Tag: Gangambika Mallikarjun

  • ಚಿಕ್ಕಪೇಟೆಯಲ್ಲಿ ‘ಕೈ’ ಬಂಡಾಯ ಶಮನ – ಗಂಗಾಂಬಿಕೆ ನಾಮಪತ್ರ ವಾಪಸ್‌

    ಚಿಕ್ಕಪೇಟೆಯಲ್ಲಿ ‘ಕೈ’ ಬಂಡಾಯ ಶಮನ – ಗಂಗಾಂಬಿಕೆ ನಾಮಪತ್ರ ವಾಪಸ್‌

    ಬೆಂಗಳೂರು: ಟಿಕೆಟ್‌ ಕೈತಪ್ಪಿದ್ದಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿ ನಾಮಪತ್ರ ಸಲ್ಲಿಸಿದ್ದ ಗಂಗಾಂಬಿಕೆ (Gangambike Mallikarjun) ಅವರ ಮನವೊಲಿಸುವಲ್ಲಿ ಕೊನೆಗೂ ಕಾಂಗ್ರೆಸ್‌ (Congress) ನಾಯಕರು ಯಶಸ್ವಿಯಾಗಿದ್ದಾರೆ. ಗಂಗಾಂಬಿಕೆ ಅವರು ನಾಮಪತ್ರ ವಾಪಸ್‌ ತೆಗೆದುಕೊಂಡಿದ್ದು, ಚಿಕ್ಕಪೇಟೆಯಿಂದ (Chikkapete) ಆರ್‌.ವಿ.ದೇವರಾಜ್‌ ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವಂತಾಗಿದೆ.

    ಮಾಜಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅವರು ಚಿಕ್ಕಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಪಕ್ಷ ಟಿಕೆಟ್‌ ನೀಡಲಿಲ್ಲ. ಬದಲಿಗೆ ಆರ್‌.ವಿ.ದೇವರಾಜ್‌ ಅವರಿಗೆ ಟಿಕೆಟ್‌ ನೀಡಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಗಂಗಾಂಬಿಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿ ನಾಮಪತ್ರ ಸಲ್ಲಿಸಿದ್ದರು. ಇದರಿಂದ ಚಿಕ್ಕಪೇಟೆಯಲ್ಲಿ ಮತ ವಿಭಜನೆಯಾಗುವ ಭೀತಿ ಕೈ ನಾಯಕರಲ್ಲಿತ್ತು. ಹೀಗಾಗಿ ಗಂಗಾಂಬಿಕೆ ಮನವೊಲಿಸಲು ನಿರಂತರ ಪ್ರಯತ್ನ ಮಾಡಿದ್ದರು. ಇದನ್ನೂ ಓದಿ: ಟಿಕೆಟ್ ವಂಚಿತ ಶಾಸಕ ರಾಮದಾಸ್‌ರನ್ನು ತಬ್ಬಿ ಬೆನ್ನು ತಟ್ಟಿದ ಅಮಿತ್ ಶಾ

    ಈ ಕುರಿತು ಪ್ರತಿಕ್ರಿಯೆ ನೀಡಿದ ಗಂಗಾಂಬಿಕೆ, ಪಕ್ಷದ ಸೂಚನೆಯಂತೆ ನಾಮಪತ್ರ ವಾಪಾಸ್ ಪಡೆಯುತ್ತೇನೆಂದು ಪ್ರಕಟಿಸಿದ್ದಾರೆ. ನಾನು ನಾಮಪತ್ರ ವಾಪಸ್‌ ಪಡೆಯುತ್ತೇನೆಂದು ತಿಳಿಸಿದ್ದಾರೆ.

    ನಮ್ಮ ಹೈಕಮಾಂಡ್‌ನ ಎಲ್ಲಾ ನಾಯಕರು ದೂರವಾಣಿ ಮೂಲಕ ಮಾತನಾಡಿದ್ದಾರೆ. ನಾವು ಕಾಂಗ್ರೆಸ್ ಪಕ್ಷದಲ್ಲೇ ಇರಬೇಕು. ಹಾಗಾಗಿ ನಾಯಕರ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆಯುತ್ತಿದ್ದೇವೆ. ನಮ್ಮಿಂದ ಯಾವುದೇ ಡಿಮ್ಯಾಂಡ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ ಜನರ ಭಾವನೆ ಕೆರಳಿಸುವ ಯತ್ನ: ಸಿದ್ದು ಪರ ಬ್ಯಾಟ್ ಬೀಸಿದ ಸವದಿ

  • ಕೈ- ತೆನೆ ಮೈತ್ರಿಕೂಟಕ್ಕೆ ಮತ್ತೆ ಬಿಬಿಎಂಪಿ ಅಧಿಕಾರ

    ಕೈ- ತೆನೆ ಮೈತ್ರಿಕೂಟಕ್ಕೆ ಮತ್ತೆ ಬಿಬಿಎಂಪಿ ಅಧಿಕಾರ

    ಬೆಂಗಳೂರು: ಬಿಬಿಎಂಪಿ ಮೇಯರ್, ಉಪಮೇಯರ್ ಪಟ್ಟವನ್ನು ಮತ್ತೆ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ತನ್ನಲ್ಲಿ ಉಳಿಸುವಲ್ಲಿ ಯಶಸ್ವಿಯಾಗಿದೆ. 130 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಕಾಂಗ್ರೆಸ್ಸಿನ ಗಂಗಾಬಿಕೆ ಆಯ್ಕೆ ಆಗಿದ್ದರೆ, ಉಪಮೇಯರ್ ಆಗಿ ಜೆಡಿಎಸ್‍ನ ರಮೀಳಾ ಆಯ್ಕೆಯಾಗಿದ್ದಾರೆ.

    ಚುನಾವಣೆಗೂ ಮುನ್ನ ಭಾರೀ ಹೈಡ್ರಾಮವೇ ನಡೆದಿತ್ತು. ಕೈ ಮತ್ತು ಬಿಜೆಪಿ ನಾಯಕರ ನಡುವೆ ನೂಕಾಟ ನಡೆದಿತ್ತು. ಒಟ್ಟು 259 ಮತದಾರರ ಪೈಕಿ 253 ಮಂದಿ ಹಾಜರಾಗಿದ್ದರು. ಕಾಂಗ್ರೆಸ್ ಶಾಸಕ ರೋಷನ್ ಬೇಗ್, ಕಾಂಗ್ರೆಸ್ ಕಾರ್ಪೊರೇಟರ್ ಆಶಾ ಸುರೇಶ್, ಲಲಿತಾ, ರಾಜ್ಯ ಸಭೆ ಸದಸ್ಯೆ ನಿರ್ಮಲಾ ಸೀತಾರಾಮ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್ ಕುಮಾರ್, ಜೆಡಿಎಸ್ ಸದಸ್ಯೆ ನಜೀಂ ಖಾನಂ ಗೈರು ಹಾಜರಿ ಹಾಕಿದ್ದರು.

    ಸಿ.ಆರ್.ಮನೋಹರ್, ಜಯರಾಂ ರಮೇಶ್, ರಘು ಆಚಾರ್, ಉಗ್ರಪ್ಪ ಮತದಾನಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಮತದಾನಕ್ಕೆ ಅವಕಾಶ ನೀಡದಂತೆ ಬಿಜೆಪಿ ನಾಯಕರ ಬಿಗಿಪಟ್ಟು ಹಿಡಿದರೂ ಈಗಾಗಲೇ ಮತದಾರರ ಪಟ್ಟಿ ಘೋಷಣೆ ಆಗಿರುವ ಕಾರಣ ಮತದಾನಕ್ಕೆ ಅವಕಾಶ ನೀಡುತ್ತೇವೆ ಎಂದು ಚುನಾವಣಾಧಿಕಾರಿ ಶಿವಯೋಗಿ ಕಳಸದ್ ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸಭಾಂಗಣದಿಂದಲೇ ಹೊರ ನಡೆದರು.  ಇದನ್ನೂ ಓದಿ: ಬಿಬಿಎಂಪಿ ಸಭಾಂಗಣದ ಒಳಗೆಯೇ ಕಿತ್ತಾಡಿಕೊಂಡ ಕಾಂಗ್ರೆಸ್, ಬಿಜೆಪಿ ಸದಸ್ಯರು!

    ಬಿಜೆಪಿ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ, ಜಂಗಲ್ ರಾಜ್ ನಂತೆ ಚುನಾವಣೆ ನಡೆಸುತ್ತಿದ್ದರೆ. ಗೂಂಡಾಗಿರಿ ಮಾಡಿ ಪಕ್ಷೇತರರನ್ನ ಹೈಜಾಕ್ ಮಾಡಲಾಗಿದೆ. ಚುನಾವಣಾಧಿಕಾರಿ ಕಾಂಗ್ರೆಸ್ ಬೆಂಬಲ ನೀಡಿದ್ದಾರೆ. ನಾಲ್ವರು ಪರಿಷತ್ ಸದಸ್ಯರಿಗೆ ಮತದಾನಕ್ಕೆ ಅವಕಾಶ ನೀಡದಂತೆ ದೂರು ನೀಡಿದ್ದರೂ ಅವಕಾಶ ನೀಡಿದ್ದಾರೆ. ಇದು ಅಕ್ರಮವಾದ ಕಾರಣ ಚುನಾವಣೆ ಬಹಿಷ್ಕರಿಸಿ ಹೊರಗಡೆ ಬಂದಿದ್ದೇವೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv