Tag: Funeral

  • ಮೈಸೂರು | ಬ್ರಾಹ್ಮಣ ಸಂಪ್ರದಾಯದಂತೆ ಇಂದು ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ

    ಮೈಸೂರು | ಬ್ರಾಹ್ಮಣ ಸಂಪ್ರದಾಯದಂತೆ ಇಂದು ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ

    – ಕಾದಂಬರಿ ಜಗತ್ತಿನ ಅನಭಿಷಿಕ್ತ ದೊರೆ ಇನ್ನು ನೆನಪು

    ಮೈಸೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಎಸ್.ಎಲ್ ಭೈರಪ್ಪ ವಿಧಿವಶ ಹಿನ್ನೆಲೆ, ಮೈಸೂರಿನಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ಪುತ್ರನ ಅಂತ್ಯಕ್ರಿಯೆ ನೆರವೇರಲಿದೆ.

    ಪ್ಯಾನ್ ಇಂಡಿಯಾ ನಾವಲಿಸ್ಟ್ ಭೈರಪ್ಪ ಈ ಇಹಲೋಕ ತ್ಯಜಿಸಿದ್ದಾರೆ. ತಮ್ಮ ಬರವಣಿಗೆಯ ಮೂಲಕವೇ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದ 94 ವರ್ಷದ ಸಾಹಿತಿ ಮೊನ್ನೆ ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದರು. ಇವರ ಸಾವಿಗೆ ಇಡೀ ಕರುನಾಡೇ ಮರುಕ ಪಟ್ಟಿತು, ಇಂದು ಇವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ, ಈಗಾಗಲೇ ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಂಡಿದೆ. ಇಂದು 11:30 ಗಂಟೆಗೆ ಬ್ರಾಹ್ಮಣ ಸಂಪ್ರದಾಯದಂತೆ ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ ನೆರವೇರಲಿದೆ. ಇದನ್ನೂ ಓದಿ: S L Bhyrappa | ಶುಕ್ರವಾರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ

    ಪದ್ಮಭೂಷಣ ಎಸ್‌ಎಲ್ ಭೈರಪ್ಪನವರ ಸಾವಿಗೆ ಇಡೀ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟವಾಗಿದ್ದು ಇವರ ಅಂತಿಮ ದರ್ಶನಕ್ಕೆ ಇವರ ಓದುಗ ಬಳಗ ಮತ್ತು ಅಭಿಮಾನಿಗಳು ಸಾಗರದಂತೆ ಹರಿದು ಬಂದಿತು. ನಿನ್ನೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಅಂತಿಮ ದರ್ಶನ ಬಳಿಕ ಮೈಸೂರಿಗೆ ಪಾರ್ಥಿವ ಶರೀರ ತಂದು ಮೈಸೂರಿನ ಕಲಾಮಂದಿರಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಂತರ ಮೃತದೇಹವನ್ನ ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಶವಗಾರದಲ್ಲಿ ಇರಿಸಲಾಯಿತು. ಇಂದು ಬೆಳಗ್ಗೆ 8 ಗಂಟೆಗೆ ಆಸ್ಪತ್ರೆಯಿಂದ ನೇರವಾಗಿ ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಮನೆಯ ಬಳಿಯೂ ಕೆಲಹೊತ್ತು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    ಬೆಳಗ್ಗೆ 10.30ರ ವರೆಗೂ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಮಾಡಿದ್ದು, ಬಳಿಕ ಕುಟುಂಬಸ್ಥರಿಂದ ಅಂತಿಮ ಪೂಜೆ ವಿಧಿವಿಧಾನ ನಡೆಯಲಿದೆ. ನಂತರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ, ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಲಿದೆ. ಇದನ್ನೂ ಓದಿ: ಮೈಸೂರಿನಲ್ಲೇ ಎಸ್.ಎಲ್ ಭೈರಪ್ಪ ಸ್ಮಾರಕ: ಸಿಎಂ ಘೋಷಣೆ

    ಹಿರಿಯ ಸಾಹಿತಿಗಳಿಗೆ ಜಿಲ್ಲಾಡಳಿತ ಸಕಲ ಸರ್ಕಾರಿ ಗೌರವ ಗಳೊಂದಿಗೆ ಅಂತಿಮ ನಮನ ಸಲ್ಲಿಸಲಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಕೂಡ ಸೂಚನೆ ನೀಡಿದ್ದು, ಸಿದ್ಧತೆಗಳು ಕೂಡ ಆಗಿದೆ. ಇನ್ನೂ ಇದೇ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಸ್ನೇಹಿತರು, ಕುಟುಂಬಸ್ಥರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ.

