Tag: French President Francois Hollande

  • ಮೋದಿ ಕಳ್ಳನೆಂದು ಫ್ರಾನ್ಸ್ ಮಾಜಿ ರಾಷ್ಟ್ರಾಧ್ಯಕ್ಷ ಕರೆದಿದ್ರು- ರಾಹುಲ್ ಗಾಂಧಿ

    ಮೋದಿ ಕಳ್ಳನೆಂದು ಫ್ರಾನ್ಸ್ ಮಾಜಿ ರಾಷ್ಟ್ರಾಧ್ಯಕ್ಷ ಕರೆದಿದ್ರು- ರಾಹುಲ್ ಗಾಂಧಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಕಳ್ಳ ಅಂತಾ ಫ್ರಾನ್ಸ್ ನ ಮಾಜಿ ರಾಷ್ಟ್ರಾಧ್ಯಕ್ಷ ಫ್ರಾಂಕೋಯಿಸ್ ಹೊಲ್ಯಾಂಡ್ ಕರೆದಿದ್ದರು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಲ್ಯಾಂಡ್ ಅವರ ಹೇಳಿಕೆಗೆ ಮೋದಿ ಪ್ರತಿಕ್ರಿಯೆ ನೀಡದೆ ಮೌನವಾಗಿದ್ದಾರೆ. ಹೀಗಾಗಿ ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನವುದು ಸತ್ಯ. ರಫೆಲ್ ವಿಮಾನ ಖರೀದಿ ದೇಶ ಭದ್ರತೆ, ಸೈನಿಕರ ಭವಿಷ್ಯ, ವಾಯುಪಡೆಗೆ ಸಂಬಂಧಿಸಿದ್ದಾಗಿದೆ. ಆದರೂ ಯಾವುದೇ ಮಾಹಿತಿ ನೀಡದೆ ಕೇಂದ್ರ ಸರ್ಕಾರ ಎಲ್ಲವನ್ನೂ ಮುಚ್ಚಿಡುತ್ತಿದೆ ಎಂದು ಆರೋಪಿಸಿದರು.

    ರಫೆಲ್ ವಿಮಾನ ಖರೀದಿಯಲ್ಲಿ ಪ್ರಧಾನಿ ಮೋದಿ ಉದ್ಯಮಿ ಅನಿಲ್ ಅಂಬಾನಿಗೆ 30 ಸಾವಿರ ಕೋಟಿ ರೂ.ವನ್ನು ಉಡುಗೊರೆಯಾಗಿ ನೀಡಿದ್ದಾರೆ. ಹೀಗಾಗಿ ಅನಿಲ್ ಅವರ ಆಸ್ತಿಯ ಮೊತ್ತ 45 ಸಾವಿರ ಕೋಟಿ ರೂ. ಗೆ ಏರಿಕೆಯಾಗಿದೆ ಎಂದು ತಿಳಿಸಿದರು.

    ರಫೆಲ್ ವಿಮಾನ ಖರೀದಿ ಒಪ್ಪಂದಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಚಿವ ಅರುಣ್ ಜೆಟ್ಲಿ ಅವರು ಸಹಿ ಹಾಕಿಲ್ಲ. ಇತ್ತ ನಿರ್ಮಲಾ ಸೀತಾರಾಮನ್ ಅವರು ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ. ರಕ್ಷಣಾ ಸಚಿವೆ ಸೇರಿದಂತೆ ಅನೇಕ ಅಧಿಕಾರಿಗಳು, ಬಿಜೆಪಿ ನಾಯಕರು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಯಾರನ್ನು ರಕ್ಷಿಸಲು ಹೀಗೆ ಹೇಳುತ್ತಿದ್ದಾರೆ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv