Tag: Gandhinagara

  • ಲೋಕಾ ದಾಳಿ| ಕೆಐಎಡಿಬಿ ಅಧಿಕಾರಿ ಮನೆಯಲ್ಲಿ 2.34 ಕೋಟಿ ಆಸ್ತಿ ಪತ್ತೆ

    ಲೋಕಾ ದಾಳಿ| ಕೆಐಎಡಿಬಿ ಅಧಿಕಾರಿ ಮನೆಯಲ್ಲಿ 2.34 ಕೋಟಿ ಆಸ್ತಿ ಪತ್ತೆ

    ಧಾರವಾಡ: ಲೋಕಾಯುಕ್ತ ಪೊಲೀಸರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಎಇಇ ಗೋವಿಂದ ಭಜಂತ್ರಿ ಮನೆ ಮೇಲೆ ಇಂದು (ಮಂಗಳವಾರ) ದಾಳಿ ನಡೆಸಿದ್ದರು. ಈ ವೇಳೆ ಅಧಿಕಾರಿ ಬಳಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

    ಬೆಳಗ್ಗೆಯಿಂದ ನಡೆದ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆಯಲ್ಲಿ 2.34 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಧಾರವಾಡ (Dharawada) ನಿವಾಸ ಸೇರಿ ಒಟ್ಟು 7 ಕಡೆ ಪರಿಶೀಲನೆ ನಡೆಸಿದ ಅಧಿಕಾರಿಗಳು 2.34 ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಆರೋಗ್ಯ ಕ್ಷೀಣ

    ಇದರಲ್ಲಿ 1.85 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, 57 ಲಕ್ಷ ರೂ. ಮೌಲ್ಯದ ಸೈಟ್, 1.2 ಕೋಟಿ ರೂ. ಮೌಲ್ಯದ ಮನೆ, 7 ಎಕರೆ ಜಮೀನು ಇರುವ ಸ್ಥಿರಾಸ್ತಿ, 41.11 ಲಕ್ಷ ರೂ. ನಗದು ಸಹಿತ 94.22 ಲಕ್ಷ ರೂ. ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. 27.11 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ, 20 ಲಕ್ಷ ರೂ. ಮೌಲ್ಯದ ಎರಡು ವಾಹನಗಳು ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಇದನ್ನೂ ಓದಿ: Ballari | ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

  • ಬೆಳ್ಳಂಬೆಳಗ್ಗೆ ಧಾರವಾಡದಲ್ಲಿ ಲೋಕಾ ಶಾಕ್- ಕೆಐಎಡಿಬಿ AEE ಮನೆಗೆ ದಾಳಿ

    ಬೆಳ್ಳಂಬೆಳಗ್ಗೆ ಧಾರವಾಡದಲ್ಲಿ ಲೋಕಾ ಶಾಕ್- ಕೆಐಎಡಿಬಿ AEE ಮನೆಗೆ ದಾಳಿ

    ಧಾರವಾಡ: ಲೋಕಾಯುಕ್ತ ಪೊಲೀಸರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB) ಎಇಇ (AEE) ಗೋವಿಂದಪ್ಪ ಭಜಂತ್ರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಧಾರವಾಡದ (Dharawada) ಗಾಂಧಿನಗರದಲ್ಲಿರುವ ಗೋವಿಂದಪ್ಪ ನಿವಾಸದ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

    ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಗೋವಿಂದಪ್ಪ ಅವರಿಗೆ ಸೇರಿದ ಧಾರವಾಡ ಗಾಂಧಿನಗರದಲ್ಲಿರುವ ಮನೆ, ತೇಜಸ್ವಿನಗರದಲ್ಲಿರುವ ಅಳಿಯನ ಮನೆ, ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್‌ಹೌಸ್, ನರಗುಂದದಲ್ಲಿರುವ ಅವರ ಸಹೋದರನ ಮನೆ ಮತ್ತು ಲಕಮನಹಳ್ಳಿಯಲ್ಲಿರುವ ಕೆಐಎಡಿಬಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಆರೋಪಿ ಸಾವು ಕೇಸ್ – ಸಬ್ ಇನ್‌ಸ್ಪೆಕ್ಟರ್, ಹೆಡ್ ಕಾನ್‌ಸ್ಟೇಬಲ್ ಅಮಾನತು

    ಗಾಂಧಿನಗರದಲ್ಲಿರುವ (Gandhinagara) ಗೋವಿಂದಪ್ಪ ಅವರ ನಿವಾಸದ ಮುಂದೆ ಇದ್ದ ಅವರ ಕಾರುಗಳಲ್ಲಿ ಕೂಡ ಲೋಕಾಯುಕ್ತ ಪೊಲೀಸರು ಇಂಚಿಂಚು ತಪಾಸಣೆ ನಡೆಸಿದ್ದಾರೆ. ಅಲ್ಲದೇ ಅವರ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡಿದ್ದಾರೆ. ಗೋವಿಂದಪ್ಪಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ಲೋಕಾಯುಕ್ತರು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ ವಿಧಾನಸಭೆಗೆ ನಾಳೆ ಮೊದಲ ಹಂತದ ಚುನಾವಣೆ – 15 ಜಿಲ್ಲೆಗಳ 42 ಸ್ಥಾನಗಳಿಗೆ ಮತದಾನ

  • ತನಗಿಂತ ಬ್ಯೂಟಿಯಾಗಿದ್ದು, ಹೆಚ್ಚು ಗ್ರಾಹಕರನ್ನು ಆಕರ್ಷಿಸುತ್ತಿದ್ದಾಳೆಂದು ವೇಶ್ಯೆಯನ್ನು ಕೊಂದೇ ಬಿಟ್ಳು!

    ತನಗಿಂತ ಬ್ಯೂಟಿಯಾಗಿದ್ದು, ಹೆಚ್ಚು ಗ್ರಾಹಕರನ್ನು ಆಕರ್ಷಿಸುತ್ತಿದ್ದಾಳೆಂದು ವೇಶ್ಯೆಯನ್ನು ಕೊಂದೇ ಬಿಟ್ಳು!

    ಗಾಂಧಿನಗರ: ತನ್ನಗಿಂತ ಹೆಚ್ಚು ಸುಂದರವಾಗಿದ್ದು, ಹೆಚ್ಚು ಗ್ರಾಹಕರನ್ನು ಆಕರ್ಷಿಸುತ್ತಿದ್ದಾಳೆ ಎಂಬ ಅಸೂಯೆಯಿಂದ ಸೆಕ್ಸ್ ವರ್ಕರ್ ಒಬ್ಬಳು ಮತ್ತೊಬ್ಬ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಗುಜರಾತಿನ ರಾಜ್‍ಕೋಟ್‍ನಲ್ಲಿ ನಡೆದಿದೆ.

    ಚಂಪಾ(28) ಕೊಲೆಯಾದ ಮಹಿಳೆಯಾಗಿದ್ದು, ರೇಖಾ ಮ್ಯಾಂಗ್ರೋಲಿಯಾ (33) ಕೊಲೆ ಮಾಡಿದ ಆರೋಪಿಯಾಗಿದ್ದಾಳೆ. ಜೂನ್ 28 ರಂದು ಗೋಡಾಲ್ ಪೊಲೀಸ್ ಠಾಣೆಯ ಪೊಲೀಸರು ರೇಖಾರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

    ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸರು, ಸುರೇಶ್ವರ್ ಚೌಕಡಿ ಪ್ರದೇಶದಲ್ಲಿ ವಾಸಿಸುತ್ತಿದ್ದ ರೇಖಾ ತನ್ನ ನೆರೆಯ ಚಂಪಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಚಂಪಾ ತನಗಿಂತ ಸುಂದರವಾಗಿದ್ದು, ಹೆಚ್ಚಿನ ಗ್ರಾಹಕರನ್ನು ಆಕರ್ಷಿಸುತ್ತಿದ್ದಾಳೆ ಎಂಬ ಕೋಪದಿಂದ ಕೊಲೆ ಮಾಡಿದ್ದಾಗಿ ತಿಳಿಸಿದ್ದಾರೆ.

    ಚಂಪಾ ಕೊಲೆಯಾದ ಬಳಿಕ ರೇಖಾ ನಾಪತ್ತೆಯಾದ ಕಾರಣ ನಾವು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೆವು. ಈ ವೇಳೆ ರೇಖಾ ತನ್ನ ಕೃತ್ಯದ ಕುರಿತು ಬಾಯ್ಬಿಟ್ಟಿದ್ದಾಳೆ. ಕೊಲೆ ಮಾಡಿದ ಬಳಿಕ ಚಂಪಾ ಮುಖದ ಗುರುತು ತಿಳಿಯದಂತೆ ಮಾಡಲು ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾಗಿ ರೇಖಾ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಗಿ ಎಸ್‍ಪಿ ಜೆಬಿ ಮಿಥಾಪರ ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv