ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸ್ಥಿರವಾಗಿಲ್ಲ ಎನ್ನುವ ವಿಷಯವನ್ನು ಡೈವರ್ಟ್ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ಡಾಲರ್ಸ್ ಕಾಲೋನಿಯ ಬಿಎಸ್‍ವೈ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಆಂತರಿಕ ಕಚ್ಚಾಟವು ಗೊತ್ತಾಗಬಾರದೆನ್ನುವ ಉದ್ದೇಶದಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ಮೇಲೆ ಪ್ರತಿ ಲೀಟರ್‍ಗೆ 2 ರೂಪಾಯಿ ಇಳಿಕೆ ಮಾಡಿದ್ದಾರೆ. ಒಂದು ವೇಳೆ ಇವರು ಮಾಡುವುದಾದರೆ ಕನಿಷ್ಟ 10 ರೂಪಾಯಿಯನ್ನು ಇಳಿಕೆ ಮಾಡಬೇಕಾಗಿತ್ತು. ತಮ್ಮಲ್ಲಿನ ಆಂತರಿಕ ಕಿತ್ತಾಟವನ್ನು ಮರೆಮಾಚಲು ಕಿಂಗ್‍ಪಿನ್ ಎನ್ನುವ ಏನೇನೋ ಕಥೆ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಸಿಎಂ ಕುಮಾರಸ್ವಾಮಿಯವರಿಗೆ ತಾಕತ್ ಇದ್ದರೆ ಅವರು ಮಾಡಿರುವ ಆರೋಪಕ್ಕೆ ಸಂಬಂಧಪಟ್ಟವರನ್ನು ಶೀಘ್ರವೇ ಬಂಧಿಸಲಿ. ನಾವು ಬರೀ ರಾಜಕಾರಣ ಮಾಡಿದರೆ ನಮ್ಮ ಕ್ಷೇತ್ರದ ಜನ ನಮ್ಮನ್ನ ಕ್ಷಮಿಸುವುದಿಲ್ಲ. ಹೀಗಾಗಿ ನಾವು ಮೊದಲು ನಮ್ಮ ಕ್ಷೇತ್ರಗಳ ಅಭಿವೃದ್ಧಿಯ ಕಡೆ ಗಮನ ನೀಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸಿಹಿ ಸುದ್ದಿ ನೀಡಿದ ಕುಮಾರಣ್ಣ-ಲೀಟರ್ ಪೆಟ್ರೋಲ್, ಡೀಸೆಲ್‍ಗೆ 2 ರೂ. ಇಳಿಕೆ
ಬಿಎಸ್‍ವೈ ನಿವಾಸಕ್ಕೆ ಸಂಕೇಶ್ವರ್, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದು, ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಿದ್ದಾರೆ. ಅಲ್ಲದೇ ಚರ್ಚೆಯ ಬಳಿಕ ಯಡಿಯೂರಪ್ಪನವರು ಕೈ ನೋವಿನ ಚಿಕಿತ್ಸೆ ಪಡೆಯಲು ಜಿಂದಾಲ್ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಹೈದರಾಬಾದ್: ದೇಶ್ಯಾದಂತ ತೀವ್ರಗತಿಯಲ್ಲಿ ಹೆಚ್ಚಾಳವಾಗುತ್ತಿರುವ ತೈಲಬೆಲೆ ಕಡಿಮೆಗೊಳಿಸಲು ಕೇಂದ್ರದ ಕ್ರಿಯಾ ಯೋಜನೆ ಶೀಘ್ರವೇ ಜಾರಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಶನಿವಾರ ದೆಹಲಿಯಲ್ಲಿ ಹೇಳಿದ್ದಾರೆ.
ತೆಲಂಗಾಣ ವಿಧಾನಸಭೆ ವಿಸರ್ಜನೆ ಮಾಡುತ್ತಲೇ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು. ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹೈದರಾಬಾದ್‍ಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿ ಇಂಧನ ಬೆಲೆ ಏರಿಕೆ ಕುರಿತು ಪ್ರಸ್ತಾಪಿಸಿದರು. ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಯುತ್ತಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಜನರ ಆಂತಕವನ್ನು ನಾವು ತಿಳಿದಿದ್ದೇವೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಕ್ರಿಯಾ ಯೋಜನೆ ಹೊರತಂದು ಬೆಲೆ ಏರಿಕೆಗೆ ಕಡಿವಾಣ ಹಾಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
I assure people of Telangana that BJP under the leadership of PM Shri @narendramodi will ensure that we build the state of your dreams, a state that we got after long struggle, which has been pushed in uncertainty by TRS. pic.twitter.com/rFYqPeDDDx
ಇದೇ ವೇಳೆ ಅವಧಿ ಮುನ್ನ ವಿಧಾನಸಭೆ ಮಾಡಿದ ಕುರಿತು ಸಿಎಂ ಕೆಸಿಆರ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಅವಧಿ ಮೊದಲೇ ವಿಧಾನಸಭೆಯನ್ನು ಏಕೆ ವಿಸರ್ಜನೆ ಮಾಡಿದ್ದಾರೆ ಎಂಬುವುದನ್ನು ಕೆಸಿಆರ್ ಜನರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸಿದರು.
ಮೊದಲು `ಒಂದೇ ದೇಶ.. ಒಂದೇ ಚುನಾವಣೆ’ಗೆ ಓಕೆ ಎಂದಿದ್ದ ಕೆಸಿಆರ್ ನಂತರ ಮಾತು ಬದಲಿಸದ್ದೇಕೆ? ಪದೇ ಪದೇ ಚುನಾವಣೆ ನಡೆದರೆ ಸಣ್ಣ ರಾಜ್ಯಗಳಿಗೆ ಆರ್ಥಿಕ ಹೊರೆ ಆಗಲ್ವಾ ಎಂದು ಪ್ರಶ್ನಿಸಿದರು. ಅಲ್ಲದೇ ನಿಮಗೆ ರಜಾಕಾರರ ಆಡಳಿತ ಬೇಕೋ, ಬಿಜೆಪಿ ಆಡಳಿತ ಬೇಕೋ? ಎಂದು ಜನರು ಚಿಂತನೆ ನಡೆಸಲಿ ಎಂದು ಹೇಳಿದರು.
KC Rao initially supported one nation, one poll, proposed by the BJP, but did a U turn by dissolving the Assembly. He has forced a small state to bear the expense of Assembly and Lok Sabha polls. Why has he imposed colossal expenditure on the people of Telangana?: Shri @AmitShahpic.twitter.com/ub7HBhggQj
BJP will ensure that the state is a reflection of your dreams and aspirations and is rid of dynastic, communal and corrupt politics of TRS and AIMIM, who have prioritised their own welfare above the people of Telangana. pic.twitter.com/NdzEB3z2xT
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆಕೊಟ್ಟಿದ್ದ ಭಾರತ್ ಬಂದ್ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯಶಸ್ವಿಯಾಗಿದ್ದು, ಬೆಳಗ್ಗೆಯಿಂದಲೂ ಸಾರಿಗೆ ಸಂಪರ್ಕ, ವಹಿವಾಟು ಇಲ್ಲದೇ ಅಸ್ತವ್ಯಸ್ತ ಗೊಂಡಿದ್ದ ಸಾರ್ವಜನಿಕ ಜೀವನ ಸಂಜೆ ವೇಳೆಗೆ ಸಹಜ ಸ್ಥಿತಿಯತ್ತ ಮರಳಿತು.
ಬಂದ್ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳು, ಪಟ್ಟಣ ಹಾಗೂ ನಗರದಗಳಲ್ಲಿ ಪೊಲೀಸರು ಬೀಗಿ ಬಂದೋಬಸ್ತ್ ಅಳವಡಿಸಿದ್ದರು. ಇದರ ಹೊರತಾಗಿಯೂ ಕೆಲವೆಡೆ ಕಲ್ಲು ತೂರಾಟ ಸೇರಿದಂತೆ ಕೆಲ ಅಹಿತರಕರ ಘಟನೆಗಳು ವರದಿಯಾಗಿದೆ.
ಹಲವು ನಗರಗಳಲ್ಲಿ ಬೆಳಂಬೆಳಗ್ಗೆ ಪ್ರತಿಭಟನೆಗಳು ಶುರುವಾದವು. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಬೆಳಗ್ಗೆ 11 ಗಂಟೆಯಾಗುತ್ತಿದ್ದಂತೆ ಪ್ರತಿಭಟನೆಯ ಕಾವು ಏರತೊಡಗಿತು. ರಾಜ್ಯದೆಲ್ಲೆಡೆ ಗಲಾಟೆ, ಪ್ರತಿಭಟನೆಗಳು ನಡೆದವು. ಉಡುಪಿ ಸೇರಿದಂತೆ ಹಲವಡೆ ಗಲಾಟೆ ನಡೆದಿದ್ದು, ಕೆಲವು ಕಡೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಲಾಯಿತು. ಉಡುಪಿಯ ಬನ್ನಂಜೆಯಲ್ಲಿ ಅಂಗಡಿ ಬಂದ್ ಮಾಡಿಸುವ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು, ಬಿಜೆಪಿ ಜಿಲ್ಲಾಧ್ಯಕ್ಷ ಪ್ರಭಾಕರ್ ತಲೆಗೆ ಗಾಯವಾಗಿತ್ತು. ಬಳಿಕ ಗುಂಪು ಚದುರಿಸಲು ಎಸ್ಪಿ ಸೇರಿದಂತೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದರು. ಸದ್ಯ ನಾಳೆ ಬೆಳಗ್ಗೆ 6 ಗಂಟೆವರೆಗೆ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮೋದಿ ಅಧಿಕಾರಕ್ಕೆ ಬಂದ 4 ವರ್ಷ 5 ತಿಂಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೈಲ ದರ ಏರಿಕೆ ಬಗ್ಗೆ ಒಂದೂ ಮಾತು ಮಾತನಾಡಿಲ್ಲ. ಪೆಟ್ರೋಲ್ ಡೀಸೆಲ್ ಮೇಲೆ ತೆರಿಗೆ ದರ ಏರಿಸಿ 11 ಲಕ್ಷ ಕೋಟಿ ರೂ. ಹಣ ಪಡೆದಿದ್ದೀರಿ ಆ ಹಣ ಎಲ್ಲಿ ಹೋಯಿತು ಎಂದು ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು. ಈ ಹೋರಾಟಕ್ಕೆ ಪ್ರಧಾನಿ ಮೋದಿ ಸ್ಪಂದಿಸದಿದ್ದರೆ ಮತ್ತೊಂದು ಬ್ರಹ್ಮಾಸ್ತ್ರ ಬಿಡಲಿದ್ದೇವೆ ಎಂದು ಮಾಜಿಸ ಸಚಿವ ಎಚ್.ಕೆ.ಪಾಟೀಲ್ ಎಚ್ಚರಿಸಿದರು. ಇಂದು ಕರೆ ನೀಡಿರುವ ಬಂದ್ ಚುನಾವಣೆ ಪ್ರೇರಿತದ ದುರುದ್ದೇಶದ ಬಂದ್ ಬಿಜೆಪಿ ರಾಜ್ಯಾಧ್ಯಲ್ಷ ಬಿಎಸ್ ಯಡಿಯೂರಪ್ಪ, ಉದಾಸಿ, ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಬೆಂಗಳೂರು ಸ್ತಬ್ಧ: ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಜನರು ಮನೆಯಿಂದ ಹೊರಬಾರದೇ ರಸ್ತೆಗಳು ಬಿಕೋ ಎನ್ನುತ್ತಿತ್ತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿ ಏರಿ ಪ್ರತಿಭಟನೆ ನಡೆಸಿ ಬಳಿಕ ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಟೌನ್‍ಹಾಲ್‍ನಿಂದ ರಾಜಭವನದವರೆಗೆ ಜೆಡಿಎಸ್ ಪಾದಯಾತ್ರೆ ನಡೆಸಲು ಯತ್ನಿಸಿತ್ತು. ಆದರೆ ಈ ಪ್ರತಿಭಟನೆಗೆ ರಾಜ್ಯ ಜೆಡಿಎಸ್ ಅಧ್ಯಕ್ಷರೇ ಗೈರಾಗಿದ್ದರು. ಪ್ರತಿ ಪ್ರತಿಭಟನ ಸ್ಥಳಕ್ಕೆ ಎಂಎಲ್‍ಸಿ ಶರವಣ ಕುದುರೆ ಏರಿ ಬಂದು ಗಮನ ಸೆಳೆದರು. ಮತ್ತೊಂದೆಡೆ ಕನ್ನಡ ಪರ ಸಂಘಟನೆಗಳಾದ ಕರವೇ ನಾರಾಯಣ ಗೌಡ ಬಣ ಮೌರ್ಯ ವೃತ್ತದಲ್ಲಿ, ಪ್ರವೀಣ್ ಕುಮಾಣ ಮೇಖ್ರಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಇಲ್ಲಿಯೂ ಪೊಲೀಸರು ಪ್ರತಿಭಟನಾಕಾರನ್ನು ತಡೆದರು. ಪ್ರತಿಭಟನೆ ವೇಳೆ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಎಮ್ಮೆ ಏರಿ ಪ್ರತಿಭಟಿಸಿದರು.
