Tag: freedom of speech

  • ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

    ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

    ಚೆನೈ: ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಡಿಎಂಕೆ ನಾಯಕರ ವಿರುದ್ಧ ಮದ್ರಾಸ್ ಹೈಕೋರ್ಟ್ (Madras High Court) ಅಸಮಾಧಾನ ವ್ಯಕ್ತಪಡಿಸಿದೆ. ವಾಕ್ ಸ್ವಾತಂತ್ರ್ಯವು (Freedom Of Speech) ಮೂಲಭೂತ ಹಕ್ಕು ಆದರೆ ಅದು ದ್ವೇಷದ ಭಾಷಣವಾಗಿ ಬದಲಾಗಬಾರದು. ವಿಶೇಷವಾಗಿ ಧರ್ಮದ ವಿಷಯಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣವಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

    ಸನಾತನ ಧರ್ಮದ ವಿರುದ್ಧ ಹೇಳಿಕೆ ಖಂಡಿಸಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎನ್ ಶೇಷಸಾಯಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಬಳಿಕ ಸನಾತನ ಧರ್ಮವೂ ಅಸ್ಪೃಶ್ಯತೆ, ಜಾತೀಯತೆಯನ್ನು ಮಾತ್ರ ಉತ್ತೇಜಿಸುತ್ತದೆ ಎನ್ನುವುದು ತಪ್ಪು. ಸಮಾನ ನಾಗರೀಕರ ದೇಶದಲ್ಲಿ ಅಸ್ಪೃಶ್ಯತೆ ಸಹಿಸಲಾಗುವುದಿಲ್ಲ. ಸಂವಿಧಾನದ 17ನೇ ವಿಧಿ ಮೂಲಕ ಅಸ್ಪೃಶ್ಯತೆಯನ್ನು ತೊಡೆದು ಹಾಕಲಾಗಿದೆ. ಹೀಗಾಗಿ ಇದ್ಯಾವುದು ಪ್ರಸುತ್ತದಲ್ಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ಗೆ ರಿಲೀಫ್ – ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ತಡೆ

    ಇಂತಹ ಭಾಷಣದಿಂದ ಯಾರ ಮನಸ್ಸಿಗೂ ಗಾಯವಾಗದಂತೆ ನೋಡಿಕೊಳ್ಳುವ ಅಗತ್ಯವಿದೆ. ಪ್ರತಿಯೊಂದು ಧರ್ಮವೂ ನಂಬಿಕೆಯ ಮೇಲೆ ಸ್ಥಾಪಿತವಾಗಿದೆ. ಭಾಷಣಗಳಿಂದ ನಂಬಿಕೆಗಳಿಗೆ ಘಾಸಿಯಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಇತ್ತೀಚೆಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದರು. ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿ, ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದಾದ ಬಳಿಕ ದೇಶದೆಲ್ಲೆಡೆ ಈ ಹೇಳಿಕೆಗೆ ಖಂಡನೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ- ತಾತ್ಕಾಲಿಕ ರಿಲೀಫ್ ಕೇಳಿದ್ದ ಅರ್ಜಿ ವಜಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯದ ಮೇಲೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

    ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯದ ಮೇಲೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

    ನವದೆಹಲಿ: ದೇಶದ ಎಲ್ಲಾ ಜನತೆಗೆ ಸರಿಸಮನಾಗಿ ಸಂವಿಧಾನದ 19(1)(ಎ) ಅಡಿ ನೀಡಲಾಗಿರುವ ವಾಕ್ ಸ್ವಾತಂತ್ರ್ಯವನ್ನು(Freedom of speech) ಸಚಿವರು, ಸಂಸದರು, ಶಾಸಕರು ಕೂಡ ಅನುಭವಿಸುತ್ತಾರೆ. ಈ ವಿಚಾರದಲ್ಲಿ ರಾಜಕಾರಣಿಗಳಿಗೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು 4:1ರ ಅನುಪಾತದಲ್ಲಿ ಸುಪ್ರೀಂಕೋರ್ಟ್(Supreme Court) ತೀರ್ಪು ನೀಡಿದೆ.

    2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಸಚಿವರೊಬ್ಬರು ನೀಡುವ ಹೇಳಿಕೆಯನ್ನು ಇಡೀ ಸರ್ಕಾರಕ್ಕೆ ಅನ್ವಯಿಸಲಾಗದು. ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸಿದರೂ ಸಚಿವರು ನೀಡಿದ ಹೇಳಿಕೆಯನ್ನು ಸರ್ಕಾರಕ್ಕೆ ವಿಕೃತವಾಗಿ ಆರೋಪಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

    ನ್ಯಾಯಮೂರ್ತಿಗಳಾದ ಎಸ್‍ಎ ನಜೀರ್, ಬಿಆರ್ ಗವಾಯಿ, ಎಎಸ್ ಬೋಪಣ್ಣ, ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ಅವರಿದ್ದ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಿದೆ. ಈ ಪೈಕಿ ಬಿವಿ ನಾಗರತ್ನ ಅವರು ಭಿನ್ನ ತೀರ್ಪು ನೀಡಿದ್ದಾರೆ.

    ಸಾಮೂಹಿಕ ಅತ್ಯಾಚಾರಕ್ಕೆ ಕುಟುಂಬದ ಬಗ್ಗೆ ಉತ್ತರಪ್ರದೇಶದ ಎಸ್‍ಪಿ ಮುಖಂಡ, ಅಂದು ಸಚಿವರಾಗಿದ್ದ ಅಜಂ ಖಾನ್(Azam Khan) ಇದು ರಾಜಕೀಯ ಷಡ್ಯಂತ್ರ ಅಲ್ಲದೇ ಬೇರೆ ಏನೂ ಇಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದಅರ್ಜಿ ವಿಚಾರಣೆ ನಡೆಸಿದ್ದ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ. ಇದನ್ನೂ ಓದಿ: ಹೊರಗಡೆಯ ಆಹಾರಕ್ಕೆ ನಿರ್ಬಂಧ ಹೇರಬಹುದು, ಥಿಯೇಟರ್‌ಗಳು ಶುದ್ಧವಾದ ಕುಡಿಯುವ ನೀರು ಫ್ರೀ ನೀಡಬೇಕು: ಸುಪ್ರೀಂ

    ನಾಲ್ವರು ನ್ಯಾಯಾಧೀಶರು ಹೇಳಿದ್ದೇನು?
    ಸಂವಿಧಾನದ 19(2)ವಿಧಿಯಲ್ಲಿರದ ನಿರ್ಬಂಧಗಳನ್ನು 19(1)ರ ಮೇಲೆ ವಿಧಿಸುವಂತಿಲ್ಲ. ಸಚಿವರೊಬ್ಬರು ನೀಡುವ ಹೇಳಿಕೆಯನ್ನು ಇಡೀ ಸರ್ಕಾರಕ್ಕೆ ಅನ್ವಯಿಸಲಾಗದು. ಸಚಿವರು ನೀಡಿದ ಹೇಳಿಕೆಯನ್ನು ಸರ್ಕಾರಕ್ಕೆ ಅನ್ವಯಿಸಿ ದೂಷಿಸುವುದು ಸಾಧ್ಯವಿಲ್ಲ. ಜನರ ಹಕ್ಕುಗಳಿಗೆ ವಿರುದ್ಧವಾಗಿ ಸಚಿವರು ಹೇಳಿಕೆ ನೀಡಿದಲ್ಲಿ ಅದು ಸಾಂವಿಧಾನಿಕ ಲೋಪವಾಗದು.

    ಸಾರ್ವಜನಿಕ ಹುದ್ದೆಯಲ್ಲಿರುವವರಿಂದ ಕರ್ತವ್ಯಚ್ಯುತಿ ಉಂಟಾದರೆ ಮಾತ್ರ ಅದು ಸಾಂವಿಧಾನಿಕ ಲೋಪ. ಸಾರ್ವಜನಿಕ ಹುದ್ದೆಯಲ್ಲಿರುವವರು ಅಪರಾಧ ಘಟಿಸುವಿಕೆಗೆ ಕಾರಣರಾದರೆ ಆಗ ಸಾಂವಿಧಾನಿಕ ಲೋಪವಾಗುತ್ತದೆ. ವಾಕ್‍ಸ್ವಾತಂತ್ರ್ಯದ ಹಕ್ಕು,ನಿರ್ಬಂಧಗಳನ್ನು ಸರ್ಕಾರ, ಸರ್ಕಾರದಾಚೆಯ ಶಕ್ತಿಗಳ ವಿರುದ್ಧ ಚಲಾಯಿಸಬಹುದು.

     

    ನ್ಯಾ. ಬಿವಿ ನಾಗರತ್ನ ಹೇಳಿದ್ದೇನು?
    ಸಚಿವರ ಹೇಳಿಕೆಯೂ ಸರ್ಕಾರದ ವಿಚಾರ ಹೊಂದಿದರೆ ಅದು ಸರ್ಕಾರದ ನಿಲುವನ್ನೇ ಪ್ರದರ್ಶಿಸಿದಂತೆ ಆಗುತ್ತದೆ. ಸಚಿವರ ಹೇಳಿಕೆಯ ಸಾಮೂಹಿಕ ಜವಾಬ್ದಾರಿಯನ್ನು ಸರ್ಕಾರದ ಮೇಲೆ ಹೊರಿಸಬಹುದು. ಆದರೆ ವಾಕ್‍ಸ್ವಾತಂತ್ರ್ಯದ ಹಕ್ಕಿನ ಮೇಲೆ ಕೋರ್ಟ್‍ನಿಂದ ಹೆಚ್ಚುವರಿ ನಿರ್ಬಂಧ ಸಾಧ್ಯವಿಲ್ಲ. ಹೆಚ್ಚಿನ ನಿರ್ಬಂಧ ವಿಧಿಸುವ ಸಂಬಂಧ ಕಾನೂನು ರೂಪಿಸುವುದು ಸಂಸತ್‍ನ ಕೆಲಸವಾಗಿದೆ.

    ದ್ವೇಷ ಭಾಷಣಗಳು ಸಮಾಜವನ್ನು ಅಸಮಾನವಾಗಿಸುತ್ತವೆ.ಇದರಿಂದಾಗಿ ಮೂಲಭೂತ ಮೌಲ್ಯಗಳಿಗೆ ದ್ವೇಷ ಭಾಷಣಗಳು ಹೊಡೆತ ನೀಡುತ್ತವೆ. ವಿವಿಧ ಹಿನ್ನೆಲೆಯ ನಾಗರಿಕರ ಮೇಲೆ ಆಕ್ರಮಣ ಮಾಡುತ್ತವೆ. ಪ್ರತಿಯೊಬ್ಬ ವ್ಯಕ್ತಿಯ ಘನತೆ ಎತ್ತಿಹಿಡಿಯುವುದು ಎಲ್ಲರ ಕರ್ತವ್ಯ. ಧರ್ಮ,ಜಾತಿ,ಮಹಿಳೆಯರ ಗೌರವಗಳನ್ನು ದ್ವೇಷ ಭಾಷಣ ಹಾಳು ಮಾಡಬಾರದು.

    Live Tv
    [brid partner=56869869 player=32851 video=960834 autoplay=true]

  • ಮೋದಿ ಸರ್ಕಾರದಲ್ಲಿ ಗೌಪ್ಯತೆ ಉಲ್ಲಂಘಿಸಲು ಸಾಧ್ಯವಿಲ್ಲ – ಡೇಟಾ ಸುರಕ್ಷತೆ ಬಗ್ಗೆ ರಾಜೀವ್ ಸ್ಪಷ್ಟನೆ

    ಮೋದಿ ಸರ್ಕಾರದಲ್ಲಿ ಗೌಪ್ಯತೆ ಉಲ್ಲಂಘಿಸಲು ಸಾಧ್ಯವಿಲ್ಲ – ಡೇಟಾ ಸುರಕ್ಷತೆ ಬಗ್ಗೆ ರಾಜೀವ್ ಸ್ಪಷ್ಟನೆ

    ನವದೆಹಲಿ: ಕೇಂದ್ರ ಸರ್ಕಾರ (Government Of India) ಜಾರಿಗೆ ತರಲು ಮುಂದಾಗಿರುವ ಉದ್ದೇಶಿತ ಡೇಟಾ ಸಂರಕ್ಷಣಾ ಕಾನೂನಿನಲ್ಲಿ ಗೌಪ್ಯತೆ ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಕೇಂದ್ರ ತಂತ್ರಜ್ಞಾನ ಮತ್ತು ಐಟಿ (IT) ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಸ್ಪಷ್ಟಪಡಿಸಿದ್ದಾರೆ.

    ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ-2022ರ ಕರಡನ್ನು (Data Protection Draft) ಬಿಡುಗಡೆಗೊಳಿಸಿರುವ ಕುರಿತಾಗಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರಮೋದಿ (Narendra Modi) ಸರ್ಕಾರದಿಂದ ನಾಗರಿಕರ ಗೌಪ್ಯತೆ ಉಲ್ಲಂಘಿಸಲು ಸಾಧ್ಯವಿಲ್ಲ. ಆದರೆ ರಾಷ್ಟ್ರೀಯ ಭದ್ರತೆ, ಸಾಂಕ್ರಾಮಿಕ ಮತ್ತು ನೈಸರ್ಗಿಕ ವಿಕೋಪಗಳಂತಹ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಸರ್ಕಾರ ವೈಯಕ್ತಿಕ ಡೇಟಾಗಳನ್ನು (Personal Data) ಪರಿಶೀಲಿಸುತ್ತದೆ ಎಂದು ಹೇಳಿರುವುದಾಗಿ ವರದಿಯಾಗಿದೆ. 

    ಸರ್ಕಾರವು ರಾಷ್ಟ್ರೀಯ ಭದ್ರತೆ, ಸಾಂಕ್ರಾಮಿಕ ಹಾಗೂ ನೈಸರ್ಗಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಮಾತ್ರ ವೈಯಕ್ತಿಕ ಡೇಟಾವನ್ನು ಪರಿಶೀಲಿಸುತ್ತದೆ. ಇದು ಅಪರಾಧವಲ್ಲ. ವಾಕ್ ಸ್ವಾತಂತ್ರ‍್ಯವೆಂಬುದು ಸಂಪೂರ್ಣವಲ್ಲ ಅದು ಸಹ ಕೆಲ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ಹಾಗೆಯೇ ಡೇಟಾ ರಕ್ಷಣೆಯ ಹಕ್ಕು ಕೂಡ ಎಂದು ಹೇಳಿದ್ದಾರೆ. ಇದನ್ನೂ ಓದಿ: ವೈಯಕ್ತಿಕ ಡೇಟಾ ಸಂರಕ್ಷಣೆ – ನಿಯಮ ಉಲ್ಲಂಘಿಸಿದ್ರೆ 500 ಕೋಟಿವರೆಗೂ ಬೀಳುತ್ತೆ ದಂಡ 

    ಇದೇ ತಿಂಗಳ ನವೆಂಬರ್ 18ರಂದು ಕೇಂದ್ರ ಟೆಲಿಕಾಂ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು, ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ -2022ರ ಕರಡನ್ನು ಬಿಡುಗಡೆಗೊಳಿಸಿದ್ದಾರೆ. ಡಿಸೆಂಬರ್ 17ರ ವರೆಗೆ ಸಾರ್ವಜನಿಕರು ಅಭಿಪ್ರಾಯ ನೀಡಬಹುದಾಗಿದೆ. ಇದನ್ನೂ ಓದಿ: ಬೆಂಗ್ಳೂರು ಬಳಿ ಟಾಟಾ ಐಫೋನ್ ಉತ್ಪಾದನಾ ಘಟಕ – 60 ಸಾವಿರ ಮಂದಿಗೆ ಉದ್ಯೋಗ

    ಅಂಶಗಳೇನಿದೆ?
    ದೂರಸಂಪರ್ಕ ಮಸೂದೆ-2022 ಮತ್ತು 2000ರ ಪರಿಷ್ಕೃತ ಐಟಿ ಕಾಯ್ದೆಯು (IT Act) ಈ ವೈಯಕ್ತಿಕ ಡೇಟಾ ಸಂರಕ್ಷಣೆಗೆ ಕಾನೂನು ಅಡಿಪಾಯ ಹಾಕಿಕೊಡುತ್ತದೆ. ಪ್ರತಿಯೊಬ್ಬರ ವೈಯಕ್ತಿಕ ಡೇಟಾಗಳನ್ನು ಸಂರಕ್ಷಿಸಲು, ವ್ಯಕ್ತಿಯ ಹಕ್ಕು ಹಾಗೂ ಕಾನೂನು ಬದ್ಧ ಉದ್ದೇಶಗಳನ್ನು ಈಡೇರಿಸಲು ಇದು ಶಾಸನ ಬದ್ಧ ಕ್ರಮವಾಗಿದ್ದು, ಅದಕ್ಕಾಗಿ ಭಾರತೀಯ ಡೇಟಾ ಸಂರಕ್ಷಣಾ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಲಾಗುತ್ತದೆ.

    ಡೇಟಾಗಳಿಗೆ ಭದ್ರತಾ ಕ್ರಮಗಳನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾದ್ರೆ ಅಥವಾ ಲೋಪಗಳು ಕಂಡುಬAದಲ್ಲಿ ಅಂತಹ ಸಂಸ್ಥೆಗಳಿಗೆ 25 ಲಕ್ಷ ರೂ.ವರೆಗೆ ದಂಡ ವಿಧಿಸುವ ಅಂಶವನ್ನು ಸೇರಿಸಲಾಗಿದೆ. ಈ ಹಿಂದೆ 500 ಕೋಟಿ ವರೆಗೆ ದಂಡ ವಿಧಿಸಬಹುದಾಗಿದೆ ಎನ್ನುವ ಅಂಶವನ್ನು ಉಲ್ಲೇಖಿಸಲಾಗಿತ್ತು.

    ಈ ಹಿಂದೆ 2018ರಲ್ಲಿ ಸಂಸತ್ತಿನಲ್ಲಿ ಡೇಟಾ ಸಂರಕ್ಷಣಾ ಮಸೂದೆ ಮಂಡನೆಯಾಗಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲಾಗಿತ್ತು. ಇದೀಗ ಹೊಸ ಕರಡನ್ನು ಬಿಡುಗಡೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]