Tag: Furniture Shop

  • ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫರ್ನಿಚರ್ ಅಂಗಡಿ, ಗೋಡೌನ್‌ಗೆ ಬೆಂಕಿ – 1.50 ಕೋಟಿ ರೂ. ಮೌಲ್ಯದ ವಸ್ತುಗಳು ಭಸ್ಮ

    ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫರ್ನಿಚರ್ ಅಂಗಡಿ, ಗೋಡೌನ್‌ಗೆ ಬೆಂಕಿ – 1.50 ಕೋಟಿ ರೂ. ಮೌಲ್ಯದ ವಸ್ತುಗಳು ಭಸ್ಮ

    ಕೋಲಾರ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ(Short Circuit) ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪೀಠೋಪಕರಣದ ಅಂಗಡಿ (Furniture Shop) ಮತ್ತು ಗೋಡೌನ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಪ್ರವಾಸಿ ಮಂದಿರದ ಬಳಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಡಿಲಕ್ಸ್ ಎಂಟರ್ಪ್ರೈಸ್ ಫರ್ನಿಚರ್ ಅಂಗಡಿ ಹೊತ್ತಿ ಉರಿದಿದೆ. ಮುಳಬಾಗಲು ನಗರದ ಶೌಕತ್ ಎಂಬುವವರಿಗೆ ಸೇರಿದ ಫರ್ನಿಚರ್ ಅಂಗಡಿ ಹಾಗೂ ಗೋಡೌನ್‌ನಲ್ಲಿದ್ದ ಸುಮಾರು ಒಂದೂವರೆ ಕೋಟಿ ರೂ. ಮೌಲ್ಯದ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಇದನ್ನೂ ಓದಿ: ಮೀನು ಸಾರು, ಕಡುಬು ತಿಂದು 35 ವರ್ಷಗಳ ಬಳಿಕ ಹೋಟೆಲ್ ಬಿಲ್ ಪಾವತಿಸಿದ ವ್ಯಕ್ತಿ!

    ಇನ್ನೂ ಬೆಂಕಿಯ ಕೆನ್ನಾಲಿಗೆ ಪಕ್ಕದ ಅಂಗಡಿ ಹಾಗೂ ಮನೆಗಳನ್ನ ಆವರಿಸುವ ಆತಂಕದ ಮಧ್ಯೆ ಸ್ಥಳಕ್ಕೆ ಆಗಮಿಸಿದ ಆಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಪೀಠೋಪಕರಣಗಳು ಒಂದೇಸಮನೆ ಹೊತ್ತಿ ಉರಿದ ಹಿನ್ನೆಲೆ ಮೂರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಸಲಾಯಿತು. ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕೆಲಸ ಮಾಡದ ಮೋದಿಯನ್ನು ಕೆಳಗಿಳಿಸಿ, ಗಡ್ಕರಿಯನ್ನು ಪ್ರಧಾನಿ ಮಾಡಿ: ಸಂತೋಷ್‌ ಲಾಡ್‌

  • ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ – ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

    ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ – ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

    ಬೆಂಗಳೂರು: ಫರ್ನಿಚರ್ ಅಂಗಡಿಗೆ (Furniture Shop) ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಫರ್ನಿಚರ್‌ಗಳು ಸುಟ್ಟು ಕರಕಲಾಗಿರುವ ಘಟನೆ ವಿಜ್ಞಾನ ನಗರದಲ್ಲಿ ನಡೆದಿದೆ.

    ರಾತ್ರಿ 8:30ಕ್ಕೆ ಅಂಗಡಿ ಮಾಲೀಕ ಎಂದಿನಂತೆ ಅಂಗಡಿ ಬಂದ್ ಮಾಡಿಕೊಂಡು ಮನೆಗೆ ಹೋಗಿದ್ದಾರೆ. 9:30ರ ಸುಮಾರಿಗೆ ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಕ್ಕಪಕ್ಕದವರು ನೋಡಿ ಮಾಲೀಕ ಶಿವರಾಜನ್‌ಗೆ ಕರೆ ಮಾಡಿ ವಿಷಯ ತಿಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಅಂಗಡಿಯಲ್ಲಿದ್ದ ಫರ್ನಿಚರ್ಸ್‌ಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಬೆಂಕಿ ದೊಡ್ಡಮಟ್ಟದಲ್ಲಿ ಅವರಿಸಿಕೊಂಡಿದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ಗೆ ಕೋವಿಡ್‌ ದೃಢ

    ಎರಡು ಅಗ್ನಿಶಾಮಕ ವಾಹನಗಳಲ್ಲಿ ಬಂದ ಅಗ್ನಿಶಾಮಕ ಸಿಬ್ಬಂದಿ ಅಕ್ಕಪಕ್ಕದಲ್ಲಿರೋ ಫರ್ನಿಚರ್ಸ್ ಅಂಗಡಿಗಳಿಗೆ ಬೆಂಕಿ ತಗುಲದಂತೆ ಎಚ್ಚರವಹಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿ ಬಂದ್ ಆಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಲೀಕರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಬೆಂಕಿ ತಗುಲಿರೋ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆ ಸಂಬಂಧ ಬೈಯ್ಯಪ್ಪನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದರ್ಶನ್‌ಗೆ ಜೈಲೂಟದಿಂದ ಇಂದು ಮುಕ್ತಿ ಸಿಗುತ್ತಾ? – ಹೈಕೋರ್ಟ್‌ನಲ್ಲಿ ಭವಿಷ್ಯ