Tag: Ganga River

  • ಗಂಗಾನದಿಗೆ ಸೇತುವೆಯಿಂದ ಜಿಗಿದ 75ರ ವೃದ್ಧೆ – ಸಾಹಸ ಕಂಡು ಬೆರಗಾದ ಜನ

    ಗಂಗಾನದಿಗೆ ಸೇತುವೆಯಿಂದ ಜಿಗಿದ 75ರ ವೃದ್ಧೆ – ಸಾಹಸ ಕಂಡು ಬೆರಗಾದ ಜನ

    ಡೆಹ್ರಾಡೂನ್: ಸಾಧಿಸುವ ಛಲವೊಂದಿದ್ದರೆ ಸಾಕು ಅದಕ್ಕೆ ವಯಸ್ಸಿನ ಅಂತರ ಅಡ್ಡಿ ಬರುವುದಿಲ್ಲ. ಎನ್ನುವುದಕ್ಕೆ ಅನೇಕ ನಿದರ್ಶನಗಳು ಸಾಕ್ಷಿಯಾಗಿವೆ. ಹಾಗೆಯೇ ಉತ್ತರಾಖಂಡದ ಹರಿದ್ವಾರದಲ್ಲಿ 75 ವರ್ಷದ ವೃದ್ಧೆಯೊಬ್ಬರು ಸೇತುವೆಯ ಮೇಲಿನಿಂದ ಗಂಗಾನದಿಗೆ ಧುಮುಕಿ ಈಜುವ ಮೂಲಕ ಜನರನ್ನು ನಿಬ್ಬೆರಗಾಗಿಸಿದ್ದಾರೆ.

    ಹಿಂದೂಗಳ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರವಾದ ಹರಿದ್ವಾರದ ಹರ್ ಕಿಪುರಿ ಘಾಟ್‌ನ ಸೇತುವೆಯಲ್ಲಿ ಈ ಘಟನೆ ನಡೆದಿದೆ. ಮೂಲತಃ ಹರಿಯಾಣದ ಸೋನಿಪತ್ ಬಂದೇಪುರ ಗ್ರಾಮದ 75 ವರ್ಷದ ವೃದ್ಧೆ ಈ ಸಾಹಸ ಮಾಡಿದ್ದಾರೆ. ಇದನ್ನೂ ಓದಿ: 16 ವರ್ಷಗಳಿಂದ ಅಳಿಯನನ್ನೇ ಪ್ರೀತಿಸ್ತಿದ್ದ ಅತ್ತೆ- ಒಟ್ಟಿಗೆ ಇರಲು ಸಾಧ್ಯವಾಗದೇ ಇಬ್ಬರೂ ಆತ್ಮಹತ್ಯೆ

    ಹರಿದ್ವಾರದಲ್ಲಿ ಗಂಗಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲಿನಿಂದ ವೃದ್ಧೆಯೊಬ್ಬರು ತುಂಬಿ ಹರಿಯುತ್ತಿರುವ ಆಳವಾದ ಗಂಗಾನದಿಗೆ ಹಾರಿ ಈಜಿದ್ದಾರೆ. ತಾನು ಸೇತುವೆಗೆ ಧುಮುಕಲು ಹೊರಟಾಗ ಯಾರೂ ತನ್ನನ್ನು ಹಿಂಬಾಲಿಸದಂತೆ ನೋಡಿಕೊಂದ್ದಾರೆ. ಆದರೂ ಸೇತುವೆ ಮೇಲಿದ್ದವರೆ ಯಾರೋ ಈ ಘಟನೆಯನ್ನು ಸೆರೆ ಹಿಡಿದು, ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ವೀಡಿಯೋ ವೈರಲ್ ಆಗಿದೆ.

    Live Tv

  • ಗಂಗಾ ನದಿಯಲ್ಲಿ ಮೀನಿನ ವೈವಿಧ್ಯತೆ ಶೇ.36 ರಷ್ಟು ಹೆಚ್ಚಳ

    ಗಂಗಾ ನದಿಯಲ್ಲಿ ಮೀನಿನ ವೈವಿಧ್ಯತೆ ಶೇ.36 ರಷ್ಟು ಹೆಚ್ಚಳ

    ಕೋಲ್ಕತ್ತಾ: ಕಳೆದ 10 ವರ್ಷಗಳಲ್ಲಿ ಗಂಗಾನದಿಯಲ್ಲಿ ಮೀನಿನ ವೈವಿಧ್ಯತೆ ಸುಧಾರಿಸಿದ್ದು, ಇದೇ ಮೊದಲ ಬಾರಿಗೆ ವೈವಿಧ್ಯತೆಯಲ್ಲಿ ಶೇ.36 ರಷ್ಟು ಹೆಚ್ಚಾಗಿದೆ. ಅಳಿವಿನ ಅಂಚಿನಲ್ಲಿದ್ದ ಶೇ.90 ರಷ್ಟು ಪ್ರಬೇಧಗಳು ಪುನರಾಗಮನ ಮಾಡುತ್ತಿವೆ ಎಂದು ವರದಿ ಹೇಳಿದೆ.

    ಗಂಗಾನದಿಯಲ್ಲಿ ನೀರಿನ ಗುಣಮಟ್ಟ ಸುಧಾರಿಸಲು ಸ್ಥಳೀಯ ಮೀನುಗಾರರಿಂದ ಬಲೆ ಬೀಸುವುದನ್ನು ತಪ್ಪಿಸಲಾಗಿದೆ. ಅಲ್ಲದೆ ಗಂಗಾನದಿಯ ಉಪನದಿಗಳ ಉದ್ದಕ್ಕೂ ವೈವಿಧ್ಯತೆಯ ಅಧ್ಯಯನ ನಡೆಸಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಇದನ್ನೂ ಓದಿ; 7 ಬಾರಿ ಗುಂಡೇಟು ತಿಂದಿದ್ದ ಅಧಿಕಾರಿ UPSCಯಲ್ಲಿ ಪಾಸ್

    ಈ ಹಿಂದೆ ಕಾನ್ಪುರ ಮತ್ತು ಫರಕ್ಕಾ ನಡುವೆ 79 ಮೀನಿನ ಪ್ರಭೇದಗಳನ್ನು ಪತ್ತೆ ಮಾಡಲಾಗಿತ್ತು. ಆದರೆ ಇತ್ತೀಚಿನ ಅಧ್ಯಯನವು 103 ಪ್ರಭೇದದ ಮೀನುಗಳಿರುವುದಾಗಿ ಖಾತ್ರಿ ಪಡಿಸಿದೆ. ಬಂಗಾಳದ ಫರಕ್ಕಾದಿಂದ ಟ್ರಿಬೇನಿಯವರೆಗಿನ ವಲಯದಲ್ಲಿ 123 ಪ್ರಭೇದಗಳು, ಸಿಹಿ ನೀರಿನ ಉಬ್ಬರವಿಳಿತದ ವಲಯದಲ್ಲಿ ಚೆಲ್ಲಾ, ಮೊರಾರಿ, ಗಂಗಾ ನದಿ ಸ್ಪ್ರಾಟ್ ಸೇರಿದಂತೆ 72 ಬಗೆಯ ಪ್ರಭೇದದ ಮೀನುಗಳು ಪತ್ತೆಯಾಗಿವೆ. ಇದರೊಂದಿಗೆ ಹಿಲ್ಸಾ, ಕಜ್ರಿ ಅಥವಾ ಸುತ್ರಿ, ವಾಚಾ, ಗರುವಾ ಮತ್ತು ಮೊರಾರಿ ಅಥವಾ ಪಿಯಾಲಿ ಪ್ರಭೇದದ ಮೀನುಗಳು ಪುನರುಜ್ಜೀವನ ಪಡೆದುಕೊಂಡಿವೆ ಎಂದು ಅಧ್ಯಯನ ದೃಢಪಡಿಸಿದೆ. ಇದನ್ನೂ ಓದಿ: ರಜೆ ಬೇಕೆಂದ್ರೆ ಲಾಡ್ಜ್‌ಗೆ ಬನ್ನಿ – ಮಹಿಳಾ ನೌಕರರಿಗೆ ಎಸ್‌ಪಿ ಕಚೇರಿ ಅಧಿಕಾರಿಯಿಂದ ಕಿರುಕುಳ

    ಈ ನಡುವೆ ಕೇಂದ್ರ ಒಳನಾಡು ಮೀನುಗಾರಿಗೆ ಸಂಶೋಧನಾ ಸಂಸ್ಥೆ (CIFRI) ಅಧಿಕಾರಿಗಳು, ದಾಖಲೆಗಳಿಂದ ಹೆಸರಿಲ್ಲ ಮೀನುಗಳು ಸಂಪೂರ್ಣವಾಗಿ ಅಳಿದುಹೋಗಿಲ್ಲ. ಸಂಖ್ಯೆಯಲ್ಲಿ ಸ್ವಲ್ಪ ಕಡಿಮೆಯಾಗಿರಬಹುದು ಎಂದು ತಿಳಿಸಿದ್ದಾರೆ.

  • ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿದೆ: ಕೇಂದ್ರ

    ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿದೆ: ಕೇಂದ್ರ

    ನವದೆಹಲಿ: ಗಂಗಾ ನದಿಯ ನೀರು ಸ್ನಾನ ಮಾಡಲು ಯೋಗ್ಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಗಂಗಾ ನದಿ ಸ್ನಾನದ ಮಾನದಂಡಗಳ ಸ್ವೀಕಾರಾರ್ಹ ಮಿತಿಗಳಲ್ಲಿದೆ ಎಂದಿದೆ.

    ಕೇಂದ್ರ ಜಲಶಕ್ತಿ ಹಾಗೂ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವ ಬಿಶ್ವೇಶ್ವರ ಟುಡು, ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ಮಾತನಾಡಿ, ಗಂಗಾ ಸ್ಟ್ರೆಚ್‌ಗಳು (Ganga stretches) ಆದ್ಯತೆಯ ವರ್ಗದಲ್ಲಿ 4 ವರೆಗೆ ಇಲ್ಲ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಗಂಗಾ ನದಿಯ ಎರಡು ಸ್ಟ್ರೆಚ್‌ಗಳು 3 ಮತ್ತು 6 ಮಿಲಿಗ್ರಾಂ ಲೀಟರ್‌ವರೆಗಿನ ಜೈವಿಕ ಆಮ್ಲಜನಕದೊಂದಿಗೆ (BOD) 4 ವರ್ಗದಲ್ಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಳೆ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ವರ್ಗ 1 ಅನ್ನು ಹೆಚ್ಚಿನ ಪ್ರಮಾಣದ ಜೈವಿಕ ಆಮ್ಲಜನಕದಿಂದ ಹೆಚ್ಚು ಕಲುಷಿತಗೊಂಡಿದೆ ಎಂದು ಪರಿಗಣಿಸಲಾಗುತ್ತದೆ. ಆದರೆ 4 ವರ್ಗವನ್ನು ಕಡಿಮೆ ಮಾಲಿನ್ಯವೆಂದು ಪರಿಗಣಿಸಲಾಗುತ್ತದೆ.

    2021 ರ CPCB ದತ್ತಾಂಶದ ಪ್ರಕಾರ, ಗಂಗಾ ನದಿಯ ನೀರಿನ ಗುಣಮಟ್ಟವು ಕರಗಿದ ಆಮ್ಲಜನಕ (DO) ಅಧಿಸೂಚಿತವು ಸ್ನಾನದ ನೀರಿನ ಗುಣಮಟ್ಟದ ಮಾನದಂಡಗಳ ಸ್ವೀಕಾರಾರ್ಹ ಮಿತಿಯೊಳಗೆ ಕಂಡುಬಂದಿದೆ. ನದಿಯ ಪರಿಸರ ವ್ಯವಸ್ಥೆಯು ಒಪ್ಪಿಕೊಳ್ಳುವ ಸ್ಥಿತಿಯಲ್ಲಿದೆ ಎಂದು ಸೂಚಿಸುತ್ತದೆ. ಇದನ್ನೂ ಓದಿ: ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

    ನಮಾಮಿ ಗಂಗೆ ಕಾರ್ಯಕ್ರಮದಡಿ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಐದು ರಾಜ್ಯಗಳ 97 ಸ್ಥಳಗಳಲ್ಲಿ ಆಯಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳ ಮೂಲಕ ಗಂಗಾ ನದಿಯ ನೀರಿನ ಗುಣಮಟ್ಟ ಮೌಲ್ಯಮಾಪನ ನಡೆಸುತ್ತಿದೆ. ಕಾರ್ಯಕ್ರಮದಡಿ 30,853 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಒಟ್ಟು 364 ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದ್ದು, 183 ಯೋಜನೆಗಳನ್ನು ಪೂರ್ಣಗೊಳಿಸಿ ಕಾರ್ಯಾರಂಭ ಮಾಡಲಾಗಿದೆ.

  • ಹಕ್ಕಿಗೆ ಕಾಳು ನೀಡಿದ ಧವನ್ – ಮಾಡದ ತಪ್ಪಿಗೆ ದಂಡ ಪಾವತಿಸಿದ ನಾವಿಕ

    ಹಕ್ಕಿಗೆ ಕಾಳು ನೀಡಿದ ಧವನ್ – ಮಾಡದ ತಪ್ಪಿಗೆ ದಂಡ ಪಾವತಿಸಿದ ನಾವಿಕ

    ನವದೆಹಲಿ: ಕ್ರಿಕೆಟ್ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ವಾರಾಣಸಿ ಪ್ರವಾಸದಲ್ಲಿದ್ದಾರೆ. ಶಿಖರ್ ಧವನ್ ಮಾಡಿದ ತಪ್ಪಿಗೆ ನಾವಿಕ ಶಿಕ್ಷೆ ಅನುಭವಿಸುವಂತಾಗಿದೆ.

    ಗಂಗಾ ನದಿಯಲ್ಲಿ ದೋಣಿ ವಿಹಾರದ ವೇಳೆ ಶಿಖರ್ ಧವನ್ ಸೈಬಿರಿಯನ್ ಹಕ್ಕಿಗಳಿಗೆ ಆಹಾರ ನೀಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶಿಖರ್ ಧವನ್ ಶೇರ್ ಸಹ ಮಾಡಿಕೊಂಡಿದ್ದರು. ಹಕ್ಕಿ ಜ್ವರದ ನಿಯಂತ್ರಣಕ್ಕಾಗಿ ಸರ್ಕಾರ ಪಕ್ಷಿಗಳಿಗೆ ಆಹಾರ ನೀಡದ ಕುರಿತು ಕೆಲ ಮಾರ್ಗಸೂಚಿಗಳನ್ನ ತಂದಿದೆ. ಆದ್ರೆ ಶಿಖರ್ ಧವನ್ ಮಾರ್ಗಸೂಚಿ ಪಾಲನೆ ಮಾಡದ ಹಿನ್ನೆಲೆ ನಾವಿಕ ಸೋನು ಸಹಾನಿ ಮತ್ತು ಬೋಟ್ ಮಾಲೀಕ ಪ್ರದೀಪ್ ಸಾಹಾನಿ ದಂಡ ಪಾವತಿಸಿದ್ದಾರೆ.

    ಕಳೆದ ಒಂದು ತಿಂಗಳಿನಿಂದ ದೇಶದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ ಸೇರಿದಂತೆ ಹಲವು ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ ಹೆಚ್ಚಿದೆ. ಹಾಗಾಗಿ ವಾರಾಣಸಿ ನದಿ ದಡದಲ್ಲಿರುವ ಪಕ್ಷಿಗಳಿಗೆ ಆಹಾರ ನೀಡದಂತೆ ಸ್ಥಳೀಯ ಆಡಳಿತ ಮಂಡಳಿ ಕೆಲ ನಿಯಮಗಳನ್ನ ರೂಪಿಸಿತ್ತು.

    ವಾರಾಣಸಿಗೆ ಆಗಮಿಸಿದ್ದ ಧವನ್, ಕಾಲಭೈರವ ಮಂದಿರಕ್ಕೆ ತೆರಳಿ ದರ್ಶನ ಪಡೆದು, ಸಂಜೆ ಗಂಗಾ ಆರತಿಯಲ್ಲಿಯೂ ಭಾಗಿಯಾಗಿದ್ದರು. ಗಂಗಾ ನದಿಯಲ್ಲಿ ಬೋಟಿಂಗ್ ವೇಳೆ ಹಕ್ಕಿಗಳಿಗೆ ಕಾಳು ನೀಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಫೋಟೋ ವೈರಲ್ ಬಳಿಕ ವಾರಾಣಸಿ ಕಲೆಕ್ಟರ್ ನಾವಿಕರಿಗೆ ದಂಡ ವಿಧಿಸುವಂತೆ ಆದೇಶಿಸಿದ್ದರು

  • ಪತಿಯೊಂದಿಗೆ ಜಗಳ – ರೊಚ್ಚಿಗೆದ್ದು 5 ಮಕ್ಕಳನ್ನು ನದಿಗೆ ಎಸೆದ ತಾಯಿ

    ಪತಿಯೊಂದಿಗೆ ಜಗಳ – ರೊಚ್ಚಿಗೆದ್ದು 5 ಮಕ್ಕಳನ್ನು ನದಿಗೆ ಎಸೆದ ತಾಯಿ

    ಲಕ್ನೋ: ಪತಿಯೊಂದಿಗಿನ ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಸಿಟ್ಟಾದ ಪತ್ನಿ ತನ್ನ 5 ಮಕ್ಕಳನ್ನು ಗಂಗಾ ನದಿಗೆ ಎಸೆದ ಘಟನೆ ಉತ್ತರ ಪ್ರದೇಶದ ಭಾದೋಹಿಯಲ್ಲಿ ನಡೆದಿದೆ.

    ಮಂಜು ಯಾದವ್ ಮಕ್ಕಳನ್ನು ನದಿಗೆ ಎಸೆದಿದ್ದಾಳೆ. ಕಳೆದ 1 ವರ್ಷದಿಂದ ದಂಪತಿ ಮಧ್ಯೆ ಜಗಳ ನಡೆಯುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಮ್ ಬದನ್ ಸಿಂಗ್ ತಿಳಿಸಿದ್ದಾರೆ.

    ಮಕ್ಕಳನ್ನು ಕೊಲ್ಲುವ ಉದ್ದೇಶದಿಂದಲೇ ಮಂಜು ಯಾದವ್ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮಹಿಳೆ ಮನೆ ನದಿ ದಡದಲ್ಲೇ ಇದೆ. ಆರಂಭದಲ್ಲಿ ಆರು ಮಂದಿ ನದಿಗೆ ಹಾರಿದ್ದು, ಈಕೆ ಪಾರಾಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ನಂತರ ಈಕೆಯೇ ಮಕ್ಕಳನ್ನು ನದಿಗೆ ದೂಡಿರುವ ವಿಚಾರ ಖಚಿತವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ

    ಶನಿವಾರ ರಾತ್ರಿ ಪತಿ ಮೃದುಲ್ ಯಾದವ್ ಜೊತೆ ಮಂಜು ಜಗಳ ಮಾಡಿಕೊಂಡಿದ್ದಳು. ಭಾನುವಾರ ಮಕ್ಕಳನ್ನು ನದಿಗೆ ಎಸೆದಿದ್ದಾಳೆ. ಮಕ್ಕಳು ಕಿರುಚಿತ್ತಿದ್ದಾಗ ರಕ್ಷಿಸದೇ ಓರ್ವ ಮಹಿಳೆ ಓಡಿ ಪರಾರಿಯಾಗುತ್ತಿದ್ದಳು ಎಂದು ಮೀನುಗಾರರು ಪೊಲೀಸರಿಗೆ ತಿಳಿಸಿದ್ದರು.

    ಇಲ್ಲಿಯವರೆಗೆ 11 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಉಳಿದ ಮಕ್ಕಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

  • ಟಿವಿ ಕ್ರೈಂ ಶೋದಿಂದ ಪ್ರೇರಣೆ- 2 ವರ್ಷದ ತಮ್ಮನನ್ನೇ ಕೊಂದ 14ರ ಅಕ್ಕ

    ಟಿವಿ ಕ್ರೈಂ ಶೋದಿಂದ ಪ್ರೇರಣೆ- 2 ವರ್ಷದ ತಮ್ಮನನ್ನೇ ಕೊಂದ 14ರ ಅಕ್ಕ

    ಡೆಹ್ರಾಡೂನ್: ಟಿವಿಯಲ್ಲಿ ಪ್ರಸಾರವಾಗುವ ಕ್ರೈಂ ಶೋ ನೋಡಿ ಪ್ರೇರಣೆಗೊಂಡು ಇಬ್ಬರು ಅಪ್ರಾಪ್ತೆಯರು ಎರಡು ವರ್ಷದ ಸಹೋದರನನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

    ಉತ್ತರಾಖಂಡ್‍ನ ಹರಿದ್ವಾರದ ಜವಲಪುರದಲ್ಲಿ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತೆಯರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಕೊಲೆ ಮಾಡಲು ಹೇಗೆ ಪ್ಲಾನ್ ಮಾಡಿದಿರಿ ಎಂಬ ಪ್ರಶ್ನೆಗೆ ಬಾಲಕಿಯರು ಆಘಾತಕಾರಿ ಉತ್ತರ ನೀಡಿದ್ದಾರೆ. ಟಿವಿಯಲ್ಲಿ ಬರುತ್ತಿದ್ದ ಕ್ರೈಂ ಶೋ ನೋಡಿಯೇ ಸಹೋದರನ ಕೊಲೆಗೆ ಸಂಚು ರೂಪಿಸಿದೆವು ಎಂದು ಒಪ್ಪಿಕೊಂಡಿದ್ದಾರೆ.

    ನವೆಂಬರ್ 29ರಂದು ಮಗುವಿನ ದೇಹವು ಗಂಗಾ ನದಿಯಲ್ಲಿ ತೇಲುತ್ತಿರುವುದನ್ನು ಕಂಡ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆಗ ಈ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಎಚ್ಚರಗೊಂಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಪ್ರಾಥಮಿಕ ತನಿಖೆ ನಡೆಸಲಾಗಿದ್ದು, ಮೊದಲು ಮಗುವಿನ ಕುಟುಂಬದವರನ್ನೇ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಸತ್ಯ ಬಯಲಾಗಿದ್ದು, 14 ವರ್ಷದ ಸಹೋದರಿ ಹಾಗೂ 13 ವರ್ಷದ ಸೋದರ ಸಂಬಂಧಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

    ನಂತರ ಇಬ್ಬರೂ ಅಪ್ರಾಪ್ತೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಕಥೆಯ ರೀತಿಯಲ್ಲಿ ಘಟನೆಯನ್ನು ವಿವರಿಸಿದ್ದಾರೆ. ಮಗುವಿನ ಅಕ್ಕ ಮಾಹಿತಿ ನೀಡಿ, ತಮ್ಮನನ್ನು ನೋಡಿಕೊಳ್ಳುವುದು ಕಿರಿಕಿರಿ ಎನ್ನಿಸುತ್ತಿತ್ತು. ಹೀಗಾಗಿ ಕಾಟ ತಾಳಲಾರದೆ ಕೊಲೆ ಮಾಡಲು ನಿರ್ಧರಿಸಿದೆ. ಟಿವಿಯಲ್ಲಿ ಕ್ರೈಂ ಶೋ ನೋಡಿದ್ದರಿಂದ ಅದರಂತೆ ನಾನು ಮಾಡಿದೆ. ಬೇಸಿಗೆಯ ರಜಾ ದಿನಗಳಲ್ಲಿ ಅಜ್ಜಿಯ ಮನೆಗೆ ಹೋಗುತ್ತಿದ್ದೆ. ಆಗ ಟಿವಿಯಲ್ಲಿ ಹೆಚ್ಚು ಕ್ರೈಂ ಶೋಗಳನ್ನು ನೋಡುತ್ತಿದ್ದೆ. ಇದರಿಂದ ಪ್ರೇರಿತಳಾಗಿ ಸಹೋದರನನ್ನು ನದಿಯಲ್ಲಿ ಮುಳುಗಿಸಿ ಕೊಲ್ಲಲು ಯೋಜನೆ ರೂಪಿಸಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾಳೆ.

    ಅಲ್ಲದೆ ತಮ್ಮನಿಗೆ ಹಾಕಲು ನಿದ್ರೆ ಮಾತ್ರೆಗಳನ್ನು ಪಡೆಯುವಲ್ಲಿ ನಾವಿಬ್ಬರು ಯಶಸ್ವಿಯಾಗಿವು. ಮಾತ್ರೆಗಳನ್ನು ತಮ್ಮ ಕುಡಿಯುವ ಹಾಲಿನಲ್ಲಿ ಬೆರೆಸಿದೆವು. ಅಲ್ಲದೆ ಗಂಗಾನದಿಯಲ್ಲಿ ಮುಳುಗಿಸುವುದಕ್ಕೂ ಮುನ್ನ ತಮ್ಮನನ್ನು ನಿದ್ರಾಹೀನಗೊಳಿಸಿದ್ದೆವು. ಅವನು ನಿದ್ರೆಗೆ ಜಾರಿರುವುದು ಖಚಿತವಾಗುತ್ತಿದ್ದಂತೆ ನಾವಿಬ್ಬರು ಅವನನ್ನು ಚೀಲದಲ್ಲಿ ಹಾಕಿಕೊಂಡು ಸೈಕಲ್‍ನಲ್ಲಿ ಹೋಗಿ ಸುಮಾರು 800 ಮೀ. ದೂರದಲ್ಲಿದ್ದ ಗಂಗಾ ನದಿಗೆ ಹಾಕಿದೆವು. ನದಿಗೆ ಹಾಕಿ 20 ನಿಮಿಷಗಳ ನಂತರ ಮನೆಗೆ ಬಂದೆವು. ನಂತರ ಎಲ್ಲವೂ ಸಹಜವಾಗಿದೆ ಎಂಬಂತೆ ನಟಿಸಿದೆವು ಎಂದು ತಿಳಿಸಿದ್ದಾಳೆ.

    ಘಟನೆ ನಡೆದ ಮರುದಿನ ಬೆಳಗ್ಗೆ ಮಗು ಕಾಣದಿರುವುದನ್ನು ಕಂಡು ಮನೆಯವರು ಗಾಬರಿಯಾಗಿ ಈ ಕುರಿತು ದೂರು ದಾಖಲಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಲು ಮುಂದಾದಾಗ, ಬಾಲಕಿಯು ಆರಂಭದಲ್ಲಿ ತನ್ನ ಚಿಕ್ಕಮ್ಮನ ಮೇಲೆ ಆರೋಪ ಹೊರಿಸಲು ಮುಂದಾಗಿದ್ದಳು. ಆದರೆ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಘಟನೆ ಕುರಿತು ಬಾಯ್ಬಿಟ್ಟಿದ್ದಾಳೆ.

  • ಗಂಗೆ ಮಲೀನವಾಗಬಾರದೆಂದು ಪ್ರತಿದಿನ ಕಸ ಎತ್ತುತ್ತಿರುವ ಮೀನುಗಾರ

    ಗಂಗೆ ಮಲೀನವಾಗಬಾರದೆಂದು ಪ್ರತಿದಿನ ಕಸ ಎತ್ತುತ್ತಿರುವ ಮೀನುಗಾರ

    ಡೆಹ್ರಾಡೂನ್: ಗಂಗಾ ನದಿ ಮಲೀನವಾಗಬಾರದೆಂದು ಮೀನುಗಾರ ಪ್ರತಿದಿನ ಕಸ ಎತ್ತುತ್ತಿದ್ದಾರೆ.

    48 ವರ್ಷದ ಕಾಳಿಪದ ದಾಸ್ ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುತ್ತಿದ್ದಾರೆ. ಮೂಲತಃ ಪಶ್ಚಿಮ ಬಂಗಳಾದವರಾಗಿರುವ ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ ಕೆಲಸವನ್ನು ಬಿಟ್ಟು ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ಎತ್ತುವ ಕೆಲಸವನ್ನು ಮಾಡುತ್ತಿದ್ದಾರೆ.

    ಗಂಗಾ ನದಿಯಲ್ಲಿ ಸ್ವಚ್ಛವಾಗಿಡಲು ಕೇಂದ್ರ ಸರ್ಕಾರ ‘ನಮಾಮಿ ಗಂಗೆ’ ಎಂಬ ಯೋಜನೆಯನ್ನು ಶುರು ಮಾಡಿತ್ತು. ಆದರೆ ಕಾಳಿಪದ ಅವರು ಈ ಯೋಜನೆಯ ಹೆಸರು ಕೂಡ ಕೇಳಿಲ್ಲ. ಆದರು ಸಹ ಅವರು ಗಂಗಾ ಮಲೀನವಾಗಬಾರದೆಂದು ಪ್ರತಿದಿನ ಕಸ ಎತ್ತುತ್ತಿದ್ದಾರೆ.

    ಕಾಳಿಪದ ಬೆಲ್ಡಂಗಾದ ಕಲಾಬೇರಿಯಾದಿಂದ ಕೆಲಸ ಶುರು ಮಾಡುತ್ತಾರೆ. ಅವರು ತಮ್ಮ ದೋಣಿಯಿಂದ ಅನೇಕ ಘಾಟ್‍ಗಳಿಗೆ ಹೋಗಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಎತ್ತುತ್ತಿದ್ದಾರೆ. ಅವರ ಕೆಲಸ ಭಗೀರಥ ಸೇತುವೆ ಅಥವಾ ಬೆಹ್ರಾಂಪೋರ್‍ನ ಫರ್ಶ್‍ದಂಗಾ ಘಾಟ್‍ನಲ್ಲಿ ಕೊನೆ ಆಗುತ್ತೆ.

    ನಾನು ಈಗ ಮೀನು ಹಿಡಿಯುವುದನ್ನು ಬಿಟ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಗಂಗಾ ನದಿಯಿಂದ ಎತ್ತುತ್ತಿದ್ದೇನೆ. ನನಗೆ ನಾನು ಮಾಡುವ ಕೆಲಸದ ಮೇಲೆ ಹೆಮ್ಮೆ ಇದೆ. ಸರ್ಕಾರ ಅಥವಾ ಯಾವುದೇ ಸರ್ಕಾರೇತರ ಸಂಸ್ಥೆ ಗಂಗಾ ನದಿ ಬಗ್ಗೆ ಕಾಳಜಿ ವಹಿಸುವುದಿಲ್ಲ. ಹಾಗಾಗಿ ನಾನು ಅನೇಕ ಘಾಟ್‍ಗಳಿಂದ ಕಸ ಎತ್ತುತ್ತಿದ್ದೇನೆ ಎಂದು ಕಾಳಪದ ತಿಳಿಸಿದ್ದಾರೆ.

    ನಾನು ಇತರೆ ಮೀನುಗಾರರಿಂದಿಗೆ ದೋಣಿಯಲ್ಲಿ ಹೋಗುತ್ತೇನೆ. ಬಳಿಕ ನಾನು ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತೇನೆ. ಪ್ರತಿದಿನ 5ರಿಂದ 6 ಗಂಟೆ ಕೆಲಸ ಮಾಡಿ 2 ಕ್ವಿಂಟಲ್ ಪ್ಲಾಸ್ಟಿಕ್ ಹೆಕ್ಕುತ್ತೇನೆ. ಬಳಿಕ ಇದನ್ನು ರಿಸೈಕಲ್‍ಗೆ ಕೊಟ್ಟು 2,400 ರೂ.ರಿಂದ 2,600 ರೂ.ವರಗೂ ಸಂಪಾದಿಸುತ್ತೇನೆ. ನಾನು ವಿದ್ಯಾಭ್ಯಾಸ ಮಾಡಿಲ್ಲ. ಆದರೆ ವಿದ್ಯಾಭ್ಯಾಸ ಮಾಡಿರುವ ಜನರನ್ನು ನಾನು ನೋಡುತ್ತೇನೆ. ಅವರು ಪ್ಲಾಸ್ಟಿಕ್ ಬಳಸಿ ಅದನ್ನು ಎಸೆಯುತ್ತಾರೆ ಎಂದು ಕಾಳಿಪದ ಹೇಳಿದ್ದಾರೆ.

  • ಗಂಗಾ ನದಿಯಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನ ಆರಂಭ

    ಗಂಗಾ ನದಿಯಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನ ಆರಂಭ

    – ಪರಿಸರ ದಿನದಂದು ಘನ ತ್ಯಾಜ್ಯ ಪ್ರದರ್ಶನ

    ಕಠ್ಮಂಡು: ನಮ್ಮ ದೇಶದಲ್ಲಿ ಗಂಗಾ ನದಿ ಸ್ವಚ್ಛತಾ ಅಭಿಯಾನದಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನವೊಂದು ಆರಂಭವಾಗಿದೆ.

    ಜಗತ್ತಿನ ಎತ್ತರದ ಮೌಂಟ್ ಎವರೆಸ್ಟ್ ಶಿಖರದ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ನೇಪಾಳದಲ್ಲಿ ಹೊಸ ವರ್ಷದ ಆಚರಣೆಯ ಅಂಗವಾಗಿ ಮೌಂಟ್ ಎವರೆಸ್ಟ್ ಪರ್ವತ ಶ್ರೇಣಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಅಲ್ಲಿನ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿದೆ.

    ಏಪ್ರಿಲ್ 14 ರಿಂದ ಆರಂಭವಾಗಿರುವ ಮೌಂಟ್ ಎವರೆಸ್ಟ್ ಪರ್ವತ ಶ್ರೇಣಿಯ ಸ್ವಚ್ಛತಾ ಅಭಿಯಾನ ಮೇ 29ಕ್ಕೆ ಮುಗಿಯಲಿದೆ. ಈಗಾಗಲೇ ಸುಮಾರು 3,000 ಕೆಜಿ ಘನ ತ್ಯಾಜ್ಯವನ್ನು ಎವರೆಸ್ಟ್ ಪರ್ವತ ಶ್ರೇಣಿಯಿಂದ ಸಂಗ್ರಹಿಸಲಾಗಿದೆ. ಒಟ್ಟು ಸುಮಾರು 10,000 ಕೆಜಿಯಷ್ಟು ತ್ಯಾಜ್ಯ ಸಂಗ್ರಹ ಗುರಿ ಹೊಂದಲಾಗಿದೆ. ಎವರೆಸ್ಟ್ ಬೇಸ್ ಕ್ಯಾಂಪಿನಲ್ಲಿ 5,000 ಕೆಜಿಗೂ ಅಧಿಕ ತ್ಯಾಜ್ಯ ಸಂಗ್ರಹವಾಗುವ ನಿರೀಕ್ಷೆಯಿದೆ. ಕ್ಯಾಂಪ್ 2 ಹಾಗೂ 3 ಸೇರಿದಂತೆ 3000 ಕೆಜಿ ತ್ಯಾಜ್ಯ ಸಂಗ್ರಹ ಗುರಿಯಿದೆ.

    ತ್ಯಾಜ್ಯದ ಜೊತೆಗೆ ಟ್ರೆಕ್ಕಿಂಗ್ ಸಂದರ್ಭದಲ್ಲಿ ಮೃತಪಟ್ಟು ಅಲ್ಲೇ ಉಳಿದ ಶವಗಳಿದ್ದರೆ, ಅವುಗಳನ್ನು ಕೆಳಗಿಳಿಸಲಾಗುತ್ತದೆ. ಜೂನ್ 5ರ ಪರಿಸರ ದಿನದಂದು ಈ ಬೃಹತ್ ಘನ ತ್ಯಾಜ್ಯವನ್ನು ಪ್ರದರ್ಶನ ಮಾಡಿ ನಂತರ ಮರು ಬಳಕೆಗೆ ಸಂಸ್ಕರಣೆ ಮಾಡಲಾಗುತ್ತದೆ.

  • ಪೇಜಾವರ ಶ್ರೀಗಳು ಗಂಗಾನದಿ ಬಳಿ ಹೋಗಿಲ್ಲ, ನಾನು ಕರ್ಕೊಂಡು ಹೋಗ್ತಿನಿ: ಕೆ.ಎಸ್.ಈಶ್ವರಪ್ಪ

    ಪೇಜಾವರ ಶ್ರೀಗಳು ಗಂಗಾನದಿ ಬಳಿ ಹೋಗಿಲ್ಲ, ನಾನು ಕರ್ಕೊಂಡು ಹೋಗ್ತಿನಿ: ಕೆ.ಎಸ್.ಈಶ್ವರಪ್ಪ

    ಚಿಕ್ಕಮಗಳೂರು: ಪೇಜಾವರ ಶ್ರೀಗಳು ಇತ್ತೀಚೆಗೆ ಗಂಗಾನದಿ ಬಳಿ ಹೋಗಿಲ್ಲ ಅನ್ಸುತ್ತೆ, ಅವಕಾಶ ಸಿಕ್ಕರೆ ನಾನೇ ಅವರನ್ನ ಕರೆದುಕೊಂಡು ಹೋಗುತ್ತೇನೆ ಅಂತಾ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಕೆಲವು ದಿನಗಳ ಹಿಂದೆ ಪೇಜಾವರ ಶ್ರೀಗಳು ಕೇಂದ್ರ ಸರ್ಕಾರದ ಕೆಲಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ರು. ಶ್ರೀಗಳ ಹೇಳಿಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ಕಪ್ಪು ಹಣ ಹಾಗೂ ಗಂಗಾ ನದಿ ಮಾಲಿನ್ಯದ ಬಗ್ಗೆ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಈಗ ಗಂಗಾ ನದಿ ಸಾಕಷ್ಟು ಅಭಿವೃದ್ಧಿಯಾಗಿದೆ ಅಂತಾ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ, ಗಂಗಾ ನದಿಯನ್ನು ಶುದ್ಧೀಕರಿಸಲಾಗುವುದು ಭರವಸೆ ನೀಡಿದರು. ಆದರೆ ಅದು ಸಹ ಸಂಪೂರ್ಣವಾಗಿ ಈಡೇರಿಲ್ಲ. :ಪೇಜಾವರ ಶ್ರೀ

    ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಅಧಿಕಾರದಾಹಿಗಳು. ಕರ್ನಾಟಕದಲ್ಲೀಗ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನ ಸೋಲಿಸಲು ಎಲ್ಲರೂ ಒಂದಾಗಿದ್ದಾರೆ. ಇದನ್ನ ದೇಶದ ಜನ ಒಪ್ಪುವುದಿಲ್ಲ, ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದರೆ ಸೋನಿಯಾ-ರಾಹುಲ್ ಕಾರಣ, ಸೋತರೆ ಎಸ್.ಆರ್.ಪಾಟೀಲ್ ಕಾರಣವಾ, ಇದು ಅವಕಾಶವಾದಿ ರಾಜಕಾರಣವಲ್ಲವೇ ಎಂದು ಕಿಡಿಕಾರಿದ್ರು.

  • ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ

    ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ

    ರಾಯಚೂರು: ನರೇಂದ್ರ ಮೋದಿಯವರ ಸರ್ಕಾರ ಬಂದು ನಾಲ್ಕು ವರ್ಷವಾದರು, ಚುನಾವಣೆ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತರುವುದಾಗಿ ಭರವಸೆ ನೀಡಿ ಈಡೇರಿಸಿಲ್ಲ ಎಂದು ಮಂತ್ರಾಲಯದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮೋದಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಆರ್ಥಿಕತೆ ಸುಧಾರಣೆಯನ್ನು ಹೆಚ್ಚು ಮಾಡುವುದಕ್ಕಾಗಿ ಸಾಕಷ್ಟು ಯೋಜನೆಗಳನ್ನು ಮಾಡಿದ್ದಾರೆ. ಅಲ್ಲದೇ ಶ್ರೀಮಂತರಿಗೂ ಭ್ರಷ್ಟಾಚಾರ ಮಾಡಲಾಗದಂತಹ ಸನ್ನಿವೇಶವನ್ನು ನಿರ್ಮಿಸಿದ್ದಾರೆ. ಆದರೆ ಅಚ್ಚೆದಿನ್ ಇನ್ನೂ ಪರಿಣಾಮಕಾರಿಯಾಗಿ ಜಾರಿಯಾಗಬೇಕಿದೆ. ಈ ಕಾರ್ಯವನ್ನು ಬೇಗ ಮಾಡಲಿ ಎಂಬ ಉದ್ದೇಶದಿಂದ ಹೇಳಿದ್ದಾಗಿ ತಿಳಿಸಿದರು.

    ಜಿಲ್ಲೆಯಲ್ಲಿ ನಡೆದ ಚಂದ್ರಿಕಾ ತಾತ್ಪರ್ಯ ಮಂಗಳೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಶ್ರೀಗಳು, ಗಂಗಾ ನದಿಯು ಎಷ್ಟೋ ಜನರ ಜೀವ ನದಿಯಾಗಿದೆ. ಆದ್ರೆ ಪವಿತ್ರ ನದಿ ಕಲುಷಿತಗೊಂಡಿದೆ. ಚುನಾವಣಾ ಪೂರ್ವದಲ್ಲಿ ಗಂಗಾ ನದಿಯನ್ನು ಶುದ್ಧೀಕರಿಸಲಾಗುವುದು ಮೋದಿ ಭರವಸೆ ನೀಡಿದರು. ಆದರೆ ಅದು ಸಹ ಸಂಪೂರ್ಣವಾಗಿ ಈಡೇರಿಲ್ಲ. ಇನ್ನು ಉಳಿದಿರೋದು ಒಂದು ವರ್ಷ ಮಾತ್ರ ನೀಡಿರುವ ಭರವಸೆಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನ ಮಾಡಲಿ ಎಂಬ ಹೇಳಿದರು.

    ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಗೆಲ್ಲುವುದಿಲ್ಲ ಎನ್ನಲಾಗದು, ಆದರೆ ಮೋದಿಯವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿರುವುದನ್ನು ಜನರು ತಿಳಿದಿದ್ದಾರೆ. ಜನ ತಮ್ಮ ಮತಗಳು ಯಾವ ಪಕ್ಷಕ್ಕೆಂದು ಮತದಾರರ ಮನಸ್ಸಿನ ಮೇಲಿದೆ ಎಂದರು.

    ಇದೇ ವೇಳೆ ಇಫ್ತೀಯಾರ್ ಕೂಟದ ಬಗ್ಗೆ ಮಾಹಿತಿ ನೀಡಿದ ಅವರು, ಜೂ.13ಕ್ಕೆ ಉಡುಪಿ ಮಠದಲ್ಲಿ ಇಫ್ತೀಯಾರ್ ಕೂಟ ಆಯೋಜನೆಯ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಈ ಯೋಜನೆಯ ಬಗ್ಗೆ ಯಾವುದೇ ರೀತಿಯ ಮಠದ ವಿರೋಧವಿಲ್ಲ ಆದರೆ ಮುಸ್ಲಿಂರಲ್ಲಿಯೇ ಸಂಕೋಚವಿದೆ. ಆದರೆ ಮುಸ್ಲಿಮರು ಒಪ್ಪಿಗೆ ನೀಡಿದರೆ ಈ ವರ್ಷವು ಈ ಕಾರ್ಯ ಮಾಡುತ್ತೇನೆ. ಒಳ್ಳೆ ಕಾರ್ಯ ಮಾಡಲು ವಿರೋಧ ವಿದ್ದರು ಮಾಡಬಹುದು ಎಂದು ತಿಳಿಸಿದರು. ಇದನ್ನು ಓದಿ: ಮುಸ್ಲಿಮರು ಒಪ್ಪಿದ್ರೆ ಈ ಬಾರಿಯೂ ಇಫ್ತಾರ್ ಕೂಟ- ವಿಶ್ವೇಶತೀರ್ಥ ಸ್ವಾಮೀಜಿ