Tag: gang rape

  • ಆಟೋಗಾಗಿ ಕಾಯ್ತಿದ್ದಾಗ ಕಿಡ್ನಾಪ್- ಐವರಿಂದ ಮಹಿಳೆಯ ಮೇಲೆ ಗ್ಯಾಂಗ್‍ರೇಪ್!

    ಆಟೋಗಾಗಿ ಕಾಯ್ತಿದ್ದಾಗ ಕಿಡ್ನಾಪ್- ಐವರಿಂದ ಮಹಿಳೆಯ ಮೇಲೆ ಗ್ಯಾಂಗ್‍ರೇಪ್!

    ನವದೆಹಲಿ: ಮಾಲ್ ಮುಂದೆ ಆಟೋಗಾಗಿ ಕಾಯುತ್ತಿದ್ದ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸೆಗಿರುವ ಘಟನೆ ದಕ್ಷಿಣ ದೆಹಲಿಯ ವಸಂತ್‍ಕುಂಜ್ ಪ್ರದೇಶದಲ್ಲಿ ನಡೆದಿದೆ.

    30 ವರ್ಷದ ಮಹಿಳೆ ಆತ್ಯಾಚಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಐವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಂಗಳವಾರ ರಾತ್ರಿ ಮಹಿಳೆಯನ್ನು ಅಪಹರಿಸಿದ ಗೆಸ್ಟ್ ಹೌಸ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಲಾಗಿದೆ.

    ಆಗಿದ್ದೇನು?
    ಸೋಮವಾರ ರಾತ್ರಿ 11 ಗಂಟೆಗೆ ಖಾಸಗಿ ಉದ್ಯೋಗಿಯಾದ ಮಹಿಳೆಯು ಗುರುಗಾಂವ್ ಸಹರಾ ಮಾಲ್ ಬಳಿ ಆಟೋಗಾಗಿ ಕಾಯುತ್ತಿದ್ದರು. ಈ ವೇಳೆ ಸ್ಥಳಕ್ಕೆ ಕ್ಯಾಬ್‍ನಲ್ಲಿ ಬಂದ ಕಾಮುಕರು ಡ್ರಾಪ್ ನೀಡುವುದಾಗಿ ಹೇಳಿದ್ದಾರೆ. ಆದ್ರೆ ಮಹಿಳೆ ನಿಮ್ಮ ಡ್ರಾಪ್ ಬೇಡವೆಂದು ತಿರಸ್ಕರಿಸಿದ್ದಾರೆ. ಕೂಡಲೇ ಐವರು ಮಹಿಳೆಯನ್ನು ಬಲವಂತವಾಗಿ ಕ್ಯಾಬ್ ನಲ್ಲಿ ಅಪಹರಿಸಿ ಹತ್ತಿರದ ವಸತಿಗೃಹಕ್ಕೆ ಹೋಗಿದ್ದಾರೆ. ಗೆಸ್ಟ್ ಹೌಸ್‍ನಲ್ಲಿ ಐವರು ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸೆಗಿದ್ದಾರೆ. ಕೊನೆಗೆ ಬೆಳಗಿನ ಜಾವ ಮಹಿಳೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ಹೋಗಿದ್ದಾರೆ.

    ಸಹಾಯಕ್ಕಾಗಿ ಮಹಿಳೆ ಜೋರಾಗಿ ಕೂಗಿಕೊಳ್ಳುತ್ತಿರುವುದನ್ನು ಕೇಳಿಸಿಕೊಂಡ ವಸತಿಗೃಹದ ಅಡುಗೆ ಸಿಬ್ಬಂದಿ ಬಂದು ಬಾಗಿಲು ತೆಗೆದಿದ್ದಾನೆ. ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅಲ್ಲೇ ಇದ್ದ ಮತ್ತೊಬ್ಬ ಆರೋಪಿ ಮಹಿಳೆಯನ್ನು ತಡೆಯಲು ಮುಂದಾದಾಗ ಕೈಗೆ ಸಿಕ್ಕ ರಾಡ್‍ನಿಂದ ಹೊಡೆದು ತಪ್ಪಿಸಿಕೊಂಡಿದ್ದಾರೆ. ಗೆಸ್ಟ್ ಹೌಸ್ ನಿಂದ ಬಂದು ಫ್ರೆಂಡ್‍ಗೆ ಕರೆ ಮಾಡಿ ವಿಷಯ ತಿಳಿಸಿ, ಬೆಳಗಿನ ಜಾವ 4.30ಕ್ಕೆ ಐವರ ವಿರುದ್ಧ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಪೊಲೀಸರು ಅಪಹರಣ ಹಾಗೂ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿಕೊಂಡು 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ತೆಜ್ವೀರ್ ಸಿಂಗ್, ಗೋಪಾಲ್ ಪ್ರಸಾದ್, ರೂಪ್ ದೇವ್, ಅನ್ಸುಲ್ ಹಾಗೂ ರಾಮಬಾಬು ಹರ್ಯಾಣ ಮೂಲದವರಾಗಿದ್ದು ದೆಹಲಿಯ ಖಾಸಗಿ ಕಂಪೆನಿಯ ಉದ್ಯೋಗಿಗಳೆಂದು ತಿಳಿದುಬಂದಿದೆ.

  • ಬೆಂಗ್ಳೂರಿನ ಪಿಜಿಯಲ್ಲಿಯೇ ಯುವತಿಯ ಮೇಲೆ ಗ್ಯಾಂಗ್ ರೇಪ್!

    ಬೆಂಗ್ಳೂರಿನ ಪಿಜಿಯಲ್ಲಿಯೇ ಯುವತಿಯ ಮೇಲೆ ಗ್ಯಾಂಗ್ ರೇಪ್!

    ಬೆಂಗಳೂರು: ಪಿಜಿಯಲ್ಲಿಯೇ ಯುವತಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ದೀಪಾಂಜಲಿನಗರದ ಖಾಸಗಿ ಪಿಜಿಯಲ್ಲಿ ಮಾರ್ಚ್ 18 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಕಾರ್ತಿಕ್ ಮತ್ತು ಇನ್ನಿಬ್ಬರು ಯುವಕರಿಂದ ಈ ಕೃತ್ಯ ನಡೆದಿದೆ. ಈ ಕೃತ್ಯಕ್ಕೆ ಪಿಜಿಯ ಮ್ಯಾನೇಜರ್ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿದೆ?: ಪಿಜಿಯ ಮ್ಯಾನೇಜರ್ ನನ್ನ ಬಳಿ ಇದ್ದ ಒಡವೆ ಮತ್ತು ಹಣವನ್ನು ಕದ್ದಿದ್ದಳು. ನಾವು ಕೇಳಿದಾಗ ಕೊಡುತ್ತೇನೆ ಎಂದು ಸತಾಯಿಸುತ್ತಿದ್ದಳು. ಬಳಿಕ ಆರೋಪಿ ಕಾರ್ತಿಕ್ ಮತ್ತು ಆತನ ಸ್ನೇಹಿತರ ಜೊತೆ ಸಹಕರಿಸಿದರೆ ಹಣ, ಒಡವೆಯನ್ನು ವಾಪಸ್ ಕೊಡುವುದಾಗಿ ಹೇಳಿದ್ದಳು. ನಾನು ಅದಕ್ಕೆ ನಿರಾಕರಿಸಿದ್ದೆ. ಇದರಿಂದ ಮಾರ್ಚ್ 18 ರಂದು ಮ್ಯಾನೇಜರ್ ನನ್ನ ರೂಮಿಗೆ, ಕಾರ್ತಿಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಕಳುಹಿಸಿದ್ದಳು.

    ರೂಮಿಗೆ ಬಂದ ಅವರು ನನ್ನ ಮುಖಕ್ಕೆ ಕ್ಲೋರೋಫಾರ್ಮ್ ಹಾಕಿದ ಬಟ್ಟೆಯನ್ನು ಮುಚ್ಚಿದರು. ಇದರಿಂದ ನನಗೆ ಪ್ರಜ್ಞೆ ತಪ್ಪಿತು. ಆಗ ಮೂವರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ವಿಡಿಯೋವನ್ನು ಆರೋಪಿ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ. ಬಳಿಕ ಆ ವಿಡಿಯೋವನ್ನು ತೋರಿಸಿ ಈ ವಿಚಾರವನ್ನು ಯಾರಿಗಾದ್ರೂ ಹೇಳಿದರೆ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ. ಅಷ್ಟೆ ಅಲ್ಲದೇ ನಾವು ಹೇಳಿದವರ ಜೊತೆ ನೀನು ಸಹಕರಿಸಬೇಕು ಎಂದು ಹೇಳಿದ್ದಾರೆ ಅಂತ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಕಾಮುಕರು ನೀಡುತ್ತಿದ್ದ ಕಿರುಕುಳವನ್ನು ಸಹಿಸಿಕೊಳ್ಳಲಾಗದೇ ಇದೇ ಮೇ 23 ರಂದು ಸಂತ್ರಸ್ತೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ ಪೊಲೀಸರು ಕಾಮುಕರನ್ನು ಕರೆಸಿ ವಿಡಿಯೋ, ಫೋನ್ ಎಲ್ಲವನ್ನು ವಶಪಡಿಸಿಕೊಂಡು ಯಾವುದೇ ಕ್ರಮ ತೆಗೆದುಕೊಳ್ಳದೆ ವಾಪಸ್ ಕಳುಹಿಸಿದ್ದಾರೆ. ನಂತರ ಪೊಲೀಸರಿಗೆ ದೂರು ನೀಡಿದ್ದಕ್ಕೆ ಕಾಮುಕರು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹೀಗಾಗಿ ನೊಂದ ಸಂತ್ರಸ್ತೆ ನಗರ ಪೊಲೀಸ್ ಆಯುಕ್ತರ ಮೊರೆ ಹೋಗಿದ್ದಾರೆ.

