿಕ್‌ ಪಾಂಡ್ಯ ಅವರನ್ನು ಗುಜರಾತ್‌ ಟೈಟಾನ್ಸ್‌ಗೆ ಕರೆತಂದು, ಗ್ರೀನ್‌ ಅವರನ್ನ ಆರ್‌ಸಿಬಿ ತಂಡಕ್ಕೆ ಬಿಟ್ಟುಕೊಡಲಾಗಿತ್ತು.

  • IPL Mega Auction | ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಫ್ರಾಂಚೈಸಿಗಳಿಗೆ ಡೆಡ್‌ಲೈನ್‌ ಫಿಕ್ಸ್‌!

    IPL Mega Auction | ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಫ್ರಾಂಚೈಸಿಗಳಿಗೆ ಡೆಡ್‌ಲೈನ್‌ ಫಿಕ್ಸ್‌!

    ಮುಂಬೈ: ಮುಂದಿನ ನವೆಂಬರ್‌-ಡಿಸೆಂಬರ್‌ನಲ್ಲಿ 2025ರ ಐಪಿಎಲ್‌ ಟೂರ್ನಿಗೆ ಮೆಗಾ ಹರಾಜು (IPL Mega Auction) ನಡೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌ ಮಾಡಿದೆ.

    ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಉಳಿಸಿಕೊಳ್ಳಬಹುದಾದದ ಆಟಗಾರರ ಪಟ್ಟಿಯನ್ನು ಅಕ್ಟೋಬರ್‌ 31ರ ಒಳಗೆ ಪ್ರಕಟಿಸುವಂತೆ ಗಡುವು ನೀಡಿದೆ. ಎಲ್ಲಾ ಫ್ರಾಂಚೈಸಿಗಳಿಗೂ ಈ ಬಾರಿ ರೈಟ್‌ ಟು ಮ್ಯಾಚ್‌ (RTM Card) ಕಾರ್ಡ್‌ನೊಂದಿಗೆ 6 ಆಟಗಾರರನ್ನು ಉಳಿಸಿಕೊಳ್ಳಲು ಮಾತ್ರ ಬಿಸಿಸಿಐ ಅನುಮತಿಸಿದೆ. ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ 5 ವರ್ಷಗಳಾಗಿರುವ ಆಟಗಾರರನ್ನು ಅನ್‌ಕ್ಯಾಪ್ಟ್‌ ಪ್ಲೇಯರ್‌ ಎಂದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಚೊಚ್ಚಲ ಆವೃತ್ತಿ ಪ್ರವೇಶಿಸುವ ಆಟಗಾರರನ್ನು ಕ್ಯಾಪ್ಡ್‌ ಪ್ಲೇಯರ್‌ ಎಂದೂ ಪರಿಗಣಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.

    ಏನಿದು ಆರ್​ಟಿಎಂ ಕಾರ್ಡ್​ ರೂಲ್ಸ್‌?
    ಆರ್​ಟಿಎಂ ಕಾರ್ಡ್‌ (ರೈಟ್ ಟು ಮ್ಯಾಚ್ ಕಾರ್ಡ್ – RTM Card) ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ, ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೇ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಭಿಪ್ರಾಯ ಪಟ್ಟಿದೆ. ಇದನ್ನೂ ಓದಿ: 6 ಆಟಗಾರರ ರಿಟೇನ್‌ಗೆ ಬಿಸಿಸಿಐ ಅವಕಾಶ, ಪರ್ಸ್‌ ಮೊತ್ತ 120 ರಿಂದ 157 ಕೋಟಿ ರೂ.ಗೆ ಹೆಚ್ಚಳ!

    ಶ್ರೀಮಂತ ಕ್ರಿಕೆಟ್‌ ಲೀಗ್‌ನಲ್ಲಿ ಐತಿಹಾಸಿಕ ನಿರ್ಣಯ
    ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್‌ (IPL 2025) ಎಂದೇ ಗುರುತಿಸಿಕೊಂಡಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಮಹತ್ವದ ಬದಲಾವಣೆಯೊಂದು ಆಗಿದೆ. 2025ರ ಐಪಿಎಲ್‌ ಮೆಗಾ ಹರಾಜಿಗೂ ಮುನ್ನವೇ ಬಿಸಿಸಿಐ ಆಟಗಾರರಿಗೆ ಭರ್ಜರಿ ಗಿಫ್ಟ್‌ ನೀಡಿದೆ. ಟೂರ್ನಿ ವೇಳೆ ಲೀಗ್‌ ಪಂದ್ಯಅಗಳನ್ನಾಡುವ ಪ್ರತಿಯೊಬ್ಬ ಆಟಗಾರನೂ ಹರಾಜಿನಲ್ಲಿ ನಿಗದಿಯಾದ ಮೊತ್ತಕ್ಕಿಂತ ಹೆಚ್ಚುವರಿ ನಗದು ಹಣವನ್ನು ಪಡೆಯಲಿದ್ದಾರೆ ಎಂದು ಬಿಸಿಸಿಐ (BCCI) ಘೋಷಣೆ ಮಾಡಿದೆ. ಇದನ್ನೂ ಓದಿ: ಹರಾಜಿನಲ್ಲಿ ಆಯ್ಕೆಯಾಗಿ ಅಲಭ್ಯರಾಗುವ ಆಟಗಾರರಿಗೆ ಖಡಕ್‌ ವಾರ್ನಿಂಗ್‌; ನಿಯಮ ಕಡೆಗಣಿಸಿದ್ರೆ 2 ವರ್ಷ ಬ್ಯಾನ್‌

    ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jay Shah) ತಮ್ಮ ಎಕ್ಸ್‌ ಖಾತೆಯಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಈವರೆಗಿನ ಲೀಗ್‌ನಲ್ಲಿ ಆಟಗಾರರು ಹರಾಜಿನಲ್ಲಿ ಪಡೆದ ಮೊತ್ತ ಪಡೆಯುತ್ತಿದ್ದರು. ಇದರೊಂದಿಗೆ ಸೂಪರ್‌ ಸಿಕ್ಸ್‌, ಬೌಂಡರಿ, ಕ್ಯಾಚ್‌, ಎಲೆಕ್ಟ್ರಿಕ್‌ ಸ್ಟ್ರೈಕರ್‌, ಪ್ಲೇಯರ್‌ ಆಫ್‌ದಿ ಮ್ಯಾಚ್‌, ಪ್ಲೇಯರ್‌ ಆಫ್‌ ದಿ ಸೀರಿಸ್‌ ಮೂಲಕ ಹೆಚ್ಚುವರಿ ನಗದು ಬಹುಮಾನ ಪಡೆಯುತ್ತಿದ್ದರು. ಇನ್ಮುಂದೆ ಇದರ ಹೊರತಾಗಿ ಪ್ರತಿ ಲೀಗ್‌ ಪಂದ್ಯದಲ್ಲೂ ಆಟಗಾರರು ಹೆಚ್ಚುವರಿಯಾಗಿ ಲಕ್ಷ ಲಕ್ಷ ಹಣ ಗಳಿಸಲಿದ್ದಾರೆ. ಇದನ್ನೂ ಓದಿ: IPL 2025 | ಮೆಗಾ ಹರಾಜಿಗೂ ಮುನ್ನವೇ IPL ಆಟಗಾರರಿಗೆ ಬಿಸಿಸಿಐ ಭರ್ಜರಿ ಗಿಫ್ಟ್‌

    ಜಯ್‌ ಶಾ ಎಕ್ಸ್‌ ಖಾತೆಯಲ್ಲಿ ಏನಿದೆ?
    ಐತಿಹಾಸಿಕ ಕ್ರಮದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಆಡುವ ಕ್ರಿಕೆಟಿಗರಿಗೆ ಪಂದ್ಯ ಶುಲ್ಕವನ್ನು ಘೋಷಿಸಿದೆ. ಹರಾಜಿನಲ್ಲಿ ಬಿಕರಿಯಾದ ನಂತರ ಕಾಂಟ್ರ್ಯಾಕ್ಟ್‌ನೊಂದಿಗೆ ಪ್ರತಿ ಆಟಗಾರನೂ ಒಂದು ಪಂದ್ಯಕ್ಕೆ 7.5 ಲಕ್ಷ ರೂ. ಪಡೆಯುತ್ತಾರೆ. ಈ ಪೈಕಿ ಆಟಗಾರನೊಬ್ಬ ಒಂದು ಋತುವಿನಲ್ಲಿ ಎಲ್ಲಾ ಲೀಗ್‌ ಪಂದ್ಯಗಳನ್ನು ಆಡಿದರೆ, ಹರಾಜಿನಲ್ಲಿ ನಿಗದಿಯಾದ ಹಣ ಹೊರತುಪಡಿಸಿ, ಹೆಚ್ಚುವರಿಯಾಗಿ 1.05 ಕೋಟಿ ರೂ. ಹೆಚ್ಚುವರಿ ಲಾಭ ಪಡೆದುಕೊಳ್ಳಲಿದ್ದಾರೆ. ಅದಕ್ಕಾಗಿ ಎಲ್ಲಾ ಫ್ರಾಂಚೈಸಿಗಳು ಪಂದ್ಯ ಶುಲ್ಕಕ್ಕಾಗಿ 12.60 ಕೋಟಿ ರೂ.ಗಳ ಪ್ರತ್ಯೇಕ ನಿಧಿ ಮೀಸಲಿಡುತ್ತವೆ. ಐಪಿಎಲ್‌ನಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಹಾಗೂ ಆಟಗಾರರಲ್ಲಿ ಅತ್ತುತ್ತಮ ಪ್ರದರ್ಶನಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

