Tag: Free Ration

  • ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ, ದಯೆ ರೂಪದಲ್ಲಿ ಬಿಂಬಿಸುವ ಅಗತ್ಯವಿಲ್ಲ: ಮಾಯಾವತಿ ಟೀಕೆ

    ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ, ದಯೆ ರೂಪದಲ್ಲಿ ಬಿಂಬಿಸುವ ಅಗತ್ಯವಿಲ್ಲ: ಮಾಯಾವತಿ ಟೀಕೆ

    -ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾಯಾವತಿ ಕಿಡಿ

    ಲಕ್ನೋ: ಏರುತ್ತಿರುವ ಹಣದುಬ್ಬರ, ಬಡತನ, ನಿರುದ್ಯೋಗ ಮತ್ತು ಹಿಂದುಳಿದಿರುವಿಕೆಯಿಂದ ದೇಶದ ಜನರನ್ನು ಮುಕ್ತಗೊಳಿಸುವ ಬದಲು, ಬಿಜೆಪಿ (BJP) ಮತ್ತು ಅದರ ಕಂಪನಿಯ ಜನರು ಬಡವರಿಗೆ ಸ್ವಲ್ಪ ಪಡಿತರವನ್ನು ನೀಡಿ ಚುನಾವಣಾ ಲಾಭವನ್ನು ಪಡೆದುಕೊಳ್ಳಲು ಬಯಸುತ್ತಿದ್ದಾರೆ ಎಂದು ಬಿಎಸ್‌ಪಿ (BSP) ಅಧಿನಾಯಕಿ, ಮಾಜಿ ಸಿಎಂ ಮಾಯಾವತಿ (Mayawati) ಟೀಕಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬಡವರಿಗೆ ಉಚಿತ ಪಡಿತರ ಬಿಜೆಪಿ ಅಥವಾ ಸರ್ಕಾರದಿಂದ ನೀಡುತ್ತಿಲ್ಲ. ಬದಲಿಗೆ ಇದು ಜನರು ಪಾವತಿಸುವ ತೆರಿಗೆ ಹಣದಿಂದ ನೀಡಲಾಗುತ್ತಿದೆ. ಇದನ್ನು ದಯೆ ರೂಪದಲ್ಲಿ ಬಿಂಬಿಸಿ ಬಡವರ ಬಳಿ ಮತ ಕೇಳುವುದು ಗೇಲಿ ಮಾಡಿದಂತೆ ಹಾಗೂ ಅನುಚಿತವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ವಾತಿ ಮಲಿವಾಲ್ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಮೈಕ್‌ ಪಕ್ಕಕ್ಕಿಟ್ಟ ಕೇಜ್ರಿವಾಲ್‌

    ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಬಿಜೆಪಿ ನಾಯಕರು ಪ್ರತಿ ಚುನಾವಣಾ ರ‍್ಯಾಲಿಯಲ್ಲಿ ಸರ್ಕಾರದ ಉಚಿತ ಪಡಿತರ ಯೋಜನೆಯ ಬಗ್ಗೆ ಹೇಳುತ್ತಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದ ನಂತರ 2029 ರವರೆಗೂ ಯೋಜನೆಯನ್ನು ಮುಂದುವರೆಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ ಎಂದರು. ಇದನ್ನೂ ಓದಿ: ಸ್ಟೆಪ್‌ಲ್ಯಾಡರ್ ಎಡವಟ್ಟು- ವಿಮಾನದಿಂದ ಇಳಿಯಲು ಯತ್ನಿಸಿ ಕೆಳಗೆ ಬಿದ್ದ ಸಿಬ್ಬಂದಿ ವೀಡಿಯೋ ವೈರಲ್‌

    ಇತ್ತ ಬಡವರ ಆಹಾರ ಭದ್ರತೆಗಾಗಿ ಕಾನೂನು ತಂದಿದ್ದು ನಾವು ಎಂದು ಕಾಂಗ್ರೆಸ್ (Congress) ಹೇಳಿಕೊಂಡಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಧಿಕಾರಕ್ಕೆ ಬಂದ ನಂತರ ಪಡಿತರ ಗುಣಮಟ್ಟವನ್ನು ಸುಧಾರಿಸುವುದಲ್ಲದೆ ಅದರ ಪ್ರಮಾಣವನ್ನು ದ್ವಿಗುಣಗೊಳಿಸುತ್ತೇವೆ ಎಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಪಡಿತರ ರಾಜಕೀಯವನ್ನು ಮಾಯಾವತಿ ಟೀಕಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಪ್ರಧಾನಿ ಮಾಡಲು ಮೋದಿ ಮತ ಕೇಳುತ್ತಿದ್ದಾರೆ: ಕೇಜ್ರಿವಾಲ್

  • ಉಚಿತ ಊಟ ನೀಡಲು ಮುಂದಾದ ಯೋಗಿ ಸರ್ಕಾರ

    ಉಚಿತ ಊಟ ನೀಡಲು ಮುಂದಾದ ಯೋಗಿ ಸರ್ಕಾರ

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ನಂತರ, ಉಚಿತ ಊಟ ನೀಡಲು ಸರ್ಕಾರ ಸಿದ್ಧತೆ ಮಾಡಲಾಗುತ್ತಿದೆ.

    ಯೋಗಿ ಆದಿತ್ಯನಾಥ್ ಮೊದಲ ಸಂಪುಟ ಸಭೆಯಲ್ಲಿ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ್ದರು. ಇದೀಗ ಬಡವರು ಮತ್ತು ವಂಚಿತರಿಗೆ ಉಚಿತ ಅಥವಾ ಹೆಚ್ಚಿನ ಸಬ್ಸಿಡಿಯೊಂದಿಗೆ ಊಟ ನೀಡುವ ಸಲುವಾಗಿ ರಾಜ್ಯಾದ್ಯಂತ ಸಮುದಾಯ ಅಡುಗೆಮನೆಗಳನ್ನು ಸ್ಥಾಪಿಸುವ ಯೋಜನೆ ಹೋದಿದ್ದಾರೆ.

    ಉತ್ತರ ಪ್ರದೇಶ ಸರ್ಕಾರ 2020ರಿಂದ ಪ್ರತಿ ತಿಂಗಳು 15 ಕೋಟಿ ಫಲಾನುಭವಿಗಳಿಗೆ ಉಚಿತ ಪಡಿತರವನ್ನು ವಿತರಿಸುತ್ತಿದೆ. ಈ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ 1 ಕೆಜಿ ಸಂಪೂರ್ಣ ಚನಾ, 1 ಲೀಟರ್ ಅಡಿಗೆ ಎಣ್ಣೆ, 1 ಕೆಜಿ ಉಪ್ಪು ಜೊತೆಗೆ 5 ಕೆಜಿ ಗೋಧಿ ಮತ್ತು ಅಕ್ಕಿಯನ್ನು ಒಳಗೊಂಡ ಪ್ಯಾಕ್ ನೀಡಲಾಗುತ್ತಿದೆ.

    ಉಚಿತ ಊಟ: ಅಧಿಕೃತ ಮೂಲಗಳ ಪ್ರಕಾರ, ಯೋಗಿ ಸರ್ಕಾರವು ಬಡವರಿಗೆ ಉಚಿತವಾಗಿ ಅಥವಾ ಅತ್ಯಲ್ಪ ಬೆಲೆಯಲ್ಲಿ ಬೇಯಿಸಿದ ಪೌಷ್ಟಿಕಾಂಶದ ಆಹಾರವನ್ನು ಒದಗಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಅಡುಗೆ ಮನೆಗಳನ್ನು ಸ್ಥಾಪಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಈ ವಾರದಲ್ಲೇ ಸಂಬಂಧಿಸಿದ ಎಲ್ಲಾ ಇಲಾಖೆಗಳನ್ನು ಒಳಗೊಂಡ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಯೋಜನೆ ಪ್ರಾರಂಭಿಸುವ ವಿಧಾನಗಳನ್ನು ವಿವರಿಸಲಾಗುವುದು ಮತ್ತು ಸಮುದಾಯ ಅಡುಗೆಮನೆಗಳನ್ನು ನಡೆಸುವಲ್ಲಿ ವಿವಿಧ ಇಲಾಖೆಗಳಿಗೆ ವಿಭಿನ್ನ ಪಾತ್ರಗಳನ್ನು ನೀಡಬಹುದು ಎಂದು ಮೂಲಗಳು ತಿಳಿಸಿವೆ.

  • ಯುವಕರಿಗೆ ಉದ್ಯೋಗ, ಬಡವರಿಗೆ 1 ಕೆಜಿ ಉಚಿತ ತುಪ್ಪ: ಅಖಿಲೇಶ್ ಯಾದವ್ ಭರವಸೆ

    ಯುವಕರಿಗೆ ಉದ್ಯೋಗ, ಬಡವರಿಗೆ 1 ಕೆಜಿ ಉಚಿತ ತುಪ್ಪ: ಅಖಿಲೇಶ್ ಯಾದವ್ ಭರವಸೆ

    ಲಕ್ನೋ: ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಬಡವರಿಗೆ ಒಂದು ಕಿಲೋ ‘ತುಪ್ಪ’ ಜೊತೆಗೆ ಐದು ವರ್ಷಗಳ ಕಾಲ ಉಚಿತ ಪಡಿತರವನ್ನು ನೀಡುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭರವಸೆ ನೀಡಿದ್ದಾರೆ.

    ಪಡಿತರ ಪಡೆಯುತ್ತಿರುವ ಬಡವರು ಚುನಾವಣೆಯವರೆಗೂ ಮಾತ್ರ ಅದನ್ನು ಪಡೆಯುತ್ತಾರೆ. ಚುನಾವಣೆಯ ನಂತರ ಪಡಿತರ ಲಭ್ಯವಾಗುವುದಿಲ್ಲ. ಮೊದಲು ನವೆಂಬರ್‌ವರೆಗೂ ಪಡಿತರ ನೀಡಬೇಕಾಗಿತ್ತು. ಆದರೆ ಯುಪಿ ಚುನಾವಣೆ ಘೋಷಣೆಯಾದ ಬಳಿಕ ಅದನ್ನು ಮಾರ್ಚ್‍ವರೆಗೆ ನೀಡಲು ಬಿಜೆಪಿ ತಿಳಿಸಿದೆ.

    ರಾಯ್ ಬರೇಲಿಯಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್ ಅವರು, ಮಾರ್ಚ್‍ನಲ್ಲಿ ಚುನಾವಣೆ ಮುಗಿಯುತ್ತದೆ ಎಂದು ತಿಳಿದಿರುವ ಕಾರಣ ದೆಹಲಿಯ ಬಜೆಟ್‍ನಲ್ಲಿ ಪಡಿತರಕ್ಕಾಗಿ ಹಣವನ್ನು ಮೀಸಲಿಟ್ಟಿಲ್ಲ ಎಂದಿದ್ದಾರೆ.  ಇದನ್ನೂ ಓದಿ: ಈಶಾನ್ಯ ಭಾರತದವರ ಜೀವನ ಶೈಲಿಯ ಮೇಲೆ ಬಿಜೆಪಿ ಹಸ್ತಕ್ಷೇಪ: ಪ್ರಿಯಾಂಕಾ ಗಾಂಧಿ

    ಈ ಹಿಂದೆ ಸಮಾಜವಾದಿ ಪಕ್ಷ ಬಡವರಿಗೆ ಪಡಿತರ ನೀಡುತ್ತಿತ್ತು. ಎಸ್‍ಪಿ ಸರ್ಕಾರ ಇರುವವರೆಗೂ ನಮ್ಮ ಬಡವರಿಗೆ ಪಡಿತರ ನೀಡುತ್ತೇವೆ. ಅದರೊಂದಿಗೆ ಸಾಸಿವೆ, ಎಣ್ಣೆ ಜೊತೆಗೆ ವರ್ಷದಲ್ಲಿ ಎರಡು ಸಿಲಿಂಡರ್ ಕೊಡುತ್ತೇವೆ. ನಮ್ಮ ಬಡವರ ಆರೋಗ್ಯ ಸುಧಾರಿಸಲು ಒಂದು ಕಿಲೋಗ್ರಾಂ ತುಪ್ಪವನ್ನು ಸಹ ನೀಡಲಾಗುವುದು ಎಂದು ತಿಳಿಸಿದ್ದಾರೆ.

    ಬಿಜೆಪಿ ಸರ್ಕಾರ ವಿತರಿಸುತ್ತಿರುವ ಪಡಿತರ ಗುಣಮಟ್ಟ ಕಳಪೆಯಾಗಿದೆ. ಉಪ್ಪಿನಲ್ಲಿ ಗಾಜಿನ ಕಣಗಳು ಪತ್ತೆಯಾಗಿರುವ ಬಗ್ಗೆಯೂ ವರದಿಯಾಗಿದೆ. ಅಲ್ಲದೇ ಗುಜರಾತ್‍ನಿಂದ ಉಪ್ಪು ಬರುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ 11 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ ಮತ್ತು ಎಸ್‍ಪಿ ಸರ್ಕಾರವು ಆ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಯುವಕರಿಗೆ ಉದ್ಯೋಗಗಳನ್ನು ಒದಗಿಸುತ್ತದೆ ಎಂದಿದ್ದಾರೆ.  ಇದನ್ನೂ ಓದಿ: ಹಿಂದೂಗಳು ಹಣೆಗೆ ಕುಂಕುಮ ಇಡುತ್ತಾರೆ, ನಾವು ಅದನ್ನು ಪ್ರಶ್ನೆ ಮಾಡುತ್ತೇವಾ: ಮುಸ್ಲಿಂ ವಿದ್ಯಾರ್ಥಿಗಳು

    ಬಿಜೆಪಿ ನಾಯಕರು ಮನೆ, ಮನೆಗೆ ತೆರಳಿ ಮತ ಕೇಳುತ್ತಿದ್ದರು ಮತ್ತು ಬಿಜೆಪಿ ಹಿರಿಯ ನಾಯಕರು ಕರಪತ್ರಗಳನ್ನು ಹಂಚುತ್ತಿದ್ದರು. ಆದರೆ ಈಗ ಆ ಪ್ರಚಾರವನ್ನು ನಿಲ್ಲಿಸಲಾಗಿದೆ. ಏಕೆಂದರೆ ಅವರು ಕೆಲವು ಹಳ್ಳಿಗಳಿಗೆ ಭೇಟಿ ನೀಡಿದಾಗ ಜನರು ಖಾಲಿ ಗ್ಯಾಸ್ ಸಿಲಿಂಡರ್‌ಗಳನ್ನು ತೋರಿಸಿದ್ದಾರೆ. ಖಾಲಿ ಸಿಲಿಂಡರ್‌ಗಳನ್ನು ತೋರಿಸಿದ ದಿನದಿಂದ ಅವರ ಮನೆ-ಮನೆ ಪ್ರಚಾರ ನಿಂತುಹೋಗಿದೆ.

    ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಬಿಜೆಪಿ ಸರ್ಕಾರದಲ್ಲಿ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. ಈ ಡಬಲ್ ಇಂಜಿನ್ ಸರ್ಕಾರದಲ್ಲಿ ಭ್ರಷ್ಟಾಚಾರವೂ ದುಪ್ಪಟ್ಟಾಗಿದೆ ಎಂದು ಆರೋಪಿಸಿದ್ದಾರೆ.

  • ಡಬಲ್ ಇಂಜಿನ್ ಸರ್ಕಾರ ಉಚಿತ ಪಡಿತರ, ಲಸಿಕೆಗಳನ್ನು ಒದಗಿಸಿದೆ: ಪುಷ್ಕರ್ ಸಿಂಗ್ ಧಾಮಿ

    ಡಬಲ್ ಇಂಜಿನ್ ಸರ್ಕಾರ ಉಚಿತ ಪಡಿತರ, ಲಸಿಕೆಗಳನ್ನು ಒದಗಿಸಿದೆ: ಪುಷ್ಕರ್ ಸಿಂಗ್ ಧಾಮಿ

    ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆ ಚುನಾವಣೆಯ ಮುಖ್ಯಸ್ಥ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡಬಲ್ ಇಂಜಿನ್ ಸರ್ಕಾರವು ಜನರಿಗೆ ಉಚಿತ ಪಡಿತರ ಮತ್ತು ಲಸಿಕೆಗಳನ್ನು ಒದಗಿಸಿದೆ ಎಂದಿದ್ದಾರೆ

