Tag: gang rape

  • ಶಾಲೆಯಿಂದ ಮರಳುವಾಗ 5ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್

    ಶಾಲೆಯಿಂದ ಮರಳುವಾಗ 5ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್

    ಅಗರ್ತಲಾ: ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ 5ನೇ ತರಗತಿ ಬಾಲಕಿ ಮೇಲೆ ಕಾಮುಕರ ಗ್ಯಾಂಗ್‌ವೊಂದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತ್ರಿಪುರಾದ ದಕ್ಷಿಣಭಾಗದ (Tripura South District) ಜಿಲ್ಲೆಯೊಂದರಲ್ಲಿ ನಡೆದಿದೆ.

    ಇತ್ತೀಚಿಗಷ್ಟೇ ತ್ರಿಪುರಾದ ಉತ್ತರ ಭಾಗದ ಜಿಲ್ಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ (Gang Rape) ನಡೆದ ಪ್ರಕರಣ ಬೆಳಿಕಿಗೆ ಬಂದಿತ್ತು. ಇದಾದ ಮಾರನೇ ದಿನವೇ ಘಟನೆ ನಡೆದಿದೆ.ಇದನ್ನೂ ಓದಿ: 7 ತಿಂಗಳ ಹಿಂದಷ್ಟೇ ನಾನು ಬ್ರೇಕಪ್ ಮಾಡಿಕೊಂಡೆ: ಮೃಣಾಲ್ ಠಾಕೂರ್

    ಶಾಲೆಯಿಂದ ಮಗಳು ಹಿಂದಿರುಗದೇ ಇದ್ದಾಗ ಸಂತ್ರಸ್ತ ಬಾಲಕಿಯ ಪೋಷಕರು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಿದ್ದಾರೆ. ಎಷ್ಟೇ ಹುಡುಕಿದರೂ ಸಿಗದೇ ಇದ್ದಾಗ ತ್ರಿಪುರಾದ ಬೆಲೊನಿಯಾ ಮಹಿಳಾ ಪೊಲೀಸ್ (Belonia Women Police Station) ಠಾಣೆಯಲ್ಲಿ ದೂರು ನೀಡಿದ್ದಾರೆ.

    ಬೆಲೊನಿಯಾ ಠಾಣೆಯ ಓರ್ವ ಅಧಿಕಾರಿ ಮಾತನಾಡಿ, ಶಾಲೆಗೆ ಹೋದ ಮಗಳು ಮನೆಗೆ ಬರಲಿಲ್ಲ ಎಂಬ ದೂರಿನ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಿದಾಗ ಶನಿವಾರ ಸಂಜೆ ಸಂತ್ರಸ್ತ ಬಾಲಕಿಯ ಮನೆ ಹತ್ತಿರದಲ್ಲಿ ಆಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಾಲಕಿಯ ಪರಿಚಯಸ್ಥನೊಬ್ಬ ಮನೆ ಬಳಿ ಬಿಟ್ಟು ಹೋಗಿರುವುದು ನಂತರ ಗೊತ್ತಾಗಿದೆ. ತನಿಖೆ ಮಾಡಿದಾಗ ಆತ ಅದೇ ಬಡಾವಣೆಯ 22 ವರ್ಷದ ಹುಡುಗ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

    ಇಲ್ಲಿಯವರೆಗೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ ಆದರೆ ಆರೋಪಿಯ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಪೋಕ್ಸೋ ಕಾಯ್ದೆ ಹಾಗೂ ಬೇರೆ ಬೇರೆ ಸೆಕ್ಷನ್‌ಗಳಡಿಯಲ್ಲಿ ಆರೋಪಿಸಲಾಗುವುದು ಎಂದು ತಿಳಿಸಿದ್ದಾರೆ.

    ಶುಕ್ರವಾರ ತ್ರಿಪುರಾದ ಉತ್ತರ ಭಾಗದ ಜಿಲ್ಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಆರೋಪ ಕೇಳಿಬಂದಿತ್ತು. ಅದಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗಿದೆ. ಸಂಜೆ ಹೊತ್ತಲ್ಲಿ ಅಂಗಡಿಗೆ ಎಂದು ಬಂದ ಬಾಲಕಿಯನ್ನು ಹತ್ತಿರದ ಕಾಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ ಬಾಲಕಿಯನ್ನು ಕಂಡ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು, ಪೋಷಕರಿಗೆ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಮುಂದಿನ 24 ಗಂಟೆಯಲ್ಲಿ ದೆಹಲಿ ಗದ್ದುಗೆಗೆ ನೂತನ ಸಾರಥಿ – ಸಿಎಂ ರೇಸ್‌ನಲ್ಲಿರುವ ಟಾಪ್‌ -5 ಕಲಿಗಳು ಯಾರು?

    ಕಳೆದ ತಿಂಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆ ತ್ರಿಪುರಾ ದಕ್ಷಿಣ ಭಾಗದ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

  • ಲಕ್ನೋದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಅರೆಸ್ಟ್‌

    ಲಕ್ನೋದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಅರೆಸ್ಟ್‌

    ಲಕ್ನೋ: ಅಪ್ರಾಪ್ತ ದಲಿತ ಬಾಲಕಿಯ (Dalit Girl) ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿ (Gang Rape) ಬಳಿಕ ಆಕೆಯ ತಲೆಗೆ ಇಟ್ಟಿಗೆಯಿಂದ ಹೊಡೆದಿರುವ ಘಟನೆ ಲಕ್ನೋದ (Lucknow) ಬಕ್ಷಿ ಕಾ ತಲಾಬ್ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಆಹಾರ ಮಳಿಗೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯ ನಂತರ ಬಾಲಕಿ ತನ್ನ ಮನೆಗೆ ಬಂದು ಕುಟುಂಬದ ಸದಸ್ಯರಿಗೆ ವಿಷಯ ತಿಳಿಸಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ದೂರಿನ ಬೆನ್ನಲ್ಲೇ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್ – ಬಿಎಸ್‍ವೈಗೆ ತಾತ್ಕಾಲಿಕ ರಿಲೀಫ್

    ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಮೃತ ವೈದ್ಯೆ ಕುಟುಂಬಕ್ಕೆ ಹಣ ನೀಡಲು ಪ್ರಯತ್ನಿಸಿಲ್ಲ, ಇದು ಹಸಿ ಸುಳ್ಳು: ಮಮತಾ ಬ್ಯಾನರ್ಜಿ ತಿರುಗೇಟು

    ಘಟನೆಯ ಕುರಿತು ಮಾತನಾಡಿದ ಲಕ್ನೋ ಉತ್ತರದ ಉಪ ಪೊಲೀಸ್ ಆಯುಕ್ತ ಅಭಿಜಿತ್ ಆರ್ ಶಂಕರ್, ಬಾಲಕಿಯ ದೂರಿನ ಆಧಾರದ ಮೇಲೆ, ಬಕ್ಷಿ ಕಾ ತಾಲಾಬ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್, ಪೋಕ್ಸೊ, ಎಸ್‌ಸಿ/ಎಸ್ಟಿ ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾಗಿಂತ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚು – ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭಾಷಣ

  • Karkala | ಕಿಡ್ನಾಪ್‌ಗೈದು ಮದ್ಯದಲ್ಲಿ ಅಮಲು ಪದಾರ್ಥ ಸೇರಿಸಿ ರೇಪ್‌ –  ಉಡುಪಿ ಎಸ್‌ಪಿ ಹೇಳಿದ್ದೇನು?

    Karkala | ಕಿಡ್ನಾಪ್‌ಗೈದು ಮದ್ಯದಲ್ಲಿ ಅಮಲು ಪದಾರ್ಥ ಸೇರಿಸಿ ರೇಪ್‌ – ಉಡುಪಿ ಎಸ್‌ಪಿ ಹೇಳಿದ್ದೇನು?

    ಉಡುಪಿ: ಕಾರ್ಕಳ ಅತ್ಯಾಚಾರ (Karkala Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಉಡುಪಿ (Udupi) ಎಸ್‌ಪಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.

    ವಿಡಿಯೋದಲ್ಲಿ ಹೇಳಿಕೆ ಬಿಡುಗಡೆ ಮಾಡಿದ ಅವರು, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರಗೈದ ದೂರು ಬಂದಿದೆ ಎಂದು ತಿಳಿಸಿದ್ದಾರೆ.

    ಎಸ್‌ಪಿ ಹೇಳಿದ್ದೇನು?
    ಸಂತ್ರಸ್ತೆ ಮತ್ತು ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್‌ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ. ಇದನ್ನೂ ಓದಿ: Karkala | ಮದ್ಯದಲ್ಲಿ ಮಾದಕ ವಸ್ತು ನೀಡಿ ಅತ್ಯಾಚಾರ – ಗ್ಯಾಂಗ್‌ರೇಪ್‌ ಶಂಕೆ?

    ಬಂಧಿತ ಆರೋಪಿ ಆಲ್ತಾಫ್‌
    ಬಂಧಿತ ಆರೋಪಿ ಆಲ್ತಾಫ್‌

    ಈ ನಡುವೆ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸವೇರಾ ರಿಚರ್ಡ್‌ ಕ್ವಾಡ್ರಸ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ.

    ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಹಿಂದೂ ಸಂಘಟನೆಗಳು ಇದು ಕೇವಲ ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ.

  • Karkala | ಮದ್ಯದಲ್ಲಿ ಮಾದಕ ವಸ್ತು ನೀಡಿ ಅತ್ಯಾಚಾರ – ಗ್ಯಾಂಗ್‌ರೇಪ್‌ ಶಂಕೆ?

    Karkala | ಮದ್ಯದಲ್ಲಿ ಮಾದಕ ವಸ್ತು ನೀಡಿ ಅತ್ಯಾಚಾರ – ಗ್ಯಾಂಗ್‌ರೇಪ್‌ ಶಂಕೆ?

    ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ (Karkala) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ (Rape) ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ.

    ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ನಂತರ ಇಬ್ಬರು ಸ್ನೇಹಿತರ ಕರೆಸಿ ಬಿಯರ್ ಬಾಟಲಿ ತರಿಸಿದ್ದ. ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

    ಈ ವಿಚಾರ ತಿಳಿಯುತ್ತಿದ್ದಂತೆ ಕಾರ್ಕಳ ಠಾಣೆಯ ಸಮೀಪ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೋಷಕರ ಹೇಳಿಕೆಯಂತೆ ಅತ್ಯಾಚಾರ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಈಗ ಮುಂದಾಗಿದ್ದಾರೆ.

  • ಸೋಶಿಯಲ್ ‌ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ

    ಸೋಶಿಯಲ್ ‌ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ

    – ಸ್ಪೇನ್‌ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; ಭಾರತದ ವಿರುದ್ಧ ಯುಎಸ್‌ ಪತ್ರಕರ್ತ ಆಕ್ಷೇಪಾರ್ಹ ಹೇಳಿಕೆ

    ನವದೆಹಲಿ: ಸ್ಪೇನ್‌ ಮೂಲದ ಮಹಿಳೆಯ (Spanish Woman) ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ ಘಟನೆ ಜಾರ್ಖಂಡ್‌ನಲ್ಲಿ (Jharkhand) ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಯುಎಸ್‌ ಮೂಲದ ಪತ್ರಕರ್ತರೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವ ಸಂದೇಶಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋಶಿಯಲ್‌ ಮೀಡಿಯಾಗಳಲ್ಲಿ ಬರೆದು ದೇಶದ ಮಾನ ಕಳೆಯಬೇಡಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಯುಎಸ್‌ ಮೂಲದ ಪತ್ರಕರ್ತ ಡೇವಿಡ್ ಜೋಸೆಫ್ ವೊಲೊಡ್ಜ್ಕೊ ಅವರು, ಹಲವು ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದೇನೆ. ಇಲ್ಲಿ ಕಂಡ ಲೈಂಗಿಕ ಆಕ್ರಮಣದ ಮಟ್ಟವು ಎಲ್ಲಿಯೂ ಕಂಡಿರಲಿಲ್ಲ ಎಂದು ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಒತ್ತುವರಿ ತೆರವು – ಮದ್ಯದ ಉದ್ಯಮಿಯ 400 ಕೋಟಿ ರೂ. ಮೌಲ್ಯದ ಫಾರ್ಮ್‌ಹೌಸ್‌ ಧ್ವಂಸ

    ಈ ಹಿಂದೆ ನಾನು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಬ್ರಿಟಿಷ್‌ ಮಹಿಳೆಯೊಬ್ಬರು ತನ್ನ ಬಂಕ್‌ನಲ್ಲಿ (ಕಂಪಾರ್ಟ್ಮೆಂಟ್‌) ಮಲಗಲು ಅವಕಾಶ ಮಾಡಿಕೊಡುವಂತೆ ಕೇಳಿಕೊಂಡಿದ್ದಳು. ಏಕೆಂದರೆ ಹಾಲ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಆಕೆಯ ಕಾಲುಗಳನ್ನು ನೆಕ್ಕುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ, ಇದರಿಂದ ಆಕೆ ಅಸುರಕ್ಷತೆಗೆ ಒಳಗಾಗಿದ್ದಳು. ಮತ್ತೊಮ್ಮೆ ಮಹಿಳಾ ಸ್ನೇಹಿತೆಯೊಬ್ಬರಿಗೆ ಪರಿಚಯವಾಗಿದ್ದ ವ್ಯಕ್ತಿ ಆಕೆ ಕೈಕುಲುಕಲು ಮುಂದಾದಾಗ ಆಕೆಯ ಸ್ತನಗಳನ್ನ ಮುಟ್ಟಿ ಅಶ್ಲೀಲ ಕೃತ್ಯ ಎಸಗಿದ್ದ. ನಾನು ಭಾರತವನ್ನು ಸದಾ ಪ್ರೀತಿಸುತ್ತೇನೆ, ಪ್ರಪಂಚದ ನೆಚ್ಚಿನ ಸ್ಥಳಗಳಲ್ಲಿ ಭಾರತವೂ ನನಗೆ ಒಂದಾಗಿದೆ. ಆದ್ರೆ ಅಲ್ಲಿಗೆ ಮಹಿಳೆಯರು ಒಬ್ಬಂಟಿಯಾಗಿ ಪ್ರಯಾಣಿಸುತ್ತೇನೆ ಅನ್ನೋರಿಗೆ ಮಾತ್ರ ಸಲಹೆ ನೀಡಲು ಬಯಸುತ್ತೇನೆ. ಇದು ಭಾರತೀಯ ಸಮಾಜದಲ್ಲಿ ಹೆಚ್ಚು ಗಮನ ಹರಿಸಬೇಕಾದ ನಿಜವಾದ ಸಮಸ್ಯೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, ಡೇವಿಡ್ ಜೋಸೆಫ್ ವೊಲೊಡ್ಜ್ಕೊ ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವ ಘಟನೆಗಳ ಬಗ್ಗೆ ಎಂದಾದರೂ ಪೊಲೀಸರಿಗೆ ಮಾಹಿತಿ ನೀಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಸೋಶಿಯಲ್‌ ಮೀಡಿಯಾಗಳಲ್ಲಿ ಬರೆದು, ದೇಶದ ಮಾನ ಕಳೆಯ ಬೇಡಿ, ಸೋಶಿಯಲ್‌ ಮೀಡಿಯಾದಲ್ಲಿ ಬರೆದು ಇಡೀ ದೇಶವನ್ನು ದೂಷಿಸುವುದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಸ್ಮೃತಿ ಇರಾನಿ – ಬಿಜೆಪಿ ಮೊದಲ ಪಟ್ಟಿಯಲ್ಲಿರೋ ಪ್ರಮುಖರು ಯಾರ‍್ಯಾರು?

    ಏನಿದು ಘಟನೆ?
    ಕಳೆದ ಶುಕ್ರವಾರ ರಾತ್ರಿ ಜಾರ್ಖಂಡ್‌ ರಾಜಧಾನಿ ರಾಂಚಿಯಿಂದ 300 ಕಿ.ಮೀ ದೂರದಲ್ಲಿರುವ ಡುಮ್ಕಾದಲ್ಲಿ (Dumka) ಸ್ಪೇನ್‌ ಮೂಲದ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಮಹಿಳೆ ಇನ್‌ಸ್ಟಾಗ್ರಾಮ್‌ ಈ ಸಂಬಂಧ ಭಯಾನಕ ಅನುಭವ ವಿವರಿಸಿದ್ದಾಳೆ. 7 ಪುರುಷರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆರಂಭದಲ್ಲಿ ಹೊಡೆದು ಬಡಿದು ನಮ್ಮ ವಸ್ತುಗಳನ್ನು ದರೋಡೆ ಮಾಡಿದರು. ನಂತರ ನನ್ನ ಮೇಲೆ ಅತ್ಯಾಚಾರ ಎಸಗಿದರು ಎಂದು ಮಹಿಳೆ ಹೇಳಿದ್ದಾಳೆ. ಬಾಂಗ್ಲಾದೇಶದಿಂದ ಎರಡು ಬೈಕ್‌ಗಳಲ್ಲಿ ಆಗಮಿಸಿದ ದಂಪತಿ ಬಿಹಾರದ ಮೂಲದ ನೇಪಾಳಕ್ಕೆ ಹೋಗಲು ಮುಂದಾಗಿದ್ದರು. ಡುಮ್ಕಾದಲ್ಲಿ ಹೊರ ಭಾಗದಲ್ಲಿ ತಾತ್ಕಾಲಿಕ ಟೆಂಟ್‌ನಲ್ಲಿ ತಂಗಿದ್ದಾಗ 7 ಮಂದಿ ಆಗಮಿಸಿ ದರೋಡೆ ಮಾಡಿ ಥಳಿಸಿದ್ದಾರೆ.

    ಬೆಳಕಿಗೆ ಬಂದಿದ್ದು ಹೇಗೆ?
    ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ರಸ್ತೆ ಬದಿಯಲ್ಲಿ ಇಬ್ಬರು ತಿರುಗಾಡುತ್ತಿರುವುದು ಪೊಲೀಸರ ಗಸ್ತು ತಂಡ ಗಮನಿಸಿದೆ. ವಿದೇಶಿಯರು ಯಾವುದೋ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಭಾವಿಸಿ ಅವರೊಂದಿಗೆ ಮಾತನಾಡಲು ಮುಂದಾಗಿದ್ದಾರೆ. ಇಬ್ಬರೂ ಸ್ಪ್ಯಾನಿಷ್ ಭಾಷೆ ಮಾತನಾಡುತ್ತಿದ್ದರಿಂದ ಪೊಲೀಸರಿಗೆ ಅವರು ಏನು ಹೇಳುತ್ತಿದ್ದಾರೆಂದು ಅರ್ಥವಾಗಲಿಲ್ಲ. ನಂತರ ಇವರಿಗೆ ಸ್ವಲ್ಪ ಚಿಕಿತ್ಸೆ ಅಗತ್ಯವಿದೆ ಎಂದು ಭಾವಿಸಿ ಪೊಲೀಸರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದರು. ಈ ವೇಳೆ ಆಸ್ಪತ್ರೆಯ ವೈದ್ಯರ ಜೊತೆ ಸ್ಪ್ಯಾನಿಷ್ ದಂಪತಿ ತಮಗೆ ಆದ ಅನುಭವವನ್ನು ತಿಳಿಸಿದ ಬಳಿಕ ಕೃತ್ಯ ಬೆಳಕಿಗೆ ಬಂದಿದೆ.

  • ಪತಿ ಇರುವಾಗಲೇ ಸ್ಪೇನ್‌ ಮಹಿಳೆಯ ಮೇಲೆ ಜಾರ್ಖಂಡ್‌ನಲ್ಲಿ 7 ಮಂದಿಯಿಂದ ಗ್ಯಾಂಗ್‌ರೇಪ್‌

    ಪತಿ ಇರುವಾಗಲೇ ಸ್ಪೇನ್‌ ಮಹಿಳೆಯ ಮೇಲೆ ಜಾರ್ಖಂಡ್‌ನಲ್ಲಿ 7 ಮಂದಿಯಿಂದ ಗ್ಯಾಂಗ್‌ರೇಪ್‌

    – ಮೂವರು ಆರೋಪಿಗಳು ಅರೆಸ್ಟ್‌
    – ಇನ್‌ಸ್ಟಾದಲ್ಲಿ ಭಯಾನಕ ಅನುಭವ ಹಂಚಿಕೊಂಡ ಮಹಿಳೆ

    ನವದೆಹಲಿ: ಸ್ಪೇನ್‌ ಮೂಲದ ಮಹಿಳೆಯ (Spanish Woman) ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ ಘಟನೆ ಜಾರ್ಖಂಡ್‌ನಲ್ಲಿ (Jharkhand) ನಡೆದಿದೆ.

    ಶುಕ್ರವಾರ ರಾತ್ರಿ ಜಾರ್ಖಂಡ್‌ ರಾಜಧಾನಿ ರಾಂಚಿಯಿಂದ 300 ಕಿ.ಮೀ ದೂರದಲ್ಲಿರುವ ಡುಮ್ಕಾದಲ್ಲಿ (Dumka) ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ.

    ಮಹಿಳೆ ಇನ್‌ಸ್ಟ್ರಾಗಮ್‌ ಈ ಸಂಬಂಧ ಭಯಾನಕ ಅನುಭವವನ್ನು ವಿವರಿಸಿದ್ದಾಳೆ. ಏಳು ಪುರುಷರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆರಂಭದಲ್ಲಿ ಹೊಡೆದು ಬಡಿದು ನಮ್ಮ ವಸ್ತುಗಳನ್ನು ದರೋಡೆ ಮಾಡಿದರು. ನಂತರ ನನ್ನ ಮೇಲೆ ಅತ್ಯಾಚಾರ ಎಸಗಿದರು ಎಂದು ಮಹಿಳೆ ಹೇಳಿದ್ದಾಳೆ. ಇದನ್ನೂ ಓದಿ:ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಆರೋಪಿಯ ಸುಳಿವು ಸಿಕ್ಕಿದೆ – ಪರಮೇಶ್ವರ್ ಸ್ಫೋಟಕ ಮಾಹಿತಿ

    ಬಾಂಗ್ಲಾದೇಶದಿಂದ ಎರಡು ಬೈಕ್‌ಗಳಲ್ಲಿ ಆಗಮಿಸಿದ ದಂಪತಿ ಬಿಹಾರದ ಮೂಲದ ನೇಪಾಳಕ್ಕೆ ಹೋಗಲು ಮುಂದಾಗಿದ್ದರು. ಡುಮ್ಕಾದಲ್ಲಿ ಹೊರ ಭಾಗದಲ್ಲಿ ತಾತ್ಕಾಲಿಕ ಟೆಂಟ್‌ನಲ್ಲಿ ತಂಗಿದ್ದಾಗ 7 ಮಂದಿ ಆಗಮಿಸಿ ದರೋಡೆ ಮಾಡಿ ಥಳಿಸಿದ್ದಾರೆ.

    ಬೆಳಕಿಗೆ ಬಂದಿದ್ದು ಹೇಗೆ?
    ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ರಸ್ತೆ ಬದಿಯಲ್ಲಿ ಇಬ್ಬರು ತಿರುಗಾಡುತ್ತಿರುವುದು ಪೊಲೀಸರ ಗಸ್ತು ತಂಡ ಗಮನಿಸಿದೆ. ವಿದೇಶಿಯರು ಯಾವುದೋ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಭಾವಿಸಿ ಅವರೊಂದಿಗೆ ಮಾತನಾಡಲು ಮುಂದಾಗಿದ್ದಾರೆ. ಇಬ್ಬರೂ ಸ್ಪ್ಯಾನಿಷ್ ಭಾಷೆ ಮಾತನಾಡುತ್ತಿದ್ದರಿಂದ ಪೊಲೀಸರಿಗೆ ಅವರು ಏನು ಹೇಳುತ್ತಿದ್ದಾರೆಂದು ಅರ್ಥವಾಗಲಿಲ್ಲ. ನಂತರ ಇವರಿಗೆ ಸ್ವಲ್ಪ ಚಿಕಿತ್ಸೆ ಅಗತ್ಯವಿದೆ ಎಂದು ಭಾವಿಸಿ ಪೊಲೀಸರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದರು. ಈ ವೇಳೆ ಆಸ್ಪತ್ರೆಯ ವೈದ್ಯರ ಜೊತೆ ಸ್ಪ್ಯಾನಿಷ್ ದಂಪತಿ ತಮಗೆ ಆದ ಅನುಭವವನ್ನು ತಿಳಿಸಿದ ಬಳಿಕ ಕೃತ್ಯ ಬೆಳಕಿಗೆ ಬಂದಿದೆ.

    ವಿಚಾರ ಬೆಳಕಿಗೆ ಬರುತ್ತಿದ್ದಂತೆ ತನಿಖೆಗೆ ಇಳಿದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯ ವೇಳೆ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಮೂವರು ಒಪ್ಪಿಕೊಂಡಿದ್ದಾರೆ. ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಕೃತ್ಯ – ತಾಯಿಯಿಂದಲೇ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ

     

  • ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ; ಎರಡು ಸ್ಥಳದಲ್ಲಿ ಸಾಮೂಹಿಕವಾಗಿ ರೇಪ್ ಮಾಡಿದ್ದಾರೆ: ಸಂತ್ರಸ್ತೆ ಸಂಬಂಧಿ

    ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ; ಎರಡು ಸ್ಥಳದಲ್ಲಿ ಸಾಮೂಹಿಕವಾಗಿ ರೇಪ್ ಮಾಡಿದ್ದಾರೆ: ಸಂತ್ರಸ್ತೆ ಸಂಬಂಧಿ

    ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ (Hanagal Gang Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡಿದ್ದಾರೆ. ಎರಡು ಸ್ಥಳದಲ್ಲಿ ಸಾಮೂಹಿಕವಾಗಿ ರೇಪ್ ಮಾಡಿದ್ದಾರೆ ಎಂದು ಸಂತ್ರಸ್ತೆ ಸಂಬಂಧಿ ಸೈಯದ್ ಬಸೀರ್ ಹೇಳಿಕೆ ನೀಡಿದ್ದಾರೆ.

    ಪ್ರಕರಣ ಸಂಬಂಧ ಸಂತ್ರಸ್ತೆ ಕುಟುಂಬದರು ಸಿಎಂಗೆ ಮನವಿ ಸಲ್ಲಿಸಲು ಹಾವೇರಿಯ (Haveri) ನರಸೀಪುರದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂತ್ರಸ್ತೆ ಸಂಬಂಧಿ ಬಸೀರ್, ಮೊದಲ ದಿನ ಅತ್ಯಾಚಾರ ಬಗ್ಗೆ ಹೇಳಿಕೆ ನೀಡದಂತೆ ಒತ್ತಡ ಬಂದಿತ್ತು. ಪ್ರಕರಣದ ಬಗ್ಗೆ ಸರಿಯಾದ ತನಿಖೆ ಮಾಡಬೇಕು. ಸಂತ್ರಸ್ತೆಗೆ ಸರ್ಕಾರಿ ಉದ್ಯೋಗ ನೀಡಬೇಕು, ಪರಿಹಾರ ಕೊಡಬೇಕು. ಸಂತ್ರಸ್ತೆ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಸಂತ್ರಸ್ತೆಗೆ ಚಿಕಿತ್ಸೆ ಕೊಡಿಸಬೇಕು. ಬೆದರಿಕೆ ಹಾಕಿದರೂ ನಾವು ಅಂಜುವುದಿಲ್ಲ ಎಂದರು. ಇದನ್ನೂ ಓದಿ: ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ: ಕಾಂಗ್ರೆಸ್ ಕಿಡಿ

    ಈ ಕುರಿತು ರಹೀಮಾ ಪ್ರತಿಕ್ರಿಯಿಸಿದ್ದು, ಸಂತ್ರಸ್ತೆ ನನಗೆ ಸಹೋದರಿ ಆಗಬೇಕು. ಅವರಿಗೆ ಬಹಳ ತೊಂದರೆ ಆಗಿದೆ. ನಮ್ಮ ಸಹೋದರಿಗೆ ಯಾರೂ ಭೇಟಿ ಆಗಲಿಲ್ಲ, ಏನು ಹೇಳಲೂ ಇಲ್ಲ. ನಮಗೆ ಪರಿಹಾರ ನೀಡಬೇಕು. ಅವರಿಗೆ ಮತ್ತೆ ಈಗ ಹುಷಾರಿಲ್ಲ, ಚಿಕಿತ್ಸೆ ನೀಡಬೇಕಿದೆ. ಪೋಲೀಸರು ಏಕಾಏಕಿ ಬಂದು ಮನೆಗೆ ಕರೆದುಕೊಂಡು ಬಿಟ್ಟು ಹೋಗಿದ್ದಾರೆ. ಪೊಲೀಸರು ಏನು ಹೇಳಲಿಲ್ಲ. ಬಂದು ಮನೆಗೆ ಬಿಟ್ಟು ಹೋದರು ಅಷ್ಟೇ ಎಂದು ತಿಳಿಸಿದರು. ಇದನ್ನೂ ಓದಿ: ಘೀಳಿಡುತ್ತಾ ಅಟ್ಟಾಡಿಸಿದ ಒಂಟಿ ಸಲಗ – ಸ್ಕೂಟಿಯನ್ನು ಬಿಟ್ಟು ಮರ ಏರಿ ಪಾರಾದ ಇಟಿಎಫ್ ಸಿಬ್ಬಂದಿ

  • ಬಂಧಿಸಿದ ಇಬ್ಬರು ಅತ್ಯಾಚಾರವೆಸಗಿದವರಲ್ಲ.. ಬೇರೆಯವರನ್ನ ಬಂಧಿಸಿದ್ದಾರೆ: ಸಂತ್ರಸ್ತೆ

    ಬಂಧಿಸಿದ ಇಬ್ಬರು ಅತ್ಯಾಚಾರವೆಸಗಿದವರಲ್ಲ.. ಬೇರೆಯವರನ್ನ ಬಂಧಿಸಿದ್ದಾರೆ: ಸಂತ್ರಸ್ತೆ

    – ಹಾವೇರಿ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಸ್ಪಷ್ಟನೆ
    – ಜೀವ ಭಯವಿದ್ದರೂ ಮನೆ ಬಳಿ ಪೊಲೀಸರನ್ನ ನಿಯೋಜಿಸಿಲ್ಲ ಎಂದು ಆರೋಪ

    ಕಾರವಾರ: ಹಾನಗಲ್ (Hanagal) ಗ್ಯಾಂಗ್ ರೇಪ್ (Gang Rape) ಪ್ರಕರಣಕ್ಕೆ ಇದೀಗ ಟ್ಟಿಸ್ಟ್ ಸಿಕ್ಕಿದ್ದು, ಬಿಜೆಪಿಗರು (BJP) ಸಂತ್ರಸ್ತೆಯನ್ನು ಭೇಟಿಯಾಗಲು ಬರುತ್ತಿದ್ದಂತೆ ಆಕೆಯನ್ನು ಹಾವೇರಿ (Haveri) ಪೊಲೀಸರು ಶಿರಸಿ ನಿವಾಸಕ್ಕೆ ಕರೆತಂದು ಬಿಟ್ಟಿದ್ದಾರೆ.

    ಇನ್ನು ಇದೇ ಮೊದಲಬಾರಿಗೆ ಮಾತನಾಡಿದ ಸಂತ್ರಸ್ತೆ (Victim), ಅತ್ಯಾಚಾರ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದವರಲ್ಲಿ ಇಬ್ಬರು ಈ ಪ್ರಕರಣದಲ್ಲಿ ಇಲ್ಲದವರು. ಪೊಲೀಸರು ಬೇರೆಯವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ: ಶೆಟ್ಟರ್

    ಪೊಲೀಸರು ಇಬ್ಬರ ಫೋಟೋ ತೋರಿಸಿದ್ದರು. ಆ ಇಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರಲ್ಲ. ಆರು ಮಂದಿ ಬಂಧಿಸಿದವರಲ್ಲಿ ಇಬ್ಬರು ಈ ಪ್ರಕರಣದಲ್ಲಿ ಇಲ್ಲದವರು. ವಿಡಿಯೋದಲ್ಲಿ ಇದ್ದವರು ಆ ಇಬ್ಬರಲ್ಲ. ಸ್ಥಳ ಪರಿಶೀಲನೆ ಎಂದು ಹೇಳಿ ಇದೀಗ ಮನೆಗೆ ತಂದು ಬಿಟ್ಟಿದ್ದಾರೆ. ನನ್ನ ಕುಟುಂಬಸ್ಥರಿಗೂ ಮಾಹಿತಿ ನೀಡದೇ ಮನೆಗೆ ಬಿಟ್ಟು ಹೋಗಿದ್ದಾರೆ. ಜೀವ ಭಯವಿದ್ದರೂ ಪೊಲೀಸರನ್ನು ಮನೆ ಬಳಿ ನಿಯೋಜಿಸಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡೇ ಬಂದ ವೃದ್ಧೆ; ಸರ್ಕಾರಕ್ಕೆ ಹೆಚ್‍ಡಿಕೆ ತರಾಟೆ

  • ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಕೇಸ್‌ – ಅಪರಾಧಿಗಳ ಬಿಡುಗಡೆ ಮಾಡಿದ ಗುಜರಾತ್‌ ಸರ್ಕಾರದ ಆದೇಶ ರದ್ದು

    ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಕೇಸ್‌ – ಅಪರಾಧಿಗಳ ಬಿಡುಗಡೆ ಮಾಡಿದ ಗುಜರಾತ್‌ ಸರ್ಕಾರದ ಆದೇಶ ರದ್ದು

    ನವದೆಹಲಿ : 2002ರ ಗುಜರಾತ್ ಗಲಭೆಯಲ್ಲಿ (Gujarat Riots) ಸಂಭವಿಸಿದ ಬಿಲ್ಕಿಸ್ ಬಾನೋ (Bilkis Bano) ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಗಳ ಅವಧಿಗೆ ಮುನ್ನ ಬಿಡುಗಡೆಗೆ ಅವಕಾಶ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ (Supreme Court) ರದ್ದುಗೊಳಿಸಿದೆ.

    ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 11 ಜನರನ್ನು ಅಕಾಲಿಕವಾಗಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಬಳಿಕ ಈ ತೀರ್ಪು ನೀಡಲಾಗಿದೆ. ಇದನ್ನೂ ಓದಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ – ದಾಖಲೆ ಜಯದೊಂದಿಗೆ ಸತತ 5ನೇ ಬಾರಿಗೆ ಮರು ಆಯ್ಕೆ

    ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಹನ್ನೊಂದು ಅಪರಾಧಿಗಳು ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಮತ್ತು ಜೈಲಿನಲ್ಲಿಯೇ ಮುಂದುವರಿಯಬೇಕು ಎಂದು ಹೇಳಿದೆ. ಇದೇ ವೇಳೆ 2022 ಆಗಸ್ಟ್ ನಲ್ಲಿ ದೋಷಿಗಳ ಬಿಡುಗಡೆಗೆ ನಿರ್ಧಾರ ಕೈಗೊಂಡ ಪ್ರಕ್ರಿಯೆಗಳನ್ನು ಒಳಗೊಂಡ ಮೂಲ ಕಡತಗಳನ್ನು ಸಲ್ಲಿಸುವಂತೆ ನ್ಯಾಯಾಲಯ ಕೇಂದ್ರ ಸರಕಾರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.  ಇದನ್ನೂ ಓದಿ: ಮಾಲೂರು ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ

    ಗುಜುರಾತ್ ಗಲಭೆಯ ಸಮಯದಲ್ಲಿ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಅಪರಾಧಿಗಳು ಹತ್ಯೆ ಮಾಡಿದ್ದರು. ಪ್ರಕರಣದ ಆರೋಪಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರನ್ನು ಜೀವಾವಧಿ ಶಿಕ್ಷೆಯ ಅವಧಿಗೂ ಮುನ್ನವೇ ರಾಜ್ಯ ಸರ್ಕಾರವು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೊಳಿಸಿತ್ತು.

     

  • ಚಲಿಸುತ್ತಿದ್ದ ಬಸ್ಸಿನಲ್ಲೇ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

    ಲಕ್ನೋ: ಉತ್ತರ ಪ್ರದೇಶದಿಂದ (Uttar Pradesh) ಜೈಪುರಕ್ಕೆ (Jaipur) ಬರುತ್ತಿದ್ದ ಬಸ್ಸಿನಲ್ಲಿ 20 ವರ್ಷದ ದಲಿತ ಯುವತಿ (Dalit Girl) ಮೇಲೆ ಇಬ್ಬರು ಚಾಲಕರು ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಡಿಸೆಂಬರ್ 9ರ ಮಧ್ಯರಾತ್ರಿ ಖಾಸಗಿ ಬಸ್ ಉತ್ತರ ಪ್ರದೇಶದಿಂದ ಜೈಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಕಾನ್ಪುರದಿಂದ ಜೈಪುರಕ್ಕೆ ಪ್ರಯಾಣಿಸುತ್ತಿದ್ದ ಸಂತ್ರಸ್ತೆ ಕ್ಯಾಬಿನ್‌ನಲ್ಲಿ ಕುಳಿತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬಿನ್‌ನೊಳಗೆ ಆರಿಫ್ ಮತ್ತು ಲಲಿತ್ ಎಂದು ಗುರುತಿಸಲಾದ ಚಾಲಕರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೋರ್ಟ್‌ ಆವರಣದಲ್ಲೇ ಭೀಕರ ಗುಂಡಿನ ದಾಳಿ – ವಿಚಾರಣಾಧೀನ ಕೈದಿಯ ಹತ್ಯೆ, ಇಬ್ಬರು ಅರೆಸ್ಟ್‌

    ಆರೋಪಿಗಳ ಪೈಕಿ ಆರಿಫ್‌ನನ್ನು ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಕನೋಟಾ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಭಗವಾನ್ ಸಹಾಯ್ ಮೀನಾ ತಿಳಿಸಿದ್ದಾರೆ. ಘಟನೆಯ ಬಳಿಕ ಇನ್ನೋರ್ವ ಆರೋಪಿ ಲಲಿತ್ ತಲೆಮರೆಸಿಕೊಂಡಿದ್ದು, ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸತ್ ಮೇಲಿನ ದಾಳಿಯ ಪ್ರಮುಖ ರೂವಾರಿ ಲಲಿತ್ ಝಾ 7 ದಿನ ಪೊಲೀಸ್ ಕಸ್ಟಡಿಗೆ

    ಸಂತ್ರಸ್ತೆ ಕ್ಯಾಬಿನ್‌ನಲ್ಲಿದ್ದಾಗ ಬಸ್‌ನೊಳಗೆ ಕೆಲವು ಪ್ರಯಾಣಿಕರಿದ್ದರು. ಆದರೆ ಕ್ಯಾಬಿನ್ ಅನ್ನು ಒಳಗಡೆಯಿಂದ ಲಾಕ್ ಮಾಡಲಾಗಿತ್ತು. ಈ ಘಟನೆ ಸಂಭವಿಸಿದ ಸಂದರ್ಭ ಯುವತಿ ಎಮರ್ಜೆನ್ಸಿ ಅಲಾರಾಂ ಒತ್ತಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪ್ರಯಾಣಿಕರು ಬಸ್ ನಿಲ್ಲಿಸಿ ಆರಿಫ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಲಲಿತ್ ತಪ್ಪಿಸಿಕೊಂಡು ಹೋಗಿದ್ದಾನೆ ಎಂದು ಎಸ್‌ಹೆಚ್‌ಒ ಹೇಳಿದ್ದಾರೆ.  ಇದನ್ನೂ ಓದಿ: ಸೆಕ್ಸ್‌ಗೆ ನಿರಾಕರಿಸಿದ ಲಿವ್-ಇನ್-ಪಾರ್ಟ್ನರ್‌ನ ಕುತ್ತಿಗೆಗೆ ಕತ್ತರಿಯಿಂದ ಇರಿದ!