Tag: Gali Anjaneya Temple

  • ಗಾಳಿ ಆಂಜನೇಯ ದೇಗುಲ ಭಕ್ತರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಹೋಮ, ಹವನ ಮಾಡಿಸೋಕೆ ಆನ್‌ಲೈನ್ ಸೇವೆ ಆರಂಭ

    ಗಾಳಿ ಆಂಜನೇಯ ದೇಗುಲ ಭಕ್ತರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಹೋಮ, ಹವನ ಮಾಡಿಸೋಕೆ ಆನ್‌ಲೈನ್ ಸೇವೆ ಆರಂಭ

    ಬೆಂಗಳೂರು: ಗಾಳಿ ಆಂಜನೇಯ ದೇವಸ್ಥಾನ (Gali Anjaneya Temple) ಮುಜರಾಯಿ ವ್ಯಾಪ್ತಿಗೆ ಬಂದ ಬೆನ್ನಲ್ಲೆ ಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಶೀಘ್ರದಲ್ಲೇ ಹೋಮ, ಹವನ ಮಾಡಿಸಲು ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಲು ಮುಂದಾಗಿದೆ.ಇದನ್ನೂ ಓದಿ: 10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

    ಮುಜರಾಯಿ ಇಲಾಖೆ (Muzrai Department) ಆಯುಕ್ತ ವೆಂಕಟೇಶ್ ಅವರು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಗಾಳಿ ಆಂಜನೇಯ ದೇವಸ್ಥಾನದ ಯಂತ್ರ, ಪ್ರಸಾದವನ್ನು ಆನ್‌ಲೈನ್ ಮೂಲಕ ರಾಜ್ಯದ ಮೂಲೆ ಮೂಲೆಗೂ ತಲುಪಿಸಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ಜೊತೆಗೆ ಹೋಮ, ಹವನ ಮಾಡಿಸಲು ಶೀಘ್ರದಲ್ಲೇ ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

    ಇನ್ನೂ ದೇಗುಲ ಮುಜರಾಯಿ ವ್ಯಾಪ್ತಿಗೆ ಸೇರಿದ ಬಳಿಕ ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಅಲ್ಲದೇ ಪೂಜಾದರ, ಹೋಮ, ಹವನ, ಪ್ರಸಾದ ದರದಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಹೀಗಾಗಿ ಆನ್‌ಲೈನ್ ಮೂಲಕ ಎಲ್ಲಾ ಸೇವೆಗಳನ್ನು ಭಕ್ತರಿಗೆ ಸಿಗುವಂತೆ ಮಾಡಲು ಮುಜರಾಯಿ ಇಲಾಖೆ ಮುಂದಾಗಿದೆ ಎಂದಿದ್ದಾರೆ.ಇದನ್ನೂ ಓದಿ: ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದ್ರೆ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ – ಸಿಎಂ

  • ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

    ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

    ಬೆಂಗಳೂರು: ನಗರದ ಸುಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯ (Gali Anjaneya Temple) ಮುಜರಾಯಿ ಇಲಾಖೆ (Muzrai Department) ಸುಪರ್ದಿಗೆ ಬಂದಿದೆ. ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ. ದೇವಾಲಯದ ಆಡಳಿತ ಮಂಡಳಿ ಈಗ ಬೇರೆ ದಾರಿ ಕಾಣದೇ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಲು ಸಜ್ಜಾಗಿದೆ..

    ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಾಲಯದ ನಿರ್ವಹಣೆಗೆ ಕಾರ್ಯಪಾಲಕ ಅಧಿಕಾರಿಯನ್ನು ನೇಮಕ ಮಾಡಿದೆ. ಇಓ ನಾರಾಯಣಸ್ವಾಮಿ ಅಧಿಕಾರ ವಹಿಸಿಕೊಂಡು ದೇವಾಲಯದ ಅಧಿಕಾರ ಪಡೆದುಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ದೇವಾಲಯದ ಆಡಳಿತ ಮಂಡಳಿ ಖಂಡಿಸಿದೆ. ನಮ್ಮ ಪೂರ್ವಿಕರಿಂದ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯತ್ವ ದೊರತಿದ್ದು, ಇಷ್ಟು ವರ್ಷ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ ನಮಗೆ ಅನ್ಯಾಯವಾಗಿದೆ ಎಂದು ಗ್ರಾಮಸ್ಥರು ಮತ್ತು ಟ್ರಸ್ಟಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

    ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನದ ಸಂಪೂರ್ಣ ಆಡಳಿತವನ್ನ ತನ್ನ ಅಧೀನಕ್ಕೆ ತೆಗೆದುಕೊಂಡಿದೆ. ಸೋಮವಾರ ಹೈಕೋರ್ಟ್‌ನಲ್ಲಿ (High Court) ಅರ್ಜಿ ಹಾಕಿ ಸರ್ಕಾರದ ವಿರುದ್ಧ ಕಾನೂನಿನ ಹೋರಾಟ ಮಾಡಲು ಟ್ರಸ್ಟಿಗಳು ಸಜ್ಜಾಗಿದ್ದಾರೆ. ಆಡಳಿತ ಮಂಡಳಿಯ ಕಿತ್ತಾಟದ ಮಧ್ಯೆ ಪ್ರತಿನಿತ್ಯ ಸಾವಿರಾರು ಭಕ್ತರು ಗಾಳಿ ಆಂಜನೇಯನ ದರ್ಶನ ಪಡೆಯುತ್ತಾರೆ. ಭಕ್ತರಿಗೆ ಮತ್ತು ಅಲ್ಲಿನ ಪುರೋಹಿತ ವರ್ಗಕ್ಕೆ ಯಾವುದೇ ಸಮಸ್ಯೆ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ಇದನ್ನೂ ಓದಿ: ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

  • ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇಗುಲ – 5 ವರ್ಷದ ನಂತ್ರ ಟ್ರಸ್ಟ್‌ಗೆ ವಾಪಸ್: ರಾಮಲಿಂಗಾರೆಡ್ಡಿ

    ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇಗುಲ – 5 ವರ್ಷದ ನಂತ್ರ ಟ್ರಸ್ಟ್‌ಗೆ ವಾಪಸ್: ರಾಮಲಿಂಗಾರೆಡ್ಡಿ

    ಬೆಂಗಳೂರು: ನಗರದ ಪ್ರತಿಷ್ಟಿತ ಗಾಳಿ ಆಂಜನೇಯ ದೇಗುಲವನ್ನು ಮುಜುರಾಯಿ ಇಲಾಖೆ (Muzurai Department) ಸುಪರ್ದಿಗೆ ತೆಗೆದುಕೊಂಡ ನಂತರ ದೇವಸ್ಥಾನದ ಆಡಳಿತ ಮಂಡಳಿ ಸಿಡಿದೆದ್ದಿದೆ. ಈ ಬೆನ್ನಲ್ಲೇ ಇದು ತಾತ್ಕಾಲಿಕ, 5 ವರ್ಷದ ನಂತರ ದೇಗುಲವನ್ನು ಟ್ರಸ್ಟ್‌ಗೆ ವಾಪಸ್ ಕೊಡುತ್ತೇವೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಳಿ ಆಂಜನೇಯ ಸ್ವಾಮಿ ದೇಗುಲದಲ್ಲಿ ಹಣ ದುರುಪಯೋಗ ಆಗಿದೆ. ಹೀಗಾಗಿ ಈ ಕ್ರಮ ಆಗಿದೆ. ಇದು ತಾತ್ಕಲಿಕ ಅಷ್ಟೇ. 5 ವರ್ಷದ ಬಳಿಕ ದೇಗುಲವನ್ನು ಮಂಡಳಿಗೆ ವಾಪಸ್ ಕೊಡುತ್ತೇವೆ. ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಹಣಕಾಸಿನ ಲೆಕ್ಕವಿಲ್ಲ. ಯಾವುದೇ ದೇವಸ್ಥಾನದಲ್ಲಿ ಹಣಕಾಸಿನ ದುರುಪಯೋಗ ಆದರೆ ಅದನ್ನು ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಸುಮಾರು 10 ದೇವಾಲಯಗಳನ್ನು ವಶಕ್ಕೆ ಪಡೆದುಕೊಂಡಿತ್ತು ಎಂದು ಹೇಳಿದರು.ಇದನ್ನೂ ಓದಿ: ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

    ಗುರುವಾರ ಮುಜರಾಯಿ ಇಲಾಖೆಯು ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿತ್ತು. ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು.

    ಇದೀಗ ಮುಜರಾಯಿ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸು ಮಾಡಿತ್ತು. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಅಂತ ಘೋಷಣೆ ಮಾಡಿತ್ತು. ಈ ಆದೇಶದ ಬೆನ್ನಲ್ಲೇ ದೇವಸ್ಥಾನದ ಟ್ರಸ್ಟಿಗಳು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದರು.

    ದೇವಸ್ಥಾನವನ್ನು ಸರ್ಕಾರ ಸುಪರ್ದಿಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದು ಹೇಳಿ ದೇವಸ್ಥಾನದ ಆಡಳಿತ ಮಂಡಳಿ 12 ಗಂಟೆಗೆ ತುರ್ತು ಸಭೆ ಕರೆದಿತ್ತು. ಸಭೆ ಬಳಿಕ ನಾವು ಕಾನೂನು ಹೋರಾಟ ಮಾಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು.ಇದನ್ನೂ ಓದಿ: ಟೆನ್ನಿಸ್‌ ತಾರೆಯ ಕೊಲೆಗೆ ಸ್ಫೋಟಕ ಟ್ವಿಸ್ಟ್‌ – ಮ್ಯೂಸಿಕ್‌ ಆಲ್ಬಂಗೆ ಸಿಟ್ಟಾಗಿ ಮಗಳ ಹತ್ಯೆ?

  • ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

    ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

    – ಮುಜರಾಯಿ ಇಲಾಖೆ ಆದೇಶ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು (Gali Anjaneya Temple) ಮುಜರಾಯಿ ಇಲಾಖೆ (Muzrai Department) ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿದೆ.

    ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಇದನ್ನೂ ಓದಿ: ಕಪಿಲ್‌ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಭಯೋತ್ಪಾದಕರಿಂದ ಗುಂಡಿನ ದಾಳಿ

    ಇದೀಗ ಮುಜರಾಯಿ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸು ಮಾಡಲಾಗಿದೆ. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಅಂತ ಘೋಷಣೆ ಮಾಡಿದೆ. ಇದನ್ನೂ ಓದಿ: ರೀಲ್ಸ್ ಚಟ – ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