Tag: Gaganyaan

  • ಗಗನಯಾನ್‌ ಕ್ರೂ ಎಸ್ಕೇಪ್ ಸಿಸ್ಟಮ್ – ಗಗನಯಾತ್ರಿಗಳನ್ನು ಇದು ಹೇಗೆ ಬಚಾವ್‌ ಮಾಡುತ್ತೆ?

    ಗಗನಯಾನ್‌ ಕ್ರೂ ಎಸ್ಕೇಪ್ ಸಿಸ್ಟಮ್ – ಗಗನಯಾತ್ರಿಗಳನ್ನು ಇದು ಹೇಗೆ ಬಚಾವ್‌ ಮಾಡುತ್ತೆ?

    ಭಾರತದ (India) ಮೊದಲ ಮಾನವಸಹಿತ ಗಗನಯಾನ ಬಾಹ್ಯಾಕಾಶ ಯೋಜನೆಯನ್ನು 2027ರ ಮೊದಲ ತ್ರೈಮಾಸಿಕದಲ್ಲಿ ಕಾರ್ಯಗತಗೊಳಿಸಲು ಇಸ್ರೋ ನಿರ್ಧರಿಸಿದೆ. 2018ರಲ್ಲಿ ಸ್ವಾತಂತ್ರೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಗಗನಯಾನ ಯೋಜನೆ (Gaganyaan Mission) ಘೋಷಿಸಿದ್ದರು. ಈ ಯೋಜನೆ ಅನುಷ್ಠಾನಕ್ಕೆ 2022ರ ಗುರಿ ನಿಗದಿ ಮಾಡಿದ್ದರೂ ಕಾರಣಾಂತರಗಳಿಂದ ಈಗ ಮುಂದೂಡಲ್ಪಟ್ಟಿದೆ.

    ಈ ಯೋಜನೆಯಲ್ಲಿ ಗಗನಯಾನಿಗಳ ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಇದೇ ಕಾರಣಕ್ಕೆ ಕ್ರೂ ಎಸ್ಕೇಪ್ ಸಿಸ್ಟಮ್ (CES) ಅಳವಡಿಸಿಕೊಳ್ಳಲಾಗಿದೆ. ಕ್ರೂ ಎಸ್ಕೇಪ್ ಸಿಸ್ಟಮ್ ಎಂದರೇನು? ಅದು ಹೇಗೆ ಕೆಲಸ ಮಾಡುತ್ತದೆ. ಇದರಿಂದ ಅಪಾಯದಲ್ಲಿರುವ ಗಗನ ಯಾತ್ರಿಗಳು ಹೇಗೆ ಬಚಾವ್‌ ಆಗ್ತಾರೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

    ಕ್ರೂ ಎಸ್ಕೇಪ್ ಸಿಸ್ಟಮ್
    LVM3 (HLVM3) ರಾಕೆಟ್‌ನ್ನು ಉಡಾವಣಾ ವಾಹನವಾಗಿ ಬಳಸಿಕೊಂಡು ಭಾರತೀಯ ಗಗನಯಾತ್ರಿಗಳನ್ನು ಸುಮಾರು 400 ಕಿಮೀ ಎತ್ತರದ ಭೂಮಿಯ ಕಕ್ಷೆಗೆ ಸುರಕ್ಷಿತವಾಗಿ ಸಾಗಿಸುವುದು ಮತ್ತು ಅವರನ್ನು ಸುರಕ್ಷಿತವಾಗಿ ಹಿಂದಿರುಗಿಸುವುದು ಗಗನಯಾನ ಮಿಷನ್ ಗುರಿಯಾಗಿದೆ. ಈ ಸಂದರ್ಭದಲ್ಲಿ ಎದುರಾಗಬಹುದಾದ ತುರ್ತು ಸಂದರ್ಭಗಳಿಂದ ಬಾಹ್ಯಾಕಾಶ ಯಾನವು ವಿಫಲಗೊಂಡರೆ ಅಂತರಿಕ್ಷ ನೌಕೆಯಲ್ಲಿನ ಕ್ರೂ ಮಾಡ್ಯೂಲ್‌ನಿಂದ ಗಗನ ಯಾನಿಗಳನ್ನು ಸುರಕ್ಷಿತವಾಗಿ ಪಾರು ಮಾಡುವ ವ್ಯವಸ್ಥೆಯೇ ಕ್ರೂ ಎಸ್ಕೇಪ್ ಸಿಸ್ಟಮ್ ಆಗಿದೆ.