    ಬಾಜ್‍ಪುರ, ಉಧಮ್‍ಪುರ ಸಿಂಗ್ ನಗರದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರವು ಜನರಿಗೆ ಉಚಿತ ರೇಷನ್, ಲಸಿಕೆಗಳನ್ನು ಒದಗಿಸಿದೆ. ನಮ್ಮ ಸರ್ಕಾರವು ಜನರಿಗೆ ವಿವಿಧ ವಲಯಗಳಲ್ಲಿ ಅನೇಕ ಯೋಜನೆಗಳನ್ನು ಪ್ರಾರಂಭಿಸಿದೆ ಮತ್ತು ಜನರಿಗೆ ನೇರ ಪ್ರಯೋಜನಗಳನ್ನು ನೀಡಿದೆ ಎಂದು ಹೇಳಿದ್ದಾರೆ.

    ಈಗಾಗಲೇ ಜನ ಬಿಜೆಪಿಯನ್ನು ಪೂರ್ಣ ಬಹುಮತದಿಂದ ಗೆಲ್ಲಿಸಲು ಮನಸ್ಸು ಮಾಡಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ಯುವಕರಿಗೆ 50 ಸಾವಿರ ಸರ್ಕಾರಿ ಉದ್ಯೋಗ, ಬಡವರಿಗೆ ಪ್ರತಿ ವರ್ಷ ಮೂರು ಎಲ್‍ಪಿಜಿ ಸಿಲಿಂಡರ್‍ಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ಗುಡ್ಡಗಾಡು ಪ್ರದೇಶದಲ್ಲಿ ದುಡಿದು ಜೀವನ ನಡೆಸಲು ಸಾಧ್ಯವಾಗದ ಗರ್ಭಿಣಿಯರಿಗೆ 40 ಸಾವಿರ ಹಾಗೂ ಹಿರಿಯ ನಾಗರಿಕರ ಪಿಂಚಣಿಯನ್ನು 3,600ಕ್ಕೆ ಹೆಚ್ಚಿಸಲಾಗುವುದು ಎಂದಿದ್ದಾರೆ.

    ಕೇಂದ್ರ ಮತ್ತು ರಾಜ್ಯಗಳೆರಡೂ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ತಲಾ 6,000 ನೀಡಲು ನಿರ್ಧರಿಸಿದ್ದೇವೆ. ಅದು ಪ್ರತಿಯೊಬ್ಬ ರೈತರ ಬ್ಯಾಂಕ್ ಖಾತೆಗೆ 12,000 ನಿಧಿ ವರ್ಗಾವಣೆಯ ಲಾಭವನ್ನು ವಿಸ್ತರಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿಗೆ ದಶಕದ ಸಂಭ್ರಮ – ಶಾಂತಿಧಾಮಕ್ಕೆ 25 ಲಕ್ಷ ರೂ. ವಿತರಣೆ

    ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುಷ್ಕರ್ ಸಿಂಗ್ ಧಮಿ ಅವರು ಖತಿಮಾದಿಂದ ಸ್ಪರ್ಧಿಸಲಿದ್ದಾರೆ. ಉತ್ತರಾಖಂಡದ 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಪ್ರಸ್ತುತ ಬಿಜೆಪಿ 57 ಶಾಸಕರನ್ನು ಹೊಂದಿದೆ. ಇದನ್ನೂ ಓದಿ: ರಾಜಧಾನಿಗೂ ಕಾಲಿಟ್ಟ ಹಿಜಬ್ ವಿವಾದ – ಹಿಜಬ್ ತೆಗೆಯುವಂತೆ ಮಕ್ಕಳಿಗೆ ಶಿಕ್ಷಕರಿಂದ ಒತ್ತಾಯ


    Pushkar Singh Dhami, Double Engine Government, Free Ration, Vaccine, Uttarakhand