Tag: game

  • ‘ಬಿಗ್ ಬಾಸ್’ ಮನೆಯಲ್ಲಿ ಕಾರ್ತಿಕ್, ವಿನಯ್ ನಡುವೆ ಗುದ್ದಾಟ

    ‘ಬಿಗ್ ಬಾಸ್’ ಮನೆಯಲ್ಲಿ ಕಾರ್ತಿಕ್, ವಿನಯ್ ನಡುವೆ ಗುದ್ದಾಟ

    ಬಾರೋ ಅಂದ್ರೆ ಬರದೆ ಇರ್ತೀವಾ ನಾವು?’ ‘ಇದು ನಿಮ್ಮ ಆಟ… ನಿಮ್ಮನ್…’ ‘ಏನೋ ನಿಮ್ಮನ್… ಹೇಳೋ… ಮುಂದಕ್ಕೆ ಹೇಳೋ…’ ‘ಅಗ್ರೆಸಿವ್ ಆಗಿ ಆಡ್ಬೇಕಾ? ಡರ್ಟಿ ಗೇಮ್ ನಾನ್ ತೋರಿಸ್ತೀನಿ’ ಬಿಗ್‌ಬಾಸ್ (Bigg Boss Kannada) ಮನೆಯಲ್ಲಿ ಮಾತುಗಳ ಚಕಮಕಿ ತಾರಕಕ್ಕೇರಿದೆ. ಮಾತಿನ ಜೊತೆಗೆ ಕೈ ಕೈ ಮಿಲಾಯಿಸುವ, ಎದುರಾಬದಿರು ನಿಂತು ಕೆಣಕುವ ಪ್ರಸಂಗಗಳೂ ನಡೆದಿವೆ.

    ವಿನಯ್‌ (Vinay) ಮತ್ತು ಕಾರ್ತಿಕ್ (Karthik) ಮಧ್ಯೆ ಮತ್ತೆ ಬೆಂಕಿ ಹೊತ್ತಿಕೊಂಡಿದೆ. JioCinema ಬಿಡುಗಡೆ ಮಾಡಿರುವ ಪ್ರೊಮೊದಲ್ಲಿ ಈ ಬೆಂಕಿಯ ಕಿಡಿಗಳು ಸಿಡಿಯುತ್ತಿರುವುದು ಜಾಹೀರಾಗಿದೆ. ಬಿಗ್‌ಬಾಸ್ ಮನೆಯ ಸದಸ್ಯರಿಗೆ ‘ಮಣ್ಣಿನಲ್ಲಿ ಬಣ್ಣದ ಹೂಗಳನ್ನು ನೆಟ್ಟು, ಎದುರಾಳಿ ತಂಡದಿಂದ ಅವುಗಳನ್ನು ಕಾಪಾಡಿಕೊಳ್ಳಬೇಕು’ ಎಂಬ ಟಾಸ್ಕ್ ನೀಡಲಾಗಿದೆ. ಹೂವಿನಿಂದ ಶುರುವಾದ ಈ ಆಟ ಸ್ವಲ್ಪವೇ ಹೊತ್ತಿನಲ್ಲಿ ಜಿದ್ದಾಜಿದ್ದಿಯ ಬೆಂಕಿಯಾಗಿ ಬೆಳೆದಿದೆ.

    ಒಂದು ತಂಡದ ಹೂವನ್ನು ಇನ್ನೊಂದು ತಂಡ ಕಿತ್ತುಕೊಳ್ಳಲು ಹಾಳುಗೆಡವಲು ಯತ್ನಿಸಿದ್ದು ಮಾತಿನ ಚಕಮಕಿಗೆ ಕಾರಣವಾಗಿದೆ. ಒಬ್ಬರು ಇನ್ನೊಬ್ಬರನ್ನು ಎಳದಾಡಿ, ಜಗಳವಾಡಿಕೊಳ್ಳುವವರೆಗೂ ಮುಟ್ಟಿದೆ. ತುಕಾಲಿ ಸಂತೋಷ್, ಪ್ರತಾಪ್ ಅವರನ್ನು  ನೆಲಕ್ಕುರುಳಿಸಿ ಹೂ ಹಾಳು ಮಾಡಿದ್ದಾರೆ. ಕಾರ್ತಿಕ್ ಎದುರಾಳಿ ತಂಡದ ಹೂಬುಟ್ಟಿಯನ್ನು ಹೊತ್ತೊಯ್ದಿದ್ದಾರೆ. ಅವರನ್ನು ಹಿಂಬಾಲಿಸಿದ ವಿನಯ್ ಅವರನ್ನು ಜಗ್ಗಾಡಿದ್ದಾರೆ. ಮೈಕಲ್ ಹೂಬುಟ್ಟಿ ಗಟ್ಟಿಯಾಗಿ ಹಿಡಿದುಕೊಂಡರೆ ಉಳಿದವರೆಲ್ಲ ಅವರ ಮೇಲೆ ಬಿದ್ದಿದ್ದಾರೆ.

     

    ಕಳೆದ ಒಂದೆರಡು ವಾರಗಳಲ್ಲಿ ಸೈಲೆಂಟ್ ಆಗಿದ್ದ ವಿನಯ್ ಈ ವಾರ ಸಖತ್ ಅಗ್ರೆಸಿವ್ ಆಗಿದ್ದಾರೆ. ಅದರ ಪರಿಣಾಮ ಈ ಗೇಮ್‌ನಲ್ಲಿ ಸ್ಪಷ್ಟವಾಗಿಯೇ ಕಾಣಿಸಿಕೊಳ್ಳುತ್ತಿದೆ.

  • ಗದರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗ – ಪಶ್ಚಾತ್ತಾಪದಿಂದ ತಂದೆನೂ ನೇಣಿಗೆ ಶರಣು

    ಗದರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗ – ಪಶ್ಚಾತ್ತಾಪದಿಂದ ತಂದೆನೂ ನೇಣಿಗೆ ಶರಣು

    ಚೆನ್ನೈ: ಸದಾ ಮೊಬೈಲ್‍ನಲ್ಲಿ ಗೇಮ್ ಆಡುತ್ತಿದ್ದಕ್ಕೆ ಗದರಿಸಿದ್ದರಿಂದ ಮಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು. ಇದನ್ನು ಕಂಡ ಕೆಲವೇ ನಿಮಿಷಗಳಲ್ಲಿ ಪಶ್ಚಾತ್ತಾಪದಿಂದ ತಂದೆ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದ್ರತೂರಿನಲ್ಲಿ (Kundrathur) ನಡೆದಿದೆ.

    ಮೃತ ವ್ಯಕ್ತಿಯನ್ನು ಕುಂದ್ರತ್ತೂರಿನ ತಿರುವಳ್ಳುವರ್ ಪ್ರದೇಶದಲ್ಲಿ (Thiruvalluvar Street) ಬಡಗಿಯಾಗಿದ್ದ ಸುಂದರ್(40) ಎಂದು ಗುರುತಿಸಲಾಗಿದೆ. ಹತ್ತನೇ ತರಗತಿಯಲ್ಲಿ ಓದುತ್ತಿದ್ದ ತಮ್ಮ ಕಿರಿಯ ಮಗ ನವೀನ್ ಸದಾ ಮೊಬೈಲ್ ಫೋನ್‍ನಲ್ಲಿ ಗೇಮ್ ಆಡುತ್ತಿದ್ದರಿಂದ ಓದುವತ್ತ ಗಮನ ಹರಿಸುವಂತೆ ಗದರಿಸಿದ್ದರು. ಇದನ್ನೂ ಓದಿ: ನಾನ್ ಹೆಲ್ಮೆಟ್ ಹಾಕಿಲ್ಲ ಅಂದ್ರೆ ನಿನ್ಗೇನ್ ಕಷ್ಟ – ಬೈಕ್ ಸವಾರನಿಗೆ ಪೊಲೀಸ್ ಅವಾಜ್

    ಇದರಿಂದ ಮನನೊಂದ ನವೀನ್ ಮನೆಯಲ್ಲಿ ಒಬ್ಬನೇ ಇದ್ದಾಗ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂತರ ಮನೆಗೆ ಹಿಂತಿರುಗಿದ ಸುಂದರ್‌ಗೆ ನೆರೆಹೊರೆಯವರು ನವೀನ್ ಮೃತಪಟ್ಟಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಮಗ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದುಕೊಂಡಿರುವುದನ್ನು ಕಂಡು ಸುಂದರ್ ಆಘಾತಕ್ಕೊಳಗಾದರು. ನಂತರ ಅಡುಗೆ ಮನೆಗೆ ಹೋಗಿ ಸುಂದರ್ ಚಾಕುವಿನಿಂದ ಕತ್ತು ಮತ್ತು ಕೈಗಳನ್ನು ಕೊಯ್ದುಕೊಂಡಿದ್ದಾರೆ. ಕೊನೆಗೆ ಕೊಠಡಿಯೊಂದರ ಬಾಗಿಲಿಗೆ ಬೀಗ ಹಾಕಿಕೊಂಡು ನೇಣಿಗೆ ಶರಣಾಗಿದ್ದಾರೆ.

    ಘಟನೆ ಕುರಿತಂತೆ ನೆರೆಹೊರೆಯವರು ಕುಂದ್ರತ್ತೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕ್ರೋಮ್‍ಪೇಟೆ ಸರ್ಕಾರಿ ಆಸ್ಪತ್ರೆಗೆ (Chromepet government hospital) ರವಾನಿಸಿದ್ದಾರೆ. ಇದೀಗ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಮೊಬೈಲ್ ವಿಚಾರಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ನಿಮಿಷಗಳಲ್ಲಿ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅನಂತ್ ನಾಗ್ ಗೆ ಗೌರವ ಡಾಕ್ಟರೇಟ್ ಪ್ರದಾನ: ಕುಟುಂಬದ ಒತ್ತಾಯಕ್ಕೆ ಸ್ವೀಕರಿಸಿದೆ

    Live Tv
    [brid partner=56869869 player=32851 video=960834 autoplay=true]

  • ಅಧಿವೇಶನದಲ್ಲಿ ತಂಬಾಕು ತಿನ್ನೋದ್ರಲ್ಲಿ, ಗೇಮ್ ಆಡೋದ್ರಲ್ಲಿ ಶಾಸಕರು ಬ್ಯುಸಿ – ಬಿಜೆಪಿ ವಿರುದ್ಧ ಎಸ್‍ಪಿ ವ್ಯಂಗ್ಯ

    ಅಧಿವೇಶನದಲ್ಲಿ ತಂಬಾಕು ತಿನ್ನೋದ್ರಲ್ಲಿ, ಗೇಮ್ ಆಡೋದ್ರಲ್ಲಿ ಶಾಸಕರು ಬ್ಯುಸಿ – ಬಿಜೆಪಿ ವಿರುದ್ಧ ಎಸ್‍ಪಿ ವ್ಯಂಗ್ಯ

    ಲಕ್ನೋ: ವಿಧಾನಸಭೆಯಲ್ಲಿ ಅಧಿವೇಶನ (Assembly) ನಡೆಯುತ್ತಿದ್ದಾಗ ಉತ್ತರ ಪ್ರದೇಶದ (UttarPradesh) ಬಿಜೆಪಿ ಶಾಸಕರು ತಂಬಾಕು (Tobacco) ಸೇವನೆ ಮತ್ತು ಗೇಮ್ (Game) ಆಡಿದ್ದಾರೆ.

    ಈ ಇಬ್ಬರು ಶಾಸಕರ ವೀಡಿಯೋವನ್ನು ಸಮಾಜವಾದಿ ಪಕ್ಷ (Samajwadi Party) ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಶಾಸಕರ ಅಶಿಸ್ತನ್ನು ಖಂಡಿಸಿದೆ. ಮಹೋಬಾದ (Mahoba) ಬಿಜೆಪಿ ಶಾಸಕ ರಾಕೇಶ್‌ ಗೋಸ್ವಾಮಿ (Rakesh Goswami) ಮೂರು ಎಲೆಗಳಿರುವ ಇಸ್ಪೀಟ್ ಗೇಮ್ ಆಡಿದ್ದರೆ, ಝಾನ್ಸಿ (Jhansi) ಶಾಸಕ ರವಿಕುಮಾರ್ ಶರ್ಮಾ (Ravi Sharmar Sharma) ಅವರ ಟೇಬಲ್ ಕೆಳಗೆ ಮುಚ್ಚಿಟ್ಟುಕೊಂಡು ತಂಬಾಕು ತಿಂದಿದ್ದಾರೆ. ಶಾಸಕರ ವರ್ತನೆಯಿಂದ ಬಿಜೆಪಿ ಪಕ್ಷ ಮುಜುಗರಕ್ಕೆ ಒಳಗಾಗಿದೆ. ಇದನ್ನೂ ಓದಿ: ಆಪ್ ಸರ್ಕಾರದ ವಿರುದ್ಧ ಎಲ್‍ಜಿ ವಾರ್ – ಮನೀಷ್ ಸಿಸೋಡಿಯಾ ವಿರುದ್ಧ ತನಿಖೆಗೆ ಸೂಚನೆ

    ಗುರುವಾರದ ಸದನದಲ್ಲಿ ಮಹಿಳೆಯರ ವಿಶೇಷ ದಿನವಾಗಿ ಆಚರಿಸಲಾಗಿತ್ತು. ಈ ವಿಶೇಷ ದಿನದಂದೇ ಬಿಜೆಪಿ ಶಾಸಕರು ಅಶಿಸ್ತು ತೋರಿಸಿದ್ದಾರೆ. ಇದನ್ನೂ ಓದಿ:  ಬೀದಿನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಿ ಅಂದ್ರೆ ಕಾಡುಪ್ರಾಣಿಗಳ ಆಹಾರಕ್ಕಾಗಿ ಕಾಡಿಗೆ ಬಿಟ್ಟ ಪುರಸಭೆ

    Live Tv
    [brid partner=56869869 player=32851 video=960834 autoplay=true]

  • ಆನ್‍ಲೈನ್ ಗ್ಯಾಂಬ್ಲಿಂಗ್ ಗೇಮ್‍ಗಳ ನಿಷೇಧ – ಗೇಮಿಂಗ್ ಕಂಪನಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್

    ಆನ್‍ಲೈನ್ ಗ್ಯಾಂಬ್ಲಿಂಗ್ ಗೇಮ್‍ಗಳ ನಿಷೇಧ – ಗೇಮಿಂಗ್ ಕಂಪನಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್

    ನವದೆಹಲಿ: ಆನ್‍ಲೈನ್ ಗ್ಯಾಂಬ್ಲಿಂಗ್ (Online Gambling) ಗೇಮ್‍ಗಳ(Game) ನಿಷೇಧಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್(Supreme Court) ಇಂದು ಆನ್‍ಲೈನ್ ಗೇಮಿಂಗ್ ಕಂಪನಿಗಳಿಗೆ ನೋಟಿಸ್(Notice) ಜಾರಿ ಮಾಡಿದೆ.

    ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅಬ್ದುಲ್ ನಜೀರ್(Abdul Nazir) ನೇತೃತ್ವದ ದ್ವಿ ಸದಸ್ಯ ಪೀಠ ಈ ನೋಟಿಸ್ ಜಾರಿ ಮಾಡಿದ್ದು, ರಾಜ್ಯದಲ್ಲಿ ಆನ್‍ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧರಿಸಿದ್ದ ಕರ್ನಾಟಕ ಸರ್ಕಾರ (Karnataka Government) ಆನ್‍ಲೈನ್ ಗೇಮ್ ಬ್ಯಾನ್ ಮಾಡಿ ಈ ಹಿಂದೆ ಆದೇಶ ಹೊರಡಿಸಿತ್ತು. ಅಕ್ಟೋಬರ್ 10 ರಿಂದ ಡ್ರೀಮ್ ಇಲೆವೆನ್, ಪೇ ಟೀಂ ಫಸ್ಟ್, ಗೇಮ್‍ಜಿ ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಆ್ಯಪ್‍ಗಳನ್ನು (Fantasy Game App) ಸ್ಥಗಿತಗೊಳಿಸಿತ್ತು. ಸರ್ಕಾರದ ಈ ಕ್ರಮವನ್ನು ಗೇಮಿಂಗ್ ಕಂಪನಿಗಳು (Gaming Company) ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದವು.  ಇದನ್ನೂ ಓದಿ: ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೋಷಕರ ಮೇಲೆ ಹಲ್ಲೆ- ವೀಡಿಯೋ ಮಾಡಿ ಲವ್ವರ್ಸ್ ಮನವಿ

    ಅರ್ಜಿ ವಿಚಾರಣೆ ನಡೆಸಿದ್ದ ಸಿಜೆ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ದೀಕ್ಷಿತ್‍ರ (Krishna Dixit) ಪೀಠ ಆನ್‍ಲೈನ್ ಗೇಮ್‍ಗೆ ಗ್ರೀನ್ ಸಿಗ್ನಲ್ ನೀಡಿತ್ತು. ಹೈಕೋರ್ಟ್ (High Court) ಆದೇಶವನ್ನು ಪ್ರಶ್ನೆ ಮಾಡಿ ಈಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇಂದು ವಿಚಾರಣೆ ನಡೆಸಿದ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ದೇಣಿಗೆಯಾಗಿ 2,000 ರೂ. ಕೊಡದ ತರಕಾರಿ ವ್ಯಾಪಾರಿಗೆ ಬೆದರಿಕೆ

    Live Tv
    [brid partner=56869869 player=32851 video=960834 autoplay=true]

  • ಗೇಮ್ ಆಡಲು ಫೋನ್‌ ನೀಡದ್ದಕ್ಕೆ ತಾಯಿಯನ್ನೇ  ಕೊಂದು 2 ದಿನ ಶವವನ್ನು ಮನೆಯೊಳಗೆ ಬಚ್ಚಿಟ್ಟ

    ಗೇಮ್ ಆಡಲು ಫೋನ್‌ ನೀಡದ್ದಕ್ಕೆ ತಾಯಿಯನ್ನೇ ಕೊಂದು 2 ದಿನ ಶವವನ್ನು ಮನೆಯೊಳಗೆ ಬಚ್ಚಿಟ್ಟ

    ಲಕ್ನೋ: ಗೇಮ್ ಆಡಲು ಮೊಬೈಲ್ ಕೊಡದಿದ್ದಕ್ಕೆ ತನ್ನ ತಾಯಿಯನ್ನೇ  ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಎರಡು ದಿನಗಳ ಕಾಲ ಮನೆಯಲ್ಲಿ ಬಚ್ಚಿಟ್ಟಿದ್ದ ಕ್ರೂರ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಲಕ್ನೋದಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ 16 ವರ್ಷದ ಬಾಲಕ, ತಾಯಿ ಹಾಗೂ ಆತನ ಸಹೋದರಿ ವಾಸವಾಗಿದ್ದರು. ಬಾಲಕನ ತಂದೆ ಪಶ್ಚಿಮ ಬಂಗಾಳದಲ್ಲಿ ಸೇನಾಧಿಕಾರಿ ಆಗಿ ಕೆಲಸ ಮಾಡುತ್ತಿದ್ದರು.

    ಬಾಲಕನೊಬ್ಬನಿಗೆ ಗೇಮ್ ಆಡುವ ಚಟವಿತ್ತು. ಆದರೆ ಇದಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಬಾಲಕನು ತನ್ನ ತಂದೆಯ ಪರಾವನಗಿಯಿದ್ದ ರಿವಾಲ್ವರ್‌ನಿಂದ ತನ್ನ ತಾಯಿಗೆ ಗುಂಡು ಹಾರಿಸಿದ್ದಾನೆ. ಇದರ ಪರಿಣಾಮವಾಗಿ ತಲೆಗೆ ಗುಂಡು ತಗುಲಿದ ಮಹಿಳೆ ಸ್ವಲ್ಪ ಸಮಯದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಬೆಚ್ಚಿ ಬೀಳಿಸಿದ ಮಹಿಳೆಯರ ಕೊಲೆ – ದೇಹವನ್ನು ತುಂಡರಿಸಿ ಕಾಲುವೆಗೆ ಎಸೆದ ಕಟುಕರು

    ಅಷ್ಟೇ ಅಲ್ಲದೇ ಈ ವಿಷಯ ಯಾರಿಗೂ ತಿಳಿಯಬಾರದು ಎಂದು ತನ್ನ ತಾಯಿಯ ಶವವನ್ನು ಕೊಣೆಯೊಂದರಲ್ಲಿ ಬಚ್ಚಿಟ್ಟಿದ್ದಾನೆ. ತನ್ನ ತಂಗಿಗೂ ಘಟನೆಯ ಕುರಿತು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುತ್ತೇನೆ ಎಂದು ಹೆದರಿಸಿದ್ದಾನೆ.

    ಹೀಗೆ ಎರಡು ದಿನಗಳ ಕಾಲ ತಂಗಿಯ ಜೊತೆಗೆ ಆತ ತಾಯಿಯ ಶವವನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡು ವಾಸವಾಗಿದ್ದ. ಅಷ್ಟೇ ಅಲ್ಲದೇ ಶವದಿಂದ ದುರ್ವಾಸನೆ ಬಾರದಿರಲಿ ಎಂದು ಆತ ಮನೆಯಲ್ಲಿ ರೂಮ್ ಫ್ರೆಶ್ನರ್ ಹಾಕಿದ್ದ. ಇದನ್ನೂ ಓದಿ: ಮತ್ತೆ ಶುರುವಾಯ್ತು ಜಹಾಗೀರ್‌ಪುರಿಯಲ್ಲಿ ಕಲ್ಲು ತೂರಾಟ – ವಾಹನಗಳು ಧ್ವಂಸ

    ಆದರೆ ಕೊಳೆತ ದೇಹದ ವಾಸನೆ ಹೆಚ್ಚಾದಾಗ ತಂದೆಗೆ ತಾಯಿ ಮೃತಪಟ್ಟಿರುವ ವಿಷಯ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಎಲೆಕ್ಟ್ರಿಷಿಯನ್ ಒಬ್ಬ ಕೆಲಸಕ್ಕೆಂದು ಮನೆಗೆ ಬಂದಿದ್ದ. ಆ ವೇಳೆ ತಾಯಿಯನ್ನು ಕೊಲೆ ಮಾಡಿ ಹೋಗಿದ್ದಾನೆ ಎಂದು ಕಟ್ಟು ಕಥೆಯನ್ನು ಸೃಷ್ಟಿಸಿದ್ದಾನೆ.

    ಘಟನೆ ಬಗ್ಗೆ ತಿಳಿದ ತಂದೆ ನೆರೆಹೊರೆಯವರಿಗೆ ತಿಳಿಸಿದ್ದು, ಕೂಡಲೇ ಪೊಲೀಸರಿಗೂ ತಿಳಿಸಿದ್ದಾರೆ. ಪೊಲೀಸರಿಗೂ ಆತ ಅದೇ ಕಥೆ ಹೇಳಿದ್ದಾನೆ. ಆದರೆ ತನಿಖೆ ನಡೆಸಿದ ಪೊಲೀಸರಿಗೆ ನಿಜವಾದ ಸತ್ಯ ತಿಳಿದಿದ್ದು, ಬಾಲಕನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಹದಿಹರೆಯದ ಯುವಕ ತಪ್ಪೊಪ್ಪಿಕೊಂಡಿದ್ದಾನೆ.

  • ನಿದ್ದೆ ಮಾಡುವುದಾಗಿ ಹೇಳಿ ಬೆಡ್‍ರೂಮ್‍ಗೆ ಹೋದ ಮಗಳು ದುರಂತ ಸಾವು

    ನಿದ್ದೆ ಮಾಡುವುದಾಗಿ ಹೇಳಿ ಬೆಡ್‍ರೂಮ್‍ಗೆ ಹೋದ ಮಗಳು ದುರಂತ ಸಾವು

    ಹೈದರಾಬಾದ್: ಮೊಬೈಲ್‍ನಲ್ಲಿ ಗೇಮ್ ಆಡಬೇಡ ಎಂದು ತಂದೆ ಗದರಿದ್ದಕ್ಕೆ ಮನನೊಂದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶಾರಣಾಗಿರುವ ಘಟನೆ ತೆಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಕೌಶಿಕಿ (17) ಮೃತಳಾಗಿದ್ದಾಳೆ. ಈಕೆ ಬಾಳಾಪುರ್ ಮೂಲದ ವೇಲದುರ್ತಿ ಮನೋಹರಚಾರಿ ಮತ್ತು ಕಲ್ಯಾಣ ದಂಪತಿ ಮಗಳಾಗಿದ್ದಾಳೆ. ಇವರಿಗೆ ಮೂವರು ಮಕ್ಕಳಿದ್ದಾರೆ. ಈ ಕುಟುಂಬ ಮೀರ್‌ಪೇಟ್ ನ ಸರ್ವೋದಯ ನಗರದಲ್ಲಿ ಕಳೆದ ಹತ್ತು ವರ್ಷಗಳಿಂದ ವಾಸವಾಗಿದ್ದರು.

    ಕೌಶಿಕಿ ದ್ವೀತಿಯ ಪಿಯು ವಿದ್ಯಾರ್ಥಿನಿ ಆಗಿದ್ದಳು. ಮೊಬೈಲ್ ಗೀಳಿಗೆ ಬಿದ್ದಿದ್ದ ಕೌಶಿಕಿ ಅಪ್ಪನ ಮೊಬೈಲ್ ತೆಗೆದುಕೊಂಡು ಪ್ರತಿದಿನ ಗೇಮ್ ಆಡುತ್ತಿದ್ದಳು. ಗೇಮ್ ಆಡುತ್ತಿರುವಾಗ ಒಂದು ದಿನ ರಾತ್ರಿ ಕೌಶಿಕಿ ತಂದೆ ಆಕೆಯನ್ನು ಬೈದು ಮೊಬೈಲ್ ಕಿತ್ತುಕೊಂಡಿದ್ದರು. ಇದನ್ನೂ ಓದಿ:   ಬೆಂಗಳೂರಿನಲ್ಲೇ ನಡೆಯಲಿದೆ ಪ್ರೊ ಕಬಡ್ಡಿ ಲೀಗ್

    ಅಪ್ಪ ಬೈದಿದ್ದರಿಂದ ಬೇಸರಗೊಂಡಿದ್ದ ಕೌಶಿಕಿ ಅದೇ ದಿನ ರಾತ್ರಿ ಮಲಗುವುದಾಗಿ ಹೇಳಿ ಬೆಡ್‍ರೂಮ್‍ಗೆ ಹೋಗಿ ಲಾಕ್ ಮಾಡಿಕೊಂಡಿದ್ದಳು. ಅದೇ ಕೋಣೆಯಲ್ಲಿ ಆಕೆಯ ಸಹೋದರಿ ಕೂಡಾ ಮಲಗಿದ್ದಳು. ಆದರೆ ಈ ನಡುವೆ ತಾಯಿ ಕಿಟಕಿ ಬಾಗಿಲು ತಟ್ಟಿದ್ದಾರೆ. ಕೌಶಿಕಿ ಸಹೋದರಿ ಎಚ್ಚರಗೊಂಡು ನೋಡಿದಾಗ ಅಕ್ಕ ದುಪ್ಪಟ್ಟಿದಿಂದ ನೇಣು ಹಾಕಿಕೊಂಡಿರುವುದನ್ನು ನೋಡಿ ಜೋರಾಗಿ ಕಿರುಚಿದ್ದಾಳೆ. ಇದನ್ನೂ ಓದಿ: ಗ್ರಾಹಕರಿಗೆ ಇನ್ನಷ್ಟು ಹೊರೆ- ಸಿಲಿಂಡರ್ ದರದಲ್ಲಿ 15 ರೂ. ಏರಿಕೆ

    ತಕ್ಷಣ ಕೌಶಿಕಿಯನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೌಶಿಕಿ ಸಾವನ್ನಪ್ಪಿದ್ದಾಳೆ. ಸದಯ ಈ ಪ್ರಕರಣ ಮೀರ್‍ಪೇಟ್ ಠಾಣೆಯಲ್ಲಿ ದಾಖಲಾಗಿದೆ.

  • ನಾನು ಸಿಂಗಲ್, ಆಟದ ಮೇಲೆ ಮಾತ್ರ ನನ್ನ ಗಮನ: ನೀರಜ್ ಚೋಪ್ರಾ

    ನಾನು ಸಿಂಗಲ್, ಆಟದ ಮೇಲೆ ಮಾತ್ರ ನನ್ನ ಗಮನ: ನೀರಜ್ ಚೋಪ್ರಾ

    ನವದೆಹಲಿ: ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತರಾಗಿದ್ದಾರೆ. ಇದೀಗ ಅವರು ಕೊಟ್ಟಿರುವ ಒಂದು ಹೇಳಿಕೆ ಸಖತ್ ಸುದ್ದಿಯಾಗುತ್ತಿದೆ.

    ನೀರಜ್ ಚೋಪ್ರಾ ಅವರ ವೈಯಕ್ತಿಕ ಜೀವನ ಕುರಿತಾಗಿ ಎಲ್ಲವನ್ನೂ ತಿಳಿದುಕೊಳ್ಳಲು ಅಭಿಮಾನಿಗಳು ಆಸಕ್ತಿ ಹೊಂದಿದ್ದಾರೆ. ಚಿನ್ನವನ್ನು ಹೇಗೆ ಗೆದ್ದರು? ಇವರ ಸಾಧನೆ ಹಿಂದೆಯಾರಿದ್ದಾರೆ? ಇತ್ಯಾದಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದೀಗ ಇವರು ಸಂದರ್ಶನವೊಂದರಲ್ಲಿ ಹೇಳಿರುವ ಒಂದು ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ: ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಬೊಮ್ಮಾಯಿ ಆದೇಶ

    ಮಹಿಳಾ ಅಭಿಮಾನಿಗಳಿಂದ ಇಷ್ಟೊಂದು ಪ್ರಿತಿ, ಮೆಚ್ಚುಗೆ ಬರುತ್ತಿದೆ ಈ ಕುರಿತಾಗಿ ಏನು ಹೇಳುತ್ತೀರಿ ಎಂಬ ಪ್ರಶ್ನೆಗೆ ನೀರಜ್, ಇದು ಒಳ್ಳೆಯದು. ಆದರೆ ಸತ್ಯವನ್ನು ಹೇಳಬೇಕು ಎಂದರೆ, ನಾನು ಇನ್ನೂ ಸೀಂಗಲ್. ನಾನು ಅಭಿಮಾನಿಗಳಿಂದ ತುಂಬಾ ಪ್ರೀತಿಯನ್ನು ಪಡೆಯುತ್ತಿದ್ದೇನೆ. ಇದು ಸಂತೋಷದ ವಿಚಾರವಾಗಿದೆ. ಮುಂಬರುವ ಏಷ್ಯನ್ ಗೇಮ್ಸ್ ಮತ್ತು ವಿಶ್ವ ಚಾಂಪಿಯನ್‍ಶಿಪ್ ಮೇಲೆ ಕಣ್ಣಿಟ್ಟಿದ್ದೇನೆ. ಹಾಗಾಗಿ ನಾನು ನನ್ನ ಆಟದ ಮೇಲೆ ಗಮನ ಹರಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

     

    ನಿಮಗೆ ಯಾರಾದ್ರೂ ಗರ್ಲ್ ಫ್ರೆಂಡ್ ಇದ್ದಾರಾ ಎಂಬ ಪ್ರಶ್ನೆಗೆ, ಈ ವಿಚಾರವಾಗಿ ನಾನು ಮುಂದಿನ ದಿನಗಳಲ್ಲಿ ಯೋಚನೆ ಮಾಡುತ್ತೇನೆ. ಸದ್ಯ ಈಗ ನನ್ನ ಗಮನ ನನ್ನ ಆಟ ಮತ್ತು ಗುರಿಯ ಮೇಲಿದೆ ಎಂದು ಹೇಳಿದ್ದಾರೆ.

    ನಿಮ್ಮ ಉದ್ದನೆಯ ಕೂದಲಿಗೆ ಹೆಚ್ಚಿನ ಅಭಿಮಾನಿಗಳು ಇದ್ದಾರೆ ಏನ್ ಹೇಳುತ್ತೀರಿ ಎಂದು ಕೇಳಿದಾಗ ನೀರಜ್ ಚೋಪ್ರಾ, ಚಿಕ್ಕವನಿದ್ದಾಗಿನಿಂದಲೂ ನನಗೆ ಉದ್ದನೆಯ ಕೂದಲು ಇದೆ. ಇತ್ತೀಚೆಗೆ ಅದು ನನ್ನನ್ನು ಕಾಡಲಾರಂಭಿಸಿತು. ಕೆಲವು ಸ್ಪರ್ಧೆಗಳ ಸಮಯದಲ್ಲಿ, ಅದು ನನ್ನ ಕಣ್ಣಿಗೆ ಬೀಳುತ್ತದೆ. ನಾನು ಅದನ್ನು ಇರಿಸಿಕೊಳ್ಳಲು ಹೆಡ್‍ಬ್ಯಾಂಡ್‍ಗಳು ಮತ್ತು ಕ್ಯಾಪ್‍ಗಳನ್ನು ಪ್ರಯತ್ನಿಸಿದೆ ಆದರೆ ಅದು ನನ್ನ ಕಣ್ಣಿಗೆ ಬರುತ್ತದೆ ಎಂದು ಹೇಳಿದ್ದಾರೆ.

  • ಗಾಜಿನ ಗೋಲಿ ನುಂಗಿ ಒಂದು ವರ್ಷದ ಮಗು ಸಾವು

    ಗಾಜಿನ ಗೋಲಿ ನುಂಗಿ ಒಂದು ವರ್ಷದ ಮಗು ಸಾವು

    ದಾವಣಗೆರೆ: ನೆರೆಹೊರೆಯ ಮಕ್ಕಳ ಜೊತೆ ಆಟವಾಡುತ್ತಿದ್ದ ಮಗು ಗೋಲಿ ನಂಗಿ ಪ್ರಾಣ ಬಿಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

     

    ಮನವೀರ್ ಮೃತನಾಗಿದ್ದನೆ. ಮನೆ ಮುಂಭಾಗ ಆಟವಾಡುವಾಗ ಗೋಲಿನುಂಗಿ ಒಂದು ವರ್ಷದ ಎರಡು ತಿಂಗಳ ಮಗು ಸಾವನ್ನಪ್ಪಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ತಾಂಡಾದಲ್ಲಿ ನಡೆದಿದೆ.

    ಹರೀಶ್ ಎಂಬುವರ ಪುತ್ರ ಮನವೀರ್ ನಿತ್ಯ ಮನೆಯಂಗಳದಲ್ಲಿ ಗಾಜಿನ ಗೋಲಿಯಿಂದ ಅಕ್ಕ ಪಕ್ಕದ ಮನೆ ಮಕ್ಕಳೊಂದಿಗೆ ಆಟವಾಡುತ್ತಿದ್ದನು. ಇಂದು ಸಂಜೆ ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ ಗೋಲಿ ಬಾಯಲ್ಲಿ ಹಾಕಿಕೊಂಡು ಕ್ಷಣದಲ್ಲಿ ನುಂಗಿ ಬಿಟ್ಟಿದ್ದಾನೆ. ಮಗು ಗೋಲಿ ನುಂಗಿದನ್ನ ಗಮನಿಸಿದ ಜೊತೆಗಿದ್ದ ಬಾಲಕ ಪಾಲಕರಿಗೆ ಹೇಳಿದ್ದು, ಪಾಲಕರು ಆಸ್ಪತ್ರೆಗೆ ಹೋಗುವಷ್ಟರಲ್ಲಿ 10ರಿಂದ 15 ನಿಮಿಷದಲ್ಲಿ ಮಗು ಮನವೀರ್ ಸಾವನ್ನಪ್ಪಿದೆ. ಇನ್ನು ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂಧನ ಮಿಗಿಲು ಮುಟ್ಟಿದೆ.

  • ವಿಶ್ವನಾಥ್ ಆನಂದ್‍ಗೆ ಟಫ್ ಫೈಟ್ ಕೊಟ್ಟ ಕಿಚ್ಚ- 6.65 ಲಕ್ಷ ದೇಣಿಗೆ ಸಂಗ್ರಹ

    ವಿಶ್ವನಾಥ್ ಆನಂದ್‍ಗೆ ಟಫ್ ಫೈಟ್ ಕೊಟ್ಟ ಕಿಚ್ಚ- 6.65 ಲಕ್ಷ ದೇಣಿಗೆ ಸಂಗ್ರಹ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವರು ಐದು ಬಾರಿ ವಿಶ್ವ ಚೆಸ್ ಚಾಂಪಿಯನ್ ಆಗಿರುವ ವಿಶ್ವನಾಥನ್ ಆನಂದ್ ಅವರಿಗೆ ಚೆಸ್ ಸ್ಪರ್ಧೆಯಲ್ಲಿ ಕಠಿಣ ಸ್ಪರ್ಧೆಯನ್ನೇ ನೀಡಿದ್ದಾರೆ.

    ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ನಟನೆಯಲ್ಲಿ ತಮ್ಮದೇ ಅಗಿರುವ ಚಾಪನ್ನು ಮೂಡಿಸಿದ್ದಾರೆ. ಕ್ರಿಕೆಟ್‍ನಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಚೆಸ್‍ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಕೋವಿಡ್ ಪರಿಹಾರ ನಿಧಿ ಸಂಗ್ರಹಕ್ಕಾಗಿ ಅಕ್ಷಯಪಾತ್ರ ಪ್ರತಿಷ್ಠಾನದ ಸಹಯೋಗದಲ್ಲಿ ಚೆಸ್.ಕಾಮ್ ಭಾನುವಾರ ಆಯೋಜಿಸಿದ್ದ ಚೆಕ್‍ಮೇಟ್ ಕೋವಿಡ್ ಸೆಲೆಬ್ರಿಟಿ ಆವೃತ್ತಿಯಲ್ಲಿ, ನಟ ಸುದೀಪ್, ರಿತೇಷ್ ದೇಶ್‍ಮುಖ್, ಕ್ರಿಕೆಟಿಗ ಯಜುವೇಂದ್ರ ಚಾಹಲ್ ಸೇರಿದಂತೆ ಕೆಲ ಗಣ್ಯರೊಂದಿಗೆ 30 ನಿಮಿಷಗಳ ಟೈಂಔಟ್‍ನಲ್ಲಿ ಏಕಕಾಲದಲ್ಲಿ ವಿಶ್ವನಾಥನ್ ಆನಂದ್ ಚೆಸ್ ಅಡಿದ್ದಾರೆ. ಇದನ್ನೂ ಓದಿ: ವರ್ಲ್ಡ್​ ಚೆಸ್ ಚಾಂಪಿಯನ್ ಜೊತೆಗೆ ಕಿಚ್ಚನ ಆಟ

    ಟೈಂಔಟ್‍ನಲ್ಲಿ ಸುದೀಪ್ ಅವರು ವಿಶ್ವನಾಥನ್ ಆನಂದ್ ಅವರೆದುರು ಸೋತರು. ವಿಶ್ವನಾಥನ್ ಆನಂದ್ ಅವರ ಟೈಮರ್‍ನಲ್ಲಿ 46 ಸೆಕೆಂಡ್‍ಗಳಷ್ಟೇ ಉಳಿದಿತ್ತು. ಆಟದ ಬಳಿಕ ಸ್ಪರ್ಧಿಗಳ ಜೊತೆ ವಿಶ್ವನಾಥನ್ ಆನಂದ್ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಸುದೀಪ್, ನನ್ನ ಹಂತದ ಸ್ಪರ್ಧಿಗಳೊಂದಿಗೆ ಚೆನ್ನಾಗಿ ಆಡುತ್ತೇನೆ. ಇಂತಹ ದಿಗ್ಗಜರ ಜೊತೆ ಆಡುವುದೇ ನಮಗೆ ಸಿಕ್ಕ ದೊಡ್ಡ ಅವಕಾಶ. ಇಲ್ಲಿ ಯಾರು ಗೆಲ್ಲುತ್ತಾರೆ ಸೋಲುತ್ತಾರೆ ಎನ್ನುವುದು ಮುಖ್ಯವಲ್ಲ ಎಂದಿದ್ದಾರೆ.

    ಯಾರು ಹೆಚ್ಚು ಹೊತ್ತು ವಿಶ್ವನಾಥನ್ ಅವರ ವಿರುದ್ಧ ಕಣದಲ್ಲಿ ಇರುತ್ತಾರೆ ಎನ್ನುವುದು ಮುಖ್ಯ. ಆನ್‍ಲೈನ್ ಚೆಸ್ ಬಗ್ಗೆ ನನಗೇ ಯಾವುದೇ ಮಾಹಿತಿ ಇರಲಿಲ್ಲ. ನಮಗೆ ಸೋಲುವ ಭಯವಿರಲಿಲ್ಲ, ಏಕೆಂದರೆ ನಾವು ಆಡುತ್ತಿರುವುದು ವಿಶ್ವನಾಥನ್ ಆನಂದ್ ಅವರ ವಿರುದ್ಧ. ಈ ಅನುಭವ ಜೀವನಪೂರ್ತಿ ಇರಲಿದೆ. ಈ ಆಟ ಕೇವಲ ಮನರಂಜನೆಗಾಗಿ ಆಗಿರಲಿಲ್ಲ. ಒಂದು ಉದ್ದೇಶ ಇದರ ಹಿಂದೆ ಇತ್ತು ಎಂದು ಸುದೀಪ್ ಹೇಳಿದ್ದಾರೆ.

    ಎರಡನೇ ಹಂತದಲ್ಲಿ ವಿಶ್ವನಾಥನ್ ಆನಂದ್ ಬಾಲಿವುಡ್ ನಟ ಅಮೀರ್ ಖಾನ್ ವಿರುದ್ಧವೂ ಆಡಿದರು. ವಿಶ್ವನಾಥನ್ ಆನಂದ್ ಅವರ ಜೀವನದ ಬಗ್ಗೆ ಸಿನಿಮಾ ಆದರೆ ಅದರಲ್ಲಿ ನಟಿಸುತ್ತೀರಾ? ಎನ್ನುವ ಜನರ ಪ್ರಶ್ನೆಗೆ ಉತ್ತರಿಸಿದ ಅಮೀರ್ ಖಾನ್, ಖಂಡಿತವಾಗಿಯೂ..ಇದಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದರು. ಆನ್‍ಲೈನ್‍ನಲ್ಲಿ ನಡೆದ ಈ ಸ್ಪರ್ಧೆಯನ್ನು 20 ಸಾವಿರಕ್ಕೂ ಅಧಿಕ ಜನರು ವೀಕ್ಷಿಸಿದ್ದು, 6.65 ಲಕ್ಷ ದೇಣಿಗೆ ಸಂಗ್ರಹವಾಗಿದೆ.

    ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಚೆಸ್ ಗ್ರ್ಯಾಂಡ್‍ಮಾಸ್ಟರ್ ವಿಶ್ವನಾಥನ್ ಅವರ ನಡುವೆ ನಡೆದಿರುವ ರೋಚಕ ಆಟವನ್ನು ನೋಡಿ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಪರದೆ ಮೇಲೆ, ಮೈದಾನದಲ್ಲಿ ಕಿಚ್ಚನ ಖದರ್ ನೋಡಿದ ಅಭಿಮಾನಿಗಳು ಚಿಸ್‍ನಲ್ಲಿ ಕಿಚ್ಚನ ಆಟವನ್ನು ನೋಡಿ ಫಿದಾ ಆಗಿರುವುದು ಖಂಡಿತಾ ಹೌದು.

  • ವರ್ಲ್ಡ್​ ಚೆಸ್ ಚಾಂಪಿಯನ್ ಜೊತೆಗೆ ಕಿಚ್ಚನ ಆಟ

    ವರ್ಲ್ಡ್​ ಚೆಸ್ ಚಾಂಪಿಯನ್ ಜೊತೆಗೆ ಕಿಚ್ಚನ ಆಟ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ನಟನೆಯಲ್ಲಿ ತಮ್ಮದೇ ಅಗಿರುವ ಚಾಪನ್ನು ಮೂಡಿಸಿದ್ದಾರೆ. ಕ್ರಿಕೆಟ್‍ನಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಚೆಸ್‍ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾಗಿದ್ದಾರೆ ಕಿಚ್ಚ ಸುದೀಪ್ ಎನ್ನುವ ಸುದ್ದಿಯೊಂದು ಹೊರ ಬಿದ್ದಿದೆ.

    ನಟನೆ, ನಿರ್ದೇಶನ, ಸಿನಿಮಾ ನಿರ್ಮಾಣ, ರಿಯಾಲಿಟಿ ಶೋ ನಿರೂಪಣೆ, ಅಡುಗೆ ಸೇರಿದಂತೆ ಹಲವು ವಿಷಯಗಳಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಕ್ರೀಡೆಯಲ್ಲೂ ಆಸಕ್ತಿ ಅಪಾರ. ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನಲ್ಲಿ ಮಿಂಚಿದ ನಟ ಇದೀಗ ಚೆಸ್‍ನಲ್ಲಿ ಗಮನ ಸೆಳೆಯಲು ಸಜ್ಜಾಗಿದ್ದಾರೆ. 5 ಬಾರಿ ವರ್ಲ್ಡ್​ ಚಾಂಪಿಯನ್ ಆಗಿರುವ ವಿಶ್ವನಾಥನ್ ಆನಂದ್ ಅವರ ಖ್ಯಾತಿ ದೊಡ್ಡದು. ಚೆಸ್‍ನಲ್ಲಿ ಅವರಿಗೆ ಪೈಪೋಟಿ ನೀಡುವುದು ಎಂದರೆ ಸುಲಭದ ಮಾತಲ್ಲ. ಈಗ ಅವರ ಜೊತೆ ಕಿಚ್ಚ ಸುದೀಪ್ ಸ್ಪರ್ಧೆ ನಡೆಸಲಿದ್ದಾರೆ. ಅಖಾಡವು ಸಜ್ಜಾಗಿದೆ.

    ವಿಶ್ವನಾಥನ್ ಆನಂದ್ ಜೊತೆ ಸುದೀಪ್ ಚೆಸ್ ಆಡಲಿರುವುದು ಒಂದು ಒಳ್ಳೆಯ ಉದ್ದೇಶಕ್ಕಾಗಿ. ಕೊರೊನಾದಿಂದಾಗಿ ಇಡೀ ದೇಶವೇ ಕಷ್ಟದ ಪರಿಸ್ಥಿತಿಯಲ್ಲಿದೆ. ಕೊರೊನಾ ವಿರುದ್ಧ ಹೋರಾಡಲು ಹಣ ಸಂಗ್ರಹ ಮಾಡುವ ಸಲುವಾಗಿ ಈ ಆಟ ಆಯೋಜಿಸಲಾಗಿದೆ.

    ಜೂ.13ರಂದು ಸಂಜೆ 5 ಗಂಟೆಗೆ ಚೆಕ್‍ಮೇಟ್ ಕೊರೊನಾ- ಸೆಲೆಬ್ರಿಟಿ ಎಡಿಷನ್ ಆರಂಭ ಆಗಲಿದೆ. ಇದರಲ್ಲಿ ವಿಶ್ವನಾಥನ್ ಆನಂದ್ ಜೊತೆ ಕಿಚ್ಚ ಸುದೀಪ್ ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಬಾಲಿವುಡ್ ನಟ ಆಮೀರ್ ಖಾನ್ ಕೂಡ ವಿಶ್ವನಾಥನ್ ಆನಂದ್‍ಗೆ ಪೈಪೋಟಿ ನೀಡಲಿದ್ದಾರೆ. ಆ ಮೂಲಕ ನಿಧಿ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ.

    ಪರದೆ ಮೇಲೆ, ಮೈದಾನದಲ್ಲಿ ಕಿಚ್ಚನ ಖದರ್ ನೋಡಿದವರು ಈಗ ಚೆಸ್‍ನಲ್ಲಿ ಹೇಗೆ ಮೋಡಿ ಮಾಡಲಿದ್ದಾರೆ ಎನ್ನುವುದನ್ನು ಅಭಿಮಾನಿಗಳು ನೋಡಲು ಉತ್ಸುಕರಾಗಿದ್ದಾರೆ. ಅಕ್ಷಯ ಪಾತ್ರಾ ಫೌಂಡೇಶನ್ ಹಾಗೂ ಚೆಸ್ ಡಾಟ್ ಕಾಮ್ ಜೊತೆಯಾಗಿ ಈ ಆಟವನ್ನು ಆಯೋಜಿಸಿವೆ. Chess.com – India ಯೂಟ್ಯೂಬ್ ಚಾನೆಲ್‍ನಲ್ಲಿ ಆಟ ಪ್ರಸಾರ ಆಗಲಿದೆ.

    ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಚೆಸ್ ಗ್ರ್ಯಾಂಡ್‍ಮಾಸ್ಟರ್ ವಿಶ್ವನಾಥನ್ ಅವರ ನಡುವಿನ ರೋಚಕ ಆಟ ಹೇಗೆ ಇರಲಿದೆ ಎನ್ನುವ ಕುತುಹೊಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಅಭಿಮಾನಿಗಳು ಈ ಆಟವನ್ನು ವೀಕ್ಷಿಸಲು ಉತ್ಸುಹಕರಾಗಿದ್ದಾರೆ.