    ಸದ್ಯಕ್ಕೆ ನಗರ ಪೊಲೀಸ್ ಆಯುಕ್ತರು ಸಂತ್ರಸ್ತೆಯ ದೂರು ಸ್ವೀಕರಿಸಿದ್ದು, ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

  • ಪ್ರಿಯಕರನ ಮುಂದೆಯೇ ಗೋವಾ ಬೀಚ್‍ ನಲ್ಲಿ ನಡೆಯಿತು ನೀಚ ಕೃತ್ಯ!

    ಪ್ರಿಯಕರನ ಮುಂದೆಯೇ ಗೋವಾ ಬೀಚ್‍ ನಲ್ಲಿ ನಡೆಯಿತು ನೀಚ ಕೃತ್ಯ!

    ಪಣಜಿ: ಪ್ರಿಯಕರನ ಮುಂದೆಯೇ ಮೂವರು ಕಾಮುಕರು ಸೇರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ ಗೋವಾದಲ್ಲಿ ನಡೆದಿದೆ.

    ಈ ಘಟನೆ ಗುರುವಾರ ರಾತ್ರಿ ಸೆರ್ನಾಬಾಟಿಮ್ ಬೀಚ್ ನಲ್ಲಿ ನಡೆದಿದ್ದು, ಪ್ರೇಮಿಗಳು ಸುತ್ತಾಡಲೆಂದು ಗೋವಾ ಬೀಚ್ ಗೆ ಹೋಗಿದ್ದರು. ಈ ವೇಳೆ ಮೂವರು ಕಾಮುಕರು ಬಂದು ಪ್ರಿಯಕರನಿಗೆ ಥಳಿಸಿ ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಬಗ್ಗೆ ಇಬ್ಬರೂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ದೂರಿನಲ್ಲಿ ಕಾಮುಕರು ಪ್ರೇಮಿಗಳ ಫೋಟೋ ತೆಗೆದುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಅಂತ ತಿಳಿಸಿದ್ದಾರೆ. ಆದರೆ ಆರೋಪಿಗಳ ಗುರುತು ಇನ್ನು ಪತ್ತೆಯಾಗಿಲ್ಲ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಿಲ್ಲ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಅನೇಕ ಶಂಕಿತರನ್ನು ಪ್ರಶ್ನಿಸಲಾಗಿದೆ ಎಂದು ಎಸ್‍ಐ ಅರವಿಂದ್ ಗಾವಾಸ್ ತಿಳಿಸಿದ್ದಾರೆ.

  • ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಭಾಗಿ: ಸಿಬಿಐ

    ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಭಾಗಿ: ಸಿಬಿಐ

    ದೆಹಲಿ: ಉನ್ನಾವೋದ 17 ವರ್ಷದ ಬಾಲಕಿ ಮೇಲೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅತ್ಯಾಚಾರ ಎಸಗಿದ್ದಾನೆ ಎಂದು ಬಂಧನಕ್ಕೆ ಒಳಗಾದ ಸಹಾಯಕ ತಿಳಿಸಿದ್ದಾನೆ ಎಂದು ಸಿಬಿಐ ತಿಳಿಸಿದೆ.

    ಮುಂದೆ ಉದ್ಯೋಗ ನೀಡುತ್ತೇನೆ ಎಂದು ಆಶ್ವಾಸನೆ ನೀಡಿ ಕುಲದೀಪ್ ಸಿಂಗ್ ಸೆಂಗಾರ್ ಮತ್ತು ಸಂಗಡಿಗರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸಿಬಿಐ ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ.

    ಈ ಸಂಬಂಧ ಕುಲದೀಪ್ ಸಹಾಯಕನನ್ನು ಸಿಬಿಐ ವಶಕ್ಕೆ ಪಡೆದಿತ್ತು. ತೀವ್ರ ತನಿಖೆ ನಡೆಸಿದ ವೇಳೆ ಆರೋಪಿ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    2017ರ ಜೂ.4ರಂದು ಉತ್ತರಪ್ರದೇಶದ ಮಖಿ ಗ್ರಾಮದಲ್ಲಿನ ಮನೆಯೊಂದರಲ್ಲಿ ಕುಲದೀಪ್ ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ತಾನು ಬಾಗಿಲು ಕಾಯುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಶಾಸಕನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಬಾಲಕಿಯನ್ನು ಮತ್ತೆ ಜೂ.11 ರಂದು ಶುಭಾಸಿಂಗ್ ಅವಧ್ ನಾರಾಯಣ ಹಾಗೂ ಬ್ರಿಜೇಶ್ ಯಾದವ್ ಅಪಹರಿಸಿದ್ದು, ಜೂ. 19ರ ವರೆಗೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.

    ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಬಾಲಕಿ ಜೂ.20 ರಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಶಾಸಕ ಕುಲದೀಪ್ ಸಿಂಗ್ ವಿರುದ್ಧ ಎಫ್‍ಐಆರ್ ದಾಖಲು ಮಾಡಿಕೊಂಡಿರಲಿಲ್ಲ. ಅಲ್ಲದೇ, ಸ್ಥಳೀಯ ಪೊಲೀಸರು ನಡೆಸಿದ ತನಿಖೆಯ ಬಳಿಕ ಸಲ್ಲಿಸಿದ ಆರೋಪ ಪಟ್ಟಿಯಲ್ಲಿಯೂ ಕುಲದೀಪ್ ಹೆಸರಿರಲಿಲ್ಲ. ಈ ಪ್ರಕರಣ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾದ ಸರ್ಕಾರ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ನಂತರ ಸಿಬಿಐ ಶಾಸಕನ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಿತ್ತು.

    ಕುಲದೀಪ್ ಪ್ರಭಾವಿ ವ್ಯಕ್ತಿಯಾಗಿದ್ದರಿಂದ, ಬಾಲಕಿ ವೈದ್ಯಕೀಯ ತಪಾಸಣೆ ನಡೆಸುವಲ್ಲಿ ಉದ್ದೇಶಪೂರ್ವಕವಾಗಿ ತಡ ಮಾಡಲಾಗಿದೆ. ಅಲ್ಲದೇ, ಯುವತಿ ಧರಿಸಿದ್ದ ಉಡುಗೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಲ್ಲ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೂರು ಎಫ್‍ಐಆರ್ ದಾಖಲು ಮಾಡಿದೆ. ಕುಲದೀಪ್ ಹಾಗೂ ಆತನ ಸಹಚರನ ವಿರುದ್ಧ ಒಂದು ಎಫ್‍ಐಆರ್ ದಾಖಲಾಗಿದ್ದರೆ, ಸಂತ್ರಸ್ತೆಯ ಕುಟುಂಬ ಯೋಗಿ ಆದಿತ್ಯನಾಥ್ ನಿವಾಸದ ಮುಂದೆ ಪ್ರತಿಭಟನೆ ನಡೆಸುವ ವೇಳೆ ನಡೆದ ಗಲಾಟೆಯ ಸಂಬಂಧಿಸಿದಂತೆ ಸ್ಥಳೀಯರ ವಿರುದ್ಧ ಎರಡನೇ ಎಫ್‍ಐಆರ್ ದಾಖಲಾಗಿದೆ. ನ್ಯಾಯಾಂಗ ಬಂಧನದಲ್ಲಿದ್ದ ಸಂತ್ರಸ್ತೆಯ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಮೂರನೇ ಎಫ್‍ಐಆರ್ ದಾಖಲಾಗಿದೆ.

  • ಡ್ರಾಪ್ ನೆಪದಲ್ಲಿ ಚಲಿಸುತ್ತಿರುವ ಕಾರಿನಲ್ಲೇ ಅತ್ಯಾಚಾರವೆಸಗಿದ ಕ್ಲಾಸ್ ಮೇಟ್!

    ಡ್ರಾಪ್ ನೆಪದಲ್ಲಿ ಚಲಿಸುತ್ತಿರುವ ಕಾರಿನಲ್ಲೇ ಅತ್ಯಾಚಾರವೆಸಗಿದ ಕ್ಲಾಸ್ ಮೇಟ್!

    ನೊಯ್ಡಾ: ಡ್ರಾಪ್ ಮಾಡುವ ನೆಪದಲ್ಲಿ ಚಲಿಸುತ್ತಿರುವ ಕಾರಿನಲ್ಲಿಯೇ 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆಯ ಕ್ಲಾಸ್ ಮೇಟ್ ಸೇರಿ ಮೂವರು ಅತ್ಯಾಚಾರವೆಸಗಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

    ಈ ಘಟನೆ ಗ್ರೇಟರ್ ನೊಯ್ಡಾದಲ್ಲಿ ಕಳೆದ ವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ಕುರಿತು ಈಗಾಗಲೇ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದ್ವೆಯಾದ ಮೂರೇ ದಿನಕ್ಕೆ ಸ್ನೇಹಿತರ ಜೊತೆ ಸೇರಿ ಪತ್ನಿಯ ಮೇಲೆ ಗ್ಯಾಂಗ್‍ರೇಪ್

    ಕಳೆದ ಬುಧವಾರದಂದು ಶಾಲೆಯಿಂದ ಮನೆಗೆ ಹಿಂದಿರುಗುವ ಸಂದರ್ಭದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಶಾಲಾ ಬಸ್ ಮಿಸ್ ಆಗಿತ್ತು. ಈ ಸಂದರ್ಭದಲ್ಲಿ ನನ್ನ ಕ್ಲಾಸ್ ಮೇಟ್ ಸೇರಿ ಮೂವರು ಡ್ರಾಪ್ ಕೊಡುವುದಾಗಿ ಒತ್ತಡ ಹೇರಿದ್ರು. ಹೀಗಾಗಿ ನಾನು ಇದಕ್ಕೆ ಒಪ್ಪಿದೆ. ಕಾರಿನಲ್ಲಿ ಬರುತ್ತಿದ್ದ ವೇಳೆ ಅವರು ಮತ್ತು ಬರುವ ಪಾನೀಯವನ್ನು ಒತ್ತಾಯಪೂರ್ವಕವಾಗಿ ಕುಡಿಸಿದ್ದಾರೆ. ಬಳಿಕ ಕೈ-ಕಾಲು ಕಟ್ಟಿ ಹಾಕಿ, ಬಾಯಿ ಮುಚ್ಚಿಸಿ ನನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಅಂತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಇದನ್ನೂ ಓದಿ: ಪತ್ನಿಯ ಗುಪ್ತಾಂಗಕ್ಕೆ ಒದ್ದು, ಚಾಕು ಇರಿದ ಪತಿ

    ಇತ್ತ ಬಾಲಕಿ ಶಾಲೆಯಿಂದ ಮನೆಗೆ ವಾಪಸ್ಸಾಗದಿದ್ದರಿಂದ ಗಾಬರಿಗೊಂಡ ಹೆತ್ತವರು ಪೊಲೀಸರಿಗೆ ಏಪ್ರಿಲ್ 18 ರಂದು ದೂರು ನೀಡಿದ್ದರು. ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಇನ್ನೊಬ್ಬ ತಲೆಮರೆಸಿಕೊಂಡಿದ್ದಾನೆ ಅಂತ ಹಿರಿಯ ಪೊಲೀಸ್ ಅಧಿಕಾರಿ ಅವ್ನೀಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ವರನ 11 ವರ್ಷದ ಸೋದರಿಯನ್ನು ರೇಪ್ ಮಾಡಿ, ಕೊಲೆಗೈದ!

    12 ವರ್ಷ ವಯಸ್ಸಿನ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಗಲ್ಲು ಶಿಕ್ಷೆ ಹಾಗೂ ಇಂತಹ ಪ್ರಕರಣಗಳ ವಿಚಾರಣೆ ವೇಗವಾಗಿ ನಡೆಯಲು ವಿಶೇಷ ಕ್ರಮಗೊಳ್ಳಲಾಗಿದೆ. 16 ಕೆಳಗಿನ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಇದುವರೆಗೂ ವಿಧಿಸುತ್ತಿದ್ದ 10 ವರ್ಷಗಳ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದ್ದು, ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಜೀವವಾಧಿ ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ಈಗಾಗಲೇ ಒಪ್ಪಿಗೆ ಸೂಚಿಸಿದೆ.

  • 6 ಜನ ಯುವಕರಿಂದ 40 ವರ್ಷದ ಮಹಿಳೆ ಮೇಲೆ ಅತ್ಯಾಚಾರ-ರೇಪ್ ವಿಡಿಯೋವನ್ನ ವೈರಲ್ ಮಾಡಿದ್ರು

    6 ಜನ ಯುವಕರಿಂದ 40 ವರ್ಷದ ಮಹಿಳೆ ಮೇಲೆ ಅತ್ಯಾಚಾರ-ರೇಪ್ ವಿಡಿಯೋವನ್ನ ವೈರಲ್ ಮಾಡಿದ್ರು

    ಜೈಪುರ: 6 ಜನ ಯುವಕರು 40 ವರ್ಷದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ರೇಪ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ರಾಜಸ್ಥಾನ ರಾಜ್ಯದ ಬಾರಾನಾ ಜಿಲ್ಲೆಯಲ್ಲಿ ಒಂದು ತಿಂಗಳ ಹಿಂದೆ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಂತ್ರಸ್ತೆ ಮಹಿಳೆ ಬಾರಾನಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾರ್ಚ್ 5ರಂದು ದೂರು ದಾಖಲಿಸಿದ್ದಾರೆ ಅಂತಾ ಇಂದು ಠಾಣೆಯ ಅಧಿಕಾರಿ ಅನಿಸ್ ಅಹ್ಮದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಅಂದು ಆಗಿದ್ದೇನು?: ಮಹಿಳೆ ಕೋಟಾ ನಗರದ ದಾಬಾವೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಅಂದಾಜು ಒಂದು ತಿಂಗಳ ಹಿಂದೆ ಮಹಿಳೆ ಬಾರಾನಾ ಜಿಲ್ಲೆಯ ತನ್ನ ಸಂಬಂಧಿಯ ಮನೆಗೆ ಬಂದಿದ್ದಾರೆ. ಈ ವೇಳೆ ಪರಿಚಯಿರುವ ಚೇತನ್ ಮೀನಾ (21) ಎಂಬಾತ ಬೈಕಿನಲ್ಲಿ ಡ್ರಾಪ್ ನೀಡೋದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಚೇತನ್ ಕರೆದುಕೊಂಡು ಹೋಗುವ ಮೊದಲೇ ಅಲ್ಲಿ ಐವರು ಯುವಕರಿದ್ದರು ಎಂದು ಸಂತ್ರಸ್ತೆ ತಿಳಿಸಿದ್ದಾರೆ.

    ಬೆದರಿಕೆ: ಸಾಮೂಹಿಕ ಅತ್ಯಾಚಾರದ ಬಳಿಕ ಮಹಿಳೆಯನ್ನು ಆಕೆಯ ಸಂಬಂಧಿಕರ ಮನೆಗೆ ಡ್ರಾಪ್ ಮಾಡಿ ಹೋಗಿದ್ದಾರೆ. ಮತ್ತೆ ಮರುದಿನ ಮನೆಗೆ ಬಂದ ಯುವಕರು ವಿಷಯವನ್ನು ಯಾರಿಗಾದ್ರೂ ತಿಳಿಸಿದ್ರೆ ನಿಮ್ಮ ಕುಟುಂಬಸ್ಥರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಕೃತ್ಯ ಎಸಗಿದ ಬಳಿಕ ದೃಶ್ಯಗಳನ್ನು ಮೊಬೈಲ್ ನಲ್ಲಿ ಶೂಟ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ಅತ್ಯಾಚಾರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಮಹಿಳೆ ಆರು ಜನ ಯುವಕರ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಸೆಕ್ಷನ್ 376ರ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಅಂತಾ ಠಾಣೆಯ ಅಧಿಕಾರಿ ಅನಿಸ್ ಅಹ್ಮದ್ ಹೇಳಿದ್ದಾರೆ.

  • ಶಾಲೆಗೆ ಹೋಗುವಾಗ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್, ಕೊಲೆ!

    ಶಾಲೆಗೆ ಹೋಗುವಾಗ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್, ಕೊಲೆ!

    ವಿಜಯಪುರ: ಗಾಂಜಾ ನಶೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.

    ವಿಜಯಪುರದ ಮಂಜುನಾಥ ನಗರದ ಮಲ್ಲಿಕಾರ್ಜುನ್ ಸ್ಕೂಲ್ ಬಳಿ ಅಪ್ರಾಪ್ತ ಬಾಲಕಿ ಹೊರಟಾಗ ಮೂವರು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕುತ್ತಿಗೆ ಹಿಸುಕಿ ಕೊಲೆಗೈದಿದ್ದಾರೆಂಬ ಆರೋಪ ಕೇಳಿ ಬಂದಿದೆ.

    ಕೈಲಾಶ್, ಸಾಗರ್ ಮೋರೆ, ದೀಪಕ್ ಹಾಗೂ ಇನ್ನು ಇಬ್ಬರಿಂದ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಕೈಲಾಶ್ ಓರ್ವನನ್ನು ಬಿಟ್ಟು ಉಳಿದ ಇಬ್ಬರು ಅತ್ಯಾಚಾರಿಗಳು ಅಪ್ರಾಪ್ತರು ಎಂದು ತಿಳಿದು ಬಂದಿದೆ. ಸದ್ಯಕ್ಕೆ ಕೈಲಾಸ್ ಮತ್ತು ಸಾಗರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ದೂರು ದಾಖಲಾಗಿಲ್ಲ.

    ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನಲೆಯಲ್ಲಿ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಮೃತ ಬಾಲಕಿಯ ಶವವಿಟ್ಟು ಕುಟುಂಬಸ್ಥರು ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಕುಟುಂಬಸ್ಥರ ಪ್ರತಿಭಟನೆಗೆ ವಿವಿಧ ದಲಿತ ಪರ ಸಂಘಟನೆಗಳು ಸಾಥ್ ನೀಡಿದ್ದಾರೆ.

    ಪ್ರತಿಭಟನಾಕಾರರು ಕಲಬುರ್ಗಿ ಅಥಣಿ ರಸ್ತೆ ಬಂದ್ ಮಾಡಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.

  • ಯಲ್ಲಾಪುರದಲ್ಲಿ ಅಪ್ರಾಪ್ತೆಯ ಮೇಲೆ ಐವರಿಂದ ಗ್ಯಾಂಗ್‍ರೇಪ್!

    ಯಲ್ಲಾಪುರದಲ್ಲಿ ಅಪ್ರಾಪ್ತೆಯ ಮೇಲೆ ಐವರಿಂದ ಗ್ಯಾಂಗ್‍ರೇಪ್!

    ತುಮಕೂರು: ಅಪ್ರಾಪ್ತ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ತುಮಕೂರಿನ ಯಲ್ಲಾಪುರದಲ್ಲಿ ನಡೆದಿದೆ.

    ಹರೀಶ್, ಮಧು, ಕೇಶವ್, ಚಿದಾನಂದ, ಚಂದು ಅತ್ಯಾಚಾರ ಮಾಡಿದ ಆರೋಪಿಗಳು. ಬುಧವಾರ ರಾತ್ರಿ ಯಲ್ಲಾಪುರದ ಸ್ಥಗಿತಗೊಂಡ ಫ್ಯಾಕ್ಟರಿ ಒಂದರಲ್ಲಿ ಅತ್ಯಾಚಾರ ನಡೆಸಿದ್ದಾರೆ.

    ಮಹಿಳಾ ಪೊಲೀಸರು ಆರೋಪಿ ಹರೀಶ್ ಹಾಗೂ ಚಿದಾನಂದನನ್ನು ಬಂಧಿಸಿದ್ದು, ಉಳಿದ ಮೂವರು ಆರೋಪಿಗಾಗಿ ಶೋಧ ನಡೆಸಿದ್ದಾರೆ. ಸಂತ್ರಸ್ಥ ಬಾಲಕಿ ಆರೋಪಿ ಹರೀಶನ ಸ್ನೇಹಿತೆಯಾಗಿದ್ದು, ಪುಸಲಾಯಿಸಿಕೊಂಡು ಸಿನಿಮಾಕ್ಕೆಂದು ಆಟೋದಲ್ಲಿ ಕರೆದುಕೊಂಡು ಬಂದಿದ್ದಾನೆ. ಬಳಿಕ ಇನ್ನುಳಿದ ನಾಲ್ವರು ಸ್ನೇಹಿತರೊಂದಿಗೆ ಪಾಳು ಫ್ಯಾಕ್ಟರಿಯಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ.

  • ಬೆಂಗ್ಳೂರಿನಲ್ಲಿ ನೇಪಾಳ ಮೂಲದ ಯುವತಿ ಮೇಲೆ 6 ಮಂದಿಯಿಂದ ಗ್ಯಾಂಗ್ ರೇಪ್

    ಬೆಂಗ್ಳೂರಿನಲ್ಲಿ ನೇಪಾಳ ಮೂಲದ ಯುವತಿ ಮೇಲೆ 6 ಮಂದಿಯಿಂದ ಗ್ಯಾಂಗ್ ರೇಪ್

    ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ಗ್ಯಾಂಗ್ ರೇಪ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ಮೂರು ದಿನಗಳ ಹಿಂದೆ ನೇಪಾಳ ಮೂಲದ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಚಿತ್ರಹಿಂಸೆ ನೀಡಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

    ಹೀಗೆ ಪಾಳುಬಿದ್ದಿರುವ ಬಂಗಲೆಗೆ ನೇಪಾಳ ಮೂಲದ ಯುವತಿಯನ್ನು ಅಪಹರಿಸಿಕೊಂಡು ಬಂದು ಅತ್ಯಾಚಾರ ನಡೆಸಿರುವ ಘಟನೆ ನಡೆದಿರೋದು ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅವಡದೇನಹಳ್ಳಿಯಲ್ಲಿ. ಕಳೆದ ಮೂರು ದಿನಗಳ ಹಿಂದೆ ಆರು ಯುವಕರ ಗುಂಪೊಂದು ನೇಪಾಳಿ ಯುವತಿಯನ್ನು ಇಲ್ಲಿಗೆ ಕರೆ ತಂದು ಅತ್ಯಾಚಾರವೆಸಗಿ ಕೊನೆಯಲ್ಲಿ ಯುವತಿ ಕಾಲಿನ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ.

    ಶನಿವಾರ ಮುಂಜಾನೆ ಯುವತಿ ನೋವಿನಿಂದ ಕಿರುಚಿಕೊಂಡು ರಸ್ತೆಗೆ ಬಂದಾಗ ಯುವತಿಯನ್ನು ಕಂಡ ಎನ್‍ಜಿಓ ಒಂದರ ಕಾರ್ಯಕರ್ತರಾದ ಪಾರಿಜಾತ ಮತ್ತು ಶಂಕರ್ ಕೂಡಲೇ 108 ಅಂಬ್ಯುಲೆನ್ಸ್ ಮುಖಾಂತರ ನಗರದ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಯುವತಿ ಈಗ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇದಕ್ಕೂ ಮುನ್ನ ಯುವತಿ ಅರೆ ಪ್ರಜ್ಞಾ ಸ್ಥಿತಿಯಲ್ಲಿದ್ದಳೆಂದು ತಿಳಿದು ಬಂದಿದೆ.

    ವಿಷಯ ತಿಳಿದ ಬೆಂಗಳೂರು ಗ್ರಾಮಾಂತರ ಎಸ್.ಪಿ ಅಮಿತ್ ಸಿಂಗ್ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಯುವತಿಯಿಂದ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್.ಪಿ ಅಮಿತ್ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾಮುಕರಿಗಾಗಿ ಬಲೆ ಬೀಸಿದ್ದಾರೆ.

                                                                ಶಂಕರ್
                                                                                    ಪಾರಿಜಾತ
  • ಸಿಹಿತಿಂಡಿ ಆಸೆ ತೋರಿಸಿ 5ನೇ ಕ್ಲಾಸ್ ಬಾಲಕಿ ಮೇಲೆ ಗ್ಯಾಂಗ್‍ರೇಪ್!

    ಸಿಹಿತಿಂಡಿ ಆಸೆ ತೋರಿಸಿ 5ನೇ ಕ್ಲಾಸ್ ಬಾಲಕಿ ಮೇಲೆ ಗ್ಯಾಂಗ್‍ರೇಪ್!

    ಭೋಪಾಲ್: 10 ವರ್ಷದ ಬಾಲಕಿಯ ಮೇಲೆ 65 ವರ್ಷದ ಸೆಕ್ಯೂರಿಟಿ ಗಾರ್ಡ್ ಮತ್ತು ಇತರೆ ಇಬ್ಬರು ಸೇರಿ ಅತ್ಯಾಚಾರ ಎಸಗಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದ್ದು, ಈಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಸಂತ್ರಸ್ತೆ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಯ ಮೇಲೆ ಮೂರು ತಿಂಗಳಲ್ಲಿ 2-3 ಬಾರಿ ಅತ್ಯಾಚಾರ ನೆಡೆದಿದೆ. ಕೊನೆಯ ಬಾರಿ ನವೆಂಬರ್ 12 ರಂದು ಅತ್ಯಾಚಾರ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಜೆಹಾಂಗಿರಬಾದ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರೀತಂ ಸಿಂಗ್ ಥಾಕೂರ್ ಅವರು ಹೇಳಿದರು.

    ಸೆಕ್ಯೂರಿಟಿ ಗಾರ್ಡ್ ನನ್ಹು ಲಾಲ್, ಪಾನ್ ಅಂಗಡಿ ಇಟ್ಟುಕೊಂಡಿರೋ ಗೋಕುಲ್ ಪನ್ವಾಲಾ (45) ಮತ್ತು ಚಾಲಕ ಜ್ಞಾನೇಂದ್ರ ಪಂಡಿತ್ (36) ಬಂಧಿತ ಆರೋಪಿಗಳು. ಇವರೆಲ್ಲರೂ ಸುಮನ್ ಪಾಂಡೆ (50) ಎಂಬುವನ ಮನೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸುಮನ್ ಪಾಂಡೆಯನ್ನೂ ಕೂಡ ಪೊಲೀಸರು ಬಂಧಿಸಿದ್ದಾರೆ.

    ಬಾಲಕಿ ಕಳೆದ ಕೆಲವು ದಿನಗಳಿಂದ ಖಿನ್ನತೆಗೊಳಗಾಗಿ ಮೌನವಾಗಿ ಇರುತ್ತಿದ್ದಳು. ಇದನ್ನು ಗಮನಿಸಿದ ತಾಯಿ ಮಗಳನ್ನು ವಿಚಾರಿಸಿದ್ದಾರೆ. ಬಾಲಕಿ ಮೊದಲಿಗೆ ಯಾವುದೇ ವಿಚಾರವನ್ನು ತಿಳಿಸಿರಲಿಲ್ಲ. ಆದ್ರೆ ನಂತರ ನಡೆದ ಎಲ್ಲಾ ಸಂಗತಿಯನ್ನು ವಿವರಿಸಿದ್ದಾಳೆ. ನಂತರ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಆರೋಪಿಗಳು ಸಂತ್ರಸ್ತೆ ಇದ್ದ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಪಾಂಡೇ ಬಾಲಕಿಗೆ ಸಿಹಿತಿಂಡಿಯ ಆಸೆಯನ್ನು ತೋರಿಸಿ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ. ವಿಷಯವನ್ನ ಯಾರಿಗಾದ್ರೂ ಹೇಳಿದ್ರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿಗಳು ಬಾಲಕಿಗೆ ಬೆದರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 367 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಥಾಕೂರ್ ಅವರು ತಿಳಿಸಿದರು.