Tag: gang rape

  • ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    – ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು

    ಕೊಪ್ಪಳ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು ಎಂದು ನಟಿ ಪೂಜಾಗಾಂಧಿ ಗ್ಯಾಂಗ್ ರೇಪ್ ವಿರುದ್ಧ ಕಿಡಿಕಾರಿದ್ದಾರೆ.

    ಮೈಸೂರು ಯುವತಿ ಗ್ಯಾಂಗ್ ರೇಪ್ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಕೇಳಿ ತುಂಬಾ ಬೇಸರವಾಗಿದೆ. ಇಂತಹ ಪ್ರಕರಣಗಳು ಬೇರೆ ಬೇರೆ ರಾಜ್ಯದಲ್ಲಿ ನಡೆಯುತ್ತಿದ್ದನ್ನು ಕೇಳಿದ್ದೇವೆ. ಆದರೆ ಅಂತಹ ಘಟನೆ ಈಗ ಮೈಸೂರಿನಲ್ಲಿ ನಡೆದಿದೆ. ಇದು ನಿಜಕ್ಕೂ ಬೇಸರದ ಸಂಗತಿ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರ

    ಈ ರೀತಿಯ ಘಟನೆಗಳಿಂದ ಮಹಿಳೆಯರಿಗೆ ರಕ್ಷಣೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ. ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು. ಎಲ್ಲರ ಮನೆಯ ಹೆಣ್ಣು ಮಕ್ಕಳು ಒಂದೆ. ಕಾನೂನು ಪ್ರಕಾರ ಏನು ಕ್ರಮ ಇದೆಯೋ ಆ ಕ್ರಮ ಜರುಗಿಸಬೇಕು. ಬೇರೆಯವರು ಅತ್ಯಾಚಾರ ಮಾಡುವುದಕ್ಕೆ ಮುಂಚೆ ನೂರು ಬಾರಿ ಯೋಚಿಸಬೇಕು ಆ ರೀತಿಯ ಶಿಕ್ಷೆ ನೀಡಬೇಕು ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ:  ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ

    ಸಣ್ಣ ಸಣ್ಣ ಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಂತಹ ಮನಸ್ಥಿತಿಯವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾನು ಕಾನೂನನ್ನು ಗೌರವಿಸುತ್ತೇನೆ. ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳಿಂದ ಎಲ್ಲ ಮಹಿಳೆಯರು ನಾವು ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಬರಬೇಕು ಎಂದು ತಿಳಿಸಿದ್ದಾರೆ.

    ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಳವಾಡಿಯಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲಿಸರು ಇದೀಗ ಅವರನ್ನು ಮೈಸೂರಿಗೆ ಕರೆತಂದು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ:ಅತ್ಯಾಚಾರ ಆರೋಪಿಗಳನ್ನು ಎನ್‍ಕೌಂಟರ್ ಮಾಡಬೇಕು: ಸಾ.ರಾ ಮಹೇಶ್

  • ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ

    ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ

    – ಬಹುಮಾನ ಘೋಷಿಸಿದ ಡಿಜಿಪಿ ಪ್ರವೀಣ್ ಸೂದ್

    ಮೈಸೂರು: ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿರುವ ಪೊಲೀಸರ ತಂಡಕ್ಕೆ 5 ಲಕ್ಷ ಬಹುಮಾನ ನೀಡುವುದಾಗಿ ಡಿಜಿಪಿ ಪ್ರವೀಣ್ ಸೂದ್ ಘೋಷಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳನ್ನು ಬಂಧಿಸುವ ಮುನ್ನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಆಗ ಅವರು ಮೊದಲು ನಮ್ಮ ಪೊಲೀಸರ ತಂಡಕ್ಕೆ ಬಹುಮಾನ ಘೋಷಿಸಿ ಎಂದು ತಿಳಿಸಿದರು. ಅದರಂತೆ ಪೊಲೀಸರ ತಂಡಕ್ಕೆ 5 ಲಕ್ಷ ಬಹುಮಾನ ನೀಡುವುದಾಗಿ ಹೇಳಿದರು.

    20 ಗಂಟೆಯಲ್ಲಿ ಎರಡುಯ ಬಾರಿ ಪ್ರೆಸ್ ಮಿಟ್ ಮಾಡುವ ಸಂದರ್ಭ ಇದೇ ಮೊದಲ ಬಾರಿಗೆ ನನಗೆ ಬಂದಿದೆ. ಆ.23ರಂದು ನಡೆದಿದ್ದ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿಯಾಗಿದೆ. ಆ. 24 ರಂದು ಬಹಳ ದುಃಖದ ಘಟನೆ ನಡೆದಿದೆ. ಹೇಳಕ್ಕೂ ಆಗದಂತಹ ದುಃಖದ ಘಟನೆ ನಡೆದಿದ್ದು, ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲೇ ದರೋಡೆ ಮಾಡುತ್ತಿದ್ದ ಆರೋಪಿಗಳು ಈ ಜೋಡಿ ಬಳಿ ಬಂದು 3 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಅದು ಸಾಧ್ಯವಾಗದಿದ್ದಾಗ ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎಂದರು. ಇದನ್ನೂ ಓದಿ: ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!

