Tag: Ganesh Procession

  • ರಾಯಚೂರಿನಲ್ಲಿಂದು ಹಿಂದೂ ಮಹಾಸಭಾ ಗಣೇಶ ಮೆರವಣಿಗೆ – ನಗರದಲ್ಲಿ ಪೊಲೀಸ್ ಬಂದೋಬಸ್ತ್

    ರಾಯಚೂರಿನಲ್ಲಿಂದು ಹಿಂದೂ ಮಹಾಸಭಾ ಗಣೇಶ ಮೆರವಣಿಗೆ – ನಗರದಲ್ಲಿ ಪೊಲೀಸ್ ಬಂದೋಬಸ್ತ್

    ರಾಯಚೂರು: ಜಿಲ್ಲೆಯಲ್ಲಿಂದು ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ವಿಸರ್ಜನಾ ಮೆರವಣಿಗೆ ಹಿನ್ನೆಲೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.

    ಮಂಗಳವಾರ (ಸೆ.16) ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಮೆರವಣಿಗೆ ಮಾರ್ಗದಲ್ಲಿ ಸಾವಿರಾರು ಪೊಲೀಸರಿಂದ ಕಾಲ್ನಡಿಗೆ ಜಾಥಾ ನಡೆಯಿತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಜಾಗೃತಿ ಜಾಥಾ ನಡೆಸಿದರು.ಇದನ್ನೂ ಓದಿ: ಗಣೇಶ ಉತ್ಸವದಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಮರು – ಮೆರವಣಿಗೆ ಉದ್ದಕ್ಕೂ ಹೂ ಹಾಕಿ ಸಂಭ್ರಮ

    ಗಣೇಶ ಮೆರವಣಿಗೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಒಂದು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ.

    ಸಂಜೆ ಗಣೇಶ ಮೆರವಣಿಗೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ (Basanagouda Patil Yatnal) ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ. ಇದೇ ವೇಳೆ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ಯತ್ನಾಳ್ ಭಾಷಣ ಮಾಡಲಿದ್ದಾರೆ.ಇದನ್ನೂ ಓದಿ: ಇಂದು ಸಿಂಹಾಸನ ಜೋಡಣೆ ಕಾರ್ಯ – ಮೈಸೂರು ಅರಮನೆ ಅರ್ಧ ದಿನ ಪ್ರವಾಸಿಗರಿಗೆ ನಿರ್ಬಂಧ

  • ಹಾಸನ ದುರಂತ – ಮೃತ ಎಂಜಿನಿಯರಿಂಗ್‌ ವಿದ್ಯಾರ್ಥಿ ಕುಟುಂಬಕ್ಕೆ ನೆರವಾದ ಹೆಚ್‌ಡಿಡಿ

    ಹಾಸನ ದುರಂತ – ಮೃತ ಎಂಜಿನಿಯರಿಂಗ್‌ ವಿದ್ಯಾರ್ಥಿ ಕುಟುಂಬಕ್ಕೆ ನೆರವಾದ ಹೆಚ್‌ಡಿಡಿ

    – ಜೆಡಿಎಸ್‌ನಿಂದ 1 ಲಕ್ಷ ರೂ. ಪರಿಹಾರ ಘೋಷಣೆ; ವಿದ್ಯಾಭ್ಯಾಸ ಖರ್ಚು ಭರಿಸುವ ಭರವಸೆ

    ಹಾಸನ: ಇಲ್ಲಿನ ಮೊಸಳೆಹೊಸಳ್ಳಿಯಲ್ಲಿ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ ದುರಂತ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇತ್ತ ಟ್ರಕ್ ಡೈವರ್‌ಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಮುಂದುವರೆದ್ದು, ಆತನ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

    ಈ ನಡುವೆ ನಿನ್ನೆ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದ ಹೆಚ್‌.ಡಿ ದೇವೇಗೌಡ (HD Devegowda) ಅವರು ಇಂದು ಮೃತರ ಕುಟುಂಬಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಜೊತೆಗೆ ಜೆಡಿಎಸ್‌ ಪಕ್ಷದಿಂದ ಪರಿಹಾರ ಮೊತ್ತವನ್ನೂ ಘೋಷಣೆ ಮಾಡಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸುವಂತೆ ಸರ್ಕಾರಕ್ಕೆ ಆಗ್ರಹ ಕೂಡ ಮಾಡಿದ್ದಾರೆ. ಇದನ್ನೂ ಓದಿ: Hassan Tragedy | ಟ್ರಕ್ ಅಪಘಾತ ನಡೆದ ಜಾಗದಲ್ಲಿ ಹಂಪ್ಸ್ ನಿರ್ಮಿಸಲು ತೀರ್ಮಾನ

    ವ್ಹೀಲ್‌ ಚೇರ್‌ನಲ್ಲೇ ಸ್ಥಳಕ್ಕೆ ಭೇಟಿ
    ಶನಿವಾರ ಸಂಜೆ ಹಾಸನಕ್ಕೆ (Hassan) ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು. ವ್ಹೀಲ್‌ಚೇರಲ್ಲೇ ತೆರಳಿ ಹಿಮ್ಸ್‌ಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾತನಾಡಿದ ಹೆಚ್.ಡಿ ದೇವೇಗೌಡರು, ಜೆಡಿಎಸ್ ಪಕ್ಷದ ವತಿಯಿಂದ ಮೃತ ಕುಟುಂಬಸ್ಥರಿಗೆ 1 ಲಕ್ಷ ಪರಿಹಾರ ಘೋಷಣೆ ಮಾಡಿದರು. ಪೊಲೀಸರು ಮುಂಜಾಗ್ರತೆ ವಹಿಸಿದ್ದರೇ ಈ ಅನಾಹುತ ತಡೆಯಬಹುದಿತ್ತು ಎಂದರಲ್ಲದೇ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

    ಅಲ್ಲದೇ ಇಂದು ಮೊಸಳೆಹೊಸಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡದ ಕಾಮಗಾರಿ ವೀಕ್ಷಿಸಿದ ಹೆಚ್‌ಡಿಡಿ ಬಳಿಕ ಟ್ರಕ್‌ ಹರಿದು ಮೃತಪಟ್ಟ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರಾದ ಹೆಚ್.ಡಿ ರೇವಣ್ಣ, ಹೆಚ್.ಪಿ ಸ್ವರೂಪ್‌ಪ್ರಕಾಶ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್‌ಚೇರ್‌ನಲ್ಲೇ ಆಸ್ಪತ್ರೆಗೆ ಬಂದ ಹೆಚ್‌ಡಿಡಿ

    ವಿದ್ಯಾಭ್ಯಾಸ ಖರ್ಚು ಭರಿಸುವುದಾಗಿ ಭರವಸೆ
    ಹೊಳೆನರಸೀಪುರದ ಬಂಟರಹಳ್ಳಿಯ ಪ್ರಭಾಕರ್, ಮುತ್ತಿಗೆಹಿರೀಹಳ್ಳಿಯ ಗೋಕಲ್‌ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ದೇವೇಗೌಡರು ಮೃತ ಗೋಕಲ್ ತಂಗಿಯ ವಿದ್ಯಾಭ್ಯಾಸ ಖರ್ಚನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ. ಸದ್ಯ ಗೋಕುಲ್‌ ತಂಗಿ ನಾಲ್ಕನೇ ತರಗತಿ ಓದುತ್ತಿದ್ದಾಳೆ. ಇದನ್ನೂ ಓದಿ: ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸಲು ಆಗಲ್ಲ, ಸಹಾಯದ ರೀತಿಯಲ್ಲಿ ಸ್ವಲ್ಪ ಪರಿಹಾರ ನೀಡಿದ್ದೇವೆ – ಕೃಷ್ಣಬೈರೇಗೌಡ

    ಡಿಜೆಗೆ ಕುಣಿಯಲು ಬಂದು ಮಸಣ ಸೇರಿದ ಯುವಕರು
    ಗಣೇಶ್ ಸಂಭ್ರಮ ನೋಡಲು ಬಂದವರು ನೋಡ ನೋಡ್ತಿದ್ದಂತೆ ಹೆಣವಾಗಿದ್ದು, ನಿಜಕ್ಕೂ ಘೋರ ದುರಂತವೇ ಸರಿ. ಟ್ರಕ್ ಹರಿದ ರಭಸಕ್ಕೆ ಸ್ಥಳದಲ್ಲೇ 9 ಜನರು ಸಾವನಪ್ಪಿದ್ದರೇ. ಗಂಭೀರವಾಗಿ ಗಾಯಗೊಂಡಿದ್ದ ಹಾಸನದ ಶಿವಯ್ಯನ ಕೊಪ್ಪಲು ಗ್ರಾಮದ 28 ವರ್ಷದ ಯುವಕನ ಬ್ರೈನ್ ಡೆಡ್ ಆಗಿತ್ತು. ಹಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಂದನ್ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾನೆ. ಪುತ್ರನ ಸಾವಿನ ಸುದ್ದಿ ತಿಳಿದು ಆಸ್ಪತ್ರೆ ಅವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆಟೋ ಚಾಲಕನಾಗಿದ್ದ ಚಂದನ್‌ಗೆ ಇನ್ನೂ ಮದುವೆಯಾಗಿಲ್ಲ.. ಕುಟುಂಬಕ್ಕೆ ಅಧಾರ ಸ್ತಂಭವಾಗಿದ್ದ, ತನ್ನ ಗ್ರಾಮದಿಂದ ಮೊಸಳೆಹೊಸಳ್ಳಿ ಬಾಡಿಗಿಗೆ ಬಂದಿದ್ದ ಚಂದನ ಟೀ ಕುಡಿಯಲು ಆಟೋ ನಿಲ್ಲಿಸಿ. ಕುತೂಹಲಕ್ಕೆ ಮೆರವಣಿಗೆ ನೋಡಲು ನಿಂತವನು ಮಸಣ ಸೇರಿದ್ದಾನೆ.

