Tag: Ganesh Procession

  • ಸಿಎಂ ಹೊಗಳಿದ ಶಾಂತಿದೂತರಿಂದ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು: ಸಿಟಿ ರವಿ ಆಕ್ರೋಶ

    ಸಿಎಂ ಹೊಗಳಿದ ಶಾಂತಿದೂತರಿಂದ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು: ಸಿಟಿ ರವಿ ಆಕ್ರೋಶ

    ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಎರಡು ದಿನದ ಹಿಂದೆ ಹಾಡಿ ಹೊಗಳಿದ ʼಶಾಂತಿದೂತರುʼ ಮಂಡ್ಯದ ಮದ್ದೂರಿನಲ್ಲಿ (Madduru)  ಗಣಪತಿ ಮೆರವಣಿಗೆಯ (Ganesh Procession) ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪರಿಷತ್‌ ಸದಸ್ಯ ಸಿಟಿ ರವಿ (CT Ravi) ಆಕ್ರೋಶ ಹೊರಹಾಕಿದ್ದಾರೆ.

    ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಿದ್ದರಾಮಯ್ಯನವರನ್ನು (Siddaramaiah) ತರಾಟೆಗೆ ತೆಗೆದುಕೊಂಡಿದ್ದಾರೆ.

     

    ಪೋಸ್ಟ್‌ನಲ್ಲಿ ಏನಿದೆ?
    ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹಾಡಿ ಹೊಗಳಿದ “ಶಾಂತಿದೂತರು” ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

    ಸಾಗರದಲ್ಲಿ ಗಣಪತಿಯ ವಿಗ್ರಹಕ್ಕೆ ಉಗುಳುವ ಹೀನ ಕೆಲಸ ಮಾಡಿದ್ದಾರೆ. ಜಾಗತಿಕ ಭಯೋತ್ಪಾದನೆಗೆ ದೊಡ್ಡ ಕೊಡುಗೆ ಕೊಟ್ಟವರು, ನೀವು ಹೊಗಳಿದ ಶಾಂತಿದೂತರೆ.

    ಭರತಖಂಡದಲ್ಲಿ ಹಿಂದೂಗಳ ಮಾರಣಹೋಮಕ್ಕೆ ಕಾರಣರಾದವರು ನೀವು ಹೊಗಳಿದ ಶಾಂತಿದೂತರೆ. ಭಾರತವನ್ನು ವಿಭಜಿಸುವ ಮೂಲಕ ಅಖಂಡ ಭಾರತವನ್ನು ತುಂಡರಿಸಿದವರು ನೀವು ಹೊಗಳಿದ ಶಾಂತಿದೂತರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಕಲ್ಲು ನಾಳೆ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ

    ಕಾಶ್ಮೀರದಲ್ಲಿ ಭಾರತದ ರಾಷ್ಟ್ರೀಯ ಲಾಂಛನ ʼಅಶೋಕಚಕ್ರʼವನ್ನು ಒಡೆದು ಹಾಕಿದವರು ನೀವು ಹೊಗಳಿದ ಶಾಂತಿದೂತರೆ. ನೆನಪಿಡಿ  ಈ ನಿಮ್ಮ ಶಾಂತಿದೂತರನ್ನು ನಂಬಿಕೊಂಡಿದ್ದರೆ ಮುಂದೊಂದು ದಿನ ದೇಶದಲ್ಲಿ ʼಸಂವಿಧಾನʼದ ಬದಲಿಗೆ ʼಷರಿಯಾʼಆವರಿಸಿಕೊಂಡಿತು. ರಾಷ್ಟ್ರಧ್ವಜ ಮತ್ತು ರಾಷ್ಟ್ರಲಾಂಛನವನ್ನು ಗೌರವಿಸಲಾರದವರು ಸಂವಿಧಾನವನ್ನು ಉಳಿಸಿಯಾರೆ? ಇದನ್ನೂ ಓದಿಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ  ಮದ್ದೂರು ಉದ್ವಿಗ್ನ

    ಇನ್ನೆಷ್ಟು ದಿನ ಮತಗಳಿಕೆಗಾಗಿ ಸುಳ್ಳಿನ ಭರಾಟೆ? ಸತ್ಯ ಹೇಳಿ ಜನಜಾಗೃತಿ ಮೂಡಿಸಿ. ಆಗಲಾದರೂ ಜನರಿಗೆ ಶಾಂತಿದೂತರ ಹೀನಕೃತ್ಯ ಅರ್ಥವಾದೀತು. ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾದರೂ ಆದೀತು.

  • ಗಣೇಶ ವಿಸರ್ಜನೆ ವೇಳೆ ಕಲ್ಲು – ನಾಳೆ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ

    ಗಣೇಶ ವಿಸರ್ಜನೆ ವೇಳೆ ಕಲ್ಲು – ನಾಳೆ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ

    ಮಂಡ್ಯ: ಗಣೇಶ ಮೆರವಣಿಗೆ (Ganesh Procession) ವೇಳೆ ಕಲ್ಲುತೂರಾಟ ನಡೆಸಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆವರೆಗೆ ಮದ್ದೂರು (Madduru)  ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ಘಟನಾ ನಡೆದ ಸ್ಥಳಕ್ಕೆ ರಾತ್ರಿಯೇ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ ರೌಂಡ್‌ ಹಾಕಿದರು. ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಂಗಳವಾರ ಬೆಳಗ್ಗೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.   ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ಮದ್ದೂರು ಉದ್ವಿಗ್ನ

    ತಮಿಳು ಕಾಲೋನಿಯ ಯುವಕರು ಗಣೇಶ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲು ಮೆರವಣಿಗೆ ಮಾಡಿದ್ದಾರೆ. ರಾಮ್ ರಹೀಮ್ ನಗರದಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಲ್ಲು ಬಿದ್ದಿದೆ. ನಂತರ ಎರಡೂ ಕಡೆಯಿಂದ ಕಲ್ಲು ತೂರಾಟ ಆಗಿದೆ. ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.

    ಸಂಬಂಧ ಒಂದು ಸ್ವಯಂಪ್ರೇರಿತ ಇನ್ನೊಂದು ಅಜಯ್ ಎಂಬ ಗಾಯಾಳು ದೂರಿನ ಅನ್ವಯ ಪ್ರಕರಣ ದಾಖಲಿಸಿದ್ದೇವೆ. 21 ಜನರನ್ನು ವಶಕ್ಕೆ ಪಡೆದಿದ್ದೇವೆ. ವಶಕ್ಕೆ ಪಡೆದವರ ಪೈಕಿ ಇಬ್ಬರು ಮಾತ್ರ ಚನ್ನಪಟ್ಟಣದವರು ಉಳಿದವರು ಸ್ಥಳೀಯರಾಗಿದ್ದಾರೆ. ಸದ್ಯ ಬಿಗಿ ಭದ್ರತೆ ಮಾಡಿದ್ದೇವೆ ಎಂದು ಹೇಳಿದರು.

    ಇಬ್ಬರು ಸಿಬ್ಬಂದಿಗೆ ಸಹ ಏಟು ಬಿದ್ದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ ಇದ್ದ ಕಾರಣ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ವಿವರಿಸಿದರು.

  • ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ – ಮದ್ದೂರು ಉದ್ವಿಗ್ನ

    ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ – ಮದ್ದೂರು ಉದ್ವಿಗ್ನ

    – ಇವರ ಹಬ್ಬಕ್ಕೆ ನಾವು ಕಲ್ಲು ತೂರಿದ್ದೀವಾ?

    ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ (Madduru Ganesh Procession) ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಗಣಪತಿ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರ ಗುಂಪು ಕಲ್ಲುತೂರಿದೆ.

    ಕಳೆದ ವರ್ಷ ಇದೇ ಸಂದರ್ಭದಲ್ಲಿ ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ (Stone Pelting) ಮಾಡಲಾಗಿತ್ತು. ಈ ವೇಳೆ ಕೋಟ್ಯಾಂತರ ರೂ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿತ್ತು. ಇದೀಗ ಅಂತಹುದೆ ಘರ್ಷಣೆ ಪರಿಸ್ಥಿತಿ ಎದುರಾಗಿದ್ದು, ತಕ್ಷಣವೇ ಎಚ್ಚೆತ್ತ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

    ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಮದ್ದೂರಿನ ಬೀದಿಗಳಲ್ಲಿ ಗಣಪತಿ ಮೆರವಣಿ ನಡೆಸುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮೆರವಣಿಗೆ ಬಂದಿದ್ದು ಈ ವೇಳೆ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ್ದಾರೆ. ಈ ವೇಳೆ ಕಲ್ಲು ತೂರಿದವರ ಮೇಲೆ ಪ್ರತಿಯಾಗಿ ಕಲ್ಲು ತೂರಿದ್ದಾರೆ. ಈ ವೇಳೆ ನಾಲ್ವರು ಹೋಮ್‌ ಗಾರ್ಡ್‌ ಸೇರಿದಂತೆ ಎಂಟು ಮಂದಿಗೆ ಗಾಯವಾಗಿದೆ.

    ರಾತ್ರಿ 7.30ರ ಸಂಧರ್ಭದಲ್ಲಿ ಈ ಗಲಾಟೆ ನಡೆದಿದೆ. ಮೊದಲಿಗೆ ಪ್ರಮುಖ ಬೀದಿಗಳಲ್ಲಿ ಗಣಪತಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು, ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರಂತೆ. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಾಟದಿಂದ ಕ್ಷಣಕಾಲ ಗಾಬರಿಗೊಂಡ ಯುವಕರು ಕಲ್ಲು ತೂರಿದ ಕಡೆಗೆ ಇವರು ಕಲ್ಲು ಎಸೆದಿದ್ದಾರೆ.

    ನಾವು ಸುಮ್ಮನಿದ್ದರೂ ನಮ್ಮ ಮೇಲೆ ಈ ರೀತಿ ದಾಳಿ ಮಾಡಿದ್ದಾರೆ. ಮೊನ್ನೆ ಮೊನ್ನೆಯಷ್ಟೆ ಅವರ ಹಬ್ಬ ಮಾಡಿದಾಗ ನಾವು ಗಲಾಟೆ ಮಾಡಿದ್ದವ ಎಂದು ಹಿಂದೂ ಯುವಕರು ಪ್ರಶ್ನೆ ಮಾಡುತ್ತಿದ್ದಾರೆ.

    ಒಂದು ವರ್ಷದ ಹಿಂದೆ ನಡೆದಿದ್ದ ನಾಗಮಂಗಲ ಗಲಾಟೆ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯ ಘಟನೆ ಮರುಕಳಿಸಿದ್ದು, ಸದ್ಯ ಪರಿಸ್ಥಿತಿ ಮಾತ್ರ ಬೂದಿಮುಚ್ಚಿದ ಕೆಂಡದಂತಿದೆ.

  • ಗಣೇಶ ವಿಸರ್ಜನೆ ಭದ್ರತೆಗೆ ತೆರಳಿದ್ದ ಪೇದೆ ಹೃದಯಾಘಾತಕ್ಕೆ ಬಲಿ

    ಗಣೇಶ ವಿಸರ್ಜನೆ ಭದ್ರತೆಗೆ ತೆರಳಿದ್ದ ಪೇದೆ ಹೃದಯಾಘಾತಕ್ಕೆ ಬಲಿ

    ಕಲಬುರಗಿ: ಗಣೇಶ ವಿಸರ್ಜನಾ ಮೆರವಣಿಗೆಗೆ (Ganesh Procession) ಭದ್ರತೆಗಾಗಿ ತೆರಳಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವುದು ಸೇಡಂನ ಮಳಖೇಡದಲ್ಲಿ ನಡೆದಿದೆ.

    ಮೃತರನ್ನು ಮಳಖೇಡ ಪೊಲೀಸ್ ಠಾಣೆಯ ಮುಖ್ಯಪೇದೆ ಮನೋಹರ್ ಪವಾರ್ (46) ಎಂದು ಗುರುತಿಸಲಾಗಿದೆ. ಅವರಿಗೆ ಕರ್ತವ್ಯದ ವೇಳೆಯೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಂಬುಲೇನ್ಸ್‍ನಲ್ಲಿ ಕಲಬುರಗಿ ಆಸ್ಪತ್ರೆಗೆ ಕರೆದೊಯ್ಯುವ ಯತ್ನ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೆ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮಂಡ್ಯ | ಗಣೇಶ ಮೆರವಣಿಗೆ ವೇಳೆ ಡಿಜೆ ಸೌಂಡ್‌ಗೆ ಕುಣಿಯುತ್ತಿದ್ದ ವ್ಯಕಿ ಹೃದಯಾಘಾತಕ್ಕೆ ಬಲಿ

    ಮಳಖೇಡ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಸುತ್ತಿದ್ದ ಮನೋಹರ್ ಸಾವಿಗೆ ಸಹೋದ್ಯೋಗಿಗಳು ಹಾಗೂ ಆತ್ಮೀಯರು ಕಂಬನಿ ಮಿಡಿದಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ಠಾಣೆಯ ಸಿಬ್ಬಂದಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಯಾದಗಿರಿ | ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತಕ್ಕೆ ಬಲಿ

  • ಗಣೇಶ ಮೆರವಣಿಗೆ | ತಲೆಯ ಮೇಲೆ ಪಟಾಕಿ ಸಿಡಿಸಿ ಹುಚ್ಚಾಟ

    ಗಣೇಶ ಮೆರವಣಿಗೆ | ತಲೆಯ ಮೇಲೆ ಪಟಾಕಿ ಸಿಡಿಸಿ ಹುಚ್ಚಾಟ

    ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಗಣೇಶ ಮೆರವಣಿಗೆ (Ganesh Procession) ವೇಳೆ ಯುವಕನೋರ್ವ ಹುಚ್ಚಾಟ ಮೆರೆದಿದ್ದಾನೆ.

    ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್ (Fire Cracker Box) ತಲೆಯ ಮೇಲೆ ಹೊತ್ತು ಸಿಡಿಸಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದನ್ನೂ ಓದಿ: ಸಾಗರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟ ಯುವಕನಿಗೆ ಗಂಭೀರ ಗಾಯ

     

    ವಿಸರ್ಜನೆ ಮೆರವಣಿಗೆಯಲ್ಲಿ ಸಾವಿರಾರು ಜನ ಇದ್ದರೂ ಹುಂಬತನ ಮೆರೆದ ಯುವಕ ತಲೆಯ ಮೇಲೆ ಪಟಾಕಿ ಬಾಕ್ಸ್ ಹಿಡಿದು ಸಿಡಿಸಿದ್ದಾನೆ. ಜನ ಪಟಾಕಿ ಬಾಕ್ಸ್ ಕಸಿಯಲು ಮುಂದಾದರೂ ಯುವಕ ತನ್ನ ಹುಚ್ಚಾಟ ಮುಂದುವರೆಸಿದ್ದ.

    ಕೂಡಲೇ ಎಚ್ಚೆತ್ತ ಪೊಲೀಸರು ತಲೆಯ ಮೇಲೆ ಇದ್ದ ಪಟಾಕಿ ಬಾಕ್ಸ್ ಕಸಿದು ಯುವಕನನ್ನ ಗದರಿಸಿ ಕಳಿಸಿದ್ದಾರೆ.

  • Davanagere Violence | ಕಲ್ಲು ತೂರಾಟ – ಗಣೇಶ ಸಮಿತಿ 8 ಜನ ಸೇರಿ 18 ಮಂದಿಗೆ ನ್ಯಾಯಾಂಗ ಬಂಧನ

    Davanagere Violence | ಕಲ್ಲು ತೂರಾಟ – ಗಣೇಶ ಸಮಿತಿ 8 ಜನ ಸೇರಿ 18 ಮಂದಿಗೆ ನ್ಯಾಯಾಂಗ ಬಂಧನ

    ದಾವಣಗೆರೆ: ಜಿಲ್ಲೆಯ ಬೇತೂರು ರಸ್ತೆಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ (Davanagere Stone Pelting Case) ಸಂಬಂಧಿಸಿದಂತೆ 18 ಜನರಿಗೆ ನ್ಯಾಯಾಧೀಶರಾದ ಪ್ರಶಾಂತ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ ಸಮಿತಿಯ 8 ಜನ ಸೇರಿ ಎರಡು ಕೋಮಿನ ಒಟ್ಟು 18 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿ ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ದಾವಣಗೆರೆಯ ಎಂಸಿಸಿ ʻಎʼ ಬ್ಲಾಕ್‌ನಲ್ಲಿರುವ ನ್ಯಾಯಾಧೀಶರಾದ ಪ್ರಶಾಂತ್ ಅವರ ನಿವಾಸದಲ್ಲಿ ಆರೋಪಿಗಳನ್ನು ಹಾಜರುಪಡಿಸಿದ್ದರು. ಆರೋಪಿಗಳ ವಿಚಾರಣೆ ಬಳಿಕ 18 ಜನರಿಗೆ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿದರು.

    ಏನಿದು ಗಲಭೆ ಪ್ರಕರಣ?
    ದಾವಣಗೆರೆಯ ಮುದ್ದ ಬೋವಿ ಕಾಲೋನಿ ಹಾಗೂ ವೆಂಕಬೋವಿ ಕಾಲೋನಿಯ ಗಣೇಶ ಮೆರವಣಿಗೆ (Ganesh Procession) ನಡೆಯುವಾಗ ಕಲ್ಲು ತೂರಾಟ (Stone Pelting) ನಡೆದಿತ್ತು. ಘಟನೆಯಲ್ಲಿ ಪೊಲೀಸರೂ ಗಾಯಗೊಂಡಿದ್ದರು. ಕೂಡಲೇ ಮುಸ್ಲಿಂ ಮುಖಂಡರು ಪರಿಸ್ಥಿತಿಯನ್ನು ನಿಯಂತ್ರಣಗೊಳಿಸಿದ್ದರು. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿದ ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಕೂಡಲೇ ಪೊಲೀಸರು ಇಡೀ ನಗರದಲ್ಲಿ ಸಂಚಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ಶುಕ್ರವಾರ ಬೆಳಗ್ಗಿನ ವೇಳೆಗೆ ಘಟನೆಗೆ ಕಾರಣರಾದವರನ್ನ ಬಂಧಿಸಿದ್ದರು.

    ಕಲ್ಲು ತೂರಾಟಕ್ಕೆ ಕಾರಣ ಏನು?
    ಕಳೆದ ಎರಡು ದಿನಗಳ ಹಿಂದೆ ಹಿಂದೂ ಮುಖಂಡರು ನಾಗಮಂಗಲ ಕಲ್ಲುತೂರಾಟ ಪ್ರಕರಣ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ್ಯ ಸಂಚಾಲಕ ಸತೀಶ್ ಪೂಜಾರ್ ವಿವಾದಾತ್ಮಕ ಹೇಳಿಕೆ‌ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಮುಸ್ಲಿಂ ಮುಖಂಡನೊಬ್ಬ ತಾಕತ್ ಇದ್ದರೆ ಬೇತೂರು ರಸ್ತೆಗೆ ಬಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಗುರುವಾರ ಗಣೇಶ ಮೆರವಣಿಗೆಯಲ್ಲಿ ಸತೀಶ್ ಪೂಜಾರಿ ಭಾಗವಹಿಸಿದ್ದರು. ಮೆರವಣಿಗೆ ಸಾಗುವ ಅರಳಿಮರ ಸರ್ಕಲ್ ಬಳಿ ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಸೇರಿದ್ದರು. ಗಣೇಶನ ಮೆರವಣಿಗೆ ಹೋಗುತ್ತಿದ್ದಾಗ ಇಸ್ಲಾಂ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.

    ಈ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮುಸ್ಲಿಂ ಮುಖಂಡರೇ ಜನಸಂದಣಿಯನ್ನು ನಿಯಂತ್ರಣ ಮಾಡಿದ್ದಾರೆ. ನಂತರ ಕೆ ಅರ್ ರಸ್ತೆ ಹಂಸಭಾವಿ ಸರ್ಕಲ್ ನಲ್ಲಿ ಕಲ್ಲು ತೂರಾಟ ನಡೆದಿದೆ.

  • ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಧಗಧಗ – ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡ!

    ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಧಗಧಗ – ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡ!

    ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣದಿಂದಾಗಿ ದಾವಣಗೆರೆ ನಗರ ಬೂದಿ ಮುಚ್ಚಿದ ಕೆಂಡದಂತಾಗಿದೆ. ದಾವಣಗೆರೆ ನಗರಾದಾದ್ಯಂತ ಭಯದ ವಾತಾವರಣಮನೆ ಮಾಡಿದ್ದು,ಕಲ್ಲು ತೂರಾಟ ನಡೆದ ಇಮಾಂನಗರದಲ್ಲಿ ರಸ್ತೆಯುದ್ದಕ್ಕು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್ ಪೊಲೀಸ್ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ರಾತ್ರಿಯಿಡೀ ನಿದ್ರೆಗಟ್ಟು ಗಸ್ತು ನಡೆಸಿವೆ. ಮತ್ತೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ದಾವಣಗೆರೆ ಎಸ್ಪಿ ಉಮಾ ಅವರು, ಪರಿಸ್ಥಿತಿ ಹತೋಟಿಗೆ ತರಲು ಮುಂದಾಗಿದ್ದಾರೆ.

    ಈ ಘಟನೆಯಿಂದಾಗಿ ಬೆಳ್ಳಂಬೆಳಿಗ್ಗೆ ಜನಜಂಗುಲಿಯಿಂದ ತುಂಬಿರ್ತಿದ್ದ ಇಮಾಂ ನಗರದ ಜನನಿಬಿಡ ರಸ್ತೆಗಳು ಖಾಲಿಖಾಲಿಯಾಗಿದ್ದು ಬಿಕೊ ಎನ್ನುತ್ತಿವೆ. ಇಲ್ಲಿರುವ ಮಸೀದಿ ಬಳಿ 10ಕ್ಕೂ ಹೆಚ್ಚು ಪೊಲೀಸ್ ವಾಹನಗಳನ್ನು ನಿಲ್ಲಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಬೆಳಗಿನ ಜಾವ 5 ಗಂಟೆಗೆ ವ್ಯಾಪಾರ ವಹಿವಾಟಿಗೆ ತೆರಳುತಿದ್ದ ಜನರು ತಡವಾಗಿ ಹೊರಬರ್ತಿದ್ದು, ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಚಿಕಿತ್ಸೆ ಪಡೆಯುತ್ತಿದ್ದ 27ರ ಒಡಿಶಾ ಗಾಯಕಿ ರುಕ್ಸಾನಾ ಬಾನೊ ಆಸ್ಪತ್ರೆಯಲ್ಲೇ ಸಾವು!

    ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆಸಿದ್ದು, ಏಕಾಏಕಿ ಮೆರವಣೆಗೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ನಗರದ ಅರಳಿಮರ ಸರ್ಕಲ್ ಬಳಿ ಮೊದಲು ಕಲ್ಲು ತೂರಾಟ ಶುರುವಾಗಿದ್ದು, ಬಳಿಕ ಕೆ.ಆರ್ ರಸ್ತೆ, ಹಂಸಬಾವಿ ಸರ್ಕಲ್, ಕೆಆರ್ ಮಾರ್ಕೇಟ್ ಸೇರಿದಂತೆ ಬಂಬೂ ಬಜಾರ್ ರಸ್ತೆ, ಮಟ್ಟಿಕಲ್ಲು ಏರಿಯಾದಲ್ಲಿಯೂ ಕಲ್ಲುತೂರಾಟ ನಡೆದಿದೆ. ತಕ್ಷಣವೇ ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸರು ಎಷ್ಟೇ ನಿಯಂತ್ರಿಸಿದರೂ ಕಿಡಿಗೇಡಿಗಳು ಕಲ್ಲು ತೂರಾಟ ಮುಂದುವರಿಸಿದ್ದು, ಪೊಲೀಸರ ಎದುರೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಕೂಡ ಕಲ್ಲಿನಿಂದ ರಕ್ಷಿಸಿಕೊಳ್ಳಲು ಬೋರ್ಡ್ ಹಿಡಿದುಕೊಂಡು ತಿರುಗಾಡುವಂತಾಗಿದೆ.