  • ಹರಾಜಿನಲ್ಲಿ ಆಯ್ಕೆಯಾಗಿ ಅಲಭ್ಯರಾಗುವ ಆಟಗಾರರಿಗೆ ಖಡಕ್‌ ವಾರ್ನಿಂಗ್‌; ನಿಯಮ ಕಡೆಗಣಿಸಿದ್ರೆ 2 ವರ್ಷ ಬ್ಯಾನ್‌

    ಹರಾಜಿನಲ್ಲಿ ಆಯ್ಕೆಯಾಗಿ ಅಲಭ್ಯರಾಗುವ ಆಟಗಾರರಿಗೆ ಖಡಕ್‌ ವಾರ್ನಿಂಗ್‌; ನಿಯಮ ಕಡೆಗಣಿಸಿದ್ರೆ 2 ವರ್ಷ ಬ್ಯಾನ್‌

    ಬೆಂಗಳೂರು: 2025ರ ಐಪಿಎಲ್‌ (IPL 2025) ಕ್ರಿಕೆಟ್‌ ಹಬ್ಬಕ್ಕೆ ತಯಾರಿ ಆರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಮೆಗಾ ಹರಾಜು (Mega Auction) ನಡೆಯಲಿದ್ದು, ಅದಕ್ಕಾಗಿ ಫ್ರಾಂಚೈಸಿಗಳು ಮತ್ತು ಐಪಿಎಲ್‌ ಆಡಳಿತ ಮಂಡಳಿ ಸಿದ್ಧತೆಯಲ್ಲಿ ತೊಡಗಿದೆ. ಈ ನಡುವೆ ಬಿಸಿಸಿಐ 2025 ರಿಂದ 2027ರ ಐಪಿಎಲ್‌ ಋತುಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದ್ದು, ಮಹತ್ವದ ಬದಲಾವಣೆ ತಂದಿದೆ.

    ಈ ಹಿಂದಿನ ಆವೃತ್ತಿಗಳಲ್ಲಿ ಕೆಲ ಆಟಗಾರರು ಅದರಲ್ಲೂ ವಿದೇಶಿ ಆಟಗಾರರು ಹರಾಜಿನಲ್ಲಿ ಆಯ್ಕೆಯಾದ ಬಳಿಕ ಪಂದ್ಯಗಳಿಗೆ ಅಲಭ್ಯರಾಗುತ್ತಿದ್ದರು. ರಾಷ್ಟ್ರೀಯ ತಂಡಗಳಿಗೆ ಆಡುವ ಕಾರಣ ನೀಡಿ ತಮ್ಮ ತವರು ತಂಡಗಳಿಗೆ ಮರಳುತ್ತಿದ್ದರು. ಇದೀಗ ಅಂತಹ ಆಟಗಾರರಿಗೆ ಬಿಸಿಮುಟ್ಟಿಸಲು ಬಿಸಿಸಿಐ ಹೊಸ ನಿಯಮ ಜಾರಿಗೊಳಿಸಿದೆ.

    ಹರಾಜಿನಲ್ಲಿ ಆಯ್ಕೆಯಾದ ಯಾವುದೇ ಆಟಗಾರ, ಐಪಿಎಲ್‌ ಆರಂಭಕ್ಕೂ ಮುನ್ನ ತನ್ನನ್ನು ಅಲಭ್ಯಗೊಳಿಸಿದ್ರೆ, ಮುಂದಿನ 2 ಸೀಸನ್‌ಗಳಿಗೆ ನಿಷೇಧಿಸಲಾಗುತ್ತದೆ ಎಂದು ಬಿಸಿಸಿಐ ಹೇಳಿದೆ. ಇದರಿಂದ ಹರಾಜಿನಲ್ಲಿ ಬಿಕರಿಯಾದ ಆಟಗಾರರು ಆವೃತ್ತಿ ಮುಗಿಯುವವರೆಗೆ ಆಯ್ಕೆಯಾದ ಫ್ರಾಂಚೈಸಿಗಳಿಗೆ ಆಡಬೇಕಾಗುತ್ತದೆ. ಇದನ್ನೂ ಓದಿ: 6 ಆಟಗಾರರ ರಿಟೇನ್‌ಗೆ ಬಿಸಿಸಿಐ ಅವಕಾಶ, ಪರ್ಸ್‌ ಮೊತ್ತ 120 ರಿಂದ 157 ಕೋಟಿ ರೂ.ಗೆ ಹೆಚ್ಚಳ!

    16.25 ಕೋಟಿ ಪಡೆದು 15 ರನ್‌ ಗಳಿಸಿದ್ದ ಸ್ಟೋಕ್ಸ್‌
    2023 ಐಪಿಎಲ್‌ ಆವೃತ್ತಿಗೆ ಬರೋಬ್ಬರಿ 16.25 ಕೋಟಿ ರೂ.ಗೆ ಇಂಗ್ಲೆಂಡ್‌ ತಂಡದ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಅವರನ್ನ ಸಿಎಸ್‌ಕೆ ತಂಡವು ಖರೀದಿಸಿತ್ತು. ಆದ್ರೆ 31 ವರ್ಷದ ಆಟಗಾರ ಸ್ಟೋಕ್ಸ್‌ ಕೇವಲ ಮೊದಲ ಎರಡು ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡು ಕ್ರಮವಾಗಿ 7 ಮತ್ತು 8 ರನ್‌ ಗಳಿಸಿದರು. ಹೀಗಾಗಿ ಅವರು ಗಳಿಸಿದ ಒಂದೊಂದು ರನ್‌ ಬೆಲೆ 1.08 ಕೋಟಿ ಮೊತ್ತವನ್ನು ಸಿಎಸ್‌ಕೆ ಫ್ರಾಂಚೈಸಿ ಕೊಟ್ಟಂತಾಗಿತ್ತು. ಒಂದೇ ಒಂದು ಓವರ್‌ ಬೌಲಿಂಗ್‌ ಮಾಡಿ 18 ರನ್‌ ಕೊಟ್ಟರು. ನಂತರ ಗಾಯಗೊಂಡ ಅವರು ಫಿಟ್‌ನೆಸ್‌ ಸಮಸ್ಯೆಗೆ ಒಳಗಾಗಿ ಪ್ಲೇಯಿಂಗ್‌ 11ನಿಂದ ಹೊರಗುಳಿದರು. ಆದ್ರೆ ಐಪಿಎಲ್‌ ಬಳಿಕ ನಡೆದ ಆಶಸ್‌ ಟೂರ್ನಿಯಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದರು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

    ಅಲ್ಲದೇ ಕಳೆದ ಎರಡು ಆವೃತ್ತಿಗಳಲ್ಲಿ ಆಸೀಸ್‌ ಟಾಪ್‌ ಆಟಗಾರರದ ಡೇವಿಡ್‌ ವಾರ್ನರ್‌, ಮಿಚೆಲ್‌ ಮಾರ್ಷ್‌ ಅವರು ತಮ್ಮ ರಾಷ್ಟ್ರೀಯ ತಂಡಕ್ಕೆ ಅರ್ಧದಲ್ಲೇ ಮರಳಿದ್ದರು. ಇದು ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಭಾರೀ ಹೊಡೆತ ನೀಡಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಬಿಸಿಸಿಐ ಹರಾಜಿನಲ್ಲಿ ಆಯ್ಕೆಯಾದ ಬಳಿಕ ಅಲಭ್ಯರಾಗುವ ಆಟಗಾರರಿಗೆ ಬಿಸಿಮುಟ್ಟಿಸಲು ಹೊಸ ನಿಯಮ ಜಾರಿಗೊಳಿಸಿದೆ. ಇದನ್ನೂ ಓದಿ: ಟೀಂ ಇಂಡಿಯಾ ಸ್ಟಾರ್‌ ಸರ್ಫರಾಜ್‌ ಖಾನ್‌ ಸಹೋದರನಿಗೆ ಆಕ್ಸಿಡೆಂಟ್

    ಸಭೆಯ ಪ್ರಮುಖ ನಿರ್ಣಯಗಳೇನು?
    * ಫ್ರಾಂಚೈಸಿಯೊಂದು ಆರ್‌ಟಿಎಂ ಕಾರ್ಡ್‌ನೊಂದಿಗೆ ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಬಹುದು.
    * ಅಲ್ಲದೇ ಪ್ರತಿ ಫ್ರಾಂಚೈಸಿ 5 ಕ್ಯಾಪ್ಡ್‌ (ಭಾರತೀಯ ಮತ್ತು ಸಾಗರೋತ್ತರ) ಮತ್ತು 2 ಅನ್‌ಕ್ಯಾಪ್ಡ್‌ಪ್ಲೇಯರ್‌ಗಳನ್ನು ಹೊಂದಬಹುದು.
    * ಫ್ಯಾಂಚೈಸಿಗಳ ಪರ್ಸ್‌ ಮೊತ್ತವನ್ನು 100 ಕೋಟಿ ರೂ. ನಿಂದ 120 ಕೋಟಿ ರೂ. ಹೆಚ್ಚಿಸಲಾಗಿದೆ. ಹಾಗಾಗಿ 2025ರ ಐಪಿಎಲ್‌ ಋತುವಿನಲ್ಲಿ ಸಂಬಳ ಮಿತಿ ಸೇರಿ ಒಟ್ಟು ಪರ್ಸ್‌ ಮೊತ್ತ 146 ಕೋಟಿ ರೂ., 2026ಕ್ಕೆ 151 ಕೋಟಿ ರೂ., 2027ಕ್ಕೆ 157 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.
    * ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಂದ್ಯ ಶುಲ್ಕವನ್ನು ಪರಿಚಯಿಸಲಾಗಿದೆ. ಈ ಮೂಲಕ ಪ್ರತಿ ಆಟಗಾರನು ಲೀಗ್‌ ಪಂದ್ಯವೊಂದಕ್ಕೆ 7.5 ಲಕ್ಷ ರೂ. ಹೆಚ್ಚುವರಿ ಪಡೆದುಕೊಳ್ಳಲಿದ್ದಾರೆ.
    * ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದೇಶಿ ಆಟಗಾರರು ಮೆಗಾ ಹರಾಜಿಗೆ ನೋಂದಣಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ವರ್ಷ ಅವರು ಹರಾಜಿನಲ್ಲಿ ನೋಂದಾಯಿಸಲು ಅನರ್ಹರಾಗುತ್ತಾರೆ.
    * ಹರಾಜಿನಲ್ಲಿ ಆಯ್ಕೆಯಾದ ಯಾವುದೇ ಆಟಗಾರ, ಬಳಿಕ ಐಪಿಎಲ್‌ ಆರಂಭಕ್ಕೂ ಮುನ್ನ ತನ್ನನ್ನು ಅಲಭ್ಯಗೊಳಿಸಿದ್ರೆ, ಮುಂದಿನ 2 ಸೀಸನ್‌ಗಳಿಗೆ ನಿಷೇಧಿಸಲಾಗುತ್ತದೆ.
    * ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿ 5 ವರ್ಷ ಪೂರೈಸಿದ ಭಾರತೀಯ ಕ್ರಿಕೆಟ್‌ ಆಟಗಾರ ಅನ್‌ಕ್ಯಾಪ್ಡ್‌ ಪ್ಲೇಯರ್‌ ಆಗುತ್ತಾರೆ. ಇದು ಭಾರತೀಯ ಆಟಗಾರರಿಗೆ ಮಾತ್ರ ಅನ್ವಯಿಸುತ್ತದೆ.
    * 2025 ರಿಂದ 2027ರ ಆವೃತ್ತಿಗಳಲ್ಲಿಯೂ ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌ ಮುಂದುವರಿಯುತ್ತದೆ. ಇದನ್ನೂ ಓದಿ: IPL 2025 Auction: ಮೆಗಾ ಹರಾಜಿಗೂ ಮುನ್ನ ಬಿಸಿಸಿಐನಿಂದ ಆಗುತ್ತಾ ಪ್ರಮುಖ ಬದಲಾವಣೆ?

  • 6 ಆಟಗಾರರ ರಿಟೇನ್‌ಗೆ ಬಿಸಿಸಿಐ ಅವಕಾಶ, ಪರ್ಸ್‌ ಮೊತ್ತ 120 ರಿಂದ 157 ಕೋಟಿ ರೂ.ಗೆ ಹೆಚ್ಚಳ!

    6 ಆಟಗಾರರ ರಿಟೇನ್‌ಗೆ ಬಿಸಿಸಿಐ ಅವಕಾಶ, ಪರ್ಸ್‌ ಮೊತ್ತ 120 ರಿಂದ 157 ಕೋಟಿ ರೂ.ಗೆ ಹೆಚ್ಚಳ!

    -2025 ರಿಂದ 2027ರ ಆವೃತ್ತಿಗಳಲ್ಲಿಯೂ ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌ಗೆ ಅಸ್ತು

    ಬೆಂಗಳೂರು: 2025ರ ಐಪಿಎಲ್‌ (IPL 2025) ಕೂಟಕ್ಕೆ ತಯಾರಿ ಆರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಮೆಗಾ ಹರಾಜು (Mega Auction) ನಡೆಯಲಿದ್ದು, ಅದಕ್ಕಾಗಿ ಫ್ರಾಂಚೈಸಿಗಳು ಮತ್ತು ಐಪಿಎಲ್‌ ಆಡಳಿತ ಮಂಡಳಿ ಸಿದ್ದತೆ ನಡೆಸುತ್ತಿದೆ. ಕಳೆದ ಕೆಲವು ವಾರಗಳಿಂದ ತಂಡಗಳು ತಮ್ಮಲ್ಲಿ ಉಳಿಸಿಕೊಳ್ಳುವ ಆಟಗಾರರ ಬಗೆಗಿನ ನಿಯಮಗಳ ಬಗ್ಗೆ ಚರ್ಚೆ ನಡೆದಿದೆ.

    ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್‌ ಮಂಡಳಿ ಸಭೆಯಲ್ಲಿ 2025-27ರ ವರೆಗಿನ ಐಪಿಎಲ್‌ ನಿಯಮಾವಳಿಗಳ ಕುರಿತು ಬಿಸಿಸಿಐ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದೆ.

    ಸಭೆಯ ಪ್ರಮುಖ ನಿರ್ಣಯಗಳೇನು?
    * ಫ್ರಾಂಚೈಸಿಯೊಂದು ಆರ್‌ಟಿಎಂ ಕಾರ್ಡ್‌ನೊಂದಿಗೆ ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಬಹುದು.
    * ಅಲ್ಲದೇ ಪ್ರತಿ ಫ್ರಾಂಚೈಸಿ 5 ಕ್ಯಾಪ್ಡ್‌ (ಭಾರತೀಯ ಮತ್ತು ಸಾಗರೋತ್ತರ) ಮತ್ತು 2 ಅನ್‌ಕ್ಯಾಪ್ಡ್‌ಪ್ಲೇಯರ್‌ಗಳನ್ನು ಹೊಂದಬಹುದು.
    * ಫ್ಯಾಂಚೈಸಿಗಳ ಪರ್ಸ್‌ ಮೊತ್ತವನ್ನು 100 ಕೋಟಿ ರೂ. ನಿಂದ 120 ಕೋಟಿ ರೂ. ಹೆಚ್ಚಿಸಲಾಗಿದೆ. ಈ ಹಿಂದೆ 2024ರ ಐಪಿಎಲ್‌ನಲ್ಲಿ, ಸಂಬಳದ ಮಿತಿ (ಹರಾಜು ಪರ್ಸ್ + ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವೇತನ) 110 ಕೋಟಿ ರೂ. ಇತ್ತು. 2025ರ ಐಪಿಎಲ್‌ಗೆ ಸಂಬಳದ ಮಿತಿ ಸೇರಿ ಒಟ್ಟು ಪರ್ಸ್‌ ಮೊತ್ತ 146 ಕೋಟಿ ರೂ., 2026ಕ್ಕೆ 151 ಕೋಟಿ ರೂ., 2027ಕ್ಕೆ 157 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.
    * ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಂದ್ಯ ಶುಲ್ಕವನ್ನು ಪರಿಚಯಿಸಲಾಗಿದೆ. ಈ ಮೂಲಕ ಪ್ರತಿ ಆಟಗಾರನು ಲೀಗ್‌ ಪಂದ್ಯವೊಂದಕ್ಕೆ 7.5 ಲಕ್ಷ ರೂ. ಹೆಚ್ಚುವರಿ ಪಡೆದುಕೊಳ್ಳಲಿದ್ದಾರೆ.
    * ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದೇಶಿ ಆಟಗಾರರು ಮೆಗಾ ಹರಾಜಿಗೆ ನೋಂದಣಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ವರ್ಷ ಅವರು ಹರಾಜಿನಲ್ಲಿ ನೋಂದಾಯಿಸಲು ಅನರ್ಹರಾಗುತ್ತಾರೆ.
    * ಹರಾಜಿನಲ್ಲಿ ಆಯ್ಕೆಯಾದ ಯಾವುದೇ ಆಟಗಾರ, ಬಳಿಕ ಐಪಿಎಲ್‌ ಆರಂಭಕ್ಕೂ ಮುನ್ನ ತನ್ನನ್ನು ಅಲಭ್ಯಗೊಳಿಸಿದ್ರೆ, ಮುಂದಿನ 2 ಸೀಸನ್‌ಗಳಿಗೆ ನಿಷೇಧಿಸಲಾಗುತ್ತದೆ.
    * ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿ 5 ವರ್ಷ ಪೂರೈಸಿದ ಭಾರತೀಯ ಕ್ರಿಕೆಟ್‌ ಆಟಗಾರ ಅನ್‌ಕ್ಯಾಪ್ಡ್‌ ಪ್ಲೇಯರ್‌ ಆಗುತ್ತಾರೆ. ಇದು ಭಾರತೀಯ ಆಟಗಾರರಿಗೆ ಮಾತ್ರ ಅನ್ವಯಿಸುತ್ತದೆ.
    * 2025 ರಿಂದ 2027ರ ಆವೃತ್ತಿಗಳಲ್ಲಿಯೂ ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌ ಮುಂದುವರಿಯುತ್ತದೆ.

  • IPL 2025 | ಮೆಗಾ ಹರಾಜಿಗೂ ಮುನ್ನವೇ IPL ಆಟಗಾರರಿಗೆ ಬಿಸಿಸಿಐ ಭರ್ಜರಿ ಗಿಫ್ಟ್‌

    IPL 2025 | ಮೆಗಾ ಹರಾಜಿಗೂ ಮುನ್ನವೇ IPL ಆಟಗಾರರಿಗೆ ಬಿಸಿಸಿಐ ಭರ್ಜರಿ ಗಿಫ್ಟ್‌

    – ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್‌ನಲ್ಲಿ ಐತಿಹಾಸಿಕ ನಿರ್ಣಯ

    ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್‌ (IPL 2025) ಎಂದೇ ಗುರುತಿಸಿಕೊಂಡಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಮಹತ್ವದ ಬದಲಾವಣೆಯೊಂದು ಆಗಿದೆ. 2025ರ ಐಪಿಎಲ್‌ ಮೆಗಾ ಹರಾಜಿಗೂ ಮುನ್ನವೇ ಬಿಸಿಸಿಐ ಆಟಗಾರರಿಗೆ ಭರ್ಜರಿ ಗಿಫ್ಟ್‌ ನೀಡಿದೆ. ಟೂರ್ನಿ ವೇಳೆ ಲೀಗ್‌ ಪಂದ್ಯಅಗಳನ್ನಾಡುವ ಪ್ರತಿಯೊಬ್ಬ ಆಟಗಾರನೂ ಹರಾಜಿನಲ್ಲಿ ನಿಗದಿಯಾದ ಮೊತ್ತಕ್ಕಿಂತ ಹೆಚ್ಚುವರಿ ನಗದು ಹಣವನ್ನು ಪಡೆಯಲಿದ್ದಾರೆ ಎಂದು ಬಿಸಿಸಿಐ (BCCI) ಘೋಷಣೆ ಮಾಡಿದೆ.

    ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jay Shah) ತಮ್ಮ ಎಕ್ಸ್‌ ಖಾತೆಯಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಈವರೆಗಿನ ಲೀಗ್‌ನಲ್ಲಿ ಆಟಗಾರರು ಹರಾಜಿನಲ್ಲಿ ಪಡೆದ ಮೊತ್ತ ಪಡೆಯುತ್ತಿದ್ದರು. ಇದರೊಂದಿಗೆ ಸೂಪರ್‌ ಸಿಕ್ಸ್‌, ಬೌಂಡರಿ, ಕ್ಯಾಚ್‌, ಎಲೆಕ್ಟ್ರಿಕ್‌ ಸ್ಟ್ರೈಕರ್‌, ಪ್ಲೇಯರ್‌ ಆಫ್‌ದಿ ಮ್ಯಾಚ್‌, ಪ್ಲೇಯರ್‌ ಆಫ್‌ ದಿ ಸೀರಿಸ್‌ ಮೂಲಕ ಹೆಚ್ಚುವರಿ ನಗದು ಬಹುಮಾನ ಪಡೆಯುತ್ತಿದ್ದರು. ಇನ್ಮುಂದೆ ಇದರ ಹೊರತಾಗಿ ಪ್ರತಿ ಲೀಗ್‌ ಪಂದ್ಯದಲ್ಲೂ ಆಟಗಾರರು ಹೆಚ್ಚುವರಿಯಾಗಿ ಲಕ್ಷ ಲಕ್ಷ ಹಣ ಗಳಿಸಲಿದ್ದಾರೆ. ಇದನ್ನೂ ಓದಿ: IPL 2025 | ಮುಂಬೈ, ಆರ್‌ಸಿಬಿಗೆ ಬಿಗ್‌ ಶಾಕ್‌ – ದೈತ್ಯ ಆಟಗಾರರನ್ನೇ ಹೊರದಬ್ಬಿದ ಫ್ರಾಂಚೈಸಿ

    ಜಯ್‌ ಶಾ ಎಕ್ಸ್‌ ಖಾತೆಯಲ್ಲಿ ಏನಿದೆ?
    ಐತಿಹಾಸಿಕ ಕ್ರಮದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಆಡುವ ಕ್ರಿಕೆಟಿಗರಿಗೆ ಪಂದ್ಯ ಶುಲ್ಕವನ್ನು ಘೋಷಿಸಿದೆ. ಹರಾಜಿನಲ್ಲಿ ಬಿಕರಿಯಾದ ನಂತರ ಕಾಂಟ್ರ್ಯಾಕ್ಟ್‌ನೊಂದಿಗೆ ಪ್ರತಿ ಆಟಗಾರನೂ ಒಂದು ಪಂದ್ಯಕ್ಕೆ 7.5 ಲಕ್ಷ ರೂ. ಪಡೆಯುತ್ತಾರೆ. ಈ ಪೈಕಿ ಆಟಗಾರನೊಬ್ಬ ಒಂದು ಋತುವಿನಲ್ಲಿ ಎಲ್ಲಾ ಲೀಗ್‌ ಪಂದ್ಯಗಳನ್ನು ಆಡಿದರೆ, ಹರಾಜಿನಲ್ಲಿ ನಿಗದಿಯಾದ ಹಣ ಹೊರತುಪಡಿಸಿ, ಹೆಚ್ಚುವರಿಯಾಗಿ 1.05 ಕೋಟಿ ರೂ. ಹೆಚ್ಚುವರಿ ಲಾಭ ಪಡೆದುಕೊಳ್ಳಲಿದ್ದಾರೆ. ಅದಕ್ಕಾಗಿ ಎಲ್ಲಾ ಫ್ರಾಂಚೈಸಿಗಳು ಪಂದ್ಯ ಶುಲ್ಕಕ್ಕಾಗಿ 12.60 ಕೋಟಿ ರೂ.ಗಳ ಪ್ರತ್ಯೇಕ ನಿಧಿ ಮೀಸಲಿಡುತ್ತವೆ. ಐಪಿಎಲ್‌ನಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಹಾಗೂ ಆಟಗಾರರಲ್ಲಿ ಅತ್ತುತ್ತಮ ಪ್ರದರ್ಶನಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: IPL 2025 Auction: ಮೆಗಾ ಹರಾಜಿಗೂ ಮುನ್ನ ಬಿಸಿಸಿಐನಿಂದ ಆಗುತ್ತಾ ಪ್ರಮುಖ ಬದಲಾವಣೆ? 

    ಪರ್ಸ್‌ ಇನ್ನಷ್ಟು ದೊಡ್ಡದಾಗುವ ಸಾಧ್ಯತೆ:
    ಮೂರು ವರ್ಷಗಳ ಹಿಂದೆ 90 ಕೋಟಿ ರೂ.ಗಳಷ್ಟಿದ್ದ ಐಪಿಎಲ್‌ ಫ್ರಾಂಚೈಸಿಗಳ ಪರ್ಸ್‌ ಈ ಬಾರಿ ಇನ್ನಷ್ಟು ದೊಡ್ಡದಾಗುವ ಸಾಧ್ಯತೆಗಳಿವೆ. ಪ್ರತಿ ಫ್ರಾಂಚೈಸಿಯ ಮೊತ್ತ ಸದ್ಯ 100 ಕೋಟಿ ರೂ. ಮಿತಿಯಿದ್ದು, 115 ರಿಂದ 120 ಕೋಟಿ ರೂ.ಗಳಿಗೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ವರದಿಗಳು ಉಲ್ಲೇಖಿಸಿವೆ. ಮುಂದಿನ ನವೆಂಬರ್ 12ನೇ ವಾರದಲ್ಲಿ ಮೆಗಾ ಹರಾಜಿನ ದಿನಾಂಕ ಮತ್ತು ಸ್ಥಳವನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟೀಂ ಇಂಡಿಯಾ ಸ್ಟಾರ್‌ ಸರ್ಫರಾಜ್‌ ಖಾನ್‌ ಸಹೋದರನಿಗೆ ಆಕ್ಸಿಡೆಂಟ್

  • ತವರಿನಲ್ಲೇ ಐಪಿಎಲ್ ಪಂದ್ಯ ಆಯೋಜಿಸಿ – ಬಿಸಿಸಿಐ ಮುಂದೆ ಬೇಡಿಕೆ ಇಟ್ಟ ಫ್ರಾಂಚೈಸಿಗಳು

    ತವರಿನಲ್ಲೇ ಐಪಿಎಲ್ ಪಂದ್ಯ ಆಯೋಜಿಸಿ – ಬಿಸಿಸಿಐ ಮುಂದೆ ಬೇಡಿಕೆ ಇಟ್ಟ ಫ್ರಾಂಚೈಸಿಗಳು

    ಮುಂಬೈ: 2021ರ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗುವ ಮುಂಚೆಯೇ ಐಪಿಎಲ್ ಫ್ರಾಂಚೈಸಿಗಳು ತವರಿನಲ್ಲೇ ಪಂದ್ಯ ಆಯೋಜಿಸುವಂತೆ ಪಟ್ಟು ಹಿಡಿದಿದೆ.

    ಕ್ರಿಕೆಟ್ ಪ್ರೇಮಿಗಳ ಹಾಟ್ ಫೆವ್‍ರೇಟ್ ಐಪಿಎಲ್ ಟೂರ್ನಿ ಶುರುವಾಗಲು ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇದೆ. ಆದರೆ ಇದಕ್ಕೂ ಮುಂಚೆ ಬಿಸಿಸಿಐ ಮತ್ತು ಕೆಲ ಐಪಿಎಲ್ ಫ್ರಾಂಚೈಸಿಗಳ ನಡುವೆ ಅಸಮಾಧಾನ ಕಾಣಿಸಿಕೊಂಡಿದೆ.

    ಕೊರೊನಾ ಹಿನ್ನಲೆಯಲ್ಲಿ 13ನೇ ಆವೃತ್ತಿಯ ಐಪಿಎಲ್‍ನ್ನು ಯುಎಇಯಲ್ಲಿ ನಡೆಸಿದ್ದ ಬಿಸಿಸಿಐ ಈ ಬಾರಿ 14ನೇ ಆವೃತ್ತಿಯನ್ನು ಭಾರತದಲ್ಲೇ ನಡೆಸುವ ಯೋಜನೆ ಹಾಕಿಕೊಂಡಿದೆ. ಆದರೆ ಈ ಮಧ್ಯೆ ಕೊರೊನಾ ಹಾವಳಿ ಕಡಿಮೆಯಾಗದೆ ಇರುವುದರಿಂದಾಗಿ ಐಪಿಎಲ್ ಪಂದ್ಯಗಳನ್ನು ದೇಶದ ಕೆಲವೇ ತಾಣಗಳಲ್ಲಿ ನಡೆಸಲು ಪ್ಲಾನ್ ಮಾಡಿಕೊಂಡಿತ್ತು. ಆದರೆ ಈ ನಿರ್ಧಾರದಿಂದ ಕೆಲ ಐಪಿಎಲ್ ತಂಡಗಳು ತಮ್ಮ ತವರು ಪಂದ್ಯಾಟದಿಂದ ವಂಚಿತವಾಗುತ್ತವೆ. ಇದನ್ನು ಫ್ರಾಂಚೈಸಿಗಳು ಒಪ್ಪದೆ ತಮ್ಮ ಅಸಮಾಧಾನವನ್ನು ತೋಡಿಕೊಂಡಿದೆ.

    ದೇಶದ 6 ತಾಣಗಳಾದ ಮುಂಬೈ, ಬೆಂಗಳೂರು, ಚೆನ್ನೈ, ನವದೆಹಲಿ, ಅಹಮದಾಬಾದ್ ಮತ್ತು ಕೋಲ್ಕತ್ತಾದಲ್ಲಿ ಪಂದ್ಯ ಆಯೋಜಿಸಲು ಬಿಸಿಸಿಐ ಸಿದ್ಧತೆ ನಡೆಸುತ್ತಿದೆ. ಈ ಪ್ಲಾನ್ ಅಂತಿಮವಾದರೆ ಸನ್ ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳಿಗೆ ತವರಿನ ಪಂದ್ಯ ಮಿಸ್ ಆಗಲಿದೆ. ಆದರೆ ಪ್ರಸ್ತುತ ಈ ತಂಡಗಳು ತಮಗೂ ತವರಿನ ಪಂದ್ಯ ಸಿಗಬೇಕು. ನಾವು ಕೊರೊನಾ ನಿಯಮ ಪಾಲನೆ ಮಾಡಿ ಪಂದ್ಯಗಳನ್ನು ನಡೆಸಿಕೊಡುತ್ತೇವೆ ಎಂದು ಬೇಡಿಕೆ ಇಟ್ಟಿದೆ.

    ಬಿಸಿಸಿಐ ಆಟ ಗಾರರ ಸುರಕ್ಷೆ ಮತ್ತು ಟೂರ್ನಿ ಸೂಸೂತ್ರವಾಗಿ ನಡೆಸುವ ಕಾರಣದಿಂದಾಗಿ ಮೊದಲು 3 ತಾಣಗಳಾದ ಮುಂಬೈ, ಪುಣೆ, ಮತ್ತು ಅಹಮದಾಬಾದ್‍ನ್ನು ಆಯ್ಕೆ ಮಾಡಿಕೊಂಡಿತ್ತು. ನಂತರ ತನ್ನ ನಿರ್ಧಾರ ಬದಲಾಯಿಸಿಕೊಂಡು 6 ತಾಣಗಳನ್ನು ಆಯ್ಕೆ ಮಾಡುತ್ತಿದೆ ಎಂಬ ಸುದ್ದಿ ಕೇಳುತ್ತಿದ್ದಂತೆ, ತವರು ಪಂದ್ಯದಿಂದ ವಂಚಿತವಾಗುವ ತಂಡಗಳಿಗೂ ಅವಕಾಶ ಕಲ್ಪಿಸಿ ಅಲ್ಲಿಯೂ ಪಂದ್ಯ ನಡೆಸುವಂತೆ ಫ್ರಾಂಚೈಸಿಗಳಿಂದ ವಾದ ಕೇಳಿಬರುತ್ತಿದೆ.

    ಈಗಾಗಲೇ ಪಂಜಾಬ್, ತೆಲಂಗಾಣ ಸರ್ಕಾರ ಮತ್ತು ಪಂಜಾಬ್‍ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳು ನಮ್ಮ ರಾಜ್ಯದಲ್ಲೂ ಐಪಿಎಲ್ ಪಂದ್ಯ ನಡೆಸಿ ನಾವು ಸೂಕ್ತ ರೀತಿಯ ಭದ್ರತೆ ಕಲ್ಪಿಸಿಕೊಡುತ್ತೇವೆ ಎಂದು ಬಿಸಿಸಿಐಗೆ ಪತ್ರ ಬರೆದು ಮನವಿ ಮಾಡಿಕೊಂಡಿದೆ.

    ಈ ಎಲ್ಲಾ ಬೆಳವಣಿಗೆಗಳಿಂದ ಬಿಸಿಸಿಐ ಒತ್ತಡಕ್ಕೆ ಸಿಲುಕೊಕೊಂಡಿದೆ. ಇತ್ತ ಅಭಿಮಾನಿಗಳಿಗೆ ಸ್ಟೇಡಿಯಂ ಪ್ರವೇಶ ಇದೆಯಾ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಆದರೆ ಕ್ರಿಕೆಟ್ ಪ್ರೇಮಿಗಳು ಮಾತ್ರ ಚುಟುಕು ಸಮರ ಆದಷ್ಟು ಬೇಗ ಪ್ರಾರಂಭವಾಗಲಿ ಎಂಬ ಬಯಕೆಯಲ್ಲಿದ್ದಾರೆ.

  • ಜಿಯೋಮಾರ್ಟ್ ಹೆಸರು ಬಳಸಿ ವಂಚನೆಗೆ ಯತ್ನ: ರಿಲಯನ್ಸ್ ರಿಟೇಲ್ ಎಚ್ಚರಿಕೆ

    ಜಿಯೋಮಾರ್ಟ್ ಹೆಸರು ಬಳಸಿ ವಂಚನೆಗೆ ಯತ್ನ: ರಿಲಯನ್ಸ್ ರಿಟೇಲ್ ಎಚ್ಚರಿಕೆ

    ಮುಂಬೈ: ನಕಲಿ ವೆಬ್‍ಸೈಟ್ ಗಳ ಮೂಲಕ ಕೆಲ ದುಷ್ಕರ್ಮಿಗಳು ತಾವು ಜಿಯೋಮಾರ್ಟ್ ಭಾಗವೆಂದು ಬಿಂಬಿಸಿಕೊಳ್ಳುರತ್ತಿರುವರಿಗೆ ರಿಲಯನ್ಸ್ ರಿಟೇಲ್ ಎಚ್ಚರಿಕೆ ನೀಡಿದೆ. ಜಿಯೋ ಮಾರ್ಟ್ ಸೇವೆಯ ಫ್ರಾಂಚೈಸಿ ನೀಡುವುದಾಗಿ ಅಮಾಯಕರನ್ನು ದುಷ್ಕರ್ಮಿಗಳು ವಂಚಿಸುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ರಿಲಯನ್ಸ್ ರಿಟೇಲ್ ತಿಳಿಸಿದೆ.

    ರಿಲಯನ್ಸ್ ಪ್ಲಾಟ್‍ಫಾರ್ಮ್ ಗಳಲ್ಲಿ ಎಚ್ಚರಿಕೆಯ ನೋಟಿಸ್: ನಾವು ಸಾರ್ವಜನಿಕರ ಗಮನಕ್ಕೆ ತರಲು ಬಯಸುವ ವಿಷಯ ಏನೆಂದರೆ, ಸದ್ಯಕ್ಕೆ ನಾವು ಯಾವುದೇ ಡೀಲರ್ ಶಿಪ್ ಅಥವಾ ಫ್ರಾಂಚೈಸಿ ಮಾದರಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ. ಫ್ರಾಂಚೈಸಿ-ಏಜೆಂಟ್ ನೇಮಕ ಮಾಡಿಕೊಂಡು, ಅವರ ಮೂಲಕ ಹೊಸ ಡೀಲರ್ ಅಥವಾ ಫ್ರಾಂಚೈಸಿಯನ್ನು ಯಾವುದೇ ಬಗೆಯಲ್ಲೂ ನೇಮಿಸಿಕೊಳ್ಳುತ್ತಿಲ್ಲ. ಫ್ರಾಂಚೈಸಿ ಆಗಿ ನೇಮಿಸಿಕೊಳ್ಳುವ ಸಲುವಾಗಿ ಯಾವ ಹಣವನ್ನು ಸಹ ಪಡೆಯುತ್ತಿಲ್ಲ ಎಂದು ರಿಲಯನ್ಸ್ ನೋಟಿಸ್ ನಲ್ಲಿ ಮಾಹಿತಿ ನೀಡಿದೆ.

    ಕೆಲ ದುಷ್ಕರ್ಮಿಗಳು ತಾವುಗಳು ಜಿಯೋ ಮಾರ್ಟ್ ಭಾಗವೆಂದು ಪರಿಚಯಿಸಿಕೊಂಡು ಪ್ರಾಂಚೈಸಿ ನೀಡುವುದಾಗಿ ಜನರನ್ನು ವಂಚಿಸಲಾಗುತ್ತಿದೆ. ರಿಲಯನ್ಸ್ ರಿಟೇಲ್ ಕೆಲ ನಕಲಿ ವೆಬ್‍ಸೈಟ್ ವಿಳಾಸಗಳನ್ನು ನೋಟಿಸ್ ನಲ್ಲಿ ನೀಡಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಿದೆ.

    1. jmartfranchise.in
    2. jiodealership.com
    3. jiomartfranchises.com
    4. jiomartshop.info
    5. jiomartreliance.com
    6. jiomartfranchiseonline.com
    7. jiomartsfranchises.online
    8. jiomart-franchise.com
    9. jiomartindia.in.net
    10. jiomartfranchise.co

    ಟ್ರೇಡ್ ಮಾರ್ಕ್ ದುರುಪಯೋಗ ಮಾಡಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಅಥವಾ ಸಿವಿಲ್ ದಾವೆ ಹೂಡಲು ಕಂಪನಿ ಹಿಂದೇಟು ಹಾಕಲ್ಲ. ಈ ರೀತಿಯ ಕಾನೂನು ಬಾಹಿರ ಚಟುವಟಿಕೆಗಳ ಗಮನಕ್ಕೆ ಬಂದರೆ ಕಂಪನಿಯ ಕಾನೂನು ವಿಭಾಗಕ್ಕೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ರಿಲಯನ್ಸ್ ರಿಟೇಲ್ ಮನವಿ ಮಾಡಿಕೊಂಡು, ವಿಳಾಸ ಮತ್ತು ಮೇಲ್ ಐಡಿ ನೀಡಿದೆ.

  • ಐಪಿಎಲ್ ರದ್ದಾದ್ರೆ ಕೋಟಿ ಕೋಟಿ ನಷ್ಟ – ಯಾರಿಗೆ ಎಷ್ಟು? ಇಲ್ಲಿದೆ ಲೆಕ್ಕ

    ಐಪಿಎಲ್ ರದ್ದಾದ್ರೆ ಕೋಟಿ ಕೋಟಿ ನಷ್ಟ – ಯಾರಿಗೆ ಎಷ್ಟು? ಇಲ್ಲಿದೆ ಲೆಕ್ಕ

    ಮುಂಬೈ: ಕೊರೊನಾ ವೈರಸ್‍ನಿಂದಾಗಿ ಪ್ರಪಂಚದಾದ್ಯಂತದ ಕ್ರಿಕೆಟ್, ಫುಟ್ಬಾಲ್ ಸೇರಿದಂತೆ ಎಲ್ಲಾ ಟೂರ್ನಿಗಳನ್ನು ಮುಂದೂಡಲಾಗುತ್ತಿದೆ ಅಥವಾ ರದ್ದುಗೊಳಿಸಲಾಗುತ್ತಿದೆ. ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಏಪ್ರಿಲ್ 15 ರವರೆಗೆ ಮುಂದೂಡಲ್ಪಟ್ಟಿದೆ. ಆದರೆ ಈ ವರ್ಷ ಟೂರ್ನಿ ನಡೆಯುತ್ತದೋ ಇಲ್ಲವೋ ಎಂಬುದು ಇನ್ನೂ ನಿರ್ಧರಿಸಲಾಗಿಲ್ಲ.

    ಬಿಸಿಸಿಐ ಮತ್ತು ಎಲ್ಲಾ ಐಪಿಎಲ್ ಫ್ರಾಂಚೈಸಿಗಳು ಶತಾಯಗತಾಯ ಟೂರ್ನಿ ನಡೆಸಿಯೇ ತೀರಬೇಕು ಎಂದು ಪ್ಲಾನ್ ರೂಪಿಸುತ್ತಿದ್ದಾರೆ. ಯಾಕೆ ಗೊತ್ತಾ? ಒಂದು ವೇಳೆ ಟೂರ್ನಿ ರದ್ದಾದರೆ ಬಿಸಿಸಿಐ ಹಾಗೂ ಫ್ರಾಂಚೈಸಿಗಳು ಭಾರೀ ನಷ್ಟವಾಗಲಿದೆ. ಈ ವರ್ಷ ಐಪಿಎಲ್ ನಡೆಯದಿದ್ದರೆ ಪ್ರಸಾರದ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ವಾಹಿನಿಗೆ ಬಿಸಿಸಿಐ 4 ಸಾವಿರ ಕೋಟಿ ರೂ.ಗಳ ನಷ್ಟವನ್ನು ಭರಿಸಬೇಕಾಗುತ್ತದೆ.

    ಬಿಸಿಸಿಐ ಒಂದು ಆವೃತ್ತಿಯ ಪಂದ್ಯಗಳ ನೇರ ಪ್ರಸಾರಕ್ಕಾಗಿ 3,269 ಕೋಟಿ ರೂ. ಬ್ರಾಡ್‍ಕಾಸ್ಟರ್ ನಿಂದ ಪಡೆಯುತ್ತದೆ. ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ ಪ್ರಸಾರ ಹಕ್ಕನ್ನು 5 ವರ್ಷಗಳ ಕಾಲ 16,347.5 ಕೋಟಿ ರೂ.ಗಳಿಗೆ ಖರೀದಿಸಿದೆ. ಒಂದು ಪಂದ್ಯಕ್ಕೆ 55 ಕೋಟಿ ರೂ. ಅಂದ್ರೆ ಪ್ರತಿ ಎಸೆತಕ್ಕೆ 23.3 ಲಕ್ಷ ರೂಪಾಯಿ ಲೆಕ್ಕಾಚಾರವಾಗುತ್ತದೆ.

    ಬ್ರಾಡ್‍ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ 3,300 ಕೋಟಿ ರೂ.ಗಳ ಡಿಜಿಟಲ್ ಜಾಹೀರಾತು ಆದಾಯವನ್ನು ಗಳಿಸುತ್ತದೆ ಎಂದು ನಿರೀಕ್ಷಿಸಿತ್ತು. ಈಗಾಗಲೇ ಶೇ.90ರಷ್ಟು ಜಾಹೀರಾತು ಸ್ಲಾಟ್‍ಗಳನ್ನು ಮಾರಾಟವಾಗಿದೆ.

    ಡಿಜಿಟಲ್ ಪ್ಲಾಟ್‍ಫಾರ್ಮ್ ನಲ್ಲಿ ಪಂದ್ಯವನ್ನು ಪ್ರಸಾರ ಮಾಡಲು ಬಿಸಿಸಿಐ ಫೇಸ್‍ಬುಕ್‍ನೊಂದಿಗೆ 399 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದೆ. ಪಂದ್ಯಾವಳಿ ನಡೆಯದಿದ್ದರೆ, ಮಂಡಳಿಯು ನಷ್ಟವನ್ನು ಅನುಭವಿಸಲಿದೆ.

    ಆಟಗಾರರಿಗೆ ನೀಡಲು ಫ್ರ್ಯಾಂಚೈಸಿ 85 ಕೋಟಿ ಪಡೆಯುತ್ತದೆ. ಐಪಿಎಲ್ ನಡೆಯದಿದ್ದರೆ, 8 ತಂಡಗಳು ಆಟಗಾರರಿಗೆ 680 ಕೋಟಿ ಪಾವತಿಸಬೇಕಾಗಿಲ್ಲ. ಹೀಗಾಗಿ ಆಟಗಾರರು ಈ ಬಾರಿಯ ಸಂಭಾವನೆ ಕಳೆದುಕೊಳ್ಳುತ್ತಾರೆ.

    ಐಪಿಎಲ್ ರದ್ದಾದರೆ ಫ್ರಾಂಚೈಸಿಗಳು ಪ್ರತಿ ಪಂದ್ಯದಿಂದ 2.5 ರಿಂದ 4 ಕೋಟಿ ಕಳೆದುಕೊಳ್ಳಬಹುದು ಎಂಬ ಲೆಕ್ಕಾಚಾರವಿದೆ. ತಂಡಗಳು ಹೋರ್ಡಿಂಗ್, ಜರ್ಸಿ ಜಾಹೀರಾತಿನಿಂದ ಪ್ರತಿ ಪಂದ್ಯಕ್ಕೂ ಕಂಪನಿಗಳಿಂದ ಭಾರೀ ಮೊತ್ತದ ಹಣ ಪಡೆಯುತ್ತವೆ. ಪಂದ್ಯ ನಡೆಯದಿದ್ದರೆ ಅವರು ಹಣವನ್ನು ಕಳೆದುಕೊಳ್ಳಲಿದೆ.

    ವಿವೋ ಐದು ವರ್ಷಗಳ ಕಾಲ 2,199 ಕೋಟಿ ರೂ.ಗಳಿಗೆ ಐಪಿಎಲ್ ಪ್ರಶಸ್ತಿ ಪ್ರಾಯೋಜಕತ್ವವನ್ನು ಹೊಂದಿದೆ. ಅಂದ್ರೆ ಒಂದು ಆವೃತ್ತಿಗೆ ಸುಮಾರು 439 ಕೋಟಿ ರೂ. ಪಾವತಿಸಲಾಗುತ್ತದೆ. ಹೀಗಾಗಿ ಪಂದ್ಯ ನಡೆಯದೆ ಹೋದಲ್ಲಿ ವಿವೋ 439 ಕೋಟಿ ರೂ. ಕಡಿತಗೊಳಿಸಲಿದೆ.

    ಅಂತರರಾಷ್ಟ್ರೀಯ ಪಂದ್ಯಗಳ ಪ್ರಸಾರದಿಂದ ಬಿಸಿಸಿಐ ಕೋಟಿಗಟ್ಟಲೇ ಹಣ ಗಳಿಸುತ್ತದೆ. ಪ್ರತಿ ಪಂದ್ಯಕ್ಕೂ ಮಂಡಳಿಗೆ 60.1 ಕೋಟಿ ರೂ. ಹರಿದು ಬರುತ್ತದೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಏಕದಿನ ಪಂದ್ಯಗಳನ್ನು ರದ್ದುಗೊಳಿಸಿದ್ದರಿಂದ ಬಿಸಿಸಿಐಗೆ 120.2 ಕೋಟಿ ರೂ. ನಷ್ಟವಾಗಿದೆ.

  • ಮಿನಿ ಐಪಿಎಲ್ ನಡೆಸಲು ಸಜ್ಜಾದ ಬಿಸಿಸಿಐ

    ಮಿನಿ ಐಪಿಎಲ್ ನಡೆಸಲು ಸಜ್ಜಾದ ಬಿಸಿಸಿಐ

    – ಬಿಸಿಸಿಐ ಮುಂದಿವೆ ಮೂರು ಆಯ್ಕೆಗಳು

    ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಬಿಸಿಸಿಐ ಮತ್ತು ಫ್ರಾಂಚೈಸಿಗಳು ಮುಂಬೈನಲ್ಲಿ ಶನಿವಾರ ಮಹತ್ವದ ಸಭೆ ನಡೆಸಿದರು. ಈ ವೇಳೆ ಐಪಿಎಲ್‍ಗೆ ಸಂಬಂಧಿಸಿದ ಹಲವು ಆಯ್ಕೆಗಳನ್ನು ಚರ್ಚಿಸಲಾಗಿದೆ.

