Tag: ganga water

  • ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ.. ಅದರ ಸಂಪರ್ಕದಿಂದ ಚರ್ಮ ರೋಗಗಳು ಬರಲ್ಲ: ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

    ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ.. ಅದರ ಸಂಪರ್ಕದಿಂದ ಚರ್ಮ ರೋಗಗಳು ಬರಲ್ಲ: ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

    ನವದೆಹಲಿ: ಮಹಾ ಕುಂಭಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಈ ನಡುವೆ ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್ ಪ್ರತಿಕ್ರಿಯಿಸಿದ್ದಾರೆ. ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ ಮಾತ್ರವಲ್ಲ, ಅದರ ಸಂಪರ್ಕಕ್ಕೆ ಬರುವುದರಿಂದ ಚರ್ಮ ರೋಗಗಳು ಕೂಡ ಬರುವುದಿಲ್ಲ ಎಂದು ಹೇಳಿದ್ದಾರೆ.

    ಸಂಗಮ್ ಮತ್ತು ಅರೈಲ್ ಸೇರಿದಂತೆ ಐದು ಘಾಟ್‌ಗಳಿಂದ ಗಂಗಾ ನೀರಿನ ಪ್ರಯೋಗಾಲಯ ಪರೀಕ್ಷೆಯ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಐದು ಘಾಟ್‌ಗಳಿಂದ ಗಂಗಾ ನೀರಿನ ಮಾದರಿಗಳನ್ನು ತೆಗೆದುಕೊಂಡು ಪ್ರಯೋಗಾಲಯದಲ್ಲಿ ಸೂಕ್ಷ್ಮ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಅವಧಿಯಲ್ಲಿ ಕೋಟ್ಯಂತರ ಭಕ್ತರು ಸ್ನಾನ ಮಾಡಿದರೂ ನೀರಿನಲ್ಲಿ ಬ್ಯಾಕ್ಟೀರಿಯಾದ ಬೆಳವಣಿಗೆಯಾಗಲಿ ಅಥವಾ ನೀರಿನ pH ಮಟ್ಟದಲ್ಲಿ ಯಾವುದೇ ಇಳಿಕೆಯಾಗಲಿ ಕಂಡುಬಂದಿಲ್ಲ. ಈ ಸಂಶೋಧನೆಯಲ್ಲಿ ಗಂಗಾ ನೀರಿನಲ್ಲಿ 1100 ವಿಧದ ಬ್ಯಾಕ್ಟೀರಿಯೊಫೇಜ್‌ಗಳು ಇರುವುದು ಕಂಡುಬಂದಿದೆ. ಇದು ಹಾನಿಕಾರಕ ಬ್ಯಾಕ್ಟೀರಿಯಾವನ್ನು ನಾಶಪಡಿಸುತ್ತದೆ. ಇದರಿಂದಾಗಿ ನೀರು ಕಲುಷಿತವಾಗಲಿಲ್ಲ ಎಂದು ಹೇಳಿದ್ದಾರೆ.

    ತಮ್ಮ ಪ್ರಯೋಗಾಲಯದಲ್ಲಿ ಗಂಗಾ ನೀರನ್ನು ಪರೀಕ್ಷಿಸಿರುವುದಾಗಿ ಹೇಳಿರುವ ಅವರು, ಗಂಗಾ ನೀರಿನ ಶುದ್ಧತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುವವರು ಅದನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಲಿ. ಯಾರಿಗಾದರೂ ಸ್ವಲ್ಪವಾದರೂ ಸಂದೇಹವಿದ್ದರೆ, ನನ್ನ ಮುಂದೆ ಗಂಗಾಜಲವನ್ನು ತೆಗೆದುಕೊಂಡು ನಮ್ಮ ಪ್ರಯೋಗಾಲಯದಲ್ಲಿ ಪರೀಕ್ಷಿಸಿ ತೃಪ್ತಿಪಡಿಸಿಕೊಳ್ಳಬೇಕು ಎಂದಿದ್ದಾರೆ.

    ಮೂರು ತಿಂಗಳ ನಿರಂತರ ಸಂಶೋಧನೆಯ ನಂತರವೂ ಗಂಗಾ ಜಲವು ಅತ್ಯಂತ ಶುದ್ಧವಾದುದು ಎಂದು ಸಾಬೀತುಪಡಿಸಿದೆ ಇಲ್ಲಿ ಸ್ನಾನ ಮಾಡುವುದರಿಂದ ಯಾವುದೇ ರೀತಿಯ ಹಾನಿ ಉಂಟಾಗುವುದಿಲ್ಲ. ಬ್ಯಾಕ್ಟೀರಿಯೊಫೇಜ್ (ಬ್ಯಾಕ್ಟೀರಿಯಾ ಭಕ್ಷಕ)ದಿಂದಾಗಿ ಗಂಗಾ ನೀರಿನ ಶುದ್ಧತೆ ಹಾಗೆಯೇ ಉಳಿದಿದೆ. ನೀರಿನ ಮಾದರಿಗಳನ್ನು ಪ್ರಯೋಗಾಲಯದಲ್ಲಿ 14 ಗಂಟೆಗಳ ಕಾಲ ಕಾವು ತಾಪಮಾನದಲ್ಲಿ ಇಟ್ಟ ನಂತರವೂ ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ ಮಾತ್ರವಲ್ಲ, ಅದರ ಸಂಪರ್ಕಕ್ಕೆ ಬರುವುದರಿಂದ ಚರ್ಮ ರೋಗಗಳು ಕೂಡ ಬರುವುದಿಲ್ಲ ಎಂದು ಹೇಳಿದ್ದಾರೆ.

    ಡಾ. ಅಜಯ್ ಕುಮಾರ್ ಸೋಂಕರ್ ಅವರು ಪ್ರಯಾಗರಾಜ್‌ನ ನೈನಿ ನಿವಾಸಿಯಾಗಿದ್ದು, ಸ್ವತಂತ್ರ ಸಂಶೋಧಕರು ಮತ್ತು ಉನ್ನತ ವಿಜ್ಞಾನಿಯಾಗಿದ್ದಾರೆ. ಕೃತಕವಾಗಿ ಮುತ್ತುಗಳನ್ನು ಬೆಳೆಸುವ ಮೂಲಕ, ಅವರು ಇಡೀ ದೇಶದ ವಿಜ್ಞಾನಿಗಳನ್ನು ಬೆರಗುಗೊಳಿಸಿದರು. ಕೇಂದ್ರ ಸರ್ಕಾರ ಇತ್ತಿಚೇಗೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿತ್ತು.

  • ಶಾಲೆಯಲ್ಲಿ ಮುಸ್ಲಿಮ್‌ ಪ್ರಾರ್ಥನೆ – ಆವರಣಕ್ಕೆ ಗಂಗಾಜಲ ಸಿಂಪಡಿಸಿದ ಬಿಜೆಪಿ ಕಾರ್ಯಕರ್ತರು

    ಶಾಲೆಯಲ್ಲಿ ಮುಸ್ಲಿಮ್‌ ಪ್ರಾರ್ಥನೆ – ಆವರಣಕ್ಕೆ ಗಂಗಾಜಲ ಸಿಂಪಡಿಸಿದ ಬಿಜೆಪಿ ಕಾರ್ಯಕರ್ತರು

    ಲಕ್ನೋ: ಮುಸ್ಲಿಮರ ಪ್ರಾರ್ಥನೆಯನ್ನು (ಕಲಿಮಾ) ಪಠಿಸುವ ಸಂಬಂಧ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ನಾಯಕರು ಗಂಗಾ ಜಲ ಬಳಸಿ ಶಾಲೆ ಆವರಣವನ್ನು ಶುದ್ಧೀಕರಿಸಿದ ಘಟನೆ ನಡೆದಿದೆ.

    ಪ್ರತಿಭಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಕಾನ್ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ ಅಯ್ಯರ್ ಅವರು ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ. ಶಾಲೆ ಹಾಗೂ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳನ್ನು ಭೇಟಿ ಮಾಡಿ ವರದಿ ಸಲ್ಲಿಸುವಂತೆ ಅಧಿಕಾರಿಗೆ ತಿಳಿಸಲಾಗಿದೆ. ಇದನ್ನೂ ಓದಿ: ಹರ್ ಹರ್ ಶಂಭು ಹಾಡಿಗೆ ಅಪಸ್ವರ – ಮುಸ್ಲಿಮಳಾಗಿ ಆ ಹಾಡನ್ನು ಹಾಡಬಾರದು ಎಂದ ದಿಯೋಬಂದ್

    ವಿದ್ಯಾರ್ಥಿಗಳು ಕಳೆದ 12-13 ವರ್ಷಗಳಿಂದ ಹಿಂದೂ, ಸಿಖ್, ಕ್ರಿಶ್ಚಿಯನ್ ಮತ್ತು ಮುಸ್ಲಿಂ ಪ್ರಾರ್ಥನೆಗಳನ್ನು ಪಠಿಸುವ ಪರಿಪಾಠವಿತ್ತು. ಅದನ್ನು ಶಾಲೆಯ ಪ್ರಾಂಶುಪಾಲರಾದ ಸುಮಿತ್ ಮಖಿಜಾ ಅವರು ನಿರ್ವಹಿಸಿಕೊಂಡು ಬಂದಿದ್ದಾರೆ. ಈ ಕುರಿತು ಈಗಾಗಲೇ ಒಮ್ಮೆ ಅವರೊಂದಿಗೆ ಮಾತನಾಡಿದ್ದೇವೆ. ಆದರೆ ಮತ್ತೊಮ್ಮೆ ಸಂಪರ್ಕಿಸಿದಾಗ, ಮಾಹಿತಿ ನೀಡಲು ಅವರು ಲಭ್ಯವಾಗುತ್ತಿಲ್ಲ ಸಹಾಯಕ ಪೊಲೀಸ್ ಕಮಿಷನರ್ ನಿಶಾಂಕ್ ವರ್ಮಾ ತಿಳಿಸಿದ್ದಾರೆ.

    ಶಾಲೆಯಲ್ಲಿ ಎಲ್ಲಾ ಧರ್ಮಗಳ ಪ್ರಾರ್ಥನೆಗೆ ಆರಂಭದಲ್ಲಿ ಯಾರೂ ವಿರೋಧ ವ್ಯಕ್ತಪಡಿಸಿರಲಿಲ್ಲ. ಆದರೆ ಇತ್ತೀಚೆಗೆ ಪೋಷಕರೊಬ್ಬರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಇದಾದ ಬಳಿಕ ಶಾಲೆಯು ಎಲ್ಲಾ ಧರ್ಮಗಳ ಪ್ರಾರ್ಥನೆಗಳನ್ನು ಕೈಬಿಡಲು ನಿರ್ಧರಿಸಿತು. ರಾಷ್ಟ್ರಗೀತೆ ಹಾಡುವುದನ್ನು ಮಾತ್ರ ಕಡ್ಡಾಯಗೊಳಿಸಲಾಗಿದೆ ಎಂದು ಶಾಲಾ ಪ್ರಾಂಶುಪಾಲರು ತಿಳಿಸಿರುವುದಾಗಿ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾಲ್ವರು ಸಂಸದರ ಅಮಾನತು ಹಿಂಪಡೆದ ಸ್ಪೀಕರ್

    ವಿವಾದ ಏನು?
    ಕಾನ್ಪುರ ಶಾಲೆಯಲ್ಲಿ ಸರ್ವಧರ್ಮಗಳ ಪ್ರಾರ್ಥನೆಯನ್ನು ಹಾಡಿಸಲಾಗುತ್ತಿತ್ತು. ಈ ಪ್ರಾರ್ಥನೆಯನ್ನು ಗಾಯತ್ರಿ ಮಂತ್ರದೊಂದಿಗೆ ಆರಂಭಿಸಲಾಗುತ್ತಿತ್ತು. ಆದರೆ ಮುಸ್ಲಿಮರ ಪ್ರಾರ್ಥನೆಗೆ ವಿಶ್ವ ಹಿಂದೂ ಪರಿಷತ್‌ನವರು ವಿರೋಧ ವ್ಯಕ್ತಪಡಿಸಿದ್ದರು. ವಿವಾದದ ಬಳಿಕ ಇದನ್ನು ನಿಲ್ಲಿಸಲಾಗಿತ್ತು.

    ಪ್ರಾರ್ಥನೆಗೆ ಸಂಬಂಧಿಸಿದಂತೆ ಶಾಲೆ ಸಮವಸ್ತ್ರ ಧರಿಸಿದ್ದ ವಿದ್ಯಾರ್ಥಿನಿಯನ್ನು ಆಕೆಯ ಪೋಷಕರು ಪ್ರಶ್ನಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ವೀಡಿಯೋವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೂ ಟ್ಯಾಗ್‌ ಮಾಡಿ ವೈರಲ್‌ ಮಾಡಲಾಗಿತ್ತು.

    ಸ್ಥಳೀಯ ಬಿಜೆಪಿ ಮುಖಂಡರಾದ ಮಹೇಂದ್ರ ಶುಕ್ಲಾ ಮತ್ತು ಧೀರಜ್ ಸಾಹು ಶಾಲೆಗೆ ಭೇಟಿ ನೀಡಿ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಶಾಲೆಯ ಆವರಣವನ್ನು ಗಂಗಾಜಲದಿಂದ ಶುದ್ಧೀಕರಿಸಲಾಗಿದೆ. ಆಡಳಿತ ಮಂಡಳಿಯವರು ವಿದ್ಯಾರ್ಥಿಗಳನ್ನು ಕಲಿಮಾ (ಮುಸ್ಲಿಂ ಪ್ರಾರ್ಥನೆ) ಪಠಿಸುವಂತೆ ಮಾಡುವುದು ಹೇಗೆ? ಇದು ಸಮರ್ಥನೀಯವಲ್ಲ ಎಂದು ಶುಕ್ಲಾ ಆಕ್ಷೇಪ ವ್ಯಕ್ತಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]