Tag: free electricity

  • ಮೆಟ್ರೋ ಟಿಕೆಟ್‌ ದರದಲ್ಲಿ 50% ರಿಯಾಯಿತಿ, ಉಚಿತ ವಿದ್ಯುತ್‌, ನೀರು – ದೆಹಲಿ ಚುನಾವಣೆಗೆ 15 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

    ಮೆಟ್ರೋ ಟಿಕೆಟ್‌ ದರದಲ್ಲಿ 50% ರಿಯಾಯಿತಿ, ಉಚಿತ ವಿದ್ಯುತ್‌, ನೀರು – ದೆಹಲಿ ಚುನಾವಣೆಗೆ 15 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

    ನವದೆಹಲಿ: ಮುಂದಿನ ಫೆ.5ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ (Arvind Kejriwal) ಅವರು 15 ಗ್ಯಾರಂಟಿಗಳನ್ನೊಳಗೊಂಡ ಎಎಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

    ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಮಹಿಳಾ ಸಮ್ಮಾನ್ ಯೋಜನೆ, 24 ಗಂಟೆ ಉಚಿತ ನೀರು, ಉಚಿತ ವಿದ್ಯುತ್‌, ದಲಿತ ವಿದ್ಯಾರ್ಥಿಗಳಿಗಾಗಿ ಅಂಬೇಡ್ಕರ್ ಸ್ಕಾಲರ್‌ ಶಿಪ್, ಯಮುನಾ ನದಿ ಶುದ್ಧೀಕರಣ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರುವುದಾಗಿ ʻಕೇಜ್ರವಾಲ್ ಕಿ ಗ್ಯಾರಂಟಿʼ (Kejriwal Ki Guarantee) ಹೆಸರಿನ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ.

    ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಮತ್ತು ಮೆಟ್ರೋ ಪ್ರಯಾಣ ದರದಲ್ಲಿ (Metro Ticket Price) ಶೇ.50ರಷ್ಟು ರಿಯಾಯಿತಿ ನೀಡುವುದಾಗಿಯೂ ಭರವಸೆ ನೀಡಿದ ಕೇಜ್ರಿವಾಲ್‌ ಇದು ಮೋದಿ ಅವರ ʻನಕಲಿ ಗ್ಯಾರಂಟಿʼ ಅಲ್ಲ ʻಕೇಜ್ರಿವಾಲ್‌ ಕೀ ಗ್ಯಾರಟಿʼ ಅಂತ ಹೇಳಿದ್ದಾರೆ.

    ಎಎಪಿಯ 15 ಗ್ಯಾರಂಟಿಗಳು ಯಾವುವು?
    * ಉದ್ಯೋಗದ ಖಾತ್ರಿ
    * ಮಹಿಳಾ ಗೌರವ ಯೋಜನೆ – ಪ್ರತಿ ಮಹಿಳೆಗೆ ತಿಂಗಳಿಗೆ 2,100 ರೂ.
    * ಸಂಜೀವನಿ ಯೋಜನೆ – 60 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ
    * ತಪ್ಪಾಗಿ ಬಂದ ನೀರಿನ ಬಿಲ್‌ ಮನ್ನಾ
    * 24 ಗಂಟೆ ನೀರು ಪೂರೈಕೆ
    * ಯುರೋಪ್‌ ಮಾದರಿಯಲ್ಲೇ ರಸ್ತೆ ಅಭಿವೃದ್ಧಿ
    * ಯಮುನಾ ನದಿ ಶುದ್ಧೀಕರಣ
    * ಡಾ.ಅಂಬೇಡ್ಕರ್ ವಿದ್ಯಾರ್ಥಿವೇತನ ಯೋಜನೆ
    * ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ, ದೆಹಲಿ ಮೆಟ್ರೋದಲ್ಲಿ 50% ರಿಯಾಯಿತಿ
    * ಅರ್ಚಕರಿಗೆ 18,000 ಸಾವಿರ ರೂ.
    * ಬಾಡಿಗೆದಾರರಿಗೆ ಉಚಿತ ವಿದ್ಯುತ್ ಮತ್ತು ನೀರು
    * ಒಳಚರಂಡಿ ಶುದ್ಧೀಕರಣ
    * ಪಡಿತರ ಚೀಟಿ
    * ಆಟೋ, ಟ್ಯಾಕ್ಸಿ ಮತ್ತು ಇ-ರಿಕ್ಷಾ ಚಾಲಕರ ಮಗಳ ಮದುವೆಗೆ 1 ಲಕ್ಷ ರೂ., ಮಕ್ಕಳಿಗೆ ಉಚಿತ ತರಬೇತಿ, ಜೀವ ವಿಮೆ
    * RWA ಗಳಿಗೆ (ವಸತಿ ಕಲ್ಯಾಣ ಸಂಘಗಳು) ಖಾಸಗಿ ಭದ್ರತಾ ಸಿಬ್ಬಂದಿ ಒದಗಿಸಲಾಗುವುದು.

  • ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ʻಸೂರ್ಯ ಘರ್‌ʼ ಯೋಜನೆ ಬಗ್ಗೆ ಭಾರಿ ನಿರ್ಲಕ್ಷ್ಯ – ಸಚಿವ ಜೋಶಿ

    ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ʻಸೂರ್ಯ ಘರ್‌ʼ ಯೋಜನೆ ಬಗ್ಗೆ ಭಾರಿ ನಿರ್ಲಕ್ಷ್ಯ – ಸಚಿವ ಜೋಶಿ

    ಹುಬ್ಬಳ್ಳಿ: ಮಹತ್ವಾಕಾಂಕ್ಷೆಯ ʻಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆʼ (PM Surya Ghar Muft Bijli Yojan) ಬಗ್ಗೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಸರಿಯಾದ ರೀತಿಯಲ್ಲಿ ಪ್ರಚಾರ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅಸಮಾಧಾನ ಹೊರಹಾಕಿದರು.

    ಜೈಪುರದಲ್ಲಿ ʻಸುಸ್ಥಿರ ಇಂಧನ ಆರ್ಥಿಕತೆಯತ್ತ ಪರಿವರ್ತನೆʼ ಶೃಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ (Congress) ಉಚಿತ ವಿದ್ಯುತ್ ಭರವಸೆ ನೀಡಿದೆ. ಇದರಿಂದ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ವಿದ್ಯುತ್ ಕೊರತೆ ಎದುರಾಗುತ್ತಿದ್ದು, ಆಗಾಗ್ಗೆ ಕಡಿತಗೊಳಿಸಲಾಗುತ್ತಿದೆ. 200 ಯೂನಿಟ್‌ ಉಚಿತ ವಿದ್ಯುತ್ ಜನರ ಕಣ್ಣಿಗೆ ಮಣ್ಣೆರೆಚ್ಚುವ ಒಂದು ತಂತ್ರಗಾರಿಕೆ ಅಷ್ಟೇ ಎಂದು ಟೀಕಿಸಿದರು. ಇದನ್ನೂ ಓದಿ: ಇದೇ ಮೊದಲ ಬಾರಿಗೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆ!

    200 ಯೂನಿಟ್‌ ಉಚಿತ ಎನ್ನುತ್ತಾರೆ. ಆದ್ರೆ, ವಾಸ್ತವದಲ್ಲಿ ಅಷ್ಟು ಕೊಡುವುದೇ ಇಲ್ಲ. ಇದರೊಂದಿಗೆ ಉಳಿದವರಿಗೆ ವಿದ್ಯುತ್ ಶುಲ್ಕ ಏರಿಸಿದ್ದಾರೆ. 10 ರೂ., 11 ರೂ., 12 ರೂ. ಹೀಗೆ ಮನಸೋ ಇಚ್ಛೆ ದರ ಹೆಚ್ಚಳ ಮಾಡಿದ್ದಾರೆ. ಕೈಗಾರಿಕೆ, ವಾಣಿಜ್ಯ ಬಳಕೆದಾರರಿಗೂ ವಿದ್ಯುತ್ ದರ ಏರಿಕೆಯ ಬರೆ ಎಳೆದಿದ್ದಾರೆ. ವಿದ್ಯುತ್ ದರ ಏರಿಕೆ ಮತ್ತು ವಿದ್ಯುತ್ ಕಡಿತದಿಂದ ಬೇಸತ್ತ ಉದ್ಯಮಿಯೊಬ್ಬರು 5,000 ಚದರಡಿಯ ತಮ್ಮ ಮೂರು ಶೆಡ್‌ಗಳಿಗೆ ʻಸೂರ್ಯ ಘರ್ʼ ಅಳವಡಿಸಿಕೊಡುವಂತೆ ತನ್ನನ್ನು ಕೋರಿದರು. ಉಚಿತ ವಿದ್ಯುತ್‌ ರಾಜ್ಯಗಳಲ್ಲಿ ಅಂತಹ ಪರಿಸ್ಥಿತಿ ತಲೆದೋರಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ

    ನಿಜವಾಗಿ ಉಚಿತ ವಿದ್ಯುತ್ ಅಂದ್ರೆ ಸೂರ್ಯ ಘರ್:
    ನಿಜವಾಗಿ ಉಚಿತ ವಿದ್ಯುತ್ ಪೂರೈಸುವ ಯೋಜನೆ ಎಂದರೆ ಅದು ʻಸೂರ್ಯ ಘರ್ʼಎಂದು ಪ್ರತಿಪಾದಿಸಿದ ಸಚಿವರು, 3 ಕೆವಿ ವಿದ್ಯುತ್ ಉತ್ಪಾದನೆ ಘಟಕಕ್ಕೆ ಕೇಂದ್ರ ಸರ್ಕಾರ 78,000 ರೂ.ವರೆಗೆ ಸಹಾಯಧನ ನೀಡಲಿದೆ. ಅಲ್ಲದೇ, ಬಳಸಿ ಉಳಿದ ವಿದ್ಯುತ್ ಮಾರಾಟದ ಮೂಲಕ ಆದಾಯಕ್ಕೂ ಅವಕಾಶ ಕಲ್ಪಿಸಿದೆ. ಸೋಲಾರ್ ಪ್ಲ್ಯಾಂಟ್ ಅಳವಡಿಕೆಗೆ ಬ್ಯಾಂಕ್ ಸಾಲ ಸೌಲಭ್ಯಕ್ಕೂ ಅನುವು ಮಾಡಿಕೊಟ್ಟಿದೆ ಎಂದು ಸಚಿವ ಜೋಶಿ ವಿವರಿಸಿದರು. ಇದನ್ನೂ ಓದಿ: Ramanagara | ಹಣದ ಆಸೆಗೆ ಸ್ವಂತ ಮಗುವನ್ನೇ ಮಾರಿದ ತಾಯಿ – ನಾಲ್ವರು ಅರೆಸ್ಟ್

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದ ʻಸೂರ್ಯ ಘರ್ ಮುಫ್ತ್ ಬಿಜ್ಲಿʼ ಮಹತ್ವಾಕಾಂಕ್ಷೆಯ ಯೋಜನೆ ಆಗಿದ್ದರೂ ಕಾಂಗ್ರೆಸ್ ಆಡಳಿತದ ರಾಜ್ಯಗಳು ಸರಿಯಾಗಿ ಪ್ರಮೋಟ್ ಮಾಡುತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಎಸ್‌ಎಂಕೆ ಅಂತಿಮ ದರ್ಶನ ಪಡೆದ ಸಿಎಂ

  • J&K Poll Manifesto | ಪಿಡಿಪಿ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್‌ ಉಚಿತ – ಮೆಹಬೂಬಾ ಮುಫ್ತಿ

    J&K Poll Manifesto | ಪಿಡಿಪಿ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್‌ ಉಚಿತ – ಮೆಹಬೂಬಾ ಮುಫ್ತಿ

    – ಜಮ್ಮು-ಕಾಶ್ಮೀರ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಪಿಡಿಪಿ ಮುಖ್ಯಸ್ಥೆ
    – ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಗೆ ಕಿಡಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದು, ಈ ನಡುವೆ ಮಾಜಿ ಸಿಎಂ ಮೆಹಬೂಬಾ ಮುಫ್ತಿ (Mehbooba Mufti) ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಶನಿವಾರ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮಾಡೆಲ್‌ ಅನ್ನೇ ಅನುಸರಿಸಿದಂತಿದೆ.

    ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್ ಉಚಿತವಾಗಿ (Free Electricity) ನೀಡುವುದಾಗಿ ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.

    ಮುಂದುವರಿದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೆಹಬೂಬಾ ಮುಫ್ತಿ, ದೇವಸ್ಥಾನಗಳು, ಮಸೀದಿಗಳು ಮತ್ತು ಗುರುದ್ವಾರಗಳಿಗೆ ತಮ್ಮ ಪಕ್ಷವು ಉಚಿತ ವಿದ್ಯುತ್ ಕಲ್ಪಿಸಲಿದೆ. ತಮ್ಮ ಪಕ್ಷವು ಗುತ್ತಿಗೆ ಶಿಕ್ಷಕರ ಗೌರವಧನ ಹೆಚ್ಚಿಸಲಿದೆ. ಜೈಲಿನಲ್ಲಿರುವವರಿಗೆ ಉಚಿತ ಸೌಲಭ್ಯ ಒದಗಿಸುವುದಾಗಿಯೂ ಭರವಸೆ ನೀಡಿದ್ದಾರೆ.

    ಪಿಡಿಪಿ ಏಕಾಂಗಿ ಸ್ಪರ್ಧೆ:
    ಹೊರತುಪಡಿಸಿ, ಮುಂಬರುವ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ (NC) ಮತ್ತು ಕಾಂಗ್ರೆಸ್ (Congress) ನಡುವಿನ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದರು. ಆ ಎರಡೂ ಪಕ್ಷಗಳು ಯಾವುದೇ ಅಜೆಂಡಾ ಹೊಂದಿಲ್ಲ ಮತ್ತು ಕೇವಲ ಸೀಟು ಹಂಚಿಕೊಂಡು ಅಧಿಕಾರಕ್ಕೆ ಬರುವುದಷ್ಟೇ ಅವರ ಮೈತ್ರಿ ಉದ್ದೇಶ. ತಮ್ಮ ಪಕ್ಷವು ಯಾವುದೇ ಅಜೆಂಡಾ ಇಲ್ಲದೇ ಕೇವಲ ಸೀಟು ಹಂಚಿಕೆಯ ಮಾತುಕತೆಯಿಂದಾಗಿ ಯಾವುದೇ ಮೈತ್ರಿ ಅಡಿಯಲ್ಲಿ ಸ್ಪರ್ಧಿಸುವುದಿಲ್ಲ. ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.

    ನಮ್ಮ ಅಜೆಂಡಾವನ್ನು ಎನ್‌ಸಿ ಮತ್ತು ಕಾಂಗ್ರೆಸ್‌ ಒಪ್ಪಿದರೆ ಅವರು ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಲಿ. ನಾವೂ ಅವರನ್ನು ಬೆಂಬಲಿಸುತ್ತೇವೆ. ನನಗೆ ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವುದು ಎಲ್ಲಕ್ಕಿಂತ ಮುಖ್ಯವಾಗಿದೆ ಎಂದರು.

    ಅಲ್ಲದೇ 2014 ರಿಂದ 2018ರ ವರೆಗೆ ಬಿಜೆಪಿಯೊಂದಿಗೆ ತಮ್ಮ ಪಕ್ಷದ ಮೈತ್ರಿ ಕುರಿತು ಮಾತನಾಡಿ, ನಾವು ಈ ಹಿಂದೆ ಮೈತ್ರಿ ಮಾಡಿಕೊಂಡಾಗ ನಮಗೆ ಒಂದು ಅಜೆಂಡಾ ಇತ್ತು. ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ, ಅವರು ನಮ್ಮ ಅಜೆಂಡಾವನ್ನು ಒಪ್ಪಿದ ಬಳಿಕವಷ್ಟೇ ಮೈತ್ರಿ ಮಾಡಿಕೊಂಡಿದ್ದೆವು ಎಂದು ತಿಳಿಸಿದರು.

  • ಉಚಿತ ವಿದ್ಯುತ್ ಕೊಟ್ಟರೂ ಕರೆಂಟ್ ಕದ್ದ ಕಾಂಗ್ರೆಸ್ ನಾಯಕಿ – ಬಿತ್ತು 1 ಲಕ್ಷ ದಂಡ!

    ಉಚಿತ ವಿದ್ಯುತ್ ಕೊಟ್ಟರೂ ಕರೆಂಟ್ ಕದ್ದ ಕಾಂಗ್ರೆಸ್ ನಾಯಕಿ – ಬಿತ್ತು 1 ಲಕ್ಷ ದಂಡ!

    ಚಿಕ್ಕಮಗಳೂರು: ತಮ್ಮದೇ ಸರ್ಕಾರ ವಿದ್ಯುತ್ ಫ್ರೀ (Free Electricity) ಕೊಟ್ಟರೂ ಗ್ರಾಮ ಪಂಚಾಯಿತಿ ಸದಸ್ಯೆ ಕರೆಂಟ್ ಕದ್ದು ಸಿಕ್ಕಿಬಿದ್ದಿದ್ದಾರೆ.

    ಚಿಕ್ಕಮಗಳೂರು (Chikkamagaluru) ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಡಬಗೆರೆಯ ತಮ್ಮ ಮೂರು ಮನೆಗಳಿಗೆ ಪಂಚಾಯ್ತಿ ಸದಸ್ಯೆ ಆಶಾ ನಾರಾಯಣ್ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದರು. ವಿಷಯ ತಿಳಿದು ದಾಳಿ ನಡೆಸಿದ ಮೆಸ್ಕಾಂ ಅಧಿಕಾರಿಗಳು 1 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರಿಗೆ ನಿಂದನೆ; ಕಾಂಗ್ರೆಸ್ ನಾಯಕರ ವಿರುದ್ಧ ಡಿಜಿಪಿಗೆ ಬಿಜೆಪಿ ದೂರು

    ಎನ್.ಆರ್.ಪುರ ತಾಲೂಕಿನ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯೂ ಆಗಿರುವ ಆಶಾ ನಾರಾಯಣ್, ಕಡಬಗೆರೆಯಲ್ಲಿ ಮೂರು ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದರು. ವಿಷಯ ತಿಳಿದು ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಮನೆ ಮೇಲೆ ಮೆಸ್ಕಾಂ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದರು.

    ಮೆಸ್ಕಾಂ ಅಧಿಕಾರಿಗಳ ತಂಡ ಮಂಗಳೂರಿನಿಂದ ಆಗಮಿಸಿತ್ತು. ಕಾಂಗ್ರೆಸ್ ನಾಯಕಿಗೆ 1 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಅಕ್ರಮ ಗೊತ್ತಿದ್ದರೂ ಪ್ರಭಾವಿ ಎನ್ನುವ ಕಾರಣಕ್ಕೆ ಸ್ಥಳೀಯ ಅಧಿಕಾರಿಗಳು ಸುಮ್ಮನಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಕವರ್‌ಗೆ ಹೀಲಿಯಂ ಗ್ಯಾಸ್ ತುಂಬಿಸಿಕೊಂಡು ಟೆಕ್ಕಿ ಆತ್ಮಹತ್ಯೆ

    ಇದೀಗ ಮಂಗಳೂರು ಅಧಿಕಾರಿಗಳಿಂದಲೇ ವಂಚನೆ ಬೆಳಕಿಗೆ ಬಂದಿದೆ. ಆಶಾ ನಾರಾಯಣ್ ಅವರು ದೇವದಾನ ಗ್ರಾಮ ಪಂಚಾಯಿತಿ ಸದಸ್ಯೆಯೂ ಆಗಿದ್ದಾರೆ.

  • 24 ಗಂಟೆ ವಿದ್ಯುತ್‌ ಉಚಿತ, ಯುವಕರಿಗೆ ಉದ್ಯೋಗ ಖಚಿತ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ʻಕೇಜ್ರಿವಾಲ್‌ ಕಿ ಗ್ಯಾರಂಟಿʼ ಘೋಷಣೆ!

    24 ಗಂಟೆ ವಿದ್ಯುತ್‌ ಉಚಿತ, ಯುವಕರಿಗೆ ಉದ್ಯೋಗ ಖಚಿತ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ʻಕೇಜ್ರಿವಾಲ್‌ ಕಿ ಗ್ಯಾರಂಟಿʼ ಘೋಷಣೆ!

    ಚಂಡೀಗಢ: ಮುಂದಿನ ಅಕ್ಟೋಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ (Assembly Election) ಆಮ್‌ ಆದ್ಮಿ ಪಕ್ಷ ಹರಿಯಾಣದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದೆ. ಪ್ರಚಾರದ ವೇಳೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮಾದರಿಯಲ್ಲೇ ಹಲವು ಉಚಿತ ಗ್ಯಾರಂಟಿಗಳನ್ನ (AAP Guarantees) ಘೋಷಣೆ ಮಾಡಿದೆ.

    ಹರಿಯಾಣದಲ್ಲಿಂದು ನಡೆದ ಆಮ್‌ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ʻಕೇಜ್ರಿವಾಲ್ ಕಿ ಗ್ಯಾರಂಟಿʼ (Kejriwal ki guarantees) ಘೋಷಣೆ ಮಾಡಿದ್ದಾರೆ. ಸುನೀತಾ ಕೇಜ್ರಿವಾಲ್ (Sunita Kejriwal), ಆಪ್ ಹಿರಿಯ ನಾಯಕ ಸಂಜಯ್ ಸಿಂಗ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಇತರ ಆಪ್‌ ನಾಯಕರು ಗ್ಯಾರಂಟಿ ಪತ್ರಗಳನ್ನ ಬಿಡುಗಡೆ ಮಾಡಿದ್ದಾರೆ.

    ಆಪ್‌ ಗ್ಯಾರಂಟಿ ಏನು?
    24 ಗಂಟೆ ಉಚಿತ ವಿದ್ಯುತ್‌ ಸರಬರಾಜು, ಪ್ರತಿಯೊಬ್ಬರಿಗೂ ಉಚಿತ ವೈದ್ಯಕೀಯ ಚಿಕಿತ್ಸೆ, ಮಕ್ಕಳಿಗೆ ಗುಣಮಟ್ಟದ ಉಚಿತ ಶಿಕ್ಷಣ, ನಿರುದ್ಯೋಗ ಯುವಕರಿಗೆ ಉದ್ಯೋಗ ಮತ್ತು ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವುದಾಗಿ ಆಪ್‌ ಘೋಷಣೆ ಮಾಡಿದೆ.

    ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸುನೀತಾ ಕೇಜ್ರಿವಾಲ್‌, ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ ದೆಹಲಿ ಮತ್ತು ಪಂಜಾಬ್‌ನಲ್ಲಿ ಅನೇಕ ಬದಲಾವಣೆಗಳನ್ನು ತಂದಿದೆ. ಮುಂದುವರಿದು ದೆಹಲಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸೂಚಿಸಿದ್ದಾರೆಂದು ತಿಳಿಸಿದಾರೆ.

    ಕೇಜ್ರಿವಾಲ್‌ ಹುಟ್ಟಿ ಬೆಳೆದಿದ್ದು ಹರಿಯಾಣದ ಹಿಸಾರ್‌ನಲ್ಲಿ. ಇಲ್ಲಿ ಹುಟ್ಟಿದ ಹುಡುಗನೊಬ್ಬ ರಾಷ್ಟ್ರ ರಾಜಧಾನಿಯನ್ನು ಆಳುತ್ತಾನೆ ಅಂತ ಯಾರೊಬ್ಬರು ಸಹ ಕನಸಿನಲ್ಲೂ ಊಹಿಸಿರಲಿಲ್ಲ. ಇದು ಯಾವುದೇ ಪವಾಡಕ್ಕಿಂತ ಕಡಿಮೆಯೇನಿಲ್ಲ. ಅವರು ಇನ್ನೂ ಏನಾದರೂ ಮಹತ್ಕಾರ್ಯ ಮಾಡಬೇಕು ಆ ದೇವರು ಬಯಸಿದ್ದಾನೆ ಎಂದು ಭಾವುಕರಾದರು.

    ಇದೇ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ದೆಹಲಿ, ಹರಿಯಾಣ ಮತ್ತು ಗುಜರಾತ್‌ನ ಆಪ್‌ ಅಭ್ಯರ್ಥಿಗಳ ಪರ ಸಕ್ರೀಯವಾಗಿ ಪ್ರಚಾರ ಮಾಡಿದ್ದರು. ಇದೀಗ ಮುಂಬರುವ ವಿಧಾನಸಭಾ ಚುನಾವಣೆಗೆ ಹರಿಯಾಣದ ಎಲ್ಲಾ 90 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಪ್‌ ನಿರ್ಧರಿಸಿದೆ.

  • ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – ತೆರಿಗೆ ಪಾವತಿಸೋ ಮಂದಿಗೆ ಉಚಿತ ವಿದ್ಯುತ್‌ ಕಟ್

    ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – ತೆರಿಗೆ ಪಾವತಿಸೋ ಮಂದಿಗೆ ಉಚಿತ ವಿದ್ಯುತ್‌ ಕಟ್

    ಶಿಮ್ಲಾ: ಭಾರೀ ಹಣಕಾಸು ಮುಗ್ಗಟ್ಟು (Economic Crisis) ಎದುರಿಸುತ್ತಿರುವ ಹಿಮಾಚಲ ಪ್ರದೇಶದಲ್ಲಿರುವ (Himachal Pradesh) ಕಾಂಗ್ರೆಸ್‌ ಸರ್ಕಾರ ಆದಾಯ ಪಾವತಿಸುವ ವ್ಯಕ್ತಿಗಳಿಗೆ ಉಚಿತ ವಿದ್ಯುತ್‌ (Free Electricity) ನೀಡದೇ ಇರುವ ಅಚ್ಚರಿಯ ನಿರ್ಧಾರ ಕೈಗೊಂಡಿದೆ.

    ಸಿಎಂ ಸುಖುವಿಂದರ್‌ ಸಿಂಗ್‌ ಸುಕ್ಕು (Sukhvinder Singh Sukhu) ನೇತೃತ್ವದಲ್ಲಿ ಶುಕ್ರವಾರ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಎಲ್ಲಾ ಆದಾಯ ತೆರಿಗೆ ಪಾವತಿದಾರರಿಗೆ ಅನುಕೂಲವಾಗುವ ಉಚಿತ ವಿದ್ಯುತ್ ಯೋಜನೆಯನ್ನು ಹಿಂಪಡೆಯಲು ನಿರ್ಧರಿಸಿದೆ. ಬಿಪಿಎಲ್‌ ಕಾರ್ಡ್‌ (BPL Card) ಮತ್ತು ನಗರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ (IRDP) ಮಾಸಿಕ 125 ಯೂನಿಟ್‌ ಉಚಿತ ವಿದ್ಯುತ್‌ ಮುಂದುವರಿಯಲಿದೆ.  ಇದನ್ನೂ ಓದಿ: ದೆಹಲಿಯಂತೆ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ

    ವಿದ್ಯುತ್‌ ಸಬ್ಸಿಡಿಗೆ ಹಲವು ಷರತ್ತುಗಳನ್ನು ಈಗ ಹಾಕಲಾಗಿದೆ. ಒಂದು ಕುಟುಂಬದ ಒಂದು ಮೀಟರ್‌ಗೆ ಮಾತ್ರ ಇನ್ನು ಮುಂದೆ ಸಬ್ಸಿಡಿ ಸಿಗಲಿದೆ. ಉಚಿತ ವಿದ್ಯುತ್‌ ಪಡೆಯುವಸಂಪರ್ಕಕ್ಕೆ ಆಧಾರ್‌ ನಂಬರ್‌ ಜೊತೆಗೆ ಪಡಿತರ ಸಂಖ್ಯೆಯನ್ನು ಲಿಂಕ್‌ ಮಾಡಲಾಗುತ್ತದೆ.

    ರಾಜ್ಯದಲ್ಲಿ 26 ಲಕ್ಷ ವಿದ್ಯುತ್ ಗ್ರಾಹಕರಿದ್ದು ಅವರಲ್ಲಿ 12 ಲಕ್ಷ ಜನರು 125 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಮೂಲಕ ಶೂನ್ಯ ವಿದ್ಯುತ್ ಬಿಲ್ ಪ್ರಯೋಜನ ಪಡೆಯುತ್ತಿದ್ದಾರೆ.

    ರಾಜ್ಯದ ಒಟ್ಟು ಸಾಲ  85,000 ಕೋಟಿ ರೂ. ದಾಟಿದ್ದು ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಹಿಮಾಚಲ ಪ್ರದೇಶದ ರಾಜ್ಯ ವಿದ್ಯುತ್‌ ಮಂಡಳಿ 2023-24 ಹಣಕಾಸು ವರ್ಷದಲ್ಲಿ 1,800 ಕೋಟಿ ರೂ. ನಷ್ಟ ಅನುಭವಿಸಿದೆ.‌ ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!

    ವಿಧಾನಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್‌ ಎಲ್ಲರಿಗೂ 125 ಯೂನಿಟ್‌ ಉಚಿತ ವಿದ್ಯುತ್‌, ಹಳೆಯ ಪಿಂಚಣಿ ವ್ಯವಸ್ಥೆ ಸೇರಿದಂತೆ ಹಲವು ಭರವಸೆಗಳನ್ನು ಪ್ರಕಟಿಸಿತ್ತು.

  • ‘ಲೋಕ’ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದ್ಯುತ್‌, ಆರೋಗ್ಯ ಸೇವೆ ಉಚಿತ – 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್‌

    ‘ಲೋಕ’ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದ್ಯುತ್‌, ಆರೋಗ್ಯ ಸೇವೆ ಉಚಿತ – 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್‌

    ನವದೆಹಲಿ: 2024 ರ ಲೋಕಸಭಾ (Lok Sabha Elections 2024) ಚುನಾವಣೆಯಲ್ಲಿ ಎಎಪಿ (AAP) ಗೆದ್ದರೆ 10 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಭರವಸೆ ನೀಡಿದ್ದಾರೆ.

    ಉಚಿತ ವಿದ್ಯುತ್‌ (Free Electricity), ಉಚಿತ ಆರೋಗ್ಯ ಸೇವೆ ಸೇರಿದಂತೆ 10 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಬಿಜೆಪಿ ಯಾವಾಗಲೂ ತನ್ನ ಭರವಸೆಗಳಲ್ಲಿ ವಿಫಲವಾಗಿದೆ. ನನ್ನ ಭರವಸೆಗಳು ದಾಖಲೆಯನ್ನು ಸಾಬೀತುಪಡಿಸಿವೆ. ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಅಥವಾ ‘ಮೋದಿ ಗ್ಯಾರಂಟಿ’ ಯಾವುದು ಬೇಕು ಎಂದು ಜನತೆಗೆ ಕೇಜ್ರಿವಾಲ್‌ ಕೇಳಿದ್ದಾರೆ. ಇದನ್ನೂ ಓದಿ: ಮೋದಿಗೆ 75 ವರ್ಷವಾದ್ರೂ ಪ್ರಧಾನಿ ಆಗಿಯೇ ಆಗ್ತಾರೆ- ಕೇಜ್ರಿವಾಲ್‌ಗೆ ಅಮಿತ್ ಶಾ ಟಕ್ಕರ್

    ಉಚಿತ ವಿದ್ಯುತ್‌ ನೀಡುವುದು ಕೇಜ್ರಿವಾಲ್‌ ಅವರ ಚುನಾವಣೆಯ ಪ್ರಮುಖ ಭರವಸೆಯಾಗಿದೆ. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಗಳಿಗೆ ಈ ಸೌಲಭ್ಯ ಒದಗಿಸಲಾಗುವುದು. ದೆಹಲಿಯ ನಿರಂತರ ವಿದ್ಯುತ್ ಪೂರೈಕೆಯ ಮಾದರಿಯನ್ನು ರಾಷ್ಟ್ರವ್ಯಾಪಿ ಪುನರಾವರ್ತಿಸಬೇಕಿದೆ ಎಂದು ತಿಳಿಸಿದ್ದಾರೆ.

    10 ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ, ನಾವು ದೇಶದಲ್ಲಿ 24 ಗಂಟೆಗಳ ವಿದ್ಯುತ್ ಅನ್ನು ಒದಗಿಸುತ್ತೇವೆ. ದೇಶದಲ್ಲಿ 3 ಲಕ್ಷ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದ್ದರೂ ಬಳಕೆ 2 ಲಕ್ಷ ಮೆಗಾವ್ಯಾಟ್ ಮಾತ್ರ. ನಮ್ಮ ದೇಶವು ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದಿಸಬಲ್ಲದು. ನಾವು ಅದನ್ನು ದೆಹಲಿ ಮತ್ತು ಪಂಜಾಬ್‌ನಲ್ಲಿ ಮಾಡಿದ್ದೇವೆ. ನಾವು ಅದನ್ನು ದೇಶದಲ್ಲೂ ಮಾಡುತ್ತೇವೆ. ಎಲ್ಲಾ ಬಡವರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ. ಇದಕ್ಕೆ 1.25 ಲಕ್ಷ ಕೋಟಿ ವೆಚ್ಚವಾಗಲಿದೆ. ನಾವು ಅದನ್ನು ವ್ಯವಸ್ಥೆಗೊಳಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೂ ಮೋದಿ ಪ್ರಧಾನಿಯಾಗಲ್ಲ: ಅರವಿಂದ್ ಕೇಜ್ರಿವಾಲ್ ಭವಿಷ್ಯ

    ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಬೇಕು. ಇದಕ್ಕಾಗಿ 5 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಒಟ್ಟು ವೆಚ್ಚವನ್ನು ಸರಿದೂಗಿಸಲು ರಾಜ್ಯ ಸರ್ಕಾರಗಳು ಮತ್ತು ಕೇಂದ್ರವು ತಲಾ 2.5 ಲಕ್ಷ ಕೋಟಿ ರೂ. ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ.

    ಇಂದು ನಮ್ಮ ಸರ್ಕಾರಿ ಶಾಲೆಗಳ ಸ್ಥಿತಿ ಚೆನ್ನಾಗಿಲ್ಲ. ಎಲ್ಲರಿಗೂ ಒಳ್ಳೆಯ ಮತ್ತು ಅತ್ಯುತ್ತಮವಾದ ಉಚಿತ ಶಿಕ್ಷಣದ ವ್ಯವಸ್ಥೆ ಮಾಡುತ್ತೇವೆ. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುವಂತೆ ದೆಹಲಿ ಮತ್ತು ಪಂಜಾಬ್‌ನಲ್ಲಿ ನಾವು ಮಾಡಿದ್ದೇವೆ. ಇದಕ್ಕಾಗಿ ರಾಜ್ಯ ಸರ್ಕಾರ 2.5 ಲಕ್ಷ ಕೋಟಿ ಹಾಗೂ ಕೇಂದ್ರ ಸರ್ಕಾರ 2.5 ಕೋಟಿ ರೂ. ನೀಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

  • ಸಾಲದ ಸುಳಿಗೆ ಸಿಲುಕಲಿವೆ – ಉಚಿತ ವಿದ್ಯುತ್‌ ನೀಡುವ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

    ಸಾಲದ ಸುಳಿಗೆ ಸಿಲುಕಲಿವೆ – ಉಚಿತ ವಿದ್ಯುತ್‌ ನೀಡುವ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

    ನವದೆಹಲಿ: ಸಾಲ ಮಾಡಿ ಜನರಿಗೆ ಉಚಿತ ವಿದ್ಯುತ್‌ (Free Electricity) ನೀಡುವ ರಾಜ್ಯಗಳು ಸಾಲದ ಸುಳಿಗೆ ಸಿಲುಕಲಿವೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಕೇಂದ್ರ ಇಂಧನ ಸಚಿವ ಆ‌ರ್.ಕೆ. ಸಿಂಗ್ (RK Singh), ಪಂಜಾಬ್‌ನಂತಹ ರಾಜ್ಯಗಳು ಸಾಲದ ಹಣದಲ್ಲಿ ವಿದ್ಯುತ್ ಖರೀದಿಸಿ ಜನರಿಗೆ ಉಚಿತವಾಗಿ ನೀಡುತ್ತಿವೆ. ರಾಜ್ಯ ಸರ್ಕಾರದ ಬಳಿಯೇ ಸಾಕಷ್ಟು ಹಣವಿದ್ದರೆ ಇಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವುದು ಸರಿ. ಆದರೆ, ಸಾಲ ಮಾಡಿ ವಿದ್ಯುತ್ ನೀಡಿದರೆ ಅದಕ್ಕೆ ಸರ್ಕಾರಗಳು ಬೆಲೆ ತೆರಬೇಕಾಗುತ್ತದೆ. ಏಕೆಂದರೆ ವಿದ್ಯುತ್ ತಯಾರಿಸಲು ಖರ್ಚು ತಗಲುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಆಸ್ಪತ್ರೆಗೆ ದಾಖಲು

    ಬೇರೆಲ್ಲಾ ಉತ್ಪನ್ನಗಳಂತೆ ವಿದ್ಯುತ್ ತಯಾರಿಸಲು ಕೂಡ ಹಣ ಬೇಕು. 2022 ರಲ್ಲಿ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (AAP) ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಸೇರಿದಂತೆ ಹಲವಾರು ಜನಪರ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಪಂಜಾಬ್‌ನ ಎಎಪಿ ಸರ್ಕಾರದ (Punjab Government) ಈಗಾಗಲೇ 2 ವರ್ಷಗಳಲ್ಲಿ 47,000 ಕೋಟಿ ರೂಪಾಯಿಗಳಷ್ಟು ಸಾಲ ಪಡೆದುಕೊಂಡಿದೆ. ಜನರಿಗೆ ಯಾವುದೇ ರಾಜ್ಯ ಸರ್ಕಾರ ವಿದ್ಯುತ್ತನ್ನು ಉಚಿತವಾಗಿ ನೀಡುತ್ತದೆಯಾದರೆ ಅಷ್ಟು ಹಣ ರಾಜ್ಯ ಸರ್ಕಾರದ ಬಳಿಯೇ ಇರಬೇಕು. ಸಾಲ ಮಾಡಿ ಹಣ ತಂದು ಜನರಿಗೆ ಉಚಿತ ವಿದ್ಯುತ್‌ ನೀಡಿದರೆ ಖಂಡಿತ ಸಾಲದ ಸುಳಿಯಲ್ಲಿ ಸಿಲುಕಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ಕರ್ನಾಟಕ ರಾಜ್ಯ ಸರ್ಕಾರಕ್ಕೂ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

    ವಿದ್ಯುತ್ ಉಚಿತವಾಗಿ ಸಿಗೋದಿಲ್ಲ ಎಂದು ನಾನು ರಾಜ್ಯಗಳಿಗೆ ಹೇಳುತ್ತಲೇ ಬಂದಿದ್ದೇನೆ. ಆದರೂ ಅವು ವಿದ್ಯುತ್ತನ್ನು ಉಚಿತವಾಗಿ ನೀಡುತ್ತವೆಯಾದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ. ಈಗಾಗಲೇ ಸಾಲದಲ್ಲಿರುವ ರಾಜ್ಯಗಳು ಉಚಿತ ವಿದ್ಯುತ್‌ನಂತಹ ಜನಪ್ರಿಯ ಯೋಜನೆಗಳಿಗಾಗಿ ಇನ್ನಷ್ಟು ಸಾಲ ಮಾಡುತ್ತಿವೆ. ಹೀಗೆ ಸಾಲದ ಸುಳಿಗೆ ರಾಜ್ಯವನ್ನು ಸಿಲುಕಿಸಬಾರದು. ಉಚಿತಗಳಿಂದಾಗಿಯೇ ಅನೇಕ ರಾಜ್ಯ ಸರ್ಕಾರಗಳು ಸಾಲದ ಸುಳಿಯಲ್ಲಿ ಸಿಲುಕುತ್ತಿವೆ ಎಂದೂ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಸುಲಭವಾಗಿ ಮಾಡಿ ಮಾವಿನಕಾಯಿ ಚಿತ್ರಾನ್ನ

  • ರಾಜ್ಯದಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ – ಗ್ರಾಮೀಣ, ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

    ರಾಜ್ಯದಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ – ಗ್ರಾಮೀಣ, ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

    ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಅಭಾವ (Power Shortage) ತೀವ್ರಗೊಂಡಿದ್ದು, ರಾಜ್ಯ ಸರ್ಕಾರ ಸದ್ದಿಲ್ಲದೇ ಅನಧಿಕೃತ ಲೋಡ್‌ಶೆಡ್ಡಿಂಗ್ (Load Shedding) ಜಾರಿ ಮಾಡಿದೆ. ವಿದ್ಯುತ್ ಅಭಾವದ ನಡುವೆಯೂ ಎಲ್ಲಾ ಎಸ್ಕಾಂಗಳು ಕೈಗಾರಿಕಾ ವಲಯಕ್ಕೆ ಆದ್ಯತೆ ನೀಡಿದ್ದು ಕೃಷಿಕರನ್ನು ಸಂಪೂರ್ಣ ಕಡೆಗಣಿಸಿದೆ. ಗ್ರಾಮೀಣ ಭಾಗ ಮಾತ್ರವಲ್ಲದೇ ನಗರ ಪ್ರದೇಶಗಳಲ್ಲಿಯೂ ಲೋಡ್‌ಶೆಡ್ಡಿಂಗ್ ಆರಂಭವಾಗಿದೆ.

    ಲೋಡ್‌ಶೆಡ್ಡಿಂಗ್ ವಿರುದ್ಧ ರಾಜ್ಯದ ರೈತರು (Farmers) ಸಿಡಿಯುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾಸನ, ಚಾಮರಾಜನಗರ, ಬೆಳಗಾವಿಯ ಚಿಕ್ಕೋಡಿ ಸೇರಿ ಹಲವೆಡೆ ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

    ನಮಗೆ ಉಚಿತ ವಿದ್ಯುತ್‌ (Free Electricity) ಬೇಡ. ಬೆಳೆ ಉಳಿಸಿಕೊಳ್ಳಲು ವಿದ್ಯುತ್‌ ನೀಡಿ ಎಂದು ಆಗ್ರಹಿಸಿದ್ದಾರೆ. ಇದಕ್ಕೆ ವಿಪಕ್ಷ ಬಿಜೆಪಿಯೂ (BJP) ಸಾಥ್ ನೀಡಿದೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಬಿಜೆಪಿ ನಾಯಕರು ಎತ್ತಿನಗಾಡಿಯಲ್ಲಿ ಸಂಚರಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಲೀಡ್‌ ಕೊಟ್ಟ ಕ್ಷೇತ್ರದಲ್ಲಿ ಮಾತ್ರ ಕೆಲಸ : ಮಾಗಡಿ ಶಾಸಕ ಬಾಲಕೃಷ್ಣ

    ತೀವ್ರ ವಿದ್ಯುತ್ ಸಮಸ್ಯೆ ಇರುವುದನ್ನು ಇಂಧನ ಇಲಾಖೆ (Energy Department) ಒಪ್ಪಿಕೊಂಡಿದ್ದು, ವಿಪಕ್ಷಗಳ ಟೀಕೆ ಬೆನ್ನಲ್ಲೇ ಅಂಕಿ ಅಂಶ ಬಹಿರಂಗಮಾಡಿದೆ.

     

    ಇಂಧನ ಇಲಾಖೆ ಹೇಳಿದ್ದೇನು?
    ಮುಂಗಾರು ಕೊರತೆಯಿಂದ ತೀವ್ರ ವಿದ್ಯುತ್ ಸಮಸ್ಯೆಯಾಗಿದ್ದು ಪವನ ವಿದ್ಯುತ್, ಸೋಲಾರ್, ಜಲ ವಿದ್ಯುತ್, ಉಷ್ಣಸ್ಥಾವರಗಳಲ್ಲಿ ಉತ್ಪಾದನೆ ಕುಂಠಿತವಾಗಿದೆ. ಪ್ರಸ್ತುತ ನಿತ್ಯ 15 ಸಾವಿರ ಮೆಗಾವ್ಯಾಟ್ ವಿದ್ಯುತ್‌ಗೆ ಬೇಡಿಕೆ ಇದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 9,032 ಮೆಗಾವ್ಯಾಟ್‌ಗೆ ಬೇಡಿಕೆ ಇತ್ತು.

    ರಾಜ್ಯದಲ್ಲಿ ನಿತ್ಯ 10 ಸಾವಿರ ಮೆಗಾವ್ಯಾಟ್ ಉತ್ಪಾದನೆಯಾಗುತ್ತಿದ್ದು ಕೇಂದ್ರ ಮತ್ತು ಹೊರ ರಾಜ್ಯಗಳಿಂದ 3 ಸಾವಿರ ಮೆಗಾವ್ಯಾಟ್ ಪೂರೈಕೆ ಆಗುತ್ತಿದೆ. ನಿತ್ಯ 2 ಸಾವಿರ ಮೆಗಾವ್ಯಾಟ್‌ನಷ್ಟು ವಿದ್ಯುತ್ ಕೊರತೆಯಿದೆ. ಅಲ್ಪಾವದಿಯ ಟೆಂಡರ್ ಮೂಲಕ ವಿದ್ಯುತ್ ಖರೀದಿಗೆ ಪ್ರಯತ್ನ ನಡೆಯುತ್ತಿದ್ದು, ಪ್ರತಿ ಜಿಲ್ಲೆಗೂ ನೋಡಲ್ ಅಧಿಕಾರಿ ಮೂಲಕ ವಿದ್ಯುತ್ ಹಂಚಿಕೆಗೆ ಚಿಂತನೆ ನಡೆದಿದೆ.

    ವಿದ್ಯುತ್ ಬಳಕೆ ಅಂಕಿ ಅಂಶ
    * ಒಟ್ಟು ಗೃಹ ಬಳಕೆದಾರರ ಸಂಖ್ಯೆ – 2 ಕೋಟಿ
    * ಉಚಿತ ವಿದ್ಯುತ್ ಫಲಾನುಭವಿಗಳು – 1.50 ಕೋಟಿ
    * ಕೃಷಿ ಪಂಪ್‌ಸೆಟ್ ಸಂಖ್ಯೆ – 32 ಲಕ್ಷ
    * ಬೃಹತ್ ಕೈಗಾರಿಕೆಗಳ ಸಂಖ್ಯೆ – 15,147
    * ಸಣ್ಣ ಕೈಗಾರಿಕೆಗಳ ಸಂಖ್ಯೆ – 5.35 ಲಕ್ಷ
    * 1.50 ಲಕ್ಷ ಹೊಸ ಪಂಪ್‌ಸೆಟ್‌ಗೆ ಸಂಪರ್ಕ ಸಿಕ್ಕಿಲ್ಲ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈ ಬಾರಿಯೂ ದುಬಾರಿ ವಿದ್ಯುತ್‌ ಬಿಲ್‌ – ಹೆಸ್ಕಾಂ ಕಳ್ಳಾಟ ಬಿಚ್ಚಿಟ್ಟ ಪಬ್ಲಿಕ್‌ ಟಿವಿ

    ಈ ಬಾರಿಯೂ ದುಬಾರಿ ವಿದ್ಯುತ್‌ ಬಿಲ್‌ – ಹೆಸ್ಕಾಂ ಕಳ್ಳಾಟ ಬಿಚ್ಚಿಟ್ಟ ಪಬ್ಲಿಕ್‌ ಟಿವಿ

    ಹುಬ್ಬಳ್ಳಿ: ಕಳೆದ ತಿಂಗಳಿನಂತೆ ಈ ಬಾರಿಯೂ ದುಬಾರಿ ವಿದ್ಯುತ್‌ ಬಿಲ್‌ (Electricity Bill) ಬಂದಿದ್ದು ಗ್ರಾಹಕರಿಂದ ಹಗಲು ದರೋಡೆಗೆ ಹೆಸ್ಕಾಂ (HESCOM) ಇಳಿದಿದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.

    ಹೌದು. ರಾಜ್ಯಾದ್ಯಂತ ಕಳೆದ ತಿಂಗಳು ಎಲ್ಲಾ ಮನೆಗಳಿಗೆ ದುಬಾರಿ ವಿದ್ಯುತ್‌ ಬಿಲ್‌ ಬಂದಿತ್ತು. ದುಬಾರಿ ಬಿಲ್‌ ಬಂದಿದ್ದು ಯಾಕೆ ಎಂದು ಪ್ರಶ್ನಿಸಿದ್ದರೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ವಿದ್ಯುತ್‌ ದರ ಏರಿಸಿದ್ದರಿಂದ ಜೂನ್‌ ತಿಂಗಳಿನಲ್ಲಿ ದುಬಾರಿ ಬಿಲ್‌ ಬಂದಿದೆ. ಮುಂದಿನ ತಿಂಗಳಿನಿಂದ ದುಬಾರಿ ವಿದ್ಯುತ್‌ ಬಿಲ್‌ ಬರುವುದಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿತ್ತು. ಆದರೆ ಈ ಬಾರಿಯೂ ಗ್ರಾಹಕರಿಗೆ ದುಬಾರಿ ಬಿಲ್‌ ಬಂದಿದ್ದು, ದುಬಾರಿ ಬಿಲ್‌ ಯಾಕೆ ಬಂದಿದೆ ಎಂದು ಕೇಳಿದ್ದಕ್ಕೆ ಹೆಸ್ಕಾಂ ಅಧಿಕಾರಿಗಳು ನೀಡುತ್ತಿರುವ ಉತ್ತರದಿಂದ ಹಗಲು ದರೋಡೆ ನಡೆಯುತ್ತಿದ್ಯಾ ಎಂಬ ಪ್ರಶ್ನೆ ಈಗ ಎದ್ದಿದೆ.

     

    ಅಧಿಕಾರಿಗಳು ಹೇಳಿದ್ದು ಏನು?
    ದುಬಾರಿ ವಿದ್ಯುತ್‌ ಬಿಲ್‌ ಯಾಕೆ ಬಂದಿದೆ ಎಂದು ಹಲವು ಗ್ರಾಹಕರು ಹೆಸ್ಕಾಂ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸಾಫ್ಟ್‌ವೇರ್ ಸಮಸ್ಯೆ (Software Problem), ಫಿಕ್ಸೆಡ್‌ ಚಾರ್ಜ್‌ ಪ್ರತಿ ತಿಂಗಳು ಬದಲಾವಣೆ ಆಗುತ್ತದೆ, ಕೆಇಆರ್‌ಸಿ ಪ್ರತಿ ತಿಂಗಳು ದರ ಬದಲಾವಣೆ ಮಾಡುತ್ತದೆ ಎಂಬ ಉತ್ತರಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಕೇಂದ್ರ ಕೊಡುವ ಅಕ್ಕಿಯಲ್ಲೂ ಕಡಿತ; ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ – ಬೊಮ್ಮಾಯಿ

    ಅಧಿಕಾರಿಗಳು ನಿಜವಾಗಿಯೂ ಗ್ರಾಹಕರಿಗೆ ಈ ರೀತಿ ಉತ್ತರ ನೀಡುತ್ತಿದ್ದಾರಾ ಎಂಬುದರ ರಿಯಾಟಲಿಟಿ ಚೆಕ್‌ ಮಾಡಲು ಪಬ್ಲಿಕ್‌ ಟಿವಿ ತಂಡ ಗ್ರಾಹಕರ ಸೋಗಿನಲ್ಲಿ ವಿದ್ಯುತ್‌ ಬಿಲ್‌ ಪಾವತಿಸಲು ಹೆಸ್ಕಾಂ ಶಿವಗಂಗಾ ನಗರದ ಕಚೇರಿಗೆ ತೆರಳಿತ್ತು.

     

    ರಿಯಾಲಿಟಿ ಚೆಕ್‌ ಹೇಗೆ?
    ಹುಬ್ಬಳ್ಳಿಯ ಕೇಶ್ವಾಪುರದ ಗ್ರಾಹಕರಿಗೆ ಈ ಬಾರಿ 688 ರೂ. ವಿದ್ಯುತ್ ಬಿಲ್ ಬಂದಿತ್ತು. ಗ್ರಾಹಕರು ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವಿದ್ಯುತ್ ಬಿಲ್ ಪಾವತಿಸುತ್ತಿದ್ದರೂ ಈ ತಿಂಗಳ ಬಿಲ್ ನಲ್ಲಿ 25 ರೂ. ಹಿಂಬಾಕಿ ಅಂತ ಬಂದಿತ್ತು. ಈ ಬಿಲ್‌ ಹಿಡಿದು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಪರಿಶೀಲಿಸುವುದಾಗಿ ತಿಳಿಸಿದರು. ಸ್ವಲ್ಪ ಹೊತ್ತಿನ ಬಳಿಕ ಸಾಫ್ಟ್‌ವೇರ್ ಸಮಸ್ಯೆಯಿಂದ 25 ರೂ.‌ ಹೆಚ್ಚುವರಿ ಬಂದಿದೆ ಎಂದು ಹೇಳಿ 25 ರೂ. ಕಳೆದು 664 ರೂ. ನೀಡಿದ್ದಾರೆ.

     

    ಪ್ರಶ್ನೆ ಮಾಡಿದ ಪರಿಣಾಮ ಒಬ್ಬ ಗ್ರಾಹಕರ ಬಿಲ್‌ ಮೊತ್ತ ಕಡಿಮೆಯಾಗಿದೆ. ಕೆಲ ಗ್ರಾಹಕರು ಬಿಲ್‌ ಸರಿಯಾದ ಸಮಯಕ್ಕೆ ಪಾವತಿ ಮಾಡುತ್ತಿದ್ದರೂ 300 ರಿಂದ 500 ರೂ. ಹಿಂಬಾಕಿ ಬಂದಿದೆ. ಬಹುತೇಕ ಗ್ರಾಹಕರು ಎಲ್ಲಿ ವಿದ್ಯುತ್‌ ಸಂಪರ್ಕ ಕಡಿತ ಮಾಡಬಹುದು ಎಂಬ ಭಯಕ್ಕೆ ಬಿದ್ದು ಈಗಾಗಲೇ ಬಿಲ್‌ ಕಟ್ಟಿದ್ದಾರೆ. ಇದು ಸಾಫ್ಟ್‌ವೇರ್‌ ದೋಷದಿಂದ ಬಂದಿರುವ ದುಬಾರಿ ಮೊತ್ತವೇ ಅಥವಾ ಹೆಸ್ಕಾಂ ಸಿಬ್ಬಂದಿ ಮಾಡುತ್ತಿರುವ ಹಗಲು ದರೋಡೆಯೇ ಎಂಬುದರ ಅನುಮಾನ ಎದ್ದಿದ್ದು ಸರ್ಕಾರ ಕೂಡಲೇ ಈ ಸಮಸ್ಯೆಯನ್ನು ಪರಿಹಾರ ಮಾಡಿಕೊಡಬೇಕಿದೆ.