Tag: FTA

  • ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

    ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

    ಲಂಡನ್‌: ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement) ಭಾರತ ಮತ್ತು ಯುನೈಟೆಟ್‌ ಕಿಂಗ್‌ಡಮ್‌ (UK) ಸಹಿ ಹಾಕಿದೆ. ಈ ಒಪ್ಪಂದದಿಂದ ಎರಡು ದೇಶಗಳ ಮಧ್ಯೆ ವಾರ್ಷಿಕವಾಗಿ ಸುಮಾರು 34 ಶತಕೋಟಿ ಡಾಲರ್‌ ದ್ವಿಪಕ್ಷೀಯ ವ್ಯಾಪಾರ ಹೆಚ್ಚಾಗಲಿದೆ.

    ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದ (India) ಮಾರುಕಟ್ಟೆ ಪ್ರವೇಶಿಸಲು ಅಮೆರಿಕ (USA) ಸುಂಕದ ಬೆದರಿಕೆ ಹಾಕುತ್ತಿರುವ ಸಮಯದಲ್ಲೇ ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿರುವುದು ಮಹತ್ವ ಪಡೆದಿದೆ.

    ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಜವಳಿ, ಜೆನೆರಿಕ್ ಔಷಧಗಳು ಮತ್ತು ವೈದ್ಯಕೀಯ ಸಾಧನಗಳು, ಚರ್ಮದ ಸರಕುಗಳು ಮತ್ತು ಕೃಷಿ ಮತ್ತು ರಾಸಾಯನಿಕ ಉತ್ಪನ್ನಗಳು ಸೇರಿದಂತೆ ಯುಕೆಗೆ ಹೋಗುವ ಭಾರತದ 99% ವಸ್ತುಗಳ ಮೇಲಿನ ಸುಂಕವನ್ನು ಶೂನ್ಯಕ್ಕೆ ಇಳಿಸಲಾಗುತ್ತದೆ ಎಂದು ವರದಿಯಾಗಿದೆ. ಇದನ್ನೂ ಓದಿ: ತಾಂತ್ರಿಕ ದೋಷದಿಂದ ರಷ್ಯಾ ವಿಮಾನ ಪತನ 48 ಮಂದಿ ಸಾವು


    ಒಪ್ಪಂದದ ಭಾಗವಾಗಿ, ಭಾರತವು ತನ್ನ ಸುಂಕದ 90% ರಷ್ಟು ಕಡಿತಗೊಳಿಸಲಿದೆ ಮತ್ತು ಯುಕೆ ಉತ್ಪನ್ನಗಳ ಮೇಲಿನ ಸರಾಸರಿ ಸುಂಕವು 15% ರಿಂದ 3% ಕ್ಕೆ ಇಳಿಯಲಿದೆ. ಬ್ರಿಟನ್‌ ಸ್ಕಾಚ್ ವಿಸ್ಕಿ, ಕಾರು ಮತ್ತು ಕೆಲ ಆಹಾರ ಪದಾರ್ಥಗಳ ಮೇಲಿನ ಆಮದು ಸುಂಕವನ್ನು ಭಾರತ ಕಡಿತಗೊಳಿಸಲಿದೆ. ವಿಸ್ಕಿಯ ಮೇಲಿನ ಸುಂಕವನ್ನುಅರ್ಧದಷ್ಟು ಅಂದರೆ 75% ಕ್ಕೆ ಇಳಿಕೆಯಾಗಲಿದೆ. ಎಲೆಕ್ಟ್ರಿಕ್ ವಾಹನಗಳ ಮೇಲೂ ಪರಿಣಾಮ ಬೀರಲಿದ್ದು 110% ರಿಂದ 10% ಕ್ಕೆ ಸುಂಕ ಇಳಿಯಲಿದೆ.

    ಮುಂದಿನ ಎರಡು ವರ್ಷಗಳಲ್ಲಿ ಭಾರತದ ಚರ್ಮ ವಲಯವು ಯುಕೆಯಲ್ಲಿ 5% ಹೆಚ್ಚುವರಿ ಮಾರುಕಟ್ಟೆ ಪಾಲನ್ನು ಪಡೆಯುವ ನಿರೀಕ್ಷೆಯಿದೆ. ಅದೇ ರೀತಿ 2030 ರ ವೇಳೆಗೆ ಎಲೆಕ್ಟ್ರಾನಿಕ್ಸ್ ಮತ್ತು ಎಂಜಿನಿಯರಿಂಗ್ ರಫ್ತುಗಳು ದ್ವಿಗುಣಗೊಳ್ಳುವ ಸಾಧ್ಯತೆಯಿದೆ.

     

    ಮುಂದಿನ ಹಣಕಾಸು ವರ್ಷದಲ್ಲಿ ರಾಸಾಯನಿಕಗಳ ರಫ್ತು 30%-40% ರಷ್ಟು ಹೆಚ್ಚಾಗಬಹುದು. ರತ್ನಗಳು ಮತ್ತು ಆಭರಣ ರಫ್ತಿನ ಮೌಲ್ಯ ಪ್ರಸ್ತುತ 941 ಮಿಲಿಯನ್‌ ಡಾಲರ್‌ ಇದ್ದು ಮುಂದಿನ ಮೂರು ವರ್ಷಗಳಲ್ಲಿ ಇದು ದ್ವಿಗುಣಗೊಳ್ಳುವ ನಿರೀಕ್ಷೆಯಿದೆ.

    ವ್ಯಾಪಾರ ಒಪ್ಪಂದ ಜಾರಿಗೆ ಬಂದ ನಂತರ ಸಾಫ್ಟ್‌ವೇರ್ ಸೇವೆಗಳ ರಫ್ತು ವಾರ್ಷಿಕವಾಗಿ ಸುಮಾರು 20% ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಈ ಒಪ್ಪಂದವು ಗ್ರಾಹಕರಿಗೆ ಬೆಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಬ್ರಿಟಿಷ್ ಅಧಿಕಾರಿಗಳು ಹೇಳಿದ್ದಾರೆ.

  • ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

    ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

    – 60 ಶತಕೋಟಿ ಡಾಲರ್‌ ವಹಿವಾಟು ದ್ವಿಗುಣಗೊಳ್ಳುವ ನಿರೀಕ್ಷೆ
    – ಭಾರತೀಯ ಸಮೂಹವನ್ನೂ ಭೇಟಿಯಾಗಿ ಮೋದಿ ಭಾವುಕ

    ಲಂಡನ್‌/ನವದೆಹಲಿ: ನಾಲ್ಕು ದಿನಗಳ ಕಾಲ ಲಂಡನ್‌, ಮಾಲ್ದೀವ್ಸ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಡರಾತ್ರಿ ಬಿಟನ್‌ಗೆ ಬಂದಿಳಿದಿದ್ದಾರೆ. ಈ ವೇಳೆ ಪ್ರಧಾನಿ ಮೋದಿಗೆ (PM Modi) ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾಮರ್‌ (UK PM Keir Starmer) ಸಾಂಪ್ರದಾಯಿಕ ಸ್ವಾಗತ ಕೋರಿದ್ದಾರೆ. ಇದೇ ವೇಳೆ ಅಲ್ಲಿನ ಭಾರತೀಯ ಸಮೂಹವನ್ನು ಭೇಟಿಯಾದ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

    2 ದಿನಗಳ ಕಾಲ ಬ್ರಿಟನ್‌ (Britain) ಪ್ರವಾಸದಲ್ಲಿರುವ ಮೋದಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಕೀರ್‌ ಸ್ಟಾಮರ್‌ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ (Free Trade Deal) ಅಂತಿಮ ಸಹಿ ಹಾಕುವ ಸಾಧ್ಯತೆ ಇದೆ. ಮೂರು ವರ್ಷಗಳ ಚರ್ಚೆಯ ಬಳಿಕ ಮೇ ತಿಂಗಳಲ್ಲಿ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗಿದ್ದು, ಇದು ಭಾರತದ ಶೇ.99 ರಷ್ಟು ರಫ್ತುಗಳ ಮೇಲಿನ ಸುಂಕವನ್ನು ತೆಗೆದುಹಾಕಲಿದೆ. ಇದನ್ನೂ ಓದಿ: 5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

    ಮುಖ್ಯವಾಗಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದರಿಂದ ಪ್ರಸ್ತುತ ಇರುವ 60 ಶತಕೋಟಿ ಡಾಲರ್‌ನಿಂದ ವಹಿವಾಟು ದ್ವಿಗುಣಗೊಳ್ಳುವ ಸಾಧ್ಯತೆಗಳಿವೆ. ಜೊತೆಗೆ ಬ್ರಿಟನ್‌ ಉತ್ಪನ್ನಗಳಾದ ವಿಸ್ಕಿ ಮತ್ತು ಆಟೋಮೊಬೈಲ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಸುಲಭ ಪ್ರವೇಶ ಸಿಗಲಿದೆ.‌ ಇದರೊಂದಿಗೆ ರಕ್ಷಣಾ ವಲಯ, ಶಿಕ್ಷಣ, ಸಂಶೋಧನೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ.  ಇದನ್ನೂ ಓದಿ: ಸೇರ್ಪಡೆಯಾಗಿ 2 ವರ್ಷದ ನಂತ್ರ ಯುನೆಸ್ಕೋದಿಂದ ಹೊರ ಬಂದ ಅಮೆರಿಕ

    ಭಾರತೀಯ ಸಮೂಹ ಭೇಟಿ; ಮೋದಿ ಭಾವುಕ
    ಇನ್ನೂ ಬ್ರಿಟನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಭಾರತೀಯ ಸಮೂಹವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಭಾವುಕರಾದರು. ಸಾಂಪ್ರದಾಯಿಕ ಸ್ವಾಗತಕ್ಕಾಗಿ ಅಲ್ಲಿನ ಭಾರತೀಯ ಸಮೂಹಕ್ಕೆ ಧನ್ಯವಾದ ಸಲ್ಲಿಸಿದರಲ್ಲದೇ ಭಾರತದ ಪ್ರಗತಿಗೆ ನಿಮ್ಮ ಪ್ರೀತಿ ಮತ್ತು ಬದ್ಧತೆ ನೋಡಿ ಹೃದಯ ತುಂಬಿಬರುತ್ತಿದೆ ಎಂದು ಭಾವುಕರಾದರು.  ಇದನ್ನೂ ಓದಿ: ಅಮೆರಿಕ-ಜಪಾನ್ ನಡುವೆ ವ್ಯಾಪಾರ ಒಪ್ಪಂದ; ಟ್ರಂಪ್‌ ಘೋಷಣೆ

    ಎಸ್‌ & ಪಿ ಗ್ಲೋಬಲ್ ಮಾರ್ಕೆಟ್ ಇಂಟೆಲಿಜೆನ್ಸ್ ಪ್ರಕಾರ, ಈ ಒಪ್ಪಂದವು ಭಾರತಕ್ಕೆ ಗಣನೀಯ ಆರ್ಥಿಕ ಉತ್ತೇಜನ ನೀಡಲಿದೆ. 2024ರಲ್ಲಿ ಯುಕೆಯಿಂದ ಭಾರತಕ್ಕೆ 130 ಬಿಲಿಯನ್ ಡಾಲರ್‌ನಷ್ಟು (ಭಾರತದ ಜಿಡಿಪಿಯ 3.3%) ವಿದೇಶಿ ವಿನಿಮಯ ಹರಿವು ದಾಖಲಾಗಿದ್ದು, ಈ ಒಪ್ಪಂದದಿಂದ ಈ ಹರಿವು ಮತ್ತಷ್ಟು ಹೆಚ್ಚಲಿದೆ. ವಿಶೇಷವಾಗಿ, ಯುಕೆಯಲ್ಲಿ ಕೆಲಸ ಮಾಡುವ ಭಾರತೀಯ ಐಟಿ ವೃತ್ತಿಪರರಿಗೆ ಮೂರು ವರ್ಷಗಳವರೆಗೆ ರಾಷ್ಟ್ರೀಯ ವಿಮೆಯಿಂದ ವಿನಾಯಿತಿ ನೀಡುವ ನಿಬಂಧನೆಯು ಅವರ ಉಳಿತಾಯ ಮತ್ತು ವಿದೇಶಿ ವಿನಿಮಯ ಹರಿವನ್ನು ಹೆಚ್ಚಿಸಲಿದೆ. 2024ರಲ್ಲಿ 56.7 ಬಿಲಿಯನ್ ಡಾಲರ್‌ ಆಗಿರುವ ದ್ವಿಪಕ್ಷೀಯ ವಾಣಿಜ್ಯವನ್ನು 2030ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಈ ಒಪ್ಪಂದ ಹೊಂದಿದೆ.

    ಬ್ರಿಟನ್ ಭೇಟಿಯ ಬಳಿಕ, ಪ್ರಧಾನಿ ಮೋದಿ ಜುಲೈ 25-26ರಂದು ಮಾಲ್ಡೀವ್ಸ್‌ಗೆ ತೆರಳಲಿದ್ದಾರೆ. ಅಲ್ಲಿ ಅವರು ಮಾಲ್ಡೀವ್ಸ್‌ನ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. 1965ರಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದ 60ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಮಾಲ್ಡೀವ್ಸ್, ಈ ಸಂದರ್ಭದಲ್ಲಿ ಮೋದಿಯವರಿಗೆ ಗೌರವಾನ್ವಿತ ಸ್ವಾಗತವನ್ನು ನೀಡಲಿದೆ. ಮಾಲ್ಡೀವ್ಸ್‌ನ ರಾಷ್ಟ್ರಪತಿ ಮೊಹಮ್ಮದ್ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಮೋದಿ, ಎರಡೂ ದೇಶಗಳ ನಡುವಿನ ಸಹಕಾರವನ್ನು ಗಾಢವಾಗಿಸುವ ಬಗ್ಗೆ ಚರ್ಚಿಸಲಿದ್ದಾರೆ.  ಇದನ್ನೂ ಓದಿ: 4 ವರ್ಷಗಳಲ್ಲಿ 1.9 ಲಕ್ಷ ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಅನುಮೋದನೆ: ಅಶ್ವಿನಿ ವೈಷ್ಣವ್

    ಕಳೆದ ಕೆಲವು ವರ್ಷಗಳಲ್ಲಿ ಭಾರತ-ಮಾಲ್ಡೀವ್ಸ್ ಸಂಬಂಧಗಳು ಕೆಲವು ಏರಿಳಿತಗಳನ್ನು ಕಂಡಿವೆ. 2023ರಲ್ಲಿ ಮುಯಿಝು ಅವರು ‘ಇಂಡಿಯಾ ಔಟ್’ ಚುನಾವಣಾ ಪ್ರಚಾರದೊಂದಿಗೆ ಅಧಿಕಾರಕ್ಕೆ ಬಂದಿದ್ದರು. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಎರಡೂ ದೇಶಗಳು ತಮ್ಮ ಸಂಬಂಧವನ್ನು ಸುಧಾರಿಸಿಕೊಳ್ಳಲು ಕಾರ್ಯನಿರ್ವಹಿಸಿವೆ. ಭಾರತವು ಮಾಲ್ಡೀವ್ಸ್‌ಗೆ 2024-25ರಲ್ಲಿ 470 ಕೋಟಿ ರೂ.ನಿಂದ 600 ಕೋಟಿ ರೂ.ಗೆ ಹೆಚ್ಚಳವಾದ ಲೈನ್ ಆಫ್ ಕ್ರೆಡಿಟ್ ಮತ್ತು ಕರೆನ್ಸಿ ಸ್ವಾಪ್ ಸೌಲಭ್ಯವನ್ನು ವಿಸ್ತರಿಸಿದೆ. ಇದರಿಂದ ಮಾಲ್ಡೀವ್ಸ್‌ನ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ನೆರವಾಗಿದೆ.