    ಒಟ್ಟಾರೆ ಎಸ್‌.ಎಲ್ ಭೈರಪ್ಪ ನವರ 25 ಕಾದಂಬರಿ, 6 ಪ್ರಬಂಧಗಳು, 1 ಆತ್ಮಚರಿತ್ರೆ, 4 ಚಲನಚಿತ್ರವಾದ ಕಾದಂಬರಿಗಳನ್ನು ಈ ಕನ್ನಡ ಸಾಹಿತ್ಯಕ್ಕೆ ನೀಡಿ ಜನಮಾನಸದಲ್ಲಿ ಅಜರಾಮರರಾಗಿ ಉಳಿದುಕೊಂಡಿದ್ದಾರೆ. ದಶಕಗಳ ಕಾಲ ಸಾಹಿತ್ಯ ಲೋಕದ ದಿಗ್ಗಜರಲ್ಲಿ ಒಬ್ಬರಾಗಿದ್ದ ಎಸ್‌ಎಲ್ ಭೈರಪ್ಪರ ಅಗಲಿಕೆ ನಿಜಕ್ಕೂ ತುಂಬಲಾರದ ನಷ್ಟವೇ ಸರಿ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

  • ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ

    ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ

    -ಸಿಎಂ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವ ಕಿರಣ್ ಭಾಗಿ

    ದಿಸ್ಪುರ್: ಸಿಂಗಾಪುರ್‌ದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಮೃತಪಟ್ಟಿದ್ದ ಅಸ್ಸಾಂ (Assam) ಮೂಲದ ಖ್ಯಾತ ಗಾಯಕ ಜುಬೀನ್ ಗಾರ್ಗ್ (Zubeen Garg) ಅಂತ್ಯಕ್ರಿಯೆ (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

    ಅಸ್ಸಾಂನ ಗುವಾಹಟಿಯಲ್ಲಿ ಕುಟುಂಬಸ್ಥರು, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಸರ್ಕಾರಿ ಗೌರವದೊಂದಿಗೆ ಗಾರ್ಗ್ಗೆ ಅಂತಿಮ ವಿದಾಯ ಹೇಳಲಾಯಿತು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು, ಸರ್ಬಾನಂದ ಸೋನಾವಾಲ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ

    ಅಂತಿಮಯಾತ್ರೆಗೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಸೇರಿದ್ದರು. ಈ ಮೂಲಕ ವಿಶ್ವದಲ್ಲೇ ಅತೀ ಹೆಚ್ಚು ಜನರು ಸೇರಿದ 4ನೇ ಅಂತಿಮ ಯಾತ್ರೆಯೆಂದು ದಾಖಲೆ ನಿರ್ಮಿಸಿ, ಲಿಮ್ಕಾ ಬುಕ್ ಆಫ್ ರೆಕಾಡ್ಸ್ಗೆ ಸೇರ್ಪಡೆಯಾಗಿದೆ. ಮೈಕೆಲ್ ಜಾಕ್ಸನ್, ಪೋಪ್ ಫ್ರಾನ್ಸಿಸ್, ರಾಜಕುಮಾರಿ ಡಯಾನಾ ಮತ್ತು ರಾಣಿ ಎಲಿಜಬೆತ್ ಅವರಿಗೆ ನೀಡಿದಂತೆ ಇದು ಕೂಡ ಸ್ಮರಣೀಯ ವಿದಾಯ ಎಂದು ಗುರುತಿಸಲಾಗಿದೆ.

    ಇನ್ನು ಅಂತಿಮಯಾತ್ರೆಯಲ್ಲಿ ಜುಬೀನ್‌ಗೆ ಜಯವಾಗಲಿ, ಜುಬೀನ್ ದೀರ್ಘಕಾಲ ಉಳಿಯಲಿ ಎಂಬ ಘೋಷ ವಾಕ್ಯಗಳು ಕೇಳಿಬಂದವು. ಗಾರ್ಗ್ ಸಾವಿನ ಹಿಂದೆ ಯಾವುದೇ ಅಪರಾಧ ಕೃತ್ಯಗಳು ನಡೆದಿಲ್ಲ ಎಂದು ಖಚಿತಪಡಿಸಲು ಸರ್ಕಾರ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲು ಸೂಚಿಸಿತ್ತು. ಅದರಂತೆ 2ನೇ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಯಿತು.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ

     

  • ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ

    ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ

    ಅತೀ ಹೆಚ್ಚು ಜನ ಭಾಗಿಯಾದ ವಿಶ್ವದ 4ನೇ ಅಂತಿಮ ಯಾತ್ರೆ

    ದಿಸ್ಪುರ್: ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ (Zubeen Garg) ಅವರ ಅಂತಿಮ ಯಾತ್ರೆ ಸೆ.21ರಂದು ಗುವಾಹಟಿಯಲ್ಲಿ ನಡೆಯಿತು. ಈ ವೇಳೆ ಲಕ್ಷಾಂತರ ಜನರು ಭಾಗಿಯಾಗಿದ್ದರು. ಈ ಮೂಲಕ ವಿಶ್ವದಲ್ಲೇ ಅತೀ ಹೆಚ್ಚು ಜನರು ಸೇರಿದ 4ನೇ ಅಂತಿಮ ಯಾತ್ರೆ ಎಂದು ದಾಖಲೆ ನಿರ್ಮಿಸಿ, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ( Limca Book of Records) ಸೇರ್ಪಡೆಯಾಗಿದೆ.

    ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪ್ರಕಾರ, ಗಾರ್ಗ್ ಅವರ ಅಂತಿಮ ಯಾತ್ರೆ ವೇಳೆ ಲಕ್ಷಾಂತರ ಜನರು ಭಾಗಿಯಾಗಿದ್ದರು. ಈ ಮೂಲಕ ಮೈಕೆಲ್ ಜಾಕ್ಸನ್, ಪೋಪ್ ಫ್ರಾನ್ಸಿಸ್, ರಾಜಕುಮಾರಿ ಡಯಾನಾ ಮತ್ತು ರಾಣಿ ಎಲಿಜಬೆತ್ ಅವರಿಗೆ ನೀಡಿದಂತೆ ಇದು ಕೂಡ ಸ್ಮರಣೀಯ ವಿದಾಯ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ

    ಅಂತಿಮ ಯಾತ್ರೆ ವೇಳೆ ಜನಸಾಗರವೇ ಹರಿದುಬಂದಿತ್ತು. ಅಭಿಮಾನಿಗಳು ಕಿಕ್ಕಿರಿದು ಅವರ ಮುಖವನ್ನು ಕೊನೆ ಬಾರಿ ನೋಡಲು ಕಾಯುತ್ತಿದ್ದರು. ಮೆರವೆಣಿಗೆಯಲ್ಲಿ ಸಂಪೂರ್ಣವಾಗಿ ಅವರ ಹಾಡುಗಳ ಸುರಿಮಳೆಯೇ ಸುರಿಯುವಂತೆ ಭಾಸವಾಗುತ್ತಿತ್ತು. ಕಿಂಗ್ ಆಫ್ ಹಮ್ಮಿಂಗ್ ಎಂದಲೇ ಹೆಸರು ಪಡೆದಿದ್ದ ಇವರ ಅಂತಿಮ ಯಾತ್ರೆ ಅಸ್ಸಾಮಿ ಸಂಗೀತ ಯುಗದ ಅಂತ್ಯವೆಂಬಂತೆ ಕಾಣುತ್ತಿತ್ತು.

    1972ರಲ್ಲಿ ಜನಿಸಿದ ಗಾರ್ಗ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಸಂಗೀತದಲ್ಲಿ ತಮ್ಮ ಹೆಸರನ್ನು ಅಚ್ಚಳಿಯಂತೆ ಮಾಡಿದ್ದಾರೆ. ಅಸ್ಸಾಂ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಸಿಂಗಾಪುರಕ್ಕೆ ತೆರಳಿದ್ದಾಗ ಜುಬೀನ್ ಗಾರ್ಗ್ ಅವರು ಸ್ಕೂಬಾ ಡೈವಿಂಗ್ ವೇಳೆ ಅವಘಡಕ್ಕೆ ಸಿಲುಕಿ ಗಂಭೀರ ಸ್ಥಿತಿಯಲ್ಲಿದ್ದರು. ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರೂ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.

    ಜುಬೀನ್ ಗರ್ಗ್ ಅಸ್ಸಾಮಿ ಮತ್ತು ಹಿಂದಿ ಮಾತ್ರವಲ್ಲದೆ, ಬಂಗಾಳಿ, ಮರಾಠಿ, ತಮಿಳು, ತೆಲುಗು ಮತ್ತು ನೇಪಾಳಿ ಸೇರಿದಂತೆ ಹಲವು ಭಾಷೆಗಳಿಗೆ ಹಾಡಿದ್ದಾರೆ. ತಮ್ಮ ಮೂರನೇ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು. ಅವರ ಮೊದಲ ಆಲ್ಬಂ ‘ಅನಾಮಿಕಾ’ 1992 ರಲ್ಲಿ ಬಿಡುಗಡೆಯಾಯಿತು. ‘ಮಾಯಾ’, ‘ಜುಬೀನೋರ್ ಗಾನ್’, ‘ಕ್ಸಾಬ್ಡಾ’, ‘ಪಾಖಿ’, ‘ಶಿಶು’, ‘ಜಂತ್ರ’ ಅವರ ಅತ್ಯಂತ ಪ್ರೀತಿಯ ಅಸ್ಸಾಮೀಸ್ ಆಲ್ಬಂಗಳಲ್ಲಿ ಕೆಲವು. ಅವರು ‘ದಿಲ್ ಸೆ’, ‘ವಾಸ್ತವ್’, ‘ಫಿಜಾ’, ‘ಅಶೋಕ’, ‘ಕಾಂಟೆ’, ‘ಗ್ಯಾಂಗ್‌ಸ್ಟರ್’, ‘ಕ್ರಿಶ್ 3’ ಮತ್ತು ಇನ್ನೂ ಹೆಚ್ಚಿನ ಹಿಂದಿ ಚಿತ್ರಗಳಿಗೂ ಹಾಡಿದ್ದಾರೆ. ಆದಾಗ್ಯೂ, ಗ್ಯಾಂಗ್‌ಸ್ಟರ್‌ಗಾಗಿ ಅವರು ಹಾಡಿದ್ದ ‘ಯಾ ಅಲಿ’ ಹಾಡು ಅವರಿಗೆ ಅಸ್ಸಾಂನ ಹೊರಗೂ ಜನಪ್ರಿಯತೆ ತಂದುಕೊಟ್ಟಿತು.ಇದನ್ನೂ ಓದಿ: ಸ್ಕೂಬಾ ಡೈವಿಂಗ್‌ ವೇಳೆ ಬಾಲಿವುಡ್‌ನ ಖ್ಯಾತ ಗಾಯಕ ಜುಬೀನ್ ಗಾರ್ಗ್ ಸಾವು

  • ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ

    ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ

    ಗಣಪ, ಕರಿಯಾ-2 ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರುಗಳಿಸಿದ್ದ ನಟ ಸಂತೋಷ್ ಬಾಲರಾಜ್ (Santosh Balaraj) ಅವರ ಅಂತ್ಯಕ್ರಿಯೆ ಇಂದು (ಆ.6) ಆನೇಕಲ್‌ನಲ್ಲಿ ನೆರವೇರಿತು.

    ನಟ ಸಂತೋಷ್ ಬಾಲರಾಜ್ ಅವರ ಹುಟ್ಟೂರು ಆನೇಕಲ್ (Anekal) ಪಟ್ಟಣದ ಸಂತವನ ಚಿನ್ನಪ್ಪನವರ ಪುಣ್ಯಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗಿತ್ತು. ಫಾದರ್ ಶಾಂತರಾಜು ಥಾಮಸ್ ಅವರು ಪಾರ್ಥಿವ ಶರೀರಕ್ಕೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಅಂತಿಮ ವಿಧಿ-ವಿಧಾನ ಪೂರ್ಣಗೊಳಿಸಿದರು. ಕ್ರಿಶ್ಚಿಯನ್ ಸಂಪ್ರದಾಯದಂತೆ ತಂದೆಯ ಸಮಾಧಿ ಪಕ್ಕದಲ್ಲಿಯೇ ನಟ ಸಂತೋಷ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.ಇದನ್ನೂ ಓದಿ: ಪ್ರಸಾದ್‌ ಯೋಜನೆಯಡಿ ಕೊಲ್ಲೂರು ದೇವಸ್ಥಾನ ಸೇರಿಸಿ: ನಿರ್ಮಲಾ ಸೀತಾರಾಮನ್‌ಗೆ ಬಿ.ವೈ.ರಾಘವೇಂದ್ರ ಮನವಿ

    ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಬಳಿಕ ಸಂತೋಷ್ ಅವರು ತೀವ್ರವಾಗಿ ಅಸ್ವಸ್ಥರಾಗಿದ್ದರು. ಮತ್ತೆ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ (ಆ.5) ನಿಧನರಾದರು.

    ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ

  • ಶನಿವಾರ ಕ್ಯಾಥೋಲಿಕ್ ಧರ್ಮಗುರು ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ

    ಶನಿವಾರ ಕ್ಯಾಥೋಲಿಕ್ ಧರ್ಮಗುರು ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ

    ವ್ಯಾಟಿಕನ್ ಸಿಟಿ: ಅನಾರೋಗ್ಯದಿಂದ ಸೋಮವಾರ ನಿಧನರಾದ ಕ್ರಿಶ್ಟಿಯನ್ ಕ್ಯಾಥೋಲಿಕ್ ಧರ್ಮಗುರು ಪೋಪ್ ಫ್ರಾನ್ಸಿಸ್  (Pope Francis) ಅವರ ಅಂತ್ಯಕ್ರಿಯೆ ಶನಿವಾರ (ಏ.26) ನಡೆಯಲಿದೆ.

    ವ್ಯಾಟಿಕನ್ ಸೆಂಟ್ ಪೀಟರ್ಸ್ ಬ್ಯಾಸಿಲಿಕಾದ ಎದುರು ಸ್ಥಳೀಯ ಕಾಲಮಾನ 10 ಗಂಟೆಗೆ ಪೋಪ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಫ್ರಾನ್ಸಿಸ್ ಅವರ ಇಚ್ಛೆಯಂತೆ ಮೃತದೇಹವನ್ನು ವ್ಯಾಟಿಕನ್ ಹೊರಗಡೆಯಿರುವ ಸೆಂಟ್ ಮೇರಿ ಬ್ಯಾಸಿಲಿಕಾದಲ್ಲಿ ಸಮಾಧಿ ಮಾಡಲಾಗುವುದು.ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಸುಮಾರು 1,200 ಪಾಕಿಸ್ತಾನಿ ಪ್ರಜೆಗಳು ಪತ್ತೆ – ಗಡೀಪಾರು ಪಕ್ರಿಯೆ ಶುರು

    ಇನ್ನು ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪೋಪ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಕೆಜೆ ಜಾರ್ಜ್, ಐವಾನ್ ಡಿಸೋಜಾ ಪಾಲ್ಗೊಳ್ಳುತ್ತಿದ್ದಾರೆ.

    ರೋಮನ್ ಕ್ಯಾಥೋಲಿಕ್ ಚರ್ಚ್ನ ಮೊದಲ ಲ್ಯಾಟಿನ್ ಅಮೆರಿಕದ ಧರ್ಮಗುರುಗಳಾದ ಪೋಪ್ ಅನಾರೋಗ್ಯದ ಕಾರಣ ಸತತ ಮೂರನೇ ವರ್ಷ ವಾರ್ಷಿಕ ಗುಡ್ ಫ್ರೈಡೇ ಮೆರವಣಿಗೆಯಲ್ಲಿ ಹಾಜರಾಗಿರಲಿಲ್ಲ. ಭಾನುವಾರ ಬೆಳಿಗ್ಗೆ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರೊಂದಿಗಿನ ಖಾಸಗಿ ಸಭೆಯಲ್ಲಿ ಪೋಪ್ ಕಾಣಿಸಿಕೊಂಡಿದ್ದರು. ವೈದ್ಯರು ಪೋಪ್ ಫ್ರಾನ್ಸಿಸ್ ಅವರಲ್ಲಿ ವಿಶ್ರಾಂತಿಯಲ್ಲಿರಬೇಕೆಂದು ಸೂಚಿಸಿದ್ದರೂ ಈಸ್ಟರ್ ಭಾನುವಾರದಂದು ಭಕ್ತರಿಗೆ ದರ್ಶನ ನೀಡಿದ್ದರು.ಇದನ್ನೂ ಓದಿ: ಪಹಲ್ಗಾಮ್‌ನಲ್ಲೊಬ್ಬ ಸೂಪರ್‌ ಹಿರೋ.. ಬಿಜೆಪಿ ಕುಟುಂಬ ಕಾಪಾಡಿದ ಕಾಶ್ಮೀರಿ ಮುಸ್ಲಿಂ!

  • ಒಂದೇ ಕುಟುಂಬದ 6 ಮಂದಿ ಸಾವು ಪ್ರಕರಣ – ಸ್ವಗ್ರಾಮದಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ

    ಒಂದೇ ಕುಟುಂಬದ 6 ಮಂದಿ ಸಾವು ಪ್ರಕರಣ – ಸ್ವಗ್ರಾಮದಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ

    ವಿಜಯಪುರ: ನೆಲಮಂಗಲ ಭೀಕರ ಅಪಘಾತದಲ್ಲಿ ಸಾವೀಗೀಡಾಗಿದ್ದ 6 ಜನರ ಮೃತದೇಹಗಳು ಮಹಾರಾಷ್ಟ್ರದ ಸ್ವಗ್ರಾಮಕ್ಕೆ ತಲುಪಿದ್ದು, ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ.

    ಇಂದು (ಡಿ.22) ಬೆಳಿಗ್ಗೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೃತದೇಹಗಳು ರವಾನೆಯಾಗಿವೆ. ಮೂರು ಅಂಬುಲೆನ್ಸ್ ಮೂಲಕ ಆರು ಮೃತದಹೇಗಳನ್ನು ಕರೆತರಲಾಗಿದೆ. ಮೃತದೇಹಗಳನ್ನು ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃತ ಚಂದ್ರಮ್ ಅವರ ಜಮೀನಿನಲ್ಲಿ ಲಿಂಗಾಯತ ಸಮಾಜದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.  ಮೃತದೇಹಗಳಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿದ ಬಳಿಕ ಬೆಂಕಿ ಸ್ಪರ್ಶಿಸುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು.ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ ಹಿಂದೆ ‘ನಂಬರ್‌ ಗೇಮ್’‌ – ಬಿಲ್‌ ಪಾಸ್‌ ಆಗುತ್ತಾ?

    ಘಟನೆ ಏನು?
    ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿತ್ತು. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್, ವೋಲ್ವೋ ಕಾರಿನ ಮೇಲೆ ಉರುಳಿದ್ದ ಪರಿಣಾಮ ಕಾರಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಬಲಿ ಆಗಿದ್ದರು. ಮೃತರನ್ನು 48 ವರ್ಷದ ಐಟಿ ಉದ್ಯಮಿ ಚಂದ್ರಮ್ ಯೇಗಪ್ಪಗೋಳ್, 42 ವರ್ಷದ ಗೌರಾಬಾಯಿ, 12 ವರ್ಷದ ದೀಕ್ಷಾ, 6 ವರ್ಷದ ಆರ್ಯ, ಜ್ಞಾನ್ ಏಗಪ್ಪ, 36 ವರ್ಷದ ವಿಜಯಲಕ್ಷ್ಮಿ ಎಂದು ಗುರುತಿಸಲಾಗಿದೆ.

    ವೀಕೆಂಡ್ ಇದ್ದ ಕಾರಣ ಚಂದ್ರಮ್ ಕುಟುಂಬ ಇತ್ತೀಚಿಗಷ್ಟೇ ಖರೀದಿಸಿದ್ದ ಹೊಸ ವೋಲ್ವೋ ಕಾರಿನಲ್ಲಿ ತಮ್ಮ ಊರಿಗೆ ಹೊರಟಿತ್ತು. ಆದರೆ ಟೀ.ಬೇಗೂರು ಸಮೀಪ ಕಂಟೇನರ್ ಉರುಳಿ, ಕಾರಲ್ಲಿಯೇ ಎಲ್ಲರೂ ಸಾವನ್ನಪ್ಪಿದ್ದಾರೆ. ದಾಬಸ್‌ಪೇಟೆಯಿಂದ ಬೆಂಗಳೂರಿಗೆ ಕಂಟೇನರ್ ಬರುತ್ತಿತ್ತು. ತನ್ನ ಮುಂದಿನ ಕಾರನ್ನು ಸೇಫ್ ಮಾಡಲು ಹೋಗಿ ಹೀಗಾಗಿದೆ ಎಂದು ಚಾಲಕ ಹೇಳಿಕೊಂಡಿದ್ದಾನೆ. ಈ ಅಪಘಾತದ ಪರಿಣಾಮ ವೋಲ್ವೋ ಮುಂದಿದ್ದ ವಾಹನಗಳು ಸಡನ್ ಬ್ರೇಕ್ ಹಾಕಿದಕ್ಕೆ ಹಲವು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ. 2 ಲಾರಿ, 2 ಕಾರು, ಸ್ಕೂಲ್ ಬಸ್ ಒಂದಕ್ಕೊಂದು ಟಚ್ ಆಗಿವೆ.

    ಸರಣಿ ಅಪಘಾತದಿಂದಾಗಿ ಬೆಂಗಳೂರು-ತುಮಕೂರು ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ಸವಾರರು ಪರದಾಡಿದರು. ಇನ್ನೂ ಮೃತ ಉದ್ಯಮಿ ಚಂದ್ರಮ್ ಮೂಲತಃ ಮಹಾರಾಷ್ಟ್ರದ ಜತ್ ತಾಲೂಕಿನ ಮೊರಬಗಿ ಗ್ರಾಮದವರು. ಬೆಂಗಳೂರಿನಲ್ಲಿ ಐಎಎಸ್‌ಟಿ ಎಂಬ ಸಂಸ್ಥೆ ಸ್ಥಾಪಿಸಿ, 300 ಜನಕ್ಕೆ ಕೆಲಸ ಕೊಟ್ಟಿದ್ದರು. ಇದೀಗ ಸಂಸ್ಥೆ ಸಿಬ್ಬಂದಿ ದಿಕ್ಕು ತೋಚದಂತಾಗಿದ್ದು, ಕುಟುಂಬಸ್ಥರು ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ.ಇದನ್ನೂ ಓದಿ: ಅಕಸ್ಮಾತ್ ಹುಂಡಿಗೆ ಬಿದ್ದ ಐಫೋನ್ ದೇವಸ್ಥಾನದ ಪಾಲು – ವಾಪಸ್ ಕೊಡಲ್ಲ ಎಂದ ಮಂಡಳಿ

  • ಸೋಮನಹಳ್ಳಿಯ ಕಾಫಿಡೇ ಬಳಿಯೇ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ ಯಾಕೆ?

    ಸೋಮನಹಳ್ಳಿಯ ಕಾಫಿಡೇ ಬಳಿಯೇ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ ಯಾಕೆ?

    ಮಂಡ್ಯ: ಮಂಡ್ಯ (Mandya) ಜಿಲ್ಲೆಯ ಮದ್ದೂರು (Maddur) ತಾಲೂಕಿನ ಸೋಮನಹಳ್ಳಿಯಲ್ಲಿ (Somanahalli) ಇಂದು (ಡಿ.11) ಮಾಜಿ ಸಿಎಂ ಎಸ್‌ಎಂ ಕೃಷ್ಣ (SM Krishna) ಅವರ ಅಂತ್ಯಸಂಸ್ಕಾರ ನಡೆಯಲಿದೆ.

    ಎಸ್‌ಎಂಕೆ ಅವರ ಇಷ್ಟದ ಸ್ಥಳ ಸೋಮನಹಳ್ಳಿ ಹೊರವಲಯದ ಕಾಫಿ ಡೇ (Cafe Coffee Day) ಆವರಣದಲ್ಲಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಸಂಜೆ 4 ಗಂಟೆಯ ನಂತರ ಅಂತ್ಯಸಂಸ್ಕಾರ ನಡೆಯಲಿದೆ.ಇದನ್ನೂ ಓದಿ: ಯಾರನ್ನೂ ದ್ವೇಷಿಸಲಿಲ್ಲ – ಎಸ್.ಎಂ ಕೃಷ್ಣ ಅಗಲಿಕೆಯ‌ ಕುರಿತು ನೋವು ಹಂಚಿಕೊಂಡ ನಟಿ ರಮ್ಯಾ

    ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ?
    ಎಸ್‌ಎಂ ಕೃಷ್ಣ ಅವರ ಮೂಲ ಮನೆ ಸೋಮನಹಳ್ಳಿ ಒಳಗಡೆ ಇದೆ. ಕೃಷ್ಣ ಅವರು ರಾಜ್ಯ ಸಚಿವರಾಗಿದ್ದ ವೇಳೆ ತಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಒಂದು ಗೆಸ್ಟ್ ಹೌಸ್ ನಿರ್ಮಿಸಿದ್ದರು.

    ಬೆಂಗಳೂರಿನಲ್ಲಿ (Bengaluru) ನೆಲೆಸಿದ್ದ ಕಾರಣ ಈ ಮನೆಯನ್ನು ಹೆಚ್ಚಾಗಿ ಕೃಷ್ಣ ಬಳಸುತ್ತಿರಲಿಲ್ಲ. ಆದರೆ ಆ ಮನೆಯ ಒಂದು ಕೋಣೆ ಎಸ್‌ಎಂಕೆ ಅವರ ನೆಚ್ಚಿನ ಜಾಗವಾಗಿತ್ತು. ಮಂಡ್ಯ, ಮೈಸೂರಿಗೆ ಭೇಟಿ ಕೊಟ್ಟಾಗ ಇದೇ ಮನೆಗೆ ಬಂದು ಆ ಕೋಣೆಯಲ್ಲಿಯೇ ಉಳಿದುಕೊಳ್ಳುತ್ತಿದ್ದರು.