ದುಪ್ಪಟ್ಟು ವಸೂಲಿ: ಬಂದ್ ಅನ್ನು ಬಂಡವಾಳ ಮಾಡಿಕೊಂಡ ಖಾಸಗಿ ಬಸ್‍ಗಳು ದುಪ್ಪಟ್ಟು ಹಣ ವಸೂಲಿ ಮಾಡಿದರೆ, ಓಲಾ, ಊಬರ್ ಕ್ಯಾಬ್ ಸಂಘದ ಸದಸ್ಯರು ಕಾರಿಗೆ ಹಗ್ಗ ಕಟ್ಟಿ ಎಳೆದು ಪ್ರತಿಭಟನೆ ನಡೆಸಿದರು. ಭಾರತ್ ಬಂದ್ ಕಾರಣ ಬೇರೆ ಊರಿಂದ ಬಂದ ಸಾರ್ವಜನಿಕರು ಬೆಂಗಳೂರು ಸೇರಿದಂತೆ ಹಲವು ಬಸ್ ಇಲ್ಲದೇ ಪರದಾಡಿದರು. ಮಧ್ಯಾಹ್ನ 3 ಗಂಟೆ ಬಳಿ ನಗರಗಳುಸ ಯಥಾ ಸ್ಥಿತಿಗೆ ತಲುಪಿತ್ತು. ಬಂದ್ ನಿಂದ ಬೆಳಗ್ಗೆ ಇಂದ ರಸ್ತೆಗಳಿಯದ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಂಚಾರ ಆರಂಭವಾಯಿತು. ಮಾಲ್‍ಗಳು, ಚಿತ್ರಮಂದಿರಗಳು ಸಂಜೆ ವೇಳೆಗೆ ಪುನರ್ ಆರಂಭವಾದವು.
ಹೈದರಾಬಾದ್: ರಾಜಸ್ಥಾನ ಸರ್ಕಾರದ ಬಳಿಕ ಆಂಧ್ರಪ್ರದೇಶ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 2 ರೂ. ಖಡಿತಗೊಳಿಸಿದೆ.
ಈ ನಿರ್ಧಾರದಿಂದ ಸರ್ಕಾರಕ್ಕೆ 1,120 ಕೋಟಿ ರೂ. ಅಧಿಕ ಹೊರೆ ಆಗಲಿದ್ದು, ಸಿಎಂ ಚಂದ್ರಬಾಬು ನಾಯ್ಡು ಈ ಕುರಿತು ಘೋಷಣೆ ಮಾಡಿದ್ದಾರೆ. ಸದ್ಯ ಸರ್ಕಾರ ನೀಡಿರುವ ಆದೇಶ ನಾಳೆಯಿಂದಲೇ ಜಾರಿ ಆಗಲಿದೆ.
Andhra Pradesh CM Chandrababu Naidu announces a reduction in petrol and diesel price by Rs 2 each, in the state. (File pic) pic.twitter.com/SDX2sA8eez
ರಾಜಸ್ಥಾನ ಸರ್ಕಾರ ಭಾನುವಾರವಷ್ಟೇ ಪೆಟ್ರೋಲ್ ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ಶೇ.4 ರಷ್ಟು ಇಳಿಕೆ ಮಾಡಿತ್ತು. ಇದರಿಂದ ಶೇ.30 ರಷ್ಟಿದ್ದ ಪೆಟ್ರೋಲ್ ಮೇಲಿನ ವ್ಯಾಟ್ ಶೇ.26ಕ್ಕೆ ಇಳಿಕೆಯಾಗಿತ್ತು. ಇತ್ತ ಡೀಸೆಲ್ ಮೇಲಿನ ಶೇ.22 ವ್ಯಾಟ್ ಶೇ. 18 ಇಳಿಕೆಯಾಗಿತ್ತು.
ಕರ್ನಾಟಕದಲ್ಲೂ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಕೆಯಾಗುವ ಸಾಧ್ಯತೆಯಿದ್ದು, ಇನ್ನು ಈ ಕುರಿತು ಅಧಿಕೃತವಾಗಿ ಸರ್ಕಾರ ಘೋಷಣೆ ಮಾಡದೆ ಇದ್ದರೂ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಕುಮಾರಸ್ವಾಮಿ ದೆಹಲಿಯಲ್ಲಿ ಹೇಳಿದ್ದಾರೆ.
ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆಗಳು ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ 10 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಬಂದ್ ಗೆ ಕರೆ ನೀಡಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲಗಳ ಬೆಲೆಗಳಿಂದಾಗಿ ಜನಸಾಮಾನ್ಯ ಸುಟ್ಟು ಹೋಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಇದರ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ ದೇಶವ್ಯಾಪಿ ಪ್ರತಿಭಟನೆ ನಡೆಸಿ ಭಾರತ್ ಬಂದ್ ನಡೆಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?
A protest will be called on September 10 against this fuel loot by the Central Govt: Randeep Surjewala,Congress pic.twitter.com/6pyHpuwQ2q
ಕೇಂದ್ರ ಸರ್ಕಾರ ತೈಲ ದರ ಏರಿಕೆ ಮಾಡುವ ಮೂಲಕ 11 ಲಕ್ಷ ಕೋಟಿ ರೂಪಾಯಿಯನ್ನು ಕೊಳ್ಳೆಹೊಡೆದಿದೆ. ಶೀಘ್ರವೇ ಕೇಂದ್ರ ತೆರಿಗೆ ಹಾಗೂ ಅಬಕಾರಿ ಸುಂಕವನ್ನು ರಾಜ್ಯಗಳಲ್ಲಿ ಕಡಿತಗೊಳಿಸಬೇಕು. ಹಾಗೆಯೇ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಸಹ ಜಿಎಸ್‍ಟಿ ವ್ಯಾಪ್ತಿಗೆ ಒಳಪಡಿಸಬೇಕೆಂದು ಆಗ್ರಹಿಸುತ್ತೇವೆ. ಇದರಿಂದಾಗಿ ಜನಸಾಮಾನ್ಯರ ಮೇಲಿನ ಭಾರ ಸ್ವಲ್ಪವಾದರೂ ಕಡಿಮೆಯಾಗುತ್ತದೆ. ಹೀಗಾಗಿ ಭಾರತ್ ಬಂದ್‍ಗೆ ಎಲ್ಲಾ ವಿರೋಧ ಪಕ್ಷದ ನಾಯಕರು ಸಹ ಬೆಂಬಲ ನೀಡಬೇಕು. ಅಲ್ಲದೇ ಎಲ್ಲಾ ಎನ್‍ಜಿಓ ಹಾಗೂ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿಕೊಂಡರು.
ಈ ವೇಳೆ ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಆಶೋಕ್ ಗೆಹ್ಲೋಟ್ ಮಾತನಾಡಿ, ನಾವು ಭಾರತ್ ಬಂದ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್ಚರಿಸಬೇಕಾಗಿದೆ. ಇಂಧನ ಬೆಲೆಗಳು ಗಗನಕ್ಕೇರಿದ್ದರೂ ಅವರನ್ನು ಸುಮ್ಮನೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?
ಭಾರತ್ ಬಂದ್ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪೆಟ್ರೋಲ್ ಹಾಗೂ ಡಿಸೇಲ್ ದರಗಳು ಗಗನಕ್ಕೆ ಏರಿಕೆಯಾಗುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಹೃದಯ ಇಲ್ಲದಂತೆ, ಕರುಣೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಬೆರೆ ಏರಿಕೆ ಖಂಡಿಸಿ ಇದೇ ಸೆಪ್ಟೆಂಬರ್ 10ಕ್ಕೆ ಕಾಂಗ್ರೆಸ್ ವತಿಯಿಂದ ರಾಷ್ಟ್ರವ್ಯಾಪಿ ಭಾರತ್ ಬಂದ್ ನಡೆಸಲು ತೀರ್ಮಾಸಿದ್ದೇವೆ ಎಂದು ಹೇಳಿದರು.