Tag: gandagudi film

  • `ಗಂಧದಗುಡಿ’ ಪ್ರೀ ರಿಲೀಸ್ ಇವೆಂಟ್‌ಗೆ ಭರ್ಜರಿ ತಯಾರಿ

    `ಗಂಧದಗುಡಿ’ ಪ್ರೀ ರಿಲೀಸ್ ಇವೆಂಟ್‌ಗೆ ಭರ್ಜರಿ ತಯಾರಿ

    ಪುನೀತ್ ರಾಜ್‌ಕುಮಾರ್(Puneeth Rajkumar) ನಟಿಸಿರುವ ಕೊನೆಯ ಸಿನಿಮಾ `ಗಂಧದ ಗುಡಿ’ ಟ್ರೈಲರ್ ರಿಲೀಸ್ ಆಗಿದೆ. ಟ್ರೇಲರ್ ನೋಡಿರುವ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಬೆನ್ನಲ್ಲೇ ಅಪ್ಪು ಫ್ಯಾನ್ಸ್‌ಗೆ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದ್ದಾರೆ. ʻಗಂಧದಗುಡಿʼ ಚಿತ್ರದ ಪ್ರೀ ರಿಲೀಸ್ ಇವೆಂಟ್ ಭರ್ಜರಿ ತಯಾರಿ ನಡೆಯುತ್ತಿದೆ.

    `ಗಂಧದಗುಡಿ'(Gandagudi) ಟ್ರೈಲರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೈಲರ್‌ನಲ್ಲಿ ಹಸಿರಿನ ಸೊಬಗಿನ ನಡುವೆ ಅಪ್ಪುನ ನೋಡಿ ಫ್ಯಾನ್ಸ್ ಕಣ್ತುಂಬಿಕೊಂಡಿದ್ದಾರೆ. ಇನ್ನೂ ಇದೇ ಅಕ್ಟೋಬರ್ 21ರಂದು ಗಂಧದಗುಡಿ ಚಿತ್ರದ ಪ್ರೀ ರಿಲೀಸ್ ಇವೆಂಟ್ ಮಾಡಲು ತೆರೆಮರೆಯಲ್ಲಿ ಈಗಿಂದಲೇ ಭರ್ಜರಿ ತಯಾರಿ ನಡೆಯುತ್ತಿದೆ. ಪ್ಯಾಲೇಸ್ ಗ್ರೌಂಡ್‌ನಲ್ಲಿ ಅಪ್ಪು ಕುಟುಂಬದ ಜೊತೆ ಅಭಿಮಾನಿಗಳು, ಚಿತ್ರರಂಗದ ಸ್ನೇಹಿತರ ಸಮ್ಮುಖದಲ್ಲಿ ಈ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಪರಭಾಷೆಯ ಸ್ಟಾರ್‌ಗಳಿಗೂ ಇವೆಂಟ್‌ಗೆ ಆಹ್ವಾನ ಇರಲಿದೆ. ಇದನ್ನೂ ಓದಿ:ಅಪ್ಪು ಮಗನೇ ಟ್ರೈಲರ್ ರಿಲೀಸ್‍ಗೆ ನೀನೇ ನನ್ನ ಕರೆದೊಯ್ಯುತ್ತಿರುವೆ- ರಾಘಣ್ಣ ಭಾವುಕ

    ಅಪ್ಪು ಕೊನೆಯ ಚಿತ್ರವನ್ನು ಫ್ಯಾನ್ಸ್‌ಗೆ ಅರ್ಪಣೆ ಮಾಡಲು ಪಿಆರ್‌ಕೆ ನಿರ್ಮಾಣ ಸಂಸ್ಥೆ ಪ್ಲ್ಯಾನ್‌ ಮಾಡಿದೆ. ಇನ್ನೂ ಗಂಧದ ಗುಡಿ ಚಿತ್ರದ ಪ್ರೀ ರಿಲೀಸ್ ಇವೆಂಟ್‌ನ ಆಹ್ವಾನ ಪತ್ರಿಕೆಯನ್ನ ಕೂಡ ವಿಶೇಷವಾಗಿ ಮಾಡಲಾಗಿದೆ. ಗಂಧದ ತುಂಡಿನಿಂದ ಪುನೀತ್ ರಾಜ್‌ಕುಮಾರ್ ಅಂತಾ ಪುನೀತ್ ಸ್ಟ್ಯಾಚು ಮಾಡಲಾಗಿದೆ. ಈ ಮೂಲಕ ಚಿತ್ರವನ್ನ ಅರ್ಪಣೆ ಮಾಡಲು ಪ್ರೀ ರಿಲೀಸ್ ತಯಾರಿ ನಡೆಯುತ್ತಿದೆ.

    ಇದೇ ಅಕ್ಟೋಬರ್ 28ಕ್ಕೆ ಕನ್ನಡ, ಇಂಗ್ಲೀಷ್, ಹಿಂದಿ ಭಾಷೆಯಲ್ಲಿ ಗಂಧದಗುಡಿ ಚಿತ್ರವನ್ನ ಅಭಿಮಾನಿಗಳು ಕಣ್ತುಂಬಿಕೊಳ್ಳಬಹುದು.

    Live Tv
    [brid partner=56869869 player=32851 video=960834 autoplay=true]

  • `ಗಂಧದಗುಡಿ’ ಟ್ರೈಲರ್‌ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

    `ಗಂಧದಗುಡಿ’ ಟ್ರೈಲರ್‌ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

    ಪುನೀತ್ ರಾಜ್‌ಕುಮಾರ್(Puneeth Rajkumar) ನಟನೆಯ `ಗಂಧದ ಗುಡಿ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಅದಕ್ಕೂ ಮುಂಚೆ ಚಿತ್ರದ ಟ್ರೈಲರ್ ಮೂಲಕ ಅಪ್ಪು ಎಲ್ಲರನ್ನೂ ಮಂತ್ರಮುಗ್ಧರನ್ನಾಗಿಸಿದ್ದಾರೆ. ಇದೀಗ ಈ‌ ಚಿತ್ರದ ಟ್ರೈಲರ್ ನೋಡಿ ಪ್ರಧಾನಿ ನರೇಂದ್ರ ಮೋದಿ(Narendra Modi) ಕೂಡ ಮೆಚ್ಚುಗೆ ಸೂಚಿಸಿದ್ದಾರೆ.

    ಅಪ್ಪು ನಟನೆಯ ಕೊನೆಯ ಸಿನಿಮಾ `ಗಂಧದಗುಡಿ'(Gandagudi Film) ಟ್ರೈಲರ್ ರಿಲೀಸ್ ಆಗಿ, ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ವಿವ್ಸ್ ಗಿಟ್ಟಿಸಿಕೊಳ್ಳುತ್ತಿದೆ. `ಗಂಧದಗುಡಿ’ ಟ್ರೈಲರ್ ನೋಡಿ ಪ್ರತಿಯೊಬ್ಬರು ಅಪ್ಪುನ ನೋಡಿ ಭಾವುಕರಾಗಿದ್ದಾರೆ. ಅಪ್ಪು ಹೃದಯಕ್ಕೆ ಹತ್ತಿರವಾಗಿರುವ ಈ ಪ್ರಾಜೆಕ್ಟ್ ಬಗ್ಗೆ ಅಶ್ವೀನಿ ಪುನೀತ್ ರಾಜ್‌ಕುಮಾರ್(Ashwini Puneeth Rajkumar) ಅವರು ಮೋದಿ ಅವರಿಗೆ ಟ್ರೈಲರ್ ಲಿಂಕ್ ಶೇರ್ ಮಾಡಿ, ಟ್ವೀಟ್ ಮಾಡಿದ್ದರು. ಇದೀಗ ಚಿತ್ರದ ಟ್ರೈಲರ್ ನೋಡಿ ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರು ಮೆಚ್ಚುಗೆ ಸೂಚಿದ್ದಾರೆ. ಇದನ್ನೂ ಓದಿ:ಗಂಧದ ಗುಡಿಯಲ್ಲಿ ಚಂದದ ನೋಟ: ನೀವು ಇರಬೇಕಿತ್ತು ಎಂದು ಕಣ್ಣೀರಾಕಿದ ಫ್ಯಾನ್ಸ್

    ಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ ಅಪ್ಪು ಪ್ರತಿಭೆಗೆ ಯಾರು ಸರಿಸಾಟಿಯಿಲ್ಲ. `ಗಂಧದಗುಡಿ’ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯಕ್ಕೆ ಅರ್ಪಣೆ. ಚಿತ್ರತಂಡದ ಪ್ರಯತ್ನಕ್ಕೆ ನನ್ನ ಶುಭಹಾರೈಕೆಗಳು ಎಂದು ಪ್ರಧಾನಿ ಮೋದಿ ಅವರು ಟ್ರೈಲರ್ ನೋಡಿ ಹೊಗಳಿದ್ದಾರೆ. ಟ್ವೀಟ್ ಮೂಲಕ ಶುಭಹಾರೈಸಿದ್ದಾರೆ.

    ಇನ್ನೂ ಪುನೀತ್ ನಟನೆಯ ಕೊನೆಯ ಸಿನಿಮಾ `ಗಂಧದಗುಡಿ’ ಇದೇ ಅಕ್ಟೋಬರ್ 28ಕ್ಕೆ ಕನ್ನಡ, ಇಂಗ್ಲೀಷ್ ಮತ್ತು ಹಿಂದಿಯಲ್ಲಿ ತೆರೆಕಾಣುತ್ತಿದೆ. ಪವರ್ ಸ್ಟಾರ್ ಆಗಿ ಅಲ್ಲ, ಪುನೀತ್ ರಾಜ್‌ಕುಮಾರ್ ಆಗಿ ಸಾಕ್ಷ್ಯ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಅಪ್ಪು ಬರಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಂಧದ ಗುಡಿಯಲ್ಲಿ ಚಂದದ ನೋಟ: ನೀವು ಇರಬೇಕಿತ್ತು ಎಂದು ಕಣ್ಣೀರಾಕಿದ ಫ್ಯಾನ್ಸ್

    ಗಂಧದ ಗುಡಿಯಲ್ಲಿ ಚಂದದ ನೋಟ: ನೀವು ಇರಬೇಕಿತ್ತು ಎಂದು ಕಣ್ಣೀರಾಕಿದ ಫ್ಯಾನ್ಸ್

    ಪುನೀತ್ ರಾಜ್‍ಕುಮಾರ್ (Puneeth Rajkumar) ಕನಸಿನ ಪ್ರಾಜೆಕ್ಟ್ ಗಂಧದ ಗುಡಿ(Gandagudi) ಟ್ರೇಲರ್ ಇಂದು ಬಿಡುಗಡೆ ಆಗಿದೆ. ಅಪ್ಪು ಈ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಬಗ್ಗೆ ಅಷ್ಟೊಂದು ಕನಸು ಯಾಕೆ ಕಂಡಿದ್ದರು ಎನ್ನುವುದಕ್ಕೆ ಟ್ರೈಲರ್ ನಲ್ಲಿ ತೋರಿಸಿದ ಒಂದೊಂದು ಫ್ರೇಮೂ ಸಾಕ್ಷಿಯಾಗಿವೆ. ಟ್ರೈಲರ್ ನೋಡಿದ ತಕ್ಷಣ ಮೂಡುವ ಒಂದೇ ಭಾವ, ಪುನೀತ್ ರಾಜ್‍ಕುಮಾರ್ ನೀವು ಇರಬೇಕಿತ್ತು. ಈ ಗಂಧದ ಗುಡಿಯಲ್ಲಿ ಇನ್ನಷ್ಟು ಕಾಲ ಬಾಳಬೇಕಿತ್ತು.

    ಗಂಧದ ಗುಡಿಯಲ್ಲಿ ಏನಿಲ್ಲ, ಎಲ್ಲವೂ ಇದೆ. ಬೆಟ್ಟ, ಗುಡ್ಡ, ನದಿ, ಹಳ್ಳ, ಕೊಳ್ಳ, ಅರಣ್ಯ, ಕಾಡು ಪ್ರಾಣಿಗಳು, ಕಾಡಂಚಿನ ಜನರು, ದೇವರು, ದೈವ ಎಲ್ಲವನ್ನೂ ಒಂದೇ ಉಸಿರಿಗೆ ಹಿಡಿದಿಟ್ಟಿದ್ದಾರೆ ಪುನೀತ್ ರಾಜ್‍ಕುಮಾರ್. ರಾತ್ರಿ ಅವರು ಕಾಡಿನೊಳಗೆ ನುಗ್ಗಿದಾಗ ನಾವೇ ಭಯಪಡುವಷ್ಟು ಸುಂದರವಾಗಿ ಸೆರೆ ಹಿಡಿದಿದ್ದಾರೆ ಆ ರಾತ್ರಿಯನ್ನು. ಸಮುದ್ರದಾಳಕ್ಕೆ ಅಪ್ಪು ಜಿಗಿದಾಗ ಇಲ್ಲಿ ನಾವೇ ಒದ್ದೆಯಾಗುವಂತೆ ಸಿನಿಮಾಟೋಗ್ರಫಿ ಇದೆ. ಎಲ್ಲವೂ ಚಂದ, ಚಂದ. ಇದನ್ನೂ ಓದಿ:ಮಹಿಳಾ ಸ್ಪರ್ಧಿಗಳ ವಿಚಾರದಲ್ಲಿ ರಾಕೇಶ್ ಅಡಿಗಗೆ ಸೆಡ್ಡು ಹೊಡೆದ ರೂಪೇಶ್ ಶೆಟ್ಟಿ ಕಾಲೆಳೆದ ಸುದೀಪ್

    ʻಗಂಧದ ಗುಡಿʼ ಟ್ರೈಲರ್‌ನ(Gandagudi Trailer) ಮತ್ತೊಂದು ಸೊಗಸು ಅಂದರೆ, ಅಪ್ಪು ಹಾಗೂ ಅವರ ಅಪ್ಪಾಜಿ ಬಾಳಿ ಬದುಕಿದ ಮನೆಯನ್ನು ತೋರಿಸಿದ್ದಾರೆ. ಸ್ವತಃ ಆ ಮನೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಅವರೇ ವಿವರಿಸುತ್ತಾರೆ. ಮನೆಯನ್ನು ಕಣ್ತುಂಬಿಕೊಳ್ಳುವ ಹೊತ್ತಲ್ಲಿ ಡಾ.ರಾಜ್ ಕುಮಾರ್ ಪ್ರವೇಶ. ಥ್ರಿಲ್ ಅನಿಸುವಷ್ಟು ಮಜಾ ಕೊಡುತ್ತದೆ ಟ್ರೇಲರ್.

    ಇಂದು ಬೆಂಗಳೂರಿನ ನರ್ತಕಿ(Narthaki Theatre) ಚಿತ್ರಮಂದಿರದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗಾಗಿ ಟ್ರೇಲರ್ ಪ್ರದರ್ಶನ ಏರ್ಪಡಿಸಲಾಗಿತ್ತು. ʻಗಂಧದ ಗುಡಿʼಯ ಅಂದವನ್ನು ಕಣ್ತುಂಬಿಕೊಂಡ ಕಂಗಳಲ್ಲಿ ಅಪ್ಪು ಇಲ್ಲ ಅನ್ನುವ ಕಂಬನಿ ಸುರಿಯುತ್ತಿತ್ತು. ರಾಘವೇಂದ್ರ ರಾಜ್‍ಕುಮಾರ್ (Raghavendra Rajkumar) ಸೇರಿದಂತೆ ಅಲ್ಲಿದ್ದವರ ಅಷ್ಟೂ ಕಣ್ಣುಗಳು ಒದ್ದೆ ಆಗಿದ್ದವು. ಟ್ರೇಲರೇ ಇಷ್ಟೊಂದು ಭಾವುಕತೆ ಸೃಷ್ಟಿ ಮಾಡಿದೆ. ಇದೇ ತಿಂಗಳು ಕೊನೆಯಲ್ಲಿ ಪೂರ್ತಿ ಚಿತ್ರವೇ ಬಿಡುಗಡೆ ಆಗುತ್ತಿದೆ. ಹೃದಯ ಒಡೆಯುವ ಕಾಲವದು.

    Live Tv
    [brid partner=56869869 player=32851 video=960834 autoplay=true]