    ಪಂದ್ಯಾವಳಿಯನ್ನು ವಿದೇಶದಲ್ಲಿ ನಡೆಸದಿರುವ ವಿಷಯದಲ್ಲಿ ಎಲ್ಲಾ ಫ್ರಾಂಚೈಸಿಗಳು ಸರ್ವಾನುಮತದಿಂದ ಇದ್ದವು. ಆದರೆ ಈ ವರ್ಷದ ಪಂದ್ಯಾವಳಿಯ ಭವಿಷ್ಯ ಹೇಗಿರುತ್ತದೆ ಎಂಬ ಬಗ್ಗೆ ನಿರ್ಧರಿಸಲಾಗಿಲಿಲ್ಲ. ಇತ್ತ ಫ್ರ್ಯಾಂಚೈಸಿಗಳು ಸಭೆಯ ಕುರಿತಾಗಿ ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡಲಿಲ್ಲ. ಆದರೆ ಬೋರ್ಡ್ ಮೂಲಕವು ಸಂಭಾಷಣೆಯಲ್ಲಿ ಹೊರಬಂದ ಆಯ್ಕೆಗಳನ್ನು ವಿವರಿಸಿದೆ. ಐಪಿಎಲ್ ಅವಧಿಯನ್ನು ಕಡಿಮೆಗೊಳಿಸುವ ಕುರಿತಾಗಿಯೇ ಹೆಚ್ಚು ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

    ಮೊದಲ ಆಯ್ಕೆ: ಶನಿವಾರವೂ ಎರಡು ಪಂದ್ಯ
    ಹಳೆಯ ಐಪಿಎಲ್ ವೇಳಾಪಟ್ಟಿಯ ಪ್ರಕಾರ ಪ್ರಸಕ್ತ ಆವೃತ್ತಿಯಲ್ಲಿ ತಂಡವೊಂದು ತಲಾ 6 ಪಂದ್ಯಗಳನ್ನು ಆಡಬೇಕು. ಈಗ 60 ಪಂದ್ಯಗಳನ್ನು ಭಾನುವಾರದಂತೆ 2 ಪಂದ್ಯಗಳನ್ನು ಶನಿವಾರವೂ ನಡೆಸಬಹುದು. ಈ ಆಯ್ಕೆಯನ್ನು ಅನುಸರಿಸಿದರೆ ಮೇ ತಿಂಗಳಲ್ಲಿ ಟೂರ್ನಿಯನ್ನು ಮುಗಿಸಲು ಸಾಧ್ಯವಾಗುತ್ತದೆ. ಆದರೆ ಈ ಕುರಿತು ಐಪಿಎಲ್ ಪ್ರಸಾರಕರ ನಿಲುವನ್ನು ನೋಡಬೇಕಾಗಿದೆ. ಏಕೆಂದರೆ ಟಿಆರ್‍ಪಿ ವಿಷಯದಲ್ಲಿ ಸಂಜೆ 4 ಗಂಟೆಗೆ ಪಂದ್ಯವನ್ನು ನಡೆಸಲು ಸ್ಟಾರ್ ಟಿವಿ ಮಾಲೀಕರು ಒಪ್ಪುವುದಿಲ್ಲ. ಜೊತೆಗೆ ಆಟಗಾರರು ಸಹ ಈ ಸಮಯದಲ್ಲಿ ಪಂದ್ಯವನ್ನು ಆಡಲು ಬಯಸುವುದಿಲ್ಲ. ಏಕೆಂದರೆ ಈ ಸಮಯದಲ್ಲಿ ಭಾರತದ ಹೆಚ್ಚಿನ ನಗರಗಳಲ್ಲಿ ತಾಪಮಾನವು 40 ಡಿಗ್ರಿಗಳಿಗಿಂತ ಹೆಚ್ಚಿರುತ್ತದೆ.

    ಎರಡನೇ ಆಯ್ಕೆ: ಮಿನಿ ಐಪಿಎಲ್
    ಸಭೆಯಲ್ಲಿ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಸದ್ಯದ ಸನ್ನಿವೇಶದಲ್ಲಿ ಐಪಿಎಲ್ ಟೂರ್ನಿ ನಡೆಯುವುದು ಅನುಮಾನ. ಹೀಗಾಗಿ 8 ತಂಡಗಳನ್ನು 2 ಗ್ರೂಪ್‍ಗಳಾಗಿ ವಿಭಜಿಸಿ, ನಾಲ್ಕು ಪ್ಲೇ ಆಫ್ ಆಡಿಸಲು ಬಿಸಿಸಿಐಯ ನಿರ್ಧರಿಸಿದೆ. ಆದರೆ ಯಾವಾಗಿನಿಂದ ಆರಂಭವಾಗಲಿದೆ ಈ ಮಿನಿ ಐಪಿಎಲ್ ಎನ್ನುವುದು ಮಾತ್ರ ಇನ್ನೂ ನಿರ್ಧಾರ ಆಗಿಲ್ಲ. ಎರಡ್ಮೂರು ವಾರಗಳ ಬಳಿಕ ದಿನಾಂಕ ನಿಗದಿ ಆಗುವ ಸಾಧ್ಯತೆ ಇದೆ.

    ಮೂರನೇ ಆಯ್ಕೆ: ಸೀಮಿತ ಕ್ರೀಡಾಂಗಣದಲ್ಲಿ ಪಂದ್ಯ
    ಪಂದ್ಯಗಳನ್ನು ಕೆಲವೇ ಕ್ರೀಡಾಂಗಣದಲ್ಲಿ ನಡೆಸಬೇಕು. ಅಂದರೆ ಪ್ರತಿ ಫ್ರ್ಯಾಂಚೈಸ್ ತನ್ನ ತಂಡದ ಆಟವನ್ನು ತವರು ಮೈದಾನದಲ್ಲಿ ನಡೆಸುವ ಬದಲು ಕೆಲವು ಕ್ರೀಡಾಂಗಣಗಳಲ್ಲಿ ಆಡಿಸಬೇಕು. ಆದ್ದರಿಂದ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಟಿವಿ ಸಿಬ್ಬಂದಿ ಪ್ರಯಾಣ ಕಡಿಮೆಯಾಗುತ್ತದೆ. ಜೊತೆಗೆ ಇದು ಕೊರೊನಾ ವೈರಸ್ ಹರಡುವ ಅಪಾಯವನ್ನು ಕಡಿಮೆ ಮಾಡುತ್ತದೆ.

    ಈಡನ್ ಗಾರ್ಡನ್ಸ್

    ಫ್ರ್ಯಾಂಚೈಸ್ ಏನು ಹೇಳಿದ್ರು?
    ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರನ್ನು ಭೇಟಿಯಾದ ನಂತರ ಮಾತನಾಡಿದ ಪಂಜಾಬ್‍ನ  ಫ್ರ್ಯಾಂಚೈಸ್  ನೆಸ್ ವಾಡಿಯಾ, ಐಪಿಎಲ್ ಯಾವಾಗ ಪ್ರಾರಂಭವಾಗುತ್ತದೆ ಎಂದು ಹೇಳುವ ಸ್ಥಿತಿಯಲ್ಲಿ ನಾವಿಲ್ಲ. ನಾವು ಆರ್ಥಿಕ ನಷ್ಟ ಅಥವಾ ಗಳಿಕೆಯ ಬಗ್ಗೆ ಯೋಚಿಸುತ್ತಿಲ್ಲ. ಎರಡು ಅಥವಾ ಮೂರು ವಾರಗಳ ನಂತರ ಪರಿಸ್ಥಿತಿಯನ್ನು ಸರಿಪಡಿಸುತ್ತೇವೆ. ಆ ಹೊತ್ತಿಗೆ ಕೊರೊನಾವೈರಸ್ ಪ್ರಕರಣಗಳು ಕಡಿಮೆಯಾಗುತ್ತವೆ. ಈ ಸಮಯದಲ್ಲಿ ಜನರ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

    ದೆಹಲಿ ತಂಡದ ಸಹ ಮಾಲೀಕ ಪಾರ್ತ್ ಜಿಂದಾಲ್ ಮಾತನಾಡಿ, ಸಭೆಯಲ್ಲಿ ಸರ್ಕಾರ, ಬಿಸಿಸಿಐ ಮತ್ತು ಇತರರು ಪರಿಸ್ಥಿತಿಯ ಮೇಲೆ ನಿಗಾ ಇಡುತ್ತಿದ್ದಾರೆ ಅಂತ ಮಂಡಳಿಯು ಎಲ್ಲಾ ಫ್ರಾಂಚೈಸಿಗಳಿಗೆ ತಿಳಿಸಿದೆ ಎಂದು ಹೇಳಿದರು. ನಿಗದಿತ ಸಮಯದಲ್ಲಿ ಪಂದ್ಯಾವಳಿಯ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ಪ್ರತಿಯೊಬ್ಬರೂ ಐಪಿಎಲ್ ಬಯಸುತ್ತಾರೆ ಎಂದರು.

    ಸರ್ಕಾರದ ಪ್ರಯಾಣ ನಿರ್ಬಂಧ ಮತ್ತು 3 ರಾಜ್ಯಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ನಿರಾಕರಿಸಿದ ನಂತರ ಬಿಸಿಸಿಐ ಏಪ್ರಿಲ್ 15ರಂದು ನಡೆಯಬೇಕಿದ್ದ ಐಪಿಎಲ್ ರದ್ದುಗೊಳಿಸಿದೆ. ಜೊತೆಗೆ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಸರಣಿಯ ಉಳಿದ 2 ಪಂದ್ಯಗಳನ್ನು ಮಂಡಳಿಯು ರದ್ದುಗೊಳಿಸಿತು.