ಚಿಕ್ಕೋಡಿ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ ನಡೆದು, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮಹಾರಾಷ್ಟ್ರದ ಸಾಂಗಲಿ ನಗರಕ್ಕೆ ಹೋಗುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕೋಪಗೊಂಡ ಇಮ್ತಿಯಾಜ್ ಕಟ್ಟಿಗೆಯಿಂದ ಹುಸೇನ್ ಸಾಬ್ ತಲೆಗೆ ಹೊಡೆದ ಪರಿಣಾಮ ಹುಸೇನ್ ಸಾಬ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಹುಭಾಷಾ ನಟಿ ನಯನತಾರಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಸ್ಫೋಟಕ ಮಾತುಗಳನ್ನ ಆಡಿದ್ದಾರೆ. ನಿಮಗೆ ಇಂಡಸ್ಟ್ರಿಯಲ್ಲಿ ಕ್ಲೋಸ್ ಫ್ರೆಂಡ್ಸ್ ಯಾರಿದ್ದಾರೆ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ನಟಿ “ನನಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರೂ ಬೆಸ್ಟ್ ಫ್ರೆಂಡ್ ಅಂತಾ ಇಲ್ಲ” ಎಂದಿದ್ದಾರೆ. ಯಾಕಂದ್ರೆ ಸಿನಿಮಾದಿಂದ ಸಿನಿಮಾಗೆ ಎಲ್ಲರೂ ಬೇರೆ ಬೇರೆ ಜನ ಪರಿಚಯ ಆಗ್ತಾರೆ ಎಂದು ಉತ್ತರಿಸಿದ್ದಾರೆ.
ಒಂದು ಸಿನಿಮಾ ಮುಗಿದ ಬಳಿಕ ಮತ್ತೊಂದು ಸಿನಿಮಾ ಮಾಡಬೇಕಾದರೆ ಹೊಸ ಜನರ ಪರಿಚಯವಾಗುತ್ತೆ. ಆ ಸಿನಿಮಾ ಮುಗಿದ್ಮೇಲೆ ಮತ್ತೆ ಹೊಸ ಹೊಸ ಜನರ ಜೊತೆ ಕೆಲಸ ಮಾಡಬೇಕಾಗುತ್ತೆ. ಹೀಗಾಗಿ ಸಿನಿಮಾ ಇಂಡಸ್ಟ್ರಿಯಲ್ಲಿ ನನಗೆ ಬೆಸ್ಟ್ ಫ್ರೆಂಡ್ ಯಾರೂ ಇಲ್ಲ ಎಂದಿದ್ದಾರೆ. ಈ ಮಾತು ಸಾಕಷ್ಟು ಜನರಿಗೆ ಹುಬ್ಬೇರಿಸುವಂತೆ ಮಾಡಿದೆ. ಇದನ್ನೂ ಓದಿ: ಮೋಹನ್‌ಲಾಲ್ ಮಗಳು ವಿಸ್ಮಯ ಚಿತ್ರರಂಗಕ್ಕೆ ಎಂಟ್ರಿ!
ನಟಿ ನಯನತಾರಾ ಯಾವಾಗಲೂ ಸ್ಟ್ರೈಟ್‍ಫಾರ್ವರ್ಡ್ ಹೀಗಾಗಿ ಬೋಲ್ಡ್ ಆಗಿ ಆನ್ಸರ್ ಮಾಡಿದ್ದಾರೆ. ಇನ್ನು ರಾಕಿಂಗ್‍ಸ್ಟಾರ್ ಯಶ್ ನಟನೆಯ ಮಲ್ಟಿಸ್ಟಾರ್ ಸಿನಿಮಾ ಟಾಕ್ಸಿಕ್‍ನಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ಚಿರಂಜೀವಿ ಅವರ 157ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಮೋಹನ್‍ಲಾಲ್, ಮುಮ್ಮುಟಿ ಅವರ ಚಿತ್ರದಲ್ಲೂ ನಯನತಾರಾ ಅಭಿನಯಿಸುತ್ತಿದ್ದಾರೆ.
ನಯನತಾರಾ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಸ್ಟ್ರೈಟ್ ಫಾರ್ವರ್ಡ್ ಆಗಿ ಆಡಿದ ಮಾತುಗಳು ಈಗ ಭಾರಿ ಚರ್ಚೆಗೆ ಕಾರಣವಾಗಿವೆ. ಮದುವೆಯಾದ ಬಳಿಕ ಸಿನಿಮಾಗಳಿಂತ ಫ್ಯಾಮಿಲಿಗೆ ಜಾಸ್ತಿ ಟೈಂ ಕೊಡ್ತಿರುವ ಸೌತ್ ಬ್ಯೂಟಿ ನಯನತಾರಾ ಆಗಾಗ ಸಿನಿಮಾಗಳಲ್ಲೂ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ಪಿ.ಸಿ ಶೇಖರ್ ನಿರ್ದೇಶನ ಮಹಾನ್ ಚಿತ್ರದಲ್ಲಿ ಮಿತ್ರ ವಿಶೇಷ ಪಾತ್ರ
ಬೆಂಗಳೂರು: ಪಾರ್ಟಿ ಮಾಡಲು ಪಬ್‌ಗೆ ಕರೆಸಿ, ಸುಪಾರಿ ನೀಡಿ ಗೆಳೆಯನ ಸುಲಿಗೆ ಮಾಡಿಸಿರುವ ಘಟನೆಯೊಂದು ಬೆಂಗಳೂರಿನ (Bengaluru) ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಂದನ್ ಸುಲಿಗೆಗೆ ಒಳಗಾದ ಯುವಕ. ಚಂದನ್‌ಗೆ ಪವನ್ ಮತ್ತು ಅಚಲ್ ಎಂಬ ಇಬ್ಬರು ಸ್ನೇಹಿತರಿದ್ದರು. ಚಂದನ್ ಅರ್ಥಿಕವಾಗಿ ಚೆನ್ನಾಗಿದ್ದ. ಕಳೆದ ಮೇ 1ರಂದು ಚಂದನ್‌ಗೆ ಇಬ್ಬರು ಸ್ನೇಹಿತರು ಕರೆ ಮಾಡಿ ಚಿಕ್ಕಜಾಲ ಬಳಿಯ ಪಬ್‌ಗೆ ಬರಲು ಹೇಳಿದ್ದರು. ತಡರಾತ್ರಿ ತನಕ ಅಚಲ್ ಮತ್ತು ಪವನ್, ಚಂದನ್ ಮೂವರು ಸೇರಿ ಪಾರ್ಟಿ ಮಾಡಿದ್ದರು. ಇದನ್ನೂ ಓದಿ: Israel-Iran Conflict | ಇಸ್ರೇಲ್‌ನಲ್ಲಿ ಸಿಲುಕಿದ 18 ಮಂದಿ ಕನ್ನಡಿಗರು
ಪೊಲೀಸ್ ತನಿಖೆಯಲ್ಲಿ ಜೊತೆಗಿದ್ದ ಸ್ನೇಹಿತರೇ ಸುಪಾರಿ ನೀಡಿ, ಸುಲಿಗೆ ಮಾಡಿಸಿರುವುದು ಗೊತ್ತಾಗಿದೆ. ಸದ್ಯ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ (Chikkajala Police Station) ಪ್ರಕರಣ ದಾಖಲಾಗಿದ್ದು, ಆರೋಪಿಗಳಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ.
ಕೋಲಾರ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆ ಮುಳಬಾಗಿಲು (Mulabagilu) ನಗರದ ಹೊರವಲಯದಲ್ಲಿರುವ ಬಾರ್ ಎದುರು ಘಟನೆ ನಡೆದಿದೆ. ಮುಳಬಾಗಿಲು ಹೈದರ್ ನಗರ ನಿವಾಸಿ ಮತೀನ್ (25) ಕೊಲೆಯಾದ ವ್ಯಕ್ತಿ. ಸ್ನೇಹಿತ ಮೊಯಿನ್‌ನಿಂದಲೇ ಮತೀನ್ ಹತ್ಯೆಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳ ಪ್ರಾರಂಭವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಮೋದಿ ನಿವೃತ್ತಿ ಘೋಷಣೆ ಬಗ್ಗೆ ಮಾತನಾಡಿದ್ದಾರೆ: ಸಂಜಯ್ ರಾವತ್
ಬಾರ್‌ನಲ್ಲಿ ಕುಡಿದ ಬಳಿಕ ಎದುರಿಗೆ ಇದ್ದ ಮರದ ಕೆಳಗೆ ಮತೀನ್ ಹಾಗೂ ಮೊಯಿನ್ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮತೀನ್ ಸ್ನೇಹಿತ (Friends) ಮೊಯಿನ್‌ನನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಕೋಪಗೊಂಡ ಮೊಯಿನ್ ಕಬ್ಬಿಣದ ರಾಡ್‌ನಿಂದ ಮತೀನ್‌ಗೆ ಇರಿದು ಪರಾರಿಯಾಗಿದ್ದಾನೆ. ಇದನ್ನೂ ಓದಿ: ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ
ಕೊಲೆಯ ದೃಶ್ಯಗಳು ಬಾರ್‌ಗೆ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಏ.2ಕ್ಕೆ ವಕ್ಫ್ ತಿದ್ದುಪಡಿ ಬಿಲ್‌ಗೆ ಕೇಂದ್ರ ಸಿದ್ಧತೆ – ಈಗ ಏನಿದೆ? ಏನು ಬದಲಾಗಲಿದೆ?
ಬೆಂಗಳೂರು: ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಒರಿಜಿನಲ್ ಮಚ್ಚಾನನು ಕರೆತಂದು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ (Chikkagollarahatti) ಬಳಿ ನಡೆದಿದೆ.
ಮಾ. 14ರಂದು ರಾತ್ರಿ ಈ ಕೃತ್ಯ ನಡೆದಿದ್ದು, ಕೀರ್ತಿ ಕುಮಾರ್ ಎಂಬಾತನಿಗೆ ಸುನೀಲ್, ಗಣೇಶ್‌ರಿಂದ ಚಾಕು ಇರಿದಿದ್ದರು. ಮಧು, ಮಹೇಶ್ ಎಂಬುವವರು ವೈನ್ಸ್ ಸ್ಟೋರ್‌ನಲ್ಲಿ ಗಲಾಟೆ ಮಾಡಿಕೊಂಡಿದ್ದರು. ಮಧು ಹಾಗೂ ಮಹೇಶ್ ಇಬ್ಬರೂ ಕೀರ್ತಿ ಕುಮಾರ್‌ನ ಸ್ನೇಹಿತರಾಗಿದ್ದರು. ಇಬ್ಬರ ಗಲಾಟೆಯನ್ನು ರಾಜಿ ಮಾಡಿಸಲು ಭೀಮೇಶ್ ಬಳಿ ಕೀರ್ತಿ ಕುಮಾರ್ ಕರೆದುಕೊಂಡು ಹೋಗಿದ್ದನು. ಇದನ್ನೂ ಓದಿ: ಮಳವಳ್ಳಿ ಕಲುಷಿತ ಆಹಾರ ಸೇವನೆ ಕೇಸ್ – ಮತ್ತೋರ್ವ ವಿದ್ಯಾರ್ಥಿ ಮೃತ, ಸಾವಿನ ಸಂಖ್ಯೆ 2ಕ್ಕೆ ಏರಿಕೆ
ಈ ವೇಳೆ ಸುನೀಲ್ ಎಂಬಾತ ಕುಡಿದು ಬೈಕ್‌ನಲ್ಲಿ ಮನೆ ಕಡೆಗೆ ತೆರಳುತ್ತಿದ್ದಾಗ ಜನರ ಗುಂಪು ನೋಡಿ ಬೈಕ್ ನಿಲ್ಲಿಸಿದ್ದ. ಸುನೀಲ್ ನನ್ನ ನೋಡಿದ್ದ ಕೀರ್ತಿ ಕುಮಾರ್, ಏನೋ ಗಾಡಿ ನಿಲ್ಲಿಸಿದ್ದಿಯಾ ನಡಿಯೋ `ಮಚ್ಚಾ’ ಎಂದಿದ್ದ. ನನ್ನನ್ನೇ ಮಚ್ಚಾ ಎಂದು ಕರೆಯುತ್ತೀಯಾ ಎಂದು ಸುನೀಲ್ ಆವಾಜ್ ಹಾಕಿದ್ದ. ಮನೆಗೆ ತೆರಳಿ ಒರಿಜಿನಲ್ ಮಚ್ಚಾ ಬಾಮೈದ ಗಣೇಶ್‌ನನ್ನ ಕರೆದುಕೊಂಡು ಬಂದಿದ್ದ. ಬಳಿಕ ಬಾವ, ಬಾಮೈದ ಸೇರಿ ಕೀರ್ತಿ ಕುಮಾರ್‌ಗೆ ಚಾಕುವಿನಿಂದ ಇರಿದಿದ್ದರು ಎನ್ನಲಾಗಿದೆ. ಇದನ್ನೂ ಓದಿ: ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು
ಘಟನೆಯ ಆರೋಪಿಗಳಾದ ಸುನೀಲ್ ಹಾಗೂ ಗಣೇಶ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಹಳೆಯ ದ್ವೇಷಕ್ಕೆ ಮತ್ತೆ ನೆತ್ತರು ಹರಿದಿದೆ. ಜೊತೆಯಲ್ಲೇ ಕುಡಿದು ಸ್ನೇಹಿತನನ್ನೇ ಹತ್ಯೆಗೈದಿರುವ ಘಟನೆ ಬೆಂಗಳೂರಿನ (Bengaluru) ಸ್ಯಾಟಲೈಟ್ ಬಸ್ ನಿಲ್ದಾಣದ (Satellite Bus Stand) ಬಳಿಯ ಬಾರ್ ಒಳಗೆ ನಡೆದಿದೆ.
25 ವರ್ಷದ ಯೋಗೆಂದ್ರ ಸಿಂಗ್ ಕೊಲೆಯಾದ ವ್ಯಕ್ತಿ. ಈತ ಕಸ್ತೂರಿ ನಗರದ ನಿವಾಸಿ. 28 ವರ್ಷದ ಉಮೇಶ್ ಕೊಲೆ ಆರೋಪಿಯಾಗಿದ್ದಾನೆ. ಸ್ಯಾಟಲೈಟ್ ನಿಲ್ದಾಣದ ಬಳಿಯ ಕಲಾ ವೈನ್ಸ್ ಬಾರ್ ಒಳಗೆ ಕೊಲೆ ನಡೆದಿದೆ. ಘಟನೆಗೆ ಹಳೆಯ ದ್ವೇಷ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಜೊತೆಯಲ್ಲೇ ಕುಡಿಯುತ್ತಿದ್ದ ಸ್ನೇಹಿತನಿಂದಲೇ ಘಟನೆ ನಡೆದಿದೆ. ಇದನ್ನೂ ಓದಿ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ
ಈ ಕುರಿತು ಮಾಹಿತಿ ನೀಡಿರುವ ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್, ರಾತ್ರಿ 10.45ರ ಸುಮಾರಿಗೆ ಘಟನೆ ನಡೆದಿದೆ. ಆರೋಪಿ ಮತ್ತು ಕೊಲೆಯಾದವನು ಪರಸ್ಪರ ಸ್ನೇಹಿತರು. ಇಬ್ಬರು ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಹಳೇ ಜಗಳದ ವಿಚಾರದ ತೆಗೆದು ಗಲಾಟೆಯಾಗಿದೆ. ಉಮೇಶ್ ಬಾಟಲ್‌ನಿಂದ ಕತ್ತಿಗೆ ಚುಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿಯನ್ನ ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್ – ಹೊಸ ಸರ್ಕಾರ ರಚನೆಗೆ ಅಸ್ತು
ಬಳ್ಳಾರಿ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆ (Hosapete) ನಗರದ ಸಿದ್ಧಲಿಂಗಪ್ಪ ಕ್ರಾಸ್ ಬಳಿ ನಡೆದಿದೆ.
ಕುಡಿದ ಮತ್ತಿನಲ್ಲಿ ಸಣ್ಣ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ ಆರಂಭವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಶಾಂತಕುಮಾರನ ತಲೆ ಭಾಗಕ್ಕೆ ಹುಲಿಗೇಶ ಬಲವಾಗಿ ಹೊಡೆದಿದ್ದ. ಆರೋಪಿ ಹುಲಿಗೇಶ ನಡುರಸ್ತೆಯಲ್ಲಿಯೇ ಸ್ನೇಹಿತ ಶಾಂತಕುಮಾರನನ್ನು ಹೊಡೆದಿದ್ದ. ಕೈಯಿಂದ ತಲೆಭಾಗಕ್ಕೆ ಬಲವಾಗಿ ಏಟು ಬಿದ್ದ ಹಿನ್ನೆಲೆ ಶಾಂತಕುಮಾರ್ ತೀವ್ರ ಅಸ್ವಸ್ಥನಾಗಿದ್ದ.
ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಕೊಪ್ಪಳ (Koppala) ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇನ್ನೂ ಆರೋಪಿ ಹುಲಿಗೇಶನನ್ನ ಹೊಸಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಹೊಸಪೇಟೆ ಡಿವೈಎಸ್ಪಿ, ಸಿಪಿಐ ಭೇಟಿ, ಪರಿಶೀಲನೆ ನಡೆಸಿದ್ದು, ಹೊಸಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ತಿರುಮಲನ ಸನ್ನಿಧಿಗೆ 2 ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು
ಲಕ್ನೋ: ಮದ್ಯ (Alcohol) ಸೇವಿಸಲು ನಿರಾಕರಿಸಿದನೆಂದು ಆತನ ಸ್ನೇಹಿತನೇ ಮನೆಯ ಟೆರೇಸ್‌ನಿಂದ ಕೆಳಕ್ಕೆ ತಳ್ಳಿದ ಘಟನೆ ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ.
ಗಾಯಾಳುವನ್ನು ರಂಜೀತ್ ಸಿಂಗ್ ಎಂದು ಗುರುತಿಸಲಾಗಿದೆ. ಈತನನ್ನು ಲಕ್ನೋದ ರುಪ್ಪುರ್ ಖಾದ್ರಾದಲ್ಲಿರುವ ಅವರ ಮನೆಯ ಟೆರೇಸ್‌ನಿಂದ ಓರ್ವ ಕೆಳಕ್ಕೆ ತಳ್ಳಿದ್ದಾನೆ. ಅಲ್ಲದೇ ಕೆಳಗೆ ಬಿದ್ದ ಬಳಿಕ ಇತರ ಮೂವರು ಸೇರಿ ರಂಜೀತ್‌ಗೆ ಮನಬಂದಂತೆ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ; ಗೋವಾದಲ್ಲಿ ಕನ್ನಡ ನಿರ್ಮಾಪಕರ ಗಲಾಟೆ
ಘಟನೆಯ ಸಂಪೂರ್ಣ ದೃಶ್ಯ ಮನೆಯ ಸುತ್ತಮುತ್ತ ಇರುವ ಕಟ್ಟಡದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೋದಲ್ಲಿ ಯುವಕನೊಬ್ಬ ರಂಜೀತ್ ಸಿಂಗ್‌ನನ್ನು ಟೆರೇಸ್‌ನಿಂದ ತಳ್ಳುತ್ತಿರುವುದನ್ನು ತೋರಿಸುತ್ತದೆ. ಇನ್ನು ಇತರ ಮೂವರು ರಸ್ತೆಯಲ್ಲಿ ನಿಂತಿರುವುದನ್ನು ಕಾಣಬಹುದು. ಹಲ್ಲೆ ಅಲ್ಲಿಗೆ ನಿಲ್ಲುವುದಿಲ್ಲ. ರಂಜೀತ್ ಕೆಳಕ್ಕೆ ಬಿದ್ದ ಬಳಿಕ ಆತನ ಮೇಲೆ ಹಿಗ್ಗಾಮುಗ್ಗ ಥಳಿಸುವುದನ್ನು ಕೂಡ ಕಾಣಬಹುದಾಗಿದೆ.
ಘಟನೆ ನಡೆದ ಕೂಡಲೇ ರಂಜೀತ್ ಸಿಂಗ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಡಿಸ್ಚಾರ್ಜ್ ಮಾಡಲಾಗಿದೆ. ಪ್ರಕರಣ ಸಂಬಂಧ ನಾಲ್ವರ ಪೈಕಿ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ನಾಲ್ಕನೇ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ನವದೆಹಲಿ: ಎಂಟನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಸ್ನೇಹಿತರೇ ಹಲ್ಲೆ ಮಾಡಿ ಬಳಿಕ ಅವರಲ್ಲಿ ಓರ್ವ ಆತನ ಗುದದ್ವಾರಕ್ಕೆ ಮರದ ಕೋಲನ್ನು ತುರುಕಿದ ವಿಲಕ್ಷಣ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (NewDelhi) ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಈ ಘಟನೆ ಮಾರ್ಚ್ 18 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ನಡೆದಿದ್ದೇನು..?: 14 ವರ್ಷದ ಬಾಲಕ ಶಾಲೆಯಲ್ಲಿ (School Boy) ತನ್ನ ಸ್ನೇಹಿತರ ಜೊತೆ ವಿಚಾರವೊಂದಕ್ಕೆ ಜಗಳವಾಡಿದ್ದಾನೆ. ಈ ಗಲಾಟೆಯು ತಾರಕಕ್ಕೇರಿದ್ದು, ನಾಲ್ವರು ಸ್ನೇಹಿತರು ಬಾಲಕನನ್ನು ಮೂಲೆಗೆ ತಳ್ಳಿ ಮನಬಂದಂತೆ ಥಳಿಸಿದ್ದಾರೆ. ಅಲ್ಲದೇ ನಾಲ್ವರಲ್ಲಿ ಓರ್ವ ಮರದ ತುಂಡಿನಿಂದ ಬಾಲಕನ ಗುದದ್ವಾರಕ್ಕೆ (Anal Region) ಹಾನಿ ಮಾಡಿದ್ದಾನೆ. ಈ ಸಂಬಂಧ ವಿದ್ಯಾರ್ಥಿಯ ಪೋಷಕರು, ಪೊಲೀಸರು ಮತ್ತು ಶಾಲಾ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆಯನ್ನು ಯಾರಿಗೂ ಹೇಳದಂತೆ ವಿದ್ಯಾರ್ಥಿಗೆ ಆತನ ಗೆಳೆಯರು ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ವಿಚಾರವನ್ನು ಬಯಲು ಮಾಡಿದರೆ ಅದೇ ಶಾಲೆಯಲ್ಲಿ ಓದುತ್ತಿರುವ ತನ್ನ ಸಹೋದರಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಬೆದರಿಸಿರುವುದಾಗಿ ವಿದ್ಯಾರ್ಥಿ ಹೇಳಿದ್ದಾನೆ.
ದೂರಿನ ಪ್ರಕಾರ, ಮಾರ್ಚ್ 13 ರಂದು ತನ್ನ ಸಹಪಾಠಿಯೊಂದಿಗೆ ವಿದ್ಯಾರ್ಥಿ ಜಗಳವಾಡಿದ್ದಾನೆ. ಇದೇ ವಿಚಾರಕ್ಕೆ ಮಾರ್ಚ್ 18 ರಂದು ಆರೋಪಿಗಳು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೆ ಪ್ರತೀಕಾರದ ಭಯದಿಂದ ವಿದ್ಯಾರ್ಥಿ, ಮೊದಲು ಘಟನೆಯ ಬಗ್ಗೆ ಯಾರಿಗೂ ಹೇಳಲಿಲ್ಲ. ಇತ್ತ ಮಾರ್ಚ್ 20 ರಂದು ವಿದ್ಯಾರ್ಥಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಪೋಷಕರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ವಿದ್ಯಾರ್ಥಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿಲ್ಲ.
ಮಾರ್ಚ್ 28 ರಂದು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆಪರೇಷನ್ ಮಾಡಬೇಕು. ಯಾವುದೋ ಅಹಿತಕರ ಘಟನೆಗೆ ಮಗು ಬಲಿಯಾಗಿರಬಹುದು ಎಂದು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಅಂತೆಯೇ ಆತನಿಗೆ ಆಪರೇಷನ್ ಕೂಡ ಮಾಡಲಾಗಿದೆ. ಏಪ್ರಿಲ್ 2 ರಂದು ವಿದ್ಯಾರ್ಥಿಗೆ ಪ್ರಜ್ಞೆ ಬಂದಾಗ, ಅವನು ತನ್ನ ಕುಟುಂಬಕ್ಕೆ ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾನೆ. ನಂತರ ಪೊಲೀಸ್ ದೂರು ದಾಖಲಿಸಲಾಗಿದೆ.
ವಿದ್ಯಾರ್ಥಿಯ ಗುದದ್ವಾರದಲ್ಲಿ ಮರದ ಕೋಲನ್ನು ತೂರಿಸಲು ಪ್ರಯತ್ನಿಸಿದ್ದರಿಂದ ಅಲ್ಲಿ ತೀವ್ರ ಗಾಯಗಳಾಗಿವೆ ಎಂದು ವೈದ್ಯಕೀಯ ವರದಿಯು ಬಹಿರಂಗಪಡಿಸಿತು. ಅಂತೆಯೇ ವಿದ್ಯಾರ್ಥಿ ಕೂಡ ಇದನ್ನು ಒಪ್ಪಿಕೊಂಡಿದ್ದಾನೆ. ತನ್ನ ಗೆಳೆಯ ಮರದ ಕೋಲನ್ನು ತುರುಕಿಸಲು ಪ್ರಯತ್ನಿಸಿದ್ದಾನೆ ಎಂದು ಬಾಯ್ಬಿಟ್ಟಿದ್ದಾನೆ. ಅಲ್ಲದೇ ಘಟನೆಯನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ ಎಂದು ತಿಳಿಸಿದ್ದು, ಇದನ್ನು ಪೊಲೀಸರು ಎಫ್‌ಐಆರ್ ನಲ್ಲಿ ದಾಖಲಿಸಿಕೊಂಡಿದ್ದಾರೆ.
ಸದ್ಯ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 341 (ತಪ್ಪು ಸಂಯಮ), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಮತ್ತು 377 (ಅಸ್ವಾಭಾವಿಕ ಅಪರಾಧಗಳು), ಜೊತೆಗೆ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಪೋಕ್ಸೊ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.