    ಉಡಾವಣಾ ವಾಹನ ಅಪಘಾತಕ್ಕೊಳಗಾದರೆ CES ( ಕ್ರೂ ಎಸ್ಕೇಪ್ ಸಿಸ್ಟಮ್) ಸಿಬ್ಬಂದಿಯೊಂದಿಗೆ ಪೂರ್ತಿ ಮಾಡ್ಯೂಲ್‌ನ್ನು ಉಡಾವಣಾ ವಾಹನದಿಂದ ಬೇರ್ಪಡಿಸಿ, ಸುರಕ್ಷಿತವಾಗಿ ದೂರಕ್ಕೆ ತಳ್ಳುತ್ತದೆ. ಅಪಘಾತದ ಸಮಯದಲ್ಲಿ ಸುಲಭವಾಗಿ ಇದು ಕಾರ್ಯ ನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ. ಈ ತಂತ್ರಜ್ಞಾನವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಭಿವೃದ್ಧಿಪಡಿಸಿದೆ.

    CES ಎಂಜಿನ್‌ಗಳ ಶಕ್ತಿ
    ಉಡಾವಣೆ ವೇಳೆ ಆರೋಹಣ ಹಂತ ಅತ್ಯಂತ ನಿರ್ಣಾಯಕ ಹಂತವಾಗಿದೆ. ಈ ಸಮಯದಲ್ಲಿ ರಾಕೆಟ್ ಹೈಪರ್‌ಸಾನಿಕ್ ವೇಗ ಪಡೆದುಕೊಳ್ಳುತ್ತದೆ. ಅಂದರೆ ಶಬ್ಧದ ವೇಗಕ್ಕಿಂತ ಐದು ಪಟ್ಟು ಹೆಚ್ಚಿನ ವೇಗದಲ್ಲಿ ಚಲಿಸುತ್ತದೆ. ಇದಕ್ಕಾಗಿ ರಾಕೆಟ್‌ ಎತ್ತಲು ಎರಡು ಶಕ್ತಿಶಾಲಿ S200 ಘನ-ಇಂಧನ ಬೂಸ್ಟರ್‌ (ಘನ ಇಂಧನ ಚಾಲಿತ ರಾಕೆಟ್ ಎಂಜಿನ್) ಬಳಸಲಾಗಿರುತ್ತದೆ. ಘನ ಇಂಧನ ಎಂಜಿನ್‌ ಒಮ್ಮೆ ಆರಂಭಗೊಂಡರೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಹೀಗಾಗಿ, ಕ್ರೂ ಎಸ್ಕೇಪ್ ಸಿಸ್ಟಮ್, ಅಪಘಾತವಾದಾಗ ಉಡಾವಣಾ ವಾಹನಕ್ಕಿಂತ ಹೆಚ್ಚಿನ ವೇಗದಲ್ಲಿ ಚಲಿಸಬೇಕಾಗುತ್ತದೆ.

    CES ಉಡಾವಣಾ ವಾಹನದ ಮುಂಭಾಗದ ತುದಿಯಲ್ಲಿ ಇರಿಸಲಾಗಿರುತ್ತದೆ. ಇದಕ್ಕೆ ವಿಶೇಷವಾದ ಘನ ಇಂಧನ ಎಂಜಿನ್‌ಗಳನ್ನು ಅಳವಡಿಸಲಾಗುತ್ತದೆ. ಇವು ಸಾಮಾನ್ಯ ಎಂಜಿನ್‌ಗಳಿಗಿಂತ ವೇಗವಾಗಿ ಇಂಧನವನ್ನು ಬಳಸಿಕೊಂಡು ಕೆಲಸ ಮಾಡುತ್ತವೆ.

    ಗಗನಯಾತ್ರಿಗಳು ಹೇಗೆ ಪಾರಾಗ್ತಾರೆ?
    ಅಪಘಾತದ ಸಮಯದಲ್ಲಿ CES ಸಿಬ್ಬಂದಿ ಇರುವ ಮಾಡ್ಯೂಲ್‌ನ್ನು ಅತಿ ಹೆಚ್ಚಿನ ವೇಗವಾಗಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುತ್ತದೆ. ಬಳಿಕ ಬಹು ಹಂತದ ಪ್ಯಾರಾಚೂಟ್ ವ್ಯವಸ್ಥೆ ಮಾಡ್ಯೂಲ್‌ನ್ನು ಹಂತ ಹಂತವಾಗಿ ನಿಧಾನಗೊಳಿಸುತ್ತದೆ. ಬಳಿಕ ಸುರಕ್ಷಿತ ಸಮುದ್ರದಲ್ಲಿ ಇಳಿಸುತ್ತದೆ.

    ಈ ವ್ಯವಸ್ಥೆಯನ್ನು ಇಂಟಿಗ್ರೇಟೆಡ್ ವೆಹಿಕಲ್ ಹೆಲ್ತ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ನೈಜ ಸಮಯದಲ್ಲಿ ಮೇಲ್ವಿಚಾರಣೆ ಮಾಡುತ್ತದೆ. ಅಗತ್ಯವಿದ್ದರೆ ಮಾತ್ರ CESನ್ನು ಸಕ್ರಿಯಗೊಳಿಸುತ್ತದೆ.

    ವ್ಯೋಮಮಿತ್ರ
    ಈ ಯೋಜನೆಗೂ ಮುನ್ನ, ಮಾನವನನ್ನೇ ಹೋಲುವ ವ್ಯೋಮಮಿತ್ರ ರೊಬೋಟ್‌ನ್ನು ಬಾಹ್ಯಾಕಾಶಕ್ಕೆ ಕಳಿಸಲಾಗುವುದು. ನಂತರ, ಗಗನಯಾನಿಗಳನ್ನು ಹೊತ್ತ ಗಗನನೌಕೆಯನ್ನು ಕೆಳ ಭೂ ಕಕ್ಷೆಗೆ ಉಡ್ಡಯನ ಮಾಡಲಾಗುತ್ತದೆ.

    ಯೋಜನೆಯ ಕೆಲಸ 90% ಪೂರ್ಣಗೊಂಡಿದ್ದು, ಅಂತಿಮ ಹಂತದ ಕಾರ್ಯ ನಡೆಯುತ್ತಿದೆ. ಈ ಯೋಜನೆಯಲ್ಲಿ ನಾವು ಯಶಸ್ಸು ಸಾಧಿಸಿದಲ್ಲಿ, ರಷ್ಯಾ, ಅಮೆರಿಕ ಹಾಗೂ ಚೀನಾ ನಂತರ. ಮಾನವನನ್ನು ಸ್ವತಂತ್ರವಾಗಿ ಬಾಹ್ಯಾಕಾಶಕ್ಕೆ ಕಳುಹಿಸಿದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆ ಭಾರತದದ್ದಾಗಲಿದೆ.

    ಗಗನಯಾನ್‌ ಯೋಜನೆಗಾಗಿ ಭಾರತೀಯ ವಾಯುಪಡೆಯ ನಾಲ್ವರು ಪೈಲಟ್‌ಗಳು ರಷ್ಯಾದಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.

  • 2027ಕ್ಕೆ ಚಂದ್ರಯಾನ-4, 2026ಕ್ಕೆ ಗಗನಯಾನ: ಜಿತೇಂದ್ರ ಸಿಂಗ್‌

    2027ಕ್ಕೆ ಚಂದ್ರಯಾನ-4, 2026ಕ್ಕೆ ಗಗನಯಾನ: ಜಿತೇಂದ್ರ ಸಿಂಗ್‌

    ನವದೆಹಲಿ: ಚಂದ್ರನ ಮೇಲ್ಮೈನಲ್ಲಿನ ಕಲ್ಲುಗಳನ್ನು ಭೂಮಿಗೆ ಹೊತ್ತು ತರುವ ಚಂದ್ರಯಾನ-4 ಮಿಷನ್‌ (Chandrayaan-4 Space Missions) ಅನ್ನು 2027ರ ವೇಳೆ ಜಾರಿಮಾಡಲಾಗುವುದು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್‌ (Jitendra Singh) ಹೇಳಿದ್ದಾರೆ.

    ಕಲ್ಲುಗಳ ಮಾದರಿಗಳನ್ನು ಹೊರುವ ಶಕ್ತಿ ಹೊಂದಿರುವ ಎರಡು ಪ್ರತ್ಯೇಕ ರಾಕೆಟ್‌ಗಳನ್ನು ಉಡ್ಡಯನ ಮಾಡಲಾಗುವುದು. ಈ ರಾಕೆಟ್‌ಗಳಲ್ಲಿ ಐದು ವಿವಿಧ ಕಾಂಪೋನೆಂಟ್‌ಗಳು ಇರಲಿವೆ. ಇವುಗಳನ್ನು ಕ್ಷಕೆಯಲ್ಲಿ ಜೋಡಿಸಲಾಗುವುದು ಎಂದಿದ್ದಾರೆ.

    ಅಲ್ಲದೇ ಮುಂದಿನ ವರ್ಷ ಮಾನವರವನ್ನು ಬಾಹ್ಯಾಕಾಶಕ್ಕೆ ಕಳುಹಿಸಿ, ಸುರಕ್ಷಿತವಾಗಿ ವಾಪಸ್‌ ಕರೆಸಿಕೊಳ್ಳುವ ʻಗಗನಯಾನʼ ಮಿಷನ್‌ ಅನ್ನು ಕೂಡ ಜಾರಿ ಮಾಡಲಾಗುವುದು. 2026ರಲ್ಲಿ ʻಸಮುದ್ರಯಾನʼ ಮಿಷನ್‌ ಅನ್ನೂ ಜಾರಿ ಮಾಡಲಿದ್ದೇವೆ. ಸಮುದ್ರದ 6,000 ಮೀಟರ್‌ನಷ್ಟು ಆಳಕ್ಕೆ ಮೂವರು ವಿಜ್ಞಾನಿಗಳು ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ʻರೊಬೊಟ್ ವ್ಯೂಮಿತ್ರಾʼವನ್ನು ಗಗನಯಾನಕ್ಕೆ ಕಳುಹಿಸುವ ಮಹತ್ವದ ಕಾರ್ಯ ಇದೇ ವರ್ಷ ನಡೆಯಲಿದೆ. 1969ರಲ್ಲಿ ಇಸ್ರೋ ಸ್ಥಾಪನೆಯಾದರೂ ಇದರ ಮೊದಲ ಉಡ್ಡಯನ ಕೇಂದ್ರವು 1993ರಲ್ಲಿ ಸ್ಥಾಪನೆಯಾಯಿತು. ಇಸ್ರೋ ಸ್ಥಾಪನೆಯಿಂದ 2014ರ ವರೆಗೆ ಭಾರತೀಯ ಬಾಹ್ಯಾಕಾಶ ಕ್ಷೇತ್ರವು ಅಭಿವೃದ್ಧಿ ಹೊಂದಿದ್ದಕ್ಕಿಂತ ಹೆಚ್ಚಿನ ಅಭಿವೃದ್ಧಿಯು ಕಳೆದ 10 ವರ್ಷಗಳಲ್ಲಾಗಿದೆ ಎಂದರು.

  • ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು – ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ

    ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು – ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ

    ನವದೆಹಲಿ: ಸೂರ್ಯಯಾನ, ಚಂದ್ರಯಾನದ ನಂತರ ಇಸ್ರೋ (ISRO) ಮತ್ತೊಂದು ಮೈಲುಗಲ್ಲಿಗೆ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ (Gaganyaan) ಇಸ್ರೋ ಸಜ್ಜಾಗಿದ್ದು, ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ  ನಡೆಯಲಿದೆ.

    ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ, ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿದೆ. ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದು, ಮಾನವ ಸಹಿತ ಗಗನಯಾನದ ಯೋಜನೆ ಸಿದ್ಧ ಮಾಡಿದೆ. ಈ ಗಗನಯಾನಕ್ಕೂ ಮುನ್ನ ಪರೀಕ್ಷಾರ್ಥ ಉಡಾವಣೆಯನ್ನು (Test Launch) ಈ ತಿಂಗಳಾಂತ್ಯಕ್ಕೆ ನಡೆಸಲಾಗುವುದು ಎಂದು ಇಸ್ರೋ ಕೆಲ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ – ದೆಹಲಿಯಲ್ಲಿ ಇಬ್ಬರು ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಹೈಕಮಾಂಡ್ ಉತ್ಸುಕ

    ಮನುಷ್ಯನನ್ನು ಬಾಹ್ಯಾಕಾಶಕ್ಕೆ ಕಳಿಸುವ ಮುನ್ನ ಕೆಲವು ಅಂತರಾಷ್ಟ್ರೀಯ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ಮನುಷ್ಯನನ್ನು ಆಕಾಶಕ್ಕೆ ಕರೆದುಕೊಂಡು ಹೋಗುವ ಯೂನಿಟ್‌ಗೆ ಪ್ಯಾಡ್ ಅಬಾಟ್ ಎಂದು ಕರೆಯಲಾಗುತ್ತದೆ. ಈ ಪ್ಯಾಡ್ ಅಬಾಟ್ ಅನ್ನು ರಾಕೆಟ್ ಇರಿಸಿ ಪ್ರಯೋಗ ಮಾಡಲಾಗುತ್ತಿದೆ. ಇದನ್ನೇ ಗಗನಯಾನ ‘ಟಿವಿ-ಡಿ1’ (Test Vehicle Development) ಬಾಹ್ಯಾಕಾಶನೌಕೆ ಉಡ್ಡಯನ ಎನ್ನಲಾಗುತ್ತದೆ. ಇದನ್ನೂ ಓದಿ: 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌

    ಈ ಪರೀಕ್ಷೆಗಳು ಯಾಕೆ?
    ಸುರಕ್ಷತೆಯ ಖಾತ್ರಿ: ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಕ್ರ‍್ಯೂ ಎಸ್ಕೇಪ್ ಸಿಸ್ಟಮ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಉದ್ದೇಶಿತ ರೀತಿಯಲ್ಲಿ ಕಾರ್ಯಾಚರಿಸುತ್ತವೆಯೇ ಎನ್ನುವುದು ಖಾತ್ರಿಯಾಗಲಿದೆ. ಇದು ಗಗನಯಾತ್ರಿಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ.

    ತಂತ್ರಜ್ಞಾನದ ಖಚಿತತೆ: ಪರೀಕ್ಷೆಗಳನ್ನು ನಡೆಸುವ ಮೂಲಕ ಮಾನವ ಸಹಿತ ಗಗನಯಾತ್ರೆ ಕೈಗೊಳ್ಳಲು ಅವಶ್ಯಕವಾದ ಜೀವ ಬೆಂಬಲ ವ್ಯವಸ್ಥೆ ಹಾಗೂ ಬಾಹ್ಯಾಕಾಶ ಕ್ಯಾಪ್ಸೂಲ್ ಸೇರಿದಂತೆ ವಿವಿಧ ಆಧುನಿಕ ತಂತ್ರಜ್ಞಾನಗಳ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯ.

    ಅಪಾಯಗಳನ್ನು ತಗ್ಗಿಸುವುದು: ಸಮರ್ಪಕವಾಗಿ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳು ಹಾಗೂ ಅಪಾಯಗಳನ್ನು ಗುರುತಿಸಿ, ನೈಜ ಮಾನವ ಸಹಿತ ಯೋಜನಾ ಜಾರಿಗೂ ಮುನ್ನವೇ ಅದನ್ನು ಸರಿಪಡಿಸಲು ಸಾಧ್ಯ.

    ಸಿಬ್ಬಂದಿ ತರಬೇತಿ: ಸಂಪೂರ್ಣ ಪರೀಕ್ಷೆಗಳನ್ನು ನಡೆಸುವುದರಿಂದ, ಗಗನಯಾತ್ರಿಗಳು ಮತ್ತು ಭೂ ಸಿಬ್ಬಂದಿಗೆ ಪರಿಪೂರ್ಣ ತರಬೇತಿ ಲಭಿಸುತ್ತದೆ. ಎಲ್ಲಾ ಉಪಕರಣಗಳನ್ನು, ಕಾರ್ಯಾಚರಣೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯ.

    ಯೋಜನಾ ಯಶಸ್ಸು: ಎಲ್ಲಾ ವ್ಯವಸ್ಥೆಗಳು ಸರಿಯಾದ ರೀತಿಯಲ್ಲಿ ಕಾರ್ಯಾಚರಿಸುತ್ತಿವೆ ಎಂದು ಖಾತ್ರಿಪಡಿಸಿಕೊಳ್ಳುವುದರಿಂದ ಯೋಜನೆಯ ಯಶಸ್ಸು ಸಾಧಿಸುವ ಸಾಧ್ಯತೆಗಳು ಹೆಚ್ಚಾಗಿ, ಗಗನಯಾನ ಯೋಜನೆಯ ಗುರಿಗಳನ್ನು ಸಾಧಿಸಲು ನೆರವಾಗುತ್ತದೆ.

    ಈ ಮಾನವಸಹಿತ ಗಗನಯಾನಕ್ಕೂ ಮುನ್ನ ಮೂರು ಟೆಸ್ಟ್‌ಗಳಿದ್ದು, ಮುಂದಿನ ವರ್ಷ ಮತ್ತೊಂದು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು. ‘ವ್ಯೋಮ ಮಿತ್ರ’ ಹೆಸರಿನ ಮಹಿಳಾ ರೊಬೋಟ್ ಅನ್ನು ಕಳುಹಿಸಲಾಗುವುದು ಎಂದು ಇಸ್ರೋ ಹೇಳಿದೆ. ನಂತರ ಗಗನಯಾನಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಪ್ಲಾನ್ ಮಾಡಿದೆ. ಇದನ್ನೂ ಓದಿ: ಭಾರತದಲ್ಲಿ ಇರಬೇಕೆಂದರೆ ಭಾರತ್ ಮಾತಾ ಕಿ ಜೈ ಎನ್ನಬೇಕು: ಕೇಂದ್ರ ಸಚಿವ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌

    2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌

    ನವದೆಹಲಿ: ಚಂದ್ರಯಾನ-3 (Chandrayaan-3) ಮತ್ತು ಆದಿತ್ಯ ಎಲ್‌1 (Aditya L1) ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.

    ಗಗನಯಾನ (Gaganyaan) ಕಾರ್ಯಾಚರಣೆಗಾಗಿ ಶೀಘ್ರದಲ್ಲೇ ಮಾನವರಹಿತ ಹಾರಾಟ ಪರೀಕ್ಷೆಯನ್ನು ಪ್ರಾರಂಭಿಸುವುದಾಗಿ ಇಸ್ರೋ ಹೇಳಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಇಸ್ರೋ, ಗಗನಯಾನ ಮಿಷನ್‌ಗಾಗಿ ಮಾನವರಹಿತ ಹಾರಾಟ ಪರೀಕ್ಷೆಗಳನ್ನು ಇಸ್ರೋ ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದೆ. ಇದನ್ನೂ ಓದಿ: ಸಿಕ್ಕಿಂ ಹಠಾತ್ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 56ಕ್ಕೆ ಏರಿಕೆ – 140 ಮಂದಿ ಕಣ್ಮರೆ

    ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ.ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ.

    ಕ್ರೂ ಎಸ್ಕೇಪ್‌ ಸಿಸ್ಟಮ್‌ ಗಗನಯಾನ ಯೋಜನೆಯ ಬಹುದೊಡ್ಡ ಅಂಶವಾಗಿದ್ದು, ಡೈನಮಿಕ್‌ ಪ್ರಶೆರ್‌ ಹಾಗೂ ಟ್ರಾನ್ಸಾನಿಕ್‌ ಕಂಡೀಶನ್‌ಗಳಲ್ಲಿಯೂ ಈ ವ್ಯವಸ್ಥೆ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಅದರ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳುವ ಉದ್ದೇಶವನ್ನು ಪರೀಕ್ಷಾರ್ಥ ಉಡಾವಣೆ ಹೊಂದಿದೆ. ಇದನ್ನೂ ಓದಿ: ಮಹೇಂದ್ರ ಸಿಂಗ್ ಧೋನಿ ಈಗ ಜಿಯೋಮಾರ್ಟ್ ಬ್ರಾಂಡ್ ಅಂಬಾಸಿಡರ್

    ಒಟ್ಟು 4 ಪರೀಕ್ಷಾರ್ಥ ಉಡಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯದಲ್ಲಿ ಟಿವಿ-ಡಿ1 ಎನ್ನುವ ಪರೀಕ್ಷಾರ್ಥ ವಾಹನ ಉಡಾವಣೆಯಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’

    ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’

    ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ (Gaganyaan Mission) ವ್ಯೋಮಿತ್ರ (Vyommitra) ಹೆಸರಿನ ಮಹಿಳಾ ರೋಬೋಟ್‌ (Female Robot) ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ (Jitendra Singh) ಹೇಳಿದ್ದಾರೆ.

    ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾಹ್ಯಾಕಾಶ (Space) ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಮಿತ್‌ ಶಾ ಕಾಲ್‌ ಮಾಡಿದ್ರಾ – ಪ್ರಶ್ನೆಗೆ ಶೆಟ್ಟರ್‌ ಸ್ಪಷ್ಟನೆ

    ಮಹಿಳಾ ರೋಬೋಟ್ ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ನಾವು ಈ ಯೋಜನೆಯಲ್ಲಿ ಮುಂದುವರಿಯಬಹುದು ಎಂ ಹೇಳಿದರು.

    2019 ರವರೆಗೆ ಮುಚ್ಚಿದ್ದ ಶ್ರೀಹರಿಕೋಟಾದ ಗೇಟ್‌ಗಳನ್ನು ಈಗ ತೆರೆಯಲಾಗಿದೆ. ಈಗ ಮಾಧ್ಯಮಗಳನ್ನು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬಾಹ್ಯಾಕಾಶ ಕ್ಷೇತ್ರವನ್ನು ಎಲ್ಲರಿಗೂ ಈಗ ತೆರೆದಿದ್ದಾರೆ ಎಂದರು.

    ಗಗನಯಾನ ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಿಗದಿ ಪ್ರಕಾರ 2024ಕ್ಕೆ ಮೂವರು ಗಗನಯಾನಿಗಳನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ಈ ಯೋಜನೆ ವಿಳಂಬವಾಗಿದೆ.


    ಗಗನಯಾನ ಮಿಷನ್‌ನಲ್ಲಿ ಮೂವರು ಗಗನಯಾನಿಗಳನ್ನು ಮೂರು ದಿನ 400 ಕಿ.ಮೀ ಎತ್ತರದ ಕಕ್ಷೆಗೆ ಕಳುಹಿಸಿ ನಂತರ ಸಮುದ್ರದ ನೀರಿನ ಮೇಲೆ ಇಳಿಸಲಾಗುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2022ಕ್ಕೆ ಮಾನವಸಹಿತ ಅಂತರಿಕ್ಷ ಯಾನ ಘೋಷಿಸಿದ ಮೋದಿ: ಇಸ್ರೋ ಸಿದ್ಧತೆ ಹೇಗಿದೆ?

    2022ಕ್ಕೆ ಮಾನವಸಹಿತ ಅಂತರಿಕ್ಷ ಯಾನ ಘೋಷಿಸಿದ ಮೋದಿ: ಇಸ್ರೋ ಸಿದ್ಧತೆ ಹೇಗಿದೆ?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ 2022ರ ವೇಳೆಗೆ ಮಾನವ ಸಹಿತ ಬಾಹ್ಯಾಕಾಶ ನೌಕೆ ಉಡಾವಣೆ ಮಾಡುವುದಾಗಿ ಹೇಳಿದ್ದು, ನಮ್ಮ ಕರ್ತವ್ಯವನ್ನು ಈ ಅವಧಿಯ ಒಳಗಡೆ ಈಡೇರಿಸುತ್ತೇವೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ.

    ಬೆಂಗಳೂರಿನ ಅಂತರಿಕ್ಷ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 2022ರೊಳಗೆ ಅಂತರಿಕ್ಷದಲ್ಲಿ ಮಾನವ ಸಹಿತ ಬಾಹ್ಯಾಕಾಶ ನೌಕೆ ಉಡಾವಣೆ ಮಾಡುವುದು ನಮಗೆ ಹೆಮ್ಮೆ ಮತ್ತು ಸವಾಲು. ಬಾಹ್ಯಾಕಾಶ ಯೋಜನೆ ಖಂಡಿತ ಸಾಧ್ಯವಿದ್ದು, ನಮ್ಮಿಂದ ಯಶಸ್ವಿಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

    ಯೋಜನೆ ಯಶಸ್ವಿಗೊಳಿಸಲು ಈಗಾಗಲೇ ಬೇಕಾದ ತಂತ್ರಜ್ಞಾನಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಅಂತರಿಕ್ಷ ಯಾನಿಗಳಿಗೆ ಬೇಕಾದ ಜೀವರಕ್ಷಕ ಸ್ಯೂಟ್ ಅನ್ನು ನಾವೇ ಅಭಿವೃದ್ಧಿ ಪಡಿಸಿದ್ದೇವೆ. ಜೊತೆಗೆ 10 ಸಾವಿರ ಕೋಟಿ ರೂ.ಗಿಂತ ಕಡಿಮೆ ವೆಚ್ಚದಲ್ಲಿ ಈ ಪ್ರಾಜೆಕ್ಟ್ ತಯಾರಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದನ್ನು ಓದಿ: ಮಾನವ ಸಹಿತ ಬಾಹ್ಯಾಕಾಶ ಪ್ರಯಾಣ ಮತ್ತಷ್ಟು ಹತ್ತಿರ: ಇಸ್ರೋ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

    ಕೇವಲ ದೇಶದ ಹೆಮ್ಮೆಯ ವಿಚಾರಕ್ಕಾಗಿ ಮಾತ್ರ ಮಾನವ ಸಹಿತ ಬಾಹ್ಯಾಕಾಶ ನೌಕೆ ಉಡಾವಣೆ ಆಗುತ್ತಿಲ್ಲ. ಇದು ಉಡಾವಣೆ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಮತ್ತಷ್ಟು ಉನ್ನತ ದರ್ಜೆಗೆ ಕೊಂಡೊಯ್ಯಲಿದೆ. ದೇಶದ ತಂತ್ರಜ್ಞಾನ ವ್ಯವಸ್ಥೆಗೆ ಬೇಕಾದ ಎಲ್ಲಾ ಉಪಯೋಗಗಳು ಇದರಿಂದ ಲಭ್ಯವಿದೆ ಎಂದು ವಿವರಿಸಿದರು.

    2008ರ ಅಕ್ಟೋಬರ್ ನಲ್ಲಿ ಇಸ್ರೋ ಚಂದ್ರ ಗ್ರಹಕ್ಕೆ ನೌಕೆ ಕಳುಹಿಸಿದರೆ, 2014ರ ಸೆಪ್ಟೆಂಬರ್ ನಲ್ಲಿ ಮಂಗಳ ಗ್ರಹಕ್ಕೆ ನೌಕೆ ಕಳುಹಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv