Tag: Gana

  • ಹಾಟ್ ಹುಡುಗಿಯ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್

    ಹಾಟ್ ಹುಡುಗಿಯ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್

    ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸಿರುವ ‘ಗಣ’ (Gana) ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡಿದೆ. ಗಣ ಚಿತ್ರಕ್ಕಾಗಿ ವಿ.ನಾಗೇಂದ್ರಪ್ರಸಾದ್ ಬರೆದಿರುವ ‘ಮೈ ನೇಮ್ ಇಸ್ ಸೋನಾ ಬೇಬಿ ಬೇಬಿ.. ಕಣ್ಣಾಮುಚ್ಚಾಲೆ ನನ್ನ ಹಾಬಿ’ (Sonu Baby) ಎಂಬ ಮನಮೋಹಕ ಹಾಡು  ಬಿಡುಗಡೆಯಾಗಿದೆ.

    ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಮಾಸ್ ಐಟಂ ಹಾಡಿಗೆ ಪ್ರಜ್ವಲ್ ದೇವರಾಜ್ , ನಮೃತಾ ಮಲ್ಲ  (Namrita Malla) ಹಾಗೂ ರವಿಕಾಳೆ ಹೆಜ್ಜೆ ಹಾಕಿದ್ದಾರೆ. ಕ್ರಾಂತಿ ಚಿತ್ರದ ಟೇಕ್ ಇಟ್ ಪುಷ್ಪವತಿ ಹಾಡು ಸೇರಿದಂತೆ ಅನೇಕ ಯಶಸ್ವಿ ಗೀತೆಗಳನ್ನು ಹಾಡಿರುವ ಐಶ್ವರ್ಯ ರಂಗರಾಜನ್ ಈ ಹಾಡನ್ನು ಹಾಡಿದ್ದಾರೆ. ಸೋನಾ ಬೇಬಿ ಹಾಡು  ಅಧಿಕ ಸಂಖ್ಯೆಯಲ್ಲಿ  ವೀಕ್ಷಣೆಯಾಗುತ್ತಿದ್ದು, ಎಲ್ಲರ ಮೆಚ್ಚುಗೆ ಪಡೆಯುತ್ತಿದೆ.

    ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ.  ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

    ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ಗಣ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘ಗಣ’ ಚಿತ್ರದ ಹಾಡಿನಲ್ಲಿ ಪ್ರಜ್ವಲ್ ರೊಮ್ಯಾನ್ಸ್

    ‘ಗಣ’ ಚಿತ್ರದ ಹಾಡಿನಲ್ಲಿ ಪ್ರಜ್ವಲ್ ರೊಮ್ಯಾನ್ಸ್

    ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸಿರುವ ‘ಗಣ’ (Gana) ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ ‘she is in love’ ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಇಂಪಾಗಿ ಹಾಡಿದ್ದಾರೆ.

    ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ (Yash Shivakumar) ಹೆಜ್ಜೆ ಹಾಕಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.

    ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ (Hariprasad Jakka) ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ.  ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

     

    ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ಗಣ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ‘ಗಣ’ ಟೀಸರ್ ರಿಲೀಸ್

    ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ‘ಗಣ’ ಟೀಸರ್ ರಿಲೀಸ್

    ಟ ಪ್ರಜ್ವಲ್ ದೇವರಾಜ್ (Prajwal Devaraj) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಕ್ಷಣದಲ್ಲಿ ಪ್ರಜ್ವಲ್ ನಾಯಕರಾಗಿ ನಟಿಸಿರುವ ‘ಗಣ’ (Gana) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರ ತಾಯಿ ಚಂದ್ರಲೇಖ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಟ ದೇವರಾಜ್, ರಾಗಿಣಿ ಪ್ರಜ್ವಲ್ ಹಾಗೂ ಪ್ರಣಾಮ್ ದೇವರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟೀಸರ್ (Teaser) ಬಿಡುಗಡೆ ನಿಮಿತ್ತ ಆಯೋಜಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನನಗೆ ಕನ್ನಡ ಚಿತ್ರ ನಿರ್ಮಾಣ ಮಾಡಬೇಕೆಂಬ ಆಸೆಯಾಯಿತು. ಹಾಗಾಗಿ ಗಣ ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ಮಾಪಕ ಪಾರ್ಥು (, Parthu),  ಸೋಶಿಯಲ್ ಮೀಡಿಯಾದಲ್ಲಿ ನಾನು ಪ್ರಜ್ವಲ್ ಅವರನ್ನು ಫಾಲೋ ಮಾಡುತ್ತಿದ್ದೆ‌. ಅದರಲ್ಲಿ ಪ್ರಜ್ವಲ್ ಅವರ ಅಭಿಮಾನಿಗಳು ಯಾವ ರೀತಿ ಚಿತ್ರ ನಿರೀಕ್ಷಿಸುತ್ತಿದ್ದರೊ, ಅದೇ ತರಹದ ಚಿತ್ರ ಮಾಡಿದ್ದೇವೆ. ಪ್ರಜ್ವಲ್ ದೇವರಾಜ್ ಅವರು ಈವರೆಗೂ ಮಾಡಿರದ ಪಾತ್ರ ಎನ್ನಬಹುದು. ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್ ನಡೆಯುತ್ತಿದೆ. ಹರಿಪ್ರಾಸಾದ್ ಜಕ್ಕ (Hariprasad Jakka) ನಿರ್ದೇಶನ ಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದೇನೆ ಎಂದರು. ಇದನ್ನೂ ಓದಿ:ಬಾಹುಬಲಿ ಚಿತ್ರಕ್ಕೆ ಎದುರಾಗಿ ನಿಂತ ರಂಗಿತರಂಗಕ್ಕೆ ಎಂಟು ವರ್ಷ

    ಕನ್ನಡದ ಕಲಾವಿದರು ಹಾಗೂ ತಂತ್ರಜ್ಞರ ಜೊತೆ ಕೆಲಸ ಸಿನಿಮಾ ಮಾಡಬೇಕೆಂದು ಬಂದ ಪಾರ್ಥು ಅವರಿಗೆ ಅಭಿನಂದನೆ ತಿಳಿಸಿ ಗಣ ಚಿತ್ರದ ಬಗ್ಗೆ ಮಾತು ಆರಂಭಿಸಿದ ಪ್ರಜ್ವಲ್ ದೇವರಾಜ್, ಗಣ ನಾನು ಈವರೆಗೂ ಮಾಡಿರುವ ಚಿತ್ರಗಳಲ್ಲೇ ಬೇಗ ಮುಗಿದಿರುವ ಚಿತ್ರ ಹಾಗೂ ಡಿಫರೆಂಟ್ ಜಾನರ್ ನ ಚಿತ್ರ ಕೂಡ. 1993 ಹಾಗೂ 2023 ಎರಡು ಕಾಲಘಟ್ಟದಲ್ಲಿ ಈ ಕಥೆ ನಡೆಯುತ್ತದೆ‌. ಸಮಯದ ಜೊತೆ ಹೋರಾಡುವ ಚಿತ್ರ ಎನ್ನಬಹುದು. ನನ್ನ ಜೊತೆ ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಅದ್ಭುತವಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

    ಚಿತ್ರದಲ್ಲಿ ನಟಿಸಿರುವ ವೇದಿಕ, ಕೃಷಿ ತಾಪಂಡ, ಶಿವರಾಜ್ ಕೆ.ಆರ್ ಪೇಟೆ, ಮಾಸ್ಟರ್ ರಘುನಂದನ್, ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಛಾಯಾಗ್ರಹಕ ಜೈ ಆನಂದ್, ಕಲಾ ನಿರ್ದೇಶಕ ಸತೀಶ್, ಸಂಕಲನಕಾರ ಹರೀಶ್ ಕೊಮ್ಮೆ ಹಾಗೂ ಗೋಪಿ ಅವರು ಗಣದ ಬಗ್ಗೆ ಮಾತನಾಡಿದರು. ಶ್ರೀನಿವಾಸ್ ಚಿಕ್ಕಬಳ್ಳಾಪುರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣ ಚಿತ್ರದ ಫಸ್ಟ್ ಲುಕ್: ಸಿನಿತಾರೆಯರ ಸಾಥ್

    ಗಣ ಚಿತ್ರದ ಫಸ್ಟ್ ಲುಕ್: ಸಿನಿತಾರೆಯರ ಸಾಥ್

    ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ ‘ಗಣ’ (Gana) ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬಿಡುಗಡೆಯಾಯಿತು.‌‌‌ ಪ್ರಜ್ವಲ್ ದೇವರಾಜ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಪ್ರಜ್ವಲ್ ಸ್ನೇಹಿತರು ಮತ್ತು ಸಿನಿಮಾ ತಾರೆಯರು ಇವರ ಬೆಂಬಲಕ್ಕೆ ನಿಂತಿದ್ದಾರೆ.

    ವಿಜಯ ರಾಘವೇಂದ್ರ, ಶೃತಿ ಹರಿಹರನ್, ಪನ್ನಗಾಭರಣ, ವಾಸುಕಿ ವೈಭವ್, ಮೇಘನರಾಜ್ (Meghana Raj) , ರಾಗಿಣಿ ಪ್ರಜ್ವಲ್,‌ ಸಿಂಪಲ್ ಸುನಿ, ಶರಣ್ (Sharan), ಮೇಘ ಶೆಟ್ಟಿ, ರಾಗಿಣಿ ದ್ವಿವೇದಿ, ಪ್ರಣಾಮ್ ದೇವರಾಜ್, ತರುಣ್ ಸುಧೀರ್, ರಚನ ಇಂದರ್, ಗಿರೀಶ್ ಶಿವಣ್ಣ, ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್, ಅಮೃತ ಅಯ್ಯಂಗಾರ್ ಹಾಗೂ ನಿರ್ದೇಶಕ ಲೋಹಿತ್ ಸೇರಿದಂತೆ ಹದಿನೇಳಕ್ಕೂ ಹೆಚ್ಚು ಚಂದನವನದ ತಾರೆಯರು ಗಣ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿರುವುದು ವಿಶೇಷ.

    ಫಸ್ಟ್ ಲುಕ್  (First Look) ಗೆ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.  ಈ ಚಿತ್ರದ ಫಸ್ಟ್ ಲುಕ್ ನಲ್ಲಿ ಪ್ರಜ್ವಲ್ (Prajwal Devaraj) ಅವರ‌ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದನ್ನೂ ಓದಿ:ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥ ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಚಿಕ್ಕಬಳ್ಳಾಪುರ ಶ್ರೀನಿವಾಸ್.

    ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ಗಣ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘ಗಣ’ ಸಿನಿಮಾದ ಶೂಟಿಂಗ್ ಮುಗಿಸಿದ ಪ್ರಜ್ವಲ್ ದೇವರಾಜ್

    ‘ಗಣ’ ಸಿನಿಮಾದ ಶೂಟಿಂಗ್ ಮುಗಿಸಿದ ಪ್ರಜ್ವಲ್ ದೇವರಾಜ್

    ಡೈನಾಮಿಕ್ ಪ್ರಿನ್ಸ್ ದೇವರಾಜ್ ಅಭಿನಯದ “ಗಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ 80ದಿನಗಳ ಚಿತ್ರೀಕರಣ ನಡೆದಿದೆ. ನವೆಂಬರ್ ಹತ್ತರಿಂದ ಚಿತ್ರೀಕರಣ ನಂತರದ ಚಟುವಟಿಕೆಗಳು ಆರಂಭವಾಗಲಿದೆ. ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಯಶ ಶಿವಕುಮಾರ್ ಈ ಚಿತ್ರದ ನಾಯಕಿ. ವಿಶಾಲ್ ಹೆಗ್ಡೆ, ವೇದಿಕಾ ಕುಮಾರ್, ಶಿವರಾಜ್ ಕೆ.ಆರ್ ಪೇಟೆ, ಕೃಷಿ ತಾಪಂಡ, ಸಂಪತ್ ರಾಜ್, ರವಿ ಕಾಳೆ, ರಮೇಶ್ ಭಟ್, ಉಮೇಶ್, ಸಿದ್ಲಿಂಗು ಶ್ರೀಧರ್, ಬಾಬು ಹಿರಣ್ಣಯ್ಯ ಹಾಗೂ ಮಾಸ್ಟರ್ ರಘುನಂದನ್ “ಗಣ”ದಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಏಕಾಂಗಿ ಹೋರಾಟ ವ್ಯರ್ಥ, ಶಕೀಬ್‌ ಆಲ್‌ರೌಂಡರ್‌ ಆಟ – ಬಾಂಗ್ಲಾದೇಶಕ್ಕೆ 1 ವಿಕೆಟ್‌ ರೋಚಕ ಜಯ

    ಅನೂಪ್ ಸಂಗೀತ ಸಂಯೋಜಿಸಿರುವ ನಾಲ್ಕು ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ನಾಲ್ಕು ಮೈನವಿರೇಳಿಸುವ ಸಾಹಸ ದೃಶ್ಯಗಳು ಚಿತ್ರದಲ್ಲಿದ್ದು, ಅರ್ಜುನ್, ಮಾಸ್ ಮಾದ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ” ಗಣ” ಚಿತ್ರಕ್ಕಿದೆ. ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

    Live Tv
    [brid partner=56869869 player=32851 video=960834 autoplay=true]