ಗದಗ: ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ರೈತೆರು ಎತ್ತು, ಚಕ್ಕಡಿಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆ ಮುಂಡರಗಿ (Mudaragi) ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಎತ್ತು, ಚಕ್ಕಡಿಗಳನ್ನು ನಿಲ್ಲಿಸಿ ರೈತರು ಪ್ರತಿಭಟನೆ ಮಾಡಿದರು. ಹೆಸರು, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಸೂರ್ಯಕಾಂತಿ ಸೇರಿದಂತೆ ಅನೇಕ ಬೆಳೆಗಳು ಮಳೆಯಿಂದ ನಾಶವಾಗಿವೆ. ರೈತರು (Farmers) ಸಾಕಷ್ಟು ಸಾಲ ಮಾಡಿ ಬೆಳೆದ ಬೆಳೆಗಳು ಕೈತಪ್ಪಿವೆ. ಅನ್ನದಾತರು ಬೀದಿಗೆ ಬರುವಂತಾಗಿದೆ. ಇನ್ನು ಅಲ್ಪ ಸ್ವಲ್ಪ ಬೆಳೆಗೆ ಖರೀದಿ ಕೇಂದ್ರ ಇಲ್ಲ. ಶೀಘ್ರದಲ್ಲೇ ಖರೀದಿ ಕೇಂದ್ರ ಆರಂಭಿಸಬೇಕು. ಬೆಳೆ ವಿಮೆ ಏಜೆಂಟ್‌ಗಳ ಹಾವಳಿ ತಪ್ಪಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಾವೇರಿ | ಕತ್ತು ಸೀಳಿ ಡ್ಯಾನ್ಸ್ ಮಾಸ್ಟರ್ ಬರ್ಬರ ಹತ್ಯೆ – ಲಾಂಗ್‌ಡ್ರೈವ್ ಹೋಗಿ ಬರುತ್ತೇನೆ ಅಂದಾತ ಶವವಾಗಿ ಪತ್ತೆ
ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಕೃಷಿ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡರು. ಕೆಲಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು. ಪ್ರತಿಭಟನೆಯಲ್ಲಿ ರೈತ ಮುಖಂಡರು, ಮಹಿಳೆಯರು, ಸಾರ್ವಜನಿಕರು ಭಾಗಿಯಾಗಿದ್ದರು.
ಗದಗ: ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಗದಗ (Gadag) ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (H K Patil) ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗದಗ ತಾಲೂಕಿನ ಬಿಂಕದಕಟ್ಟಿ ಭಾಗದಲ್ಲಿ ಹೆಸರು ಹಾಗೂ ಮೆಕ್ಕೆಜೋಳ ಬೆಳೆ ಹಾನಿಯಾಗಿತ್ತು. ಬಿಂಕದಕಟ್ಟಿ ರೈತ ಶ್ರೀನಿವಾಸ್ ಇಟಗಿ ಅವರ 10 ಎಕ್ರೆ ಜಮೀನಿನಲ್ಲಿ ಬೆಳೆದ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಬೆಳೆಹಾನಿ ವೀಕ್ಷಣೆ ನಡೆಸಿ ಪರಿಹಾರದ ಭರವಸೆ ನೀಡಿದರು. ಇದನ್ನೂ ಓದಿ: ಡಿಕೆಶಿ ಆರ್‌ಎಸ್‌ಎಸ್ ಗೀತೆ ಹಾಡಿದ್ದನ್ನು ಸ್ವಾಗತಿಸುತ್ತೇವೆ: ಅಶ್ವಥ್ ನಾರಾಯಣ್
ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ, ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ
ಗದಗ ಜಿಲ್ಲೆಯಲ್ಲಿ ಆ.1 ರಿಂದ ಆ.18 ವರೆಗೆ ವಾಡಿಕೆ ಮಳೆ 46.9 ಮೀ.ಮೀ ಆಗಬೇಕಿತ್ತು. ಆದ್ರೆ 140.2 ರಷ್ಟು ಮಳೆ ಆಗುವ ಮೂಲಕ 198.9% ರಷ್ಟು ಅಧಿಕ ಮಳೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 94,884 ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಇದರಲ್ಲಿ ಹೆಸರು ಬೆಳೆ 67,533 ಹೆಕ್ಟೇರ್ ನಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ. ಇನ್ನು ಸಮೀಕ್ಷಾಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರೀತ್ಸೆ ಪ್ರೀತ್ಸೆ ಎಂದು ವಿದ್ಯಾರ್ಥಿನಿಯ ಹಿಂದೆ ಬಿದ್ದು, ಕೊಲೆ ಬೆದರಿಕೆ – ಪಾಗಲ್ ಪ್ರೇಮಿ ಅರೆಸ್ಟ್
ಈ ವೇಳೆ ಎಡಿಸಿ ದುರಗೇಶ್ ಕೆ.ಆರ್, ಎಸಿ ಗಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಶೈಲೇಂದ್ರ ಬಿರಾದಾರ ಸೇರಿದಂತೆ ಅನೇಕ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.
ರಸ್ತೆಗೆ ಹೊಂದಿಕೊಂಡಿರುವ ಬೋರ್‌ವೆಲ್ ಆದ್ದರಿಂದ ಪ್ರತಿನಿತ್ಯ ಇದೇ ರಸ್ತೆ ಮೂಲಕ ನೂರಾರು ಜನ ಓಡಾಡುತ್ತಾರೆ. ಅಷ್ಟೇ ಅಲ್ಲ ಪಕ್ಕದಲ್ಲೇ ಅಂಗನವಾಡಿ ಕೇಂದ್ರ ಹಾಗೂ ಸಮೀಪದಲ್ಲೇ ಶಾಲೆ ಸಹ ಇದೆ. ಸುಮಾರು ಮೂರ್ನಾಲ್ಕು ಅಡಿ ಭೂಮಿ ಕುಸಿತವಾದ್ದರಿಂದ ಈ ಬಗ್ಗೆ ಸುರಕ್ಷತೆ ವಹಿಸುವಂತೆ ಗದಗ-ಬೆಟಗೇರಿ ನಗರಸಭೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಗದಗ: ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಬಂಧಿಸಿದ್ದು, ಬೈಕ್ ಸವಾರ ಗ್ರಾಮ ಸಹಾಯಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ (Gadag) ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರ ಬಳಿ ನಡೆದಿದೆ.
ಈ ಅಪಘಾತಕ್ಕೆ ಅಕ್ರಮ ಮರಳು ಮಾಫಿಯಾದವರ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಅಕ್ರಮ ಮರಳು ತಡೆಯಲು ಹೋದ ವೇಳೆ ಈ ಘಟನೆ ನಡೆದಿರಬಹುದು. ಇದನ್ನು ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಗ್ರಾಮ ಸಹಾಯಕರ ಸಂಘದಿಂದ ತಹಶೀಲ್ದಾರ್‌ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧಿಸಿದ ಟ್ರ‍್ಯಾಕ್ಟರನ್ನು ವಶಕ್ಕೆ ಪಡೆದಿದ್ದಾರೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗ: ನಗರದ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿ ಬಸ್ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಅನ್ನು ಶುಕ್ರವಾರ ಕಾನೂನು, ನ್ಯಾಯ, ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (H K Patil) ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಅವರು ಈ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ (Indira Canteen) ತೆರೆದಿದ್ದರಿಂದ ಗ್ರಾಮೀಣ ಭಾಗದವರಿಗೆ ತುಂಬಾನೇ ಅನುಕೂಲ ಆಗಲಿದೆ. ನಗರದ ಬಸ್ ನಿಲ್ದಾಣಕ್ಕೆ ಗದಗ ತಾಲೂಕು ಅಷ್ಟೇ ಅಲ್ಲ, ಬೇರೆ ಬೇರೆ ತಾಲೂಕಿನ ಜನರು ಬರುತ್ತಾರೆ. ಅವರಿಗೆ ಕಡಿಮೆ ಹಣದಲ್ಲಿ ಊಟ, ಉಪಹಾರ ಸಿಗುತ್ತೆ. ಹಾಗಾಗಿ ಇಲ್ಲಿಗೆ ಈ ಇಂದಿರಾ ಕ್ಯಾಂಟೀನ್‌ನ ಅವಶ್ಯಕತೆ ಇತ್ತು ಎಂದರು. ಇದನ್ನೂ ಓದಿ: ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅಕ್ಬರ್‌ಸಾಬ್ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ.ಆರ್ ಸೇರಿ ಅನೇಕರು ಉಪಸ್ಥಿತರಿದ್ದರು.
ಗದಗ: ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಲು ಸಾಧ್ಯನಾ ಅಂತ ನೋಡಲು ಪ್ರಯತ್ನ ಮಾಡ್ತಿದ್ದಾರೆ. ಅಂತವರಿಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಕಾನೂನು, ನ್ಯಾಯ ಸಚಿವ ಹೆಚ್.ಕೆ ಪಾಟೀಲ್ (H K Patil) ಹೇಳಿದ್ದಾರೆ.
ಗದಗದಲ್ಲಿ (Gadag) ಮಾಧ್ಯಮಗಳೊಂದಿಗೆ ಮಾತನಾತನಾಡಿದ ಅವರು, ಧರ್ಮಸ್ಥಳದ (Dharmasthala Case) ವಿಷಯ ವಿಧಾನಸಭೆ ಒಳಗೆ ಚರ್ಚೆಗೆ ಬಂದಿದೆ. ಗೃಹ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ್ದ. ಅದರ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯಬೇಕಾಗಿತ್ತು. ಆ ತನಿಖೆ ನಡೆದಿದೆ. ತನಿಖೆಯು ಯಾವ ಹಂತದಲ್ಲಿದೆ ಎಂಬ ಕೆಲವು ಭಾಗ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಬಗ್ಗೆ ಬಹುಶಃ ಸೋಮವಾರ ಇನ್ನು ಹೆಚ್ಚಿನ ಮಾಹಿತಿಯನ್ನು ಗೃಹ ಸಚಿವರು ನೀಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ; 1.68 ಕೋಟಿ, 6 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ
ಶಾಸನ ಸಭೆಯಲ್ಲಿ ಚರ್ಚೆ ಮಾಡಿದ್ದರಿಂದ ಸೋಮವಾರ ಸರ್ಕಾರ ತನ್ನ ಉತ್ತರ ನೀಡಲಿದೆ. ನಾವು ಧರ್ಮಸ್ಥಳ ಮಂಜುನಾಥನ ಸನ್ನಿಧಾನ ಬಗ್ಗೆ ವಿಶೇಷ ಭಕ್ತಿ, ಗೌರವ, ಅಭಿಮಾನ ಹೊಂದಿದವರು. ಆದ್ದರಿಂದ ಸರ್ಕಾರದ ಬಗ್ಗೆ ಯಾರು ಅನುಮಾನದ ಮಾತುಗಳನ್ನಾಡುತ್ತಿದ್ದಾರೆ. ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುತ್ತಿದ್ದಾರೆ. ಇವತ್ತು ಮಾತನಾಡುವವರು 10 ದಿನಗಳ ಹಿಂದೆ ಯಾಕೆ ಮಾತನಾಡಲಿಲ್ಲ.? ಸಮಯದ ಉಪಯೋಗ ಮಾಡಿಕೊಂಡು ಏನಾದ್ರು ಮಾಡುವ ಪ್ರಯತ್ನಿಸಿದರೆ ಅದರಿಂದ ಏನು ಲಾಭ ಆಗುವುದಿಲ್ಲ ಎಂದು ಧರ್ಮಸ್ಥಳ ಪ್ರಕರಣ ರಾಜಕೀಯಕ್ಕೆ ಬಳಸಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವಪತ್ರೆ, 5050 ವಿಭೂತಿ ಸಿದ್ಧತೆ
ಇನ್ನು ಒಳಮೀಸಲಾತಿ ಕುರಿತು ಮಾತನಾಡಿದ ಅವರು, ಒಳಮೀಸಲಾತಿಗೆ ಸಂಬಂಧಪಟ್ಟಂತೆ ಆ.16 ರಂದು ವಿಶೇಷ ಸಚಿವ ಸಂಪುಟ ಕರೆಯಲಾಗಿತ್ತು. ಆದರೆ ಈ ಬಗ್ಗೆ ಕೆಲವು ಸಚಿವರು, ಸಿಎಂ ಅವರನ್ನು ಭೇಟಿಯಾಗಿ ಕೆಲವು ವಿಚಾರಗಳನ್ನು ಚರ್ಚೆ ಮಾಡ್ತಿದ್ದಾರೆ. ಅದಕ್ಕೆ ಒಂದೆರಡು ದಿನ ಹೆಚ್ಚಿಗೆ ಸಮಯ ತೆಗೆದುಕೊಂಡಿದ್ದಾರೆ. ಆದ್ದರಿಂದ ಆ.19ರಂದು ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದೆ. ಅದರೊಳಗೆ ನಾಗಮೋಹನ್‌ದಾಸ್ ವರದಿ ಬಗ್ಗೆ ಅಂತಿಮವಾಗಿ ಚರ್ಚೆ ಹಾಗೂ ನಿರ್ಣಯ ಆಗುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಧರ್ಮಸ್ಥಳದ (Dharmasthala) ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳದ ಭಕ್ತರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ನಡೆಯುತ್ತಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರು ಒತ್ತಾಯಿಸಿದ್ದಾರೆ.
ಬೆಳಗಾವಿ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಕಲಬುರಗಿ, ಮೈಸೂರು, ತುಮಕೂರಿನಲ್ಲಿ ಇಂದು (ಆ.13) ಪ್ರತಿಭಟನೆಗಳು ನಡೆದಿವೆ. ಎಸ್‌ಐಟಿ ತನಿಖಾ ವರದಿ ಬರದೇ ಇದ್ದರೂ, ಧರ್ಮಸ್ಥಳ, ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಪುರಾಣ ಪ್ರಸಿದ್ಧ ಧರ್ಮಸ್ಥಳ ಕ್ಷೇತ್ರಕ್ಕೆ ಧಕ್ಕೆ ತರುವ, ಸುಳ್ಳು ನಿಂದನೆ, ಅಪಪ್ರಚಾರ ಅವಹೇಳನ ಕೆಲಸ ಮಾಡ್ತಿದ್ದಾರೆ. ಗಿರೀಶ್ ಮಟ್ಟಣ್ಣನವರ, ಮಹೇಶ್ ಶೆಟ್ಟಿ ತಿಮ್ಮರೆಡ್ಡಿ, ಸಮೀರ್ ಎಂ.ಡಿ, ಜಯಂತ್ ಸೇರಿ ಹಲವರಿಂದ ಅಪಪ್ರಚಾರ ನಡೆಯುತ್ತಿದೆ. ಪ್ರಕರಣ ಹಿಂದೆ ಯಾರಿದ್ದಾರೆ? ಅವರಿಗೆ ಹಣದ ನೆರವು ಕೊಡುತ್ತಿರುವವರು ಯಾರು ಎಂದು ತನಿಖೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ
ಬೆಳಗಾವಿಯಲ್ಲಿ (Belagavi) ಧರ್ಮಸ್ಥಳ ಸಂಘದ ಮಹಿಳೆಯರು, ರೈತರು, ಭಕ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮಾಡಿ, ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಧರ್ಮಸ್ಥಳಕ್ಕೆ ದಿನಕ್ಕೆ 1 ಲಕ್ಷದವರೆಗೆ ಭಕ್ತರು ಬರ್ತಾರೆ. ಅಪಪ್ರಚಾರ ಮಾಡೋರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಯಾರೋ ಅನಾಮಿಕ ಹೇಳಿದ್ದಂತೆ ನೆಲೆ ಅಗೆಯಲಾಗುತ್ತಿದೆ. ಯಾರೋ ಬಂದು ವಿಧಾನಸೌಧದಲ್ಲಿ ಹೆಣ ಇದೆ ಅಂಥ ಹೇಳಿದ್ರೆ ಅಗೆಯುತ್ತಾರಾ? ಎಂದು ಭಕ್ತರು ಪ್ರಶ್ನಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ (Chikkamagaluru) 2000 ಸಾವಿರಕ್ಕೂ ಹೆಚ್ಚು ಭಕ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವರೆಗೂ ಪ್ರತಿಭಟನೆ ನಡೆಸಿದರು. ಸುಮಾರು 2 ಕಿ.ಮೀ. ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು. ಸುಳ್ಳಿನ ಮೃತದೇಹದ ಹಿಂದೆ ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವ ಹುನ್ನಾರವಿದೆ. ಕುತಂತ್ರಿಗಳ ಷಡ್ಯಂತ್ರಕ್ಕೆ ಸರ್ಕಾರದ ಬೆಂಬಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಚಾಮರಾಜನಗರದಲ್ಲಿ (Chamarajanagar) ಧರ್ಮಸ್ಥಳ ಉಳಿಸಿ ಎಂದು ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ಚಾಮರಾಜೇಶ್ವರ ದೇವಾಲಯದಿಂದ ಡಿಸಿ ಕಚೇರಿವರೆಗೂ ಪೋಸ್ಟರ್ ಹಿಡಿದು ಪ್ರತಿಭಟಿಸಿದ್ದಾರೆ. ಅಲ್ಲದೇ , ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದ್ದಾರೆ.
ಗದಗದಲ್ಲಿ (Gadag) ಅಂಬೇಡ್ಕರ್ ಭವನದಿಂದ ಜಿಲ್ಲಾಡಳಿತ ಭವನದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿ ನಡೆಸಲಾಯಿತು. ಬಳಿಕ ನಗರದ ಕೋರ್ಟ್ ಸರ್ಕಲ್ ಬಳಿ ರಸ್ತೆ ತಡೆದು, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ವೀರೇಂದ್ರ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಯುತ್ತಿದೆ ಎಂದು ಭಕ್ತರು ಅಸಮಾಧಾನ ಹೊರಹಾಕಿದ್ದಾರೆ.
ಕಲಬುರಗಿಯಲ್ಲೂ (Kalaburagi) ಧಾರ್ಮಿಕ ಸಂಘಟನೆಗಳಿಂದ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಪ್ರತಿಭಟನೆಯಲ್ಲೂ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ಸಹ ಭಾಗಿಯಾಗಿದ್ದರು. ಜಗತ್ ವೃತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ, ಸುಳ್ಳು ಮಾಹಿತಿ ಹಂಚುತ್ತಿರುವ ಯೂಟ್ಯೂಬರ್‌ಗಳು ಹಾಗೂ ಅಪಪ್ರಚಾರ ಮಾಡುತ್ತಿರುವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು.
ಕೊಪ್ಪಳದಲ್ಲಿ (Koppal) ಜಿಲ್ಲಾ ಜೈನ ಸಮಾಜ ಹಾಗೂ ಧರ್ಮಸ್ಥಳ ಭಕ್ತವೃಂದದಿಂದ ಪ್ರತಿಭಟನೆ ನಡೆಯಿತು. ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಭಕ್ತರು, ಮಹೇಶ್ ಶೆಟ್ಟಿ ತಿಮೋರೊಡಿ ಹಾಗೂ ಗಿರೀಶ್ ಮಟ್ಟಣ್ಣನವರ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭಾಗಿಯಾಗಿದ್ದರು.
ತುಮಕೂರಿನಲ್ಲೂ (Tumakur) ಸಹ ಪ್ರತಿಭಟನೆ ನಡೆಸಲಾಯಿತು. ಗುಮ್ಚಿ ಸರ್ಕಲ್ ನಲ್ಲಿ ಪ್ರತಿಭಟನಾಕಾರರು, ಕೋತಿತೋಪು, ಮಂಡಿಪೇಟೆ, ಡಿಸಿ ಕಚೇರಿ ಹಾಗೂ ಎಮ್ ಜಿ ರಸ್ತೆಯ ಸಂಪರ್ಕ ಬಂದ್ ಮಾಡಿ ಪ್ರತಿಭಟಿಸಿದರು. ಬೆಳ್ಳಾವಿ ಕಾರದ ಮಠದ ವೀರಬಸವ ಸ್ವಾಮಿಜಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಸ್ವಾಮೀಜಿ, ಧರ್ಮಸ್ಥಳ ಕ್ಷೇತ್ರ, ಸರ್ಕಾರ ಮಾಡದ ಕೆಲಸ ಮಾಡುತ್ತಿದೆ. ಮದ್ಯವರ್ಜನ ಶಿಬಿರ, ಕೆರೆಕಟ್ಟೆಗಳ ಸಂರಕ್ಷಣೆ, ಗ್ರಾಮೀಣ ಭಾಗದ ಜನರಿಗೆ ಉದ್ಯೋಗ, ಅನ್ನದಾನ ಹೀಗೆ ನೂರಾರು ಸಮಾಜ ಸೇವೆ ಮಾಡುತ್ತಿದೆ. ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳದ ಪಾತ್ರ ಬಹಳ ದೊಡ್ಡದ್ದು. ಅಂಥವರ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಮಳೆಯ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಧರ್ಮ ರಕ್ಷಣೆಗೆ ಜನ ಸೇರಿದ್ದು ಸಂತೋಷವಾಗಿದೆ ಎಂದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಿಲ್ಲಿಸಲಾಯಿತು.
ಮೈಸೂರಿನಲ್ಲಿ (Mysuru) ಧರ್ಮಸ್ಥಳ ಉಳಿಸಿ ಎಂದು ಭಕ್ತರು ಪ್ರತಿಭಟನಾ ಜಾಥಾ ನಡೆಸಿದರು. ಮೈಸೂರು ಹಾಲು ಒಕ್ಕೂಟ ದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಜಾಥಾ ನಡೆಸಲಾಯಿತು.
ದಾವಣಗೆರೆಯಲ್ಲಿ (Davanagere) ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸಭೆ ನಡೆಸಿ, ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನೆಗೆ ಭಕ್ತರು ನಿರ್ಧರಿಸಿದ್ದಾರೆ. ಇದನ್ನೂ ಓದಿ: 6 ಗಂಟೆ ಕಾರ್ಯಾಚರಣೆ – 22 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದರೂ ಸಿಗದ ಮೂಳೆ
ನವದೆಹಲಿ: ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರಿಗೆ ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಗದಗ ಯಲವಿಗಿ ರೈಲ್ವೆ (Gadag – Yalvigi Train) ಯೋಜನೆ ಹಾವೇರಿ ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತಿದ್ದು, ಸುಮಾರು 58 ಕಿ.ಮೀ ಉದ್ದದ ಈ ಯೋಜನೆಗೆ 2017-18ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ಯೋಜನೆ ಗದಗ ಹಾವೇರಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಅಷ್ಟೇ ಅಲ್ಲದೇ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಸಂಪರ್ಕ ಕಲ್ಪಿಸುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಯಾಣಿಕರ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಅನುಕೂಲವಾಗುವುದರಿಂದ ಕರ್ನಾಟಕದ ಆರ್ಥಿಕ ಚಟುವಟಿಕೆಗಳನ್ನು ಮೇಲ್ದರ್ಜೆಗೇರಿಸಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆಯಲ್ಲಿ ಐತಿಹಾಸಿಕ ಕ್ರೀಡಾ ಆಡಳಿತ, ಡೋಪಿಂಗ್ ತಡೆ ಮಸೂದೆ ಅಂಗೀಕಾರ
ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 50/50 ಅನುಪಾತದಲ್ಲಿ ಹಣಕಾಸು ಒದಗಿಸುತ್ತಿದ್ದು, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಒದಗಿಸಲಿದೆ. ಕರ್ನಾಟಕ ಸರ್ಕಾರ ಈಗಾಗಲೇ ತನ್ನ ಆದೇಶ ನಂ ಐಡಿಡಿ/91/ಎನ್‌ಎಸ್‌ಡಬ್ಲ್ಯು/2022ರಲ್ಲಿ ದಿನಾಂಕ 2022 ಏಪ್ರಿಲ್ 18ರಂದು (ನಾನು ಮುಖ್ಯಮಂತ್ರಿ ಇದ್ದಾಗ) ಯೋಜನೆಯ 50%ರಷ್ಟು ಯೋಜನಾ ವೆಚ್ಚವನ್ನು ಹಾಗೂ ಉಚಿತ ಭೂಮಿ ಕೊಡುವುದಾಗಿ ತಿಳಿಸಲಾಗಿತ್ತು. 2022 ಡಿಸೆಂಬರ್ 17ರಂದು ಪರಿಷ್ಕೃತ ಎಫ್‌ಎಸ್‌ಎಲ್ ಅಂದಾಜು 1.45 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲಾಗಿದ್ದು, ಸರ್ವೆ ಕಾರ್ಯ ಮುಕ್ತಾಯವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ `ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಕ್ಯಾ.ಚೌಟ ಕಳವಳ
ಆಗಸ್ಟ್ 2025ರ ಅಂತ್ಯದೊಳಗೆ ಪರಿಷ್ಕೃತ ಡಿಪಿಆರ್ ಸಿದ್ಧವಾಗಲಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರದೊಂದಿಗೆ ತಕ್ಷಣವೇ ಸಮನ್ವಯ ಸಾಧಿಸಿ ಡಿಪಿಆರ್ ಪಡೆಯುವಂತೆ ನೈರುತ್ಯ ರೈಲ್ವೆ ವಲಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
ಅಲ್ಲದೇ ಯೋಜನೆಯ ಮೊದಲ ಹಂತದ ಯೋಜನಾ ವೆಚ್ಚ ಸುಮಾರು 650 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಂಡು, ಅದೇ ಸಮಯದಲ್ಲಿ ಕರ್ನಾಟಕ ಸರ್ಕಾರದ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನೂ ಕೈಗೊಂಡು ಪ್ರಸ್ತುತ 2025-26ನೇ ಆರ್ಥಿಕ ವರ್ಷದಲ್ಲಿ ಯೋಜನೆ ಕಾರ್ಯಾರಂಭವಾಗುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ತಾವು ಅಗತ್ಯ ಕ್ರಮ ಕೈಗೊಳ್ಳುತ್ತೀರಿ ಎಂಬ ಭರವಸೆ ಇದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಗದಗ: ಪೊಲೀಸ್ ಅಧಿಕಾರಿ (Police Officers) ಸಹೋದರನೋರ್ವ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ (Betageri Police Station) ನಡೆದಿದೆ.
ಪೊಲೀಸ್ ಠಾಣೆಯಲ್ಲಿ ರೌಡಿ ರೀತಿ ವರ್ತಿಸಿದ ಅಕ್ಷತ್ ಹಾಗೂ ಸಹಚರನನ್ನು ಸ್ಥಳಿಯರು ತರಾಟೆಗೆ ತೆಗೆದುಕೊಂಡರು. ಪೊಲೀಸ್ ಅಧಿಕಾರಿಯ ಸಹೋದರ ಅಕ್ಷತ್ ಹದ್ದಣ್ಣವರ್‌ನಿಂದ ಈ ಎಲ್ಲಾ ರಂಪಾಟ ನಡೆದಿದೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಅಕ್ಷತ್ ಹದ್ದಣ್ಣವರ್ ಹಾಗೂ ಸಹಚರನಿಂದ ರಾತ್ರಿಯಿಡೀ ಹೈಡ್ರಾಮಾ ನಡೆದಿದೆ. ಇದನ್ನೂ ಓದಿ: ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ
ಕುಡಿದ ಮತ್ತಿನಲ್ಲಿ ಏಕಾಏಕಿ ಕಾರ್‌ನಲ್ಲಿ ಬಂದು ಪೊಲೀಸ್ ಠಾಣೆಗೆ ನುಗ್ಗಿ, ನಾನು ವಕೀಲ ಯಾರು ಏನು ಮಾಡ್ತಿರಿ ಎಂದು ಠಾಣೆಯ ಬಳಿಯಿದ್ದ ಸ್ಥಳಿಯರೊಂದಿಗೆ ಗಲಾಟೆ ಮಾಡಿಕೊಂಡಿದ್ದ. ಸಿಪಿಐ, ಪಿಎಸ್‌ಐ ವಾಹನ ನಿಲ್ಲಿಸುವ ಸ್ಥಳದಲ್ಲಿ ಅಕ್ಷತ್ ತನ್ನ ಕಾರ್ ಪಾರ್ಕಿಂಗ್ ಮಾಡಿದ್ದ. ಅಧಿಕಾರಿಗಳ ಕಾರು ನಿಲ್ಲಿಸಲು ಸ್ಥಳವಿಲ್ಲದ ಕಾರಣ ಠಾಣೆಯ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದರು. ಬೆಟಗೇರಿ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಏಕವಚನ ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪವಿದೆ. ಇದನ್ನೂ ಓದಿ: ಬುದ್ಧಿಮಾಂದ್ಯ ಯುವತಿ ಮೇಲೆ ಗ್ಯಾಂಗ್ ರೇಪ್ – ವೀಡಿಯೋ ಮಾಡಿ ಯುವತಿಯ ಸಹೋದರನಿಗೆ ಕಳುಹಿಸಿದ ಕೀಚಕರು
ಇಷ್ಟೆಲ್ಲಾ ನಡೆದರೂ ಪೊಲೀಸರು ಕೇವಲ ಡ್ರಿಂಕ್ & ಡ್ರೈವ್ ಟೆಸ್ಟ್ ಮಾಡಿ ಕಳುಹಿಸಿದ್ರಾ? ಅಕಸ್ಮಾತ್ ಜನಸಾಮಾನ್ಯರು ಹೀಗೆ ಮಾಡಿದ್ರೆ ಪೊಲೀಸರು ಸುಮ್ಮನೆ ಬಿಡ್ತಿದ್ರಾ? ಅಧಿಕಾರಿ ಸಹೋದರನಿಗೆ ಒಂದು ನ್ಯಾಯ, ಜನ ಸಾಮಾನ್ಯರಿಗೊಂದು ಕಾನೂನಾ? ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ರೂ ಪೊಲೀಸರು ಸುಮ್ಮನಿರೋದಾದ್ರೂ ಯಾಕೆ? ಐಪಿಎಸ್ ಅಧಿಕಾರಿ ಸಹೋದರನ ಆಟಾಟೋಪ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.