    ಅಪಘಾತದಲ್ಲಿ ಸಾವನಪ್ಪಿದ ಹೊಳೆನರಸೀಪುರ ತಾಲೂಕು ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ ಬಿನ್ ರವಿಕುಮಾರ್ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೇರವೇರಿದೆ. ಎಸ್‌ಎಸ್‌ಎಲ್‌ಸಿಯಲ್ಲಿ 95% ಅಂಕ ಪಡೆದು, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಈಶ್ವರ. ಮೆರವಣಿಗೆ ನೋಡಲು ಬಂದು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆಟೋ ಓಡಿಸಿಕೊಂಡು ಗ್ರಾಮದಲ್ಲಿ ಜೀವನ ಸಾಗಿಸುತ್ತಿದ್ದ ಈಶ್ವರ ಪೋಷಕರು. ಮಗನನ್ನು ಚನ್ನಾಗಿ ಓದಿಸುವ ಆಕಾಂಕ್ಷೆ ಹೊಂದಿದ್ದರು. ಇದನ್ನೂ ಓದಿ: Hassan Tragedy | ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಸರ್ಕಾರಕ್ಕೆ ಆರ್.ಅಶೋಕ್ ಮನವಿ

  • ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸಲು ಆಗಲ್ಲ, ಸಹಾಯದ ರೀತಿಯಲ್ಲಿ ಸ್ವಲ್ಪ ಪರಿಹಾರ ನೀಡಿದ್ದೇವೆ – ಕೃಷ್ಣಬೈರೇಗೌಡ

    ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸಲು ಆಗಲ್ಲ, ಸಹಾಯದ ರೀತಿಯಲ್ಲಿ ಸ್ವಲ್ಪ ಪರಿಹಾರ ನೀಡಿದ್ದೇವೆ – ಕೃಷ್ಣಬೈರೇಗೌಡ

    – ಹೆಚ್ಚಿನ ಪರಿಹಾರದ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ
    – ಇದು ಯಾರ ವೈಫಲ್ಯ ಎಂದು ಹೇಳೊಕ್ಕಾಗಲ್ಲ

    ಹಾಸನ: ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸಲು ಆಗಲ್ಲ, ಸಹಾಯದ ರೀತಿಯಲ್ಲಿ ಸ್ವಲ್ಪ ಪರಿಹಾರ ನೀಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ (Krishna Byre Gowda) ಹೇಳಿದ್ದಾರೆ.

    ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದ ದುರಂತ ಸ್ಥಳಕ್ಕೆ ಭೇಟಿ ನೀಡಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೃದಯ ವಿದ್ರಾವಕ ಘಟನೆ ನಡೆದಿದೆ. ಅವಘಡದಲ್ಲಿ ಈವರೆಗೆ 9 ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವನ ಹೇಳಿದ್ದೇನೆ. ಆ ಕುಟುಂಬದ ನೋವು ಅರ್ಥ ಮಾಡಿಕೊಳ್ಳೋದು ಕಷ್ಟ. ಮೃತರ ಕುಟುಂಬಗಳಿಗೆ ನಷ್ಟ ಭರಿಸಲು ಆಗಲ್ಲ, ಹೀಗಾಗಿ ಸ್ವಲ್ಪ ಸಹಾಯದ ರೀತಿಯಲ್ಲಿ ಪರಿಹಾರ ನೀಡಿದ್ದೇವೆ. ತಲಾ 5 ಲಕ್ಷ ರೂ. ಪರಿಹಾರ ಕೊಡುವಂತೆ ಸಿಎಂ ಸೂಚಿಸಿದ್ದಾರೆ. ಅದರಂತೆ ನಾನು 5 ಲಕ್ಷ ರೂ. ಪರಿಹಾರ ಕೊಡುತ್ತಿದ್ದೇನೆ. ಇನ್ನೂ ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಅದರ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ

    ಇನ್ನೂ ಇದು ಯಾರ ವೈಫಲ್ಯ ಎಂದು ಹೇಳೊಕ್ಕಾಗಲ್ಲ. ಹೆಚ್ಚಿನ ಭದ್ರತೆ ನೀಡಿದರೆ ಜನರ ಭಾವನೆಗಳಿಗೆ ಧಕ್ಕೆ ಎನ್ನುತ್ತೀರಾ, ಭದ್ರತೆ ಕಡಿಮೆ ಮಾಡಿದಾಗ ಏನಾದರೂ ಆದರೆ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎನ್ನುತ್ತೀರಾ. ಹೀಗಾಗಿ ವೈಫಲ್ಯದ ಬಗ್ಗೆ ನಾನು ಮಾತಾಡಲ್ಲ. ಈಗಾಗಲೇ ಟ್ರಕ್ ಚಾಲಕನನ್ನು ಬಂಧಿಸಿದ್ದೇವೆ. ಆತ ಇದೇ ಊರಿನವನು, ಅವನಿಗೂ ಗಾಯ ಆಗಿದೆ. ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡುವ ಮುನ್ನ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಸ್ಥಳ ಪರಿಶೀಲನೆ ಕೂಡ ಮಾಡಿದ್ದೇನೆ. ಕೆಲವು ಕುಟುಂಬಗಳ ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಗಾಯಾಳುಗಳ ಆರೈಕೆ ಬಗ್ಗೆಯೂ ವಿಚಾರಿಸಿದ್ದೇನೆ. ಪೊಲೀಸರಿಗೆ ದುರಂತ ಹೇಗಾಯ್ತು ಹಾಗೂ ಡ್ರೈವರ್ ಬಗ್ಗೆ ತನಿಖೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

    ಜಿಲ್ಲಾಡಳಿತ ತಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡಿ, ಮೃತರ ವೈದ್ಯಕೀಯ ಪರೀಕ್ಷೆ ತಕ್ಷಣ ಮಾಡಿಸಿದೆ. ರಾತ್ರಿಯೇ ಎಲ್ಲರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಏನಾಯ್ತು? ಹೇಗಾಯ್ತು? ಯಾಕಾಯ್ತು? ಅಂತ ತನಿಖೆಗೆ ಹೇಳಿದ್ದೇನೆ ಎಂದಿದ್ದಾರೆ.ಇದನ್ನೂ ಓದಿ: ಹಾಸನ ದುರಂತ | ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ? – ಸಿದ್ದರಾಮಯ್ಯ

  • Hassan Tragedy | ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಸರ್ಕಾರಕ್ಕೆ ಆರ್.ಅಶೋಕ್ ಮನವಿ

    Hassan Tragedy | ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಸರ್ಕಾರಕ್ಕೆ ಆರ್.ಅಶೋಕ್ ಮನವಿ

    ಹಾಸನ/ಬೆಂಗಳೂರು: ಮೃತರೆಲ್ಲ ಹಳ್ಳಿಯವರು, 10 ಲಕ್ಷ ರೂ. ಪರಿಹಾರ ಕೊಟ್ರೆ ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆ ಆಗಬಾರದಿತ್ತು. ಗಣೇಶೋತ್ಸವ ಸಂದರ್ಭದಲ್ಲಿ ಹೀಗೆ ಆಗಿದ್ದು ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಸರ್ಕಾರ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಮೃತರೆಲ್ಲ ಹಳ್ಳಿಯವರು, ಹೀಗಾಗಿ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು ಎಂದು ವಿನಂತಿ ಮಾಡಿಕೊಳ್ಳುತ್ತೇನೆ. ನಾನು ಹಾಸನಕ್ಕೆ ಹೋಗ್ತಿದ್ದೀನಿ, ಡಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಆಸ್ಪತ್ರೆಗೂ ಭೇಟಿ ಮಾಡುತ್ತೇನೆ. ಸರ್ಕಾರ ಗಾಯಾಳುಗಳನ್ನು ಬೆಂಗಳೂರು, ಮೈಸೂರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಬೇಕು ಎಂದಿದ್ದಾರೆ.ಇದನ್ನೂ ಓದಿ: ಹಾಸನ ದುರಂತ | ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ? – ಸಿದ್ದರಾಮಯ್ಯ

    ಇದೇ ವೇಳೆ ಚಿತ್ರದುರ್ಗದಲ್ಲಿ ಗಣೇಶ ವಿಸರ್ಜನೆ ವಿಚಾರವಾಗಿ ಮಾತನಾಡಿ, ಚಿತ್ರದುರ್ಗದಲ್ಲಿ ಪ್ರತಿ ವರ್ಷ ಗಣೇಶ ವಿಸರ್ಜನೆ ದೊಡ್ಡ ಮಟ್ಟದಲ್ಲಿ ಮಾಡುತ್ತಾರೆ. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸುತ್ತಮುತ್ತಲಿನ ಜಿಲ್ಲೆಯ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಬೇಕು. ಯಾವುದೇ ಕಿಡಿಕೇಡಿಗಳು ಮಸೀದಿಯಿಂದ ಕಲ್ಲು ಹಾಕೋದಕ್ಕೆ ಅವಕಾಶ ಕೊಡಬಾರದು. ಎಲ್ಲಾ ರಸ್ತೆಯಲ್ಲಿ ಗಣೇಶ ಹೋಗಬಹುದು, ಯಾರು ಅಡ್ಡಿ ಮಾಡಬಾರದು ಅಂತ ಮುಸ್ಲಿಮರೇ ಹೇಳಿದ್ದಾರೆ. ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಕೋಮುಗಲಭೆ ಸೃಷ್ಟಿ ಮಾಡ್ತಾರೆ. ಸರ್ಕಾರ ಕೂಡಾ ಅಂತಹವರ ಕೇಸ್ ವಾಪಸ್ ಪಡೆಯುವುದರಿಂದ ಅವರಿಗೆ ಕುಮ್ಮಕ್ಕು ಬರ್ತಿದೆ. ಪಾಕಿಸ್ತಾನ ಗಿರಾಕಿಗಳಿಗೆ ಪಾಠ ಕಲಿಸಬೇಕು. ಆಗ ಇಂತಹ ಘಟನೆಗಳು ಆಗೋದಿಲ್ಲ ಎಂದು ಆಗ್ರಹಿಸಿದ್ದಾರೆ.

    ಧರ್ಮಸ್ಥಳ ಕೇಸ್ ತನಿಖೆ ವಿಳಂಬ ವಿಚಾರವಾಗಿ ಮಾತನಾಡಿ, ಸರ್ಕಾರ ಯಾರನ್ನೋ ರಕ್ಷಣೆ ಮಾಡೋಕೆ ತನಿಖೆಯನ್ನು ವಿಳಂಬ ಮಾಡಿಸುತ್ತಿದೆ. ಎಸ್‌ಐಟಿಗೆ ಬುರುಡೆ ಅಗೆಯೋದ್ರಲ್ಲಿ ಇದ್ದ ಉತ್ಸಾಹ ತನಿಖೆ ಮಾಡೋದ್ರಲ್ಲಿ ಇಲ್ಲ. ಜಿಂಕೆಯAತೆ ಬುರುಡೆ ಅಗೆದು ಆಮೆಗತಿಯಲ್ಲಿ ತನಿಖೆ ಮಾಡ್ತಿದ್ದಾರೆ. ತನಿಖೆ ನಡೆಯೋದು ನೋಡಿದ್ರೆ ಸರ್ಕಾರವೇ ನಿಧಾನವಾಗಿ ತನಿಖೆ ಮಾಡಿ ಅಂತ ಸೂಚನೆ ಕೊಟ್ಟಂತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಈ ಕೇಸ್‌ನಲ್ಲಿ ಕೇರಳ, ತಮಿಳುನಾಡು, ದೆಹಲಿಗೂ ಲಿಂಕ್ ಇದೆ. ಎಸ್‌ಐಟಿ ಅಲ್ಲಿಗೆ ಹೋಗಿಲ್ಲ. ಇದನ್ನ ನೋಡಿದ್ರೆ ತನಿಖೆ ಹಳ್ಳ ಹಿಡಿಸೋಕೆ, ಕೇಸ್ ಮುಚ್ಚಿ ಹಾಕೋ ಹುನ್ನಾರ ನಡೆಯುತ್ತಿದೆ ಅಂತ ಅನ್ನಿಸುತ್ತೆ. ಧರ್ಮಸ್ಥಳ ಕೇಸ್‌ನಲ್ಲಿ ದೊಡ್ಡ ತಿಮಿಂಗಿಲಗಳು ಇವೆ. ಇವುಗಳ ಬೇಟೆಯಾಡಬೇಕು. ಆದರೆ ಸರ್ಕಾರ ಯಾರದ್ದೋ ರಕ್ಷಣೆಗೆ ನಿಂತಂತೆ ಕಾಣ್ತಿದೆ. ಎಸ್‌ಐಟಿ ತನಿಖೆ ಹೀಗೆ ವಿಳಂಬ ಆದ್ರೆ ಬಿಜೆಪಿ ಮತ್ತೆ ಹೋರಾಟಕ್ಕೆ ಇಳಿಯಲಿದೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ

  • ಮನೆಗೆಲಸ ಮಾಡಿ ಪ್ರವೀಣ್‌ನನ್ನ ಎಂಜಿನಿಯರಿಂಗ್ ಓದಿಸ್ತಿದ್ದ ತಾಯಿ

    ಮನೆಗೆಲಸ ಮಾಡಿ ಪ್ರವೀಣ್‌ನನ್ನ ಎಂಜಿನಿಯರಿಂಗ್ ಓದಿಸ್ತಿದ್ದ ತಾಯಿ

    – ಇನ್ನೇನು ಕಷ್ಟಗಳೆಲ್ಲಾ ಕಳೆಯಿತು ಅನ್ನುವಾಗಲೇ ಜವರಾಯ ಹೊತ್ತೊಯ್ದ
    – ಮಗನ ಸಾವಿನ ಸುದ್ದಿ ಕೇಳಿ ಗೋಳಾಡಿದ ತಾಯಿ

    ಹಾಸನ\ಬಳ್ಳಾರಿ: ಹಾಸನದ (Hassan) ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ (Ganesh Procession) ವೇಳೆ ಟ್ರಕ್ ಹರಿದು ಬಳ್ಳಾರಿಯ ಪ್ರವೀಣ್ ಮೃತಪಟ್ಟಿದ್ದು, ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

    ಬಳ್ಳಾರಿಯ (Ballary) ನಾಗಲಕೆರೆ ಏರಿಯಾದ ಪ್ರವೀಣ್ ಮೃತ ದುರ್ದೈವಿ. ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಹಾಸನಕ್ಕೆ ಬಂದಿದ್ದ ಪ್ರವೀಣ್, ಶುಕ್ರವಾರ ಗಣೇಶ ವಿಸರ್ಜನೆ ವೇಳೆ ನಡೆದ ಘನಘೋರ ದುರಂತದಲ್ಲಿ ಉಸಿರುಚೆಲ್ಲಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡಿದ್ದ ಪ್ರವೀಣ್ ತಾಯಿ ಸುಶೀಲಾ ಆರೈಕೆಯಲ್ಲೇ ಬೆಳೆದಿದ್ದ. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ

    ಕಿತ್ತು ತಿನ್ನುವ ಬಡತನವಿದ್ದರೂ ಮನೆಗೆಲಸ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿ ಮಗನನ್ನು ತಾಯಿ ಇಂಜಿನಿಯರಿಂಗ್ ಓದಿಸುತ್ತಿದ್ದರು. ಬಳ್ಳಾರಿಯಲ್ಲಿ ಡಿಪ್ಲೊಮಾ ಮುಗಿಸಿ, ಹಾಸನದಲ್ಲಿ ಇಂಜಿನಿಯರಿಂಗ್ ಮಾಡಲು ತೆರಳಿದ್ದ ಪ್ರವೀಣ್, ಎಲೆಕ್ಟ್ರಾನಿಕ್ ವಿಭಾಗದ ಕೊನೆಯ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡ್ತಿದ್ದ. ಮಗ ಇನ್ನೇನು ಕೆಲಸಕ್ಕೆ ಸೇರಿ ತನ್ನ ಕಷ್ಟಗಳೆಲ್ಲ ಕಳೆಯುತ್ತದೆ ಅಂದುಕೊಂಡಿದ್ದ ತಾಯಿಗೆ ಪ್ರವೀಣ್ ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಇದೀಗ ಪ್ರವೀಣ್ ಮೃತದೇಹ ಬಳ್ಳಾರಿಯ ಮನೆಗೆ ತಲುಪುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಮೃತದೇಹ ನೋಡಿ ತಾಯಿ ನನಗ್ಯಾರು ದಿಕ್ಕೆಂದು ಎದೆ ಬಡಿದುಕೊಂಡು ಗೋಳಾಡಿದ್ದಾರೆ. ತಾಯಿಯ ಸ್ಥಿತಿ ಕಂಡು ಗ್ರಾಮಸ್ಥರು ಕಣ್ಣೀರಿಟ್ಟಿದ್ದಾರೆ.

  • ಹಾಸನ ದುರಂತ | ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ? – ಸಿದ್ದರಾಮಯ್ಯ

    ಹಾಸನ ದುರಂತ | ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ? – ಸಿದ್ದರಾಮಯ್ಯ

    ಮೈಸೂರು: ಅಪಘಾತಗಳನ್ನ (Accident) ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಆದಾಗ್ಯೂ ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದರು.

    ಹಾಸನ ಗಣೇಶ ವಿಸರ್ಜನೆ ಮೆರವಣಿಗೆ (Ganesh Procession) ವೇಳೆ ಟ್ರಕ್‌ ದುರಂತರದಲ್ಲಿ 9 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ ಸರ್ಕಾರ ಹೇಗೆ ಹೊಣೆಗಾರಿಕೆ ಆಗುತ್ತೆ? ಅಂದರು. ಇದನ್ನೂ ಓದಿ: ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ

    ಕ್ಯಾಂಟರ್‌ ನುಗ್ಗಿ ಅಪಘಾತ ಆಗಿದೆ. ಮೃತರ ಕುಟುಂಬ ವರ್ಗಕ್ಕೆ ನಮ್ಮ ಸಂತಾಪ ಇದೆ. ‌ಘಟನೆ ತಿಳಿಯುತ್ತಿದ್ದಂತೆ ಉಸ್ತುವಾರಿ ಸಚಿವ ಕೃಷ್ಣೇಬೇರೇಗೌಡ ಅವರಿಗೆ ಸ್ಥಳಕ್ಕೆ ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಘೋಷಣೆ ಮಾಡುವಂತೆ ಹೇಳಿದ್ದೆ. ಅದರಂತೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ

    ಇದೇ ವೇಳೆ 10 ಲಕ್ಷ ರೂ. ಪರಿಹಾರ ನೀಡುವಂತೆ ಬಿಜೆಪಿ (BJP) ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಎಷ್ಟು ಪರಿಹಾರ ಕೊಟ್ಟಿದ್ದರು? ಪರಿಹಾರ ಕೊಡೋದು ಮೃತರನ್ನ ವಾಪಸ್‌ ಕರೆತರ್ತೀವಿ ಅಂತಲ್ಲ. ಸರ್ಕಾರ ಮೊದಲಿನಿಂದಲೂ ಪರಿಹಾರ ಕೊಡ್ತಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ., ಆಕಸ್ಮಿಕವಾಗಿ ಮೃತಪಟ್ಟವರಿಗೆ 2 ಲಕ್ಷ ರೂ. ಕೊಡುತ್ತಿದ್ದೇವೆ. ಆರ್ಥಿಕವಾಗಿ ಹಿಂದುಳಿದವರು ಅನ್ನೋ ಕಾರಣಕ್ಕೆ ಮತ್ತು ಸಾಂತ್ವನ ಹೇಳುವ ಉದ್ದೇಶದಿಂದ ಪರಿಹಾರ ಕೊಡಲಾಗುತ್ತಿದೆ ಹೊರತು ಸಾವಿಗೆ ಸಮಾನ ಅಂತಲ್ಲ ಎಂದು ವಿವರಿಸಿದರು.

    ಮೃತದೇಹ ಹಸ್ತಾಂತರ
    ಕುಟುಂಬಗಳಿಗೆ ಮೃತದೇಹ ಹಸ್ತಾಂತರ ಈನ್ನೂ ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ವೈದ್ಯರ ತಂಡ ಮೃತದೇಹಗಳನ್ನು ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಉಳಿದ ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ತಜ್ಞ ವೈದ್ಯರನ್ನ ನಿಯೋಜಿಸಲಾಗಿತ್ತು. ಇದನ್ನೂ ಓದಿ: ಹಾಸನ ದುರಂತ – ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್

  • ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ

    ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ

    • ಗಾಯಾಳುಗಳ ಆರೋಗ್ಯ ವಿಚಾರಿಸಲಿರೋ ದೊಡ್ಡಗೌಡ್ರು

    ಹಾಸನ: ಮೊಸಳೆಹೊಸಳ್ಳಿಯಲ್ಲಿ (MosaleHosalli) ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಟ್ರಕ್ ಅಪಘಾತದ (Accident) ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ (Krishna Byre Gowda) ಭೇಟಿ ನೀಡಿದ್ದಾರೆ. ಈ ವೇಳೆ ಪರಿಹಾರದ ವಿಚಾರವಾಗಿ ಜನರು ಸಚಿವರಿಗೆ ತರಾಟೆ ತೆಗೆದುಕೊಂಡಿದ್ದಾರೆ.

    ವಿಮಾನ ದುರಂತದಲ್ಲಿ ಸತ್ತರೆ 1 ಕೋಟಿ ರೂ. ಪರಿಹಾರ ಕೊಡ್ತೀರಿ. ಸ್ಟೇಡಿಯಂನಲ್ಲಿ ಸತ್ತರೆ 50 ಲಕ್ಷ ರೂ. ಕೊಡ್ತೀರಿ. ಬಡವರ ಮಕ್ಕಳು ಸತ್ತರೆ ಬೆಲೆ ಇಲ್ವಾ? ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಬಡವರ ಮಕ್ಕಳು ಸತ್ತಿದ್ದಾರೆ ಹೆಚ್ಚಿನ ಪರಿಹಾರ ಕೊಡಬೇಕು. 25 ಲಕ್ಷ ರೂ. ಕೊಡುವಂತೆ ಸಚಿವರಿಗೆ ಜನ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಕೇರಳದಲ್ಲಿ ಸತ್ತರೆ ಕರ್ನಾಟಕದಿಂದ ಪರಿಹಾರ ಕೊಡ್ತೀರಿ. ನಮ್ಮ ರೈತರ ಮಕ್ಕಳು ಸತ್ರೆ ಬಿಡಿಗಾಸು ಕೊಡ್ತೀರಿ. 5 ಲಕ್ಷ ಪರಿಹಾರ ಕೊಡೋದಾದರೆ ನೀವೇ ಇಟ್ಟುಕೊಳ್ಳಿ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

    ಬಂಟರಹಳ್ಳಿ ಪ್ರಭಾಕರ್ ಮನೆಗೆ ಭೇಟಿ ನೀಡಿ, ಪಾರ್ಥೀವ ಶರೀರಕ್ಕೆ ನಮಸ್ಕರಿಸಿ ಸಚಿವರು ಸಾಂತ್ವನ ಹೇಳಿದ್ದಾರೆ. ಬಳಿಕ ಅಲ್ಲಿಂದ ಇನ್ನುಳಿದವರ ಮನೆಗೂ ತೆರಳಿ ಸಾಂತ್ವನ ಹೇಳಲಿದ್ದಾರೆ. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ

    ಗಾಯಾಳುಗಳ ಆರೋಗ್ಯ ವಿಚಾರಿಸಲಿರೋ ದೊಡ್ಡಗೌಡ್ರು 
    ಹಿಮ್ಸ್ ಆಸ್ಪತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D Devegowda) ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಹಿಮ್ಸ್‌ಗೆ ಭೇಟಿ ನೀಡಲಿದ್ದಾರೆ.

  • ಹಾಸನ ದುರಂತ – ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್

    ಹಾಸನ ದುರಂತ – ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್

    ಹಾಸನ: ಗಣೇಶ ಮೆರವೆಣಿಗೆಯಲ್ಲಿ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ದುರಂತ ಸಂಭವಿಸಿದ ಹಿನ್ನೆಲೆ ಮೊಸಳೆಹೊಸಳ್ಳಿ (MosaleHosalli) ಮದಲ್ಲಿ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತಾಗಿ ಬಂದ್ ಮಾಡಿದ್ದಾರೆ.

    ಮೊಸಳೆಹೊಸಳ್ಳಿ ಗ್ರಾಮದಲ್ಲಿ ಘಟನೆ ನಡೆದ ಸ್ಥಳಕ್ಕೆ ನೂರಾರು ಜನರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಹೀಗಾಗಿ ವರ್ತಕರು ಕೂಡ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತಾಗಿ ಬಂದ್ ಮಾಡಿದ್ದು, ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದೆ.ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಪ್ರಧಾನಿ ಮೋದಿ ಸಂತಾಪ

    ಏನಿದು ಘನಘೋರ ದುರಂತ?
    ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಗಾಯಗೊಂಡ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿ ಲತಾ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

    ಗಣೇಶ ಮೆರವಣಿಗೆ ವೇಳೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗಣಪತಿ ಕೂರಿಸುತ್ತಿದ್ದಾರೆ. ಇಂದು ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ.

    ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 20 ಗಾಯಾಳುಗಳಿಗೆ ಹಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಮೂವರು ಐಸಿಯುನಲ್ಲಿದ್ದಾರೆ. 7 ಮಂದಿ ಗಾಯಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಪೊಲೀಸರ ವೈಫಲ್ಯದಿಂದಲೇ ದುರಂತ
    ಇದು ಪೊಲೀಸರ ವೈಫಲ್ಯದಿಂದಾಗಿರುವ ಘಟನೆ ಎಂದು ಶಾಸಕ ಎಚ್‌ಡಿ ರೇವಣ್ಣ ಆರೋಪಿಸಿದ್ದಾರೆ. ಇನ್ನು ಸಂಸದ ಶ್ರೇಯಸ್ ಪಟೇಲ್ ಪ್ರತಿಕ್ರಿಯಿಸಿ, ಇದೊಂದು ಕರಾಳ ದಿನ. ಎಲ್ಲಿಂದ ಲೋಪ ಆಗಿದೆ ಅಂತ ತಿಳಿಸಲು ಸೂಕ್ತ ತನಿಖೆಗೆ ಆಗ್ರಹಿಸುತ್ತೇನೆ ಎಂದಿದ್ದಾರೆ.ಇದನ್ನೂ ಓದಿ:ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

  • ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ

    ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ

    ಹಾಸನ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಾಸುವ ಮುನ್ನವೇ ಹಾಸನದ (Hassan) ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಯೋರ್ವ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.

    ಚಿತ್ರದುರ್ಗದ (Chitradurga) ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದವನಾದ ಮಿಥುನ್ ಬಿನ್ ವಿಜಯ್ (23) ಮೃತ ವಿದ್ಯಾರ್ಥಿ. ಈವರೆಗೆ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಗುರುವಾರ ತಡರಾತ್ರಿ (ಸೆ.11) ಹಾಸ್ಟೆಲ್‌ನಲ್ಲಿ ಮಿಥುನ್ ಗೆಳೆಯರು ಬರ್ತ್‌ಡೇ ಆಚರಿಸಿದ್ದರು. ಬಳಿಕ ಶುಕ್ರವಾರ ಸಂಜೆವರೆಗೂ ಮಿಥುನ್ ಸ್ನೇಹಿತರ ಜೊತೆಗಿದ್ದ. ಬಳಿಕ ಮೆರವೆಣಿಗೆಗೆ ತೆರಳಿದ್ದ. ಈ ವೇಳೆ ಮೆರವಣಿಗೆಯಲ್ಲಿ ಟ್ರಕ್ ಹರಿದು ದಾರುಣವಾಗಿ ಸಾವನ್ನಪ್ಪಿದ್ದಾನೆ.

    ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗ್ರಾಮಸ್ತರು ಗಣಪತಿ ಕೂರಿಸುತ್ತಿದ್ದಾರೆ. ಇಂದು ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ.

    ಏನಿದು ಘನಘೋರ ದುರಂತ?
    ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಗಾಯಗೊಂಡ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿ ಲತಾ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇದನ್ನೂ ಓದಿ: ಹಾಸನ| ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

  • ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    – 20ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಹಾಸನ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಗಣೇಶ ಮೆರವಣಿಗೆ (Hassan Ganesh Procession) ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

    ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ (Accident) 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 8 ಮಂದಿ ಸ್ಥಳದಲ್ಲೇ ಸಾವು

    ಮೃತರ ವಿವರ ಹೀಗಿದೆ…
    1. ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ
    2. ರಾಜೇಶ ಬಿನ್ ಮೂರ್ತಿ 17 ವರ್ಷ ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು
    3. ಈಶ್ವರ ಬಿನ್ ರವಿಕುಮಾರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲೂಕು
    4. ಗೋಕುಲ ಬಿನ್ ಸಂಪತ್ ಕುಮಾರ್ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು
    5. ಕುಮಾರ ಬಿನ್ ತಿಮ್ಮಯ್ಯ (25 ) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
    6. ಪ್ರವೀಣ ಬಿನ್ ಹನುಮಯ್ಯ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
    7. ಮಿಥುನ್ ಬಿನ್ ವಿಜಯ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ.
    8. ಸುರೇಶ ಬಿನ್ ರಮೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ
    9. ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು

    ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗ್ರಾಮಸ್ತರು ಗಣಪತಿ ಕೂರಿಸುತ್ತಿದ್ದಾರೆ. ಇಂದು ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ. ಇದನ್ನೂ ಓದಿ: ಹಾಸನ| ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 20 ಗಾಯಾಳುಗಳಿಗೆ ಹಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಮೂವರು ಐಸಿಯುನಲ್ಲಿದ್ದಾರೆ. 7 ಮಂದಿ ಗಾಯಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಕೊನೆಗೂ ಭರವಸೆಯ ಬೆಳಕು; ಸರ್ಕಾರಿ ನೌಕರಿ ಕೊಡಲು ಸಚಿವ ಸಂಪುಟ ಅಸ್ತು

    ಏನಿದು ಘನಘೋರ ದುರಂತ?
    ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಗಾಯಗೊಂಡ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿ ಲತಾ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

    ಪೊಲೀಸರ ವೈಫಲ್ಯದಿಂದಲೇ ದುರಂತ
    ಇದು ಪೊಲೀಸರ ವೈಫಲ್ಯದಿಂದಾಗಿರುವ ಘಟನೆ ಎಂದು ಶಾಸಕ ಎಚ್‌ಡಿ ರೇವಣ್ಣ ಆರೋಪಿಸಿದ್ದಾರೆ. ಇನ್ನು ಸಂಸದ ಶ್ರೇಯಸ್ ಪಟೇಲ್ ಪ್ರತಿಕ್ರಿಯಿಸಿ, ಇದೊಂದು ಕರಾಳ ದಿನ. ಎಲ್ಲಿಂದ ಲೋಪ ಆಗಿದೆ ಅಂತ ತಿಳಿಸಲು ಸೂಕ್ತ ತನಿಖೆಗೆ ಆಗ್ರಹಿಸುತ್ತೇನೆ ಎಂದಿದ್ದಾರೆ.