Tag: Free Bus Pass
-

ವಿದ್ಯಾರ್ಥಿನಿಯರಿಗೆ ಗುಡ್‍ನ್ಯೂಸ್- ಉಚಿತ ಬಸ್ ಪಾಸ್ ಘೋಷಣೆ
ಬೆಂಗಳೂರು: 2023-24ರ ರಾಜ್ಯ ಬಜೆಟ್ (Karnataka Budget 2023) ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು, ಸರ್ಕಾರ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಲಾಗಿದೆ.
ವಿದ್ಯಾವಾಹಿನಿ ಯೋಜನೆಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ರಾಜ್ಯದ 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಇದನ್ನೂ ಓದಿ: Karnataka Budget 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರೂ.ಗಳಷ್ಟು ಅನುದಾನ

ಜೊತೆಗೆ ಶಾಲಾ-ಕಾಲೇಜುಗಳ ಮಕ್ಕಳ ಬಸ್ಸು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಬಸ್ ಯೋಜನೆ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ವೆಚ್ಚದಲ್ಲಿ 1000 ಹೊಸ ಬಸ್‍ಗಳ ಕಾರ್ಯಾಚರಣೆ ನಡೆಯುತ್ತಿದೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಾರಾಯಣ ಗುರು ವಸತಿ ಶಾಲೆ ಪ್ರತಿ ಶಾಲೆಗೆ 18 ಕೋಟಿ ವೆಚ್ಚ ವ್ಯಯಿಸಲಾಗುವುದು. ಇದನ್ನೂ ಓದಿ: Karnataka Budget 2023: ರೈತರಿಗೆ ಬಂಪರ್ ಗಿಫ್ಟ್ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ
Live Tv
[brid partner=56869869 player=32851 video=960834 autoplay=true]Join our Whatsapp group by clicking the below link
https://chat.whatsapp.com/E6YVEDajTzH06LOh77r25k -

ಆಧುನಿಕ ‘ಭಗೀರಥ’ ಕಾಮೇಗೌಡರಿಗೆ KSRTCಯಿಂದ ಉಚಿತ ಬಸ್ ಪಾಸ್
ಬೆಂಗಳೂರು: ಆಧುನಿಕ ‘ಭಗೀರಥ’, ‘ಕೆರೆಗಳ ಮನುಷ್ಯ’ ಎಂದೇ ಖ್ಯಾತರಾಗಿರುವ ಕಾಮೇಗೌಡ ಅವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ‘ಜೀವಿತಾವಧಿಯವರೆಗೂ’ ಸಂಚರಿಸಲು ಉಚಿತ ಬಸ್ ಪಾಸ್ ನೀಡಲಾಗಿದೆ.
ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಉಚಿತ ಬಸ್ ಪಾಸ್ ನೀಡಲಾಗಿದ್ದು, ವಿಶೇಷ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಪಾಸ್ ನೀಡಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲಾ ಮಾದರಿಯ ಬಸ್ಸುಗಳಲ್ಲಿ ಕಾಮೇಗೌಡ ಅವರು ಉಚಿತವಾಗಿ ಸಂಚರಿಸಬಹುದಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ: ಕೇಂದ್ರ ಕಛೇರಿ: ಬೆಂಗಳೂರು
ವಿಷಯ: ಕೆರೆಗಳ ಮನುಷ್ಯ ಶ್ರೀಯುತ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ‘ಜೀವಿತಾವಧಿಯವರೆಗೂ’ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ.
— KSRTC (@KSRTC_Journeys) July 2, 2020
ಮಂಡ್ಯ ಜಿಲ್ಲೆಯ, ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡರ ಅನನ್ಯ ಪರಿಸರ ಕಾಳಜಿಯನ್ನು ಮತ್ತು ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದರು. ಕಾರ್ಯಕ್ರಮದ ಬಳಿಕ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವಿಡಿಯೋ ಕರೆ ಮಾಡಿ ಕಾಮೇಗೌಡರನ್ನು ಮಾತನಾಡಿದ್ದರು.
ಸ್ವಂತ ಕೆಲಸದೊಂದಿಗೆ ಗುಡ್ಡಗಾಡು ಪ್ರದೇಶದಲ್ಲಿ 16 ಕೆರೆಗಳನ್ನು ನಿರ್ಮಿಸಿದ ಕಾಮೇಗೌಡರು ಸಾಮಾಜಿಕ ಕಳಕಳಿಯನ್ನು ತೋರಿದ್ದರು. ಯಾವುದೇ ಆಕಾಂಕ್ಷೆ ಇಲ್ಲದೇ 16 ಕೆರೆಗಳನ್ನು ನಿರ್ಮಿಸಿದ್ದ ಕಾಮೇಗೌಡರು ಉಸಿತ ಬಸ್ ಪಾಸ್ ಮಾತ್ರ ಕೇಳಿದ್ದರು. ಬಸ್ ಪಾಸ್ ಸಿಕ್ಕರೇ ಅಕ್ಕಪಕ್ಕದ ಜಿಲ್ಲೆಗಳ ದೇವಾಲಯಗಳಿಗೆ ಭೇಟಿ ನೀಡಬಹುದು ಎಂಬುವುದು ಅವರ ಚಿಂತನೆಯಾಗಿತ್ತು. ಸದ್ಯ ಅವರಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ವ್ಯವಸ್ಥೆಯನ್ನು ಮಾಡಿದ್ದು, ಈ ಕುರಿತ ಮಾಹಿತಿಯನ್ನು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಕಾಮೇಗೌಡರ ಕೊಡುಗೆ ಅಪಾರ, ಅದ್ಭುತ ಹಾಗೂ ಅನುಕರಣೀಯವಾಗಿದೆ. ರಾಜ್ಯ ಸಾರಿಗೆ ಸಂಸ್ಥೆಗಳ ಎಲ್ಲಾ ಮಾದರಿಯ ಬಸ್ಸುಗಳಲ್ಲಿ, ಅವರ ಜೀವತಾವಧಿಯವರೆಗೆ ಉಚಿತವಾಗಿ ಸಂಚರಿಸಲು ಬಸ್ ಪಾಸನ್ನು ನೀಡಲು ಅನುಮತಿಸಲಾಗಿದೆ ಎಂದು ಕೆಎಸ್‍ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕ್ಯಾಮೆಗೌಡ ಅವರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿರುವ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಕೆಲಸವನ್ನು ಗುರುತಿಸಿದ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಕುರಿತು ಪ್ರಧಾನಿ ಮೋದಿ ಕ್ಯಾಮೇಗೌಡರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ದೇಶಕ್ಕೆ ಪರಿಚಯಿಸಿದ್ದರು.
ಕೆರೆ ನಿರ್ಮಾಣಕ್ಕೆ ಕೈ ಹಾಕಿದ್ಯಾಕೆ?:
ಕುರಿಗಾಹಿಯಾಗಿರುವ ಕ್ಯಾಮೇಗೌಡ ಅವರು ಸುಮಾರು 13 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದರು. ಆಗ ವಿಪರೀತ ದಾಹವಾಗಿ ನೀರಿಗಾಗಿ ಪರದಾಟಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿಪಡೆದಿದ್ದರು. ನಾನು ದಾಹ ತೀರಿಸಿಕೊಂಡೆ ಆದ್ರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.
ಕ್ಯಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನ ಕಂಡು ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದೆ ತಮ್ಮ ಕೆಲಸವನ್ನು ಮುಂದುವರಿಸಿದ ಕ್ಯಾಮೇಗೌಡರು ಸದ್ಯ 16 ಕೆರೆಗಳನ್ನು ನಿರ್ಮಿಸಿದ್ದರು.
ಕ್ಯಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ. ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಸಹ ಅವರು ತೋಡಿದ ಕೆರೆಗಳಲ್ಲಿ ನೀರು ಸಾಕಷ್ಟು ಇರುತ್ತದೆ. ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೆ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.
-

ಬೆಂಗಳೂರಿನ ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿಯಿಂದ ಉಚಿತ ಬಸ್ ಪಾಸ್
ಬೆಂಗಳೂರು: ಸಿಲಿಕಾನ್ ಸಿಟಿಯ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಮುಂದಾಗಿದೆ. ಕೂಲಿ ಕಾರ್ಮಿಕರು ಒಂದು ಕಡೆಯಿಂದ ಮತ್ತೊಂದು ಕಡೆ ಕೆಲಸಕ್ಕೆ ಹೋಗಬೇಕು ಎಂದರೆ ಕೈಯಲ್ಲಿ ಹಣವಿರುವುದಿಲ್ಲ. ಹಾಗಾಗಿ ಬಿಎಂಟಿಸಿ, ಕೂಲಿ ಕಾರ್ಮಿಕರಿಗೆ ಸಂಕ್ರಾಂತಿ ಗಿಫ್ಟ್ ಕೊಟ್ಟಿದೆ.
ಕೂಲಿ ಕಾರ್ಮಿಕರಿಗೆ ವಾರಕ್ಕೊಮ್ಮೆ ಸಂಬಳ ಕೊಡ್ತಾರೆ ಕೊಡುವ ಹಣವೆಲ್ಲ ಮಾರನೇ ದಿನವೇ ಜೇಬಲ್ಲಿ ಖಾಲಿ ಆಗುತ್ತದೆ. ತಿಂಗಳಪೂರ್ತಿ ಬಸ್ಸಿನಲ್ಲಿ ಓಡಾಡಲು ತೊಂದರೆ ಆಗುತ್ತಿತ್ತು. ಹಾಗಾಗಿ ಕಟ್ಟಡ ಕಾರ್ಮಿಕ ಇಲಾಖೆ, ಬಿಎಂಟಿಸಿ ಸೇರಿ ಕಾರ್ಮಿಕರಿಗೆ ಒಂದು ವರ್ಷಕ್ಕೆ ಫ್ರೀ ಬಸ್ ಪಾಸ್ ನೀಡುತ್ತಿದೆ.

ಕಾರ್ಮಿಕ ಇಲಾಖೆಯಲ್ಲಿ ರಿಜಿಸ್ಟರ್ ಆಗಿರುವ ಕಾರ್ಮಿಕರಿಗೆ ಈ ಉಚಿತ ಬಿಎಂಟಿಸಿ ಬಸ್ ಪಾಸ್ ದೊರೆಯಲಿದೆ. ಈ ಪಾಸ್ಸಿನ ಹೆಸರು ಸಹಾಯಹಸ್ತ ಪಾಸ್ ಎಲ್ಲ ಟಿಟಿಎಂಟಿಸಿಗಳಲ್ಲಿ ವಿತರಿಸಲಾಗುತ್ತಿದೆ. ಈ ಪಾಸ್ ಪಡೆಯಲು ಎರಡು ಫೋಟೋ ಹಾಗೂ ಕಾರ್ಮಿಕ ಇಲಾಖೆ ನೀಡಿರುವ ಐಡಿ ಕಾರ್ಡ್ ಇದ್ದರೆ ಬಿಎಂಟಿಸಿ ಫ್ರೀ ಪಾಸ್ ಕಾರ್ಮಿಕರ ಕೈ ಸೇರಲಿದೆ.
ಈ ಪಾಸ್ ಕೈಯಲ್ಲಿದ್ದರೆ ಬೆಂಗಳೂರಿನ ಯಾವುದೇ ಜಾಗಕ್ಕಾದ್ರು, ಯಾವ ಟೈಮಿಗೆ ಬೇಕಾದ್ರೂ ಬಿಎಂಟಿಸಿ ಬಸ್ಸಿನಲ್ಲಿ ಸಂಚಾರ ಮಾಡಬಹುದು. ಪಾಸಿನ ಅವಧಿ ಒಂದು ವರ್ಷವಿದ್ದು, ದಿನದ 24 ಗಂಟೆ ಸಂಚಾರ ಮಾಡಬಹುದು. ಒಟ್ಟು 72 ಸಾವಿರ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಲಿದ್ದಾರೆ.
-

ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬಸ್ ಪಾಸ್ ಇಲ್ಲ
ಬೆಂಗಳೂರು: ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬಸ್ ಪಾಸ್ ಸಿಗುವುದಿಲ್ಲ ಎಂದು ನೂತನ ಶಿಕ್ಷಣ ಸಚಿವ ಗುಬ್ಬಿ ಶ್ರೀನಿವಾಸ್ ಪರೋಕ್ಷವಾಗಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡುವ ಪ್ರಶ್ನೆಗೆ ಸೂಕ್ತ ಉತ್ತರ ನೀಡದೆ ಜಾರಿಕೊಂಡರು. ಹಿಂದಿನ ಸರ್ಕಾರದಲ್ಲಿ ಉಚಿತ ಪಾಸ್ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅದನ್ನು ತಡೆ ಹಿಡಿಯಲಾಗಿದೆ. ಈ ಸಂಬಂಧ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಸಮಸ್ಯೆಗಳಿವೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಈಗಾಗಲೇ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಮೂಲ ಸೌಕರ್ಯ ವಂಚಿತ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಚಿಂತನೆ ನಡೆದಿದೆ. ಅನುದಾನವನ್ನು ನೋಡಿಕೊಂಡು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಕನ್ನಡ ಮಾಧ್ಯಮ ಶಾಲೆಗಳು ಉತ್ತಮ ಸ್ಥಿತಿಯಲ್ಲಿವೆ. ಆದರೂ ಪ್ರತಿವರ್ಷ 20 ರಿಂದ 30 ಶಾಲೆಗಳು ಮುಚ್ಚುತ್ತಿವೆ. ಶಿಕ್ಷಣ ವ್ಯಾಪಾರೀಕರಣ ಆಗುತ್ತಿರುವುದು ಇದಕ್ಕೆ ಕಾರಣ. ಖಾಸಗಿ ಶಿಕ್ಷಣ ಸಂಸ್ಥೆಗಳು ಹಳ್ಳಿಗಳಿಗೂ ವ್ಯಾನ್ ಕಳಿಸಿ ಮಕ್ಕಳನ್ನು ಕರೆತರುತ್ತಿವೆ. ಇದೆಲ್ಲವನ್ನು ಗಮದಲ್ಲಿಟ್ಟುಕೊಂಡು ಕನ್ನಡ ಶಾಲೆಗಳ ಅಭಿವೃದ್ಧಿಗೊಳಿಸಬೇಕಿದೆ ಎಂದರು.

ಸಿಬಿಎಸ್‍ಸಿ, ಐಸಿಎಸ್‍ಸಿ ಗಳಲ್ಲಿ ಕೂಡ ಕನ್ನಡ ಕಡ್ಡಾಯಗೊಳಿಸಿ, ಅನುಷ್ಠಾನಕ್ಕೆ ತರಲಾಗುವುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದ ಪಠ್ಯಪುಸ್ತಕ ಬದಲಾವಣೆ ಮಾಡುತ್ತೇವೆ. ಪ್ರಾದೇಶಿಕತೆ ಒಳಗೊಂಡ ಪಠ್ಯ ರಚನೆಗೆ ನಿರ್ಧಾರ ನಡೆದಿದೆ. ದೆಹಲಿ ಹಾಗೂ ಕೇರಳ ಶಿಕ್ಷಣ ಪದ್ಧತಿಯ ಬಗ್ಗೆ ಅಧ್ಯಯನ ನಡೆಸಲು ನಿಯೋಗ ಕಳಿಸಲಾಗುತ್ತದೆ. ಅಲ್ಲಿನ ವ್ಯವಸ್ಥೆ, ಪಠ್ಯ ಪುಸ್ತಕ ಅಧ್ಯಯನ ಮಾಡಿ ಪುಸ್ತಕ ಬದಲಾವಣೆ ಮಾಡುವ ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದರು.
ಗ್ರಂಥ ಪಾಲಕರ ವೇತನ ಹೆಚ್ಚಳದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಗ್ರಂಥ ಪಾಲಕರು ಮಂಗಳವಾರ ನನ್ನನ್ನು ಭೇಟಿ ಮಾಡಿದರು. ಈ ಮೂಲಕ ವೇತನ ಹೆಚ್ಚಳ ಬೇಡಿಕೆ ಸಲ್ಲಿಸಿದ್ದಾರೆ. ಆದರೆ ಕೆಲವು ಗ್ರಂಥಾಲಯಗಳು ಆರ್ ಡಿಪಿಆರ್ ಅಡಿ ಬರುತ್ತವೆ. ಹೀಗಾಗಿ ಆ ಇಲಾಖೆ ಜೊತೆಗೂ ಚರ್ಚೆ ಮಾಡಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

-

ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಫ್ರೀ ಬಸ್ ಪಾಸ್: ಸಿಎಂ ಎಚ್‍ಡಿಕೆ
ರಾಮನಗರ: ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ಕೊಡುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಭರವಸೆ ಕೊಟ್ಟಿದ್ದಾರೆ.
ಈ ಬಗ್ಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಉಚಿತ ಬಸ್ ಪಾಸ್ ಬಗ್ಗೆ ಒಂದು ತೀರ್ಮಾನಕ್ಕೆ ಬರಬೇಕು ಎಂದುಕೊಂಡಿದ್ದೇನೆ. ನಾಳೆ ನಮ್ಮ ಅಧಿಕಾರಿಗಳು ಸಭೆ ಕರೆದಿದ್ದಾರೆ. ಯಾವ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಾರೆ. ಅಂತಹ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ಕೊಡುತ್ತೇವೆ ಎಂದು ಹೇಳಿದ್ದಾರೆ.
ನೀವು ರಾಜಕೀಯ ಮಾಡಿದರೆ, ನನಗೆ ರಾಜಕೀಯ ಮಾಡಲು ಗೊತ್ತಿಲ್ಲವೇ? 50 ಸಾವಿರ, 1 ಲಕ್ಷ ಡೊನೇಷನ್ ಕೊಟ್ಟು ಓದುವವರಿಗೆ ನಿಮಗೆ ಯಾಕೆ ಉಚಿತವಾದ ಪಾಸ್ ಎಂದು ಪ್ರಶ್ನಿಸಿದ್ದಾರೆ. ಆದ್ದರಿಂದ ಯಾರು ಈ ರಾಜ್ಯದ ಸರ್ಕಾರಿ ಶಾಲೆಯಲ್ಲಿ ಓದುತ್ತಾರೋ ಅಂತಹ ಮಕ್ಕಳಿಗೆ ಅಂದರೆ ಎಲ್ಲಾ ಸರ್ಕಾರಿ ಮಕ್ಕಳಿಗೂ ಉಚಿತ ಬಸ್ ಪಾಸ್ ಕೊಡುತ್ತೇವೆ. ಈ ಬಗ್ಗೆ ನಾಳೆ ಸಭೆ ಕರೆದು ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ.
ಇಂದು ಸಿಎಂ ಕುಮಾರಸ್ವಾಮಿ ಅವರು ತಮ್ಮ ಸ್ವಕ್ಷೇತ್ರವಾದ ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದ್ದಾರೆ.
-

ಪೆಟ್ರೋಲ್, ವಿದ್ಯುತ್ ಆಯ್ತು ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ?
ಬೆಂಗಳೂರು: ಬಸ್ ಪ್ರಯಾಣದ ದರವನ್ನು ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೊರ ಹಾಕಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಪೆಟ್ರೋಲ್ ಹಾಗೂ ಡೀಸೆಲ್ ತೆರಿಗೆ ಹೆಚ್ಚಳದಿಂದ ಸಾರಿಗೆ ಇಲಾಖೆಯ ನಷ್ಟದ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಇಲಾಖೆಗೆ ಕನಿಷ್ಟ 1 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ಕೇಳಿದ್ದೇವೆ. ಇದರೊಂದಿಗೆ 20%ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಎಲ್ಲ ಸಾರಿಗೆ ನಿಗಮಗಳೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ಬಸ್ ಪ್ರಯಾಣ ದರವನ್ನು ಏರಿಕೆ ಮಾಡಬೇಕು ಎಂದು ಈ ಹಿಂದೆ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಈ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೈಗೆ ಒಪ್ಪಿಸಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿಚಾರವಾಗಿ ಮಾತನಾಡಿದ ಸಚಿವರು, ಉಚಿತ ಬಸ್ ಪಾಸ್ ಗೆ 2 ಸಾವಿರ ಕೋಟಿ ರೂ. ಖರ್ಚು ಬರಲಿದೆ. ಹೀಗಾಗಿ ಶಿಕ್ಷಣ ಸಚಿವ ಎಂ.ಮಹೇಶ್ ಶಿಕ್ಷಣ ಇಲಾಖೆಯಿಂದ 25% ಅನುದಾನ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದಕ್ಕೆ ಸಾರಿಗೆ ಇಲಾಖೆಯಿಂದ 25% ರಷ್ಟು ಅನುದಾನ ಕೂಡಿಸುತ್ತೇವೆ. ಆದರೆ ಉಳಿದ 50%ರಷ್ಟು ಅನುದಾನವನ್ನು ಸರ್ಕಾರ ಕೊಡಲಿದೆ. ಹಿಂದಿನ ಸರ್ಕಾರವು ಇಷ್ಟೇ ನೆರವು ಕೊಡುತ್ತಿತ್ತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿದ್ದಾರೆ. ರಾಜ್ಯಕ್ಕೆ ಮರಳಿದ ಬಳಿಕ ಉಚಿತ ಬಸ್ ಪಾಸ್ ಕುರಿತು ಚರ್ಚೆ ನಡೆಸಲಾಗುತ್ತದೆ. ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಾರಿಗೆ ಸೆಸ್ ಸಂಗ್ರಹಿಸುವಂತೆ ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮಹಾನಗರ ಪಾಲಿಕೆ ಈಗಾಗಲೇ ಭಿಕ್ಷುಕರ ಕರ ಸೇರಿದಂತೆ ವಿವಿಧ ಸೆಸ್‍ಗಳನ್ಮು ವಿಧಿಸಲಾಗುತ್ತಿದೆ. ಅದೇ ರೀತಿ ಸಾರಿಗೆ ಸೆಸ್ ಸಂಗ್ರಹಿಸಿ ಕೊಟ್ಟರೆ ನಗರ ಸಾರಿಗೆಗೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೆಂಗಳೂರಿಗರ ಮೇಲೆ ಟ್ರಾನ್ಸ್ ಪೋರ್ಟ್ ಸೆಸ್: ಸಾರಿಗೆ ಸಚಿವರಿಂದ ಶಾಕ್!
ಮನಸ್ಸಿಗೆ ದುಃಖ ಆದಾಗ ಅತ್ತು ಬಿಡಬೇಕು. ಆಗಲೇ ಮನಸ್ಸಿಗೆ ಸಮಾಧಾನವಾಗುತ್ತದೆ. ಕುಮಾರಸ್ವಾಮಿ ಭಾವನಾತ್ಮಕ ವ್ಯಕ್ತಿ. ಹೀಗಾಗಿ ಅವರು ಅಳುವಿನ ಮೂಲಕ ತಮ್ಮ ದುಃಖ ಶಮನ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಯಾರ ಮೇಲೂ ಆರೋಪ ಮಾಡಿಕೊಂಡಿಲ್ಲ. ಅಲ್ಲದೆ ತಮಗೆ ನೋವು ಕೊಟ್ಟಿದ್ದಾರೆ ಎಂದು ಹೇಳಿಲ್ಲ ಎಂದು ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದರು.
ನಿಗಮಗಳ ಬೇಡಿಕೆ ಏನು:
ಸಾರಿಗೆ ಇಲಾಖೆ ಮೂರುವರೆ ವರ್ಷಗಳ ಹಿಂದೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿತ್ತು. ಈಗ ಸಾರಿಗೆ ಇಲಾಖೆ 65 ರೂ. ಗೆ ಹೋಲ್ ಸೇಲ್ ದರದಲ್ಲಿ ಪ್ರತಿ ಲೀಟರ್ ಡೀಸೆಲ್ ಪಡೆಯುತ್ತಿದೆ. ಆಗುತ್ತಿರುವ ನಷ್ಟವನ್ನು ಸರಿದೂಗಿಸಲು 8% ದಿಂದ 10% ದರ ಏರಿಸಲು ಸಾರಿಗೆ ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.ಕಳೆದ ಕೆಲ ತಿಂಗಳಿಂದ ಡೀಸೆಲ್ ದರ ಹೆಚ್ಚಾಗುತ್ತಿದೆ. ಏಪ್ರಿಲ್ ನಲ್ಲಿ ಲೀಟರ್ ಗೆ 61.02 ರೂ. ಇತ್ತು. ಆದರೆ ಮೇ ತಿಂಗಳಲ್ಲಿ 70.25 ರೂ. ಗೆ ಏರಿಕೆ ಆಗಿದೆ. ಇದರ ಜೊತೆ ಬಜೆಟ್‍ನಲ್ಲಿ ತೈಲ ದರದ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ದರವನ್ನು 30% ದಿಂದ 32%ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ. ಮತ್ತು ಡೀಸೆಲ್ ಲೀಟರ್ ಗೆ 1.12 ರೂ. ದುಬಾರಿಯಾಗಿದೆ.
ಡೀಸೆಲ್ ಏರಿಕೆಯಿಂದ ದಿನಕ್ಕೆ ಲಕ್ಷಾಂತರ ಲೀಟರ್ ಡೀಸೆಲ್ ಉಪಯೋಗಿಸುವ ಸಾರಿಗೆ ನಿಗಮಗಳು ಈಗ ಡೀಸೆಲ್ ಗಾಗಿ ಅಧಿಕ ಹಣ ಪಾವತಿಸುತ್ತಿದೆ. ಮೊದಲೇ ಸಾರಿಗೆ ನಿಮಗ ನಷ್ಟದಲ್ಲಿರುವುದರಿಂದ ಈಗ ಟಿಕೆಟ್ ಬೆಲೆ ಏರಿಕೆ ಅನಿವಾರ್ಯವಾಗಿದೆ. ಅಷ್ಟೇ ಅಲ್ಲದೆ ತೈಲ ಕಂಪೆನಿಗಳು ಸಗಟು ಡೀಸೆಲ್ ಬೆರೆಯನ್ನು ಏರಿಕೆ ಮಾಡಿವೆ. ಆದ್ದರಿಂದ ಸಾರಿಗೆ ನಿಗಮಗಳಿಗೆ ಪ್ರತಿದಿನ 30.97 ಲಕ್ಷ ರೂ. ಅಧಿಕವಾಗಿ ಆರ್ಥಿಕ ಹೊರೆ ಬೀಳುತ್ತಿದ್ದು, ತಿಂಗಳಿಗೆ 9.29 ಕೋಟಿ ರೂ. ಅಧಿಕ ವೆಚ್ಚವಾಗುತ್ತಿದೆ ಎಂದು ವರದಿಯಾಗಿತ್ತು.
-

ಉಚಿತ ಬಸ್ ಪಾಸ್, ಲ್ಯಾಪ್‍ಟಾಪ್ ಯೋಜನೆ ಮುಂದುವರಿಸಲು NSUI ಮನವಿ
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಹಾಗೂ ಉಚಿತ ಲ್ಯಾಪ್‍ಟಾಪ್ ಯೋಜನೆಯನ್ನು ಎಲ್ಲಾ ವಿಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಎನ್‍ಎಸ್‍ಯುಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯರವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯ ಡಾ. ಜಿ ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ.
ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಹಿಂದಿನ ಸಿದ್ದರಾಮಯ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮುಂದುವರಿಸಬೇಕೆಂದು ಹಾಗೂ ವಿದ್ಯಾರ್ಥಿಗಳು ಉನ್ನತ ಶೈಕ್ಷಣಿಕ ಉದ್ದೇಶಕ್ಕಾಗಿ ಪಡೆದ ಅರಿವು ಯೋಜನೆಯ ಸಾಲ ಮತ್ತು ಸಹಕಾರಿ ಮತ್ತು ರಾಷ್ಟ್ರೀಯ ಬ್ಯಾಂಕ್ ಗಳಿಂದ ತೆಗೆದುಕೊಂಡಿರುವ ಸಾಲವನ್ನು ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಮನ್ನಾ ಮಾಡಬೇಕೆಂದು ವಿದ್ಯಾರ್ಥಿಗಳ ಪರವಾಗಿ ಸವಾದ್ ಸುಳ್ಯರವರು ಮನವಿ ನೀಡಿದರು.
ಸಿದ್ದರಾಮಯ್ಯ ಸರ್ಕಾರ ಹಿಂದಿನ ಬಜೆಟ್ ನಲ್ಲಿ ಘೋಷಿಸಿದ್ದ ವಿಧ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯು ಆರ್ಥಿಕ ಹೊರೆಯಾಗುತ್ತದೆ ಎಂಬ ಕಾರಣ ನೀಡಿ ಕರ್ನಾಟಕ ಸಾರಿಗೆ ಇಲಾಖೆಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ರದ್ದು ಮಾಡಿದ್ದು ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಈ ಯೋಜನೆಯನ್ನು ಮುಂದುವರಿಸಬೇಕೆಂದು ಎಂದು ಎನ್‍ಎಸ್‍ಐಐ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಟಿ.ಎಂ ಶಹೀದ್ ಉಪಸ್ಥಿತರಿದ್ದರು.