    ಅದೇ ನೆಚ್ಚಿನ ಮನೆಯನ್ನು ತಮ್ಮ ಅಳಿಯ ಸಿದ್ದಾರ್ಥ ಅವರಿಗೆ ಕಾಫಿ ಡೇಗಾಗಿ ಬಿಟ್ಟುಕೊಟ್ಟಿದ್ದರು. ಕಾಫಿ ಡೇಗೆ ನವೀಕರಣ ಮಾಡಿದ್ದರೂ ಕೃಷ್ಣ ಅವರ ಪ್ರೀತಿಯ ಕೊಠಡಿಯನ್ನು ಅವರಿಗಾಗಿಯೇ ಬಿಡಲಾಗಿತ್ತು. ಮೈಸೂರು, ಮಂಡ್ಯ ಕಡೆಗೆ ಹೋದಾಗ ಕಾಫಿ ಡೇಯಲ್ಲಿರುವ ಆ ಒಂದು ಕೋಣೆಯಲ್ಲಿ ಕಾಲ ಕಳೆದು ಬಳಿಕ ಮನೆಗೆ ತೆರಳುತ್ತಿದ್ದರು. ಇದೀಗ ಅದೇ ಕಾಫಿ ಡೇ ಆವರಣದಲ್ಲಿ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಜಿಲ್ಲಾಡಳಿತ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಸಿದೆ.ಇದನ್ನೂ ಓದಿ: ಯುದ್ಧಪೀಡಿತ ಸಿರಿಯಾದಿಂದ 75 ಭಾರತೀಯರು ಸ್ಥಳಾಂತರ

  • ರತನ್ ಟಾಟಾ ನಿಧನ; ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ – ಏಕನಾಥ್ ಶಿಂಧೆ

    ರತನ್ ಟಾಟಾ ನಿಧನ; ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ – ಏಕನಾಥ್ ಶಿಂಧೆ

    – ಇಡೀ ದಿನ ಮಹಾರಾಷ್ಟ್ರದಲ್ಲಿ ಶೋಕಾಚರಣೆ

    ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಅಂತ್ಯಕ್ರಿಯೆಯನ್ನು (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಹೇಳಿದ್ದಾರೆ.

    ಅನಾರೋಗ್ಯ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಉದ್ಯಮಿ ರತನ್‌ ಟಾಟಾ ವಿಧಿವಶ – ಸಿಎಂ ಸೇರಿ ಹಲವು ಗಣ್ಯರಿಂದ ಸಂತಾಪ

    ರತನ್ ಟಾಟಾ ಅವರ ನಿಧನದ ಕುರಿತು ಏಕನಾಥ್ ಶಿಂಧೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಟಾಟಾ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂದು (ಗುರುವಾರ) ಮಹಾರಾಷ್ಟ್ರದಲ್ಲಿ ಶೋಕಾಚರಣೆ ಮಾಡಲಾಗುತ್ತದೆ. ಗೌರವ ಸೂಚಕವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಇಂದು ನಿಗದಿಯಾಗಿದ್ದ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರತನ್ ಟಾಟಾ ದೂರದೃಷ್ಟಿಯ ಉದ್ಯಮಿ, ಅಸಾಧಾರಣ ವ್ಯಕ್ತಿ: ಪ್ರಧಾನಿ ಮೋದಿ ಸಂತಾಪ

    ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ (NCPA) ಬೆಳಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಇರಿಸಲಾಗುವುದು. ಅಲ್ಲಿ ಜನರು ಅಂತಿಮ ನಮನ ಸಲ್ಲಿಸಬಹುದು. ಬಳಿಕ ವರ್ಲಿ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ

    ರತನ್ ಟಾಟಾ ಅವರು ಭವಿಷ್ಯದ ಪೀಳಿಗೆಯ ಉದ್ಯಮಿಗಳಿಗೆ ಮಾದರಿಯಾಗಿದ್ದರು ಮತ್ತು ಭಾರತದ ಕೈಗಾರಿಕಾ ಬೆಳವಣಿಗೆಯ ಸಂಕೇತ. 2008ರ ಮುಂಬೈ ದಾಳಿಯ ನಂತರ ಅವರು ತೋರಿದ ದೃಢತೆಯನ್ನು ಪ್ರತಿಯೊಬ್ಬರೂ ಯಾವಾಗಲೂ ನೆನಪಿಸಿಕೊಳ್ಳುತ್ತಾರೆ. ಅವರ ದೃಢ ನಿರ್ಧಾರಗಳು, ಧೈರ್ಯದ ಮನೋಭಾವ ಮತ್ತು ಸಾಮಾಜಿಕ ಬದ್ಧತೆ ಸದಾ ನೆನಪಿನಲ್ಲಿ ಉಳಿಯುತ್ತದೆ. ದಿವಂಗತ ರತನ್ ಟಾಟಾ ಅವರ ಅಂತ್ಯ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಏಕನಾಥ್ ಶಿಂಧೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಒತ್ತಡಕ್ಕೆ ಮಣಿದು ಬಲವಂತವಾಗಿ ದೆಹಲಿ ಸಿಎಂ ಮನೆ ಖಾಲಿ ಮಾಡಿಸಲಾಗಿದೆ: ಎಎಪಿ ಆರೋಪ

  • ಪಂಜಾಬಿ ಸಂಪ್ರದಾಯದಂತೆ ನೆರವೇರಿದ ಮಲೈಕಾ ಅರೋರಾ ತಂದೆ ಅಂತ್ಯಕ್ರಿಯೆ

    ಪಂಜಾಬಿ ಸಂಪ್ರದಾಯದಂತೆ ನೆರವೇರಿದ ಮಲೈಕಾ ಅರೋರಾ ತಂದೆ ಅಂತ್ಯಕ್ರಿಯೆ

    ಬಾಲಿವುಡ್ ನಟಿ ಮಲೈಕಾ ಅರೋರಾ (Malaika Arora) ತಂದೆ ಅನಿಲ್ (Anil) ಅಂತ್ಯಕ್ರಿಯೆ ಇಂದು (ಸೆ.12) ನೆರವೇರಿದೆ. ಪಂಜಾಬಿ ಸಂಪ್ರದಾಯದಂತೆ ಅನಿಲ್ ಅಂತ್ಯಸಂಸ್ಕಾರ ಮಾಡಲಾಗಿದೆ. ಇದನ್ನೂ ಓದಿ:ನೆಪೋಟಿಸಂನಿಂದ ನಾನು ಕೂಡ ಸಮಸ್ಯೆ ಎದುರಿಸಿದ್ದೇನೆ: ರಕುಲ್ ಪ್ರೀತ್ ಸಿಂಗ್

    ಮಲೈಕಾ ಅರೋರಾ ತಂದೆ ಅನಿಲ್ ಸೆ.11ರಂದು ಬೆಳಗ್ಗೆ ಆತ್ಯಹತ್ಯೆಗೆ ಶರಣಾದರು. ಮುಂಬೈನಲ್ಲಿರುವ ಬಾಂದ್ರಾದ ತಮ್ಮ ಮನೆಯ ಟೆರೇಸ್‌ನಿಂದ ಹಾರಿ ಆತ್ಯಹತ್ಯೆ ಮಾಡಿಕೊಂಡರು. ತಮ್ಮ ಮನೆಯ 7ನೇ ಮಹಡಿಯಿಂದ ಬಿದ್ದು ಮಲೈಕಾ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ಸಾವಿನ ದುಃಖದಲ್ಲಿದ್ದ ಮಲೈಕಾಗೆ ಮಾಜಿ ಪತಿ ಅರ್ಬಾಜ್ ಖಾನ್ ಸಂತಾಪ ಸೂಚಿಸಿದರು. ಬಾಲಿವುಡ್‌ನ ಹಲವು ನಟ-ನಟಿಯರು ಭೇಟಿ ನೀಡಿದ್ದು, ಕರೀನಾ ಕಪೂರ್ ಖಾನ್, ಅನನ್ಯಾ ಪಾಂಡೆ, ಸೈಫ್ ಅಲಿ ಖಾನ್ ಭೇಟಿ ನೀಡಿ ಸಂತಾಪ ಸೂಚಿಸಿದರು. ಜೊತೆಗೆ ನಟಿಯ ಎಕ್ಸ್ ಬಾಯಫ್ರೆಂಡ್ ಅರ್ಜುನ್ ಕಪೂರ್ ಕೂಡ ಭೇಟಿ ನೀಡಿದ್ದರು.

    ಇತ್ತೀಚಿಗಷ್ಟೇ ಮಲೈಕಾ ಅರೋರಾ ಹಾಗೂ ಅರ್ಜುನ್ ಕಪೂರ್ ಅವರ ಮಧ್ಯೆ ಬ್ರೇಕಪ್ ಆಗಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ರೂಮರ್ಸ್ ಹಬ್ಬಿಕೊಂಡಿತ್ತು. ಬ್ರೇಕಪ್ ರೂಮರ್ ನಡುವೆಯೇ ಮಲೈಕಾ ಅರೋರಾ ತಂದೆಯ ಸಾವಿನ ಸುದ್ದಿ ತಿಳಿದು, ಮುಂಬೈ ನಿವಾಸಕ್ಕೆ ಎಕ್ಸ್ ಬಾಯ್‌ಫ್ರೆಂಡ್ ಅರ್ಜುನ್ ಕಪೂರ್ ಭೇಟಿ ನೀಡಿ ಸಂತಾಪ ವ್ಯಕ್ತಪಡಿಸಿದ್ದರು.

  • ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಚಾಮರಾಜನಗರ: ಶವಸಂಸ್ಕಾರಕ್ಕೆ (Funeral) ತೆರಳಿದ್ದ ವೇಳೆ ಹೆಜ್ಜೇನು ದಾಳಿ (Bee Attack) ನಡೆಸಿ ಹಲವರು ಗಾಯಗೊಂಡ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.

    ಹೆಜ್ಜೇನು ದಾಳಿಯಲ್ಲಿ 42 ಮಂದಿ ಗಾಯಗೊಂಡಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಮಹಾದೇವಯ್ಯ ಎಂಬವರ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಅಂತ್ಯಸಂಸ್ಕಾರದಲ್ಲಿ ಬೆಂಕಿ ಹಾಕಿದ್ದ ಹೊತ್ತಲ್ಲಿ ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದೆ. ಇದನ್ನೂ ಓದಿ: ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ: ಸ್ಕೇಟರ್‌ಗಳಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡಿ ಗೌರವ

    ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಹೆಚ್‌ಒ ಚಿದಂಬರಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ‌ ಮೋರ್ಚಾದಿಂದ ಉಚಿತ‌ ಹೊಲಿಗೆ ಯಂತ್ರ ವಿತರಣೆ