    ಸ್ಥಳಕ್ಕೆ ಪೊಲೀಸರು ಆಗಮಿಸುತ್ತಲೇ ಕಿಡಿಗೇಡಿಗಳು ಅಲ್ಲಿಂದ ಪಾರಾಗಿ, ಏರಿಯಾಗಳಿಗೆ ನುಗ್ಗಿ, ಮಟ್ಟಿಕಲ್ಲು, ಅನೆಕೊಂಡಗಳಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪುಂಡರ ಕಲ್ಲು ತೂರಾಟಕ್ಕೆ ಮಟ್ಟಿಕಲ್ಲು ನಿವಾಸಿಗಳು ದೊಣ್ಣೆ ಹಿಡಿದು ಓಡಿಸಿಕೊಂಡು ಹೋಗಿದ್ದಾರೆ.

    60 ರಿಂದ 70 ಯುವಕರ ಗುಂಪು ಮಟ್ಟಿಕಲ್ಲು, ಅನೆಕೊಂಡದ ಹಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಿದ್ದು, ಜೊತೆಗೆ ಮನೆ ಮುಂಭಾಗದಲ್ಲಿ ಇರುವ ವಾಹನಗಳಿಗೆ ಹಾನಿ ಮಾಡಿದ್ದಾರೆ. ಅಲ್ಲದೆ ಏಕಾಎಕಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆ ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಗಳಿಗೂ ಕೂಡ ಬೀಗ ಹಾಕಿಕೊಂಡು ಹೋಗಿದ್ದಾರೆ. ಇದರಿಂದಾಗಿ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ʻಉಪೇಂದ್ರʼ ಸಿನಿಮಾ ವೀಕ್ಷಿಸಿದ ಉಪೇಂದ್ರ!

    ಸದ್ಯ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು, ಇದುವರೆಗೂ ಎರಡು ಕಡೆಯಿಂದ 20ಕ್ಕೂ ಹೆಚ್ಚು ಜನರನ್ನು ಸೆರೆಹಿಡಿದಿದ್ದಾರೆ. ಇಡೀ ರಾತ್ರಿ ಹಳೇ ದಾವಣಗೆರೆಯನ್ನು ಪೊಲೀಸರು ಗಸ್ತು ಹೊಡೆದಿದ್ದಾರೆ. ಬೆಳ್ಳಂಬೆಳಿಗ್ಗೆ ಜನಜಂಗುಳಿಯಿಂದ ತುಂಬಿರುತ್ತಿದ್ದ ರಸ್ತೆಗಳು ಖಾಲಿಯಾಗಿದ್ದು, ಬಿಕೊ ಎನ್ನುತ್ತಿವೆ. ಹಾಲು ಖರೀದಿಸಲು ಕೂಡ ಅರಳಿಮರ ಸರ್ಕಲ್ ಜನ ಮನೆಯಿಂದ ಹೊರಬರುತ್ತಿಲ್ಲ. ಒಟ್ಟಿನಲ್ಲಿ ದಾವಣಗೆರೆಯ ಇಮಾಂನಗರ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ.

  • ದಾವಣಗೆರೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

    ದಾವಣಗೆರೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

    ದಾವಣಗೆರೆ: ನಗರದ ಮುದ್ದ ಬೋವಿ ಕಾಲೋನಿ ಹಾಗೂ ವೆಂಕಬೋವಿ ಕಾಲೋನಿಯ ಗಣೇಶ ಮೆರವಣಿಗೆ (Ganesh Procession) ನಡೆಯುವಾಗ ಕಲ್ಲು ತೂರಾಟ (Stone Pelting) ನಡೆದಿದೆ.

    ನಗರದ ಅರಳಿ ಮರ ಸರ್ಕಲ್ ನಲ್ಲಿ ಮೆರವಣಿಗೆ ಸಾಗಿದ ನಂತರ ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು (Police) ಗಾಯಗೊಂಡಿದ್ದಾರೆ.

    ಕೂಡಲೇ ಮುಸ್ಲಿಂ ಮುಖಂಡರು ಪರಿಸ್ಥಿತಿಯನ್ನು ನಿಯಂತ್ರಣ ಮಾಡಿದ್ದಾರೆ. ಗಣೇಶ ಮೆರವಣಿಗೆ ಸಾಗಿದ ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಕೂಡಲೇ ಪೊಲೀಸರು ಇಡೀ ನಗರದಲ್ಲಿ ಸಂಚಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

    ಕಲ್ಲು ತೂರಾಟಕ್ಕೆ ಕಾರಣ ಏನು?
    ಕಳೆದ ಎರಡು ದಿನಗಳ ಹಿಂದೆ ಹಿಂದೂ ಮುಖಂಡರು ನಾಗಮಂಗಲ ಕಲ್ಲುತೂರಾಟ ಪ್ರಕರಣ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು.

    ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ್ಯ ಸಂಚಾಲಕ ಸತೀಶ್ ಪೂಜಾರ್ ವಿವಾದಾತ್ಮಕ ಹೇಳಿಕೆ‌ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಮುಸ್ಲಿಂ ಮುಖಂಡನೊಬ್ಬ ತಾಕತ್ ಇದ್ದರೆ ಬೇತೂರು ರಸ್ತೆಗೆ ಬಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ.

    ಇಂದು ಗಣೇಶ ಮೆರವಣಿಗೆಯಲ್ಲಿ ಸತೀಶ್ ಪೂಜಾರಿ ಭಾಗವಹಿಸಿದ್ದರು.  ಮೆರವಣಿಗೆ ಸಾಗುವ ಅರಳಿಮರ ಸರ್ಕಲ್ ಬಳಿ ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಸೇರಿದ್ದರು. ಗಣೇಶನ ಮೆರವಣಿಗೆ ಹೋಗುತ್ತಿದ್ದಾಗ ಇಸ್ಲಾಂ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.

    ಈ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮುಸ್ಲಿಂ ಮುಖಂಡರೇ ಜನಸಂದಣಿಯನ್ನು ನಿಯಂತ್ರಣ ಮಾಡಿದ್ದಾರೆ. ನಂತರ ಕೆ ಅರ್ ರಸ್ತೆ ಹಂಸಭಾವಿ ಸರ್ಕಲ್ ನಲ್ಲಿ ಕಲ್ಲು ತೂರಾಟ ನಡೆದಿದೆ.

  • ದುರುಳರು ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ

    ದುರುಳರು ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ

    ಬೆಂಗಳೂರು: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ (Nagamanagla) ಗಣೇಶ ವಿಸರ್ಜನೆಯ (Ganesh Procession) ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದಿದ್ದಾರೆ.

    ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೇ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದರು.

     

  • ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

    ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

    ಚೆನ್ನೈ: ಗಣೇಶ ಚತುರ್ಥಿ ಆಚರಣೆ ವೇಳೆ ತಮಿಳುನಾಡಿನ (Tamil Nadu) ವೆಲ್ಲೂರು ಮೂಲದ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ.

    ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ (Ganesh procession) ವೇಳೆ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ (Burqa Dances) ನೃತ್ಯ ಮಾಡಿದ್ದ. ಈ ದೃಶ್ಯದ ವೀಡಿಯೋ ವೈರಲ್‌ ಆಗಿತ್ತು. ಬುರ್ಕಾ ಧರಿಸಿದ್ದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದನ್ನೂ ಓದಿ: ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್

    ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿ, ವಿರುತ್ತಂಪಟ್ಟು ಮೂಲದ ಅರುಣ್‌ಕುಮಾರ್‌ ಎಂಬಾತನನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಇತರರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

    ಎರಡು ಸಮುದಾಯಗಳ ನಡುವೆ ದ್ವೇಷ ಉಂಟು ಮಾಡಲು ಯತ್ನಿಸಿದ ಆರೋಪದಡಿ ಅರುಣ್‌ಕುಮಾರ್‌ನನ್ನು ಬಂಧಿಸಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]