Tag: Funaral

  • ರಜೆಗೆ ಬಂದ ಯೋಧ ಬೈಕ್ ಅಪಘಾತದಲ್ಲಿ ಸಾವು- ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

    ರಜೆಗೆ ಬಂದ ಯೋಧ ಬೈಕ್ ಅಪಘಾತದಲ್ಲಿ ಸಾವು- ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

    ಚಿಕ್ಕೋಡಿ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ ಬೈಕ್‌ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬಳ್ಳಿಗೆರೆ ಗ್ರಾಮದಲ್ಲಿ ನಡೆದಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

    ಅಥಣಿ ತಾಲೂಕಿನ ಬಳ್ಳಿಗೆರಿ ಗ್ರಾಮದ ನಿವಾಸಿ ಶಂಕರ ಮಹಾಲಿಂಗಪ್ಪ ಪಾಟೀಲ (32) ಯೋಧ ಮೃತಪಟ್ಟವರು. ಶುಕ್ರವಾರ ರಾತ್ರಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಕ್ರಾಸ್ ಹತ್ತಿರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಶನಿವಾರದಂದು ಸ್ವಗ್ರಾಮಕ್ಕೆ ಪ್ರಾರ್ಥಿವ ಶರೀರ ತರಾಲಾಯಿತು. ಗ್ರಾಮದ ಜನರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗಾವಿ ಜಿಲ್ಲಾಡಳಿತ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಿತು. ಇದನ್ನೂ ಓದಿ: ವಾರದಲ್ಲಿ ಮೂರನೇ ಬಾರಿ ಗೌತಮ್‌ ಗಂಭೀರ್‌ಗೆ ಐಸಿಸ್‌ನಿಂದ ಕೊಲೆ ಬೆದರಿಕೆ

    ಕಳೆದ 12 ದಿನದ ಹಿಂದೆ ರಜೆ ತೆಗೆದುಕೊಂಡು ಸ್ವಗ್ರಾಮಕ್ಕೆ ಶಂಕರ ಆಗಮಿಸುತ್ತಿದ್ದರು. ಸಂಬಂಧಿಕರ ಮನೆಗೆ ಭೇಟಿ ನೀಡಿ ಬರುವಾಗ ಲೋಕಾಪುರ ಕ್ರಾಸ್ ಹತ್ತಿರ ಜೆಸಿಬಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಒಮಿಕ್ರಾನ್ ಆತಂಕ – ಮಾಸ್ಕ್ ಇಲ್ಲದವರಿಗೆ ಮೆಟ್ರೋಗೆ ನೋ ಎಂಟ್ರಿ

  • ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಗುಂಡು ಹಾರಿಸಿ ಗೌರವ!

    ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಗುಂಡು ಹಾರಿಸಿ ಗೌರವ!

    ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಅವರ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಿದ್ದಾರೆ.

    ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಅನೇಕ ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2:10ಕ್ಕೆ ಮೃತಪಟ್ಟಿದ್ದು, ಅಂತ್ಯಕ್ರಿಯೆ ರಾಮನಗರ ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ನೆರವೇರಿತು.

    ಕಿರಿಯ ಮಗ ರಿಕಿ ರೈ ತಂದೆ ಮುತ್ತಪ್ಪ ರೈ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಮುತ್ತಪ್ಪ ರೈ ಬೆಂಬಲಿಗರು ಕುಶಾಲತೋಪಿನ ರೀತಿಯಲ್ಲಿ ಐದು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದ್ದ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್‍ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಮುತ್ತಪ್ಪ ರೈ ಕೆಲವು ತಿಂಗಳಿನಿಂದ ಉತ್ತಮ ಆಡಳಿತ ನಡೆಸುತ್ತಿದ್ದರು. ಅದರಲ್ಲೂ ಗ್ರಾಮೀಣ ಭಾಗದ ಕ್ರೀಡಾಪಟುಗಳ ನೆರವಿಗೆ ನಿಲ್ಲುವುದರ ಮೂಲಕ ಉತ್ತಮ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಪೂರ್ಣ ವಿಶ್ರಾಂತಿಯಲ್ಲಿದ್ದರು.

    ವೈದ್ಯರು ವಿಶ್ರಾಂತಿ ಸೂಚಿಸಿದ್ದರಿಂದ ತಮ್ಮ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ತೊರೆದಿದ್ದರು. ಕೆಎಸ್‍ಎಎ ಜೊತೆಗೆ ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.