    ಇದಾದ ಬಳಿಕ ದಕ್ಷಿಣ ವಲಯ ಐಜಿ ಹಾಗೂ ಕಮಿಷನರ್ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿಶೇಷವಾಗಿ ಈ ಘಟನೆಯಲ್ಲಿ ಸಂತ್ರಸ್ತೆ ಇದೂವರೆಗೂ ಯಾವುದೇ ಹೇಳಿಕೆ ನೀಡಿಲ್ಲ. ಆಕೆಯ ಗೆಳೆಯ ಸ್ವಲ್ಪ ಮಾಹಿತಿ ನೀಡಿದ್ದಾರೆ. ಆದರೂ ಇದು ಕೂಡ ಅಸ್ಪಷ್ಟವಾಗಿತ್ತು. ನಿನ್ನೆ ಮೊನ್ನೆ ಸಾಕಷ್ಟು ಸಾರ್ವಜನಿಕರಿಂದ ಸಲಹೆಗಳು ಸಿಕ್ಕಿವೆ ಎಂದು ಹೇಳಿದರು. ಇದನ್ನೂ ಓದಿ: ಕ್ಯಾನ್ಸರ್ ರೋಗ 4ನೇ ಹಂತ ತಲುಪಿದಾಗ ಏನಾಗುತ್ತೋ ಹಾಗೆ ಅತ್ಯಾಚಾರಿಗಳಿಗೆ ಶಿಕ್ಷೆಯಾಗ್ಬೇಕು: ವಿನಯ್ ಗುರೂಜಿ

    ಇದು ಖುಷಿಯ ವಿಚಾರ ಅಲ್ಲ. ಆದರೆ ಈ ಕೇಸಿನಲ್ಲಿ ಐದು ಮಂದಿಯನ್ನು ಅರೆಸ್ಟ್ ಮಾಡಿದ್ದೇವೆ. ಈ 5 ಮಂದಿ ಯಾರೆಂಬುದನ್ನು ಕೋರ್ಟ್ ಆದೇಶದಂತೆ ಬಹಿರಂಗಪಡಿಸಲ್ಲ. ಆರೋಪಿಗಳೆಲ್ಲರೂ ಕೂಲಿ ಕಾರ್ಮಿಕರು ಆಗಿದ್ದಾರೆ. ಇನ್ನೂ ತನಿಖೆ ನಡೆಸಿ ಮಾಹಿತಿ ತಿಳಿಸಬೇಕಿತ್ತು. ಆದರೆ ಈ ಪ್ರಕರಣದಲ್ಲಿ ಇದು ಸಾಧ್ಯವಿಲ್ಲ. ಪ್ರಾಥಮಿಕ ಮೂಲಗಳ ಪ್ರಕಾರ ಓರ್ವ ಅಪ್ರಾಪ್ತ(17 ವರ್ಷ) ಎಂಬುದಾಗಿ ತಿಳಿದುಬಂದಿದೆ. ಕೆಲಸಕ್ಕೋಸ್ಕರ ಎರಡು ಸಲ ಮೈಸೂರಿಗೆ ಬರುತ್ತಿದ್ದರು. ಹೀಗೆ ಬಂದು ಹೋಗುವ ಮುನ್ನ ಕುಡಿದು ಪಾರ್ಟಿ ಮಾಡಿ ಹೋಗುತ್ತಿದ್ದರು ಎಂದು ವಿವರಿಸಿದರು.  ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಇದೇ ವೇಳೆ ಪೊಲೀಸರ ತಂಡಕ್ಕೆ ಎಲ್ಲರಿಗೂ ಧನ್ಯವಾದಗಳನ್ನು ಡಿಜಿಪಿ ತಿಳಿಸಿದ್ದಾರೆ. ಇಂತಹ ಪ್ರಕರಣವನ್ನು ಪತ್ತೆ ಮಾಡಲು ಸಮಯ ಬೇಕಾಗುತ್ತದೆ. ಆರೋಪಿಗಳು ಗೊತ್ತಿದ್ದರೆ 4 ಗಂಟೆಯೂ ಕಾಯಬೇಕಿಲ್ಲ. ಆದರೆ ಈ ರೀತಿಯ ಘಟನೆಗಳಲ್ಲಿ ವೈಜ್ಞಾನಿಕ ಹಾಗೂ ತಂತ್ರಜ್ಞಾನ ಮೂಲಕ ಪತ್ತೆ ಕಾರ್ಯ ನಡೆಸಬೇಕಾಗುತ್ತದೆ ಎಂದು ಹೇಳುವ ಮೂಲಕ ಆರೋಪಿಗಳ ಪತ್ತೆ ತಡಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಡಿಜಿಪಿ ಸ್ಪಷ್ಟನೆ ನೀಡಿದರು.

  • ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!

    ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!

    ಮೈಸೂರು: ದರೋಡೆ ಮಾಡಲು ಹೋಗಿ ಯುವಕ ಹಾಗೂ ಯುವತಿ ಬಳಿ ಏನೂ ಸಿಗದಿದ್ದಾಗ ಯುವತಿಯನ್ನು ಅತ್ಯಾಚಾರ ಮಾಡಿ ಬೆದರಿಕೆ ಹಾಕಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಮಂದಿಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿದ ಸತ್ಯಮಂಗಲದಲ್ಲಿ ಇಂದು ಬೆಳಗ್ಗೆ ಆರೋಪಿಗಳನ್ನು ಬಂಧಿಸಿ, ಇದೀಗ ಮೈಸೂರಿಗೆ ಕರೆತರಲಾಗಿದೆ.

    ಆರೋಪಿಗಳಲ್ಲಿ ಮೂವರು ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದವರಾಗಿದ್ದಾರೆ. ರಸ್ತೆಗಳಲ್ಲಿ ವಾಹನ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಗಳು ಇವರ ಮೇಲಿದೆ. ಅಂತೆಯೇ ಯುವಕ ಹಾಗೂ ಯುವತಿಯನ್ನೂ ದರೋಡೆ ಮಾಡಲು ತಂಡ ಹೋಗಿತ್ತು. ಇವರ ಬಳಿ ಏನೂ ಸಿಗದಕ್ಕೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್- ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

    ಸದ್ಯ ಐವರು ಆರೋಪಿಗಳನ್ನ ಮೈಸೂರಿಗೆ ಕರೆತಂದಿರುವ ಪೊಲೀಸರು, ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಧೀಶರ ಎದುರು ಹಾಜರು ಪಡಿಸಲಿದ್ದಾರೆ. ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದವರಾಗಿದ್ದು, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಪ್ರಕರಣ ನಡೆದ ಸಂದರ್ಭದಲ್ಲಿ ಈ ಸ್ಥಳಕ್ಕೆ ಅಪರಿಚಿತರು ಬರಲು ಸಾಧ್ಯವಿಲ್ಲ ಯಾರು ಪರಿಚಿತರು ಮಾತ್ರ ಬರಲು ಸಾಧ್ಯ ಎಂಬ ಮಾಹಿತಿ ಮೇರೆಗೆ ತನಿಖೆಗೆ ಪೊಲೀಸರು ಮುಂದಾಗಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಮೈಸೂರು ಗ್ಯಾಂಗ್‍ರೇಪ್- ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

    ಮೈಸೂರು ಗ್ಯಾಂಗ್‍ರೇಪ್- ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

    ಮೈಸೂರು: ಅರಮನೆ ನಗರಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಘಟನೆ ನಡೆದು 86 ಗಂಟೆಗಳ ನಡೆಸಿದ ಪೊಲೀಸರ ಮಹತ್ವದ ಕಾರ್ಯಾಚರಣೆಯ ಬಳಿಕ ಇದೀಗ ಕೀಚಕರನ್ನು ಪೊಲೀಸರು ವಶಕ್ಕೆ ಪೆಡೆದಿದ್ದಾರೆ. 80 ಮಂದಿ ಪೊಲೀಸರ 5 ತಂಡ ಆರೋಪಿಗಳಿಗಾಗಿ ಶೋಧ ನಡೆಸಿತ್ತು. ಮೈಸೂರಿನಿಂದ ಹೊರಗೆ ಅಂದರೆ ಹೊರ ರಾಜ್ಯದಲ್ಲಿ ಆರೋಪಿಗಳು ತಲೆಮರೆಸಿಕೊಡಿದ್ದರು. ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕ ಆರೋಪಿಗಳನ್ನು ಗುರುತಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಮೂಲಕ ಕೃತ್ಯ ನಡೆಸಿದ ಕಾಮುಕರೆಲ್ಲರೂ ಪೊಲೀಸರ ವಶವಾಗಿದ್ದಾರೆ ಎನ್ನಲಾಗಿದೆ.

    ಆಗಸ್ಟ್ 24ರ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೋರಿ ಮೇಲೆ ಕುಳಿತಿದ್ದಳು. ಈ ವೇಳೆ ಪಾನಮತ್ತ ಯುವಕರ ತಂಡವೊಂದು ಅಲ್ಲಿಗೆ ಬಂದು ಯುವಕನಿಗೆ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇತ್ತ ಪೊದೆಯಲ್ಲಿ ನಿತ್ರಾಣವಾಗಿದ್ದ ಜೋಡಿಯನ್ನು ನೋಡಿದ ಯುವಕ ಸ್ನೇಹಿತರು ಕೂಡಲೇ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ಅಲ್ಲದೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದರು. ಇದನ್ನೂ ಓದಿ: ವಿವಾದಕ್ಕೀಡಾಯ್ತು ಮೈಸೂರು ವಿವಿ ಹೊರಡಿಸಿದ ಆದೇಶ

    ಪ್ರಕರಣ ಸಂಬಂಧ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಡಿಜಿಪಿ ಪ್ರವೀಣ್ ಸೂದ್, ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಸುಳಿವು ಸಿಕ್ಕರೂ ಸದ್ಯ ನಾವು ಅದನ್ನು ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಆರೋಪಿಗಳು ಪತ್ತೆಯಾದ ತಕ್ಷಣ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡುತ್ತೇವೆ. ಈ ಪ್ರಕರಣದ ಕುರಿತು ಗಂಭೀರ ತನಿಖೆ ನಡೆಯುತ್ತಿದೆ. ಘಟನಾ ಸ್ಥಳದಿಂದ ಎಲ್ಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂತ್ರಸ್ತೆ ಮಾನಸಿಕ ಸ್ಥಿತಿ ಸರಿ ಇಲ್ಲ. ಹುಷಾರಾದ ಬಳಿಕ ಮಾಹಿತಿ ನೀಡುವುದಾಗಿ ಸಂತ್ರಸ್ತೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದರು.

  • ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾಲಹರಣ ಮಾಡಿಲ್ಲ – ಗೃಹ ಸಚಿವ ಸ್ಪಷ್ಟನೆ

    ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾಲಹರಣ ಮಾಡಿಲ್ಲ – ಗೃಹ ಸಚಿವ ಸ್ಪಷ್ಟನೆ

    ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಜೊತೆ ನಿನ್ನೆಯಿಂದಲೂ ನಿರಂತರ ಸಂಪರ್ಕದಲ್ಲಿದ್ದು, ಕಾಲಹರಣ ಮಾಡಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಗೃಹಸಚಿವರು ಕಾಲಹರಣ ಮಾಡುತ್ತಿದ್ದಾರೆ ಎಂಬ ಆರೋಪ ಸಂಬಂಧ ಪ್ರತಿಕ್ರಿಯಿಸಿ, ನಾನು ಕೆಪಿಎನಲ್ಲಿ ಕಾಲಹರಣ ಮಾಡುತ್ತಿಲ್ಲ. ನಾನು ಸಭೆಯನ್ನು ಮಾಡುತ್ತಿದ್ದೇನೆ. ನಿನ್ನೆ ಬಂದ ತಕ್ಷಣ ಪೊಲೀಸ್ ಅಧಿಕಾರಿಗಳ ಜೊತೆ ಒಂದಷ್ಟು ಮಾಹಿತಿಗಳನ್ನು ತೆಗೆದುಕೊಂಡಿದ್ದೇನೆ. ಬೆಳಗ್ಗೆಯೂ ಸಹ ಪ್ರಕರಣ ಸಂಬಂಧ ಮಾತನಾಡಿದ್ದೇನೆ. ಪೊಲೀಸರ ಜೊತೆ ಇನ್ನೂ ಎರಡು ಸುತ್ತಿನ ಮಾತುಕತೆ ಆಗಬೇಕು. ಆ ನಂತರ ನಾನು ಈ ಪ್ರಕರಣ ವಿವಿರ ನೀಡುತ್ತೇನೆ. ಮೈಸೂರಿನಲ್ಲಿ ಇಂದು ಪೊಲೀಸರ ಜೊತೆ ಎರಡು ಸಭೆಗಳನ್ನು ಮಾಡುತ್ತೇನೆ ಎಂದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ

    ಪೊಲೀಸ್ ಅವರಿಗೆ ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಒಳ್ಳೆಯ ತರಬೇತಿ ನೀಡುತ್ತಿದ್ದಾರೆ. ಒಬ್ಬ ಸಬ್ ಇನ್ಸ್‍ಪೆಕ್ಟರ್‍ಗೆ ಹೇಗೆ ತರಬೇತಿ ನೀಡುತ್ತಾರೆ ಎಂದು ತಿಳಿದುಕೊಂಡೆ. ಸಮಾಜಕ್ಕೆ ಒಬ್ಬ ಯೋಗ್ಯ ಪೊಲೀಸ್ ಅಧಿಕಾರಿಯನ್ನು ನೀಡಲು ಏನೆಲ್ಲಾ ಮಾಡುತ್ತಾರೆ ಎನ್ನುವುದು ತಿಳಿಯಿತು. ಇವರಿಂದ ನೆಮ್ಮದಿಯ ಜೀವನವನ್ನು ಮಾಡಬಹುದು. ನಾನು ವಿದ್ಯಾರ್ಥಿ ಆಗಿದ್ದಾಗ ಎನ್‍ಸಿಸಿಯಲ್ಲಿ ಭಾಗವಹಿಸಿದ್ದೆ. ಆಗ ಶೂಟ್ ಮಾಡಿ ಬಹುಮಾನ ಎಲ್ಲವನ್ನೂ ಪಡೆದುಕೊಂಡಿದ್ದೇನೆ. ಸೈನಿಕರ ಕ್ಯಾಂಪ್‍ನಲ್ಲೂ ನಾನು ಭಾಗವಹಿಸಿದ್ದೇನೆ. ಒಂದು ಗುಂಡು ಮಿಸ್ ಆಗದೇ ಶೂಟ್ ಮಾಡುವುದು ಮುಖ್ಯವಾಗುತ್ತದೆ. ಪೊಲೀಸರು ಅವರನ್ನು ರಕ್ಷಣೆ ಮಾಡಿಕೊಂಡು ಸಮಾಜವನ್ನು ರಕ್ಷಣೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ಮೈಸೂರಿನಲ್ಲಿ ಗ್ಯಾಂಗ್‍ರೇಪ್ ಪ್ರಕರಣ – ಘಟನೆಯ ಬಗ್ಗೆ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ

    ಆರೋಪವೇನು..?
    ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ನಿನ್ನೆ ಮೈಸೂರೊಗೆ ಭೇಟಿ ಕೊಟ್ಟ ಗೃಹ ಸಚಿವರು ಈವರೆಗೂ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿಲ್ಲ. ಬದಲಾಗಿ ಪೊಲೀಸ್ ಅಕಾಡೆಮಿ ವೀಕ್ಷಣೆಯಲ್ಲಿ ತೊಡಗಿದ್ದಾರೆ. ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದೆ. ಗಂಭೀರ ಪ್ರಕರಣ ನಡೆದರು ಇನ್ನೂ ಸಭೆಯನ್ನೇ ನಡೆಸಿಲ್ಲ. ದೇಶ ವ್ಯಾಪಿ ಗ್ಯಾಂಗ್ ರೇಪ್ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಆದರೂ ಇದೂವರೆಗೂ ಆರೋಪಿಗಳ ಪತ್ತೆಯಾಗಿಲ್ಲ. ಮೊದಲಿಗೆ ಮಾಡಬೇಕಾಗಿದ್ದ ಕೆಲಸ ಬಿಟ್ಟು ಅಕಾಡೆಮಿ ವೀಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಕಿಡಿಕಾರಿದ್ದಾರೆ.

  • ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ – ಕ್ಷಮೆಯಾಚಿಸಿದ ಗೃಹ ಸಚಿವ

    ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ – ಕ್ಷಮೆಯಾಚಿಸಿದ ಗೃಹ ಸಚಿವ

    ಬೆಂಗಳೂರು: ನಾನು ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ ಎಂದು ಹೇಳುವ ಮೂಲಕ ಗೃಹ ಸಚಿವ ಅರಗ ಜ್ಞಾನೇಂದ್ರ ಕ್ಷಮೆಯಾಚಿಸಿದ್ದಾರೆ.

    ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂದ ಬೇಜವಾಬ್ದಾರಿ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು ಅವಳನ್ನು ನನ್ನ ಮಗಳ ಸ್ಥಾನದಲ್ಲಿ ನೋಡುತ್ತಿದ್ದೇನೆ. ಹೀಗಾಗಿ ನಾನು ಆತಂಕದಿಂದ ಆ ಮಾತನ್ನು ಹೇಳಿದ್ದೇನೆ. ನಾನು ಆ ಮಾತನ್ನು ವಾಪಸ್ ಪಡೆದುಕೊಳ್ಳುತ್ತೇನೆ. ಅಲ್ಲದೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಕಾಂಗ್ರೆಸ್ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿಯೂ ಇಂತಹ ಒಂದು ಗಂಭೀರವಾದ ಪ್ರಕರಣ ನಡೆದಿದೆ. ಇದರ ಬಗ್ಗೆ ನಾನು ಹೆಚ್ಚು ಹೇಳಲು ಇಷ್ಟ ಪಡುವುದಿಲ್ಲ. ಯಾಕಂದ್ರೆ ಗೃಹ ಇಲಾಖೆ ನಿಭಾಯಿಸಿದ ಅನೇಕ ಹಿರಿಯರು ಇದ್ದಾರೆ. ಹೀಗಾಗಿ ಅವರು ಕೂಡ ಸ್ಪಷ್ಟಪಡಿಸಬಹುದು ಎಂದು ನಾನು ಅಂದುಕೊಂಡಿದ್ದೇನೆ ಎಂದರು. ಇದನ್ನೂ ಓದಿ: ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿವಕುಮಾರ್

    ಮೈಸೂರು ಗ್ಯಾಂಗ್ ರೇಪ್ ಪ್ರಕರಣದಿಂದಾಗಿ ರಾಜ್ಯದ ಮಾನ ಹರಾಜಾಗ್ತಿದೆ. ಆದರೆ ಮತಿಗೇಡಿ ರಾಜಕಾರಣಿಗಳು ಮತಿಹೀನರಾಗಿ ಮಾತಾಡ್ತಿದ್ದಾರೆ. ಅದರಲ್ಲೂ ಬಿಜೆಪಿ ಸಚಿವರು ಗಂಭೀರತೆ ಇಲ್ಲದಂತೆ ಮಾತಾಡ್ತಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಜ್ಞಾನಿಯ ರೀತಿ ಮಾತನಾಡಿದ್ದಾರೆ. ಕಾಡಿ-ಬೇಡಿ, ಒತ್ತಡ-ಬೆದರಿಕೆ ಹಾಕಿ ಸಚಿವಗಿರೋ ಜ್ಞಾನೇಂದ್ರ ಅವರಿಗೆ ಸಿಕ್ಕಿರೋ ಗೃಹ ಇಲಾಖೆ ಬಗ್ಗೆ ಜ್ಞಾನವೇ ಇಲ್ಲದಂತೆ ವರ್ತಿಸ್ತಿದ್ದಾರೆ. ಗೃಹ ಸಚಿವರಾದ ಮೇಲೆ ಪೊಲೀಸರು ನಿದ್ದೆ ಮಾಡೋಕೇ ಬಿಡ್ತಿಲ್ಲ ಅಂತ ಹೇಳಿ ವಿವಾದಕ್ಕೀಡಾಗಿದ್ದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್

    ಮೈಸೂರು ಗ್ಯಾಂಗ್‍ರೇಪ್ ವಿಚಾರವಾಗಿ ಪರಪ್ಪನ ಅಗ್ರಹಾರದ ಬಳಿ ಪ್ರತಿಕ್ರಿಯಿಸಿದ್ದ ಗೃಹ ಸಚಿವರು, ರೇಪ್ ಆಗಿರೋದು ಮೈಸೂರಲ್ಲ, ಆದರೆ ಕಾಂಗ್ರೆಸ್‍ನವರು ನನ್ನ, ಗೃಹ ಸಚಿವರನ್ನ ರೇಪ್ ಮಾಡೋ ಪ್ರಯತ್ನ ಮಾಡ್ತಿದ್ದಾರೆ. ಘಟನೆ ಅಮಾನುಷ. ಯಾರೂ ರಾಜಕೀಯ ಮಾಡಬಾರದು. ಜೊತೆಗೆ ಯುವಕ-ಯುವತಿ 7.30ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಅಷ್ಟೊತ್ತಿಗೆ ಅಲ್ಲಿ ಹೋಗಬಾರದಿತ್ತು. ಹೋಗಬೇಡಿ ಅಂತ ತಡೆಯೋದಕ್ಕೂ ಆಗೋದಿಲ್ಲ. ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ ಎಂದು ಹೇಳಿದ್ದರು. ಗೃಹ ಸಚಿವರ ಹೇಳಿಕೆಗೆ ಸಿಎಂ ಬೊಮ್ಮಾಯಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಸಿಎಂ ಸೂಚಿಸಿದ್ದ ಬಳಿಕ ಅರಗ ಜ್ಞಾನೇಂದ್ರ ಕ್ಷಮೆ ಯಾಚಿಸಿದ್ದಾರೆ.

  • ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಬೆಂಗಳೂರು: ರೇಪ್ ಆಗಿರುವುದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜಾವಾಬ್ದಾರಿ ಹೇಳಿಕೆ ನೀಡಿ ಇದೀಗ ವಿವಾದಕ್ಕೀಡಾಗಿದ್ದಾರೆ.

    ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಕುರಿತು ಕಾಂಗ್ರೆಸ್ ನಿಂದ ಗೃಹ ಸಚಿವರ ರಾಜೀನಾಮೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ಸಿನವರು ಗೃಹ ಸಚಿವರು ಅಂದರೆ ನನ್ನನ್ನ ರೇಪ್ ಮಾಡ್ತಿದ್ದಾರೆ. ನನ್ನ ರೇಪ್ ಮಾಡುವ ಪ್ರಯತ್ನ ಮಾಡ್ತಿದ್ದಾರೆ. ಇಂತಹ ವಿಚಾರದಲ್ಲಿ ಹೀಗೆ ಮಾಡೋದಕ್ಕೆ ಹೋಗಬಾರದು. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಹೇಳಿದ್ದಾರೆ.

    ಯುವಕ, ಯುವತಿ 7.30 ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಅಷ್ಟೊತ್ತಿಗೆ ಅಲ್ಲಿ ಹೋಗಬಾರದಿತ್ತು. ಆದರೆ ಹೋಗಬೇಡಿ ಅಂತಾ ತಡೆಯೋದಕ್ಕೂ ಆಗೋದಿಲ್ಲ. ಸದ್ಯಕ್ಕೆ ಯುವಕ, ಯುವತಿ ಶಾಕ್ ನಲ್ಲಿ ಇದ್ದಾರೆ. ಅವರ ಸಂಪೂರ್ಣ ಸ್ಟೇಟ್ ಮೆಂಟ್ ಪಡೆಯಲು ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಸಂಸದೆ ನುಸ್ರತ್ ಜಹಾನ್

    ಮೊನ್ನೆ ಸಂಜೆ 7.30- 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಘಟನೆ ನಡೆದ 12 ಗಂಟೆ ಒಳಗೆ ಎಫ್‍ಐಆರ್ ದಾಖಲು ಮಾಡಲಾಗಿದೆ. ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗ್ತಿದೆ. ಸಂತ್ರಸ್ತೆ ಶಾಕ್ ನಲ್ಲಿ ಇದ್ದಾರೆ. ಹೀಗಾಗಿ ಸಂಪೂರ್ಣ ಹೇಳಿಕೆ ಪಡೆಯಲು ಆಗ್ತಿಲ್ಲ. ಆದರೂ ನಮ್ಮ ಪೋಲೀಸರು ಕೇಸ್ ದಾಖಲು ಮಾಡಿಕೊಂಡು ತನಿಖೆ ಮಾಡ್ತಿದ್ದಾರೆ. ಪ್ರಕರಣ ಟ್ರೇಸ್ ಮಾಡಲು ನಮ್ಮ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಬೆಂಗಳೂರಿನಿಂದ ಹಿರಿಯ ಅಧಿಕಾರಿ ಪ್ರತಾಪ್ ರೆಡ್ಡಿಯನ್ನ ಕಳಿಸಲಾಗಿದೆ. ಪ್ರಕರಣ ಭೇದಿಸಲು ಇಲಾಖೆ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಮೈಸೂರು ಆಯುಕ್ತರು, ಪೊಲೀಸರು ಬೇರೆ ಬೇರೆ ತಂಡ ರಚನೆ ಮಾಡಿಕೊಂಡು ಗಂಭೀರ ತನಿಖೆ ಮಾಡ್ತಿದ್ದಾರೆ ಎಂದರು.

    ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಯಾರೇ ಆದರೂ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ನಾನು ಕೂಡಾ ಇಂದು ಮೈಸೂರಿಗೆ ತೆರಳಿ ಅಧಿಕಾರಿಗಳ ಸಭೆ ಮಾಡ್ತೀನಿ. ಇದುವರೆಗೂ ಯಾವುದೇ ಬಂಧನ ಆಗಿಲ್ಲ. ಈ ಬಗ್ಗೆ ನನಗೆ ಇನ್ನೂ ಮಾಹಿತಿ ಬಂದಿಲ್ಲ ಎಂದು ತಿಳಿಸಿದರು.

    ಮೈಸೂರು ಪ್ರವಾಸ ತಾಣ. ಸಾವಿರಾರು ಜನ ನಿತ್ಯ ಇಲ್ಲಿಗೆ ಬರ್ತಾರೆ. ಇದೊಂದು ದುರಾದೃಷ್ಟಕರ ಘಟನೆ. ನಾವೆಲ್ಲರು ತಲೆ ತಗ್ಗಿಸುವಂತಹ ಘಟನೆ. ಪೊಲೀಸ್ ಗಸ್ತು ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪ ಸೇರಿದಂತೆ ಎಲ್ಲಾ ವಿಚಾರವಾಗಿ ಇಂದು ಮೈಸೂರಿಗೆ ಹೋಗಿ ಸಭೆ ಮಾಡ್ತೀನಿ. ನಾಳೆಯೂ ಕೂಡಾ ಇಡೀ ದಿನ ಸಭೆ ಮಾಡಿ ಎಲ್ಲಾ ಮಾಹಿತಿ ಪಡೆಯುತ್ತೇನೆ ಎಂದರು.

  • ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!

    ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!

    ಮೈಸೂರು: ಅರಮನೆ ನಗರಿಯ ಚಾಮುಂಡಿಬೆಟ್ಟದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಕಾಮುಕರು ತಮ್ಮ ಕಾಮ ತೃಷೆ ತೀರಿಸಿಕೊಂಡ ಬಳಿಕ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

    ವಿದ್ಯಾರ್ಥಿನಿಯನ್ನ ರೇಪ್ ಮಾಡಿದ್ದಲ್ಲದೆ, ಆಕೆಯ ಬೆತ್ತಲೆ ವೀಡಿಯೋ ಕೂಡ ಮಾಡಿದ್ದಾರೆ. ರೇಪ್ ಮಾಡಿ ವೀಡಿಯೋ ಮಾಡಿಕೊಂಡಿದ್ದ ಕಾಮುಕರು ನಂತರ ಪೊಲೀಸರಿಗೆ ದೂರು ಕೊಡದಂತೆ ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ಪೊಲೀಸರಿಗೆ ದೂರು ಕೊಟ್ಟರೆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ.

    ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೋರಿ ಮೇಲೆ ಕುಳಿತಿದ್ದಳು. ಈ ವೇಳೆ ಪಾನಮತ್ತ ಯುವಕರ ತಂಡವೊಂದು ಅಲ್ಲಿಗೆ ಬಂದು ಯುವಕನಿಗೆ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ: ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಇತ್ತ ಪೊದೆಯಲ್ಲಿ ನಿತ್ರಾಣವಾಗಿದ್ದ ಜೋಡಿಯನ್ನು ನೋಡಿದ ಯುವಕನ ಸ್ನೇಹಿತರು ಕೂಡಲೇ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ಅಲ್ಲದೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

  • ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ

    ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ

    ಮೈಸೂರು: ನಮ್ಮ ಜೊತೆ ಗಲಾಟೆ ಮಾಡಿ ನನ್ನ ತಲೆಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿ ಬಿದ್ದಾಗ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದರು ಎಂದು ಯುವಕ ಹೇಳಿದ್ದಾನೆ.

    ನಾನು ನನ್ನ ಸ್ನೇಹಿತೆ ರೌಂಡ್ಸ್ ಬಂದಿದ್ದೆವು. ಈ ವೇಳೆ ಅಲ್ಲೇ ಎಣ್ಣೆ ಹೊಡೆಯುತ್ತಿದ್ದ 5-6 ಜನರು ಗಲಾಟೆ ಶುರು ಮಾಡಿದರು. ಇದರಲ್ಲಿ ಎಲ್ಲರೂ ಕನ್ನಡ ಮಾತಾಡುತ್ತಿದ್ರು, ಒಬ್ಬ ಮಾತ್ರ ಬೇರೆ ಬಾಷೆ ಮಾತಾಡ್ತಿದ್ದ. ಇದೇ ಸಂದರ್ಭದಲ್ಲಿ ಗಲಾಟೆ ಮಾಡಿದವರು ನನಗೆ ಕಲ್ಲಲ್ಲಿ ತಲೆಗೆ ಹೊಡೆದ್ರು, ಪ್ರಜ್ಞೆ ತಪ್ಪಿ ಬಿದ್ದೆ. ನಂತರ ಹುಡುಗಿಯನ್ನ ದೂರ ಕರೆದುಕೊಂಡು ಹೋಗಿ ರೇಪ್ ಮಾಡಿದರು ಎಂದು ಯುವಕ ನಡೆದ ಘಟನೆಯನ್ನು ವಿವರಿಸಿದ್ದಾನೆ. ಇದನ್ನೂ ಓದಿ: ಮೈಸೂರಲ್ಲಿ ನಡೆದ ಗ್ಯಾಂಗ್‍ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿ.ಟಿ ರವಿ

    ಸದ್ಯ ಯುವಕ ಹಾಗೂ ಯುವತಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ವಿರುದ್ಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಯುವತಿ ಉತ್ತರಭಾರತ ಮೂಲದವಳು ಎನ್ನಲಾಗಿದೆ. ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ.

  • ಮೈಸೂರಲ್ಲಿ ನಡೆದ ಗ್ಯಾಂಗ್‍ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿ.ಟಿ ರವಿ

    ಮೈಸೂರಲ್ಲಿ ನಡೆದ ಗ್ಯಾಂಗ್‍ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿ.ಟಿ ರವಿ

    ಮಂಡ್ಯ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಗಣಿಸಬೇಕು ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಒಂದು, ಎರಡು ಪ್ರಕರಣಗಳಿಂದ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳಲಾಗುವುದಿಲ್ಲ. ಆದರೆ ಮುಂದೆ ಇಂತಹ ಘಟನೆಯಗಳು ನಡೆಯದಂತೆ ಎಚ್ಚರವಹಿಸಬೇಕಿದೆ ಎಂದರು.

    ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಇಂತಹ ಪ್ರಕರಣಗಳಿಂದ ಸಾಂಸ್ಕೃತಿಕ ನಗರಿಗೆ ಕಪ್ಪು ಚುಕ್ಕೆ. ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕ್ರಮ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ತಾಯ್ನಾಡಿಗೆ ಕರೆತಂದ ಮೋದಿಗೆ ಹಾಡಿನ ಧನ್ಯವಾದ ತಿಳಿಸಿದ ಸಿಖ್ಖರು

    ನಡೆದಿದ್ದು ಏನು..?
    ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ಜೋಡಿಯೊಂದು ಕುಳಿತಿತ್ತು. ಈ ವೇ:ಎ ಅಲ್ಲಿಗೆ ಪಾನಮತ್ತ ಯುವಕರ ತಂಡವೊಂದು ಎಂಟ್ರಿ ಕೊಟ್ಟಿದೆ. ಅಲ್ಲದೆ ಈ ಜೋಡಿಯನ್ನು ನೋಡಿದ ಯುವಕರು ಪ್ರಿಯಕರನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ನಂತರ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

    ಸದ್ಯ ಯುವಕ ಹಾಗೂ ಯುವತಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ವಿರುದ್ಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಯುವತಿ ಉತ್ತರ ಪ್ರದೇಶ ಮೂದವಳು ಎನ್ನಲಾಗಿದೆ. ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ.